Daniel 11
Kannada Bible (GL_KANNADA) vs ARA
ARA Almeida Revista e Atualizada 1993
1 ನಾನು ಸಹ ಮೇದ್ಯನಾದ ದಾರ್ಯಾವೆಷನ ಮೊದಲನೆಯ ವರುಷದಲ್ಲಿ ಅವ ನನ್ನು ಸ್ಥಿರಪಡಿಸುವದಕ್ಕೂ ಬಲಪಡಿಸುವದಕ್ಕೂ ನಿಂತಿ ದ್ದೇನೆ.
1 Mas eu, no primeiro ano de Dario, o medo, me levantei para o fortalecer e animar.
2 ನಾನು ಈಗ ನಿನಗೆ ಸತ್ಯವನ್ನು ತಿಳಿಸುತ್ತೇನೆ; ಇಗೋ, ಪಾರಸಿಯರಲ್ಲಿ ಇನ್ನು ಮೂರು ಅರಸರು ನಿಲ್ಲುವರು; ನಾಲ್ಕನೆಯವನು ಅವರೆಲ್ಲರಿಗಿಂತಲೂ ಬಹಳ ಐಶ್ವರ್ಯವಂತನಾಗಿರುವನು; ಅವನು ತನ್ನ ಐಶ್ವರ್ಯದಿಂದಾಗುವ ಸಾಮರ್ಥ್ಯದಿಂದ ಗ್ರೀಕ್ ರಾಜ್ಯಕ್ಕೆ ವಿರೋಧವಾಗಿ ಎಲ್ಲರನ್ನೂ ಹುರಿದುಂಬಿಸು ವನು.
2 Agora, eu te declararei a verdade: eis que ainda três reis se levantarão na Pérsia, e o quarto será cumulado de grandes riquezas mais do que todos; e, tornado forte por suas riquezas, empregará tudo contra o reino da Grécia.
3 ಆಗ, ಬಲವುಳ್ಳ ಒಬ್ಬ ಅರಸನು ಎದ್ದು ಮಹಾಅಧಿಕಾರದಿಂದ ಆಳಿ ತನ್ನ ಚಿತ್ತದ ಪ್ರಕಾರ ಮಾಡುವನು.
3 Depois, se levantará um rei poderoso, que reinará com grande domínio e fará o que lhe aprouver.
4 ಅವನು ತಲೆ ಎತ್ತಿದ ಮೇಲೆ ಅವನ ರಾಜ್ಯವು ಮುರಿಯಲ್ಪಟ್ಟು ಆಕಾಶದ ನಾಲ್ಕು ದಿಕ್ಕುಗಳ ಕಡೆಗೆ ವಿಭಾಗಿಸಲ್ಪಡುವದು; ಅವನ ಸಂತತಿಗಾಗಿ ಅಲ್ಲ, ಅಥವಾ ಅವನು ಆಳಿದ ಅಧಿಕಾರದ ಹಾಗಲ್ಲ ಅವನ ರಾಜ್ಯವು ಕೀಳಲ್ಪಟ್ಟು ಅವರಿಗಲ್ಲ, ಮತ್ತೊಬ್ಬರಿಗೆ ಹಂಚಲ್ಪಡುವದು.
4 Mas, no auge, o seu reino será quebrado e repartido para os quatro ventos do céu; mas não para a sua posteridade, nem tampouco segundo o poder com que reinou, porque o seu reino será arrancado e passará a outros fora de seus descendentes.
5 ದಕ್ಷಿಣದ ಅರಸನು ಬಲಿಷ್ಠನಾಗಿ ರುವನು. ಆದರೆ ಅವನ ಪ್ರಧಾನರಲ್ಲಿ ಒಬ್ಬನು ಇವನಿ ಗಿಂತ ಬಲಿಷ್ಠನಾಗಿದ್ದು ಅವನ ಆಳ್ವಿಕೆಯು ಮಹಾ ಆಳ್ವಿಕೆಯಾಗುವದು.
5 O rei do Sul será forte, como também um de seus príncipes; este será mais forte do que ele, e reinará, e será grande o seu domínio.
6 ವರುಷಗಳ ಅಂತ್ಯದಲ್ಲಿ ಅವರು ಒಬ್ಬರಿಗೊಬ್ಬರು ಒಂದಾಗುವರು; ಹೇಗಂದರೆ ದಕ್ಷಿಣದ ಅರಸನ ಮಗಳು ಉತ್ತರದ ಅರಸನ ಬಳಿಗೆ ಬಂದು ಒಪ್ಪಂದ ಮಾಡಿಕೊಳ್ಳುವಳು; ಆದರೆ ಅವಳು ಭುಜ ಬಲವನ್ನು ಉಳಿಸಿಕೊಳ್ಳುವದಿಲ್ಲ; ಅವನೂ ಅವನ ತೋಳುಗಳೂ ನಿಲ್ಲುವದಿಲ್ಲ; ಅವಳೂ ಅವಳನ್ನು ಕರೆ ತಂದವರೂ ಅವಳನ್ನು ಪಡೆದವನೂ ಆ ಕಾಲದಲ್ಲಿ ಅವಳನ್ನು ಬಲಪಡಿಸಿದವನೂ ಉಳಿಯುವದಿಲ್ಲ.
6 Mas, ao cabo de anos, eles se aliarão um com o outro; a filha do rei do Sul casará com o rei do Norte, para estabelecer a concórdia; ela, porém, não conservará a força do seu braço, e ele não permanecerá, nem o seu braço, porque ela será entregue, e bem assim os que a trouxeram, e seu pai, e o que a tomou por sua naqueles tempos.
7 ಆದರೆ ಅವಳ ಬೇರುಗಳ ಚಿಗುರಿನಿಂದ ಒಬ್ಬನು ಎದ್ದು ಆ ಸ್ಥಾನದಲ್ಲಿ ನಿಂತು ಸೈನ್ಯದೊಂದಿಗೆ ಬಂದು ಉತ್ತರದ ಅರಸನ ಕೋಟೆಯೊಳಗೆ ನುಗ್ಗಿ ಅವರನ್ನು ವಿರೋಧಿಸಿ ಪ್ರಬಲವಾಗುವನು.
7 Mas, de um renovo da linhagem dela, um se levantará em seu lugar, e avançará contra o exército do rei do Norte, e entrará na sua fortaleza, e agirá contra eles, e prevalecerá.
8 ಅವರ ದೇವರು ಗಳನ್ನೂ ಅವರ ಪ್ರಧಾನರನ್ನೂ ಬೆಳ್ಳಿಬಂಗಾರಗಳ ಪಾತ್ರೆಗಳನ್ನೂ ಸೂರೆಮಾಡಿ ಐಗುಪ್ತದೇಶಕ್ಕೆ ಬಂದು ಉತ್ತರದ ಅರಸನಿಗಿಂತ ಹೆಚ್ಚು ವರುಷಗಳು ಆಳುವನು.
8 Também aos seus deuses com a multidão das suas imagens fundidas, com os seus objetos preciosos de prata e ouro levará como despojo para o Egito; por alguns anos, ele deixará em paz o rei do Norte.
9 ಹೀಗೆ ದಕ್ಷಿಣದ ಅರಸನು ಅವನ ರಾಜ್ಯಕ್ಕೆ ಬಂದು ಮತ್ತೆ ಸ್ವಂತ ದೇಶಕ್ಕೆ ಹಿಂತಿರುಗಿ ಹೋಗುವನು.
9 Mas, depois, este avançará contra o reino do rei do Sul e tornará para a sua terra.
10 ಆಮೇಲೆ ಅವನ ಮಕ್ಕಳು ಸನ್ನದ್ಧರಾಗಿ ದೊಡ್ಡ ಸೈನ್ಯಗಳ ಸಮೂಹವನ್ನು ಕೂಡಿಸುವರು; ಅವರಲ್ಲಿ ಒಬ್ಬನು ನಿಶ್ಚಯವಾಗಿ ಬಂದು ಅದರಲ್ಲಿ ಪ್ರಳಯದಂತೆ ಹಾದುಹೋಗುವನು. ಅವನು ಮತ್ತೆ ಸನ್ನದ್ಧನಾಗಿ ಕೋಟೆಯನ್ನು ಮುತ್ತುವನು.
10 Os seus filhos farão guerra e reunirão numerosas forças; um deles virá apressadamente, arrasará tudo e passará adiante; e, voltando à guerra, a levará até à fortaleza do rei do Sul.
11 ಆಗ ದಕ್ಷಿಣದ ಅರಸನು ಕೋಪಿಸಿಕೊಂಡು ಹೊರಟು ಅವನ ಸಂಗಡ ಅಂದರೆ ಉತ್ತರದ ಅರಸನ ಸಂಗಡ ಯುದ್ಧಮಾಡುವನು; ಅವನು ಮಹಾ ಸೈನ್ಯವನ್ನು ನಿಲ್ಲಿಸುವನು; ಆದರೆ ಆ ಮಹಾ ಸಮೂಹವು ಇವನ ಕೈಗೆ ಕೊಡಲ್ಪಡುವದು.
11 Então, este se exasperará, sairá e pelejará contra ele, contra o rei do Norte; este porá em campo grande multidão, mas a sua multidão será entregue nas mãos daquele.
12 ಆ ಸಮೂಹವನ್ನು ಅವನು ತೆಗೆದು ಹಾಕಿದ ಮೇಲೆ ಅವನ ಹೃದಯವು ಹೆಚ್ಚಳಪಡುವದು; ಹೌದು, ಸಹಸ್ರಾರು ಸೈನಿಕರನ್ನು ಬೀಳಿಸಿದ್ದರೂ ಪ್ರಬಲವಾಗ ಲಾರನು.
12 A multidão será levada, e o coração dele se exaltará; ele derribará miríades, porém não prevalecerá.
13 ಉತ್ತರದ ಅರಸನು ಮತ್ತೆ ತಿರುಗಿಕೊಂಡು ಮೊದಲನೇ ಸಾರಿಗಿಂತಲೂ ದೊಡ್ಡ ಸಮೂಹವನ್ನು ನಿಲ್ಲಿಸಿ ಕೆಲವು ವರುಷಗಳಾದ ಮೇಲೆ ದೊಡ್ಡ ಸೈನ್ಯದ ಸಂಗಡವೂ ಬಹಳ ಸಂಪತ್ತಿನ ಸಂಗಡವೂ ನಿಶ್ಚಯವಾಗಿ ಬರುವನು.
13 Porque o rei do Norte tornará, e porá em campo multidão maior do que a primeira, e, ao cabo de tempos, isto é, de anos, virá à pressa com grande exército e abundantes provisões.
14 ಅದೇ ಕಾಲದಲ್ಲಿ ದಕ್ಷಿಣದ ಅರಸನಿಗೆ ವಿರೋಧವಾಗಿ ಅನೇಕರು ಎದುರು ನಿಲ್ಲುವರು; ಅಲ್ಲದೆ ನಿನ್ನ ಜನರಲ್ಲಿ ದರೋಡೆಕೋರರು ಆ ದರ್ಶನವನ್ನು ಸ್ಥಾಪಿಸಬೇಕೆಂದು ತಮ್ಮನ್ನು ತಾವು ಹೆಚ್ಚಿಸಿಕೊಳ್ಳುವರು; ಆದರೆ ಅವರು ಬಿದ್ದು ಹೋಗುವರು.
14 Naqueles tempos, se levantarão muitos contra o rei do Sul; também os dados à violência dentre o teu povo se levantarão para cumprirem a profecia, mas cairão.
15 ಆದರೆ ಉತ್ತರದ ಅರಸನು ಬಂದು ಮುತ್ತಿಗೆ ಹಾಕಿ ದಿಬ್ಬವನ್ನು ಕೆಡವಿ ಕೋಟೆಯುಳ್ಳ ಪಟ್ಟಣಗಳನ್ನು ವಶಪಡಿಸಿಕೊಳ್ಳು ವನು; ದಕ್ಷಿಣದ ಭುಜಬಲವಾದರೂ ಅವನು ಆದು ಕೊಂಡ ಜನರಾದರೂ ನಿಲ್ಲುವದಕ್ಕೆ ಬಲವಿರುವದಿಲ್ಲ.
15 O rei do Norte virá, levantará baluartes e tomará cidades fortificadas; os braços do Sul não poderão resistir, nem o seu povo escolhido, pois não haverá força para resistir.
16 ಆದರೆ ಅವನಿಗೆ ಎದುರಾಗಿ ಬರುವವನು ತನ್ನ ಇಷ್ಟದ ಪ್ರಕಾರ ಮಾಡುವನು; ಯಾರೂ ಅವನ ಮುಂದೆ ನಿಲ್ಲಲಾರರು; ಅವನು ರಮ್ಯವಾದ ದೇಶದಲ್ಲಿ ನಿಲ್ಲುವನು. ಅದು ಅವನ ಕೈಯಿಂದ ನಾಶವಾಗುವದು.
16 O que, pois, vier contra ele fará o que bem quiser, e ninguém poderá resistir a ele; estará na terra gloriosa, e tudo estará em suas mãos.
17 ಅವನು ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು ಅವನನ್ನು ಎದುರುಗೊಳ್ಳುವನು. ಪ್ರಮಾಣಿ ಕರು ಅವನೊಂದಿಗಿರುವರು; ಹೀಗೆ ಅವನು ಮಾಡು ವನು. ಮತ್ತು ಹೆಣ್ಣು ಮಗಳನ್ನು ಕೆಡಿಸುವದಕ್ಕೆ ಅವನಿಗೆ ಕೊಡುವನು. ಆದರೆ ಅವಳು ಅವನ ಕಡೆಗೆ ನಿಲ್ಲುವ ದಿಲ್ಲ, ಅವನಿಗಾಗಿ ಇರುವದಿಲ್ಲ.
17 Resolverá vir com a força de todo o seu reino, e entrará em acordo com ele, e lhe dará uma jovem em casamento, para destruir o seu reino; isto, porém, não vingará, nem será para a sua vantagem.
18 ಇದಾದ ಮೇಲೆ ಅವನು ತನ್ನ ಮುಖವನ್ನು ದ್ವೀಪಗಳ ಕಡೆಗೆ ತಿರುಗಿಸಿ ಆನೇಕರನ್ನು ವಶಪಡಿಸಿಕೊಳ್ಳುವನು; ಆದರೆ ಒಬ್ಬ ಅಧಿಪತಿಯು ತನಗಾಗಿ ಅವನ ನಿಂದೆಯನ್ನು ಅಡಗಿಸಿ ಬಿಡುವನು; ಆ ನಿಂದೆಯನ್ನು ತನ್ನ ಮೇಲೆ ಹಾಕಿಕೊಳ್ಳದೆ ಅವನ ಮೇಲೆ ತಿರುಗಿಸಿಬಿಡುವನು.
18 Depois, se voltará para as terras do mar e tomará muitas; mas um príncipe fará cessar-lhe o opróbrio e ainda fará recair este opróbrio sobre aquele.
19 ಆಗ ಅವನು ತನ್ನ ಸ್ವದೇಶದ ಕೋಟೆಗೆ ಮುಖವನ್ನು ತಿರುಗಿಸುವನು; ಆದರೆ ಅವನು ಎಡವಿಬಿದ್ದು ಕಾಣದೆ ಹೋಗುವನು.
19 Então, voltará para as fortalezas da sua própria terra; mas tropeçará, e cairá, e não será achado.
20 ಆಗ ಅವನಿಗೆ ಬದಲಾಗಿ ರಮ್ಯವಾದ ರಾಜ್ಯದಲ್ಲಿ ಗುತ್ತಿಗೆಯನ್ನು ಹೆಚ್ಚಿಸುವನು, ತನ್ನ ಸ್ಥಾನದಲ್ಲಿ ನಿಲ್ಲು ವನು ಮತ್ತು ಅವನು ಕೆಲವು ದಿನಗಳೊಳಗೆ ನಾಶ ವಾಗುವನು; ಆದರೆ ಕೋಪದ ಪೆಟ್ಟಿನಿಂದಲ್ಲ, ಯುದ್ಧ ದಿಂದಲೂ ಅಲ್ಲ.
20 Levantar-se-á, depois, em lugar dele, um que fará passar um exator pela terra mais gloriosa do seu reino; mas, em poucos dias, será destruído, e isto sem ira nem batalha.
21 ಅವನ ಸ್ಥಾನದಲ್ಲಿ ಒಬ್ಬ ನೀಚನು ನಿಲ್ಲುವನು; ಅವನಿಗೆ ರಾಜ್ಯದ ಮರ್ಯಾದೆಯನ್ನು ಕೊಡುವದಿಲ್ಲ, ಆದರೆ ಅವನು ಸಮಾಧಾನವಾಗಿ ನಯನುಡಿಗಳಿಂದ ರಾಜ್ಯವನ್ನು ಪಡಕೊಳ್ಳುವನು.
21 Depois, se levantará em seu lugar um homem vil, ao qual não tinham dado a dignidade real; mas ele virá caladamente e tomará o reino, com intrigas.
22 ಪ್ರವಾಹದಂತಿರುವ ಆ ವ್ಯೂಹಗಳೂ ಒಡಂಬಡಿಕೆಯ ಪ್ರಧಾನನೂ ಅವನ ರಭಸಕ್ಕೆ ಸಿಕ್ಕಿ ಒಡೆದುಕೊಂಡು ಹೋಗಿ ಮುರಿದು ಹೋಗುವರು.
22 As forças inundantes serão arrasadas de diante dele; serão quebrantadas, como também o príncipe da aliança.
23 ಅವನ ಸಂಗಡ ಸಮಾಧಾನ ಮಾಡಿ ಕೊಂಡ ಮೇಲೆ ಕಪಟವಾಗಿ ನಡೆಯುವನು. ಕೊಂಚ ಜನರ ಸಹಾಯದಿಂದ ಏಳಿಗೆಯಾಗಿ ಬಲಗೊಳ್ಳುವನು.
23 Apesar da aliança com ele, usará de engano; subirá e se tornará forte com pouca gente.
24 ನೆಮ್ಮದಿಯಿಂದ ಸಂಸ್ಥಾನದ ಫಲವತ್ತಾದ ಪ್ರದೇಶ ಗಳಲ್ಲಿ ನುಗ್ಗಿ ತಂದೆ ತಾತಂದಿರು ಮಾಡದ ಕಾರ್ಯ ಗಳನ್ನು ಮಾಡುವನು; ಸೂರೆ, ಸುಲಿಗೆ, ಕೊಳ್ಳೆಹೊಡೆ ದವುಗಳನ್ನು ಅವರಲ್ಲಿ ಚೆಲ್ಲಿಬಿಡುವನು. ಹೌದು, ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕ್ಲುಪ್ತ ಕಾಲದ ತನಕ ಕಲ್ಪಿಸುತ್ತಿರುವನು.
24 Virá também caladamente aos lugares mais férteis da província e fará o que nunca fizeram seus pais, nem os pais de seus pais: repartirá entre eles a presa, os despojos e os bens; e maquinará os seus projetos contra as fortalezas, mas por certo tempo.
25 ಅವನು ದಕ್ಷಿಣದ ಅರಸನಿಗೆ ವಿರೋಧವಾಗಿ ತನ್ನ ಶಕ್ತಿಯಿಂದಲೂ ಧೈರ್ಯದಿಂದಲೂ ದೊಡ್ಡ ಸೈನ್ಯದ ಸಂಗಡ ದಂಡೆತ್ತಿ ಬರುವನು; ದಕ್ಷಿಣದ ಅರಸನೂ ಅಧಿಕ ಬಲವುಳ್ಳ ದೊಡ್ಡ ಸೈನ್ಯದ ಸಂಗಡ ಯುದ್ಧಕ್ಕೆ ಸನ್ನದ್ಧನಾಗುವನು. ಆದರೆ ನಿಲ್ಲಲಾರದೆ ಹೋಗುವನು. ಯಾಕಂದರೆ ಅವನಿಗೆ ವಿರೋಧವಾಗಿ ಕುಯುಕ್ತಿಗಳನ್ನು ಕಲ್ಪಿಸುವರು.
25 Suscitará a sua força e o seu ânimo contra o rei do Sul, à frente de grande exército; o rei do Sul sairá à batalha com grande e mui poderoso exército, mas não prevalecerá, porque maquinarão projetos contra ele.
26 ಹೌದು, ಅವನ ರಾಜಭೋಜನದಲ್ಲಿ ಅರ್ಧಭಾಗ ವನ್ನು ತಿಂದವರೇ ಅವನನ್ನು ನಾಶಮಾಡುವರು; ಅವನ ಸೈನ್ಯವು ತುಂಬಿ ತುಳುಕುವದು ಮತ್ತು ಅನೇಕರು ಹತವಾಗುವರು.
26 Os que comerem os seus manjares o destruirão, e o exército dele será arrasado, e muitos cairão traspassados.
27 ಈ ಇಬ್ಬರು ಅರಸರ ಹೃದಯ ಗಳನ್ನು ಕೇಡನ್ನು ಮಾಡುವಂತವುಗಳಾಗಿರುವವು; ಒಂದೇ ಮೇಜಿನಲ್ಲಿ ಕುಳಿತು ಸುಳ್ಳು ಹೇಳುವರು; ಆದರೆ ಅದು ಅನುಕೂಲವಾಗದು; ಅದು ಹೇಗಾದರೂ ನಿಯಮಿಸಲ್ಪಟ್ಟ ಕಾಲದಲ್ಲಿ ಅಂತ್ಯವಾಗುವದು.
27 Também estes dois reis se empenharão em fazer o mal e a uma só mesa falarão mentiras; porém isso não prosperará, porque o fim virá no tempo determinado.
28 ಆಗ ಅವನು ಮಹಾ ಐಶ್ವರ್ಯದೊಂದಿಗೆ ಸ್ವದೇಶಕ್ಕೆ ಹಿಂತಿರುಗವನು; ಅವನ ಹೃದಯವು ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿರುವದು; ಅವನು ಹೀಗೆ ಕಾರ್ಯ ಸಾಧಿಸಿ ಸ್ವಂತ ದೇಶಕ್ಕೆ ಹಿಂತಿರುಗುವನು.
28 Então, o homem vil tornará para a sua terra com grande riqueza, e o seu coração será contra a santa aliança; ele fará o que lhe aprouver e tornará para a sua terra.
29 ನಿಯಮಿತ ಕಾಲದಲ್ಲಿಯೇ ಅವನು ಹಿಂತಿರುಗಿ ದಕ್ಷಿಣಕ್ಕೆ ಬರುವನು; ಆದರೆ ಮೊದಲು ಆದಂತೆ ಎರಡನೆಯ ಸಾರಿ ಆಗುವದಿಲ್ಲ.
29 No tempo determinado, tornará a avançar contra o Sul; mas não será nesta última vez como foi na primeira,
30 ಕಿತ್ತೀಮಿನ ಹಡಗು ಗಳು ಅವನಿಗೆ ವಿರೋಧವಾಗಿ ಬರುವವು. ಆದದರಿಂದ ಅವನು ಎದೆಗುಂದಿ ಪರಿಶುದ್ಧ ಒಡಂಬಡಿಕೆಗೆ ವಿರೋಧ ವಾಗಿ ಅವನು ಕೋಪಿಸಿ ಹೀಗೆ ಮಾಡುವನು. ಹಿಂತಿರುಗಿ ಸೇರಿ ಪರಿಶುದ್ಧ ಒಡಂಬಡಿಕೆಯನ್ನು ತೊರೆದವನ ಸಂಗಡ ಜ್ಞಾನಿಯಾಗುವನು.
30 porque virão contra ele navios de Quitim, que lhe causarão tristeza; voltará, e se indignará contra a santa aliança, e fará o que lhe aprouver; e, tendo voltado, atenderá aos que tiverem desamparado a santa aliança.
31 ಅವನು ಕೂಡಿಸುವ ಸೈನ್ಯವು ಆಶ್ರಯ ದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ, ನಿತ್ಯ ಯಜ್ಞವನ್ನು ನೀಗಿಸಿ, ಹಾಳು ಮಾಡುವ ಅಸಹ್ಯವಾದವುಗಳನ್ನು ಪ್ರತಿಷ್ಠಿಸುವದು.
31 Dele sairão forças que profanarão o santuário, a fortaleza nossa, e tirarão o sacrifício diário, estabelecendo a abominação desoladora.
32 ಒಡಂಬಡಿಕೆಗೆ ವಿರೋಧವಾಗಿ ಕೆಟ್ಟವರಾಗಿ ನಡೆ ಯುವವರನ್ನು ವ್ಯರ್ಥವಾದ ಮಾತುಗಳಿಂದ ಕೆಡಿ ಸುವನು; ಆದರೆ ತಮ್ಮ ದೇವರನ್ನು ಅರಿಯುವ ಜನರು ದೃಢಚಿತ್ತರಾಗಿ ಕೃತಾರ್ಥರಾಗುವರು.
32 Aos violadores da aliança, ele, com lisonjas, perverterá, mas o povo que conhece ao seu Deus se tornará forte e ativo.
33 ಜನರಲ್ಲಿ ಬುದ್ಧಿವಂತರಾದವರು ಅನೇಕರಿಗೆ ಬೋಧಿಸುವರು, ಆದಾಗ್ಯೂ ಕತ್ತಿಯಿಂದಲೂ ಬೆಂಕಿಯಿಂದಲೂ ಸೆರೆ ಯಿಂದಲೂ ಕೊಳ್ಳೆಯಿಂದಲೂ ಅನೇಕ ದಿನಗಳು ಸಿಕ್ಕಿಬೀಳುವರು.
33 Os sábios entre o povo ensinarão a muitos; todavia, cairão pela espada e pelo fogo, pelo cativeiro e pelo roubo, por algum tempo.
34 ಅವರು ಬೀಳುವಾಗ ಅವರಿಗೆ ಸ್ವಲ್ಪ ಸಹಾಯ ದೊರೆಯುವದು; ಆದರೆ ಅನೇಕರು ವಂಚನೆಯ ನುಡಿಗಳಿಂದ ಅವರನ್ನು ಅಂಟಿಕೊಳ್ಳು ವರು.
34 Ao caírem eles, serão ajudados com pequeno socorro; mas muitos se ajuntarão a eles com lisonjas.
35 ಇದಲ್ಲದೆ ಅಂತ್ಯಕಾಲದ ವರೆಗೆ ಅವರನ್ನು ಶೋಧಿಸುವದಕ್ಕೂ ಶುದ್ಧಮಾಡುವದಕ್ಕೂ ಶುಭ್ರ ಪಡಿಸುವದಕ್ಕೂ ವಿವೇಕಿಗಳಲ್ಲಿ ಕೆಲವರು ಬೀಳುವರು; ಇದು (ಅಂತ್ಯವು) ನಿಯಮಿತ ಕಾಲಕ್ಕೆ ಇರುವದು;
35 Alguns dos sábios cairão para serem provados, purificados e embranquecidos, até ao tempo do fim, porque se dará ainda no tempo determinado.
36 ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು; ತನ್ನನ್ನು ತಾನೇ ಹೆಚ್ಚಿಸಿಕೊಂಡು ತನ್ನನ್ನು ಎಲ್ಲಾ ದೇವರುಗಳಿಗೂ ದೊಡ್ಡವನನ್ನಾಗಿ ಮಾಡಿ ಕೊಂಡು ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ ರೋಷವು ತೀರುವ ವರೆಗೂ ವೃದ್ಧಿಯಾಗಿರುವನು; ಯಾಕಂದರೆ ನಿಶ್ಚಯಿ ಸಲ್ಪಟ್ಟದ್ದು ಮಾಡಲ್ಪಡಲೇ ಬೇಕಾಗುವದು.
36 Este rei fará segundo a sua vontade, e se levantará, e se engrandecerá sobre todo deus; contra o Deus dos deuses falará coisas incríveis e será próspero, até que se cumpra a indignação; porque aquilo que está determinado será feito.
37 ಅವನು ತನ್ನ ಪಿತೃಗಳ ದೇವರನ್ನಾಗಲೀ ಸ್ತ್ರೀಯರ ಅಪೇಕ್ಷೆ ಯನ್ನಾಗಲೀ ಲಕ್ಷಿಸುವದಿಲ್ಲ, ಯಾವ ದೇವರನ್ನೂ ಲಕ್ಷಿಸುವದಿಲ್ಲ; ಅವನು ಎಲ್ಲವುಗಳಿಗಿಂತ ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.
37 Não terá respeito aos deuses de seus pais, nem ao desejo de mulheres, nem a qualquer deus, porque sobre tudo se engrandecerá.
38 ಆದರೆ ಅವನು ತನ್ನ ಸ್ಥಾನದಲ್ಲಿ ದೇವರ ಶಕ್ತಿಗಳನ್ನು ಮತ್ತು ತನ್ನ ಪಿತೃಗಳು ಅರಿಯದ ದೇವರುಗಳನ್ನು ಗೌರವಿಸುವನು; ಬಂಗಾರ ದಿಂದಲೂ ಬೆಳ್ಳಿಯಿಂದಲೂ ಅಮೂಲ್ಯ ಕಲ್ಲುಗಳಿಂ ದಲೂ ರಮ್ಯವಾದವುಗಳಿಂದಲೂ ಗೌರವಿಸುವನು.
38 Mas, em lugar dos deuses, honrará o deus das fortalezas; a um deus que seus pais não conheceram, honrará com ouro, com prata, com pedras preciosas e coisas agradáveis.
39 ಹೀಗೆ ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು. ಯಾರನ್ನು ಕಟಾಕ್ಷಿಸು ವನೋ ಅವರಿಗೆ ಘನತೆ ಹೆಚ್ಚುವದು. ಬಹುಜನರ ಮೇಲೆ ಆಳಿಕೆಯನ್ನು ಕೊಡುವನು; ದೇಶವನ್ನು ಲಾಭಕ್ಕೆ ಹಂಚುವನು.
39 Com o auxílio de um deus estranho, agirá contra as poderosas fortalezas, e aos que o reconhecerem, multiplicar-lhes-á a honra, e fá-los-á reinar sobre muitos, e lhes repartirá a terra por prêmio.
40 ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂ ದಿಗೂ ಸವಾರರೊಂದಿಗೂ ಅನೇಕ ಹಡಗುಗಳೊಂ ದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದು ಹೋಗುವನು.
40 No tempo do fim, o rei do Sul lutará com ele, e o rei do Norte arremeterá contra ele com carros, cavaleiros e com muitos navios, e entrará nas suas terras, e as inundará, e passará.
41 ಇದಲ್ಲದೆ ಅವನು ರಮ್ಯವಾದ ದೇಶದೊಳಕ್ಕೂ ನುಗ್ಗುವನು; ಅನೇಕ ದೇಶಗಳು ಕೆಡವಲ್ಪಡುವವು; ಆದರೆ ಎದೋಮು, ಮೋವಾಬು ಅಮ್ಮೋನನ ಮಕ್ಕಳಲ್ಲಿ ಮುಖ್ಯಸ್ಥರು ಆತನ ಕೈಯಿಂದ ತಪ್ಪಿಸಿಕೊಳ್ಳುವರು.
41 Entrará também na terra gloriosa, e muitos sucumbirão, mas do seu poder escaparão estes: Edom, e Moabe, e as primícias dos filhos de Amom.
42 ಅವನು ದೇಶಗಳ ಮೇಲೂ ತನ್ನ ಕೈಯನ್ನು ಚಾಚುವನು; ಐಗುಪ್ತ ದೇಶವು ತಪ್ಪಿಸಿ ಕೊಳ್ಳದು.
42 Estenderá a mão também contra as terras, e a terra do Egito não escapará.
43 ಬಂಗಾರ ಬೆಳ್ಳಿ ಬೊಕ್ಕಸಗಳ ಮೇಲೆಯೂ ಐಗುಪ್ತದ ಎಲ್ಲಾ ಅಮೂಲ್ಯವಸ್ತುಗಳ ಮೇಲೆಯೂ ಅವನಿಗೆ ಅಧಿಕಾರವಿರುವದು. ಲೂಬ್ಯರೂ ಐಥೋ ಪ್ಯರೂ ಅವನನ್ನು ಹಿಂಬಾಲಿಸುವರು.
43 Apoderar-se-á dos tesouros de ouro e de prata e de todas as coisas preciosas do Egito; os líbios e os etíopes o seguirão.
44 ಮೂಡಣ ದಿಂದಲೂ ಉತ್ತರದಿಂದಲೂ ಬರುವ ಸುದ್ದಿಗಳು ಅವನನ್ನು ಹೆದರಿಸುವವು. ಆದದರಿಂದ ಅವನು ಮಹಾ ಉಗ್ರನಾಗಿ ಅನೇಕರನ್ನು ಸಂಹರಿಸುವದಕ್ಕೂ ನಿರ್ಮೂಲ ಮಾಡುವದಕ್ಕೂ ಹೊರಡುವನು.
44 Mas, pelos rumores do Oriente e do Norte, será perturbado e sairá com grande furor, para destruir e exterminar a muitos.
45 ಅವನು ತನ್ನ ಅರಮನೆಯ ಗುಡಾರಗಳನ್ನು ಸಮು ದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು; ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.
45 Armará as suas tendas palacianas entre os mares contra o glorioso monte santo; mas chegará ao seu fim, e não haverá quem o socorra.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Daniel 11, comparar traduções ou montar um estudo — tudo direto pelo WhatsApp.