Atos 5

Kannada Bible (GL_KANNADA) vs ACF

Sair da comparação
ACF Almeida Corrigida Fiel
1 ಆದರೆ ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿಯಾದ ಸಪ್ಫೈರಳೊಂದಿಗೆ ತನ್ನ ಒಂದು ಆಸ್ತಿಯನ್ನು ಮಾರಿ
1 Mas um certo homem chamado Ananias, com Safira, sua mulher, vendeu uma propriedade,
2 ಅದರ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಟ್ಟು ಇನ್ನೊಂದು ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು; ಇದು ಅವನ ಹೆಂಡತಿಗೂ ತಿಳಿದಿತ್ತು.
2 E reteve parte do preço, sabendo-o também sua mulher; e, levando uma parte, a depositou aos pés dos apóstolos.
3 ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ?
3 Disse então Pedro: Ananias, por que encheu Satanás o teu coração, para que mentisses ao Espírito Santo, e retivesses parte do preço da herdade?
4 ಆ ಆಸ್ತಿಯು ಇದ್ದಾಗ ಅದು ನಿನ್ನ ಸ್ವಂತದ್ದಾಗಿತ್ತಲ್ಲವೇ? ಅದನ್ನು ಮಾರಿದ ಮೇಲೆಯೂ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ನಿನ್ನ ಹೃದಯದಲ್ಲಿ ಅದನ್ನು ಯಾಕೆ ಯೋಚಿಸಿದ್ದೀ? ನೀನು ಮನುಷ್ಯರಿಗಲ್ಲ, ದೇವರಿಗೇ ಸುಳ್ಳಾಡಿದ್ದೀ ಅಂದನು.
4 Guardando-a não ficava para ti? E, vendida, não estava em teu poder? Por que formaste este desígnio em teu coração? Não mentiste aos homens, mas a Deus.
5 ಅನನೀಯನು ಈ ಮಾತುಗಳನ್ನು ಕೇಳಿ ಕೆಳಗೆ ಬಿದ್ದು ಪ್ರಾಣಬಿಟ್ಟನು; ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾ ಯಿತು.
5 E Ananias, ouvindo estas palavras, caiu e expirou. E um grande temor veio sobre todos os que isto ouviram.
6 ಆಗ ಯೌವನಸ್ಥರು ಎದ್ದು ಅವನನ್ನು ಸುತ್ತಿ ಹೊತ್ತುಕೊಂಡು ಹೋಗಿ ಹೂಣಿಟ್ಟರು.
6 E, levantando-se os moços, cobriram o morto e, transportando-o para fora, o sepultaram.
7 ಸುಮಾರು ಮೂರು ತಾಸುಗಳಾದ ಮೇಲೆ ಅವನ ಹೆಂಡತಿಯು ನಡೆದ ಸಂಗತಿಯನ್ನು ತಿಳಿಯದೆ ಒಳಗೆ ಬಂದಳು.
7 E, passando um espaço quase de três horas, entrou também sua mulher, não sabendo o que havia acontecido.
8 ಆಗ ಪೇತ್ರನು ಆಕೆಗೆ--ನೀವು ಆ ಹೊಲವನ್ನು ಇಷ್ಟೇ ಹಣಕ್ಕೆ ಮಾರಿದಿರೋ? ನನಗೆ ಹೇಳು ಎಂದು ಕೇಳಿದನು. ಅದಕ್ಕೆ ಆಕೆಯು--ಹೌದು, ಅಷ್ಟಕ್ಕೇ ಅಂದಳು.
8 E disse-lhe Pedro: Dize-me, vendestes por tanto aquela herdade? E ela disse: Sim, por tanto.
9 ಆಗ ಪೇತ್ರನು ಆಕೆಗೆ--ಕರ್ತನ ಆತ್ಮನನ್ನು ಶೋಧಿಸುವದಕ್ಕಾಗಿ ನೀವು ಹೇಗೆ ಒಟ್ಟಾಗಿ ಸಮ್ಮತಿಸಿ ದ್ದೀರಿ? ಇಗೋ, ನಿನ್ನ ಗಂಡನನ್ನು ಹೂಣಿಟ್ಟವರ ಪಾದಗಳು ಬಾಗಿಲಲ್ಲಿ ಇವೆ, ಅವರು ನಿನ್ನನ್ನೂ ಹೊತ್ತು ಕೊಂಡು ಹೋಗುವರು ಅಂದನು.
9 Então Pedro lhe disse: Por que é que entre vós vos concertastes para tentar o Espírito do Senhor? Eis aí à porta os pés dos que sepultaram o teu marido, e também te levarão a ti.
10 ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣ ಬಿಟ್ಟಳು. ಆಗ ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿದ್ದನ್ನು ಕಂಡು ಹೊತ್ತುಕೊಂಡು ಹೋಗಿ ಆಕೆಯ ಗಂಡನ ಪಕ್ಕದಲ್ಲಿ ಹೂಣಿಟ್ಟರು.
10 E logo caiu aos seus pés, e expirou. E, entrando os moços, acharam-na morta, e a sepultaram junto de seu marido.
11 ಸರ್ವ ಸಭೆಗೂ ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾಯಿತು.
11 E houve um grande temor em toda a igreja, e em todos os que ouviram estas coisas.
12 ಅಪೊಸ್ತಲರ ಕೈಗಳಿಂದ ಅನೇಕ ಸೂಚಕ ಕಾರ್ಯಗಳೂ ಅದ್ಭುತಕಾರ್ಯಗಳೂ ಜನರ ಮಧ್ಯ ದಲ್ಲಿ ನಡೆದವು. (ಅವರೆಲ್ಲರೂ ಸೊಲೊಮೋನನ ದ್ವಾರಾಂಗಳದಲ್ಲಿ ಒಮ್ಮನಸ್ಸಿನಿಂದ ಇದ್ದರು.)
12 E muitos sinais e prodígios eram feitos entre o povo pelas mãos dos apóstolos. E estavam todos unanimemente no alpendre de Salomão.
13 ಮಿಕ್ಕಾದ ವರಲ್ಲಿ ಒಬ್ಬರಿಗೂ ಅವರ ಜೊತೆ ಸೇರುವದಕ್ಕೆ ಧೈರ್ಯ ವಿರಲಿಲ್ಲ; ಆದರೂ ಜನರು ಅವರನ್ನು ಹೊಗಳುತ್ತಿದ್ದರು.
13 Dos outros, porém, ninguém ousava ajuntar-se a eles; mas o povo tinha-os em grande estima.
14 ವಿಶ್ವಾಸಿಗಳಾದ ಬಹಳ ಸ್ತ್ರೀ ಪುರುಷರ ಸಮೂಹದ ವರು ಕರ್ತನಲ್ಲಿ ಸೇರಿಕೊಂಡರು.
14 E a multidão dos que criam no Senhor, tanto homens como mulheres, crescia cada vez mais.
15 ಹೀಗಿರುವದರಿಂದ ಪೇತ್ರನು ಹಾದು ಹೋಗುವಾಗ ಅವನ ನೆರಳಾದರೂ ಅವರಲ್ಲಿ ಕೆಲವರ ಮೇಲೆ ಬೀಳುವಂತೆ ಜನರು ರೋಗಿಗಳನ್ನು ಹಾಸಿಗೆಗಳ ಮೇಲೆಯೂ ದೋಲಿಗಳ ಮೇಲೆಯೂ ಇಟ್ಟು ಬೀದಿಗಳಿಗೆ ತೆಗೆದುಕೊಂಡು ಬಂದರು.
15 De sorte que transportavam os enfermos para as ruas, e os punham em leitos e em camilhas para que ao menos a sombra de Pedro, quando este passasse, cobrisse alguns deles.
16 ಜನಸಮೂಹವು ಸುತ್ತಮುತ್ತಲಿನ ಪಟ್ಟಣ ಗಳಿಂದ ರೋಗಿಗಳನ್ನೂ ಅಶುದ್ಧಾತ್ಮಗಳಿಂದ ಪೀಡಿಸಲ್ಪಟ್ಟ ವರನ್ನೂ ತೆಗೆದುಕೊಂಡು ಯೆರೂಸಲೇಮಿಗೆ ಬಂದರು ಮತ್ತು ಅವರಲ್ಲಿ ಪ್ರತಿಯೊಬ್ಬನೂ ಗುಣಹೊಂದಿದನು.
16 E até das cidades circunvizinhas concorria muita gente a Jerusalém, conduzindo enfermos e atormentados de espíritos imundos; os quais eram todos curados.
17 ಆಗ ಮಹಾಯಾಜಕನೂ ಅವನೊಂದಿಗೆ ಇದ್ದ ವರೂ (ಇವರು ಸದ್ದುಕಾಯರ ಪಂಗಡಕ್ಕೆ ಸೇರಿದವರು) ಕೋಪದಿಂದ ತುಂಬಿದವರಾಗಿ ಎದ್ದು
17 E, levantando-se o sumo sacerdote, e todos os que estavam com ele (e eram eles da seita dos saduceus), encheram-se de inveja,
18 ಅಪೊಸ್ತಲ ರನ್ನು ಹಿಡಿದು ಅವರನ್ನು ಸಾಮಾನ್ಯ ಸೆರೆಯಲ್ಲಿಟ್ಟರು.
18 E lançaram mão dos apóstolos, e os puseram na prisão pública.
19 ಆದರೆ ರಾತ್ರಿಯಲ್ಲಿ ಕರ್ತನ ದೂತನು ಸೆರೆ ಮನೆಯ ಬಾಗಿಲುಗಳನ್ನು ತೆರೆದು ಅವರನ್ನು ಹೊರಕ್ಕೆ ತಂದು--
19 Mas de noite um anjo do Senhor abriu as portas da prisão e, tirando-os para fora, disse:
20 ನೀವು ಹೋಗಿ ದೇವಾಲಯದಲ್ಲಿ ನಿಂತು ಕೊಂಡು ಈ ಜೀವ ವಾಕ್ಯಗಳನ್ನೆಲ್ಲಾ ಜನರಿಗೆ ತಿಳಿಸಿರಿ ಎಂದು ಹೇಳಿದನು.
20 Ide e apresentai-vos no templo, e dizei ao povo todas as palavras desta vida.
21 ಅವರು ಅದನ್ನು ಕೇಳಿದವರಾಗಿ ಬೆಳಗಿನ ಜಾವದಲ್ಲಿಯೇ ದೇವಾಲಯದೊಳಕ್ಕೆ ಪ್ರವೇಶಿಸಿ ಬೋಧಿಸಿದರು. ಇತ್ತ ಮಹಾಯಾಜಕನೂ ಅವನ ಕೂಡ ಇದ್ದವರೂ ಬಂದು ಆಲೋಚನಾ ಸಭೆಯನ್ನೂ ಇಸ್ರಾಯೇಲ್‌ ಮಕ್ಕಳ ಶಾಸನ ಸಭೆಯನ್ನೂ ಕೂಡಿಸಿ ಅಪೊಸ್ತಲರನ್ನು ಕರತರುವದಕ್ಕಾಗಿ ಸೆರೆ ಮನೆಗೆ ಕಳುಹಿಸಿದರು
21 E, ouvindo eles isto, entraram de manhã cedo no templo, e ensinavam. Chegando, porém, o sumo sacerdote e os que estavam com ele, convocaram o conselho, e a todos os anciãos dos filhos de Israel, e enviaram ao cárcere, para que de lá os trouxessem.
22 ಆದರೆ ಅಧಿಕಾರಿಗಳು ಬಂದು ಅವರನ್ನು ಸೆರೆಯಲ್ಲಿ ಕಾಣದೆ ಹಿಂತಿರುಗಿ ಹೋಗಿ--
22 Mas, tendo lá ido os servidores, não os acharam na prisão e, voltando, lho anunciaram,
23 ನಿಜವಾಗಿಯೂ ಸೆರೆಮನೆಯು ಎಲ್ಲಾ ಭದ್ರತೆಯಿಂದ ಮುಚ್ಚಲ್ಪಟ್ಟದ್ದನ್ನೂ ಕಾವಲುಗಾರರು ಬಾಗಲುಗಳಲ್ಲಿ ನಿಂತಿರುವದನ್ನೂ ನಾವು ಕಂಡೆವು; ಆದರೆ ಅದನ್ನು ತೆರೆದಾಗ ನಾವು ಯಾರನ್ನೂ ಒಳಗೆ ಕಾಣಲಿಲ್ಲ ಎಂದು ಹೇಳಿದರು.
23 Dizendo: Achamos realmente o cárcere fechado, com toda a segurança, e os guardas, que estavam fora, diante das portas; mas, quando abrimos, ninguém achamos dentro.
24 ಆಗ ಮಹಾಯಾಜಕನೂ ದೇವಾಲಯದ ಅಧಿಪತಿಯೂ ಪ್ರಧಾನಯಾಜಕರೂ ಇವುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತು ಎಂದು ಅವರ ವಿಷಯದಲ್ಲಿ ಸಂದೇಹಪಟ್ಟರು.
24 Então o sumo sacerdote, o capitão do templo e os chefes dos sacerdotes, ouvindo estas palavras, estavam perplexos acerca deles e do que viria a ser aquilo.
25 ಆಗ ಒಬ್ಬನು ಬಂದು ಅವರಿಗೆ--ಇಗೋ, ನೀವು ಸೆರೆಯ ಲ್ಲಿಟ್ಟಿದ್ದ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಬೋಧಿಸುತ್ತಿದ್ದಾರೆ ಎಂದು ಹೇಳಿ ದನು.
25 E, chegando um, anunciou-lhes, dizendo: Eis que os homens que encerrastes na prisão estão no templo e ensinam ao povo.
26 ಆಗ ಅಧಿಪತಿಯು ಅಧಿಕಾರಿಗಳೊಂದಿಗೆ ಹೋಗಿ ಬಲಾತ್ಕಾರವೇನೂ ಮಾಡದೆ ಅವರನ್ನು ಕರತಂದನು; ಯಾಕಂದರೆ ಜನರು ತಮಗೆ ಕಲ್ಲೆಸೆದಾರು ಎಂದು ಅವರು ಭಯಪಟ್ಟಿದ್ದರು.
26 Então foi o capitão com os servidores, e os trouxe, não com violência (porque temiam ser apedrejados pelo povo).
27 ಅವರು ಅಪೊಸ್ತಲ ರನ್ನು ಕರತಂದು ಆಲೋಚನಾಸಭೆಯ ಎದುರಿನಲ್ಲಿ ನಿಲ್ಲಿಸಿದರು. ಆಗ ಮಹಾಯಾಜಕನು--
27 E, trazendo-os, os apresentaram ao conselho. E o sumo sacerdote os interrogou,
28 ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.
28 Dizendo: Não vos admoestamos nós expressamente que não ensinásseis nesse nome? E eis que enchestes Jerusalém dessa vossa doutrina, e quereis lançar sobre nós o sangue desse homem.
29 ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು.
29 Porém, respondendo Pedro e os apóstolos, disseram: Mais importa obedecer a Deus do que aos homens.
30 ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.
30 O Deus de nossos pais ressuscitou a Jesus, ao qual vós matastes, suspendendo-o no madeiro.
31 ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.
31 Deus com a sua destra o elevou a Príncipe e Salvador, para dar a Israel o arrependimento e a remissão dos pecados.
32 ದೇವರು ತನಗೆ ವಿಧೇಯರಾಗುವವರಿಗೆ ದಯಪಾಲಿಸಿದ ಪವಿತ್ರಾ ತ್ಮನೂ ನಾವೂ ಇವುಗಳಿಗೆ ಆತನ ಸಾಕ್ಷಿಗಳಾಗಿದ್ದೇವೆ ಎಂದು ಹೇಳಿದರು.
32 E nós somos testemunhas acerca destas palavras, nós e também o Espírito Santo, que Deus deu àqueles que lhe obedecem.
33 ಅದನ್ನು ಅವರು ಕೇಳಿ ಹೃದಯದಲ್ಲಿ ತಿವಿಯ ಲ್ಪಟ್ಟವರಾಗಿ ಅವರನ್ನು ಕೊಲ್ಲಬೇಕೆಂದು ಆಲೋಚಿಸಿ ಕೊಂಡರು.
33 E, ouvindo eles isto, se enfureciam, e deliberaram matá-los.
34 ಆಗ ನ್ಯಾಯಪ್ರಮಾಣದಲ್ಲಿ ಪಂಡಿತ ನಾಗಿದ್ದು ಎಲ್ಲಾ ಜನರಲ್ಲಿ ಮಾನ ಹೊಂದಿದ ಗಮಲಿ ಯೇಲನೆಂಬ ಒಬ್ಬ ಫರಿಸಾಯನು ಆಲೋಚನಾ ಸಭೆಯಲ್ಲಿ ನಿಂತುಕೊಂಡು ಸ್ವಲ್ಪ ಹೊತ್ತು ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಅಪ್ಪಣೆ ಕೊಟ್ಟು ಅವ ರಿಗೆ--
34 Mas, levantando-se no conselho um certo fariseu, chamado Gamaliel, doutor da lei, venerado por todo o povo, mandou que por um pouco levassem para fora os apóstolos;
35 ಇಸ್ರಾಯೇಲ್‌ ಜನರೇ, ಈ ಮನುಷ್ಯರಿಗೆ ನೀವು ಏನು ಮಾಡಬೇಕೆಂದಿದ್ದೀರೋ ಅದರ ವಿಷಯ ವಾಗಿ ಎಚ್ಚರಿಕೆಯುಳ್ಳವರಾಗಿರ್ರಿ.
35 E disse-lhes: Homens israelitas, acautelai-vos a respeito do que haveis de fazer a estes homens,
36 ಇದಕ್ಕಿಂತ ಮುಂಚೆ ಥೈದನು ಎದ್ದು ತಾನೊಬ್ಬ ಗಣ್ಯವ್ಯಕ್ತಿ ಎಂದು ತನ್ನ ವಿಷಯವಾಗಿ ತಾನೇ ಕೊಚ್ಚಿಕೊಂಡಾಗ ಸುಮಾರು ನಾನೂರು ಜನರು ಅವನೊಂದಿಗೆ ಸೇರಿಕೊಂಡರು; ಅವನು ಕೊಲ್ಲಲ್ಪಟ್ಟದ್ದರಿಂದ ಅವನಿಗೆ ವಿಧೇಯರಾಗಿ ದ್ದವರೆಲ್ಲರೂ ಚದರಿಹೋಗಿ ಇಲ್ಲವಾದರು.
36 Porque antes destes dias levantou-se Teudas, dizendo ser alguém; a este se ajuntou o número de uns quatrocentos homens; o qual foi morto, e todos os que lhe deram ouvidos foram dispersos e reduzidos a nada.
37 ಈ ಮನುಷ್ಯನ ತರುವಾಯ ಖಾನೇಷುಮಾರಿಯ ದಿನ ಗಳಲ್ಲಿ ಗಲಿಲಾಯದ ಯೂದನು ಎದ್ದು ತನ್ನನ್ನು ಹಿಂಬಾಲಿಸುವಂತೆ ಅನೇಕ ಜನರನ್ನು ಸೆಳೆದನು. ಆದರೆ ಅವನು ಸಹ ನಾಶವಾದನು. ಅವನಿಗೆ ವಿಧೇಯರಾದ ವರೆಲ್ಲರೂ ಚದರಿಹೋದರು ಎಂದು ಹೇಳಿದನು.
37 Depois deste levantou-se Judas, o galileu, nos dias do alistamento, e levou muito povo após si; mas também este pereceu, e todos os que lhe deram ouvidos foram dispersos.
38 ಈಗ ನಾನು ನಿಮಗೆ ಹೇಳುವದೇನಂದರೆ--ಈ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ; ಈ ಯೋಚನೆಯು ಅಥವಾ ಈ ಕಾರ್ಯವು ಮನುಷ್ಯರಿಂದಾಗಿದ್ದರೆ ಅದು ನಿಷ್ಫಲವಾಗುವದು.
38 E agora digo-vos: Dai de mão a estes homens, e deixai-os, porque, se este conselho ou esta obra é de homens, se desfará,
39 ಅದು ದೇವರಿಂದಾಗಿದ್ದರೆ ನೀವು ಅದನ್ನು ಗೆಲ್ಲಲಾರಿರಿ; ಒಂದು ವೇಳೆ ನೀವು ದೇವರಿಗೆ ವಿರುದ್ಧ ವಾಗಿ ಹೋರಾಡುವವರಾಗಿ ಕಾಣಿಸಿಕೊಂಡೀರಿ ಎಂದು ಹೇಳಿದನು.
39 Mas, se é de Deus, não podereis desfazê-la; para que não aconteça serdes também achados combatendo contra Deus.
40 ಇದಕ್ಕೆ ಅವರು ಅವನೊಂದಿಗೆ ಒಪ್ಪಿಕೊಂಡು ಅಪೊಸ್ತಲರನ್ನು ಕರೆಯಿಸಿ ಅವರನ್ನು ಹೊಡೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಅಪ್ಪಣೆ ಕೊಟ್ಟು ಬಿಟ್ಟುಬಿಟ್ಟರು.
40 E concordaram com ele. E, chamando os apóstolos, e tendo-os açoitado, mandaram que não falassem no nome de Jesus, e os deixaram ir.
41 ಆತನ ಹೆಸರಿಗಾಗಿ ಅವಮಾನಪಡುವದಕ್ಕೆ ತಾವು ಯೋಗ್ಯರೆಂದು ಎಣಿಸ ಲ್ಪಟ್ಟದ್ದಕ್ಕಾಗಿ ಅವರು ಸಂತೋಷಿಸುತ್ತಾ ಆಲೋಚನಾ ಸಭೆಯಿಂದ ಹೊರಟುಹೋದರು.
41 Retiraram-se, pois, da presença do conselho, regozijando-se de terem sido julgados dignos de padecer afronta pelo nome de Jesus.
42 ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.
42 E todos os dias, no templo e nas casas, não cessavam de ensinar, e de anunciar a Jesus Cristo.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Atos 5, comparar traduções ou montar um estudo — tudo direto pelo WhatsApp.