Atos 9
Kannada Bible (GL_KANNADA) vs ACF
ACF Almeida Corrigida Fiel
1 ಸೌಲನು ಕರ್ತನ ಶಿಷ್ಯರಿಗೆ ಇನ್ನೂ ವಿರೋಧವಾಗಿ ಬೆದರಿಕೆಯ ಮಾತುಗಳ ನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಮಹಾ ಯಾಜಕನ ಬಳಿಗೆ ಹೋಗಿ
1 E Saulo, respirando ainda ameaças e mortes contra os discípulos do Senhor, dirigiu-se ao sumo sacerdote.
2 ಆ ಮಾರ್ಗದಲಿ ಇದ್ದವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ತಾನು ಅವರನ್ನು ಬಂಧಿಸಿ ಯೆರೂಸಲೇಮಿಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರ ದವರಿಗೆ ಪತ್ರಗಳನ್ನು ಕೊಡಬೇಕೆಂದು ಅವನನ್ನು ಬೇಡಿಕೊಂಡನು.
2 E pediu-lhe cartas para Damasco, para as sinagogas, a fim de que, se encontrasse alguns deste Caminho, quer homens quer mulheres, os conduzisse presos a Jerusalém.
3 ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು ಫಕ್ಕನೆ ಪರಲೋಕದೊಳ ಗಿಂದ ಒಂದು ಬೆಳಕು ಅವನ ಸುತ್ತಲೂ ಹೊಳೆಯಿತು.
3 E, indo no caminho, aconteceu que, chegando perto de Damasco, subitamente o cercou um resplendor de luz do céu.
4 ಆಗ ಅವನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆಪಡಿಸುತ್ತೀ ಎಂದು ಹೇಳುವ ಧ್ವನಿಯನ್ನು ಕೇಳಿದನು.
4 E, caindo em terra, ouviu uma voz que lhe dizia: Saulo, Saulo, por que me persegues?
5 ಅವನು--ಕರ್ತನೇ, ನೀನಾರು ಎಂದು ಕೇಳಿದ್ದಕ್ಕೆ ಕರ್ತನು--ನೀನು ಹಿಂಸೆಪಡಿಸುವ ಯೇಸುವೇ ನಾನು; ಮುಳ್ಳು ಗೋಲುಗಳನ್ನು ಒದೆಯುವದು ನಿನಗೆ ಕಷ್ಠವಾಗಿದೆ ಅಂದನು.
5 E ele disse: Quem és, Senhor? E disse o Senhor: Eu sou Jesus, a quem tu persegues. Duro é para ti recalcitrar contra os aguilhões.
6 ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.
6 E ele, tremendo e atônito, disse: Senhor, que queres que eu faça? E disse-lhe o Senhor: Levanta-te, e entra na cidade, e lá te será dito o que te convém fazer.
7 ಅವನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರು ಧ್ವನಿಯನ್ನು ಮಾತ್ರ ಕೇಳಿ ಯಾರನ್ನೂ ಕಾಣದೆ ಮೂಕರಂತೆ ನಿಂತರು.
7 E os homens, que iam com ele, pararam espantados, ouvindo a voz, mas não vendo ninguém.
8 ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಯಾರನ್ನೂ ಕಾಣಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದು ಕೊಂಡು ಹೋದರು;
8 E Saulo levantou-se da terra, e, abrindo os olhos, não via a ninguém. E, guiando-o pela mão, o conduziram a Damasco.
9 ಅವನು ಮೂರು ದಿವಸ ಕಣ್ಣು ಕಾಣದೆ ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ.
9 E esteve três dias sem ver, e não comeu nem bebeu.
10 ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ--ಅನನೀಯನೇ ಎಂದು ಅವನನ್ನು ಕರೆಯಲು ಅವನು--ಕರ್ತನೇ, ಇಗೋ, ಇದ್ದೇನೆ ಅಂದನು.
10 E havia em Damasco um certo discípulo chamado Ananias; e disse-lhe o Senhor em visão: Ananias! E ele respondeu: Eis-me aqui, Senhor.
11 ಕರ್ತನು ಅವನಿಗೆ--ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ವಿಚಾರಿಸು; ಇಗೋ, ಅವನು ಪ್ರಾರ್ಥನೆ ಮಾಡುತ್ತಾನೆ.
11 E disse-lhe o Senhor: Levanta-te, e vai à rua chamada Direita, e pergunta em casa de Judas por um homem de Tarso chamado Saulo; pois eis que ele está orando;
12 ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ತಿರಿಗಿ ಕಣ್ಣು ಕಾಣುವಂತೆ ತನ್ನ ಮೇಲೆ ಕೈಯಿಡುವದನ್ನು ದರ್ಶನದಲ್ಲಿ ನೋಡಿದ್ದಾನೆ ಎಂದು ಹೇಳಿದನು.
12 E numa visão ele viu que entrava um homem chamado Ananias, e punha sobre ele a mão, para que tornasse a ver.
13 ಅದಕ್ಕೆ ಅನನೀಯನು--ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನ ಪರಿಶುದ್ಧರಿಗೆ ಎಷ್ಟೋ ಕೇಡನ್ನುಂಟು ಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ನಾನು ಕೇಳಿದ್ದೇನೆ;
13 E respondeu Ananias: Senhor, a muitos ouvi acerca deste homem, quantos males tem feito aos teus santos em Jerusalém;
14 ಇಲ್ಲಿಯೂ ನಿನ್ನ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಪ್ರಧಾನಯಾಜಕರಿಂದ ಹೊಂದಿದ್ದಾನೆ ಅಂದನು.
14 E aqui tem poder dos principais dos sacerdotes para prender a todos os que invocam o teu nome.
15 ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.
15 Disse-lhe, porém, o Senhor: Vai, porque este é para mim um vaso escolhido, para levar o meu nome diante dos gentios, e dos reis e dos filhos de Israel.
16 ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಕಠಿಣವಾದ ಶ್ರಮೆಯನ್ನನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.
16 E eu lhe mostrarei quanto deve padecer pelo meu nome.
17 ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು--ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗು ವಂತೆಯೂ ನನ್ನನ್ನು ಕಳುಹಿಸಿದ್ದಾನೆ ಎಂದು ಹೇಳಿದನು.
17 E Ananias foi, e entrou na casa e, impondo-lhe as mãos, disse: Irmão Saulo, o Senhor Jesus, que te apareceu no caminho por onde vinhas, me enviou, para que tornes a ver e sejas cheio do Espírito Santo.
18 ಆಗ ಅವನ ಕಣ್ಣುಗಳಿಂದ ಪರೆಗಳಂತಿದ್ದವುಗಳು ಬಿದ್ದ ಕೂಡಲೆ ಅವನು ದೃಷ್ಟಿ ಹೊಂದಿದವನಾಗಿ ಎದ್ದು ಬಾಪ್ತಿಸ್ಮ ಮಾಡಿಸಿಕೊಂಡನು.
18 E logo lhe caíram dos olhos como que umas escamas, e recuperou a vista; e, levantando-se, foi batizado.
19 ತರುವಾಯ ಊಟ ಮಾಡಿ ಬಲಹೊಂದಿದನು. ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿವಸ ಇದ್ದನು.
19 E, tendo comido, ficou confortado. E esteve Saulo alguns dias com os discípulos que estavam em Damasco.
20 ಅವನು ಕೂಡಲೆ ಸಭಾಮಂದಿರಗಳಲ್ಲಿ ಕ್ರಿಸ್ತನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರಿ ದನು.
20 E logo nas sinagogas pregava a Cristo, que este é o Filho de Deus.
21 ಆದರೆ ಕೇಳಿದವರೆಲ್ಲರೂ ಬೆರಗಾಗಿ--ಈ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ಹಾಳು ಮಾಡಿದವನು ಇವನೇ ಅಲ್ಲವೇ, ಅಂಥವರನ್ನು ಬಂಧಿಸಿ ಪ್ರಧಾನಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂಬ ಉದ್ದೇಶದಿಂದ ಇಲ್ಲಿಗೆ ಬಂದನಲ್ಲವೇ ಎಂದು ಮಾತನಾಡಿಕೊಂಡರು.
21 E todos os que o ouviam estavam atônitos, e diziam: Não é este o que em Jerusalém perseguia os que invocavam este nome, e para isso veio aqui, para os levar presos aos principais dos sacerdotes?
22 ಆದರೆ ಸೌಲನು ಇನ್ನೂ ಅಧಿಕ ಸಾಮರ್ಥ್ಯವುಳ್ಳವನಾಗಿ ಈತನೇ ಕ್ರಿಸ್ತ ನೆಂದು ಸಿದ್ಧಾಂತಪಡಿಸಿ ದಮಸ್ಕದಲ್ಲಿದ್ದ ಯೆಹೂದ್ಯರನ್ನು ದಿಗ್ಭ್ರಮೆಗೊಳಿಸಿದನು.
22 Saulo, porém, se esforçava muito mais, e confundia os judeus que habitavam em Damasco, provando que aquele era o Cristo.
23 ಅನೇಕ ದಿವಸಗಳು ಹೋದಮೇಲೆ ಯೆಹೂ ದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿ ಕೊಂಡರು.
23 E, tendo passado muitos dias, os judeus tomaram conselho entre si para o matar.
24 ಆದರೆ ಅವರು ಹೊಂಚುಹಾಕಿ ಕೊಂಡಿರುವದು ಸೌಲನಿಗೆ ತಿಳಿಯಬಂತು. ಅವನನ್ನು ಕೊಲ್ಲುವದಕ್ಕಾಗಿ ಅವರು ಹಗಲಿರುಳೂ ದ್ವಾರಗಳನ್ನು ಕಾಯುತ್ತಿದ್ದರು;
24 Mas as suas ciladas vieram ao conhecimento de Saulo; e como eles guardavam as portas, tanto de dia como de noite, para poderem tirar-lhe a vida,
25 ಆಗ ಶಿಷ್ಯರು ರಾತ್ರಿ ಕಾಲದಲ್ಲಿ ಅವನನ್ನು ಕರೆದುಕೊಂಡು ಹೋಗಿ ಒಂದು ಹೆಡಿಗೆ ಯಲ್ಲಿ ಕೂಡ್ರಿಸಿ ಗೋಡೆಯಿಂದ ಇಳಿಸಿದರು.
25 Tomando-o de noite os discípulos o desceram, dentro de um cesto, pelo muro.
26 ಸೌಲನು ಯೆರೂಸಲೇಮಿಗೆ ಬಂದು ಶಿಷ್ಯ ರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನಮಾಡಿದಾಗ ಎಲ್ಲರೂ ಅವನಿಗೆ ಭಯಪಟ್ಟು ಅವನನ್ನು ಶಿಷ್ಯನೆಂದು ನಂಬದೆ ಹೋದರು.
26 E, quando Saulo chegou a Jerusalém, procurava ajuntar-se aos discípulos, mas todos o temiam, não crendo que fosse discípulo.
27 ಆದರೆ ಬಾರ್ನಬನು ಅವನನ್ನು ಅಪೊಸ್ತಲರ ಬಳಿಗೆ ಕರೆದುಕೊಂಡು ಹೋಗಿ ಅವನು ಹೇಗೆ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ ಆತನು ಅವನ ಸಂಗಡ ಮಾತನಾಡಿ ದ್ದನ್ನೂ ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿದ್ದನ್ನೂ ಅವರಿಗೆ ವಿವರವಾಗಿ ತಿಳಿಯಪಡಿಸಿದನು.
27 Então Barnabé, tomando-o consigo, o trouxe aos apóstolos, e lhes contou como no caminho ele vira ao Senhor e lhe falara, e como em Damasco falara ousadamente no nome de Jesus.
28 ಆಮೇಲೆ ಅವನು ಯೆರೂಸ ಲೇಮಿನಲ್ಲಿ ಅವರ ಕೂಡ ಬರುತ್ತಾ ಹೋಗುತ್ತಾ ಇದ್ದನು.
28 E andava com eles em Jerusalém, entrando e saindo,
29 ಕರ್ತನಾದ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿ ಗ್ರೀಕರೊಂದಿಗೆ ತರ್ಕಿಸುತ್ತಿ ದ್ದನು. ಆದರೆ ಅವರು ಅವನನ್ನು ಕೊಲ್ಲುವದಕ್ಕೆ ಪ್ರಯತ್ನ ಮಾಡಿದರು.
29 E falava ousadamente no nome do Senhor Jesus. Falava e disputava também contra os gregos, mas eles procuravam matá-lo.
30 ಇದು ಸಹೋದರರಿಗೆ ತಿಳಿದು ಬರಲು ಅವರು ಅವನನ್ನು ಕೈಸರೈಯಕ್ಕೆ ಕರಕೊಂಡು ಹೋಗಿ ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು.
30 Sabendo-o, porém, os irmãos, o acompanharam até Cesaréia, e o enviaram a Tarso.
31 ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.
31 Assim, pois, as igrejas em toda a Judéia, e Galiléia e Samaria tinham paz, e eram edificadas; e se multiplicavam, andando no temor do Senhor e consolação do Espírito Santo.
32 ಇದಾದಮೇಲೆ ಪೇತ್ರನು ಎಲ್ಲಾ ಕಡೆಯೂ ಸಂಚಾರಮಾಡುತ್ತಿರುವಾಗ ಲುದ್ದದಲ್ಲಿ ವಾಸವಾಗಿದ್ದ ಪರಿಶುದ್ಧರ ಬಳಿಗೂ ಬಂದನು.
32 E aconteceu que, passando Pedro por toda a parte, veio também aos santos que habitavam em Lida.
33 ಅಲ್ಲಿ ಪಾರ್ಶ್ವ ವಾಯು ರೋಗಿಯಾಗಿ ಎಂಟು ವರುಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು.
33 E achou ali certo homem, chamado Enéias, jazendo numa cama havia oito anos, o qual era paralítico.
34 ಪೇತ್ರನು ಅವನಿಗೆ--ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡು ತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ಹಾಸಿಕೋ ಎಂದು ಹೇಳಿದನು; ಕೂಡಲೆ ಅವನು ಎದ್ದನು.
34 E disse-lhe Pedro: Enéias, Jesus Cristo te dá saúde; levanta-te e faze a tua cama. E logo se levantou.
35 ಲುದ್ದ ದಲ್ಲಿಯೂ ಸಾರೋನದಲ್ಲಿಯೂ ವಾಸವಾಗಿದ್ದವ ರೆಲ್ಲರೂ ಅವನನ್ನು ನೋಡಿ ಕರ್ತನ ಕಡೆಗೆ ತಿರುಗಿ ಕೊಂಡರು.
35 E viram-no todos os que habitavam em Lida e Sarona, os quais se converteram ao Senhor.
36 ಯೊಪ್ಪದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು; ಆ ಹೆಸರಿಗೆ ದೊರ್ಕ ಎಂದರ್ಥ. ಆಕೆಯು ಸತ್ಕ್ರಿಯೆ ಗಳನ್ನೂ ದಾನಗಳನ್ನೂ ಬಹಳವಾಗಿ ಮಾಡುತ್ತಿದ್ದಳು.
36 E havia em Jope uma discípula chamada Tabita, que traduzido se diz Dorcas. Esta estava cheia de boas obras e esmolas que fazia.
37 ಆ ಕಾಲದಲ್ಲಿ ಆಕೆಯು ರೋಗದಲ್ಲಿ ಬಿದ್ದು ಸತ್ತಳು. ಆಕೆಯ ಶವವನ್ನು ತೊಳೆದು ಮೇಲಂತಸ್ತಿನಲ್ಲಿಟ್ಟರು.
37 E aconteceu naqueles dias que, enfermando ela, morreu; e, tendo-a lavado, a depositaram num quarto alto.
38 ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ ತಡಮಾಡದೆ ತಮ್ಮ ಬಳಿಗೆ ಬರಬೇಕೆಂದು ಬೇಡಿಕೊಂಡರು.
38 E, como Lida era perto de Jope, ouvindo os discípulos que Pedro estava ali, lhe mandaram dois homens, rogando-lhe que não se demorasse em vir ter com eles.
39 ಪೇತ್ರನು ಎದು ಅವರ ಜೊತೆಯಲ್ಲಿ ಹೋದನು. ಅವನು ಬಂದಾಗ ಅವರು ಅವನನ್ನು ಮೇಲಂತಸ್ತಿನ ಕೊಠಡಿಗೆ ಕರೆದು ಕೊಂಡುಹೋದರು. ಅಲ್ಲಿ ವಿಧವೆಯರೆಲ್ಲರೂ ಅಳುತ್ತಾ ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಮೇಲಂಗಿಗಳನ್ನೂ ಒಳಂಗಿಗಳನ್ನೂ ತೋರಿಸಿ
39 E, levantando-se Pedro, foi com eles; e quando chegou o levaram ao quarto alto, e todas as viúvas o rodearam, chorando e mostrando as túnicas e roupas que Dorcas fizera quando estava com elas.
40 ಪೇತ್ರನು ಅವರೆ ಲ್ಲರನ್ನು ಹೊರಕ್ಕೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥನೆ ಮಾಡಿ ಶವದ ಕಡೆಗೆ ತಿರುಗಿಕೊಂಡು--ತಬಿಥಾ, ಏಳು ಅಂದನು; ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕೂತುಕೊಂಡಳು.
40 Mas Pedro, fazendo sair a todos, pôs-se de joelhos e orou: e, voltando-se para o corpo, disse: Tabita, levanta-te. E ela abriu os olhos, e, vendo a Pedro, assentou-se.
41 ಅವನು ಆಕೆಯನ್ನು ಕೈಕೊಟ್ಟು ಎಬ್ಬಿಸಿ ಪರಿಶುದ್ಧರನ್ನೂ ವಿಧವೆಯರನ್ನೂ ಕರೆದು ಜೀವಿತಳಾದ ಆಕೆಯನ್ನು ಅವರಿಗೆ ಒಪ್ಪಿಸಿದನು.
41 E ele, dando-lhe a mão, a levantou e, chamando os santos e as viúvas, apresentou-lha viva.
42 ಈ ಸಂಗತಿಯೂ ಯೊಪ್ಪದಲ್ಲೆಲ್ಲಾ ತಿಳಿದುಬಂದು ಅನೇಕರು ಕರ್ತನ ಮೇಲೆ ನಂಬಿಕೆ ಇಟ್ಟರು.
42 E foi isto notório por toda a Jope, e muitos creram no Senhor.
43 ಆಮೇಲೆ ಪೇತ್ರನು ಯೊಪ್ಪದಲ್ಲಿ ಚರ್ಮಕಾರನಾದ ಸೀಮೋನನೆಂಬವನ ಬಳಿಯಲ್ಲಿ ಬಹಳ ದಿವಸಗಳ ವರೆಗೂ ಇದ್ದನು.
43 E ficou muitos dias em Jope, com um certo Simão curtidor.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Atos 9, comparar traduções ou montar um estudo — tudo direto pelo WhatsApp.