Deuteronômio 10
Kannada Bible (GL_KANNADA) vs VC
VC Versão Católica
1 ಆ ಕಾಲದಲ್ಲಿ ಕರ್ತನು ನನಗೆ--ಮೊದಲಿ ನವುಗಳ ಹಾಗೆ ಎರಡು ಕಲ್ಲಿನ ಹಲಗೆ ಗಳನ್ನು ನೀನು ಕೆತ್ತಿಕೊಂಡು ಬೆಟ್ಟವನ್ನೇರಿ ನನ್ನ ಬಳಿಗೆ ಬಾ; ಮರದ ಮಂಜೂಷವನ್ನು ನಿನಗೆ ಮಾಡಿಕೊಳ್ಳ ಬೇಕು.
1 Naquele mesmo tempo o Senhor disse-me: corta duas tábuas de pedra semelhantes às primeiras, e sobe para junto de mim no monte, depois de ter fabricado uma arca de madeira.
2 ಆಗ ನೀನು ಒಡೆದ ಆ ಮೊದಲಿನ ಹಲಗೆಗಳ ಮೇಲಿದ್ದ ಮಾತುಗಳನ್ನು ಈ ಹಲಗೆಗಳ ಮೇಲೆ ಬರೆಯುವೆನು; ಆ ಮೇಲೆ ನೀನು ಅವುಗಳನ್ನು ಮಂಜೂ ಷದಲ್ಲಿ ಇಡಬೇಕು ಎಂದು ಹೇಳಿದನು.
2 Escreverei nessas tábuas as, palavras que se achavam nas primeiras que quebraste, e tu as porás na arca.
3 ಈ ಪ್ರಕಾರ ನಾನು ಶಿಟ್ಟೀಮ್ ಮರದ ಮಂಜೂಷವನ್ನು ಮಾಡಿ ಕಲ್ಲಿನ ಎರಡು ಹಲಗೆಗಳನ್ನು ಮುಂಚಿನವುಗಳ ಹಾಗೆ ಕೆತ್ತಿ ಆ ಎರಡು ಹಲಗೆಗಳನ್ನು ಕೈಯಲ್ಲಿ ಹಿಡುಕೊಂಡು ಬೆಟ್ಟವನ್ನೇರಿದೆನು.
3 - Fiz, pois, uma arca de madeira de acácia, e cortei duas tábuas de pedra semelhantes às primeiras; depois disso, com as duas tábuas na mão, subi ao monte.
4 ಆ ಹಲಗೆಗಳ ಮೇಲೆ ಕರ್ತನು ಮುಂಚೆ ಬರೆದ ಪ್ರಕಾರ ಆತನು ನಿಮಗೆ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭೆಯ ದಿವಸದಲ್ಲಿ ಹೇಳಿದ ಹತ್ತು ಆಜ್ಞೆಗಳನ್ನು ಬರೆದು ನನಗೆ ಕೊಟ್ಟನು.
4 O Senhor gravou nas novas pedras o que tinha escrito nas primeiras, as dez palavras que ele vos tinha dirigido no monte, do meio do fogo, no dia da assembléia. Devolveu-mas em seguida, e
5 ತರುವಾಯ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದು ಆ ಹಲಗೆ ಗಳನ್ನು ನಾನು ಮಾಡಿದ ಮಂಜೂಷದಲ್ಲಿ ಇಟ್ಟೆನು. ಕರ್ತನು ನನಗೆ ಆಜ್ಞಾಪಿಸಿದ ಹಾಗೆ ಅವು ಅಲ್ಲಿಯೇ ಇರುತ್ತವೆ.
5 desci da montanha para depô-las na arca que tinha feito. E elas lá estão, como o Senhor me tinha ordenado.
6 ಇದಲ್ಲದೆ ಇಸ್ರಾಯೇಲ್ ಮಕ್ಕಳು ಯಾಕಾನನ ಮಕ್ಕಳ ಬೇರೋತನ್ನು ಬಿಟ್ಟು ಮೋಸೇರಕ್ಕೆ ಹೊರಟಾಗ ಆರೋನನು ಅಲ್ಲಿ ಸತ್ತನು; ಅಲ್ಲೇ ಅವನನ್ನು ಹೂಣಿ ಟ್ಟೆವು; ಅವನ ಮಗನಾದ ಎಲ್ಲಾಜಾರನು ಅವನ ಬದಲಾಗಿ ಯಾಜಕನಾದನು.
6 Os israelitas partiram de Beerot-Bene-Jacã para Mosera, onde morreu Aarão. Seu filho Eleazar exerceu as funções sacerdotais em seu lugar, depois que foi enterrado ali.
7 ಅಲ್ಲಿಂದ ಅವರು ಗುದ್ಗೋದಕ್ಕೂ ಗುದ್ಗೋದದಿಂದ ನೀರಿನ ಪ್ರವಾಹ ಗಳುಳ್ಳ ದೇಶವಾದ ಯೊಟ್ಬಾತಕ್ಕೂ ಪ್ರಯಾಣ ಮಾಡಿದರು.
7 Dali, foram a Gadgad, de Gadgad a Jetebata, onde havia água e torrentes em abundância.
8 ಆ ಕಾಲದಲ್ಲಿ ಕರ್ತನು ಲೇವಿಗೋತ್ರವನ್ನು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರು ವದಕ್ಕೂ ಕರ್ತನ ಮುಂದೆ ನಿಂತುಕೊಂಡು ಆತನಿಗೆ ಸೇವೆಮಾಡಿ ಆತನ ಹೆಸರಿನಲ್ಲಿ ಆಶೀರ್ವದಿಸುವ ದಕ್ಕೂ ಈ ದಿನದ ವರೆಗೂ ಪ್ರತ್ಯೇಕಿಸಿದನು.
8 Foi nesse mesmo tempo que o Senhor designou a tribo de Levi para levar a arca da aliança do Senhor, para estar na sua presença, servi-lo e abençoar em seu nome, o que ela continua fazendo sempre.
9 ಆದದ ರಿಂದ ಲೇವಿಯರಿಗೆ ಅವನ ಸಹೋದರರ ಸಂಗಡ ಪಾಲೂ ಸ್ವಾಸ್ತ್ಯವೂ ಉಂಟಾಗಲಿಲ್ಲ; ಅವನ ದೇವ ರಾದ ಕರ್ತನು ಅವನಿಗೆ ವಾಗ್ದಾನಮಾಡಿದಂತೆ ಕರ್ತನೇ ಅವನ ಸ್ವಾಸ್ತ್ಯವು.
9 Por isso Levi não teve parte nem herança com seus irmãos: porque o Senhor mesmo é o seu patrimônio, como lhe prometeu o Senhor, teu Deus.
10 ಇದಲ್ಲದೆ ನಾನು ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿ ಇದ್ದೆನು. ಕರ್ತನು ಆ ಕಾಲದಲ್ಲಿ ಸಹ ನನ್ನ ಪ್ರಾರ್ಥನೆಯನ್ನು ಕೇಳಿ ನಿನ್ನನ್ನು ನಾಶಮಾಡುವದಕ್ಕೆ ಕರ್ತನು ಇಷ್ಟಪಡಲಿಲ್ಲ.
10 Como da primeira vez, fiquei sobre o monte quarenta dias e quarenta noites, e ainda dessa vez o Senhor ouviu-me, e renunciou a destruir-te.
11 ಕರ್ತನು ನನಗೆ--ಎದ್ದು ಜನರ ಮುಂದೆ ಹೊರಡು; ಅವರು ಹೋಗಿ ನಾನು ಅವರ ಪಿತೃಗಳಿಗೆ ಕೊಡುತ್ತೇ ನೆಂದು ಪ್ರಮಾಣಮಾಡಿದ ದೇಶವನ್ನು ಸ್ವಾಧೀನಮಾಡಿ ಕೊಳ್ಳಲಿ ಅಂದನು.
11 Mas disse-me: vai e marcha à frente do povo, para que entre e possua a terra que jurei a seus pais dar-lhe.
12 ಈಗ ಇಸ್ರಾಯೇಲೇ, ನಿನ್ನ ಕರ್ತನಾದ ದೇವರಿಗೆ ಭಯಪಟ್ಟು ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಕೊಂಡು ಆತನನ್ನು ಪ್ರೀತಿಮಾಡಿ ನಿನ್ನ ಕರ್ತನಾದ ದೇವರಿಗೆ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಸೇವೆಮಾಡಿ
12 E agora, ó Israel, o que pede a ti o Senhor, teu Deus, senão que o temas, andando nos seus caminhos, amando-o e servindo-o de todo o teu coração e de toda a tua alma,
13 ನಾನು ಈ ಹೊತ್ತು ನಿನ್ನ ಮೇಲಿಗಾಗಿ ನಿನಗೆ ಆಜ್ಞಾಪಿಸುವ ಕರ್ತನ ಆಜ್ಞೆಗಳನ್ನೂ ಆತನ ನಿಯಮಗಳನ್ನೂ ಅನು ಸರಿಸುವದೇ ಹೊರತು ಮತ್ತೇನು ನಿನ್ನ ದೇವರಾಗಿ ರುವ ಕರ್ತನು ನಿನ್ನಿಂದ ಕೇಳುತ್ತಾನೆ?
13 observando os mandamentos do Senhor e suas leis, que hoje te prescrevo, para que sejas feliz?
14 ಇಗೋ, ಆಕಾಶವೂ ಆಕಾಶದಾಕಾಶವೂ ಭೂಮಿಯೂ ಅದರಲ್ಲಿ ರುವಂಥದ್ದೆಲ್ಲವೂ ನಿನ್ನ ದೇವರಾಗಿರುವ ಕರ್ತನವು ಗಳೇ.
14 Vê: ao Senhor, teu Deus, pertencem os céus e os céus dos céus, a terra e tudo o que nela se encontra.
15 ಆದರೂ ನಿನ್ನ ಪಿತೃಗಳ ಮೇಲೆ ಕರ್ತನು ತಾನೇ ಮನಸ್ಸಿಟ್ಟು ಅವರನ್ನು ಪ್ರೀತಿಮಾಡಿ ಅವರ ಸಂತಾನವಾಗಿರುವ ನಿಮ್ಮನ್ನು ಈಹೊತ್ತು ಇರುವ ಪ್ರಕಾರ ಎಲ್ಲಾ ಜನಗಳೊಳಗಿಂದ ಆದುಕೊಂಡನು.
15 Não obstante, só a teus pais se apegou o Senhor com amor, e elegeu a sua posteridade, depois deles, a vós, dentre todas as nações, como o vedes presentemente.
16 ಹೀಗಿರುವದರಿಂದ ನಿಮ್ಮ ಹೃದಯದಲ್ಲೇ ಸುನ್ನತಿ ಮಾಡಿಕೊಳ್ಳಿರಿ. ಇನ್ನು ಮೇಲೆ ಬಗ್ಗದ ಕುತ್ತಿಗೆಯುಳ್ಳವ ರಾಗಿರಬೇಡಿರಿ.
16 Cortai, pois, o prepúcio de vosso coração, e cessai de endurecer vossa cerviz;
17 ನಿಮ್ಮ ದೇವರಾದ ಕರ್ತನು ಆತನೇ ದೇವರುಗಳ ದೇವರು, ಕರ್ತರ ಕರ್ತನು, ಮಹಾ ದೇವರು, ಪರಾಕ್ರಮಿಯೂ ಭಯಂಕರನೂ. ಆತನು ಮುಖದಾಕ್ಷಿಣ್ಯ ನೋಡುವದಿಲ್ಲ, ಲಂಚ ತೆಗೆದುಕೊಳ್ಳು ವದಿಲ್ಲ.
17 porque o Senhor, vosso Deus, é o Deus dos deuses e o Senhor dos senhores, o Deus grande, poderoso e temível, que não faz distinção de pessoas, nem aceita presentes.
18 ಆತನು ತಂದೆ ಇಲ್ಲದವರಿಗೂ ವಿಧವೆ ಯರಿಗೂ ನ್ಯಾಯತೀರಿಸುತ್ತಾನೆ; ಪರದೇಶಿಯನ್ನು ಪ್ರೀತಿಮಾಡಿ ಅನ್ನ ವಸ್ತ್ರ ಕೊಡುತ್ತಾನೆ.
18 Ele faz justiça ao órfão e à viúva, e ama o estrangeiro, ao qual dá alimento e vestuário.
19 ಹೀಗಿರುವ ದರಿಂದ ನೀವು ಪರದೇಶಿಯನ್ನು ಪ್ರೀತಿಮಾಡಬೇಕು; ಯಾಕಂದರೆ ನೀವು ಐಗುಪ್ತದಲ್ಲಿ ಪರದೇಶಿಗಳಾಗಿದ್ದಿರಿ.
19 Também vós, amai o estrangeiro, porque fostes estrangeiros no Egito.
20 ನಿನ್ನ ಕರ್ತನಾದ ದೇವರಿಗೆ ನೀನು ಭಯಪಡಬೇಕು; ಆತನ ಸೇವೆಮಾಡಿ ಆತನಿಗೆ ಅಂಟಿಕೊಂಡು ಆತನ ಹೆಸರಿನಲ್ಲಿ ಪ್ರಮಾಣಮಾಡಬೇಕು.
20 Temerás o Senhor, teu Deus, e o servirás. Estarás unido a ele, e só pelo seu nome farás os teus juramentos.
21 ನಿನ್ನ ಕಣ್ಣುಗಳು ನೋಡಿದ ಆ ಮಹಾ ಭಯಂಕರವಾದ ಕಾರ್ಯಗಳನ್ನು ನಿನಗೆ ಮಾಡಿದ ಆತನೇ ನಿನ್ನ ಸ್ತೋತ್ರವು, ಆತನೇ ನಿನ್ನ ದೇವರು.
21 Ele é a tua glória e o teu Deus, que fez por ti estas grandes e terríveis coisas que viste com os teus olhos.
22 ಎಪ್ಪತ್ತು ಮಂದಿಯಾಗಿ ನಿನ್ನ ಪಿತೃಗಳು ಐಗುಪ್ತಕ್ಕೆ ಇಳಿದುಹೋದರು; ಈಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಕಾಶದ ನಕ್ಷತ್ರಗಳ ಹಾಗೆ ಅಸಂಖ್ಯ ವಾಗಿ ಮಾಡಿದ್ದಾನೆ.
22 Quando os teus pais desceram ao Egito eram em número de setenta pessoas, e agora o Senhor, teu Deus, multiplicou-te como as estrelas do céu.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Deuteronômio 10, comparar traduções ou montar um estudo — tudo direto pelo WhatsApp.