Daniel 7
Kannada Bible (GL_KANNADA) vs NTLH
NTLH Nova Tradução na Linguagem de Hoje 2000
1 ಬಾಬೆಲಿನ ಅರಸನಾದ ಬೇಲ್ಯಚ್ಚರನ ಮೊದಲನೆಯ ವರುಷದಲ್ಲಿ ದಾನಿಯೇಲನು ಹಾಸಿಗೆಯ ಮೇಲೆ ತನ್ನ ಮನಸ್ಸಿನ ಕನಸನ್ನೂ ದರ್ಶನವನ್ನೂ ಕಂಡು; ಆ ಮೇಲೆ ಅವುಗಳನ್ನು ಬರೆದು ಅದರ ತಾತ್ಪರ್ಯವನ್ನು ತಿಳಿಸಿದನು.
1 Certa noite, durante o primeiro ano de Belsazar como rei da Babilônia, Daniel se deitou na sua cama e sonhou e no sonho teve visões. Quando acordou, ele escreveu aquilo que tinha sonhado.
2 ದಾನಿಯೇಲನು ಮಾತನಾಡಿ--ಇಗೋ, ನಾನು ರಾತ್ರಿ ಕಂಡ ಕನಸಿನಲ್ಲಿ ಚತುರ್ದಿಕ್ಕಿನ ಗಾಳಿಗಳು ಮಹಾ ಸಾಗರದ ಮೇಲೆ ರಭಸವಾಗಿ ಬೀಸುತ್ತಿದ್ದವು.
2 Aqui está o que ele escreveu: No sonho que tive naquela noite, eu vi os ventos soprando de todas as direções e agitando as águas do mar imenso .
3 ಒಂದಕ್ಕೊಂದು ಬೇರೆ ಬೇರೆಯ ರೂಪದ ನಾಲ್ಕು ದೊಡ್ಡ ಮೃಗಗಳು ಸಮು ದ್ರದೊಳಗಿಂದ ಮೇಲೆ ಬಂದವು.
3 De repente, saíram do mar quatro monstros enormes, diferentes uns dos outros.
4 ಮೊದಲನೆಯದು ಸಿಂಹದ ಹಾಗಿದ್ದು ಹದ್ದಿನ ರೆಕ್ಕೆಗಳುಳ್ಳದ್ದಾಗಿತ್ತು. ಅದರ ರೆಕ್ಕೆಗಳು ಕೀಳಲ್ಪಟ್ಟು ಅದು ಭೂಮಿಯಿಂದ ಎತ್ತಲ್ಪಟ್ಟು ಮನುಷ್ಯನಂತೆ ಕಾಲೂರಿ ನಿಲ್ಲಿಸಲ್ಪಟ್ಟಿತ್ತು. ಅದಕ್ಕೆ ಮನುಷ್ಯನ ಹೃದಯವು ಕೊಡಲ್ಪಟ್ಟದ್ದನ್ನು ನಾನು ನೋಡಿದೆನು.
4 O primeiro parecia um leão, mas tinha asas de águia. Enquanto eu olhava, as suas asas foram arrancadas, e ele foi posto de pé para que andasse como homem. E foi dada a ele uma mente humana.
5 ಇದಲ್ಲದೆ ಇಗೋ, ಇನ್ನೊಂದು ಎರಡ ನೆಯ ಮೃಗವು ಕರಡಿಯ ಹಾಗಿರುವಂಥದ್ದು. ಇದಕ್ಕೆ ಒಂದು ಪಕ್ಕದಲ್ಲಿ ಒಂದು ಹೆಗಲನ್ನು ಮೇಲಕ್ಕೆ ಎತ್ತಿ ಕೊಂಡಿತ್ತು. ಇದರ ಬಾಯಿಯ ಹಲ್ಲುಗಳ ಮಧ್ಯದಲ್ಲಿ ಮೂರು ಪಕ್ಕೆಲುಬುಗಳು ಇದ್ದವು. ಅದಕ್ಕೆ ಅವರು --ಎದ್ದೇಳು ಹೆಚ್ಚು ಮಾಂಸವನ್ನು ತಿನ್ನು ಎಂದು ಹೇಳಿ ದರು.
5 O segundo monstro era parecido com um urso. Ele se levantou nas patas de trás e segurava três costelas na boca. E uma voz lhe dizia: “Vá e coma muita carne.”
6 ಇದಾದ ಮೇಲೆ ನಾನು ನೋಡಲಾಗಿ ಇಗೋ, ಚಿರತೆಯ ಹಾಗಿರುವ ಇನ್ನೊಂದು (ಮೃಗ); ಇದರ ಬೆನ್ನಿನ ಮೇಲೆ ಪಕ್ಷಿಯ ನಾಲ್ಕು ರೆಕ್ಕೆಗಳು ಇದ್ದವು; ಈ ಮೃಗಕ್ಕೆ ನಾಲ್ಕು ತಲೆಗಳು ಸಹ ಇದ್ದವು. ಇದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
6 Depois, vi o terceiro monstro, e este era parecido com um leopardo. Ele tinha quatro cabeças e nas costas tinha quatro asas, como asas de ave. A este animal foi dada a autoridade para reinar.
7 ತರುವಾಯ ರಾತ್ರಿಯ ದರ್ಶನದಲ್ಲಿ ನಾನು ನೋಡಲಾಗಿ ಇಗೋ, ನಾಲ್ಕ ನೆಯ ಮೃಗವು ಭಯಂಕರವಾದದ್ದೂ ಘೋರವಾ ದದ್ದೂ ಬಹಳ ಬಲವುಳ್ಳದ್ದೂ ಆಗಿತ್ತು; ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ತಿಂದು ತುಂಡು ತುಂಡು ಮಾಡಿ ಮಿಕ್ಕಿದ್ದನ್ನು ತನ್ನ ಕಾಲುಗಳ ಕೆಳಗೆ ಹಾಕಿ ತುಳಿಯಿತು. ಅದು ಮೊದಲಿನ ಎಲ್ಲಾ ಮೃಗಗಳಿಗಿಂತ ವ್ಯತ್ಯಾಸವುಳ್ಳದ್ದು ಮತ್ತು ಹತ್ತು ಕೊಂಬುಗಳುಳ್ಳದ್ದು ಆಗಿತ್ತು.
7 O quarto monstro que vi naquela visão era terrível, espantoso e muito forte. Tinha enormes dentes de ferro e com eles despedaçava e devorava as suas vítimas; o que sobrava ele esmagava com as patas. Esse monstro era diferente dos outros três e tinha dez chifres.
8 ಆ ಕೊಂಬುಗಳ ಬಗ್ಗೆ ನಾನು ಆಲೋಚಿಸು ತ್ತಿರುವಾಗ ಇಗೋ, ಮತ್ತೊಂದು ಚಿಕ್ಕ ಕೊಂಬು ಅವುಗಳಲ್ಲಿ ಎದ್ದು ಕಾಣುತ್ತಿತ್ತು. ಇದರ ಮುಂದೆ ಮೊದ ಲಿನ ಕೊಂಬುಗಳಲ್ಲಿ ಮೂರು ಬೇರುಸಹಿತ ಕೀಳಲ್ಪ ಟ್ಟಿವೆ ಮತ್ತು ಇಗೋ, ಈ ಕೊಂಬಿನಲ್ಲಿ ಮನುಷ್ಯರ ಕಣ್ಣುಗಳ ಹಾಗೆ ಕಣ್ಣುಗಳೂ ಬಡಾಯಿಕೊಚ್ಚುವ ಬಾಯಿಯೂ ಇದ್ದವು.
8 Eu estava olhando os chifres com atenção e notei outro chifre, menor, que nasceu entre os outros. Três chifres foram arrancados para dar lugar a esse chifre menor, que tinha olhos, como os de gente, e uma boca que falava com muito orgulho.
9 ನಾನು ನೋಡುತ್ತಿದ್ದ ಹಾಗೆಯೇ ಸಿಂಹಾಸನಗಳು ಹಾಕಲ್ಪಟ್ಟು ಅದರ ಮೇಲೆ ಪೂರ್ವಿಕನೊಬ್ಬನು ಕುಳಿತುಕೊಂಡನು. ಆತನ ವಸ್ತ್ರವು ಹಿಮದಂತೆ ಬಿಳುಪಾಗಿಯೂ ಆತನ ತಲೆಕೂದಲು ಶುದ್ಧ ಉಣ್ಣೆಯಂತೆಯೂ ಆತನ ಸಿಂಹಾಸನವು ಅಗ್ನಿಜ್ವಾಲೆಯಂತೆಯೂ ಆತನ ಚಕ್ರಗಳು ಉರಿಯುವ ಬೆಂಕಿಯಂತೆಯೂ ಇದ್ದವು.
9 Continuei olhando e vi que foram postos alguns tronos. Num deles, assentou-se aquele que sempre existiu. A sua roupa era branca como a neve, e os seus cabelos eram brancos como a lã. O trono e as suas rodas pareciam labaredas de fogo,
10 ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟು ಬಂದಿತು; ಸಹಸ್ರ ಸಹಸ್ರ ವಾಗಿ ಆತನಿಗೆ ಸೇವೆಮಾಡಿದರು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ಕೂತು ಕೊಂಡರು. ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.
10 e de um lugar em frente do trono saía um rio de fogo. Havia ali milhares de pessoas que adoravam aquele que estava sentado no trono, e muitos milhões estavam de pé na presença dele. Começou o julgamento, e foram abertos os livros.
11 ಆ ಕೊಂಬು ಮಾತನಾಡಿದ ದೊಡ್ಡ ಮಾತುಗಳ ಶಬ್ದದ ವಿಷಯ ನಾನು ನೋಡುತ್ತಿರುವಾಗಲೇ ಮೃಗವು ಕೊಲ್ಲ ಲ್ಪಟ್ಟು ಅದರ ಶರೀರವನ್ನು ನಾಶಪಡಿಸಿ; ಅದು ಬೆಂಕಿಯ ಉರಿಗೆ ಹಾಕಲ್ಪಟ್ಟಿತು.
11 Continuei olhando, pois o chifre pequeno ainda estava dizendo palavras orgulhosas. E vi quando o quarto monstro foi morto; e o seu corpo foi despedaçado e jogado no fogo.
12 ಮಿಕ್ಕ ಮೃಗಗಳ ವಿಷಯ ವಾದರೊ! ಅವುಗಳ ಅಧಿಕಾರವು ತೆಗೆದುಹಾಕಲ್ಪಟ್ಟಿತು. ಆದರೆ ಕೆಲವು ಕಾಲದ ಮೇಲೆ ತಕ್ಕ ಸಮಯ ಬರುವ ವರೆಗೂ ಅವುಗಳ ಜೀವವನ್ನು ಉಳಿಸಿದರು.
12 Quanto aos outros monstros, o poder que tinham foi tirado deles, mas não foram mortos; foi dado a eles mais um pouco de tempo para viverem.
13 ನಾನು ಕಂಡ ರಾತ್ರಿಯ ದರ್ಶನದಲ್ಲಿ ಇಗೋ, ಮನುಷ್ಯ ಕುಮಾರನಂತಿರುವ ಒಬ್ಬನು ಆಕಾಶದ ಮೇಘಗಳ ಸಂಗಡ ಪೂರ್ವಿಕನ ಬಳಿಗೆ ಸವಿಾಪಿಸಿದನು. ಅವನನ್ನು ಆತನ ಬಳಿಗೆ ಕರೆತಂದರು.
13 Na mesma visão que tive naquela noite, vi um ser parecido com um homem, que vinha entre as nuvens do céu. Ele foi até o lugar onde estava aquele que sempre existiu e foi apresentado a ele.
14 ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.
14 Deram-lhe o poder, a honra e a autoridade de rei, a fim de que os povos de todas as nações, línguas e raças o servissem. O seu poder é eterno, e o seu reino não terá fim.
15 ದಾನಿಯೇಲನೆಂಬ ನಾನು ನನ್ನ ಶರೀರದೊಳ ಗಿರುವ ಆತ್ಮದಲ್ಲಿ ನೊಂದು ನನ್ನ ಮನಸ್ಸಿನ ದರ್ಶನಗಳ ನಿಮಿತ್ತ ಕಳವಳಗೊಂಡೆನು.
15 As visões me espantaram, e eu fiquei preocupado com o que tinha visto.
16 ನಾನು ಹತ್ತಿರ ನಿಂತವ ರಲ್ಲಿ ಒಬ್ಬನ ಬಳಿಗೆ ಬಂದು ಇವೆಲ್ಲವುಗಳ ಸತ್ಯಾರ್ಥ್ಯ ವನ್ನು ಕೇಳಿದೆನು. ಆಗ ಅವನು ಅದನ್ನು ನನಗೆ ಹೇಳಿ ಇವುಗಳ ಅರ್ಥವನ್ನು ನನಗೆ ತಿಳಿಸಿದನು.
16 Cheguei perto de um dos que estavam ali e pedi que me explicasse o que eu tinha visto. Então ele explicou assim:
17 ಈ ದೊಡ್ಡಮೃಗಗಳು ಭೂಮಿಯಿಂದ ಹುಟ್ಟುವ ನಾಲ್ಕು ಅರಸುಗಳಾಗಿವೆ.
17 — Os quatro monstros enormes são quatro reis que vão dominar o mundo.
18 ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು ಅದನ್ನು ಎಂದಿಗೂ ಹೌದು, ಎಂದೆಂದಿಗೂ ವಶಪಡಿಸಿಕೊಳ್ಳು ವರು.
18 Mas o reino será dado ao povo do Deus Altíssimo, e esse povo reinará para sempre.
19 ಆ ಮೇಲೆ ನಾಲ್ಕನೆಯ ಮೃಗವು ಉಳಿದವು ಗಳಿಗಿಂತ ವ್ಯತ್ಯಾಸವಾಗಿಯೂ ಅತಿ ಭಯಂಕರವಾ ಗಿಯೂ ಕಬ್ಬಿಣದ ಹಲ್ಲುಗಳುಳ್ಳದ್ದಾಗಿಯೂ ಹಿತ್ತಾಳೆಯ ಉಗುರುಗಳುಳ್ಳದ್ದಾಗಿಯೂ ತುಂಡು ತುಂಡು ಮಾಡಿ ತಿಂದು ಮಿಕ್ಕಿದ್ದನ್ನು ಕಾಲಿನ ಕೆಳಗೆ ಹಾಕಿ ತುಳಿಯುವಂಥಾದ್ದೂ ಆಗಿದೆ.
19 Eu quis saber também a explicação a respeito do quarto monstro, que era diferente dos outros três, que era terrível e tinha dentes de ferro e unhas de bronze, que despedaçava e devorava as suas vítimas e que esmagava com as patas aquilo que sobrava.
20 ಅದರ ತಲೆಯಲ್ಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ ನಾನು ನೋಡುತ್ತಿದ್ದ ಹಾಗೆಯೇ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ ಆ ಎದ್ದು ಬಂದ ಬೇರೊಂದರ ಕೊಂಬಿನ ವಿಷಯವಾಗಿಯೂ ಹೌದು, ಕಣ್ಣುಗಳು ಳ್ಳಂತ, ಬಹು ದೊಡ್ಡ ಮಾತುಗಳನ್ನು ಮಾತನಾಡಿದ ಬಾಯಿಯಂತ, ತನ್ನ ಜೊತೆಯವರಿಗಿಂತ ಬಲವಾದ ನೋಟವುಳ್ಳಂತ, ಆ ಕೊಂಬಿನ ವಿಷಯವಾಗಿ ಸತ್ಯಾರ್ಥ ವನ್ನು ತಿಳಿಯಬೇಕೆಂದಿದ್ದೆನು.
20 Pedi também que me explicasse os dez chifres que esse monstro tinha na cabeça e o outro chifre que havia crescido, derrubando três chifres; esse chifre, que parecia mais forte do que os outros, tinha olhos e uma boca que falava com muito orgulho.
21 ನಾನು ನೋಡಲಾಗಿ ಆ ಕೊಂಬು ಪರಿಶುದ್ಧರ ಸಂಗಡ ಯುದ್ಧಮಾಡಿತು ಮತ್ತು ಅವರಿಗೆ ವಿರೋಧವಾಗಿ ಜಯಗಳಿಸಿತು;
21 Enquanto eu olhava, esse chifre começou a lutar contra o povo de Deus e estava vencendo,
22 ಪೂರ್ವಿಕನ ಕಾಲ ಬಂದು ಮಹೋನ್ನತನ ಪರಿ ಶುದ್ಧರಿಗೆ ನ್ಯಾಯತೀರ್ಪು ಕೊಡುವ ವರೆಗೂ ಪರಿ ಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದ ವರೆಗೂ ಅವರ ಮೇಲೆ ಜಯವನ್ನು ಹೊಂದಿತು.
22 até que chegou aquele que sempre existiu. Ele julgou a favor do povo do Deus Altíssimo, pois havia chegado o tempo de esse povo começar a reinar.
23 ಹೀಗೆ ಅವನು--ಆ ನಾಲ್ಕನೆಯ ಮೃಗವು ಭೂಮಿಯ ಮೇಲಿರುವ ನಾಲ್ಕನೆಯ ರಾಜ್ಯವಾಗು ವದು. ಅದು ಎಲ್ಲಾ ರಾಜ್ಯಗಳಿಗಿಂತ ವ್ಯತ್ಯಾಸವಾಗಿಯೂ ಭೂಮಿಯನ್ನೆಲ್ಲಾ ತುಳಿದು, ತುಂಡುತುಂಡು ಮಾಡು ವಂಥದ್ದಾಗಿಯೂ ಇರುವದು.
23 A explicação que recebi foi esta: — O quarto monstro é um rei, e o reino dele será bem diferente dos outros. Ele conquistará o mundo inteiro, destruirá todas as nações e as deixará arrasadas.
24 ಆ ಹತ್ತು ಕೊಂಬು ಗಳು ಆ ರಾಜ್ಯದೊಳಗೆ ಹುಟ್ಟುವ ಹತ್ತು ಅರಸುಗಳಾ ಗಿವೆ; ಅನಂತರ ಇನ್ನೊಬ್ಬನು ಹುಟ್ಟುವನು ಅವನು ಮೊದಲಿನವರಿಗಿಂತ ವಿಲಕ್ಷಣವಾಗಿ ಮೂರು ಅರಸರನ್ನು ಅದುಮಿ ಬಿಡುವನು.
24 Os dez chifres representam dez reis que governarão esse reino. Depois deles, aparecerá outro rei que será diferente dos primeiros; ele derrotará três reis.
25 ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.
25 Ele falará contra Deus e perseguirá o povo do Deus Altíssimo. Procurará mudar a Lei de Deus e os tempos das festas religiosas. O povo de Deus será dominado por ele durante três anos e meio.
26 ಆದರೆ ನ್ಯಾಯ ಸಭೆಯು ಕುಳಿತು ಅವನ ಅಧಿಕಾರವನ್ನು ತೆಗೆದುಹಾಕಿ, ಕೊನೆಯ ವರೆಗೂ ಅದನ್ನು ಸಂಹರಿಸಿ ನಾಶಪಡಿಸುವದು.
26 Mas depois disso o tribunal o condenará, e assim ele perderá o seu reino, e o seu poder acabará para sempre.
27 ರಾಜ್ಯವೂ ದೊರೆತನವೂ ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತು ಮಹೋನ್ನತನ ಪರಿಶುದ್ಧವಾದ ಜನರಿಗೆ ಕೊಡಲ್ಪಡುವದು; ಆತನ ರಾಜ್ಯವು ನಿತ್ಯವಾದ ರಾಜ್ಯ ಮತ್ತು ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವವು ಮತ್ತು ವಿಧೇಯವಾಗಿರುವವು.
27 Mas o reino, o poder e a glória serão dados ao povo do Deus Altíssimo, e eles governarão o mundo inteiro para sempre; todos os outros povos os servirão, todos lhes obedecerão.
28 ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
28 Aqui termina a explicação. Eu continuei muito preocupado com os meus pensamentos, e o meu rosto ficou pálido. Mas eu não disse nada a ninguém.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Daniel 7, comparar traduções ou montar um estudo — tudo direto pelo WhatsApp.