Deuteronômio 8

Kannada Bible (GL_KANNADA) vs NVI

Sair da comparação
NVI Nova Versão Internacional
1 ನೀವು ಬದುಕಿ ಅಭಿವೃದ್ಧಿಯಾಗಿ ಕರ್ತನು ನಿಮ್ಮ ಪಿತೃಗಳಿಗೆ ಪ್ರಮಾಣಮಾಡಿದ ದೇಶಕ್ಕೆ ಹೋಗಿ ಅದನ್ನು ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ಲಕ್ಷ್ಯವಿಟ್ಟು ಕೈಕೊಳ್ಳಬೇಕು.
1 Tenham o cuidado de obedecer toda a lei que eu hoje lhes ordeno, para que vocês vivam, multipliquem-se e tomem posse da terra que o Senhor prometeu, com juramento, aos seus antepassados.
2 ನೀನು ತಗ್ಗಿಸಿಕೊಳ್ಳುವ ನಿಮಿತ್ತವೂ ಹೃದಯದಲ್ಲಿ ಇರುವದನ್ನು ಅಂದರೆ ನೀನು ಆತನ ಆಜ್ಞೆಗಳನ್ನು ಕಾಪಾಡುವಿಯೋ ಇಲ್ಲವೋ ಎಂದು ತಿಳುಕೊಳ್ಳುವ ದಕ್ಕೂ ನಿನ್ನ ದೇವರಾದ ಕರ್ತನು ನಿನ್ನನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು.
2 Lembre-se de como o Senhor, o seu Deus, os conduziu por todo o caminho no deserto, durante estes quarenta anos, para humilhá-los e pô-los à prova, a fim de conhecer suas intenções, se iriam obedecer aos seus mandamentos ou não.
3 ನಿನ್ನನ್ನು ಕುಂದಿಸಿ ಹಸಿ ಯುವಂತೆ ಆತನು ಮಾಡಿದನು. ರೊಟ್ಟಿ ಮಾತ್ರದಿಂದ ಮನುಷ್ಯನು ಬದುಕುವದಿಲ್ಲವೆಂದೂ ಕರ್ತನ ಬಾಯಿ ಯೊಳಗಿಂದ ಹೊರಡುವ ಪ್ರತಿಯೊಂದು ಮಾತಿ ನಿಂದಲೂ ಮನುಷ್ಯನು ಬದುಕುತ್ತಾನೆಂದು ನಿನಗೆ ತಿಳಿಸುವ ಹಾಗೆ ನೀನು ತಿಳಿಯದಂಥ ಮತ್ತು ನಿನ್ನ ಪಿತೃಗಳು ತಿಳಿಯದಂಥ ಮನ್ನವನ್ನು ನಿನಗೆ ಉಣ್ಣಲು ಕೊಟ್ಟನು.
3 Assim, ele os humilhou e os deixou passar fome. Mas depois os sustentou com maná, que nem vocês nem os seus antepassados conheciam, para mostrar-lhe que nem só de pão viverá o homem, mas de toda palavra que procede da boca do Senhor.
4 ಈ ನಾಲ್ವತ್ತು ವರುಷ ನಿನ್ನ ಮೇಲಿರುವ ವಸ್ತ್ರಗಳು ಹಳೆಯದಾಗಲಿಲ್ಲ; ಇಲ್ಲವೆ ನಿನ್ನ ಕಾಲುಗಳು ಬಾತುಹೋಗಲಿಲ್ಲ.
4 As roupas de vocês não se gastaram e os seus pés não incharam durante esses quarenta anos.
5 ಇದಲ್ಲದೆ ಒಬ್ಬನು ತನ್ನ ಮಗ ನನ್ನು ಶಿಕ್ಷಿಸುವ ಪ್ರಕಾರ ನಿನ್ನ ದೇವರಾದ ಕರ್ತನು ನಿನ್ನನ್ನು ಶಿಕ್ಷಿಸುತ್ತಾನೆಂದು ನಿನ್ನ ಹೃದಯದಲ್ಲಿ ತಿಳು ಕೊಳ್ಳಬೇಕು.
5 Saibam, pois, em seu coração que, assim como um homem disciplina o seu filho, da mesma forma o Senhor, o seu Deus, os disciplina.
6 ಹೀಗಿರುವದರಿಂದ ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಂಡು ಆತನ ಮಾರ್ಗಗಳಲ್ಲಿ ನಡೆದುಕೊಂಡು ಆತನಿಗೆ ಭಯಪಡಬೇಕು.
6 Obedeçam aos mandamentos do Senhor, o seu Deus, andando em seus caminhos e dele tendo temor.
7 ನಿನ್ನ ದೇವರಾದ ಕರ್ತನು ನಿನ್ನನ್ನು ಉತ್ತಮ ದೇಶಕ್ಕೆ ಬರಮಾಡುತ್ತಾನೆ; ಅದು ನೀರಿನ ಹಳ್ಳಗಳೂ ತಗ್ಗಿನಲ್ಲಿಯೂ ಬೆಟ್ಟದಲ್ಲಿಯೂ ಉಕ್ಕುವ ಬುಗ್ಗೆಗಳುಳ್ಳ ದೇಶವೇ.
7 Pois o Senhor, o seu Deus, os está levando a uma boa terra, cheia de riachos e tanques de água, de fontes que jorram nos vales e nas colinas;
8 ಗೋಧಿಯೂ ಜವೆಗೋಧಿಯೂ ದ್ರಾಕ್ಷೆಯೂ ಅಂಜೂರ ಮರಗಳೂ ದಾಳಿಂಬರಗಳೂ ಇರುವ ದೇಶವೇ; ಅದು ಹಿಪ್ಪೇ ಎಣ್ಣೆಯೂ ಜೇನೂ ಉಳ್ಳದೇಶವೇ.
8 terra de trigo e cevada, videiras e figueiras e romãzeiras, azeite de oliva e mel;
9 ನೀನು ಕೊರತೆಯಿಲ್ಲದೆ ರೊಟ್ಟಿ ತಿನ್ನುವ ಆ ದೇಶದಲ್ಲಿ ಯಾವದರ ಕೊರತೆ ನಿನಗೆ ಆಗದು; ಅದರ ಕಲ್ಲುಗಳು ಕಬ್ಬಿಣವಾಗಿಯೂ ಅದರ ಬೆಟ್ಟ ಗಳೊಳಗಿಂದ ತಾಮ್ರವನ್ನು ಅಗಿಯಬಹುದಾದದ್ದೂ ಆಗಿರುವ ದೇಶ.
9 terra onde não faltará pão e onde não terão falta de nada; terra onde as rochas têm ferro e onde você poderá escavar cobre nas colinas.
10 ನೀನು ತಿಂದು ತೃಪ್ತಿ ಹೊಂದಿದಾಗ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಉತ್ತಮ ದೇಶದಲ್ಲಿ ಆತನನ್ನು ಸ್ತುತಿಸಬೇಕು.
10 Depois que tiverem comido até ficarem satisfeitos, louvem ao Senhor, o seu Deus, pela boa terra que lhe deu.
11 ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಆಜ್ಞೆ ನ್ಯಾಯ ನಿಯಮಗಳನ್ನು ಕಾಪಾಡದವರೂ ನಿನ್ನ ದೇವರಾದ ಕರ್ತನನ್ನು ಮರೆಯದವರೂ ಆಗಬೇಡಿರಿ.
11 Tenham o cuidado de não se esquecer do Senhor, do seu Deus, deixando de obedecer aos seus mandamentos, às suas ordenanças e aos seus decretos que hoje lhes ordeno.
12 ನೀನು ತಿಂದು ತೃಪ್ತಿಹೊಂದಿದಾಗಲೂ ಒಳ್ಳೇ ಮನೆಗಳನ್ನು ಕಟ್ಟಿ ಅವುಗಳಲ್ಲಿ ವಾಸಮಾಡುವಾಗಲೂ
12 Não aconteça que, depois de terem comido até ficarem satisfeitos, de terem construído boas casas e nelas morado,
13 ನಿನ್ನ ಪಶು ಕುರಿಗಳು ಹೆಚ್ಚಿದಾಗಲೂ ಬೆಳ್ಳಿ ಬಂಗಾರ ನಿನಗೆ ಹೆಚ್ಚಿದಾಗಲೂ ನಿನಗಿರುವಂಥದ್ದೆಲ್ಲಾ ಹೆಚ್ಚಿದಾ ಗಲೂ
13 de aumentarem os seus rebanhos, a sua prata e o seu ouro, e todos os seus bens,
14 ನಿನ್ನ ಹೃದಯವು ಉಬ್ಬಿಕೊಳ್ಳದ ಹಾಗೆಯೂ ನಿನ್ನನ್ನು ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ಹೊರಗೆ ಬರಮಾಡಿದಂಥ,
14 o seu coração fique orgulhoso e vocês se esqueçam do Senhor, do seu Deus, que os tirou do Egito, da terra da escravidão.
15 ಅಗ್ನಿ ಸರ್ಪಗಳೂ ಚೇಳುಗಳೂ ಬರವೂ ಉಳ್ಳ ನೀರಿಲ್ಲದ ಆ ಮಹಾ ಭಯಂಕರವಾದ ಅರಣ್ಯದಲ್ಲಿ ನಿನ್ನನ್ನು ನಡಿಸಿದಂಥ, ಬಿಳೀಕಲ್ಲಿನ ಬಂಡೆಯೊಳಗಿಂದ ನಿನಗೆ ನೀರು ಬರ ಮಾಡಿದಂಥ,
15 Ele os conduziu pelo imenso e pavoroso deserto, por aquela terra seca e sem água, de serpentes e escorpiões venenosos. Ele tirou água da rocha para vocês,
16 ನಿನ್ನನ್ನು ಕುಂದಿಸಿ ಶೋಧಿಸಿ ಕಡೆಯಲ್ಲಿ ನಿನಗೆ ಒಳ್ಳೇದನ್ನು ಮಾಡುವಂತೆ, ನಿನ್ನ ಪಿತೃಗಳು ಅರಿಯದ ಮನ್ನವನ್ನು ಅರಣ್ಯದಲ್ಲಿ ನಿನಗೆ ತಿನ್ನಿಸಿ ದಂಥ ನಿನ್ನ ದೇವರಾದ ಕರ್ತನನ್ನು ಮರೆತು--
16 e o sustentou no deserto com maná, que os seus antepassados não conheciam, para humilhá-los e prová-los, a fim de que tudo fosse bem com vocês.
17 ನನ್ನ ಬಲವೇ ಮತ್ತು ನನ್ನ ಕೈಯ ಸಾಮರ್ಥ್ಯವೇ ನನಗೆ ಈ ಆಸ್ತಿಯನ್ನು ಸಂಪಾದಿಸಿತೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳದ ಹಾಗೆ ನೋಡಿಕೋ.
17 Não digam, pois, em seu coração: "A minha capacidade e a força das minhas mãos ajuntaram para mim toda esta riqueza".
18 ನಿನ್ನ ದೇವ ರಾದ ಕರ್ತನನ್ನು ಜ್ಞಾಪಕಮಾಡಿಕೊಳ್ಳಬೇಕು; ಈ ಹೊತ್ತು ಇರುವಂತೆ ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ತನ್ನ ಒಡಂಬಡಿಕೆಯನ್ನು ಸ್ಥಾಪಿಸುವ ಹಾಗೆ ಆಸ್ತಿಯನ್ನು ಸಂಪಾದಿಸುವ ಬಲವನ್ನು ನಿನಗೆ ಕೊಡುವಾತನು ಆತನೇ.
18 Mas, lembrem-se do Senhor, do seu Deus, pois é ele que lhes dá a capacidade de produzir riqueza, confirmando a aliança que jurou aos seus antepassados, conforme hoje se vê.
19 ನೀನು ಹೇಗಾದರೂ ನಿನ್ನ ದೇವರಾದ ಕರ್ತನನ್ನು ಮರೆತು ಬೇರೆ ದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನೀವು ನಿಶ್ಚಯವಾಗಿ ನಾಶವಾಗುವಿರೆಂದು ನಿಮಗೆ ವಿರೋಧ ವಾಗಿ ಈಹೊತ್ತು ಸಾಕ್ಷಿ ಹೇಳುತ್ತೇನೆ.
19 Mas se vocês se esquecerem do Senhor, do seu Deus, e seguirem outros deuses, prestando-lhes culto e curvando-se diante deles, asseguro-lhes hoje que vocês serão destruídos.
20 ನೀವು ನಿಮ್ಮ ದೇವರಾದ ಕರ್ತನ ಮಾತಿಗೆ ವಿಧೇಯರಾಗದ ಕಾರಣ ಕರ್ತನು ನಿಮ್ಮ ಮುಂದೆ ನಾಶಮಾಡುವ ಜನಾಂಗಗಳ ಹಾಗೆಯೇ ನೀವು ನಾಶವಾಗುವಿರಿ.
20 Por não obedecerem ao Senhor, ao seu Deus, vocês serão destruídos como o foram as outras nações que o Senhor destruiu perante vocês.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Deuteronômio 8, comparar traduções ou montar um estudo — tudo direto pelo WhatsApp.