Êxodo 14

Kannada Bible (GL_KANNADA) vs NVI

Sair da comparação
NVI Nova Versão Internacional
1 ಕರ್ತನು ಮಾತನಾಡಿ ಮೋಶೆಗೆ--
1 Disse o Senhor a Moisés:
2 ಇಸ್ರಾಯೇಲ್‌ ಮಕ್ಕಳು ತಿರುಗಿಕೊಂಡು ಪೀಹಹೀರೋತಿಗೆ ಎದುರಾಗಿ ಮಿಗ್ದೋಲಿಗೂ ಸಮುದ್ರಕ್ಕೂ ಮಧ್ಯದಲ್ಲಿ ಬಾಳ್ಚೆಫೋನಿಗೆ ಎದುರಾಗಿ ಇಳುಕೊಳ್ಳಬೇಕೆಂದು ಅವರಿಗೆ ಹೇಳು. ಅದಕ್ಕೆ ಎದುರಾಗಿ ನೀವು ಸಮುದ್ರದ ತೀರದಲ್ಲಿ ಇಳುಕೊಳ್ಳ ಬೇಕು.
2 "Diga aos israelitas que mudem o rumo e acampem perto de Pi-Hairote, entre Migdol e o mar. Acampem à beira-mar, defronte de Baal-Zefom.
3 ಫರೋಹನು ಇಸ್ರಾಯೇಲ್‌ ಮಕ್ಕಳ ವಿಷಯದಲ್ಲಿ--ಅವರು ದೇಶದಲ್ಲಿ ಸಿಕ್ಕಿಕೊಂಡರು. ಅರಣ್ಯವು ಅವರನ್ನು ಒಳಗೆ ಮುಚ್ಚಿಬಿಟ್ಟಿತು ಎಂದು ಹೇಳುವನು.
3 O faraó pensará que os israelitas estão vagando confusos, cercados pelo deserto.
4 ಇದಲ್ಲದೆ ಫರೋಹನು ಅವರನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು; ಫರೋಹನಲ್ಲಿಯೂ ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು; ಆಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿಯುವರು ಎಂದು ಹೇಳಿದನು. ಅವರು ಹಾಗೆಯೇ ಮಾಡಿದರು.
4 Então endurecerei o coração do faraó, e ele os perseguirá. Todavia, eu serei glorificado por meio do faraó e de todo o seu exército; e os egípcios saberão que eu sou o Senhor". E assim fizeram os israelitas.
5 ಜನರು ಓಡಿಹೋದರೆಂದು ಐಗುಪ್ತದ ಅರಸನಿಗೆ ತಿಳಿಸಲ್ಪಟ್ಟಿತು; ಆಗ ಫರೋಹನ ಮತ್ತು ಅವನ ಸೇವಕರ ಹೃದಯವು ಜನರಿಗೆ ವಿರೋಧವಾಗಿ ತಿರುಗಿಕೊಂಡಿತು; ಅವರು--ಇಸ್ರಾಯೇಲ್ಯರು ನಮ್ಮ ಸೇವೆಮಾಡುವದನ್ನು ಬಿಟ್ಟುಹೋಗಿಬಿಡುವಂತೆ ನಾವು ಯಾಕೆ ಮಾಡಿದೆವು ಅಂದರು.
5 Contaram ao rei do Egito que o povo havia fugido. Então o faraó e os seus conselheiros mudaram de idéia e disseram: "O que foi que fizemos? Deixamos os israelitas saírem e perdemos os nossos escravos! "
6 ಆಗ ಅವನು ತನ್ನ ರಥವನ್ನು ಸಿದ್ಧಮಾಡಿ ಕೊಂಡು ತನ್ನ ಜನರೊಂದಿಗೆ ಹೊರಟನು.
6 Então o faraó mandou aprontar a sua carruagem, e levou consigo o seu exército.
7 ಇದಲ್ಲದೆ ಅವನು ಆರಿಸಿಕೊಂಡ ಆರು ನೂರು ರಥಗಳನ್ನೂ ಐಗುಪ್ತದ ಎಲ್ಲಾ ರಥಗಳನ್ನೂ ಅವುಗಳ ಮೇಲೆ ಅಧಿ ಪತಿಗಳನ್ನೂ ತೆಗೆದುಕೊಂಡು ಹೋದನು.
7 Levou todos os carros de guerra do Egito, inclusive seiscentos dos melhores desses carros, cada um com um oficial no seu comando.
8 ಐಗುಪ್ತದ ಅರಸನಾದ ಫರೋಹನ ಹೃದಯವನ್ನು ಕರ್ತನು ಕಠಿಣ ಮಾಡಿದ್ದರಿಂದ ಅವನು ಇಸ್ರಾಯೇಲ್‌ ಮಕ್ಕಳನ್ನು ಹಿಂದಟ್ಟಿದನು. ಆದರೆ ಇಸ್ರಾಯೇಲ್‌ ಮಕ್ಕಳು ಧೈರ್ಯ ದಿಂದ ಹೊರಗೆ ಹೋದರು.
8 O Senhor endureceu o coração do faraó, rei do Egito, e este perseguiu os israelitas, que marchavam triunfantemente.
9 ಐಗುಪ್ತ್ಯರು ಅವರನ್ನು ಹಿಂದಟ್ಟಿದ್ದರು; ಅವರು ಸಮುದ್ರ ತೀರದಲ್ಲಿ ಇಳು ಕೊಂಡಿರುವಾಗ ಫರೋಹನ ಎಲ್ಲಾ ಕುದುರೆಗಳೂ ರಥಗಳೂ ಕುದುರೆ ಸವಾರರೂ ಅವನ ಸೈನ್ಯವೂ ಪೀಹಹೀರೋತಿನ ಸವಿಾಪದಲ್ಲಿ ಬಾಳ್ಚೆಫೋನಿನ ಎದುರಾಗಿ ಸವಿಾಪಿಸಿದರು.
9 Os egípcios, com todos os cavalos e carros de guerra do faraó, os cavaleiros e a infantaria, saíram em perseguição aos israelitas e os alcançaram quando estavam acampados à beira-mar, perto de Pi-Hairote, defronte de Baal-Zefom.
10 ಫರೋಹನು ಸವಿಾಪಕ್ಕೆ ಬರುತ್ತಿರಲು ಇಗೋ, ಇಸ್ರಾಯೇಲ್‌ ಮಕ್ಕಳು ತಮ್ಮ ಕಣ್ಣುಗಳನ್ನೆತ್ತಿ ಹಿಂದೆ ಬರುತ್ತಿರುವ ಐಗುಪ್ತ್ಯರನ್ನು ಕಂಡು ಇಸ್ರಾಯೇಲ್‌ ಮಕ್ಕಳು ಬಹಳವಾಗಿ ಭಯಪಟ್ಟು ಕರ್ತನಿಗೆ ಮೊರೆಯಿ ಟ್ಟರು.
10 Ao aproximar-se o faraó, os israelitas olharam e avistaram os egípcios que marchavam na direção deles. E, aterrorizados, clamaram ao Senhor.
11 ಅವರು ಮೋಶೆಗೆ--ಐಗುಪ್ತದಲ್ಲಿ ಸಮಾಧಿ ಗಳು ಇಲ್ಲದ ಕಾರಣ ನಾವು ಅರಣ್ಯದಲ್ಲಿ ಸಾಯುವ ಹಾಗೆ ನಮ್ಮನ್ನು ಕರಕೊಂಡು ಬಂದಿಯೋ? ಯಾಕೆ ನೀನು ಈ ಪ್ರಕಾರ ನಮಗೆ ಮಾಡಿ ನಮ್ಮನ್ನು ಐಗುಪ್ತ ದಿಂದ ಕರಕೊಂಡು ಬಂದಿ?
11 Disseram a Moisés: "Foi por falta de túmulos no Egito que você nos trouxe para morrermos no deserto? O que você fez conosco, tirando-nos de lá?
12 ನಾವು ಐಗುಪ್ತದೇಶ ದಲ್ಲಿದ್ದಾಗಲೇ--ನೀನು ನಮ್ಮ ಗೊಡವೆಗೆ ಬರಬೇಡ; ನಾವು ಐಗುಪ್ತ್ಯರಿಗೆ ಸೇವೆಮಾಡುವೆವು. ನಾವು ಅರಣ್ಯ ದಲ್ಲಿ ಸಾಯುವದಕ್ಕಿಂತ ಐಗುಪ್ತ್ಯರಿಗೆ ಸೇವೆ ಮಾಡು ವದು ಒಳ್ಳೇದಾಗಿತ್ತಲ್ಲವೇ ಎಂದು ಹೇಳಿದರು.
12 Já não lhe tínhamos dito no Egito: Deixe-nos em paz! Seremos escravos dos egípcios! Antes ser escravos dos egípcios do que morrer no deserto! "
13 ಅದಕ್ಕೆ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ.
13 Moisés respondeu ao povo: "Não tenham medo. Fiquem firmes e vejam o livramento que o Senhor lhes trará hoje, porque vocês nunca mais verão os egípcios que hoje vêem.
14 ಕರ್ತನು ನಿಮ ಗೋಸ್ಕರ ಯುದ್ಧಮಾಡುವನು; ಆದರೆ ನೀವು ಸಮಾಧಾನವಾಗಿರ್ರಿ ಅಂದನು.
14 O Senhor lutará por vocês; tão-somente acalmem-se".
15 ಆಗ ಕರ್ತನು ಮೋಶೆಗೆ--ನೀನು ನನಗೆ ಯಾಕೆ ಮೊರೆಯಿಡುತ್ತೀ? ಇಸ್ರಾಯೇಲ್‌ ಮಕ್ಕಳು ಮುಂದಕ್ಕೆ ಹೋಗಬೇಕೆಂದು ಹೇಳು.
15 Disse então o Senhor a Moisés: "Por que você está clamando a mim? Diga aos israelitas que sigam avante.
16 ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಕೈಚಾಚಿ ಅದನ್ನು ವಿಭಾಗಿಸು. ಆಗ ಇಸ್ರಾಯೇಲ್‌ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ಹೋಗುವರು.
16 Erga a sua vara e estenda a mão sobre o mar, e as águas se dividirão para que os israelitas atravessem o mar em terra seca.
17 ಇಗೋ, ನಾನು ಐಗುಪ್ತ್ಯರ ಹೃದಯವನ್ನು ಕಠಿಣಮಾಡುತ್ತೇನೆ; ಅವರು ಇವರನ್ನು ಹಿಂದಟ್ಟುವರು. ಇದಲ್ಲದೆ ಫರೋಹನ ಮೇಲೆಯೂ ಅವನ ಎಲ್ಲಾ ಸೈನ್ಯದ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಳ್ಳುವೆನು.
17 Eu, porém, endurecerei o coração dos egípcios e eles os perseguirão. E serei glorificado com a derrota do faraó e de todo o seu exército, com seus carros de guerra e seus cavaleiros.
18 ನಾನು ಫರೋ ಹನ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿ ಕೊಂಡಾಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿದು ಕೊಳ್ಳುವರು ಅಂದನು.
18 Os egípcios saberão que eu sou o Senhor quando eu for glorificado com a derrota do faraó, com seus carros de guerra e seus cavaleiros".
19 ಆಗ ಇಸ್ರಾಯೇಲ್‌ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದೆ ಬಂದನು. ಅವರ ಮುಂದೆ ಇದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.
19 A seguir o anjo de Deus que ia à frente dos exércitos de Israel retirou-se, colocando-se atrás deles. A coluna de nuvem também saiu da frente deles e se pôs atrás,
20 ಅದು ಐಗುಪ್ತ್ಯರ ದಂಡಿಗೂ ಇಸ್ರಾಯೇಲ್ಯರ ದಂಡಿಗೂ ನಡುವೆ ಬಂದಿತು. ಅದು ಅವರಿಗೆ ಮೇಘವೂ ಕತ್ತಲೂ ಆಗಿದ್ದು ಇಸ್ರಾಯೇಲ್ಯರಿಗೆ ರಾತ್ರಿ ಯಲ್ಲಿ ಬೆಳಕು ಕೊಡುವಂಥದ್ದಾಗಿದ್ದದರಿಂದ ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರ ಒಬ್ಬರು ಬರಲಿಲ್ಲ.
20 entre os egípcios e os israelitas. A nuvem trouxe trevas para um e luz para o outro, de modo que os egípcios não puderam aproximar-se dos israelitas durante toda a noite.
21 ಆಗ ಮೋಶೆಯು ಸಮುದ್ರದ ಮೇಲೆ ತನ್ನ ಕೈಚಾಚಲಾಗಿ ಕರ್ತನು ರಾತ್ರಿಯೆಲ್ಲಾ ಬಲವಾದ ಮೂಡಣ ಗಾಳಿಯಿಂದ ಸಮುದ್ರವು ಹಿಂದಕ್ಕೆ ಹೋಗುವಂತೆ ಮಾಡಿ ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು; ಆಗ ನೀರುಗಳು ವಿಭಾಗವಾದವು.
21 Então Moisés estendeu a mão sobre o mar, e o Senhor afastou o mar e o tornou em terra seca, com um forte vento oriental que soprou toda aquela noite. As águas se dividiram,
22 ಹೀಗೆ ಇಸ್ರಾಯೇಲ್‌ ಮಕ್ಕಳು ಸಮುದ್ರದ ಮಧ್ಯ ದಲ್ಲಿ ಒಣ ನೆಲದಲ್ಲೇ ಹೊರಟು ಹೋದರು. ನೀರು ಅವರಿಗೆ ಎಡಬಲದಲ್ಲಿ ಗೋಡೆಯಾಗಿತ್ತು.
22 e os israelitas atravessaram pelo meio do mar em terra seca, tendo uma parede de água à direita e outra à esquerda.
23 ಐಗು ಪ್ತ್ಯರೂ ಫರೋಹನ ಎಲ್ಲಾ ಕುದುರೆಗಳೂ ಅವನ ರಥಗಳೂ ಕುದುರೆಯ ಸವಾರರೂ ಅವರನ್ನು ಹಿಂದಟ್ಟಿ ಅವರ ಹಿಂದೆ ಸಮುದ್ರದ ಮಧ್ಯದಲ್ಲಿ ಸೇರಿದರು.
23 Os egípcios os perseguiram, e todos os cavalos, carros de guerra e cavaleiros do faraó foram atrás deles até o meio do mar.
24 ಬೆಳಗಿನ ಜಾವದಲ್ಲಿ ಕರ್ತನು ಅಗ್ನಿ ಮೇಘಗಳ ಸ್ತಂಭದೊಳಗಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅದನ್ನು ತೊಂದರೆಪಡಿಸಿ
24 No fim da madrugada, do alto da coluna de fogo e de nuvem, o Senhor viu o exército dos egípcios e o pôs em confusão.
25 ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಐಗುಪ್ತ್ಯರು ಕಷ್ಟದಿಂದ ಹೋಗು ವಂತೆ ಮಾಡಿದನು. ಆಗ--ಇಸ್ರಾಯೇಲಿನ ಎದುರಿ ನಿಂದ ಓಡಿಹೋಗೋಣ. ಯಾಕಂದರೆ ಕರ್ತನು ಐಗುಪ್ತ್ಯರಿಗೆ ವಿರೋಧವಾಗಿ ಅವರಿಗೋಸ್ಕರ ಯುದ್ಧ ಮಾಡುತ್ತಾನೆಂದು ಹೇಳಿಕೊಂಡರು.
25 Fez que as rodas dos seus carros começassem a soltar-se, de forma que tinham dificuldades em conduzi-los. E os egípcios gritaram: "Vamos fugir dos israelitas! O Senhor está lutando por eles contra o Egito".
26 ಆಗ ಕರ್ತನು ಮೋಶೆಗೆ--ಐಗುಪ್ತ್ಯರ ಮೇಲೆಯೂ ಅವರ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನೀರು ತಿರಿಗಿ ಬರುವಹಾಗೆ ಸಮುದ್ರದ ಮೇಲೆ ಕೈಚಾಚು ಅಂದನು.
26 Mas o Senhor disse a Moisés: "Estenda a mão sobre o mar para que as águas voltem sobre os egípcios, sobre os seus carros de guerra e sobre os seus cavaleiros".
27 ಆಗ ಮೋಶೆಯು ಸಮುದ್ರದ ಮೇಲೆ ಕೈಚಾಚಲಾಗಿ ಸಮುದ್ರವು ಬೆಳಗಾಗುವಾಗಲೇ ತನ್ನ ಶಕ್ತಿಗೆ ತಿರುಗಿಕೊಂಡಿತು. ಐಗುಪ್ತ್ಯರು ಅದಕ್ಕೆದುರಾಗಿ ಓಡಿಹೋದರು. ಕರ್ತನು ಐಗುಪ್ತ್ಯರನ್ನು ಸಮುದ್ರದ ಮಧ್ಯದಲ್ಲಿ ಸಂಹರಿಸಿದನು.
27 Moisés estendeu a mão sobre o mar, e ao raiar do dia o mar voltou ao seu lugar. Quando os egípcios estavam fugindo, foram de encontro às águas, e o Senhor os lançou ao mar.
28 ನೀರು ತಿರಿಗಿ ಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಒಬ್ಬರೂ ಉಳಿಯದಂತೆ ಮುಚ್ಚಿಕೊಂಡಿತು.
28 As águas voltaram e encobriram os seus carros de guerra e os seus cavaleiros, todo o exército do faraó que havia perseguido os israelitas mar adentro. Ninguém sobreviveu.
29 ಆದರೆ ಇಸ್ರಾಯೇಲ್‌ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣ ಗಿದ ನೆಲದಮೇಲೆ ನಡೆದುಹೋದರು. ನೀರು ಅವರಿಗೆ ಎಡಬಲಗಳಲ್ಲಿ ಗೋಡೆಯಾಗಿತ್ತು.
29 Mas os israelitas atravessaram o mar pisando em terra seca, tendo uma parede de água à direita e outra à esquerda.
30 ಆ ದಿನದಲ್ಲಿ ಕರ್ತನು ಈ ಪ್ರಕಾರ ಇಸ್ರಾಯೇಲ್ಯ ರನ್ನು ಐಗುಪ್ತ್ಯರ ಕೈಯಿಂದ ರಕ್ಷಿಸಿದನು. ಇಸ್ರಾಯೇ ಲ್ಯರು ಸಮುದ್ರತೀರದಲ್ಲಿ ಸತ್ತ ಐಗುಪ್ತ್ಯರನ್ನು ನೋಡಿ ದರು.
30 Naquele dia o Senhor salvou Israel das mãos dos egípcios, e os israelitas viram os egípcios mortos na praia.
31 ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.
31 Israel viu o grande poder do Senhor contra os egípcios, temeu ao Senhor e pôs nele a sua confiança, como também em Moisés, seu servo.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Êxodo 14, comparar traduções ou montar um estudo — tudo direto pelo WhatsApp.