Eclesiastes 4
Kannada Bible (GL_KANNADA) vs BKJ
BKJ BKJ
1 ಹೀಗೆ ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನಾನು ಯೋಚಿಸಿದೆನು; ಹಿಂಸಿಸಲ್ಪಟ್ಟವರ ಕಣ್ಣೀರನ್ನೂ ಅವರನ್ನು ಆದರಿಸುವವರು ಯಾರೂ ಇಲ್ಲದಿರುವ ದನ್ನೂ ನೋಡಿದೆನು; ಅವರನ್ನು ಹಿಂಸೆಪಡಿಸುವವರ ಕಡೆಗೆ ಶಕ್ತಿ ಇತ್ತು; ಆದರೆ ಇವರನ್ನು ಆದರಿಸುವವನು ಯಾವನೂ ಇಲ್ಲ.
1 Então retornei, e considerei todas as opressões que se fazem debaixo do sol; e eis que vi as lágrimas daqueles que foram oprimidos, e eles não tinham um consolador, e ao lado dos seus opressores havia poder; mas eles não tinham um consolador.
2 ಆದಕಾರಣ ಇನ್ನೂ ಜೀವ ದಿಂದಿದ್ದು ಬದುಕುವವರಿಗಿಂತ ಆಗಲೇ ಮೃತಪಟ್ಟ ಸತ್ತವರನ್ನು ನಾನು ಹೆಚ್ಚಾಗಿ ಹೊಗಳಿದೆನು.
2 Por isso eu louvei os que já morreram, mais do que os que ainda vivem.
3 ಹೌದು, ಇನ್ನೂ ಹುಟ್ಟದೆ, ಸೂರ್ಯನ ಕೆಳಗೆ ನಡೆಯುವ ಕೆಟ್ಟ ಕೃತ್ಯವನ್ನು ನೋಡದಿರುವವನೇ ಇವರಿಬ್ಬರಿ ಗಿಂತಲೂ ಶ್ರೇಷ್ಠನು.
3 Sim, melhor do que estes está aquele que ainda não existe; aquele que não viu as más obras que se fazem debaixo do sol.
4 ತಿರುಗಿ ಎಲ್ಲಾ ಪ್ರಯಾಸಕ್ಕಾಗಿಯೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕಾಗಿಯೂ ಮನುಷ್ಯನು ತನ್ನ ನೆರೆಯವನ ಮೇಲೆ ಅಸೂಯೆ ಪಡುತ್ತಾನೆಂದೂ ನಾನು ತಿಳುಕೊಂಡೆನು. ಇದೂ ಕೂಡ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
4 Novamente, considerei todo o trabalho, e toda a obra correta, pela qual um homem é invejado pelo seu próximo. Isto também é vaidade e angústia de espírito.
5 ಬುದ್ಧಿಹೀನನು ತನ್ನ ಕೈಗಳನ್ನು ಒಟ್ಟಿಗೆ ಮಡಚಿಕೊಂಡು ತನ್ನ ಸ್ವಂತ ಮಾಂಸವನ್ನು ತಿನ್ನುತ್ತಾನೆ.
5 O tolo cruza as suas mãos, e come a sua própria carne.
6 ಪ್ರಯಾಸದಿಂದಲೂ ಪ್ರಾಣಕ್ಕೆ ಆಯಾಸದಿಂದಲೂ ತುಂಬಿದ ಎರಡು ಕೈಗಳಿಂದಾದದ್ದಕಿಂತ ನೆಮ್ಮದಿಯಿಂದ ಕೂಡಿದ ಒಂದು ಕೈಯಿಂದಾದದ್ದೇ ಲೇಸು.
6 Melhor é a mão cheia de quietude do que ambas as mãos cheias com trabalho, e angústia de espírito.
7 ಆಗ ನಾನು ತಿರುಗಿಕೊಂಡು ಸೂರ್ಯನ ಕೆಳಗೆ ಇದ್ದ ವ್ಯರ್ಥವನ್ನು ಕಂಡೆನು.
7 Então retornei, e vi vaidade debaixo do sol.
8 ಎರಡನೆಯವನಿಲ್ಲದ ಒಬ್ಬೊಂಟಿಗನು ಒಬ್ಬನಿದ್ದಾನೆ; ಹೌದು, ಅವನಿಗೆ ಮಗುವಾಗಲೀ ಸಹೋದರನಾಗಲೀ ಇಲ್ಲ; ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ಅಲ್ಲದೆ ಐಶ್ವರ್ಯ ದಿಂದ ಅವನ ಕಣ್ಣು ತೃಪ್ತಿಹೊಂದದು; ಮಾತ್ರವಲ್ಲದೆ ಅವನು--ನಾನು ಯಾರಿಗೋಸ್ಕರ ಕಷ್ಟಪಟ್ಟು ಪ್ರಾಣ ವನ್ನು ಅದಕ್ಕೆ ಸುಖವಿಲ್ಲದ ಹಾಗೆ ಕೊರೆತೆಪಡಿಸು ತ್ತೇನೆ; ಎಂದು ಅವನು ಅಂದುಕೊಳ್ಳುವನು. ಇದು ಕೂಡ ವ್ಯರ್ಥವೇ; ಹೌದು, ವ್ಯಥೆಯಿಂದಾದ ಪ್ರಯಾಸವೇ.
8 Há somente um, e não há um segundo; sim ele não tem filho ou irmão; e contudo não há fim para todo o seu trabalho, e também seus olhos não se satisfazem com riqueza; e nem ele diz: Para quem eu trabalho, e privo a minha alma do que é bom? Isto também é vaidade, sim, é um trabalho doloroso.
9 ಒಬ್ಬನಿಗಿಂತ ಇಬ್ಬರು ಲೇಸು; ತಮ್ಮ ಪ್ರಯಾಸಕ್ಕೆ ಅವರಿಗೆ ಒಳ್ಳೆಯ ಪ್ರತಿಫಲವಿದೆ.
9 Melhor é serem dois do que um, porque têm melhor recompensa por seu trabalho.
10 ಒಬ್ಬನು ಬಿದ್ದರೆ ಇನ್ನೊಬ್ಬನು ತನ್ನ ಸಂಗಡಿಗನನ್ನು ಎತ್ತುವನು; ಅವನು ಒಬ್ಬೊಂಟಿಗನಾಗಿ ಬಿದ್ದರೆ ಅಯ್ಯೋ! ಅವನಿಗೆ ಸಹಾಯ ಮಾಡುವದಕ್ಕೆ ಇನ್ನೊಬ್ಬ ನಿಲ್ಲ.
10 Porque se eles caírem, um levantará o seu companheiro; mas ai do que estiver só quando cair, porquanto não haverá outro que o levante.
11 ತಿರುಗಿ ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ; ಒಬ್ಬನು ಹೇಗೆ ಬೆಚ್ಚಗಾಗಿ ರುತ್ತಾನೆ?
11 Também, se dois dormirem juntos, eles se aquecerão; porém como poderá um só se aquecer?
12 ಅವನನ್ನು ಒಬ್ಬನು ಜಯಿಸಿದರೆ ಇಬ್ಬರು ಅವನನ್ನು ಎದುರಿಸುವರು; ಮೂರು ಹುರಿಯ ಹಗ್ಗವು ಬೇಗನೆ ಕಿತ್ತುಹೋಗುವದಿಲ್ಲ.
12 E, se alguém prevalecer sobre ele, os dois lhe resistirão; e o cordão de três dobras não se quebra tão depressa.
13 ಬುದ್ಧಿಯ ಹೇಳಿಕೆಗೆ ಕಿವಿಗೊಡದ ಮುದುಕನೂ ಮೂಢನೂ ಆದ ಅರಸನಿಗಿಂತ ಬಡವನೂ ಜ್ಞಾನಿಯೂ ಆದ ಒಂದು ಮಗುವೇ ಮೇಲು.
13 Melhor é a criança pobre e sábia do que um rei velho e tolo, que não se deixa mais admoestar.
14 ಸೆರೆ ಯಿಂದ ಆಳುವದಕ್ಕಾಗಿ ಅವನು ಬರುತ್ತಾನೆ; ಇದಲ್ಲದೆ, ತನ್ನ ರಾಜ್ಯದಲ್ಲಿ ಹುಟ್ಟಿದವನು ಬಡವನಾಗುತ್ತಾನೆ.
14 Porque do cárcere ele sai para reinar; enquanto outro, que nasceu em seu reino, torna-se pobre.
15 ತನಗೆ ಪ್ರತಿಯಾಗಿ ನಿಲ್ಲುವ ಎರಡನೆಯ ಮಗು ವಿನೊಂದಿಗೆ ನಡೆಯುವ ಜೀವಿತರನ್ನೆಲ್ಲಾ ಸೂರ್ಯನ ಕೆಳಗೆ ನಾನು ನೋಡಿದೆನು.
15 Considerei todos os viventes que andam debaixo do sol com a criança, a sucessora, que ficará no seu lugar.
16 ಎಲ್ಲಾ ಜನರಿಗೂ ಅವರಿಗಿಂತ ಮುಂಚೆ ಇದ್ದ ಎಲ್ಲವುಗಳಿಗೂ ಅಂತ್ಯವಿಲ್ಲ; ಅವನ ತರುವಾಯ ಬರುವವನು ಸಹ ಅವನಲ್ಲಿ ಆನಂದಿಸುವದಿಲ್ಲ. ಖಂಡಿತವಾಗಿಯೂ ಇದೂ ಕೂಡ ವ್ಯರ್ಥವೂ ಮನಸ್ಸಿಗೆ ಆಯಾಸಕರವೂ ಆಗಿದೆ.
16 Não há um fim de todas as pessoas, até de todas que foram antes delas; tampouco os que lhe sucederem se regozijarão nele. Na verdade, isto também é vaidade e angústia de espírito.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Eclesiastes 4, comparar traduções ou montar um estudo — tudo direto pelo WhatsApp.