Atos 3

Kannada Bible (GL_KANNADA) vs NVI

Sair da comparação
NVI Nova Versão Internacional
1 ಪ್ರಾರ್ಥನೆಯ ಸಮಯವಾದ ಒಂಭತ್ತ ನೆಯ ತಾಸಿನಲ್ಲಿ (ಮೂರು ಘಂಟೆಗೆ) ಪೇತ್ರ ಯೋಹಾನರು ಕೂಡಿಕೊಂಡು ದೇವಾಲಯಕ್ಕೆ ಹೋದರು.
1 Certo dia Pedro e João estavam subindo ao templo na hora da oração, às três horas da tarde.
2 ಹುಟ್ಟು ಕುಂಟನಾಗಿದ್ದ ಒಬ್ಬಾನೊಬ್ಬ ಮನುಷ್ಯನು ದೇವಾಲಯಕ್ಕೆ ಹೋಗುತ್ತಿದ್ದವರಿಂದ ಭಿಕ್ಷೆ ಬೇಡುವದಕ್ಕಾಗಿ ಅವನನ್ನು ಕೆಲವರು ಹೊತ್ತು ಕೊಂಡು ಹೋಗಿ ದೇವಾಲಯದ ಸುಂದರವೆಂಬ ಬಾಗಲಿನಲ್ಲಿ ಪ್ರತಿ ದಿನ ಕೂಡ್ರಿಸುತ್ತಿದ್ದರು.
2 Estava sendo levado para a porta do templo chamada Formosa um aleijado de nascença, que ali era colocado todos os dias para pedir esmolas aos que entravam no templo.
3 ದೇವಾ ಲಯದೊಳಕ್ಕೆ ಹೋಗುವದಕ್ಕಿದ್ದ ಪೇತ್ರ ಯೋಹಾನ ರನ್ನು ಅವನು ನೋಡಿ ಭಿಕ್ಷೆ ಬೇಡಿದನು.
3 Vendo que Pedro e João iam entrar no pátio do templo, pediu-lhes esmola.
4 ಆಗ ಪೇತ್ರನು ಯೋಹಾನನೊಂದಿಗೆ ಅವನನ್ನು ಕಣ್ಣಿಟ್ಟು ನೋಡುತ್ತಾ--ನಮ್ಮನ್ನು ನೋಡು ಅಂದನು.
4 Pedro e João olharam bem para ele e, então, Pedro disse: "Olhe para nós! "
5 ಆಗ ಅವರಿಂದ ಏನಾದರೂ ತನಗೆ ಸಿಕ್ಕೀತೆಂದು ನಿರೀಕ್ಷಿಸಿ ಅವನು ಅವರ ಮೇಲೆ ಲಕ್ಷ್ಯವಿಟ್ಟನು.
5 O homem olhou para eles com atenção, esperando receber deles alguma coisa.
6 ಆಗ ಪೇತ್ರನು--ಬೆಳ್ಳಿಬಂಗಾರವಂತೂ ನನ್ನಲ್ಲಿಲ್ಲ. ಆದರೆ ನನಗಿರುವದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆದಾಡು ಎಂದು ಹೇಳಿ
6 Disse Pedro: "Não tenho prata nem ouro, mas o que tenho, isto lhe dou. Em nome de Jesus Cristo, o Nazareno, ande".
7 ಪೇತ್ರನು ಅವನ ಬಲಗೈಯನ್ನು ಹಿಡಿದು ಎತ್ತಿದನು; ಕೂಡಲೆ ಅವನ ಪಾದಗಳೂ ಹರಡಿನ ಎಲುಬುಗಳೂ ಬಲವನ್ನು ಹೊಂದಿದವು.
7 Segurando-o pela mão direita, ajudou-o a levantar-se, e imediatamente os pés e os tornozelos do homem ficaram firmes.
8 ಆಗ ಅವನು ಹಾರಿ ನಿಂತು ನಡೆದನು. ನಡೆಯುತ್ತಾ ಹಾರುತ್ತಾ ದೇವರನ್ನು ಕೊಂಡಾಡುತ್ತಾ ಅವರೊಂದಿಗೆ ದೇವಾಲಯದೊಳಗೆ ಪ್ರವೇಶಿಸಿದನು.
8 E de um salto pôs-se de pé e começou a andar. Depois entrou com eles no pátio do templo, andando, saltando e louvando a Deus.
9 ಅವನು ನಡೆಯುತ್ತಾ ದೇವರನ್ನು ಕೊಂಡಾಡುತ್ತಾ ಇರುವದನ್ನು ಜನರೆಲ್ಲರೂ ನೋಡಿ
9 Quando todo o povo o viu andando e louvando a Deus,
10 ದೇವಾಲಯದ ಸುಂದರ ವೆಂಬ ಬಾಗಲಿನಲ್ಲಿ ಭಿಕ್ಷೆಗಾಗಿ ಕೂತುಕೊಂಡಿದ್ದವನು ಇವನೇ ಎಂದು ಅವರು ತಿಳಿದುಕೊಂಡರು; ಹಾಗೆ ಅವನಿಗೆ ಸಂಭವಿಸಿದ್ದಕ್ಕಾಗಿ ಅವರು ಆಶ್ಚರ್ಯದಿಂದಲೂ ವಿಸ್ಮಯದಿಂದಲೂ ತುಂಬಿದವರಾದರು.
10 reconheceu que era ele o mesmo homem que costumava mendigar sentado à porta do templo chamada Formosa. Todos ficaram perplexos e muito admirados com o que lhe tinha acontecido.
11 ಸ್ವಸ್ಥನಾದ ಆ ಕುಂಟನು ಪೇತ್ರನನ್ನೂ ಯೋಹಾನ ನನ್ನೂ ಅಂಟಿಕೊಂಡಿದ್ದಾಗ ಜನರೆಲ್ಲರೂ ಕೂಡಿ ಅವರ ಬಳಿಗೆ ಅತ್ಯಾಶ್ಚರ್ಯದಿಂದ ಸೊಲೊಮೋನನದೆಂದು ಕರೆಯಲ್ಪಟ್ಟ ದ್ವಾರಾಂಗಳದೊಳಕ್ಕೆ ಓಡಿ ಬಂದರು.
11 Apegando-se o mendigo a Pedro e João, todo o povo ficou maravilhado e correu até eles, ao lugar chamado Pórtico de Salomão.
12 ಪೇತ್ರನು ಇದನ್ನು ನೋಡಿ ಜನರಿಗೆ--ಇಸ್ರಾ ಯೇಲ್‌ ಜನರೇ, ನೀವು ಯಾಕೆ ಇದಕ್ಕೆ ಆಶ್ಚರ್ಯ ಪಡುತ್ತೀರಿ? ಇಲ್ಲವೆ ನಮ್ಮ ಸ್ವಂತ ಶಕ್ತಿಯಿಂದಾಗಲಿ ಪರಿಶುದ್ಧತೆಯಿಂದಾಗಲಿ ಈ ಮನುಷ್ಯನನ್ನು ನಡೆಯು ವಂತೆ ಮಾಡಿದೆವೋ ಎಂಬಂತೆ ನಮ್ಮ ಮೇಲೆ ಯಾಕೆ ನೀವು ದೃಷ್ಟಿ ಇಟ್ಟು ನೋಡುತ್ತೀರಿ?
12 Vendo isso, Pedro lhes disse: "Israelitas, por que isto os surpreende? Por que vocês estão olhando para nós, como se tivéssemos feito este homem andar por nosso próprio poder ou piedade?
13 ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ.
13 O Deus de Abraão, de Isaque e de Jacó, o Deus dos nossos antepassados, glorificou seu servo Jesus, a quem vocês entregaram para ser morto e negaram perante Pilatos, embora ele tivesse decidido soltá-lo.
14 ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ
14 Vocês negaram publicamente o Santo e Justo e pediram que lhes fosse libertado um assassino.
15 ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ.
15 Vocês mataram o autor da vida, mas Deus o ressuscitou dos mortos. E nós somos testemunhas disso.
16 ನೀವು ನೋಡಿ ತಿಳಿದಂಥ ಈ ಮನುಷ್ಯನು ಆತನ ಹೆಸರಿನಲ್ಲಿ ನಂಬಿಕೆ ಇಟ್ಟದ್ದರಿಂದ ಆ ಹೆಸರೇ ಇವನನ್ನು ಬಲಪಡಿಸಿತು; ಹೌದು, ಆತನಿಂದಾದ ನಂಬಿಕೆಯು ನಿಮ್ಮೆಲ್ಲರ ಮುಂದೆ ಇವನಿಗೆ ಇಂಥ ಪೂರ್ಣ ಸ್ವಸ್ಥತೆಯನ್ನು ಕೊಟ್ಟಿತು.
16 Pela fé no nome de Jesus, o Nome curou este homem que vocês vêem e conhecem. A fé que vem por meio dele lhe deu esta saúde perfeita, como todos podem ver.
17 ಈಗ ಸಹೋದರರೇ, ನಿಮ್ಮ ಅಧಿಕಾರಿಗಳು ತಿಳಿಯದೆ ಮಾಡಿದಂತೆ ನೀವೂ ಇದನ್ನು ಮಾಡಿದಿ ರೆಂದು ನಾನು ಬಲ್ಲೆನು.
17 "Agora, irmãos, eu sei que vocês agiram por ignorância, bem como os seus líderes.
18 ಕ್ರಿಸ್ತನು ಬಾಧೆಪಡ ಬೇಕೆಂದು ದೇವರು ಮುಂದಾಗಿ ತನ್ನ ಎಲ್ಲಾ ಪ್ರವಾದಿ ಗಳ ಬಾಯಿಂದ ಹೇಳಿಸಿದವುಗಳನ್ನು ಹೀಗೆ ನೆರವೇರಿ ಸಿದನು.
18 Mas foi assim que Deus cumpriu o que tinha predito por todos os profetas, dizendo que o seu Cristo haveria de sofrer.
19 ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.
19 Arrependam-se, pois, e voltem-se para Deus, para que os seus pecados sejam cancelados,
20 ಇದಲ್ಲದೆ ಮೊದಲು ನಿಮಗೆ ಸಾರಲ್ಪ ಟ್ಟಂಥ ಯೇಸು ಕ್ರಿಸ್ತನನ್ನು ಆತನು ಕಳುಹಿಸುವನು.
20 para que venham tempos de descanso da parte do Senhor, e ele mande o Cristo, o qual lhes foi designado, Jesus.
21 ಲೋಕಾದಿಯಿಂದ ತನ್ನ ಎಲ್ಲಾ ಪರಿಶುದ್ಧ ಪ್ರವಾದಿ ಗಳ ಬಾಯಿಯ ಮುಖಾಂತರ ದೇವರು ತಿಳಿಸಿದ್ದೆ ಲ್ಲವುಗಳು ಯಥಾಸ್ಥಿತಿಗೆ ಬರುವ ಸಮಯದ ವರೆಗೆ ಪರಲೋಕದಲ್ಲಿ ಆತನು ಇರುವದು ಅವಶ್ಯವಾಗಿತ್ತು.
21 É necessário que ele permaneça no céu até que chegue o tempo em que Deus restaurará todas as coisas, como falou há muito tempo, por meio dos seus santos profetas.
22 ಯಾಕಂದರೆ ಪಿತೃಗಳಿಗೆ ಮೋಶೆಯು ನಿಜವಾಗಿಯೂ ಹೇಳಿದ್ದೇನಂದರೆ--ನನ್ನ ಹಾಗೆ ಒಬ್ಬ ಪ್ರವಾದಿಯನ್ನು ನಿಮ್ಮ ಸಹೋದರರಲ್ಲಿ ನಿಮ್ಮ ದೇವರಾದ ಕರ್ತನು ನಿಮಗಾಗಿ ಎಬ್ಬಿಸುವನು; ಆತನು ನಿಮಗೆ ಹೇಳುವ ಎಲ್ಲಾ ವಿಷಯಗಳಿಗೆ ನೀವು ಕಿವಿಗೊಡತಕ್ಕದ್ದು;
22 Pois disse Moisés: ‘O Senhor Deus lhes levantará dentre seus irmãos um profeta como eu; ouçam-no em tudo o que ele lhes disser.
23 ಆ ಪ್ರವಾದಿಗೆ ಕಿವಿಗೊಡದಿರುವ ಪ್ರತಿಯೊಬ್ಬನೂ ಜನ ರೊಳಗಿಂದ ನಾಶವಾಗುವನು ಎಂಬದು.
23 Quem não ouvir esse profeta, será eliminado do meio do seu povo’.
24 ಹೌದು, ಸಮುವೇಲನು ಮೊದಲುಗೊಂಡು ಎಲ್ಲಾ ಪ್ರವಾದಿ ಗಳೂ ತರುವಾಯ ಬಂದು ಮಾತನಾಡಿದವರೆಲ್ಲರೂ ಈ ದಿವಸಗಳ ವಿಷಯವಾಗಿ ಅದರಂತೆಯೇ ಮುಂತಿಳಿ ಸಿದರು.
24 "De fato, todos os profetas, de Samuel em diante, um por um, falaram e predisseram estes dias.
25 ಇದಲ್ಲದೆ ಅಬ್ರಹಾಮನಿಗೆ--ನಿನ್ನ ಸಂತ ತಿಯ ಮೂಲಕ ಭೂಲೋಕದ ಎಲ್ಲಾ ಕುಲದವರು ಆಶೀರ್ವದಿಸಲ್ಪಡುವರು ಎಂದು ದೇವರು ನಮ್ಮ ಪಿತೃಗಳೊಂದಿಗೆ ಮಾಡಿದ ಒಡಂಬಡಿಕೆಯ ಮಕ್ಕಳೂ ಪ್ರವಾದಿಗಳ ಮಕ್ಕಳೂ ನೀವಾಗಿದ್ದೀರಿ.
25 E vocês são herdeiros dos profetas e da aliança que Deus fez com os seus antepassados. Ele disse a Abraão: ‘Por meio da sua descendência todos os povos da terra serão abençoados’.
26 ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
26 Tendo Deus ressuscitado o seu Servo, enviou-o primeiramente a vocês, para abençoá-los, convertendo cada um de vocês das suas maldades".

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Atos 3, comparar traduções ou montar um estudo — tudo direto pelo WhatsApp.