Êxodo 19
Kannada Bible (GL_KANNADA) vs NVI
NVI Nova Versão Internacional
1 ಇಸ್ರಾಯೇಲ್ ಮಕ್ಕಳು ಐಗುಪ್ತವನ್ನು ಬಿಟ್ಟ ಮೂರನೆಯ ತಿಂಗಳಿನ ಅದೇ ದಿನದಲ್ಲಿ ಸೀನಾಯಿ ಅರಣ್ಯಕ್ಕೆ ಬಂದರು.
1 No dia em que se completaram três meses que os israelitas haviam saído do Egito, chegaram ao deserto do Sinai.
2 ಅವರು ರೆಫೀದೀಮಿ ನಿಂದ ಹೊರಟು ಸೀನಾಯಿ ಮರುಭೂಮಿಗೆ ಬಂದು ಅರಣ್ಯದಲ್ಲಿ ಗುಡಾರಹಾಕಿ ಬೆಟ್ಟಕ್ಕೆದುರಾಗಿ ಇಳಿದು ಕೊಂಡರು.
2 Depois de saírem de Refidim, entraram no deserto do Sinai, e Israel acampou ali, diante do monte.
3 ಮೋಶೆಯು ದೇವರ ಸನ್ನಿಧಿಗೆ ಹೋದನು. ಆಗ ಕರ್ತನು ಪರ್ವತದ ಮೇಲಿನಿಂದ ಅವನನ್ನು ಕರೆದು ಅವನಿಗೆ--ನೀನು ಯಾಕೋಬನ ಮನೆತನದವರಾದ ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳು--
3 Logo Moisés subiu o monte para encontrar-se com Deus. E o Senhor o chamou do monte, dizendo: "Diga o seguinte aos descendentes de Jacó e declare aos israelitas:
4 ನಾನು ಐಗುಪ್ತ್ಯರಿಗೆ ಮಾಡಿದ್ದನ್ನು ನೀವು ನೋಡಿದ್ದೀರಿ; ನಿಮ್ಮನ್ನು ಹದ್ದುಗಳ ರೆಕ್ಕೆಗಳ ಮೇಲೆ ನಾನು ಹೇಗೆ ಹೊತ್ತುಕೊಂಡು ನನ್ನ ಬಳಿಗೆ ಬರಮಾಡಿದೆನೆಂಬದನ್ನೂ ನೀವು ನೋಡಿದ್ದೀರಿ;
4 ‘Vocês viram o que fiz ao Egito e como os transportei sobre asas de águias e os trouxe para junto de mim.
5 ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ.
5 Agora, se me obedecerem fielmente e guardarem a minha aliança, vocês serão o meu tesouro pessoal dentre todas as nações. Embora toda a terra seja minha,
6 ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳ ಬೇಕಾದ ಮಾತುಗಳು ಇವೇ ಅಂದನು.
6 vocês serão para mim um reino de sacerdotes e uma nação santa’. Essas são as palavras que você dirá aos israelitas".
7 ಆಗ ಮೋಶೆಯು ಬಂದು ಜನರ ಹಿರಿಯರನ್ನು ಕರೆದು ಕರ್ತನು ತನಗೆ ಆಜ್ಞಾಪಿಸಿದ ಈ ಮಾತುಗ ಳನ್ನೆಲ್ಲಾ ಅವರ ಮುಂದೆ ಇಟ್ಟನು.
7 Moisés voltou, convocou as autoridades do povo e lhes expôs tudo o que o Senhor havia-lhe mandado falar.
8 ಜನರೆಲ್ಲಾ ಏಕವಾಗಿ ಉತ್ತರ ಕೊಟ್ಟು--ಕರ್ತನು ಹೇಳಿದವುಗಳನ್ನೆಲ್ಲಾ ಮಾಡುತ್ತೇವೆ ಎಂದು ಹೇಳಿದರು. ಆಗ ಮೋಶೆಯು ಜನರ ಮಾತುಗಳನ್ನು ಕರ್ತನಿಗೆ ತಿರಿಗಿ ಹೇಳಿದನು.
8 O povo todo respondeu unânime: "Faremos tudo o que o Senhor ordenou". E Moisés levou ao Senhor a resposta do povo.
9 ಕರ್ತನು ಮೋಶೆಗೆ--ಇಗೋ, ನಾನು ನಿನ್ನ ಸಂಗಡ ಮಾತನಾಡುವದನ್ನು ಜನರು ಕೇಳುವ ಹಾಗೆಯೂ ಅವರು ಸದಾಕಾಲ ನಿನ್ನನ್ನು ನಂಬುವಂತೆಯೂ ಮಂದ ವಾದ ಮೇಘದಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ ಅಂದನು. ಮೋಶೆಯು ಜನರ ಮಾತುಗಳನ್ನು ಕರ್ತನಿಗೆ ತಿಳಿಸಿದನು.
9 Disse o Senhor a Moisés: "Virei a você numa densa nuvem, a fim de que o povo, ouvindo-me falar-lhe, passe a confiar sempre em você". Então Moisés relatou ao Senhor o que o povo lhe dissera.
10 ಆಗ ಕರ್ತನು ಮೋಶೆಗೆ--ಜನರ ಬಳಿಗೆ ಹೋಗಿ ಈ ಹೊತ್ತೂ ನಾಳೆಯೂ ಅವರನ್ನು ಶುದ್ಧಮಾಡು, ಅವರು ತಮ್ಮ ವಸ್ತ್ರಗಳನ್ನು ತೊಳಕೊಳ್ಳಲಿ.
10 E o Senhor disse a Moisés: "Vá ao povo e consagre-o hoje e amanhã. Eles deverão lavar as suas vestes
11 ಮೂರ ನೆಯ ದಿನದಲ್ಲಿ ಅವರು ಸಿದ್ಧವಾಗಿರಲಿ; ಯಾಕಂದರೆ ಮೂರನೆಯ ದಿನದಲ್ಲಿ ಕರ್ತನು ಸಮಸ್ತ ಜನರ ಕಣ್ಣೆದುರಿನಲ್ಲಿ ಸೀನಾಯಿ ಪರ್ವತಕ್ಕೆ ಇಳಿದು ಬರುವನು.
11 e estar prontos no terceiro dia, porque nesse dia o Senhor descerá sobre o monte Sinai, à vista de todo o povo.
12 ಜನರಿಗೋಸ್ಕರ ಸುತ್ತಲೂ ಮೇರೆಗಳನ್ನು ಮಾಡಿಸಿ ಅವರಿಗೆ--ನೀವು ಬೆಟ್ಟವನ್ನು ಏರದಂತೆಯೂ ಅದರ ಮೇರೆಯನ್ನು ಮುಟ್ಟದಂತೆಯೂ ಜಾಗ್ರತೆಯಾಗಿರ್ರಿ; ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸಾಯ ಬೇಕು.
12 Estabeleça limites em torno do monte e diga ao povo: Tenham o cuidado de não subir ao monte e de não tocar na sua base. Quem tocar no monte certamente será morto;
13 ಯಾವನಾದರೂ ಅದನ್ನು ಮುಟ್ಟಬಾರದು; ಮುಟ್ಟಿದ ಪಶುವನ್ನಾಗಲಿ ಮನುಷ್ಯನನ್ನಾಗಲಿ ನಿಶ್ಚಯ ವಾಗಿ ಕಲ್ಲೆಸೆದು ಕೊಲ್ಲಬೇಕು. ಇಲ್ಲವೆ ಈಟಿಯಿಂದ ತಿವಿಯಬೇಕು. ದೀರ್ಘವಾಗಿ ತುತೂರಿಯು ಊದುವ ಸಮಯದಲ್ಲಿ ಅವರು ಬೆಟ್ಟದ ಮೇಲೆ ಬರಬೇಕು ಅಂದನು.
13 será apedrejado ou morto a flechadas. Ninguém deverá tocá-lo com a mão. Seja homem, seja animal, não viverá. Somente quando a corneta soar um toque longo eles poderão subir ao monte".
14 ಆಗ ಮೋಶೆಯು ಬೆಟ್ಟದಿಂದಿಳಿದು ಜನರನ್ನು ಶುದ್ಧಿಮಾಡಿದನು. ಅವರು ತಮ್ಮ ವಸ್ತ್ರಗಳನ್ನು ತೊಳೆದು ಕೊಂಡರು.
14 Tendo Moisés descido do monte, consagrou o povo; e eles lavaram as suas vestes.
15 ಅವನು ಜನರಿಗೆ--ಮೂರನೆಯ ದಿನ ಕ್ಕಾಗಿ ಸಿದ್ಧರಾಗಿರ್ರಿ, ನೀವು ನಿಮ್ಮ ಹೆಂಡತಿಯರ ಬಳಿಗೆ ಸೇರದೆ ಇರ್ರಿ ಅಂದನು.
15 Disse ele então ao povo: "Preparem-se para o terceiro dia, e até lá não se acheguem a mulher".
16 ಮೂರನೆಯ ದಿನದಲ್ಲಿ ಉದಯವಾದಾಗ ಬೆಟ್ಟದ ಮೇಲೆ ಗುಡುಗುಗಳೂ ಮಿಂಚುಗಳೂ ಮಂದವಾದ ಮೇಘವೂ ಉಂಟಾಗಿ ಬಹು ಬಲವಾದ ತುತೂರಿಯ ಶಬ್ದವಾಯಿತು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿ ದರು.
16 Ao amanhecer do terceiro dia houve trovões e raios, uma densa nuvem cobriu o monte, e uma trombeta ressoou fortemente. Todos no acampamento tremeram de medo.
17 ಆಗ ಮೋಶೆಯು ಜನರನ್ನು ಪಾಳೆಯ ದೊಳಗಿಂದ ದೇವರನ್ನು ಸಂಧಿಸುವದಕ್ಕೆ ಹೊರಗೆ ಬರಮಾಡಿದನು; ಆಗ ಅವರು ಬೆಟ್ಟದ ಕೆಳಗೆ ನಿಂತು ಕೊಂಡರು.
17 Moisés levou o povo para fora do acampamento, para encontrar-se com Deus, e eles ficaram ao pé do monte.
18 ಕರ್ತನು ಅಗ್ನಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದದ್ದರಿಂದ ಆ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆ ಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.
18 O monte Sinai estava coberto de fumaça, pois o Senhor tinha descido sobre ele em chamas de fogo. Dele subia fumaça como que de uma fornalha; todo o monte tremia violentamente,
19 ತುತೂರಿಯ ಶಬ್ದವು ಬರಬರುತ್ತಾ ಹೆಚ್ಚಾಗುತಿತ್ತು. ಮೋಶೆಯು ಮಾತನಾಡಿದಾಗ ದೇವರು ಅವನಿಗೆ ತನ್ನ ಸ್ವರದಿಂದ ಉತ್ತರಕೊಟ್ಟನು.
19 e o som da trombeta era cada vez mais forte. Então Moisés falou, e a voz de Deus lhe respondeu.
20 ಆಗ ಕರ್ತನು ಸೀನಾಯಿ ಬೆಟ್ಟದ ತುದಿಗೆ ಇಳಿದು ಬಂದು ಮೋಶೆಯನ್ನು ತನ್ನ ಬಳಿಗೆ ಕರೆದನು, ಮೋಶೆಯು ಮೇಲೆ ಹೋದನು.
20 O Senhor desceu ao topo do monte Sinai e chamou Moisés para o alto do monte. Moisés subiu
21 ಕರ್ತನು ಮೋಶೆಗೆ--ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ಕರ್ತನನ್ನು ನೋಡುವದಕ್ಕಾಗಿ ಮುಂದೆ ಬಂದು ಅವರಲ್ಲಿ ಬಹಳ ಜನರು ಸತ್ತಾರು.
21 e o Senhor lhe disse: "Desça e alerte o povo que não ultrapasse os limites, para ver o Senhor, e muitos deles pereçam.
22 ಕರ್ತನ ಸವಿಾಪಕ್ಕೆ ಬರುವ ಯಾಜಕರು ಸಹ ಕರ್ತನು ಅವರನ್ನು ಸಾಯಿಸದಂತೆ ಅವರು ತಮ್ಮನ್ನು ಶುದ್ಧಮಾಡಿಕೊಳ್ಳಲಿ ಅಂದನು.
22 Mesmo os sacerdotes que se aproximarem do Senhor devem consagrar-se; senão o Senhor os fulminará".
23 ಮೋಶೆಯು ಕರ್ತನಿಗೆ--ಜನರು ಸೀನಾಯಿ ಬೆಟ್ಟವನ್ನು ಏರಲಾರರು. ಬೆಟ್ಟಕ್ಕೆ ಮೇರೆಗಳನ್ನು ಹಾಕಿ ಅದನ್ನು ಶುದ್ಧಮಾಡೆಂದು ನೀನೇ ನಮ್ಮನ್ನು ಎಚ್ಚರಿಸಿದ್ದೀ ಅಂದನು.
23 Moisés disse ao Senhor: "O povo não pode subir ao monte Sinai, pois tu mesmo nos avisaste: ‘Estabeleça um limite em torno do monte e declare-o santo’ ".
24 ಆಗ ಕರ್ತನು ಅವನಿಗೆ--ನೀನು ಇಳಿದು ಹೋಗಿ ಆರೋನ ನನ್ನು ಕರಕೊಂಡು ಇಲ್ಲಿಗೆ ಬಾ. ಆದರೆ ಕರ್ತನು ಅವರನ್ನು ಸಾಯಿಸದಂತೆ ಯಾಜಕರೂ ಜನರೂ ಮುಂದೆ ಕರ್ತನ ಬಳಿಗೆ ಬಾರದೆ ಇರಲಿ ಅಂದನು.
24 O Senhor respondeu: "Desça e depois torne a subir, acompanhado de Arão. Quanto aos sacerdotes e ao povo, não devem ultrapassar o limite para subir ao Senhor; senão, o Senhor os fulminará".
25 ಹೀಗೆ ಮೋಶೆಯು ಜನರ ಬಳಿಗೆ ಇಳಿದುಹೋಗಿ ಅವರೊಂದಿಗೆ ಮಾತನಾಡಿದನು.
25 Então Moisés desceu e avisou o povo.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Êxodo 19, comparar traduções ou montar um estudo — tudo direto pelo WhatsApp.