Deuteronômio 28

Kannada Bible (GL_KANNADA) vs VC

Sair da comparação
VC Versão Católica
1 ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಎಚ್ಚರಿಕೆಯಿಂದ ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಂಡರೆ ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಎಲ್ಲಾ ಜನಾಂಗಗಳಿಗಿಂತ ಉನ್ನತದಲ್ಲಿರಿಸುವನು.
1 Se obedeceres fielmente à voz do Senhor, teu Deus, praticando cuidadosamente todos os seus mandamentos que hoje te prescrevo, o Senhor, teu Deus, elevar-te-á acima de todas as nações da terra.
2 ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳಿದರೆ ಈ ಎಲ್ಲಾ ಆಶೀರ್ವಾದಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
2 Estas são as bênçãos que virão sobre ti, e te tocarão, se obedeceres à voz do Senhor, teu Deus.
3 ಪಟ್ಟಣದಲ್ಲಿ ನಿನಗೆ ಆಶೀರ್ವಾದ, ಹೊಲದಲ್ಲಿ ನಿನಗೆ ಆಶೀರ್ವಾದ,
3 Serás bendito na cidade e bendito nos campos.
4 ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಆಶೀರ್ವಾದ.
4 Será bendito o fruto de tuas entranhas, o fruto de teu solo, o fruto de teu gado, as crias de tuas vacas e de tuas ovelhas;
5 ನಿನ್ನ ಪುಟ್ಟಿಗೂ ಕಣಜಕ್ಕೂ ಆಶೀರ್ವಾದ.
5 benditas serão a tua cesta e a tua amassadeira.
6 ಬರುವಾಗ ನಿನಗೆ ಆಶೀರ್ವಾದ; ಹೊರಡುವಾಗ ನಿನಗೆ ಆಶೀರ್ವಾದ.
6 Serás bendito quando entrares e bendito quando saíres.
7 ನಿನಗೆ ವಿರೋಧವಾಗಿ ಏಳುವ ನಿನ್ನ ಶತ್ರುಗಳನ್ನು ಕರ್ತನು ನಿನ್ನ ಮುಂದೆ ಹೊಡೆದು ಬಿಡುವನು; ಅವರು ಒಂದೇ ಮಾರ್ಗದಲ್ಲಿ ನಿನಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ನಿನ್ನ ಮುಂದೆ ಓಡಿಹೋಗುವರು.
7 O Senhor expulsará diante de ti todos os inimigos que te atacarem. Se vierem por um caminho contra ti, fugirão por sete caminhos diante de ti.
8 ನಿನ್ನ ಕಣಜಗಳಲ್ಲಿಯೂ ನೀನು ಕೈಹಾಕುವ ಎಲ್ಲಾದರಲ್ಲಿಯೂ ನಿನಗೆ ಆಶೀರ್ವಾದ ಬರುವ ಹಾಗೆ ಕರ್ತನು ಅಪ್ಪಣೆಕೊಡುವನು; ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ಆಶೀರ್ವಾದ ಕೊಡುವನು.
8 O Senhor mandará que a bênção esteja contigo, em teus celeiros e em todas as tuas obras, e te abençoará na terra que te há de dar o Senhor, teu Deus.
9 ನೀನು ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ಕಾಪಾಡಿ ಆತನ ಮಾರ್ಗಗಳಲ್ಲಿ ನಡೆದರೆ ಕರ್ತನು ನಿನಗೆ ಪ್ರಮಾಣಮಾಡಿದ ಹಾಗೆ ನಿನ್ನನ್ನು ತನಗೆ ಪರಿಶುದ್ಧ ಜನವಾಗಿ ಸ್ಥಾಪಿಸುವನು.
9 O Senhor te confirmará como um povo consagrado a ele, como te jurou, contanto que observes suas ordens e andes pelos seus caminhos.
10 ಆಗ ನೀನು ಕರ್ತನ ಹೆಸರಿನಿಂದ ಕರೆಯಲ್ಪಡುವದನ್ನು ಭೂಮಿಯ ಜನಗಳೆಲ್ಲಾ ನೋಡಿ ನಿನಗೆ ಭಯಪಡುವರು;
10 Todos os povos da terra verão, então, que és marcado com o nome do Senhor, e temer-te-ão.
11 ಇದಲ್ಲದೆ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಆಣೆ ಇಟ್ಟ ಕರ್ತನು ಭೂಮಿಯಮೇಲೆ ನಿನ್ನನ್ನು ಸರಕುಗಳಲ್ಲಿಯೂ ಗರ್ಭದ ಫಲದಲ್ಲಿಯೂ ಪಶುಗಳ ಫಲದಲ್ಲಿಯೂ ಭೂಮಿಯ ಫಲದಲ್ಲಿಯೂ ಸಮೃದ್ಧಿ ಹೊಂದುವಂತೆ ಮಾಡುವನು.
11 O Senhor, teu Deus, cumularte-á de bens, multiplicará o fruto de tuas entranhas, o fruto de teus animais, o fruto de tua terra, na terra que jurou a teus pais dar-te.
12 ಕರ್ತನು ಆಕಾಶ ವೆಂಬ ತನ್ನ ಒಳ್ಳೆ ಉಗ್ರಾಣವನ್ನು ನಿನಗೆ ತೆರೆದು ನಿನ್ನ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು ನಿನ್ನ ಕೈಕೆಲಸವನ್ನೆಲ್ಲಾ ಆಶೀರ್ವದಿಸುವನು; ನೀನು ಸಾಲ ತಕ್ಕೊಳ್ಳದೆ ಬಹಳ ಜನಾಂಗಗಳಿಗೆ ಸಾಲ ಕೊಡುವಿ.
12 o Senhor abrirá para ti as suas preciosas reservas, os céus, para dar a seu tempo a chuva necessária à tua terra e para abençoar todo o trabalho de tuas mãos. Assim, emprestarás a muitas nações, e de nenhuma receberás emprestado.
13 ನಾನು ಈಹೊತ್ತು ನಿನಗೆ ಆಜ್ಞಾಪಿಸುವ ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ನೀನು ಕೇಳಿ ಕಾಪಾಡಿ ಕೈಕೊಂಡರೆ ಕರ್ತನು ನಿನ್ನನ್ನು ಬಾಲವನ್ನಲ್ಲ, ತಲೆಯಾಗಿ ಮಾಡುವನು; ನೀನು ಕೆಳಗಲ್ಲ, ಮೇಲೆಯೇ ಇರುವಿ.
13 O Senhor te porá à frente e não na cauda; estarás sempre no alto, jamais embaixo, contanto que obedeças às ordens do Senhor, teu Deus, que hoje te prescrevo, que as observes e as ponhas em prática,
14 ಹೀಗಿರುವದರಿಂದ ಬೇರೆ ದೇವರುಗಳನ್ನು ಹಿಂಬಾ ಲಿಸಿ ಸೇವಿಸದಂತೆ ನಾನು ಈಹೊತ್ತು ನಿನಗೆ ಆಜ್ಞಾಪಿ ಸುವ ಮಾತುಗಳನ್ನೆಲ್ಲಾ ಬಿಟ್ಟು ಎಡಕ್ಕಾದರೂ ಬಲ ಕ್ಕಾದರೂ ತೊಲಗಬಾರದು.
14 e não te desvies nem para a direita nem para a esquerda de nenhuma das prescrições que hoje te dou, para seguires a outros deuses e dar-lhes culto.
15 ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
15 Mas se não obedeceres à voz do Senhor, teu Deus, se não praticares cuidadosamente todos os seus mandamentos e todas as suas leis que hoje te prescrevo, virão sobre ti e te alcançarão todas estas maldições:
16 ಪಟ್ಟಣದಲ್ಲಿ ನಿನಗೆ ಶಾಪ; ಹೊಲದಲ್ಲಿ ನಿನಗೆ ಶಾಪ;
16 serás maldito na cidade e maldito nos campos.
17 ನಿನ್ನ ಪುಟ್ಟಿಗೂ ಕಣಜಕ್ಕೂ ಶಾಪ.
17 Serão malditas tua cesta e tua amassadeira;
18 ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಶಾಪ.
18 será maldito o fruto de tuas entranhas, o fruto do teu solo, as crias de tuas vacas e de tuas ovelhas.
19 ಬರು ವಾಗ ನಿನಗೆ ಶಾಪ; ಹೊರಡುವಾಗ ನಿನಗೆ ಶಾಪ.
19 Serás maldito quando entrares e maldito serás quando saíres.
20 ನೀನು ನನ್ನನ್ನು ಬಿಟ್ಟು ನಿನ್ನ ದುಷ್ಕ್ರಿಯೆಗಳ ಕೆಟ್ಟತ ನದ ನಿಮಿತ್ತ ನೀನು ನಾಶವಾಗುವ ವರೆಗೂ ಶೀಘ್ರ ವಾಗಿ ಕೆಟ್ಟುಹೋಗುವ ವರೆಗೂ ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಶಾಪವನ್ನೂ ಗಾಬರಿಯನ್ನೂ ಗದರಿಕೆಯನ್ನೂ ಕರ್ತನು ನಿನ್ನ ಮೇಲೆ ಕಳುಹಿಸುವನು.
20 O Senhor mandará contra ti a maldição, o pânico e a ameaça em todas as tuas empresas, até que sejas destruído e aniquilado sem demora, por causa da perversidade, de tuas ações e por me teres abandonado.
21 ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿಂದ ಹಾಳಾಗಿ ಹೋಗುವ ವರೆಗೆ ವ್ಯಾಧಿಯು ನಿನಗೆ ಅಂಟಿಕೊಳ್ಳುವಂತೆ ಕರ್ತನು ಮಾಡುವನು.
21 O Senhor mandar-te-á a peste, até que ela te tenha apagado da terra em que vais entrar para possuí-la.
22 ಕ್ಷಯರೋಗದಿಂದಲೂ ಜ್ವರದಿಂದಲೂ ಉರಿಪಾತ ದಿಂದಲೂ ಮಹಾತಾಪದಿಂದಲೂ ಕತ್ತಿಯಿಂದಲೂ ಕಾಡಿಗೆಯಿಂದಲೂ ಬಾಣಂತಿ ರೋಗದಿಂದಲೂ ಕರ್ತನು ನಿನ್ನನ್ನು ಹೊಡೆಯುವನು; ನೀನು ನಾಶ ವಾಗುವ ಪರ್ಯಂತರ ಅವು ನಿನ್ನನ್ನು ಹಿಂದಟ್ಟುವವು.
22 O Senhor te ferirá de fraqueza, febre e inflamação, febre ardente e secura, carbúnculo e mangra, flagelos que te perseguirão até que pereças.
23 ನಿನ್ನ ತಲೆಯ ಮೇಲಿರುವ ಆಕಾಶವು ತಾಮ್ರ ವಾಗಿಯೂ ನಿನ್ನ ಕೆಳಗಿರುವ ಭೂಮಿಯು ಕಬ್ಬಿಣ ವಾಗಿಯೂ ಇರುವವು.
23 o céu que está por cima da tua cabeça será de bronze, e o solo será de ferro sob os teus pés.
24 ಕರ್ತನು ನಿನ್ನ ದೇಶದ ಮಳೆಯನ್ನು ಹುಡಿಯೂ ಧೂಳೂ ಆಗುವಂತೆ ಮಾಡು ವನು; ನೀನು ನಾಶವಾಗುವ ವರೆಗೆ ಅದು ಆಕಾಶದಿಂದ ನಿನ್ನ ಮೇಲೆ ಇಳಿದು ಬರುವದು.
24 Em lugar da chuva ,necessária à tua terra, o Senhor dar-te-á pó e areia, que cairão do céu sobre ti até que pereças.
25 ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ.
25 O Senhor por-te-á em fuga diante dos teus inimigos. Se marchares contra eles por um caminho, por sete caminhos fugiras deles, e serás objeto de horror para todos os reinos da terra.
26 ನಿಮ್ಮ ಹೆಣಗಳು ಆಕಾಶದ ಎಲ್ಲಾ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗು ವವು; ಯಾರೂ ಅವುಗಳನ್ನು ಬೆದರಿಸುವದಿಲ್ಲ.
26 Teu cadáver servirá de pasto a todas as aves do céu e a todos os animais da terra, sem que ninguém os expulse.
27 ಕರ್ತನು ನಿನ್ನನ್ನು ಐಗುಪ್ತದ ಹುಣ್ಣುಗಳಿಂದಲೂ ಗಡ್ಡೆವ್ಯಾಧಿಯಿಂದಲೂ ಕಜ್ಜಿಯಿಂದಲೂ ಇಸಬಿನಿಂದ ಲೂ ನೀನು ವಾಸಿಯಾಗಕೂಡದ ಹಾಗೆ ಹೊಡೆ ಯುವನು.
27 O Senhor te ferirá da úlcera do Egito, de hemorróidas, de sarna e de dartros incuráveis.
28 ಕರ್ತನು ನಿನ್ನನ್ನು ಹುಚ್ಚುತನದಿಂದಲೂ ಕುರುಡುತನದಿಂದಲೂ ಹೃದಯದ ವಿಸ್ಮಯದಿಂದಲೂ ಹೊಡೆಯುವನು.
28 o Senhor te ferirá de loucura, de cegueira e de embotamento de espírito.
29 ಕುರುಡನು ಕತ್ತಲಲ್ಲಿ ತಡವರಿಸು ವಂತೆ ಮಧ್ಯಾಹ್ನದಲ್ಲಿ ತಡವರಿಸುತ್ತಾ ಇರುವಿ; ನಿನ್ನ ಮಾರ್ಗಗಳಲ್ಲಿ ಸಫಲವಾಗುವದಿಲ್ಲ; ನೀನು ಯಾವಾ ಗಲೂ ರಕ್ಷಿಸುವವನಿಲ್ಲದೆ ಬಲಾತ್ಕಾರವನ್ನೂ ಸುಲಿಗೆ ಯನ್ನೂ ಅನುಭವಿಸುವವನಾಗುವಿ.
29 Andarás às apalpadelas em pleno meio-dia como o cego na escuridão; fracassarás em tuas empresas e, não cessarás de ser oprimido e despojado, sem ninguém que te defenda.
30 ಹೆಂಡತಿಯನ್ನು ನಿಶ್ಚಯಿಸಿಕೊಂಡರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳುವನು; ಮನೆಯನ್ನು ಕಟ್ಟಿದರೆ ಅದರಲ್ಲಿ ವಾಸಮಾಡುವದಿಲ್ಲ; ದ್ರಾಕ್ಷೇತೋಟವನ್ನು ನೆಟ್ಟರೆ ಅದರ ಫಲವನ್ನು ಕೂಡಿಸುವದಿಲ್ಲ.
30 Receberás uma mulher, mas outro a possuirá; construirás uma casa, mas não a habitarás; plantarás uma vinha e não comerás os seus frutos.
31 ನಿನ್ನ ಎತ್ತು ನಿನ್ನ ಕಣ್ಣುಗಳ ಮುಂದೆ ಕೊಯ್ಯಲ್ಪಟ್ಟಾಗ ನೀನು ಅದರಲ್ಲಿ ತಿನ್ನುವದಿಲ್ಲ; ನಿನ್ನ ಕತ್ತೆ ನಿನ್ನ ಕಣ್ಣುಗಳ ಮುಂದೆ ಬಲಾತ್ಕಾರವಾಗಿ ಒಯ್ಯಲ್ಪಟ್ಟು ನಿನಗೆ ಮತ್ತೆ ಸಿಕ್ಕುವದಿಲ್ಲ; ನಿನ್ನ ಕುರಿಗಳು ನಿನ್ನ ಶತ್ರುವಿಗೆ ಕೊಡಲ್ಪಡುವವು; ಅವುಗಳನ್ನು ರಕ್ಷಿಸುವದಕ್ಕೆ ಯಾರೂ ಇರುವದಿಲ್ಲ.
31 O teu boi será imolado sob os teus olhos, mas tu não comerás dele; teu jumento será arrebatado em tua presença, e não te será jamais restituído; tuas ovelhas serão dadas aos teus inimigos, sem que ninguém te venha em socorro.
32 ನಿನ್ನ ಕುಮಾರ ಕುಮಾರ್ತೆಯರು ಬೇರೆ ಜನಕ್ಕೆ ಕೊಡಲ್ಪಟ್ಟಿರಲಾಗಿ ನಿನ್ನ ಕಣ್ಣುಗಳು ಅದನ್ನು ನೋಡಿ ಅವರ ನಿಮಿತ್ತ ಕ್ಷೀಣಿಸುತ್ತಾ ಇರುವಾಗ ನಿನ್ನ ಕೈಯಲ್ಲಿ ಏನೂ ತ್ರಾಣವಿಲ್ಲದೆ ಇರುವದು.
32 Teus filhos e tuas filhas serão dados a um povo estrangeiro; os teus olhos o verão e se consumirão de dor, esperando-os, mas a tua mão ficará impotente.
33 ನಿನ್ನ ಭೂಮಿಯ ಫಲವನ್ನೂ ನಿನ್ನ ಎಲ್ಲಾ ಆದಾಯವನ್ನೂ ನೀನರಿಯದ ಜನವು ತಿಂದುಬಿಡುವದು; ನೀನು ಯಾವಾ ಗಲೂ ಬಲಾತ್ಕಾರವನ್ನೂ ಸಂಕಟವನ್ನೂ ಅನುಭವಿ ಸುವಿ.
33 Os frutos de tua terra e de teu trabalho serão comidos por um povo que não conheces, e serás sem cessar oprimido e esmagado;
34 ನಿನ್ನ ಕಣ್ಣುಗಳು ನೋಡುವ ನೋಟದಿಂದ ಹುಚ್ಚನಾಗುವಿ.
34 enlouquecer-te-ás à vista de tudo o que teus olhos terão de ver.
35 ಕರ್ತನು ನಿನ್ನನ್ನು ಮೊಣಕಾಲುಗಳಲ್ಲಿಯೂ ಕಾಲು ಗಳಲ್ಲಿಯೂ ವಾಸಿಮಾಡಕೂಡದ ಕೆಟ್ಟ ಉರಿ ಹುಣ್ಣಿ ನಿಂದ ಅಂಗಾಲು ಮೊದಲುಗೊಂಡು ನೆತ್ತಿಯ ವರೆಗೆ ಹೊಡೆಯುವನು.
35 O Senhor te ferirá nos joelhos e nas coxas com uma úlcera maligna e incurável, e que se estenderá da planta dos pés ao alto da cabeça.
36 ಕರ್ತನು ನಿನ್ನನ್ನೂ ನೀನು ನಿನ್ನ ಮೇಲೆ ಇರಿಸಿಕೊಳ್ಳುವ ಅರಸನನ್ನೂ ನೀನೂ ನಿನ್ನ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗ ಮಾಡುವನು; ಅಲ್ಲಿ ಮರವೂ ಕಲ್ಲೂ ಆಗಿರುವ ಬೇರೆ ದೇವರುಗಳನ್ನು ನೀನು ಸೇವಿಸುವಿ.
36 O Senhor te levará a ti e ao teu rei que tiveres sobre ti, ao meio de um povo que nem tu nem teus pais conheceram. Ali renderás culto a outros deuses, deuses de pau e de pedra.
37 ಇದಲ್ಲದೆ ದೇವರು ನಿನ್ನನ್ನು ನಡಿಸುವ ಎಲ್ಲಾ ಜನಾಂಗಗಳಲ್ಲಿ ವಿಸ್ಮಯಕ್ಕೂ ಗಾದೆಗೂ ಹಾಸ್ಯಕ್ಕೂ ಗುರಿಯಾಗುವಿ.
37 Serás objeto de pasmo, de ludíbrio e de mofa para todos os povos no meio dos quais te conduzir o Senhor.
38 ಬಹಳ ಬೀಜವನ್ನು ಹೊಲಕ್ಕೆ ತಂದು ಸ್ವಲ್ಪ ಕೂಡಿಸುವಿ; ಯಾಕಂದರೆ ಮಿಡತೆ ಅದನ್ನು ತಿಂದು ಬಿಡುವದು.
38 Lançarás sementes em abundância nos teus campos, mas colherás pouco, porque o gafanhoto devastará tudo.
39 ದ್ರಾಕ್ಷೇತೋಟಗಳನ್ನು ನೆಟ್ಟು ಕಾಪಾ ಡುವಿ; ಆದರೆ ದ್ರಾಕ್ಷಾರಸವನ್ನು ಕುಡಿಯುವದಿಲ್ಲ. ಹಣ್ಣು ಕೂಡಿಸುವದಿಲ್ಲ; ಯಾಕಂದರೆ ಹುಳ ಅದನ್ನು ತಿಂದುಬಿಡುವದು.
39 Plantaras a vinha, e dela cuidarás, mas não beberás vinho, nem nada colherás, porque o verme devorará tudo.
40 ಎಣ್ಣೇ ಮರಗಳು ನಿನ್ನ ಎಲ್ಲಾ ಮೇರೆಗಳಲ್ಲಿ ಇರುವವು. ಆದರೆ ನೀನು ಎಣ್ಣೆ ಹಚ್ಚಿಕೊಳ್ಳುವದಿಲ್ಲ; ಯಾಕಂದರೆ ನಿನ್ನ ಎಣ್ಣೇ ಫಲಗಳು ಉದುರುವವು.
40 Terás oliveiras em tuas terras, mas não terás óleo, porque as olivas cairão.
41 ಕುಮಾರ ಕುಮಾರ್ತೆಯರನ್ನು ಪಡೆಯುವಿ; ಆದರೆ ಅವರ ಕೂಡ ಸಂತೋಷಿಸು ವದಿಲ್ಲ; ಯಾಕಂದರೆ ಅವರು ಸೆರೆಯಾಗಿ ಹೋಗು ವರು.
41 Gerarás filhos e filhas, mas não serão teus, porque irão para o cativeiro.
42 ನಿನ್ನ ಎಲ್ಲಾ ಮರಗಳನ್ನೂ ಹೊಲದ ಪೈರನ್ನೂ ಈ ಮಿಡತೆ ತಿಂದುಬಿಡುವದು.
42 O besouro consumirá todas as árvores e todos os frutos de teu solo.
43 ನಿನ್ನ ಮಧ್ಯದಲ್ಲಿರುವ ಪರವಾಸಿ ಮೇಲೆ ಮೇಲಕ್ಕೆ ನಿನ್ನ ಮೇಲೆ ಏರುವನು; ಆದರೆ ನೀನು ಕೆಳ ಕೆಳಗೆ ಇಳಿಯುವಿ.
43 O estrangeiro que vive no meio de ti elevar-se-á cada vez mais, ao passo que tu descerás na mesma medida;
44 ಅವನು ನಿನಗೆ ಸಾಲಕೊಡುವನು; ನೀನು ಅವನಿಗೆ ಸಾಲ ಕೊಡುವದಿಲ್ಲ. ಅವನು ತಲೆಯಾಗುವನು, ನೀನು ಬಾಲವಾಗುವಿ.
44 ele te emprestará, mas não tu a ele; ele estará na frente, e tu na cauda.
45 ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳದೆ ಆತನ ಆಜ್ಞೆಗಳನ್ನೂ ಆತನು ನಿನಗೆ ಆಜ್ಞಾಪಿಸಿದ ನಿಯಮಗಳನ್ನೂ ಕೈಕೊಳ್ಳದೆ ಇದ್ದದರಿಂದ ಈ ಶಾಪಗಳೆಲ್ಲಾ ನಿನ್ನ ಮೇಲೆ ಬಂದು ನಿನ್ನನ್ನು ನಾಶಮಾಡುವ ವರೆಗೂ ನಿನ್ನನ್ನು ಹಿಂದಟ್ಟಿ ನಿನಗೆ ಪ್ರಾಪ್ತವಾಗುವವು.
45 Todas estas maldições cairão sobre ti, te perseguirão e te alcançarão até que sejas exterminado, porque não ouviste a voz do Senhor, teu Deus, e não guardaste os mandamentos e as leis que ele te impôs.
46 ಅವು ನಿನ್ನ ಮೇಲೆಯೂ ನಿನ್ನ ಸಂತತಿಯ ಮೇಲೆಯೂ ನಿತ್ಯವಾಗಿ ಗುರುತೂ ಅದ್ಭುತವೂ ಆಗಿರುವವು.
46 Serão para ti e para a tua raça como um sinal e prodígio para sempre.
47 ನೀನು ಎಲ್ಲವುಗಳ ಸಮೃದ್ಧಿಯಲ್ಲಿ ನಿನ್ನ ದೇವರಾದ ಕರ್ತನಿಗೆ ಸಂತೋಷದಿಂದಲೂ ಮನಸ್ಸಿನ ಸೌಖ್ಯ ದಿಂದಲೂ ಸೇವಿಸದೆ ಇದದ್ದರಿಂದ
47 Visto que não serviste ao Senhor com alegria e bom coração, na abundância em que viveste,
48 ಹಸಿವೆಯಲ್ಲಿ, ದಾಹದಲ್ಲಿ, ಬೆತ್ತಲೆಯಲ್ಲಿ, ಎಲ್ಲವುಗಳ ಕೊರತೆಯಲ್ಲಿ ದೇವರು ನಿನ್ನ ಮೇಲೆ ಕಳುಹಿಸುವ ನಿನ್ನ ಶತ್ರುಗಳನ್ನು ಸೇವಿಸಬೇಕು; ಆತನು ನಿನ್ನನ್ನು ನಾಶಮಾಡುವ ವರೆಗೆ ಕಬ್ಬಿಣದ ನೊಗವನ್ನು ನಿನ್ನ ಕುತ್ತಿಗೆಯ ಮೇಲೆ ಹೊರಿ ಸುವನು.
48 servirás na fome, na sede, na nudez e na mais extrema miséria os inimigos quê o Senhor enviar contra ti; será posto no teu pescoço um jugo de ferro até que sejas aniquilado.
49 ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ
49 O Senhor suscitará contra ti das extremidades da terra uma nação longínqua, rápida como a águia, de uma língua bárbara,
50 ಮುದುಕರ ಮುಖದಾಕ್ಷಿಣ್ಯ ನೋಡದೆಯೂ ಚಿಕ್ಕವ ರಿಗೆ ದಯೆತೋರಿಸದೆ ಇರುವಂಥ ಕಠಿಣ ಮುಖವುಳ್ಳ ಜನಾಂಗವನ್ನೂ ನಿನ್ನ ಮೇಲೆ ಬರಮಾಡುವನು.
50 e um rosto feroz, que não terá respeito pelo velho nem piedade com o menino.
51 ಅದು ನಿನ್ನ ಪಶುಗಳ ಫಲವನ್ನೂ ನಿನ್ನ ಭೂಮಿಯ ಫಲವನ್ನೂ ನೀನು ನಾಶವಾಗುವ ವರೆಗೆ ತಿಂದು ಬಿಡುವದು; ಅದು ನಿನ್ನನ್ನು ಕೆಡಿಸುವ ವರೆಗೆ ಧಾನ್ಯ ದ್ರಾಕ್ಷಾರಸ ಎಣ್ಣೆಗಳನ್ನೂ ಪಶುಗಳ ಅಭಿವೃದ್ಧಿಯನ್ನೂ ಕುರಿಗಳ ಮಂದೆಗಳನ್ನೂ ನಿನಗೆ ಉಳಿಸದು.
51 Ela devorará o fruto de teus rebanhos e os produtos de teu solo, até que sejas aniquilado, e nada te deixará, nem trigo, nem vinho, nem óleo , nem a cria de tuas vacas, nem os filhotes de tuas ovelhas, até a tua ruína.
52 ನಿನ್ನ ದೇಶದಲ್ಲೆಲ್ಲಾ ನೀನು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿನ್ನ ಗೋಡೆಗಳೆಲ್ಲಾ ಬೀಳುವ ವರೆಗೆ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆ ಹಾಕುವದು; ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ನಿನ್ನ ದೇಶದಲ್ಲೆಲ್ಲಾ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆಹಾಕುವನು.
52 Ela te sitiará em todas as tuas cidades, até que desabem os teus mais altos e mais fortes muros, em que punhas a tua confiança, em toda a terra que te tiver dado o Senhor, teu Deus.
53 ಆಗ ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ನಿನ್ನ ಗರ್ಭದ ಫಲವನ್ನೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಕುಮಾರ ಕುಮಾರ್ತೆಯರ ಮಾಂಸವನ್ನೂ ತಿನ್ನುವಿ.
53 Comerás o fruto de tuas entranhas, a carne de teus filhos e de tuas filhas, que o Senhor, teu Deus, te tiver dado, tão grandes serão a angústia e a miséria a que te reduzirá o teu inimigo.
54 ನಿನ್ನಲ್ಲಿ ಮೃದುವಾದವನೂ ಬಹಳ ಸೂಕ್ಷ್ಮ ಗುಣವುಳ್ಳವನೂ ಯಾವನೋ ಅವನ ಕಣ್ಣು ತನ್ನ ಸಹೋದರನ ಕಡೆಗೂ ತನ್ನ ಮಗ್ಗುಲಲ್ಲಿರುವ ತನ್ನ ಹೆಂಡತಿಯ ಕಡೆಗೂ ಅವನು ಉಳಿಸಿಕೊಳ್ಳುವ ಮಕ್ಕಳ ಕಡೆಗೂ ಕಠಿಣವಾಗುವದು.
54 O homem mais delicado de Israel, o mais mimoso, olhará com maus olhos o seu irmão, a mulher que repousa no seu seio e o que lhe resta ainda de filhos,
55 ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ತನಗೆ ಸಾಕಾಗುವದಿಲ್ಲ ಅಂದುಕೊಂಡು ಅವನು ತಿನ್ನುವ ತನ್ನ ಮಕ್ಕಳ ಮಾಂಸದಲ್ಲಿ ಅವರೊಳಗೆ ಒಬ್ಬನಿಗಾದರೂ ಏನೂ ಕೊಡುವದಿಲ್ಲ.
55 não querendo repartir com nenhum deles a carne de seus filhos, da qual se alimentará ele mesmo, porque nada mais lhe restará no meio da miséria e da angústia a que te reduzirá o teu inimigo em todas as tuas cidades.
56 ನಿನ್ನಲ್ಲಿ ಮೃದುವಾದವಳೂ ಬಹಳ ಸೂಕ್ಷ್ಮಗುಣವುಳ್ಳವಳೂ ಯಾವಳೋ ಮೃದುತನ ದಿಂದಲೂ ಸೂಕ್ಷ್ಮಗುಣದಿಂದಲೂ ನೆಲಕ್ಕೆ ಅಂಗಾಲನ್ನು ನಿಲ್ಲಿಸಲಾರದವಳು ಯಾವಳೋ ಅವಳು ತನ್ನ ಮಗ್ಗುಲ ಲ್ಲಿರುವ ಗಂಡನ ಕಡೆಗೂ ತನ್ನ ಮಗನ, ಮಗಳ ಕಡೆಗೂ
56 A mulher mais delicada dentre vós, a mais mimosa, que nem sequer tentava pousar na terra a planta dos pés, por causa de sua excessiva brandura e delicadeza, olhará com maus olhos o marido que repousava no seu seio, seu filho e sua filha,
57 ತನ್ನ ಕಾಲುಗಳ ನಡುವೆಯಿಂದ ಬರುವ ಶಿಶುವಿನ ಕಡೆಗೂ ತಾನು ಹೆತ್ತಮಕ್ಕಳ ಕಡೆಗೂ ಕಠಿಣ ಕಣ್ಣುಳ್ಳವಳಾಗಿರುವಳು; ಯಾಕಂದರೆ ಎಲ್ಲಾದರ ಕೊರತೆಯಲ್ಲಿಯೂ ಮುತ್ತಿಗೆಯಲ್ಲಿಯೂ ನಿನ್ನ ಶತ್ರು ನಿನಗೆ ನಿನ್ನ ಬಾಗಲುಗಳಲ್ಲಿ ಮಾಡುವ ಇಕ್ಕಟ್ಟಿನಲ್ಲಿಯೂ ಅವರನ್ನು ಗುಪ್ತವಾಗಿ ತಿಂದು ಬಿಡುವಳು.
57 {não querendo repartir com eles} as secundinas saídas de seu ventre e o filho que ela porá no mundo; porque em sua penúria de todas as coisas, ela os te à comido ocultamente, no meio da miséria e da angústia a que te reduzirá o teu inimigo em todas as tuas cidades.
58 ನಿನ್ನ ದೇವರಾದ ಕರ್ತನೆಂಬ ಈ ಘನವುಳ್ಳ ಭಯಂಕರವಾದ ಹೆಸರಿಗೆ ಭಯಪಡಬೇಕೆಂದು ಈ ಪುಸ್ತಕದಲ್ಲಿ ಬರೆದಿರುವ ಈ ನ್ಯಾಯಪ್ರಮಾಣದ ಮಾತುಗಳನ್ನು ಕಾಪಾಡದೆ, ಕೈಕೊಳ್ಳದೆ ಹೋದರೆ
58 Se não cuidares de observar todas as palavras desta lei, consignada neste livro, em sinal de reverência pelo nome glorioso e temível de Javé, teu Deus,
59 ಕರ್ತನು ನಿನ್ನ ಬಾಧೆಗಳನ್ನೂ ನಿನ್ನ ಸಂತತಿಯ ಬಾಧೆಗಳನ್ನೂ ಆಶ್ಚರ್ಯವಾಗ ಮಾಡುವನು; ಅವು ದೊಡ್ಡದಾದ ಮತ್ತು ಸ್ಥಿರವಾದ ಬಾಧೆಗಳೂ ಘೋರ ವಾದ ಮತ್ತು ಸ್ಥಿರವಾದ ರೋಗಗಳೂ ಆಗುವವು.
59 o Senhor te ferirá, bem como a tua posteridade, com pragas extraordinárias, pragas grandes e permanentes, doenças perniciosas e pertinazes.
60 ಇದಲ್ಲದೆ ನೀನು ಹೆದರಿಕೊಂಡ ಐಗುಪ್ತದ ರೋಗ ಗಳನ್ನೆಲ್ಲಾ ಆತನು ತಿರಿಗಿ ನಿನ್ನ ಮೇಲೆ ಬರಮಾಡು ವನು; ಅವು ನಿನ್ನನ್ನು ಅಂಟಿಕೊಳ್ಳುವವು.
60 Fará voltar contra ti todas as enfermidades do Egito que temias, e elas pegarão em ti.
61 ನೀನು ಪೂರ್ಣವಾಗಿ ನಾಶವಾಗುವ ವರೆಗೆ ಈ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆಯದ ರೋಗಗಳನ್ನೂ ಬೇನೆಗಳನ್ನೂ ಕರ್ತನು ನಿನ್ನ ಮೇಲೆ ತರುವನು.
61 Além disso, o Senhor enviará contra ti, até que sejas exterminado, toda sorte de enfermidades e pragas, que não estão escritas no livro desta lei.
62 ಆಗ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ಇರುವದರಿಂದ ನೀವು ಅಸಂಖ್ಯವಾದ ಆಕಾಶದ ನಕ್ಷತ್ರಗಳ ಹಾಗಿದ್ದದ್ದಕ್ಕೆ ಬದಲಾಗಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.
62 Vós, que éreis numerosos como as estrelas do céu, sereis reduzidos a um punhado de homens, porque tu não obedeceste à voz do Senhor, teu Deus.
63 ಆಗುವದೇನಂದರೆ, ಕರ್ತನು ಹೇಗೆ ನಿಮಗೆ ಒಳ್ಳೇದನ್ನು ಮಾಡುವದಕ್ಕೂ ನಿಮ್ಮನ್ನು ಹೆಚ್ಚಿಸು ವದಕ್ಕೂ ನಿಮಗೋಸ್ಕರ ಸಂತೋಷಿಸಿದನೋ ಹಾಗೆ ಕರ್ತನು ನಿಮ್ಮನ್ನು ಕೆಡಿಸುವದಕ್ಕೂ ನಿಮ್ಮನ್ನು ನಾಶ ಮಾಡುವದಕ್ಕೂ ನಿಮಗೆ ವಿರೋಧವಾಗಿ ಸಂತೋಷಿ ಸುವನು; ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಿಂದ ನೀನು ಕೀಳಲ್ಪಡುವಿ.
63 E ,assim como o Senhor se comprazia em vos fazer bem e em vos multiplicar, assim se comprazerá em vos fazer perecer e em vos exterminar. Sereis arrancados da terra em que entrardes para possuí-la.
64 ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ.
64 O Senhor te dispersará entre todas as nações, de uma extremidade a outra da terra, e lá renderás culto a outros deuses, deuses de pau e de pedra, que nem tu nem teus pais conheceram.
65 ಈ ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು.
65 Não haverá segurança para ti no meio desses povos, nem repouso para a planta de teus pés. O Senhor te dará ali um coração agitado, olhos lânguidos e uma alma desfalecida.
66 ನಿನ್ನ ಜೀವವು ನಿನ್ನ ಮುಂದೆ ತೂಗಾಡುವದು. ರಾತ್ರಿ ಹಗಲು ನಿನ್ನ ಜೀವನಕ್ಕೆ ನಿಶ್ಚಯವಿಲ್ಲದೆ ಹೆದರುವಿ.
66 A tua vida estará como em suspenso diante de ti. Terás pavores de noite e de dia, sem nenhuma certeza de viver.
67 ನಿನ್ನ ಹೃದಯದಲ್ಲಿ ಆಗುವ ಹೆದರಿಕೆಯ ನಿಮಿತ್ತವೂ ನಿನ್ನ ಕಣ್ಣುಗಳು ನೋಡುವ ನೋಟದ ನಿಮಿತ್ತವೂ ಮುಂಜಾನೆಯಲ್ಲಿ--ಅಯ್ಯೋ, ಸಂಜೆ ಆಗ ಬೇಕು ಅನ್ನುವಿ. ಸಂಜೆಯಲ್ಲಿ--ಅಯ್ಯೋ, ಮುಂಜಾನೆ ಆಗಬೇಕು ಅನ್ನುವಿ.
67 Pela manhã dirás: oxalá que fosse a tarde! E à tarde dirás: oxalá que fosse a manhã! Isso, por causa do terror que possuirá o teu coração, e do espetáculo que terão de ver os teus olhos.
68 ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ.
68 O Senhor te reconduzirá em navios ao Egito, pelo caminho do qual eu te havia dito que não o veríeis mais. E ali, quando vós vos venderdes aos vossos inimigos como escravas e como escravas, não haverá ninguém que vos compre.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Deuteronômio 28, comparar traduções ou montar um estudo — tudo direto pelo WhatsApp.