Daniel 4

Kannada Bible (GL_KANNADA) vs BKJ

Sair da comparação
1 ಅರಸನಾದ ನೆಬೂಕದ್ನೆಚ್ಚರನು, ಭೂಲೋಕದಲ್ಲೆಲ್ಲಾ ವಾಸಮಾಡುವ ಎಲ್ಲಾ ಪ್ರಜೆಗಳಿಗೂ ಜನಾಂಗಗಳಿಗೂ ಭಾಷೆಯವರಿಗೂ--ನಿಮಗೆ ಶಾಂತಿಯು ಹೆಚ್ಚಾಗಲಿ.
1 O rei Nabucodonosor para todo povo, nações e línguas que habitam em toda a terra: Paz vos seja multiplicada.
2 ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕ ಕಾರ್ಯಗಳನ್ನೂ ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬದು ನನಗೆ ವಿಹಿತವಾಗಿ ತೋರಿ ಬಂದಿದೆ.
2 Eu achei por bem mostrar os sinais e maravilhas que o altíssimo Deus tem feito para comigo.
3 ಆತನ ಸೂಚಕ ಕಾರ್ಯಗಳು ಎಷ್ಟೋ ದೊಡ್ಡವುಗಳು! ಆತನ ಅದ್ಭುತ ಗಳು ಪರಾಕ್ರಮವಾದವುಗಳು, ಆತನ ರಾಜ್ಯವು ನಿತ್ಯವಾದ ರಾಜ್ಯವು, ಆತನ ಆಡಳಿತವು ತಲತಲಾಂತರ ವಾಗಿರುವಂತದ್ದು.
3 Quão grandes são os seus sinais! E quão poderosas são as suas maravilhas! O seu reino é um reino eterno, e o seu domínio é de geração a geração.
4 ನೆಬೂಕದ್ನೆಚ್ಚರನೆಂಬ ನಾನು ನನ್ನ ಮನೆಯಲ್ಲಿ ಕ್ಷೇಮವಾಗಿಯೂ ನನ್ನ ಅರಮನೆಯಲ್ಲಿ ಸುಖವಾ ಗಿಯೂ ಇರುವಾಗ;
4 Eu, Nabucodonosor, estava em repouso em minha casa, e prosperando em meu palácio.
5 ನನ್ನನ್ನು ಭಯಪಡಿಸುವಂತೆ ನಾನು ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಆದ ಯೋಚನೆಗಳು ನನ್ನ ಮನಸ್ಸಿನ ದರ್ಶನ ಗಳು ನನ್ನನ್ನು ಕಳವಳಪಡಿಸಿದವು.
5 Eu tive um sonho que me atemorizou, e os pensamentos sobre minha cama e as visões da minha cabeça me atribularam.
6 ಆದದರಿಂದ ನನ್ನ ಕನಸಿನ ಅರ್ಥವನ್ನು ನನಗೆ ತಿಳಿಸುವದಕ್ಕೋಸ್ಕರ ಬಾಬೆಲಿನ ಸಕಲ ಜ್ಞಾನಿಗಳನ್ನು ನನ್ನ ಮುಂದೆ ತರಬೇಕೆಂದು ಆಜ್ಞಾಪಿಸಿದೆನು.
6 Portanto, decretei que trouxessem diante de mim todos os homens sábios de Babilônia, para que me fizessem conhecer a interpretação do sonho.
7 ಆಗ ಮಂತ್ರಗಾರರು, ಜೋತಿಷ್ಯರು, ಕಸ್ದೀಯರು, ಶಕುನಗಾರರು ಒಳಗೆ ಬಂದರು; ನಾನು ಕನಸನ್ನು ಅವರಿಗೆ ತಿಳಿಸಿದೆನು; ಆದರೆ ಅವರು ಅದರ ಅರ್ಥವನ್ನು ನನಗೆ ತಿಳಿಸಲಿಲ್ಲ.
7 Então vieram os magos, os astrólogos, os caldeus e os adivinhos; e contei o sonho diante deles. Porém eles não me fizeram conhecer a sua interpretação.
8 ಕಡೆಯಲ್ಲಿ ನನ್ನ ದೇವರ ಹೆಸರಿನ ಹಾಗೆಯೂ ಬೇಲ್ತೆಶಚ್ಚರನೆಂಬ ಹೆಸರುಳ್ಳವನಾಗಿಯೂ ಪರಿಶುದ್ಧ ದೇವರ ಆತ್ಮವನ್ನು ಹೊಂದಿದವನಾಗಿಯೂ ಇರುವ ದಾನಿಯೇಲನು ನನ್ನ ಮುಂದೆ ಬಂದನು; ಅವನಿಗೆ ನಾನು ಕನಸನ್ನು ತಿಳಿಸಿ ಹೇಳಿದ್ದೇನಂದರೆ--
8 Porém, por fim, Daniel, cujo nome era Beltessazar, entrou diante de mim, de acordo com o nome do meu deus, e em quem está o espírito dos deuses santos; e perante ele eu contei o sonho, dizendo:
9 ಓ ಮಂತ್ರ ಗಾರರ ಯಜಮಾನನಾದ ಬೇಲ್ತೆಶಚ್ಚರನೇ, ನಿನ್ನಲ್ಲಿ ಪರಿಶುದ್ಧ ದೇವರ ಆತ್ಮವಿರುವದೆಂದೂ ಯಾವ ರಹ ಸ್ಯವೂ ನಿನ್ನನ್ನು ಕಳವಳಪಡಿಸದೆಂದೂ ನಾನು ಬಲ್ಲೆನು; ನಾನು ಕಂಡ ಕನಸಿನ ದರ್ಶನವನ್ನೂ ಅದರ ಅರ್ಥ ವನ್ನೂ ನೀನು ನನಗೆ ಹೇಳು.
9 Ó Beltessazar, mestre dos magos, porque eu sei que o espírito dos deuses santos está em ti, e nenhum segredo te atribula, conte-me as visões do sonho que eu tive e a sua interpretação.
10 ನನ್ನ ಹಾಸಿಗೆಯಲ್ಲಿ ಉಂಟಾದ ನನ್ನ ಮನಸ್ಸಿನ ದರ್ಶನಗಳು--ನಾನು ನೋಡಲಾಗಿ ಇಗೋ, ಭೂಮಧ್ಯದಲ್ಲಿ ಒಂದು ಬಹಳ ಎತ್ತರವಾದ ಮರವು ಇತ್ತು.
10 Assim foram as visões da minha cabeça em minha cama: eu olhei e observei uma árvore no meio da terra, e a sua altura era grande.
11 ಆ ಮರವು ಬೆಳೆದು ಬಲವಾಯಿತು; ಅದರ ಎತ್ತರವು ಆಕಾಶಕ್ಕೂ ಅದು ಭೂಲೋಕದ ಕಟ್ಟಕಡೆಯವರೆಗೂ ಕಾಣಿಸುತ್ತಿತ್ತು.
11 A árvore cresceu e ficou forte, e a sua altura alcançou o céu, e podia ser vista até nos confins de toda a terra;
12 ಅದರ ಎಲೆಗಳು ಅಂದವಾಗಿದ್ದವು, ಅದರ ಫಲವು ಬಹಳವಾಗಿತ್ತು; ಅದರಲ್ಲಿ ಎಲ್ಲರಿಗೂ ಆಹಾರವಿತ್ತು; ಬಯಲು ಮೃಗಗಳಿಗೆ ಅದರ ಕೆಳಗೆ ನೆರಳಿತ್ತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಿಸುತ್ತಿದ್ದವು, ಎಲ್ಲಾ ಜೀವಿಗಳಿಗೂ ಅದರಿಂದಲೇ ಆಹಾರ ಇರುತ್ತಿತ್ತು.
12 as suas folhas eram belas, e o seu fruto abundante, e nela havia alimento para todos; os animais do campo tinham sombra sob ela, e as aves do céu habitavam nos seus galhos; e toda a carne alimentava-se dela.
13 ನನ್ನ ಹಾಸಿಗೆಯ ಮೇಲೆ ನನ್ನ ಮನಸ್ಸಿನ ದರ್ಶನ ಗಳನ್ನು ನಾನು ನೋಡಲಾಗಿ; ಇಗೋ, ಒಬ್ಬ ಪಾಲಕನು ಮತ್ತು ಪರಿಶುದ್ಧನೊಬ್ಬನು ಪರಲೋಕದಿಂದ ಇಳಿದು ಬಂದನು.
13 Eu vi nas visões da minha cabeça sobre a minha cama, e eis que um vigia e um santo desceram do céu;
14 ಅವನು ಗಟ್ಟಿಯಾಗಿ ಕೂಗಿ--ಮರವನ್ನು ಕಡಿದು ಅದರ ಕೊಂಬೆಗಳನ್ನು ಕತ್ತರಿಸಿ ಅದರ ಎಲೆ ಗಳನ್ನು ಉದುರಿಸಿ ಅದರ ಫಲವನ್ನು ಚದರಿಸಿ ಮೃಗಗಳು ಅದರ ಕೆಳಗಿನಿಂದಲೂ ಪಕ್ಷಿಗಳು ಅದರ ಕೊಂಬೆ ಗಳಿಂದಲೂ ಹೋಗಿ ಬಿಡಲಿ.
14 ele clamou alto, e disse: Ponde a árvore abaixo e cortai os seus ramos, sacudi as suas folhas e espalhai o seu fruto; fujam os animais de debaixo dela, e as aves dos seus ramos;
15 ಆದಾಗ್ಯೂ ಅದರ ಬೇರಿನ ಮೋಟನ್ನು ಕಬ್ಬಿಣ, ಹಿತ್ತಾಳೆಗಳ ಕಟ್ಟುಳ್ಳದ್ದ ನ್ನಾಗಿ ಮಾಡಿ ಭೂಮಿಯಲ್ಲಿಯೂ ಬಯಲಿನ ಎಳೆಯ ಹುಲ್ಲಿನಲ್ಲಿಯೂ ಬಿಡಿರಿ; ಅದು ಆಕಾಶದ ಮಂಜಿನಿಂದ ತೇವವಾಗಲಿ; ಅದರ ಪಾಲು ಮೃಗಗಳ ಸಂಗಡ ಭೂಮಿಯ ಹುಲ್ಲಿನಲ್ಲಿರಲಿ.
15 porém deixai o toco das suas raízes na terra, e até com um grilhão de ferro e bronze na tenra grama do campo; e se umedeça com o orvalho do céu, e esteja a sua porção com os animais na grama da terra;
16 ಅವನ ಹೃದಯವು ಮನುಷ್ಯನ ಹೃದಯದಂತೆ ಇರದೆ ಬದಲಾಗಲಿ; ಮೃಗದ ಹೃದಯವು ಅವನಿಗೆ ಕೊಡಲ್ಪಡಲಿ; ಏಳು ಕಾಲಗಳು ಅವನನ್ನು ದಾಟಿಹೋಗಲಿ ಎಂದು ಹೇಳಿದನು.
16 mude-se o seu coração de homem, seja-lhe dado o coração de um animal, e sete tempos passem sobre ele.
17 ಈ ವಿಷಯವು ಪಾಲಕರ ಕಟ್ಟಡದಿಂದಲೂ ಈ ಸಂಗತಿಯು ಪರಿಶುದ್ಧರ ಮಾತಿನಿಂದಲೂ ಉಂಟಾಯಿತು; ಮಹೋ ನ್ನತನು ಮನುಷ್ಯರ ರಾಜ್ಯದಲ್ಲಿ ಆಳುತ್ತಾನೆಂದೂ ತನ್ನ ಮನಸ್ಸಿಗೆ ಸರಿಯಾದವರಿಗೆ ಅದನ್ನು ಕೊಡುತ್ತಾನೆಂದೂ ಮನುಷ್ಯರಲ್ಲಿ ನೀಚರಾದವರನ್ನು ಅದರ ಮೇಲೆ ನೇಮಿಸುತ್ತಾನೆಂದೂ ಜೀವಂತರಿಗೆ ತಿಳಿಯಬೇಕೆಂದೇ ಸಾರಿದನು.
17 Este assunto é pelo decreto dos vigias, e ordem pela palavra dos santos, para o propósito de que os viventes possam saber que o Altíssimo governa no reino dos homens, e o dá a quem ele escolher, e estabelece sobre ele o mais simples dos homens.
18 ಈ ಕನಸನ್ನು ನೆಬೂಕದ್ನೆಚ್ಚರನೆಂಬ ಅರಸನಾದ ನಾನು ಕಂಡಿದ್ದೇನೆ. ಈಗ ಬೆಲ್ತೆಶಚ್ಚರ ನೆಂಬ ನೀನು ಅದರ ಅರ್ಥವನ್ನು ಹೇಳು. ನನ್ನ ರಾಜ್ಯದಲ್ಲಿರುವ ಸಕಲ ಜ್ಞಾನಿಗಳು ಅದರ ಅರ್ಥವನ್ನು ನನಗೆ ಹೇಳಲು ಶಕ್ತರಾದವರಲ್ಲ. ಆದರೆ ನಿನ್ನಲ್ಲಿ ಪರಿ ಶುದ್ಧ ದೇವರುಗಳ ಆತ್ಮವು ಇರುವದರಿಂದ ನೀನು ಹೇಳಲು ಸಾಧ್ಯವಾಯಿತು.
18 Este sonho eu, rei Nabucodonosor vi. Agora tu, ó Beltessazar, declare a tua interpretação, porquanto nenhum de todos os homens sábios do meu reino é capaz de me fazer conhecer a sua interpretação; mas tu és capaz, pois o espírito dos deuses santos está em ti.
19 ಆಗ ಬೆಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ-- ಬೆಲ್ತೆಶಚ್ಚರನೇ, ಕನಸಾಗಲಿ ಅದರ ಅರ್ಥವಾಗಲಿ ನಿನ್ನನ್ನು ಕಳವಳಪಡಿಸದಿರಲಿ ಅಂದನು. ಆಗ ಬೆಲ್ತೆಶ ಚ್ಚರನು ಪ್ರತ್ಯುತ್ತರವಾಗಿ--ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ.
19 Então Daniel, cujo nome era Beltessazar, ficou espantado por uma hora, e os seus pensamentos o atribularam. O rei falou, e disse: Beltessazar, não deixa o sonho, nem a sua interpretação atribularem-te. Beltessazar respondeu e disse: Meu senhor, o sonho seja para aqueles que te odeiam, e a sua interpretação para os teus inimigos.
20 ನೀನು ಕಂಡ ಮರವು ಬೆಳೆದು ಬಲವಾ ದದ್ದೂ ಅದರ ಎತ್ತರವು ಆಕಾಶಕ್ಕೂ ಅದರ ದೃಷ್ಟಿಯು ಭೂಮಿಯ ಎಲ್ಲಾ ಕಡೆಯವರೆಗೂ ಇವೆ;
20 A árvore que tu viste, que cresceu e se fortaleceu, cuja altura alcançou o céu e cuja visão dava para toda a terra;
21 ಅದರ ಎಲೆಗಳು ಅಂದವಾಗಿದ್ದವು, ಫಲವು ಬಹಳವಾಗಿತ್ತು, ಅದರಲ್ಲಿ ಎಲ್ಲರಿಗೂ ಆಹಾರ ಇತ್ತು; ಅದರ ಕೆಳಗೆ ಬಯಲಿನ ಮೃಗಗಳು ವಾಸಮಾಡಿದ್ದವು; ಅದರ ಕೊಂಬೆಗಳಲ್ಲಿ ಆಕಾಶದ ಪಕ್ಷಿಗಳು ನಿವಾಸಮಾಡಿದ್ದವು.
21 cujas folhas eram belas, e o seu fruto abundante, e nela alimento para todos, sob a qual os animais do campo habitavam e sobre cujos ramos as aves do céu tinham a sua habitação;
22 ಓ ಅರಸನೇ, ಆ ಮರವು ನೀನೇ ಆಗಿರುವಿ, ನೀನು ಬೆಳೆದು ಬಲವಾಗಿರುವಿ; ಹೌದು, ನಿನ್ನ ಮಹತ್ತು ಬೆಳೆದು ಆಕಾಶಕ್ಕೂ ನಿನ್ನ ಅಧಿಕಾರವು ಭೂಮಿಯ ಅಂತ್ಯದ ವರೆಗೂ ಮುಟ್ಟುವದು.
22 és tu, ó rei, que cresceste e te tornaste forte; pois a tua grandeza cresceu e alcançou o céu, e o teu domínio até os confins da terra.
23 ಆಗ ಪಾಲಕನು ಮತ್ತು ಪರಿಶುದ್ಧನಾದ ಒಬ್ಬನು ಪರಲೋಕದಿಂದ ಇಳಿದು ಬಂದು--ಮರವನ್ನು ಕಡಿದು ನಾಶಮಾಡಿರಿ; ಆದರೆ ಅದರ ಬೇರಿನ ಮೋಟನ್ನು ಕಬ್ಬಿಣ ಮತ್ತು ಕಂಚುಗಳ ಕಟ್ಟುಳ್ಳದ್ದಾಗಿ ಭೂಮಿಯಲ್ಲಿಯೂ ಬಯಲಿನ ಎಳೇ ಹುಲ್ಲಿನಲ್ಲಿಯೂ ಬಿಡಿರಿ. ಅದು ಆಕಾಶದ ಮಂಜಿನಿಂದ ತೇವವಾಗಲಿ; ಏಳು ಕಾಲಗಳು ಕಳೆಯುವ ತನಕ ಅದರ ಪಾಲು ಕಾಡು ಮೃಗಗಳ ಸಹವಾಸದ ಗತಿಯಂತೆ ಬರಲಿ ಎಂದು ಸಾರುವದನ್ನು ಅರಸನಾದ ನೀನು ನೋಡಿದೆಯಲ್ಲಾ.
23 E quanto à visão do rei de um vigia e um santo descendo do céu e dizendo: Ponde a árvore abaixo e destruí-a, porém deixa o toco de suas raízes na terra com um grilhão de ferro e bronze na tenra grama do campo, e se umedeça com o orvalho do céu, e esteja a sua porção com os animais do campo, até sete tempos passarem sobre ele;
24 ಓ ಅರಸನೇ, ಇದರ ಅರ್ಥವು ಏನಂದರೆ, ನನ್ನ ಒಡೆಯನಾದ ಅರಸನ ಮೇಲೆ ಬಂದಂಥ ಮಹೋನ್ನತನ ನಿರ್ಣಯವು ಹೀಗಿದೆ.
24 esta é a interpretação, ó rei, e este é o decreto do Altíssimo, o qual veio sobre meu senhor, o rei;
25 ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿ ಬಿಡುವರು; ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು; ನಿನಗೆ ಎತ್ತುಗಳ ಸಂಗಡ ಹುಲ್ಲನ್ನು ಮೇಯಿಸುವರು. ಆಕಾಶದ ಮಂಜಿನಿಂದ ನಿನ್ನನ್ನು ತೇವ ಮಾಡುವರು. ಮಹೋನ್ನತನು ಮನುಷ್ಯರ ರಾಜ್ಯವನ್ನು ಆಳುವನೆಂದೂ ತನ್ನ ಮನಸ್ಸಿಗೆ ಸರಿಬಂದ ವರಿಗೆ ಅದನ್ನು ಕೊಡುತ್ತಾನೆಂದೂ ನೀನು ತಿಳಿಯುವ ವರೆಗೂ ಆ ಏಳು ಕಾಲಗಳು ಕಳೆದು ಹೋಗುವವು.
25 que tu serás tirado de entre os homens, e tua habitação será com os animais do campo, e eles te farão comer grama como bois, e eles te molharão com o orvalho do céu, e sete tempos passarão sobre ti, até que tu saibas que o Altíssimo governa no reino dos homens e o dá a quem ele quer.
26 ಆ ಮರದ ಬೇರಿನ ಮೋಟನ್ನು ಉಳಿಸಬೇಕೆಂದು ಅವರು ಆಜ್ಞೆ ಮಾಡಿದ್ದರಲ್ಲಿ ಅಂದರೆ ಪರಲೋಕವು ಆಳುತ್ತದೆಂದು ನೀನು ತಿಳಿದುಕೊಂಡ ಮೇಲೆ ನಿನ್ನ ರಾಜ್ಯವು ನಿನಗೆ ಸ್ಥಿರವಾಗುವದು.
26 E porquanto eles deram ordem para deixar o toco das raízes da árvore; teu reino estará certo para ti, depois de saberes que os céus governam.
27 ಆದದರಿಂದ ಓ ಅರಸನೇ, ನನ್ನ ಆಲೋಚನೆಯು ನಿನಗೆ ಸಮ್ಮತಿ ಯಾಗಿ ನಿನ್ನ ಪಾಪಗಳನ್ನು ನೀತಿಯಿಂದ ಅಳಿಸಿ ನಿನ್ನ ಅನ್ಯಾಯಗಳನ್ನು ಬಡವರಿಗೆ ದಯೆ ತೋರಿಸುವದ ರಿಂದ ಬಿಟ್ಟುಬಿಡು. ಒಂದು ವೇಳೆ ಇದರಿಂದ ನಿನ್ನ ನೆಮ್ಮದಿಯು ಹೆಚ್ಚಾಗಬಹುದು.
27 Portanto, ó rei, seja meu conselho aceitável a ti, e interrompe os teus pecados pela justiça e tuas iniquidades mostrando misericórdia ao pobre, se isto pode ser um alongamento de tua tranquilidade.
28 ಅರಸನಾದ ನೆಬೂಕದ್ನೆಚ್ಚರನಿಗೆ ಇದೆಲ್ಲವೂ ಸಂಭ ವಿಸಿತು.
28 Tudo veio sobre o rei Nabucodonosor.
29 ಹನ್ನೆರಡು ತಿಂಗಳಾದ ಮೇಲೆ ಅವನು ಬಾಬೆಲಿನ ರಾಜ್ಯದ ಅರಮನೆಯಲ್ಲಿ ತಿರುಗಾಡಿದನು.
29 Ao final de doze meses, passeando no palácio do reino de Babilônia,
30 ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು.
30 o rei falou, e disse: Não é esta a grande Babilônia, que eu construí para ser a casa do reino pela força do meu poder, e para a honra da minha majestade?
31 ಈ ಮಾತು ಅರಸನ ಬಾಯಿಯಲ್ಲಿ ಇರುವಾಗಲೇ ಪರಲೋಕದಿಂದ ಒಂದು ಶಬ್ದವು ಉಂಟಾಯಿತು; ಏನಂದರೆ--ಓ ಅರಸನಾದ ನೆಬೂಕದ್ನೆ ಚ್ಚರನೇ, ನಿನಗೆ ಹೇಳುವದೇನಂದರೆ, ನಿನ್ನ ರಾಜ್ಯವು ನಿನ್ನನ್ನು ಬಿಟ್ಟು ಹೋಯಿತು.
31 Enquanto a palavra estava na boca do rei, caiu uma voz do céu, dizendo: Ó rei Nabucodonosor, a ti se fala: O reino apartou-se de ti.
32 ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು, ನಿನಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸುವರು. ಮಹೋ ನ್ನತನು ಮನುಷ್ಯರ ರಾಜ್ಯವನ್ನಾಳುವನೆಂದೂ ತನ್ನ ಮನಸ್ಸಿಗೆ ಸರಿಬಂದವರಿಗೆ ಅದನ್ನು ಕೊಡುವೆನೆಂದೂ ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವವು.
32 E eles irão tirar-te de dentre os homens, e tua habitação será com os animais do campo. Eles te farão comer grama como bois, e sete tempos passarão sobre ti, até que tu saibas que o Altíssimo governa no reino dos homens, e o dá a quem ele quer.
33 ಅದೇ ಗಳಿಗೆಯಲ್ಲಿ ಈ ಸಂಗತಿಯು ನೆಬೂಕದ್ನೆಚ್ಚರನಲ್ಲಿ ನೆರವೇರಿತು. ಅವನು ಮನುಷ್ಯ ರಿಂದ ತಳ್ಳಲ್ಪಟ್ಟು ಎತ್ತುಗಳಂತೆ ಹುಲ್ಲು ಮೇಯುತ್ತಿದ್ದನು. ಕೊನೆಗೆ ಅವನ ಕೂದಲು ಹದ್ದಿನ ಗರಿಗಳಂತೆಯೂ ಅವನ ಉಗುರುಗಳು ಪಕ್ಷಿಗಳ ಉಗುರುಗಳ ಹಾಗೂ ಬೆಳೆಯುವ ವರೆಗೆ ಅವನ ಶರೀರವು ಆಕಾಶದ ಮಂಜಿ ನಿಂದ ತೇವವಾಯಿತು.
33 Na mesma hora a coisa cumpriu-se sobre Nabucodonosor, e ele foi levado dentre os homens, e comeu grama como bois, e o seu corpo foi molhado pelo orvalho do céu até os seus cabelos crescerem como penas de águias e as suas unhas como garras de pássaros.
34 ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು.
34 E ao final dos dias eu, Nabucodonosor, ergui os meus olhos para o céu, e o meu entendimento retornou para mim, e eu bendisse o Altíssimo, e louvei e honrei aquele que vive para sempre, cujo domínio é um domínio eterno, e o seu reino de geração a geração;
35 ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
35 e todos os habitantes da terra são considerados como nada, e ele faz conforme a sua vontade no exército do céu, e entre os habitantes da terra, e ninguém pode paralisar a sua mão ou dizer-lhe: O que fazes tu?
36 ಇದೇ ಸಮಯದಲ್ಲಿ ನನ್ನ ಬುದ್ದಿಯು ನನಗೆ ತಿರುಗಿ ಬಂತು. ನನ್ನ ರಾಜ್ಯದ ಮಹಿಮೆಗಾಗಿ ನನ್ನ ಘನವೂ ನನ್ನ ತೇಜಸ್ಸೂ ತಿರಿಗಿ ಬಂದವು; ನನ್ನ ಆಲೋಚನೆ ಗಾರರೂ ನನ್ನ ಪ್ರಭುಗಳೂ ನನ್ನನ್ನು ಹುಡುಕಿದರು. ನಾನು ನನ್ನ ರಾಜ್ಯದಲ್ಲಿ ಸ್ಥಾಪಿಸಲ್ಪಟ್ಟು ನನಗೆ ವಿಶೇಷವಾದ ಮಹತ್ತು ಕೂಡಿಸಲ್ಪಟ್ಟಿತು.
36 No mesmo momento a minha razão retornou para mim, e para a glória do meu reino, minha honra e o meu brilho retornaram para mim; e meus conselheiros e meus senhores buscaram-me, e eu fui estabelecido no meu reino, e a mim foi acrescentada uma excelente majestade.
37 ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
37 Agora eu, Nabucodonosor, louvo, exalto e honro o Rei do céu, cujas todas as obras são verdade e os seus caminhos juízo; e aqueles que caminham em orgulho ele é capaz de humilhar.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Daniel 4, comparar traduções ou montar um estudo — tudo direto pelo WhatsApp.