Deuteronômio 25

Kannada Bible (GL_KANNADA) vs NAA

Sair da comparação
NAA Nova Almeida Atualizada 2017
1 ಜನರಲ್ಲಿ ಏನಾದರೂ ವಿರೋಧವಿದ್ದರೆ ಅವರು ನ್ಯಾಯತೀರ್ವಿಕೆ ಹೊಂದುವ ಹಾಗೆ ನ್ಯಾಯಾಧಿಪತಿಗಳ ಬಳಿಗೆ ನ್ಯಾಯಕ್ಕೆ ಬಂದರೆ ನೀತಿವಂತನನ್ನು ನೀತಿವಂತನೆಂದೂ ದುಷ್ಟನನ್ನು ಅಪರಾಧಿಯೆಂದೂ ನ್ಯಾಯತೀರಿಸಬೇಕು.
1 — Quando houver desentendimento entre dois homens, e vierem a juízo, os juízes os julgarão, justificando o inocente e condenando o culpado.
2 ಇದಲ್ಲದೆ ಆ ದುಷ್ಟನು ಹೊಡೆಯಲ್ಪಡಲು ಯೋಗ್ಯನಾದರೆ ನ್ಯಾಯಾಧಿಪತಿಯು ಅವನನ್ನು ನೆಲಕ್ಕೆ ಬೀಳಿಸಿ ಅವನ ದುಷ್ಟತ್ವದ ಪ್ರಕಾರ ಅವನಿಗೆ ಲೆಕ್ಕದಿಂದ ಹೊಡಿಸಬೇಕು.
2 Se o culpado merecer açoites, o juiz mandará que ele se deite no chão e seja açoitado, na sua presença, com o número de açoites que o caso exigir.
3 ನಾಲ್ವತ್ತು ಏಟು ಅವನಿಗೆ ಹೊಡಿಸಬಹುದು, ಹೆಚ್ಚಲ್ಲ ಇದಕ್ಕಿಂತ ಹೆಚ್ಚು. ಅವನಿಗೆ ಬಹಳ ಏಟುಗಳನ್ನು ಹೊಡೆದರೆ ನಿನ್ನ ಸಹೋದರನು ನಿನ್ನ ಕಣ್ಣುಗಳಿಗೆ ನೀಚನೆಂದು ಕಾಣಿಸಾನು.
3 Poderá ordenar quarenta açoites, não mais; do contrário, se ordenasse mais do que isso, um compatriota seria humilhado aos olhos de vocês.
4 ಕಣತುಳಿಯುವಾಗ ಎತ್ತಿನ ಬಾಯಿ ಕಟ್ಟಬಾರದು.
4 — Não amarrem a boca do boi quando estiver pisando o trigo.
5 ಸಹೋದರರು ಕೂಡಿ ವಾಸಮಾಡುವಾಗ ಅವರಲ್ಲಿ ಒಬ್ಬನು ಮಕ್ಕಳಿಲ್ಲದೆ ಸತ್ತರೆ ಆ ಸತ್ತವನ ಹೆಂಡತಿ ಮನೆ ಬಿಟ್ಟು ಅನ್ಯನ ಹೆಂಡತಿಯಾಗಬಾರದು; ಗಂಡನ ಸಹೋದರನು ಅವಳ ಬಳಿಗೆ ಬಂದು ಅವಳನ್ನು ಹೆಂಡತಿಯಾಗಿ ತಕ್ಕೊಂಡು ಗಂಡನ ಸಹೋದರನಿಗೆ ತಕ್ಕ ಹಾಗೆ ಅವಳಿಗೆ ನಡಿಸಬೇಕು.
5 — Se dois irmãos morarem juntos, e um deles morrer sem filhos, a mulher do que morreu não se casará com um estranho, alguém de fora da família; seu cunhado a tomará, a receberá por mulher e exercerá para com ela a obrigação de cunhado.
6 ಆಗ ಅವಳು ಹೆರುವ ಚೊಚ್ಚಲ ಮಗನು ಸತ್ತವನಾದ ಅವನ ಸಹೋದರನ ಹೆಸರಿಗೆ ಇವನ ಹೆಸರು ಇಸ್ರಾಯೇಲಿನಲ್ಲಿಂದ ಅಳಿಸಲ್ಪಡದ ಹಾಗೆ ನಿಲ್ಲಬೇಕು.
6 O primogênito que ela lhe der será sucessor do nome do seu irmão falecido, para que o nome deste não se apague em Israel.
7 ಆದರೆ ಆ ಮನುಷ್ಯನು ತನ್ನ ಅತ್ತಿಗೆಯನ್ನು ತಕ್ಕೊಳ್ಳಲು ಮನಸ್ಸಿಲ್ಲದಿದ್ದರೆ ಅತ್ತಿಗೆಯು ಬಾಗಲಿನ ಬಳಿಗೆ ಹಿರಿಯರ ಹತ್ತಿರ ಬಂದು--ನನ್ನ ಗಂಡನ ಸಹೋದರನು ತನ್ನ ಸಹೋದರನಿಗೆ ಇಸ್ರಾಯೇಲಿನಲ್ಲಿ ಹೆಸರನ್ನು ಎಬ್ಬಿಸಲು ಮನಸ್ಸಿಲ್ಲದೆ ನನಗೆ ಗಂಡನ ಸಹೋದರನಾಗಿ ತನ್ನ ಕರ್ತವ್ಯವನ್ನು ನಡಿಸಲು ಮನಸ್ಸಿಲ್ಲದೆ ಇದ್ದಾನೆ ಎಂದು ಹೇಳಬೇಕು.
7 — Porém, se o homem não quiser se casar com a cunhada, ela irá ao portão da cidade para falar com os anciãos, e dirá: “Meu cunhado se recusa a dar continuidade ao nome de seu irmão em Israel; não quer exercer para comigo a obrigação de cunhado.”
8 ಆಗ ಪಟ್ಟಣದ ಹಿರಿಯರು ಅವನನ್ನು ಕರೆದು ಅವನ ಸಂಗಡ ಮಾತನಾಡಬೇಕು; ಅವನು--ಅವಳನ್ನು ತಕ್ಕೊಳ್ಳುವದಕ್ಕೆ ನನಗೆ ಮನಸ್ಸಿಲ್ಲ ವೆಂದು ಸಮರ್ಥಿಸಿದರೆ
8 Então os anciãos da cidade devem chamá-lo e falar com ele. Se ele persistir e disser: “Não quero casar com ela”,
9 ಅವನ ಅತ್ತಿಗೆ ಹಿರಿಯರ ಮುಂದೆ ಅವನ ಬಳಿಗೆ ಬಂದು ಕೆರವನ್ನು ಅವನ ಪಾದದಿಂದ ಬಿಡಿಸಿ ಅವನ ಮುಖದಲ್ಲಿ ಉಗುಳಿ ಉತ್ತರ ಕೊಟ್ಟು--ತನ್ನ ಸಹೋದರನ ಮನೆಯನ್ನು ಕಟ್ಟದವನಿಗೆ ಹೀಗೆಯೇ ಮಾಡಬೇಕು.
9 então a cunhada chegará perto dele, na presença dos anciãos, e lhe descalçará a sandália do pé, e lhe cuspirá no rosto, e protestará, dizendo: “Assim se fará com o homem que não quer edificar a casa de seu irmão.”
10 ಆ ಮೇಲೆ ಅವನಿಗೆ ಇಸ್ರಾಯೇಲಿನಲ್ಲಿ ಕೆರಬಿಡಿಸಿಕೊಂಡವನ ಮನೆ ಎಂದು ಹೆಸರಾಗಬೇಕು ಎಂದು ಹೇಳಬೇಕು.
10 E, em Israel, se dará à casa daquele homem o nome de “A casa do descalçado”.
11 ಇಬ್ಬರು ಮನುಷ್ಯರು ಒಬ್ಬನ ಸಂಗಡ ಒಬ್ಬನು ಹೋರಾಡುವಾಗ ಒಬ್ಬನ ಹೆಂಡತಿ ತನ್ನ ಗಂಡನನ್ನು ಹೊಡೆಯುವವನ ಕೈಯಿಂದ ಬಿಡಿಸುವದಕ್ಕೆ ಸವಿಾಪ ಬಂದು ಕೈಚಾಚಿ ಅವನ ಮಾನಸ್ಥಾನವನ್ನು ಹಿಡಿದರೆ
11 — Quando dois homens estiverem brigando, um contra o outro, e a mulher de um chegar para livrar o marido da mão daquele que o fere, e ela estender a mão, e o pegar pelo órgão genital,
12 ಅವಳ ಕೈಯನ್ನು ಕಡಿದುಹಾಕಬೇಕು; ನಿನ್ನ ಕಣ್ಣು ಕರುಣಿಸಬಾರದು.
12 vocês devem cortar a mão dela; não olhem para ela com piedade.
13 ನಿನ್ನ ಚೀಲದಲ್ಲಿ ದೊಡ್ಡದು ಒಂದು, ಸಣ್ಣದು ಒಂದು ಹೀಗೆ ವಿವಿಧ ತೂಕಗಳು ನಿನಗಿರಬಾರದು.
13 — Não levem na bolsa pesos diferentes, um grande e um pequeno.
14 ನಿನ್ನ ಮನೆಯಲ್ಲಿ ದೊಡ್ಡದು ಒಂದು, ಸಣ್ಣದು ಒಂದು ವಿವಿಧವಾದ ಅಳತೆಗಳು ನಿನಗಿರಬಾರದು.
14 Não tenham em casa dois tipos de medidas, um grande e um pequeno.
15 ಪೂರ್ಣ ನ್ಯಾಯವಾದ ತೂಕ ನಿನಗಿರಬೇಕು; ಸಂಪೂರ್ಣ ನ್ಯಾಯವಾದ ಅಳತೆ ನಿನಗಿರಬೇಕು; ಆಗ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯ ಮೇಲೆ ನಿನ್ನ ದಿನಗಳು ಹೆಚ್ಚಾಗುವವು.
15 Usem um peso integral e justo, e uma medida integral e justa; para que se prolonguem os seus dias na terra que o Senhor , seu Deus, lhes dá.
16 ಅಂಥವು ಗಳನ್ನು ಮಾಡುವವರೆಲ್ಲರೂ ಅನ್ಯಾಯಮಾಡುವವ ರೆಲ್ಲರೂ ನಿನ್ನ ದೇವರಾದ ಕರ್ತನಿಗೆ ಅಸಹ್ಯ.
16 Porque todo aquele que pratica tal injustiça é abominação ao Senhor , o Deus de vocês.
17 ನೀವು ಐಗುಪ್ತವನ್ನು ಬಿಟ್ಟು ಬರುವ ಮಾರ್ಗ ನದಲ್ಲಿ ಅಮಾಲೇಕ್ಯನು ನಿನಗೆ ಮಾಡಿದ್ದನ್ನು ಜ್ಞಾಪಕ ಮಾಡಿಕೊ.
17 — Lembrem-se do que os amalequitas fizeram no caminho, quando vocês estavam saindo do Egito.
18 ಅವನು ಮಾರ್ಗದಲ್ಲಿ ನಿನಗೆ ಎದುರು ಗೊಂಡು ದೇವರಿಗೆ ಭಯಪಡದೆ ನೀನು ಆಯಾಸವುಳ್ಳ ವನೂ ದಣಿದವನೂ ಆಗಿರುವ ಸಮಯದಲ್ಲಿ ನಿನ್ನ ಹಿಂದೆ ಬಿದ್ದ ಬಲಹೀನರೆಲ್ಲರನ್ನು ನಿನ್ನ ಹಿಂಭಾಗದಲ್ಲಿ ಸಂಹಾರಮಾಡಿದನು.
18 Eles saíram ao encontro de vocês no caminho e, quando vocês estavam abatidos e cansados, atacaram na retaguarda todos os desfalecidos que vinham atrás; e não temeram a Deus.
19 ಆದದರಿಂದ ನಿನ್ನ ದೇವರಾದ ಕರ್ತನು ನಿನಗೆ ವಶಮಾಡಿಕೊಳ್ಳುವದಕ್ಕೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಸುತ್ತಲಾಗಿರುವ ಶತ್ರುಗಳಿಂದ ನಿನ್ನ ದೇವರಾದ ಕರ್ತನು ನಿನ್ನನ್ನು ಬಿಡಿಸಿ ವಿಶ್ರಾಂತಿ ಕೊಟ್ಟ ಮೇಲೆ ಆಮಾಲೇಕ್ಯನ ಜ್ಞಾಪಕವನ್ನು ಆಕಾಶದ ಕೆಳಗಿಂದ ಅಳಿಸಿಬಿಡಬೇಕು; ಇದನ್ನು ಮರೆಯಬಾರದು.
19 Portanto, quando o Senhor , seu Deus, lhes houver dado sossego de todos os seus inimigos ao redor, na terra que o Senhor , seu Deus, lhes dá por herança, para que dela tomem posse, apaguem a memória dos amalequitas da face da terra; não se esqueçam disto.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Deuteronômio 25, comparar traduções ou montar um estudo — tudo direto pelo WhatsApp.