Deuteronômio 16
Kannada Bible (GL_KANNADA) vs NVT
NVT Nova Versão Transformadora
1 ಆಬೀಬ್ ತಿಂಗಳನ್ನು ಆಚರಿಸು. ಅದರಲ್ಲಿ ನಿನ್ನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಬೇಕು; ಯಾಕಂದರೆ ಆಬೀಬ್ ತಿಂಗಳಿನಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ರಾತ್ರಿಯಲ್ಲಿ ಐಗುಪ್ತ ದೊಳಗಿಂದ ಹೊರಗೆ ಬರಮಾಡಿದನು;
1 “A cada ano, no mês de abibe, celebrem a Páscoa em homenagem ao S enhor , seu Deus, pois foi nesse mês, durante a noite, que o S enhor , seu Deus, os libertou do Egito.
2 ಹೀಗಿರುವ ದರಿಂದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಕುರಿಪಶುಗಳ ಪಸ್ಕವನ್ನು ಅರ್ಪಿಸಬೇಕು.
2 O sacrifício de Páscoa será um animal do gado ou do rebanho, oferecido ao S enhor , seu Deus, no lugar que ele escolher para habitação do seu nome.
3 ಅದರಲ್ಲಿ ಹುಳಿ ರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿ ಇಲ್ಲದ ಶ್ರಮೆಯ ರೊಟ್ಟಿಗಳನ್ನು ಅದರಲ್ಲಿ ತಿನ್ನಬೇಕು; ತ್ವರೆಯಾಗಿ ಐಗುಪ್ತದೇಶದೊಳಗಿಂದ ನೀನು ಹೊರಗೆ ಬಂದಿ; ಆದಕಾರಣ ನೀನು ಐಗುಪ್ತದೇಶದೊಳಗಿಂದ ಹೊರಗೆ ಬಂದ ದಿವಸವನ್ನು ನೀನು ಜೀವಿಸುವ ದಿವಸ ಗಳಲ್ಲೆಲ್ಲಾ ಜ್ಞಾಪಕಮಾಡಬೇಕು.
3 Comam o sacrifício com pães sem fermento. Durante sete dias, comam pão sem fermento, como fizeram quando fugiram às pressas do Egito. Comam esse pão, o pão do sofrimento, para se lembrarem, por toda a vida, do dia em que saíram do Egito.
4 ಏಳು ದಿವಸ ಹುಳಿ ಕಲಸಿದ ರೊಟ್ಟಿ ನಿನ್ನ ಮೇರೆಗಳಲ್ಲೆಲ್ಲೂ ಕಾಣಬಾರದು. ಮೊದಲನೇ ದಿನದ ಸಾಯಂಕಾಲದಲ್ಲಿ ನೀನು ಕೊಯ್ದ ಮಾಂಸದಲ್ಲಿ ಏನಾದರೂ ಮರು ದಿವಸದ ವರೆಗೆ ಉಳಿಸಬಾರದು.
4 Durante esses sete dias, não deve haver a mínima quantidade de fermento nas casas em toda a sua terra. E, quando sacrificarem o cordeiro de Páscoa ao entardecer do primeiro dia, não deixem sobras para a manhã seguinte.
5 ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದ್ವಾರಗಳ ಯಾವದೊಂದರಲ್ಲಾದರೂ ನೀನು ಪಸ್ಕವನ್ನು ಅರ್ಪಿಸ ಬಾರದು.
5 “Não ofereçam o sacrifício de Páscoa em nenhuma das cidades que o S enhor , seu Deus, lhes dá.
6 ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ನೀನು ಪಸ್ಕವನ್ನು ಸಾಯಂಕಾಲದಲ್ಲಿ ಸೂರ್ಯನು ಅಸ್ತಮಿಸುವಾಗ ನೀನು ಐಗುಪ್ತವನ್ನು ಬಿಟ್ಟುಹೋದ ಸಮಯದಲ್ಲಿ ಅರ್ಪಿಸಬೇಕು.
6 Ofereçam-no apenas no lugar que o S enhor , seu Deus, escolher para habitação do seu nome. Sacrifiquem-no ali ao entardecer, enquanto o sol se põe, no mesmo período do dia em que saíram do Egito.
7 ನಿನ್ನ ದೇವರಾದ ಕರ್ತನು ಆದು ಕೊಳ್ಳುವ ಸ್ಥಳದಲ್ಲಿ ಅದನ್ನು ಬೇಯಿಸಿ ತಿನ್ನಬೇಕು; ಮರುದಿವಸದಲ್ಲಿ ತಿರುಗಿಕೊಂಡು ನಿನ್ನ ಗುಡಾರಗಳಿಗೆ ಹೋಗಬೇಕು;
7 Assem e comam o cordeiro no lugar que o S enhor , seu Deus, escolher. Na manhã seguinte, voltem às suas tendas.
8 ಆರು ದಿವಸ ಹುಳಿ ಇಲ್ಲದ ರೊಟ್ಟಿ ಗಳನ್ನು ತಿನ್ನಬೇಕು; ಏಳನೇ ದಿನದಲ್ಲಿ ನಿನ್ನ ದೇವರಾದ ಕರ್ತನಿಗೆ ವಿಶೇಷ ಸಭೆ ಸೇರಬೇಕು; ಅದರಲ್ಲಿ ಕೆಲಸ ಮಾಡಬಾರದು.
8 Durante os seis dias seguintes, comam pão sem fermento. No sétimo dia, declarem outra reunião sagrada em homenagem ao S enhor , seu Deus, e não façam trabalho algum.”
9 ಏಳು ವಾರಗಳನ್ನು ನಿನಗಾಗಿ ಎಣಿಸಿಕೊಳ್ಳಬೇಕು; ಪೈರಿನಲ್ಲಿ ಕುಡುಗೋಲು ಮೊದಲು ಹಾಕಿದಂದಿನಿಂದ ಏಳು ವಾರಗಳನ್ನು ಎಣಿಸಿಕೊಳ್ಳುವದಕ್ಕೆ ಪ್ರಾರಂಭಿಸ ಬೇಕು.
9 “Contem sete semanas a partir do dia em que começarem a colheita de cereais.
10 ಆಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸಿದ ಪ್ರಕಾರ ನಿನ್ನ ಕೈಕೊಡುವ ಉಚಿತವಾದ ಕಾಣಿಕೆಯ ಮೇರೆಗೆ ನಿನ್ನ ದೇವರಾದ ಕರ್ತನಿಗೆ ವಾರಗಳ ಹಬ್ಬಮಾಡಬೇಕು.
10 Então celebrem a Festa da Colheita em homenagem ao S enhor , seu Deus. Levem uma oferta voluntária proporcional às bênçãos que receberam dele.
11 ಆಗ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಬಾಗಲು ಗಳಲ್ಲಿರುವ ಲೇವಿಯನೂ ನಿನ್ನ ಮಧ್ಯದಲ್ಲಿರುವ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ಸಂತೋಷ ಪಡಬೇಕು.
11 Será um tempo de celebração diante do S enhor , seu Deus, no lugar que ele escolher para habitação do seu nome. Celebrem com seus filhos e filhas, com seus servos e servas, com os levitas das suas cidades e com os estrangeiros, órfãos e viúvas que vivem entre vocês.
12 ನೀನು ಐಗುಪ್ತದಲ್ಲಿ ದಾಸನಾಗಿದ್ದಿ ಎಂದು ಜ್ಞಾಪಕಮಾಡಿಕೊಂಡು ಈ ನಿಯಮಗಳನ್ನು ಕೈಕೊಂಡು ನಡೆಯಬೇಕು.
12 Lembrem-se de que, um dia, vocês foram escravos no Egito e, portanto, tenham o cuidado de cumprir todos estes decretos.”
13 ನಿನ್ನ ಧಾನ್ಯವನ್ನೂ ನಿನ್ನ ದ್ರಾಕ್ಷೆಯನ್ನೂ ಕೂಡಿಸಿದ ಮೇಲೆ ಏಳು ದಿವಸ ಗುಡಾರಗಳ ಹಬ್ಬಮಾಡಬೇಕು.
13 “Celebrem a Festa das Cabanas durante sete dias, no final da época da colheita, depois que ajuntarem os cereais e prensarem as uvas.
14 ಆ ಹಬ್ಬದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳಲ್ಲಿರುವ ಲೇವಿಯನೂ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ಸಂತೋಷಪಡಬೇಕು.
14 Essa festa será um tempo de alegria e comemoração com seus filhos e filhas, seus servos e servas, com os levitas, estrangeiros, órfãos e viúvas de suas cidades.
15 ನಿನ್ನ ದೇವರಾದ ಕರ್ತನಿಗೆ ಏಳು ದಿವಸ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ಹಬ್ಬ ಮಾಡಬೇಕು; ನಿನ್ನ ದೇವರಾದ ಕರ್ತನು ನಿನ್ನನ್ನು ಎಲ್ಲಾ ಆದಾಯದಲ್ಲಿಯೂ ಎಲ್ಲಾ ಕೈಕೆಲಸದಲ್ಲಿಯೂ ಆಶೀರ್ವದಿಸುವದರಿಂದ ನೀನು ನಿಜವಾಗಿಯೂ ಸಂತೋಷದಿಂದ ಇರಬೇಕು.
15 Durante sete dias, celebrem essa festa em homenagem ao S enhor , seu Deus, no lugar que ele escolher, pois ele é quem os abençoa em todas as suas colheitas e lhes dá sucesso em todo o seu trabalho. Essa festa será um tempo de grande alegria para vocês.
16 ವರುಷಕ್ಕೆ ಮೂರು ಸಾರಿ ನಿನ್ನ ಗಂಡಸರೆಲ್ಲರು ನಿನ್ನ ದೇವರಾದ ಕರ್ತನ ಮುಂದೆ ಆತನು ಆದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು, ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬದಲ್ಲಿ, ವಾರಗಳ ಹಬ್ಬದಲ್ಲಿ, ಗುಡಾರ ಗಳ ಹಬ್ಬದಲ್ಲಿ ಕಾಣಿಸಿಕೊಳ್ಳಬೇಕು. ಇದಲ್ಲದೆ ಅವರು ಕರ್ತನ ಸಮ್ಮುಖಕ್ಕೆ ಬರಿ ಕೈಯಾಗಿ ಬರಬಾರದು.
16 “A cada ano, todos os homens de Israel devem celebrar estas três festas: a Festa dos Pães sem Fermento, a Festa da Colheita e a Festa das Cabanas. Em cada uma dessas ocasiões, todos os homens devem comparecer diante do S enhor , seu Deus, no lugar que ele escolher. Não devem, porém, apresentar-se diante do S enhor de mãos vazias.
17 ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಆಶೀರ್ವಾದದ ಪ್ರಕಾರ ಒಬ್ಬೊಬ್ಬನು ತನ್ನ ಕೈಯಿಂದ ಆಗುವಷ್ಟು ಕೊಡಬೇಕು.
17 Todos devem ofertar de acordo com as bênçãos que receberam do S enhor , seu Deus.”
18 ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.
18 “Nomeiem juízes e oficiais de cada uma de suas tribos em todas as cidades que o S enhor , seu Deus, lhes dá. Eles julgarão o povo com justiça.
19 ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.
19 Nunca distorçam a justiça nem mostrem parcialidade. Nunca aceitem subornos, pois eles cegam os olhos dos sábios e corrompem as decisões dos íntegros.
20 ನೀನು ಬದುಕಿ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಹಾಗೆ ನೀತಿಯನ್ನೇ ಅನುಸರಿಸಬೇಕು.
20 Que a justiça verdadeira prevaleça sempre, para que vocês vivam e tomem posse da terra que o S enhor , seu Deus, lhes dá.
21 ನೀನು ನಿನಗೆ ಮಾಡಿಕೊಳ್ಳುವ ನಿನ್ನ ದೇವರಾದ ಕರ್ತನ ಯಜ್ಞವೇದಿಯ ಸವಿಾಪದಲ್ಲಿ ಯಾವ ಮರಗಳ ತೋಪನ್ನಾದರೂ ನೆಡಬಾರದು.
21 “Jamais levantem um poste de madeira para Aserá junto ao altar que edificarem para o S enhor , seu Deus.
22 ಯಾವ ವಿಗ್ರಹ ವನ್ನೂ ನಿಲ್ಲಿಸಬಾರದು; ಇದನ್ನು ನಿನ್ನ ದೇವರಾದ ಕರ್ತನು ಹಗೆಮಾಡುತ್ತಾನೆ.
22 Jamais levantem colunas sagradas para adoração, pois isso é detestável para o S enhor , seu Deus.”
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Deuteronômio 16, comparar traduções ou montar um estudo — tudo direto pelo WhatsApp.