Êxodo 12

Kannada Bible (GL_KANNADA) vs NVI

Sair da comparação
NVI Nova Versão Internacional
1 ಕರ್ತನು ಐಗುಪ್ತದಲ್ಲಿ ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನಂದರೆ--
1 O Senhor disse a Moisés e a Arão, no Egito:
2 ಈ ತಿಂಗಳೇ ನಿಮಗೆ ಆದಿಮಾಸವಾಗಿರಬೇಕು. ಇದು ನಿಮಗೆ ವರುಷದ ಮೊದಲನೆಯ ತಿಂಗಳಾಗಿರುವದು.
2 "Este deverá ser o primeiro mês do ano para vocês.
3 ಇಸ್ರಾಯೇಲ್‌ ಸಭೆಗೆಲ್ಲಾ ನೀವು ಹೇಳಬೇಕಾದದ್ದೇ ನಂದರೆ--ಈ ತಿಂಗಳಿನ ಹತ್ತನೆಯ ದಿನದಲ್ಲಿ ಅವರು ತಮಗೆ ಒಂದೊಂದು ಕುರಿಮರಿಯನ್ನು ಅವರ ತಂದೆಗಳ ಮನೆಯ ಪ್ರಕಾರ ಮನೆಗೆ ಒಂದು ಕುರಿಮರಿಯನ್ನು ತಕ್ಕೊಳ್ಳಬೇಕು.
3 Digam a toda a comunidade de Israel que no décimo dia deste mês todo homem deverá separar um cordeiro ou um cabrito, para a sua família, um para cada casa.
4 ಒಂದು ಕುರಿಮರಿಯನ್ನು ತಿನ್ನುವದಕ್ಕೆ ಕುಟುಂಬವು ಚಿಕ್ಕದಾಗಿದ್ದರೆ ಅವನೂ ತನ್ನ ಮನೆಗೆ ಸವಿಾಪವಾಗಿರುವ ತನ್ನ ನೆರೆಯವನೂ ವ್ಯಕ್ತಿಗಳ ಲೆಕ್ಕದ ಪ್ರಕಾರ ಒಂದನ್ನು ತಕ್ಕೊಳ್ಳಲಿ; ಒಬ್ಬೊಬ್ಬನು ತಾನು ತಿನ್ನುವ ಅಳತೆಯ ಪ್ರಕಾರ ಕುರಿಮರಿಯನ್ನು ತಕ್ಕೊಳ್ಳಲಿ.
4 Se uma família for pequena demais para um animal inteiro, deve dividi-lo com seu vizinho mais próximo, conforme o número de pessoas e conforme o que cada um puder comer.
5 ನಿಮ್ಮ ಕುರಿಮರಿಯು ನಿರ್ದೋಷವಾಗಿರುವ ಒಂದು ವರುಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಮೇಕೆಗಳಿಂದಾಗಲಿ ಅದನ್ನು ತಕ್ಕೊ ಳ್ಳಬೇಕು.
5 O animal escolhido será macho de um ano, sem defeito, e pode ser cordeiro ou cabrito.
6 ಅದನ್ನು ಈ ತಿಂಗಳಿನ ಹದಿನಾಲ್ಕನೆಯ ದಿನದ ವರೆಗೆ ಇಟ್ಟುಕೊಳ್ಳಬೇಕು. ತರುವಾಯ ಸಾಯಂ ಕಾಲದಲ್ಲಿ ಇಸ್ರಾಯೇಲಿನ ಕೂಟದ ಇಡೀ ಸಭೆಯು ಅದನ್ನು ಕೊಲ್ಲಬೇಕು.
6 Guardem-no até o décimo quarto dia do mês, quando toda a comunidade de Israel irá sacrificá-lo, ao pôr-do-sol.
7 ರಕ್ತದಲ್ಲಿ ಸ್ವಲ್ಪ ತೆಗೆದು ಅವರು ಊಟ ಮಾಡುವ ಮನೆಗಳ ಎರಡು ನಿಲುವು ಗಂಬಗ ಳಿಗೂ ಬಾಗಿಲ ಮೇಲಿನ ಅಡ್ಡಗಂಬಕ್ಕೂ ಹಚ್ಚಬೇಕು.
7 Passem, então, um pouco do sangue nas laterais e nas vigas superiores das portas das casas nas quais vocês comerão o animal.
8 ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ತಿನ್ನಬೇಕು. ಬೆಂಕಿಯಲ್ಲಿ ಸುಟ್ಟು ಅದನ್ನೂ ಹುಳಿಯಿಲ್ಲದ ರೊಟ್ಟಿಗ ಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು.
8 Naquela mesma noite comerão a carne assada no fogo, juntamente com ervas amargas e pão sem fermento.
9 ಅದರಲ್ಲಿ ಯಾವದನ್ನೂ ಹಸಿಯಾದದ್ದಾಗಲಿ ನೀರಿ ನಲ್ಲಿ ಬೇಯಿಸಿದ್ದಾಗಲಿ ತಿನ್ನದೆ ಅದರ ತಲೆ ತೊಡೆ ಒಳಗಿನವುಗಳ ಸಹಿತವಾಗಿ ಬೆಂಕಿಯಲ್ಲಿ ಸುಟ್ಟೇ ಅದನ್ನು ತಿನ್ನಬೇಕು.
9 Não comam a carne crua, nem cozida em água, mas assada no fogo: cabeça, pernas e vísceras.
10 ಅದರಲ್ಲಿ ಬೆಳಗಿನ ವರೆಗೆ ಏನನ್ನೂ ಉಳಿಸಬಾರದು. ಬೆಳಗಿನ ವರೆಗೆ ಅದರಲ್ಲಿ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
10 Não deixem sobrar nada até pela manhã; caso isso aconteça, queimem o que restar.
11 ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರ ಮೆಟ್ಟಿಕೊಂಡು, ಕೋಲನ್ನು ಹಿಡಿದುಕೊಂಡು, ತ್ವರೆಯಾಗಿ ಅದನ್ನು ತಿನ್ನಬೇಕು. ಅದು ಕರ್ತನ ಪಸ್ಕವಾಗಿದೆ.
11 Ao comerem, estejam prontos para sair: cinto no lugar, sandálias nos pés e cajado na mão. Comam apressadamente. Esta é a Páscoa do Senhor.
12 ನಾನು ಈ ರಾತ್ರಿ ಐಗುಪ್ತದೇಶದಲ್ಲಿ ಹಾದುಹೋಗುತ್ತೇನೆ. ಐಗುಪ್ತದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಇರುವ ಚೊಚ್ಚ ಲಾದವುಗಳನ್ನು ಸಂಹರಿಸುವೆನು. ಐಗುಪ್ತದ ದೇವರುಗ ಳಿಗೆಲ್ಲಾ ನಾನು ನ್ಯಾಯತೀರಿಸುವೆನು; ನಾನೇ ಕರ್ತನು.
12 "Naquela mesma noite passarei pelo Egito e matarei todos os primogênitos, tanto dos homens como dos animais, e executarei juízo sobre todos os deuses do Egito. Eu sou o Senhor!
13 ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವದು. ಆ ರಕ್ತವನ್ನು ನಾನು ನೋಡುವಾಗ ನಿಮ್ಮನ್ನು ದಾಟಿಹೋಗುವೆನು. ಐಗುಪ್ತದೇಶವನ್ನು ನಾನು ಹೊಡೆಯುವ ಸಮಯದಲ್ಲಿ ನಿಮ್ಮನ್ನು ನಾಶಮಾಡುವ ಯಾವ ಬಾಧೆಯೂ ನಿಮ್ಮ ಮೇಲೆ ಬರುವದಿಲ್ಲ.
13 O sangue será um sinal para indicar as casas em que vocês estiverem; quando eu vir o sangue, passarei adiante. A praga de destruição não os atingirá quando eu ferir o Egito.
14 ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವದು; ನೀವು ಇದನ್ನು ಕರ್ತನಿಗೆ ಹಬ್ಬವಾಗಿ ತಲತಲಾಂತರ ಗಳಲ್ಲಿ ಆಚರಿಸಬೇಕು; ಇದನ್ನು ನಿತ್ಯ ಶಾಸನದಂತೆ ಎಂದೆಂದಿಗೂ ಆಚರಿಸಬೇಕು.
14 "Este dia será um memorial que vocês e todos os seus descendentes o comemorarão como festa ao Senhor. Comemorem-no como decreto perpétuo.
15 ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು.
15 Durante sete dias comam pão sem fermento. No primeiro dia tirem de casa o fermento, porque quem comer qualquer coisa fermentada, do primeiro ao sétimo dia, será eliminado de Israel.
16 ಇದಲ್ಲದೆ ಮೊದಲನೆಯ ದಿನದಲ್ಲಿ ಪರಿಶುದ್ಧ ಸಭೆಯೂ ಏಳನೆಯ ದಿನದಲ್ಲಿ ಪರಿಶುದ್ಧ ಸಭೆಯೂ ನಿಮಗೆ ಇರಬೇಕು. ಊಟಮಾಡುವದನ್ನು ಬಿಟ್ಟು ಆ ದಿನಗಳಲ್ಲಿ ಯಾವ ತರವಾದ ಕೆಲಸವನ್ನೂ ಮಾಡ ಬಾರದು.
16 Convoquem uma reunião santa no primeiro dia e outra no sétimo. Não façam nenhum trabalho nesses dias, exceto o da preparação da comida para todos. É só o que poderão fazer.
17 ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬ ವನ್ನು ಆಚರಿಸಬೇಕು. ಆ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ್ದೇನೆ; ಆದಕಾರಣ ನಿಮ್ಮ ಸಂತತಿಗಳಲ್ಲಿ ಸದಾ ಕಾಲಕ್ಕೂ ಒಂದು ಶಾಸನವಾಗಿ ಈ ದಿನವನ್ನು ನೀವು ಆಚರಿಸಬೇಕು.
17 "Celebrem a festa dos pães sem fermento, porque foi nesse mesmo dia que eu tirei os exércitos de vocês do Egito. Celebrem esse dia como decreto perpétuo por todas as suas gerações.
18 ಮೊದಲನೆಯ ತಿಂಗಳಿನಲ್ಲಿ ಅದೇ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲದಿಂದ ಆ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು.
18 No primeiro mês comam pão sem fermento, desde o entardecer do décimo quarto dia até o entardecer do vigésimo primeiro.
19 ಏಳು ದಿನಗಳ ವರೆಗೆ ಹುಳಿಹಿಟ್ಟು ನಿಮ್ಮ ಮನೆಗಳಲ್ಲಿ ಇರಬಾರದು; ಹುಳಿಕಲಸಿದ್ದನ್ನು ಯಾರು ತಿನ್ನುವರೋ ಆ ವ್ಯಕ್ತಿಯು ಪರದೇಶದವನಾಗಲಿ ಸ್ವದೇಶದವ ನಾಗಲಿ ಅವನನ್ನು ಇಸ್ರಾಯೇಲ್‌ ಸಭೆಯೊಳಗಿಂದ ತೆಗೆದು ಹಾಕಬೇಕು.
19 Durante sete dias vocês não deverão ter fermento em casa. Quem comer qualquer coisa fermentada será eliminado da comunidade de Israel, seja estrangeiro, seja natural da terra.
20 ಹುಳಿಕಲಸಿದ್ದು ಯಾವದೇ ಆಗಿರಲಿ ನೀವು ತಿನ್ನಬಾರದು; ನಿಮ್ಮ ಎಲ್ಲಾ ನಿವಾಸ ಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು ಎಂದು ಹೇಳಿದನು.
20 Não comam nada fermentado. Onde quer que morarem, comam apenas pão sem fermento".
21 ಆಗ ಮೋಶೆಯು ಇಸ್ರಾಯೇಲಿನ ಎಲ್ಲಾ ಹಿರಿಯ ರನ್ನು ಕರೆದು ಅವರಿಗೆ--ನಿಮ್ಮ ಗೋತ್ರಗಳ ಪ್ರಕಾರ ಕುರಿಗಳನ್ನು ತೆಗೆದುಕೊಂಡು ಪಸ್ಕವನ್ನು (ಕುರಿಯನ್ನು) ಕೊಯ್ಯಿರಿ.
21 Então Moisés convocou todas as autoridades de Israel e lhes disse: "Escolham um cordeiro ou um cabrito para cada família. Sacrifiquem-no para celebrar a Páscoa!
22 ಹಿಸ್ಸೋಪಿನ ಕಟ್ಟನ್ನು ತೆಗೆದುಕೊಂಡು ಬೋಗುಣಿಯಲ್ಲಿರುವ ರಕ್ತದಲ್ಲಿ ಅದನ್ನು ಅದ್ದಿ ಬಾಗಿ ಲಿನ ಮೇಲಿನ ಅಡ್ಡಗಂಬಕ್ಕೂ ಪಕ್ಕದಲ್ಲಿರುವ ಎರಡು ನಿಲುವುಗಂಬಗಳಿಗೂ ಹಚ್ಚಿರಿ. ನಿಮ್ಮಲ್ಲಿ ಯಾರೂ ಬೆಳಗಾಗುವ ವರೆಗೆ ಮನೆಯ ಬಾಗಿಲನ್ನು ಬಿಟ್ಟು ಹೋಗಬಾರದು.
22 Molhem um feixe de hissopo no sangue que estiver na bacia e passem o sangue na viga superior e nas laterais das portas. Nenhum de vocês poderá sair de casa até o amanhecer.
23 ಕರ್ತನು ಐಗುಪ್ತ್ಯರನ್ನು ಸಂಹರಿ ಸುವದಕ್ಕಾಗಿ ಹಾದುಹೋಗುವನು; ಆತನು ಮೇಲಿನ ಅಡ್ಡಗಂಬದ ಮೇಲೂ ಪಕ್ಕದ ಎರಡು ನಿಲುವು ಕಂಬಗಳ ಮೇಲೂ ರಕ್ತವನ್ನು ನೋಡಿದಾಗ ಸಂಹಾರಕನು ನಿಮ್ಮ ಮನೆಗಳೊಳಗೆ ಬಂದು ನಿಮ್ಮನ್ನು ಸಂಹಾರಮಾಡ ದಂತೆ ನಿಮ್ಮ ಬಾಗಿಲುಗಳನ್ನು ದಾಟಿ ಹೋಗುವನು.
23 Quando o Senhor passar pela terra para matar os egípcios, verá o sangue na viga superior e nas laterais da porta e passará sobre aquela porta; e não permitirá que o destruidor entre na casa de vocês para matá-los.
24 ಇದನ್ನು ಒಂದು ಶಾಸನವಾಗಿ ನೀವೂ ನಿಮ್ಮ ಕುಮಾರರೂ ಸದಾಕಾಲಕ್ಕೂ ಇದನ್ನು ಆಚರಿಸತಕ್ಕದ್ದು.
24 "Obedeçam a estas instruções como decreto perpétuo para vocês e para os seus descendentes.
25 ಕರ್ತನು ಕೊಡುವೆನೆಂದು ಪ್ರಮಾಣಮಾಡಿದ ದೇಶಕ್ಕೆ ನೀವು ಬಂದಾಗ ಈ ಆಚರಣೆಯನ್ನು ನೀವು ಕೈಕೊಳ್ಳಬೇಕು.
25 Quando entrarem na terra que o Senhor prometeu lhes dar, celebrem essa cerimônia.
26 ನಿಮ್ಮ ಮಕ್ಕಳು ಈ ಆಚಾರದ ಅರ್ಥವೇನು ಎಂದು ಕೇಳಿದಾಗ
26 Quando os seus filhos lhes perguntarem: ‘O que significa esta cerimônia? ’,
27 ನೀವು ಅವ ರಿಗೆ--ಕರ್ತನು ಐಗುಪ್ತದೇಶದಲ್ಲಿ ಐಗುಪ್ತ್ಯರನ್ನು ಸಂಹರಿಸಿ ನಮ್ಮ ಮನೆಗಳನ್ನು ಕಾಪಾಡುವದಕ್ಕಾಗಿ ಇಸ್ರಾಯೇಲ್‌ ಮಕ್ಕಳ ಮನೆಗಳನ್ನು ದಾಟಿಹೋದ ಕರ್ತನ ಪಸ್ಕವೇ ಇದು ಎಂದು ನೀವು ಹೇಳಬೇಕು ಅಂದನು. ಆಗ ಜನರು ತಲೆಬಾಗಿಸಿ ಆರಾಧಿಸಿದರು.
27 respondam-lhes: É o sacrifício da Páscoa ao Senhor, que passou sobre as casas dos israelitas no Egito e poupou nossas casas quando matou os egípcios". Então o povo curvou-se em adoração.
28 ಇಸ್ರಾಯೇಲ್‌ ಮಕ್ಕಳು ಹೊರಟುಹೋಗಿ ಕರ್ತನು ಮೋಶೆ ಆರೋನರಿಗೆ ಆಜ್ಞಾಪಿಸಿದ ಮೇರೆಗೆ ಅವರು ಮಾಡಿದರು.
28 Depois os israelitas se retiraram e fizeram conforme o Senhor tinha ordenado a Moisés e a Arão.
29 ಮಧ್ಯರಾತ್ರಿಯಲ್ಲಿ ನಡೆದದ್ದೇನಂದರೆ, ಸಿಂಹಾ ಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನ ವರೆಗೂ ಅಂದರೆ ಐಗುಪ್ತದೇಶ ದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಕರ್ತನು ಸಂಹರಿಸಿದನು.
29 Então, à meia-noite, o Senhor matou todos os primogênitos do Egito, desde o filho mais velho do faraó, herdeiro do trono, até o filho mais velho do prisioneiro que estava no calabouço, e também todas as primeiras crias do gado.
30 ಆಗ ಫರೋಹನೂ ಅವನ ಎಲ್ಲಾ ಸೇವಕರೂ ಎಲ್ಲಾ ಐಗುಪ್ತ್ಯರೂ ರಾತ್ರಿಯಲ್ಲಿ ಎದ್ದರು. ಆಗ ಐಗುಪ್ತದಲ್ಲಿ ದೊಡ್ಡ ಗೋಳಾಟವಾಯಿತು. ಅಲ್ಲಿ ಸತ್ತವರಿಲ್ಲದ ಒಂದು ಮನೆಯಾದರೂ ಇರಲಿಲ್ಲ.
30 No meio da noite o faraó, todos os seus conselheiros e todos os egípcios se levantaram. E houve grande pranto no Egito, pois não havia casa que não houvesse um morto.
31 ಫರೋಹನು ರಾತ್ರಿಯಲ್ಲಿ ಮೋಶೆ ಆರೋನರನ್ನು ಕರೆಯಿಸಿ ಅವರಿಗೆ--ನೀವು ಎದ್ದು ನನ್ನ ಜನರೊ ಳಗಿಂದ ಹೊರಟು ಹೋಗಿರಿ; ನೀವು ಹೇಳಿದ ಹಾಗೆಯೇ ಕರ್ತನನ್ನು ಸೇವಿಸುವದಕ್ಕೆ ನೀವೂ ಇಸ್ರಾಯೇಲ್‌ ಮಕ್ಕಳೂ ಹೋಗಿಬಿಡಿರಿ.
31 Naquela mesma noite o faraó mandou chamar Moisés e Arão e lhes disse: "Saiam imediatamente do meio do meu povo, vocês e os israelitas! Vão prestar culto ao Senhor, como vocês pediram.
32 ನೀವು ಹೇಳಿದಂತೆ ನಿಮ್ಮ ಕುರಿದನಗಳನ್ನು ತೆಗೆದುಕೊಳ್ಳಿರಿ. ನನ್ನನ್ನು ಸಹ ಆಶೀರ್ವದಿಸಿರಿ ಅಂದನು.
32 Levem os seus rebanhos, como tinham dito, e abençoem a mim também".
33 ಇದಲ್ಲದೆ ಐಗುಪ್ತ್ಯರು--ನಾವೆಲ್ಲರೂ ಸಾಯುತ್ತೇವೆಂದು ಹೇಳಿ ಅವರನ್ನು ತ್ವರೆಯಾಗಿ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ಜನರನ್ನು ಒತ್ತಾಯ ಮಾಡಿದರು.
33 Os egípcios pressionavam o povo para que se apressasse em sair do país, dizendo: "Todos nós morreremos! "
34 ಆದದರಿಂದ ಜನರು ಹಿಟ್ಟಿಗೆ ಹುಳಿ ಹಾಕುವದಕ್ಕಿಂತ ಮುಂಚೆ ಅದನ್ನು ಅಡಿಗೆ ಮಾಡುವ ಪಾತ್ರೆಗಳ ಸಂಗಡ ಬಟ್ಟೆಗಳಲ್ಲಿ ಕಟ್ಟಿ ಹೆಗಲಿನ ಮೇಲೆ ಹೊತ್ತುಕೊಂಡು ಹೋದರು.
34 Então o povo tomou a massa de pão ainda sem fermento e a carregou nos ombros, nas amassadeiras embrulhadas em suas roupas.
35 ಮೋಶೆಯು ಹೇಳಿದಂತೆ ಇಸ್ರಾ ಯೇಲ್‌ ಮಕ್ಕಳು ಮಾಡಿ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಐಗುಪ್ತ್ಯರಿಂದ ಕೇಳಿ ಪಡೆದರು.
35 Os israelitas obedeceram à ordem de Moisés e pediram aos egípcios objetos de prata e de ouro, bem como roupas.
36 ಕರ್ತನು ಐಗುಪ್ತ್ಯರ ಎದುರಿನಲ್ಲಿ ಜನರ ಮೇಲೆ ಕೃಪೆ ತೋರಿಸಿದ್ದರಿಂದ ಅವರು ಕೇಳಿದ್ದನ್ನು ಕೊಟ್ಟರು. ಹೀಗೆ ಅವರು ಐಗುಪ್ತ್ಯರನ್ನು ಸುಲು ಕೊಂಡರು.
36 O Senhor concedeu ao povo uma disposição favorável da parte dos egípcios, de modo que lhes davam o que pediam; assim eles despojaram os egípcios.
37 ಆಗ ಇಸ್ರಾಯೇಲ್ಯರಲ್ಲಿ ಮಕ್ಕಳಲ್ಲದೆ ಗಂಡಸರು ಮಾತ್ರ ಆರು ಲಕ್ಷ ಕಾಲು ನಡಿಗೆಯಾಗಿ ರಮ್ಸೇಸನ್ನು ಬಿಟ್ಟು ಸುಕ್ಕೋತಿಗೆ ಪ್ರಯಾಣ ಮಾಡಿದರು.
37 Os israelitas foram de Ramessés até Sucote. Havia cerca de seiscentos mil homens a pé, além de mulheres e crianças.
38 ಬೆರೆತಿದ್ದ ಜನಸಮೂಹವೂ ಕುರಿದನಗಳ ಬಹು ದೊಡ್ಡ ಹಿಂಡೂ ಅವರ ಸಂಗಡ ಹೋದವು.
38 Grande multidão de estrangeiros de todo tipo seguiu com eles, além de grandes rebanhos, tanto de bois como de ovelhas e cabras.
39 ಆಗ ಅವರು ಐಗುಪ್ತದಿಂದ ತಂದಿದ್ದ ನಾದಿದ ಹಿಟ್ಟು ಇನ್ನೂ ಹುಳಿ ಯಾಗದ ಕಾರಣ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿ ಗಳನ್ನು ಮಾಡಿದರು; ಯಾಕಂದರೆ ಅವರನ್ನು ಅಲ್ಲಿ ನಿಲ್ಲಗೊಡದೆ ಐಗುಪ್ತದಿಂದ ಓಡಿಸಿಬಿಟ್ಟಿದ್ದರು. ಅವರು ತಮಗಾಗಿ ಯಾವ ಆಹಾರವನ್ನು ಸಿದ್ಧಪಡಿಸಿಕೊಂಡಿ ರಲಿಲ್ಲ.
39 Com a massa que haviam trazido do Egito, fizeram pães sem fermento. A massa não tinha fermentado, pois eles foram expulsos do Egito e não tiveram tempo de preparar comida.
40 ಇಸ್ರಾಯೇಲ್‌ ಮಕ್ಕಳು ಐಗುಪ್ತದಲ್ಲಿ ಪ್ರವಾ ಸವಾಗಿ ವಾಸಮಾಡಿದ್ದ ಕಾಲವು ನಾನೂರ ಮೂವತ್ತು ವರುಷಗಳಾಗಿದ್ದವು.
40 Ora, o período que os israelitas viveram no Egito foi de quatrocentos e trinta anos.
41 ನಾನೂರ ಮೂವತ್ತು ವರುಷ ಗಳು ತೀರಿದ ತರುವಾಯ ಅದೇ ದಿನದಲ್ಲಿ ಕರ್ತನ ಸೈನ್ಯಗಳೆಲ್ಲಾ ಐಗುಪ್ತದೇಶವನ್ನು ಬಿಟ್ಟು ಹೊರಗೆ ಹೋದವು.
41 No dia quando se completaram os quatrocentos e trinta anos, todos os exércitos do Senhor saíram do Egito.
42 ಆತನು ಐಗುಪ್ತದೇಶದಿಂದ ಅವರನ್ನು ಹೊರಗೆ ತಂದ ಕಾರಣ ಇದು ಕರ್ತನಿಗೆ ಆಚರಿಸ ಬೇಕಾದ ರಾತ್ರಿಯಾಗಿತ್ತು. ಇಸ್ರಾಯೇಲ್‌ ಮಕ್ಕಳೆ ಲ್ಲರೂ ತಮ್ಮ ಸಂತತಿಗಳಲ್ಲಿ ಕರ್ತನಿಗೆ ಆಚರಿಸ ಬೇಕಾದ ರಾತ್ರಿಯು ಇದೇ.
42 Assim como o Senhor passou em vigília aquela noite para tirar do Egito os israelitas, estes também devem passar em vigília essa mesma noite, para honrar ao Senhor, por todas as suas gerações.
43 ಕರ್ತನು ಮೋಶೆ ಆರೋನರಿಗೆ--ಪಸ್ಕದ ಶಾಸನವು ಇದೇ: ಅನ್ಯರಲ್ಲಿ ಯಾರೂ ಅದನ್ನು ತಿನ್ನ ಬಾರದು.
43 Disse o Senhor a Moisés e a Arão: "Estas são as leis da Páscoa: Nenhum estrangeiro poderá comê-la.
44 ಆದರೆ ಹಣಕ್ಕೆ ತೆಗೆದುಕೊಂಡ ಪ್ರತಿ ಯೊಬ್ಬನ ಸೇವಕನನ್ನು ನೀನು ಸುನ್ನತಿಮಾಡಿಸಿದ ತರುವಾಯ ಅವನು ಅದನ್ನು ತಿನ್ನಬಹುದು.
44 O escravo comprado poderá comer da Páscoa, depois de circuncidado,
45 ಪರ ದೇಶದವರೂ ಕೂಲಿಯವರೂ ಅದನ್ನು ತಿನ್ನಬಾರದು.
45 mas o residente temporário e o trabalhador contratado dela não comerão.
46 ಒಂದೇ ಮನೆಯಲ್ಲಿ ಅದನ್ನು ತಿನ್ನಬೇಕು. ಆ ಮಾಂಸ ದಲ್ಲಿ ಸ್ವಲ್ಪ ಅಂಶವನ್ನಾದರೂ ಮನೆಯ ಹೊರಗೆ ತೆಗೆದುಕೊಂಡು ಹೋಗಬಾರದು. ಪಶುವಿನ ಒಂದು ಎಲುಬಾದರೂ ಮುರಿಯಬಾರದು.
46 "Vocês a comerão numa só casa; não levem nenhum pedaço de carne para fora da casa, nem quebrem nenhum dos ossos.
47 ಇಸ್ರಾಯೇಲಿನ ಸಭೆಯೆಲ್ಲಾ ಇದನ್ನು ಆಚರಿಸಬೇಕು.
47 Toda a comunidade de Israel terá que celebrar a Páscoa.
48 ನಿನ್ನ ಜೊತೆ ಯಲ್ಲಿ ಪ್ರವಾಸಮಾಡಿದ ಅನ್ಯನು ಕರ್ತನಿಗೆ ಪಸ್ಕವನ್ನು ಆಚರಿಸಬೇಕೆಂದಿದ್ದರೆ ಅವನ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಳ್ಳಲಿ; ತರುವಾಯ ಅವನು ಅದನ್ನು ಆಚರಿಸುವದಕ್ಕೆ ಸವಿಾಪ ಬರಲಿ; ಅಂಥವನು ಸ್ವದೇಶ ದಲ್ಲಿ ಹುಟ್ಟಿದವನಂತೆ ಇರುವನು. ಆದರೆ ಸುನ್ನತಿ ಮಾಡಿಸಿಕೊಳ್ಳದ ಒಬ್ಬನಾದರೂ ಅದನ್ನು ತಿನ್ನಬಾರದು.
48 "Qualquer estrangeiro residente entre vocês que quiser celebrar a Páscoa do Senhor terá que circuncidar todos os do sexo masculino da sua família; então poderá participar como o natural da terra. Nenhum incircunciso poderá participar.
49 ಮನೆಯಲ್ಲಿ ಹುಟ್ಟಿದವನಿಗೂ ನಿಮ್ಮಲ್ಲಿ ಪ್ರವಾಸಿ ಯಾಗಿರುವ ಅನ್ಯನಿಗೂ ಒಂದೇ ನ್ಯಾಯಪ್ರಮಾಣ ವಿರಬೇಕು ಎಂದು ಹೇಳಿದನು.
49 A mesma lei se aplicará ao natural da terra e ao estrangeiro residente".
50 ಕರ್ತನು ಮೋಶೆ ಆರೋನರಿಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್‌ ಮಕ್ಕಳೆಲ್ಲಾ ಮಾಡಿದರು.
50 Todos os israelitas fizeram como o Senhor tinha ordenado a Moisés e a Arão.
51 ಅದೇ ದಿನದಲ್ಲಿ ಕರ್ತನು ಇಸ್ರಾಯೇಲ್‌ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೇಶದೊಳಗಿಂದ ಹೊರಗೆ ತಂದನು.
51 No mesmo dia o Senhor tirou os israelitas do Egito, organizados segundo as suas divisões.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Êxodo 12, comparar traduções ou montar um estudo — tudo direto pelo WhatsApp.