Êxodo 15

Kannada Bible (GL_KANNADA) vs ACF

Sair da comparação
ACF Almeida Corrigida Fiel
1 ಆಗ ಮೋಶೆಯೂ ಇಸ್ರಾಯೇಲ್‌ ಮಕ್ಕಳೂ ಕರ್ತನಿಗೆ ಈ ಹಾಡನ್ನು ಹಾಡಿ ಹೇಳಿದ್ದೇನಂದರೆ--ನಾನು ಕರ್ತನಿಗೆ ಹಾಡುತ್ತೇನೆ; ಆತನು ಪ್ರಭಾವದಿಂದ ಜಯಶಾಲಿಯಾದನು; ಕುದುರೆ ಯನ್ನೂ (ಕುದುರೆಯ) ಸವಾರನನ್ನೂ ಸಮುದ್ರದಲ್ಲಿ ದೊಬ್ಬಿದ್ದಾನೆ.
1 Então cantou Moisés e os filhos de Israel este cântico ao SENHOR, e falaram, dizendo: Cantarei ao SENHOR, porque gloriosamente triunfou; lançou no mar o cavalo e o seu cavaleiro.
2 ಕರ್ತನು ನನ್ನ ಬಲವೂ ಕೀರ್ತನೆಯೂ ಆಗಿದ್ದಾನೆ, ಆತನು ನನ್ನ ರಕ್ಷಣೆಯಾದನು, ಆತನು ನನ್ನ ದೇವರು, ಆತನಿಗಾಗಿ ನಾನು ಒಂದು ನಿವಾಸವನ್ನು ಸಿದ್ಧಮಾಡುವೆನು. ಆತನು ನನ್ನ ತಂದೆಯ ದೇವರು, ನಾನು ಆತನನ್ನು ಘನಪಡಿಸುವೆನು.
2 O Senhor é a minha força, e o meu cântico; ele me foi por salvação; este é o meu Deus, portanto lhe farei uma habitação; ele é o Deus de meu pai, por isso o exaltarei.
3 ಕರ್ತನು ಯುದ್ಧ ಶೂರನು; ಕರ್ತನು ಎಂಬದೇ ಆತನ ಹೆಸರು.
3 O Senhor é homem de guerra; o Senhor é o seu nome.
4 ಆತನು ಫರೋಹನ ರಥಗಳನ್ನೂ ಅವನ ಸೈನ್ಯವನ್ನೂ ಸಮುದ್ರ ದಲ್ಲಿ ನೂಕಿದ್ದಾನೆ; ಆಯಲ್ಪಟ್ಟ ಅವನ ಅಧಿಪತಿಗಳು ಸಹ ಕೆಂಪು ಸಮುದ್ರದಲ್ಲಿ ಮುಳುಗಿಹೋದರು.
4 Lançou no mar os carros de Faraó e o seu exército; e os seus escolhidos príncipes afogaram-se no Mar Vermelho.
5 ಅಗಾಧಗಳು ಅವರನ್ನು ಮುಚ್ಚಿಕೊಂಡವು. ಅವರು ಕಲ್ಲಿನಂತೆ (ಸಮುದ್ರದ) ತಳಕ್ಕೆ ಮುಳುಗಿದರು.
5 Os abismos os cobriram; desceram às profundezas como pedra.
6 ಓ ಕರ್ತನೇ, ನಿನ್ನ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳ ದ್ದಾಗಿದೆ. ಓ ಕರ್ತನೇ, ನಿನ್ನ ಬಲಗೈ ಶತ್ರುವನ್ನು ಜಜ್ಜಿ ಪುಡಿಮಾಡಿತು.
6 A tua destra, ó Senhor, se tem glorificado em poder, a tua destra, ó Senhor, tem despedaçado o inimigo;
7 ನಿನ್ನ ಮಹತ್ತಾದ ಘನತೆಯಲ್ಲಿ ನಿನಗೆ ವಿರೋಧವಾಗಿ ಎದ್ದವರನ್ನು ಕೆಡವಿ ಬಿಟ್ಟಿರುವಿ. ನಿನ್ನ ರೌದ್ರವು ಹೊರಟು ಅವರನ್ನು ಹುಲ್ಲಿನಂತೆ ದಹಿಸಿಬಿಟ್ಟಿತು.
7 E com a grandeza da tua excelência derrubaste aos que se levantaram contra ti; enviaste o teu furor, que os consumiu como o restolho.
8 ನಿನ್ನ ಮೂಗಿನ ಬಿರುಸಾದ ಗಾಳಿ ಯಿಂದ ನೀರುಗಳು ಒಟ್ಟುಗೂಡಿದವು. ಪ್ರವಾಹಗಳು ರಾಶಿಯಂತೆ ನಿಂತವು; ಸಮುದ್ರದ ಅಗಾಧಗಳ ನೀರು ಗಟ್ಟಿಯಾದವು.
8 E com o sopro de tuas narinas amontoaram-se as águas, as correntes pararam como montão; os abismos coalharam-se no coração do mar.
9 ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು.
9 O inimigo dizia: Perseguirei, alcançarei, repartirei os despojos; fartar-se-á a minha alma deles, arrancarei a minha espada, a minha mão os destruirá.
10 ನೀನು ನಿನ್ನ ಗಾಳಿಯನ್ನು ಊದಿದಾಗ ಸಮುದ್ರವು ಅವರನ್ನು ಮುಚ್ಚಿಕೊಂಡಿತು. ಅವರು ಸೀಸದಂತೆ ಮಹಾಜಲಗಳಲ್ಲಿ ಮುಳುಗಿ ಹೊದರು.
10 Sopraste com o teu vento, o mar os cobriu; afundaram-se como chumbo em veementes águas.
11 ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ?
11 Ó Senhor, quem é como tu entre os deuses? Quem é como tu glorificado em santidade, admirável em louvores, realizando maravilhas?
12 ನೀನು ನಿನ್ನ ಬಲಗೈಯನ್ನು ಚಾಚಲು ಭೂಮಿಯು ಅವರನ್ನು ನುಂಗಿತು.
12 Estendeste a tua mão direita; a terra os tragou.
13 ನೀನು ವಿಮೋಚಿ ಸಿದ ಜನರನ್ನು ಕರುಣೆಯಿಂದ ನಡಿಸಿದಿ; ನೀನು ಅವ ರನ್ನು ನಿನ್ನ ಬಲದಿಂದ ನಿನ್ನ ಪರಿಶುದ್ಧ ನಿವಾಸಕ್ಕೆ ನಡಿಸಿದಿ.
13 Tu, com a tua beneficência, guiaste a este povo, que salvaste; com a tua força o levaste à habitação da tua santidade.
14 ಜನರು ಇದನ್ನು ಕೇಳಿ ಭಯಪಡುವರು; ದುಃಖವು ಫಿಲಿಷ್ಟಿಯದಲ್ಲಿ ವಾಸಿಸುವವರನ್ನು ಹಿಡಿಯುವದು.
14 Os povos o ouviram, eles estremeceram, uma dor apoderou-se dos habitantes da Filístia.
15 ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳು ವರು; ಮೋವಾಬಿನ ಬಲಿಷ್ಠರನ್ನು ಕಂಪನವು ಹಿಡಿಯು ವದು. ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು.
15 Então os príncipes de Edom se pasmaram; dos poderosos dos moabitas apoderou-se um tremor; derreteram-se todos os habitantes de Canaã.
16 ಭಯವೂ ಹೆದರಿಕೆಯೂ ಅವರ ಮೇಲೆ ಬೀಳು ವದು; ನಿನ್ನ ಜನರು ದಾಟಿ ಹೋಗುವ ವರೆಗೆ ಓ ಕರ್ತನೇ, ನೀನು ಕೊಂಡುಕೊಂಡ ಜನರು ದಾಟಿ ಹೋಗುವ ವರೆಗೆ ನಿನ್ನ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು.
16 Espanto e pavor caiu sobre eles; pela grandeza do teu braço emudeceram como pedra; até que o teu povo houvesse passado, ó Senhor, até que passasse este povo que adquiriste.
17 ನೀನು ಅವರನ್ನು ಒಳಗೆ ಬರಮಾಡಿ ಓ ಕರ್ತನೇ, ನಿನ್ನ ಕೈಗಳು ಸ್ಥಾಪಿಸಿದ ಪರಿಶುದ್ಧ ನಿವಾಸದಲ್ಲಿಯೂ (ಓ ಕರ್ತನೇ,) ನೀನು ವಾಸಿಸುವದಕ್ಕೆ ಮಾಡಿಕೊಂಡಿರುವ ನಿನ್ನ ಸ್ವಾಸ್ಥ್ಯದ ಪರ್ವತದಲ್ಲಿಯೂ ಅವರನ್ನು ಸ್ಥಾಪಿಸುವಿ.
17 Tu os introduzirás, e os plantarás no monte da tua herança, no lugar que tu, ó Senhor, aparelhaste para a tua habitação, no santuário, ó Senhor, que as tuas mãos estabeleceram.
18 ಕರ್ತನು ಯುಗಯುಗಾಂತರಗಳ ವರೆಗೆ ಆಳುವನು.
18 O Senhor reinará eterna e perpetuamente;
19 ಫರೋ ಹನ ಕುದುರೆಗಳು ಅವನ ರಥಗಳ ಸಂಗಡಲೂ ಸವಾರರ ಸಂಗಡಲೂ ಸಮುದ್ರದೊಳಗೆ ಬಂದಾಗ ಕರ್ತನು ಸಮುದ್ರದ ನೀರನ್ನು ಅವರ ಮೇಲೆ ತಿರಿಗಿ ಬರ ಮಾಡಿದನು; ಆದರೆ ಇಸ್ರಾಯೇಲ್‌ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣನೆಲದ ಮೇಲೆ ಹೋದರು.
19 Porque os cavalos de Faraó, com os seus carros e com os seus cavaleiros, entraram no mar, e o Senhor fez tornar as águas do mar sobre eles; mas os filhos de Israel passaram em seco pelo meio do mar.
20 ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋ ದರಿ ಮಿರ್ಯಾಮಳು ಕೈಯಲ್ಲಿ ದಮ್ಮಡಿಯನ್ನು ತೆಗೆದು ಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ಕೊಂಡು ನಾಟ್ಯವಾಡುತ್ತಾ ಆಕೆಯನ್ನು ಹಿಂಬಾಲಿಸಿ ಹೋದರು.
20 Então Miriã, a profetisa, a irmã de Arão, tomou o tamboril na sua mão, e todas as mulheres saíram atrás dela com tamboris e com danças.
21 ಮಿರ್ಯಾಮಳು ಅವರಿಗೆ ಕೊಟ್ಟ ಉತ್ತರವೇನಂದರೆ--ನೀವು ಕರ್ತನಿಗೆ ಹಾಡಿರಿ, ಆತನು ಮಹಿಮೆಯಿಂದ ಜಯಿಸಿದ್ದಾನೆ; ಕುದುರೆಯನ್ನು ಸವಾರ ನನ್ನು ಸಮುದ್ರದಲ್ಲಿ ಹಾಕಿದ್ದಾನೆ ಎಂಬದು.
21 E Miriã lhes respondia: Cantai ao Senhor, porque gloriosamente triunfou; e lançou no mar o cavalo com o seu cavaleiro.
22 ಹೀಗೆ ಮೋಶೆಯು ಇಸ್ರಾಯೇಲ್ಯರನ್ನು ಕೆಂಪು ಸಮುದ್ರದಿಂದ ಬರಮಾಡಿದನು; ಅವರು ಶೂರಿನ ಅರಣ್ಯದೊಳಗೆ ಹೋದರು; ಅವರು ಅರಣ್ಯದಲ್ಲಿ ಮೂರು ದಿನ ಪ್ರಯಾಣ ಮಾಡಿದಾಗ್ಯೂ ನೀರನ್ನು ಕಂಡುಕೊಳ್ಳಲಿಲ್ಲ.
22 Depois fez Moisés partir os israelitas do Mar Vermelho, e saíram ao deserto de Sur; e andaram três dias no deserto, e não acharam água.
23 ಅವರು ಮಾರಾಗೆ ಬಂದ ಮೇಲೆ ಮಾರಾದ ನೀರನ್ನು ಕುಡಿಯಲಾರದೆ ಇದ್ದರು; ಯಾಕಂದರೆ ಅದು ಕಹಿಯಾಗಿತ್ತು. ಆದಕಾರಣ ಅದರ ಹೆಸರು ಮಾರಾ ಎಂದು ಕರೆಯಲ್ಪಟ್ಟಿತು.
23 Então chegaram a Mara; mas não puderam beber das águas de Mara, porque eram amargas; por isso chamou-se o lugar Mara.
24 ಆದದ ರಿಂದ ಜನರು--ನಾವು ಏನು ಕುಡಿಯೋಣ ಎಂದು ಹೇಳಿ ಮೋಶೆಗೆ ವಿರೋಧವಾಗಿ ಗುಣುಗುಟ್ಟಿದರು.
24 E o povo murmurou contra Moisés, dizendo: Que havemos de beber?
25 ಅವನು ಕರ್ತನಿಗೆ ಮೊರೆಯಿಟ್ಟನು; ಆಗ ಕರ್ತನು ಅವನಿಗೆ ಒಂದು ಮರವನ್ನು ತೋರಿಸಿದನು; ಅವನು ಅದನ್ನು ನೀರಿನಲ್ಲಿ ಹಾಕಿದಾಗ ನೀರು ಸಿಹಿಯಾಗಿ ಮಾಡಲ್ಪಟ್ಟಿತು; ಅಲ್ಲಿ ಆತನು ಅವರಿಗಾಗಿ ಒಂದು ನಿಯಮವನ್ನೂ ಒಂದು ಶಾಸನವನ್ನೂ ಮಾಡಿ, ಅಲ್ಲಿಯೇ ಅವರನ್ನು ಪರೀಕ್ಷಿಸಿದನು.
25 E ele clamou ao Senhor, e o Senhor mostrou-lhe uma árvore, que lançou nas águas, e as águas se tornaram doces. Ali lhes deu estatutos e uma ordenança, e ali os provou.
26 ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.
26 E disse: Se ouvires atento a voz do Senhor teu Deus, e fizeres o que é reto diante de seus olhos, e inclinares os teus ouvidos aos seus mandamentos, e guardares todos os seus estatutos, nenhuma das enfermidades porei sobre ti, que pus sobre o Egito; porque eu sou o Senhor que te sara.
27 ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.
27 Então vieram a Elim, e havia ali doze fontes de água e setenta palmeiras; e ali se acamparam junto das águas.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Êxodo 15, comparar traduções ou montar um estudo — tudo direto pelo WhatsApp.