Ester 5
Kannada Bible (GL_KANNADA) vs NVI
NVI Nova Versão Internacional
1 1 ಮೂರನೇ ದಿನದಲ್ಲಿ ಏನಾಯಿತಂದರೆ, ಎಸ್ತೇರಳು ರಾಜ ಭೂಷಣಗಳನ್ನು ಧರಿಸಿ ಕೊಂಡು ಅರಮನೆಗೆ ಎದುರಾಗಿರುವ ಅರಸನ ಮನೆಯ ಅಂಗಳದಲ್ಲಿ ಹೋಗಿ ನಿಂತಳು. ಅರಸನು ರಾಜ ಮನೆ ಯಲ್ಲಿ ಬಾಗಲಿಗೆದುರಾಗಿ ತನ್ನ ರಾಜ ಸಿಂಹಾಸನದ ಮೇಲೆ ಕುಳಿತಿದ್ದನು.
1 Três dias depois, Ester vestiu seus trajes de rainha e colocou-se no pátio interno do palácio, em frente ao salão do rei. O rei estava no trono, de frente para a entrada.
2 ಅರಸನು ಅಂಗಳದಲ್ಲಿ ನಿಂತಿರುವ ರಾಣಿಯಾದ ಎಸ್ತೇರಳನ್ನು ಕಂಡಾಗ ಆಕೆಯು ಅವನ ಸಮ್ಮುಖದಲ್ಲಿ ದಯೆಹೊಂದಿದ್ದರಿಂದ ಅರಸನು ತನ್ನ ಕೈಯಲ್ಲಿದ್ದ ಬಂಗಾರದ ಮುದ್ರೆ ಕೋಲನ್ನು ಎಸ್ತೇರಳ ಬಳಿಗೆ ಚಾಚಿದನು. ಎಸ್ತೇರಳು ಸವಿಾಪಕ್ಕೆ ಬಂದು ಕೋಲಿನ ತುದಿಯನ್ನು ಮುಟ್ಟಿದಳು.
2 Quando viu a rainha Ester ali no pátio, teve misericórdia dela e estendeu-lhe o cetro de ouro que tinha na mão. Ester aproximou-se e tocou a ponta do cetro.
3 ಆಗ ಅರಸನು ಅವಳಿಗೆ--ರಾಣಿಯಾದ ಎಸ್ತೇರಳೇ, ನಿನಗೆ ಏನು ಬೇಕು? ನಿನ್ನ ವಿಜ್ಞಾಪನೆ ಏನು? ಅದು ರಾಜ್ಯದ ಅರ್ಧಭಾಗವಾಗಿದ್ದರೂ ನಿನಗೆ ಕೊಡಲ್ಪಡುವದ ಅಂದನು.
3 E o rei lhe perguntou: "Que há, rainha Ester? Qual é o seu pedido? Mesmo que seja a metade do reino, lhe será dado".
4 ಅದಕ್ಕೆ ಎಸ್ತೇರಳು--ಅರಸನಿಗೆ ಸಮ್ಮತಿಯಾ ದರೆ ನಾನು ಅವನಿಗೋಸ್ಕರ ಸಿದ್ಧಮಾಡಿದ ಔತಣಕ್ಕೆ ಅರಸನೂ ಹಾಮಾನನೂ ಈಹೊತ್ತು ಬರಬೇಕು ಅಂದಳು.
4 Respondeu Ester: "Se for do agrado do rei, venha com Hamã a um banquete que lhe preparei".
5 ಆಗ ಅರಸನು--ಎಸ್ತೇರಳು ಹೇಳಿದ ಪ್ರಕಾರ ಮಾಡಲು ಹಾಮಾನನನ್ನು ತ್ವರೆಪಡಿಸಿರಿ ಅಂದನು. ಎಸ್ತೇರಳು ಮಾಡಿಸಿದ ಔತಣಕ್ಕೆ ಅರಸನೂ ಹಾಮಾನನೂ ಬಂದರು.
5 Disse o rei: "Tragam Hamã imediatamente, para que ele atenda ao pedido de Ester". Então o rei e Hamã foram ao banquete que Ester havia preparado.
6 ದ್ರಾಕ್ಷಾರಸದ ಔತಣದಲ್ಲಿ ಅರಸನು ಎಸ್ತೇರಳಿಗೆ--ನೀನು ಬೇಡಿಕೊಳ್ಳುವದೇನು? ಅದು ನಿನಗೆ ಕೊಡಲ್ಪಡುವದು. ನಿನ್ನ ವಿಜ್ಞಾಪನೆ ಏನು? ಅದು ಅರ್ಧ ರಾಜ್ಯದವರೆಗೆ ಇದ್ದರೂ ಕೊಡಲ್ಪ ಡುವದು ಅಂದನು.
6 Enquanto bebiam vinho, o rei tornou a perguntar a Ester: "Qual é o seu pedido? Você será atendida. Qual o seu desejo? Mesmo que seja a metade do reino, lhe será concedido".
7 ಎಸ್ತೇರಳು ಪ್ರತ್ಯುತ್ತರ ಕೊಟ್ಟುನನ್ನ ವಿಜ್ಞಾಪನೆಯೂ ನನ್ನ ಬೇಡಿಕೆಯೂ ಏನಂದರೆ, ನಾನು ಅರಸನ ಸಮ್ಮುಖದಲ್ಲಿ ದಯೆಹೊಂದಿದ್ದರೆ,
7 E Ester respondeu: "Este é o meu pedido e o meu desejo:
8 ನನ್ನ ಬೇಡುವಿಕೆಯ ಪ್ರಕಾರ ಕೊಡಲೂ ನನ್ನ ವಿಜ್ಞಾಪನೆಯ ಪ್ರಕಾರ ಮಾಡಲೂ ಅರಸನಿಗೆ ಸಮ್ಮತಿ ಯಾದರೆ ಅರಸನಿಗೂ ಹಾಮಾನನಿಗೂ ನಾನು ಇನ್ನೂ ಮಾಡುವ ಔತಣಕ್ಕೆ ಬರಬೇಕು. ನಾಳೆ ಅರಸನು ಹೇಳಿದ ಪ್ರಕಾರ ಮಾಡುವೆನು ಅಂದಳು.
8 Se o rei tem consideração por mim, e se lhe agrada atender e conceder o meu pedido, que o rei e Hamã venham amanhã ao banquete que lhes prepararei. Então responderei à pergunta do rei".
9 ಆ ದಿನದಲ್ಲಿ ಹಾಮಾನನು ಸಂತೋಷವುಳ್ಳವ ನಾಗಿಯೂ ಆನಂದ ಹೃದಯವುಳ್ಳವನಾಗಿಯೂ ಹೊರಟುಹೋದನು. ಆದರೆ ಅರಮನೆಯ ಬಾಗಲ ಲ್ಲಿರುವ ಮೊರ್ದೆಕೈ ತನಗೆ ಕದಲದೆ ಇರುವದನ್ನು ಹಾಮಾನನು ನೋಡಿದಾಗ ಅವನು ಮೊರ್ದೆಕೈಯ ಮೇಲೆ ಕೋಪದಿಂದ ತುಂಬಿದವನಾದನು.
9 Naquele dia Hamã saiu alegre e contente. Mas, ficou furioso quando viu que Mardoqueu, que estava junto à porta do palácio real, não se levantou nem mostrou respeito em sua presença.
10 ಆದರೂ ಹಾಮಾನನು ಬಿಗಿಹಿಡುಕೊಂಡು ತನ್ನ ಮನೆಗೆ ಬಂದು ತನ್ನ ಸ್ನೇಹಿತರನ್ನೂ ತನ್ನ ಹೆಂಡತಿಯಾದ ಜೆರೆಷಳನ್ನೂ ಕರೆಕಳುಹಿಸಿದನು.
10 Hamã, porém, controlou-se e foi para casa. Reunindo seus amigos e Zeres, sua mulher,
11 ಹಾಮಾನನು ತನ್ನ ಐಶ್ವರ್ಯದ ಘನವನ್ನೂ ತನ್ನ ಮಕ್ಕಳ ಹೆಚ್ಚಳವನ್ನೂ ಅರಸನು ತನ್ನನ್ನು ಯಾವದರಲ್ಲಿ ಹೆಚ್ಚಿಸಿದ್ದಾನೋ ಅರಸನ ಪ್ರಭು ಗಳ ಮೇಲೆಯೂ ಸೇವಕರ ಮೇಲೆಯೂ ತನ್ನನ್ನು ಹೇಗೆ ಎತ್ತಿದ್ದಾನೆಂದೂ ಎಲ್ಲವನ್ನೂ ಅವರಿಗೆ ವಿವರ ವಾಗಿ ಹೇಳಿದನು.
11 Hamã vangloriou-se de sua grande riqueza, de seus muitos filhos e de como o rei o havia honrado e promovido acima de todos os outros nobres e oficiais.
12 ಇದಲ್ಲದೆ--ರಾಣಿಯಾದ ಎಸ್ತೇ ರಳು ತಾನು ಮಾಡಿಸಿದ ಔತಣಕ್ಕೆ ನನ್ನ ಹೊರತು ಅರಸನ ಸಂಗಡ ಬೇರೊಬ್ಬರನ್ನು ಕರೆಯಲಿಲ್ಲ. ನಾಳೆಗೂ ಆಕೆಯಿಂದ ನಾನು ಅರಸನ ಸಂಗಡ ಆಕೆಯ ಬಳಿಗೆ ಕರೆಯಲ್ಪಟ್ಟಿದ್ದೇನೆ.
12 E acrescentou Hamã: "Além disso, sou o único que a rainha Ester convidou para acompanhar o rei ao banquete que ela lhe ofereceu. Ela me convidou para comparecer amanhã, junto com o rei.
13 ಆದರೆ ಯೆಹೂದ್ಯನಾದ ಮೊರ್ದೆಕೈ ಅರಮನೆಯ ಬಾಗಲಲ್ಲಿ ಕುಳಿತಿರುವದನ್ನು ನಾನು ನೋಡುವ ವರೆಗೆ ಇದೆಲ್ಲಾ ನನಗೆ ಪ್ರಯೋ ಜನವಿಲ್ಲ ಅಂದನು.
13 Mas tudo isso não me dará satisfação, enquanto eu vir aquele judeu Mardoqueu sentado junto à porta do palácio real".
14 ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆಐವತ್ತು ಮೊಳ ಉದ್ದವಾದ ಒಂದು ಗಲ್ಲಿನ ಮರವು ಮಾಡಲ್ಪಡಲಿ; ಮೊರ್ದೆಕೈ ಅದರಲ್ಲಿ ಹಾಕಲ್ಪಡುವ ಹಾಗೆ ನಾಳೆ ಅರಸನ ಸಂಗಡ ಮಾತನಾಡು; ತರುವಾಯ ಅರಸನ ಸಂಗಡ ಔತಣಕ್ಕೆ ಸಂತೋಷ ವಾಗಿ ಹೋಗು ಅಂದರು. ಈ ಮಾತು ಹಾಮಾನನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಗಲ್ಲಿನ ಮರವನ್ನು ಸಿದ್ಧ ಮಾಡಿಸಿದನು.
14 Então Zeres, sua mulher, e todos os seus amigos lhe sugeriram: "Mande fazer uma forca, de mais de vinte metros de altura, e logo pela manhã peça ao rei que Mardoqueu seja enforcado nela. Assim você poderá acompanhar o rei ao jantar e alegrar-se". A sugestão agradou Hamã, e ele mandou fazer a forca.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Ester 5, comparar traduções ou montar um estudo — tudo direto pelo WhatsApp.