Deuteronômio 18

Kannada Bible (GL_KANNADA) vs ACF

Sair da comparação
ACF Almeida Corrigida Fiel
1 ಯಾಜಕರಾದ ಲೇವಿಯರಿಗೂ ಆ ಎಲ್ಲಾ ಲೇವಿಯ ಗೋತ್ರಕ್ಕೂ ಇಸ್ರಾಯೇಲಿನ ಸಂಗಡ ಪಾಲೂ ಸ್ವಾಸ್ತ್ಯವೂ ಇರಬಾರದು; ಅವರು ಕರ್ತನ ಬೆಂಕಿಯಿಂದ ಮಾಡಿದ ಬಲಿಗಳನ್ನೂ ಆತನ ಸ್ವಾಸ್ತ್ಯವನ್ನೂ ತಿನ್ನಬೇಕು.
1 Os sacerdotes levitas, toda a tribo de Levi, não terão parte nem herança com Israel; das ofertas queimadas do SENHOR e da sua herança comerão.
2 ಆದದರಿಂದ ಅವರಿಗೆ ಅವರ ಸಹೋದರರ ಮಧ್ಯದಲ್ಲಿ ಸ್ವಾಸ್ತ್ಯವಿರಬಾರದು; ಕರ್ತನು ಅವರಿಗೆ ಹೇಳಿದ ಹಾಗೆ ಆತನೇ ಅವರ ಸ್ವಾಸ್ತ್ಯವಾಗಿದ್ದಾನೆ.
2 Por isso não terão herança no meio de seus irmãos; o Senhor é a sua herança, como lhes tem dito.
3 ಎತ್ತಾಗಲಿ ಕುರಿಯಾಗಲಿ ಒಂದು ಬಲಿಯನ್ನು ಅರ್ಪಿಸುವವರ ಕಡೆಯಿಂದಲೂ ಜನರ ಕಡೆಯಿಂದ ಲೂ ಯಾಜಕರಿಗೆ ಬರತಕ್ಕದ್ದು ಇದೇ: ಮುಂದೊಡೆ ಯನ್ನೂ ಎರಡು ದವಡೆಗಳನ್ನೂ ಕೋಷ್ಟವನ್ನೂ ಯಾಜ ಕನಿಗೆ ಕೊಡಬೇಕು.
3 Este, pois, será o direito dos sacerdotes, a receber do povo, dos que oferecerem sacrifício, seja boi ou gado miúdo; que darão ao sacerdote a espádua e as queixadas e o bucho.
4 ನಿನ್ನ ಧಾನ್ಯ ದ್ರಾಕ್ಷಾರಸ ಎಣ್ಣೆ ಗಳ ಪ್ರಥಮ ಫಲವನ್ನೂ ನಿನ್ನ ಕುರಿಗಳ ಉಣ್ಣೆ ಯಲ್ಲಿ ಪ್ರಥಮವಾದದ್ದನ್ನೂ ಅವನಿಗೆ ಕೊಡಬೇಕು.
4 Dar-lhe-ás as primícias do teu grão, do teu mosto e do teu azeite, e as primícias da tosquia das tuas ovelhas.
5 ಅವನೂ ಅವನ ಕುಮಾರರೂ ನಿತ್ಯವಾಗಿ ಕರ್ತನ ಹೆಸರಿನಲ್ಲಿ ಸೇವಿಸುತ್ತಾ ನಿಂತಿರುವ ಹಾಗೆ ಅವನನ್ನು ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡಿದ್ದಾನೆ.
5 Porque o Senhor teu Deus o escolheu de todas as tuas tribos, para que assista e sirva no nome do Senhor, ele e seus filhos, todos os dias.
6 ಇದಲ್ಲದೆ ಲೇವಿಯು ಸಮಸ್ತ ಇಸ್ರಾಯೇಲಿನ ಲ್ಲಿರುವ ನಿನ್ನ ಯಾವ ಬಾಗಲುಗಳಿಂದ ಅವನು ಪ್ರವಾಸವಾಗಿರುವ ಸ್ಥಳದಿಂದ ಬಂದು ತನ್ನ ಮನಸ್ಸಿನ ಪೂರ್ಣಾಪೇಕ್ಷೆಯೊಂದಿಗೆ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಬಂದರೆ
6 E, quando chegar um levita de alguma das tuas portas, de todo o Israel, onde habitar; e vier com todo o desejo da sua alma ao lugar que o Senhor escolheu;
7 ಅಲ್ಲಿ ಕರ್ತನ ಮುಂದೆ ನಿಂತು ಕೊಳ್ಳುವ ಅವನ ಸಹೋದರರಾದ ಲೇವಿಯರ ಹಾಗೆ ಅವನು ತನ್ನ ದೇವರಾದ ಕರ್ತನ ಹೆಸರಿ ನಲ್ಲಿ ಸೇವೆಮಾಡಬಹುದು.
7 E servir no nome do Senhor seu Deus, como também todos os seus irmãos, os levitas, que assistem ali perante o Senhor,
8 ಅವರು ಪಿತ್ರಾರ್ಜಿತ ಆಸ್ತಿಯನ್ನು ಮಾರಿದ್ದಲ್ಲದೆ ಸಮವಾದ ಭಾಗಗಳನ್ನು ತಿನ್ನಬೇಕು.
8 Igual porção comerão, além das vendas do seu patrimônio.
9 ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ನೀನು ಬಂದಾಗ ಆ ಜನಾಂಗಗಳು ಮಾಡುವ ಅಸಹ್ಯಗಳ ಪ್ರಕಾರ ಮಾಡುವದಕ್ಕೆ ನೀನು ಕಲಿಯ ಬಾರದು.
9 Quando entrares na terra que o Senhor teu Deus te der, não aprenderás a fazer conforme as abominações daquelas nações.
10 ತನ್ನ ಮಗನನ್ನು ಇಲ್ಲವೆ ಮಗಳನ್ನು ಬೆಂಕಿದಾಟಿಸುವವನೂ ಕಣಿಹೇಳುವವನೂ ಮೇಘಮಂತ್ರದವನೂ ಸರ್ಪಮಂತ್ರದವನೂ ಮಾಟಗಾರನೂ
10 Entre ti não se achará quem faça passar pelo fogo a seu filho ou a sua filha, nem adivinhador, nem prognosticador, nem agoureiro, nem feiticeiro;
11 ಗಾರಡಿಗಾರನೂ ಯಕ್ಷಿಣಿಗಾರನೂ ಮಂತ್ರಜ್ಞನೂ ಸತ್ತವರ ಹತ್ತಿರ ವಿಚಾರಿಸುವವನೂ ನಿನ್ನಲ್ಲಿ ಸಿಕ್ಕಬಾರದು.
11 Nem encantador, nem quem consulte a um espírito adivinhador, nem mágico, nem quem consulte os mortos;
12 ಇಂಥವುಗಳನ್ನು ಮಾಡುವ ವರೆಲ್ಲಾ ಕರ್ತನಿಗೆ ಅಸಹ್ಯ; ಈ ಅಸಹ್ಯ ಕಾರ್ಯಗಳ ನಿಮಿತ್ತ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
12 Pois todo aquele que faz tal coisa é abominação ao Senhor; e por estas abominações o Senhor teu Deus os lança fora de diante de ti.
13 ನೀನು ನಿನ್ನ ದೇವರಾದ ಕರ್ತನೊಂದಿಗೆ ಸಂಪೂರ್ಣನಾಗಿರಬೇಕು.
13 Perfeito serás, como o Senhor teu Deus.
14 ನೀನು ಸ್ವಾಧೀನಪಡಿಸಿಕೊಳ್ಳುವ ಆ ಜನಾಂಗಗಳು ಮೇಘ ಮಂತ್ರದವರ ಕಣಿಹೇಳುವವರ ಮಾತು ಕೇಳುತ್ತಿದ್ದರು; ನಿನ್ನನ್ನಾದರೋ ನಿನ್ನ ದೇವರಾದ ಕರ್ತನು ಹಾಗೆ ಮಾಡಗೊಡಿಸಲಿಲ್ಲ.
14 Porque estas nações, que hás de possuir, ouvem os prognosticadores e os adivinhadores; porém a ti o Senhor teu Deus não permitiu tal coisa.
15 ನನ್ನ ಹಾಗಿರುವ ಪ್ರವಾದಿಯನ್ನು ನಿನ್ನ ದೇವ ರಾದ ಕರ್ತನು ನಿನಗೆ ನಿನ್ನ ಮಧ್ಯದಲ್ಲಿ ನಿನ್ನ ಸಹೋದರ ರಿಂದ ಎಬ್ಬಿಸುವನು; ಅವನ ಮಾತು ನೀವು ಕೇಳ ಬೇಕು.--
15 O Senhor teu Deus te levantará um profeta do meio de ti, de teus irmãos, como eu; a ele ouvireis;
16 ನೀನು ಹೋರೇಬಿನಲ್ಲಿ ಸಭೆಯ ದಿವಸ ದಲ್ಲಿ ನಿನ್ನ ದೇವರಾದ ಕರ್ತನಿಂದ ಬೇಡಿಕೊಂಡ ಎಲ್ಲಾದರ ಪ್ರಕಾರ ಆಗುವದು; ನಾನು ಸಾಯದ ಹಾಗೆ ಇನ್ನು ಮೇಲೆ ನನ್ನ ದೇವರಾದ ಕರ್ತನ ಶಬ್ದವನ್ನು ನಾನು ಕೇಳುವದಿಲ್ಲ; ಈ ಘೋರವಾದ ಬೆಂಕಿಯನ್ನೂ ನೋಡುವದಿಲ್ಲವೆಂದು ಹೇಳಿದೆಯಲ್ಲಾ.
16 Conforme a tudo o que pediste ao Senhor teu Deus em Horebe, no dia da assembléia, dizendo: Não ouvirei mais a voz do Senhor teu Deus, nem mais verei este grande fogo, para que não morra.
17 ಆಗ ಕರ್ತನು ನನಗೆ--ಅವರು ಹೇಳಿದ್ದನ್ನು ಚೆನ್ನಾಗಿ ಹೇಳಿ ದ್ದಾರೆ.
17 Então o Senhor me disse: Falaram bem naquilo que disseram.
18 ನಿನ್ನ ಹಾಗಿರುವ ಪ್ರವಾದಿಯನ್ನು ಅವರ ಸಹೋದರರಲ್ಲಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಅವನ ಬಾಯಲ್ಲಿ ಇಡುವೆನು; ನಾನು ಅವನಿಗೆ ಆಜ್ಞಾಪಿಸುವದನ್ನೆಲ್ಲಾ ಅವನು ಅವರಿಗೆ ಹೇಳುವನು.
18 Eis lhes suscitarei um profeta do meio de seus irmãos, como tu, e porei as minhas palavras na sua boca, e ele lhes falará tudo o que eu lhe ordenar.
19 ಅವನು ನನ್ನ ಹೆಸರಿನಿಂದ ಹೇಳುವ ನನ್ನ ವಾಕ್ಯಗಳನ್ನು ಕೇಳದ ಮನುಷ್ಯನು ಯಾವನೋ ಅವನನ್ನು ನಾನು ವಿಚಾರಿಸುವೆನು.
19 E será que qualquer que não ouvir as minhas palavras, que ele falar em meu nome, eu o requererei dele.
20 ಆದರೆ ನಾನು ಮಾತನಾಡಲು ಆಜ್ಞಾಪಿಸದೆ ಇರುವದನ್ನು ನನ್ನ ಹೆಸರಿನಿಂದ ಮಾತನಾಡುವದಕ್ಕೆ ಅಹಂಕಾರ ತೋರಿ ಸುವ ಪ್ರವಾದಿಯೂ ಬೇರೆ ದೇವರುಗಳ ಹೆಸರಿ ನಿಂದ ಮಾತನಾಡುವವನೂ ಆದ ಆ ಪ್ರವಾದಿಯೂ ಸಾಯಬೇಕು.
20 Porém o profeta que tiver a presunção de falar alguma palavra em meu nome, que eu não lhe tenha mandado falar, ou o que falar em nome de outros deuses, esse profeta morrerá.
21 ಇದಲ್ಲದೆ ಕರ್ತನು ಹೇಳಿದ ವಾಕ್ಯವು ನಮಗೆ ಹೇಗೆ ತಿಳಿದೀತೆಂದು ನೀನು ನಿನ್ನ ಹೃದಯದಲ್ಲಿ ಅಂದುಕೊಂಡರೆ
21 E, se disseres no teu coração: Como conhecerei a palavra que o Senhor não falou?
22 ಪ್ರವಾದಿಯು ಕರ್ತನ ಹೆಸರಿನಲ್ಲಿ ಹೇಳಿದ ಮೇಲೆ ಆಗದೆ ಇಲ್ಲವೆ ಸಂಭವಿಸದೆ ಹೋದರೆ ಅದೇ ಕರ್ತನು ಹೇಳದಂಥ, ಮಾತನಾಡದಂಥ ಕಾರ್ಯವು; ಪ್ರವಾದಿಯು ಅಹಂಕಾರದಿಂದ ಅದನ್ನು ಮಾತನಾಡಿದ್ದರೆ ಅವನಿಗೆ ಭಯಪಡಬಾರದು.
22 Quando o profeta falar em nome do Senhor, e essa palavra não se cumprir, nem suceder assim; esta é palavra que o Senhor não falou; com soberba a falou aquele profeta; não tenhas temor dele.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Deuteronômio 18, comparar traduções ou montar um estudo — tudo direto pelo WhatsApp.