Êxodo 1

Kannada Bible (GL_KANNADA) vs BKJ

Sair da comparação
1 ಯಾಕೋಬನ ಜೊತೆಗೆ ಐಗುಪ್ತಕ್ಕೆ ತಮ್ಮ ತಮ್ಮ ಮನೆಯವರ ಸಂಗಡ ಬಂದ ಇಸ್ರಾಯೇಲ್‌ ಮಕ್ಕಳ ಹೆಸರುಗಳು ಇವೇ:
1 Agora, estes são os nomes dos filhos de Israel que entraram no Egito com Jacó; cada homem entrou com sua família.
2 ರೂಬೇನ್‌ ಸಿಮೆಯೋನ್‌ ಲೇವಿ ಯೆಹೂದ
2 Rúben, Simeão, Levi e Judá,
3 ಇಸ್ಸಾಕಾರ್‌ ಜೆಬುಲೂನ್‌ ಬೆನ್ಯಾವಿಾನ್‌
3 Issacar, Zebulom e Benjamim,
4 ದಾನ್‌ ನಫ್ತಾಲಿ ಗಾದ್‌ ಆಶೇರ್‌.
4 Dã, Naftali, Gade e Aser.
5 ಯಾಕೋಬನಿಂದ ಹುಟ್ಟಿದವರೆಲ್ಲಾ ಒಟ್ಟು ಎಪ್ಪತ್ತು ಮಂದಿ. ಯೋಸೇಫನು ಮೊದಲೇ ಐಗುಪ್ತ ದಲ್ಲಿ ಇದ್ದನು.
5 Todas as almas, pois, que saíram dos lombos de Jacó foram setenta almas, porém José já estava no Egito.
6 ಯೋಸೇಫನೂ ಅವನ ಸಹೋದರ ರೆಲ್ಲರೂ ಆ ಸಂತತಿಯವರೆಲ್ಲರೂ ಸತ್ತರು.
6 E José morreu, e todos os seus irmãos, e toda aquela geração.
7 ಆದರೆ ಇಸ್ರಾಯೇಲನ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿ ಹೊಂದಿ ಹೆಚ್ಚಿ ಹರಡಿಕೊಂಡು ಬಲಗೊಂಡರು. ಆ ದೇಶವು ಅವರಿಂದ ತುಂಬಿತು.
7 E os filhos de Israel frutificaram, e aumentaram muito, e multiplicaram-se, e tornaram-se grandemente fortes; e a terra se encheu deles.
8 ಆಗ ಯೋಸೇಫನನ್ನು ಅರಿಯದ ಬೇರೊಬ್ಬನು ಐಗುಪ್ತಕ್ಕೆ ಅರಸನಾದನು.
8 Depois, levantou-se um novo rei sobre o Egito, que não conhecera José.
9 ಅವನು ತನ್ನ ಜನರಿಗೆ--ಇಗೋ, ಇಸ್ರಾಯೇಲ್‌ ಮಕ್ಕಳಾದ ಈ ಜನರು ನಮಗಿಂತ ಹೆಚ್ಚಿ ಬಲವುಳ್ಳವರಾಗಿದ್ದಾರೆ;
9 E ele disse a seu povo: Eis que o povo dos filhos de Israel é maior e mais poderoso do que nós.
10 ಬನ್ನಿ, ಅವರು ಹೆಚ್ಚಾಗದ ಹಾಗೆಯೂ ನಮಗೆ ಯುದ್ಧ ಸಂಭವಿಸಿದರೆ ಅವರು ನಮ್ಮ ಶತ್ರುಗಳ ಸಂಗಡ ಕೂಡಿಕೊಂಡು ನಮಗೆ ವಿರೋಧವಾಗಿ ಯುದ್ಧಮಾಡಿ ದೇಶವನ್ನು ಬಿಟ್ಟು ಹೋಗದ ಹಾಗೆಯೂ ಅವ ರೊಂದಿಗೆ ಬುದ್ಧಿವಂತಿಕೆಯಿಂದ ವರ್ತಿಸೋಣ ಎಂದು ಹೇಳಿದನು.
10 Vinde, atuemos sabiamente com eles, para que não se multipliquem e aconteça que, vindo uma guerra, eles se ajuntem com os nossos inimigos e lutem contra nós, e assim se retirem da terra.
11 ಆಗ ಅವರನ್ನು ತಮ್ಮ ಬಿಟ್ಟೀಕೆಲಸಗಳಿಂದ ಶ್ರಮೆಪಡಿಸುವ ಹಾಗೆ ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್‌ ರಾಮ್ಸೇಸ್‌ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.
11 Por isso, designaram sobre eles capatazes para afligi-los com suas cargas. E construíram para Faraó cidades de tesouros, Pitom e Ramessés.
12 ಆದರೆ ಇವರು ಅವರನ್ನು ಎಷ್ಟು ಶ್ರಮೆಪಡಿಸಿದರೋ ಅಷ್ಟು ಅಧಿಕ ವಾಗಿ ಅವರು ಹೆಚ್ಚಿ ಹರಡಿಕೊಂಡರು. ಐಗುಪ್ತ್ಯರು ಇಸ್ರಾಯೇಲ್‌ ಮಕ್ಕಳಿಗಾಗಿ ಸಂತಾಪಪಟ್ಟರು.
12 Mas quanto mais os afligiam, mais eles se multiplicavam e cresciam. E por isso se afligiram por causa dos filhos de Israel.
13 ಆದ ದರಿಂದ ಐಗುಪ್ತ್ಯರು ಇಸ್ರಾಯೇಲನ ಮಕ್ಕಳಿಂದ ಕ್ರೂರವಾಗಿ ಸೇವೆ ಮಾಡಿಸಿಕೊಂಡರು.
13 E os egípcios fizeram os filhos de Israel servir com rigor,
14 ಮಣ್ಣಿನ ಕೆಲಸದಲ್ಲಿಯೂ ಇಟ್ಟಿಗೆಯನ್ನು ಮಾಡುವ ಕೆಲಸದ ಲ್ಲಿಯೂ ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳ ಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವನ ವನ್ನು ಬೇಸರಪಡಿಸಿದರು. ಅವರು ಅವರಿಂದ ಮಾಡಿ ಸಿದ ಎಲ್ಲಾ ಸೇವೆಯೂ ಕಠಿಣವಾಗಿತ್ತು.
14 e tornaram a sua vida amarga com dura escravidão, com argamassa e tijolos, e em todos os tipos de serviço no campo, em todo seu serviço, em que os faziam servir, era com rigor.
15 ಇದಲ್ಲದೆ ಐಗುಪ್ತದ ಅರಸನು ಶಿಪ್ರಾ ಮತ್ತು ಪೂಗಾ ಎಂದು ಹೆಸರಿದ್ದ ಇಬ್ರಿಯ ಸೂಲಗಿತ್ತಿಯರ ಸಂಗಡ ಮಾತನಾಡಿದನು.
15 E o rei do Egito falou às parteiras hebreias, das quais o nome de uma era Sifrá, e o nome da outra Puá,
16 ಅವನು ಅವರಿಗೆ--ನೀವು ಇಬ್ರಿಯ ಸ್ತ್ರೀಯರಿಗೆ ಸೂಲಗಿತ್ತಿಯ ಕೆಲಸ ಮಾಡುವದಕ್ಕೆ ಹೆರಿಗೆಯ ಪೀಠದಲ್ಲಿ ಅವರನ್ನು ಪರಾಂಬ ರಿಸುವಾಗ ಗಂಡು ಮಗುವಾದರೆ ಅದನ್ನು ಕೊಂದು ಹಾಕಿರಿ, ಹೆಣ್ಣಾದರೆ ಬದುಕಲಿ ಎಂದು ಹೇಳಿದನು.
16 e ele disse: Quando fizerdes o trabalho de parteira às mulheres hebreias, e as virdes sobre os assentos, se for filho, havereis de matá-lo, mas se for filha, ela deverá viver.
17 ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತದ ಅರಸನು ತಮಗೆ ಹೇಳಿದಂತೆ ಮಾಡದೆ ಗಂಡು ಮಕ್ಕಳನ್ನು ಬದುಕಿಸಿದರು.
17 Mas as parteiras temiam a Deus e não fizeram conforme o rei do Egito lhes ordenara, mas salvaram os meninos, deixando-os viver.
18 ಆಗ ಐಗು ಪ್ತದ ಅರಸನು ಸೂಲಗಿತ್ತಿಯರನ್ನು ಕರೆಯಿಸಿಯಾಕೆ ಇಂಥ ಕೆಲಸವನ್ನು ಮಾಡಿ ಗಂಡು ಮಕ್ಕಳನ್ನು ಬದುಕಿ ಸಿದ್ದೀರಿ ಅಂದನು.
18 E o rei do Egito chamou as parteiras e lhes disse: Por que fizestes esta coisa, e salvastes os meninos, deixando-os viver?
19 ಅದಕ್ಕೆ ಅವರು--ಇಬ್ರಿಯರ ಸ್ತ್ರೀಯರು ಐಗುಪ್ತದ ಸ್ತ್ರೀಯರಂತೆ ಅಲ್ಲ, ಅವರು ಚುರುಕಾಗಿದ್ದಾರೆ. ಸೂಲಗಿತ್ತಿಯು ಅವರ ಹತ್ತಿರ ಬರುವದಕ್ಕೆ ಮುಂಚೆಯೇ ಹೆರುತ್ತಾರೆ ಅಂದರು.
19 E as parteiras disseram a Faraó: Porque as mulheres hebreias não são como as mulheres egípcias, pois elas são vivazes e já deram à luz antes que as parteiras cheguem a elas.
20 ಆದದರಿಂದ ದೇವರು ಸೂಲಗಿತ್ತಿಯರಿಗೆ ಒಳ್ಳೇದನ್ನು ಮಾಡಿದನು. ಇದಲ್ಲದೆ ಜನರು ಹೆಚ್ಚಾಗಿ ಬಹು ಬಲಗೊಂಡರು.
20 Por isso Deus agiu bem com as parteiras; e o povo se multiplicou, e tornou-se muito forte.
21 ಸೂಲಗಿತ್ತಿಯರು ದೇವರಿಗೆ ಭಯ ಪಟ್ಟದ್ದರಿಂದ ಆತನು ಅವರಿಗೆ ವಂಶಾಭಿವೃದ್ಧಿಯ ನ್ನುಂಟುಮಾಡಿದನು.
21 E aconteceu que, porque as parteiras temeram a Deus, ele lhes estabeleceu casas.
22 ಆದರೆ ಫರೋಹನು ತನ್ನ ಜನರಿಗೆಲ್ಲಾ--(ಇಬ್ರಿಯರಿಗೆ) ಹುಟ್ಟುವ ಗಂಡು ಮಕ್ಕಳನ್ನೆಲ್ಲಾ ನದಿಯಲ್ಲಿ ಹಾಕಬೇಕು. ಹೆಣ್ಣು ಮಕ್ಕಳ ನ್ನೆಲ್ಲಾ ಜೀವದಿಂದ ಉಳಿಸಬೇಕು ಎಂದು ಅಪ್ಪಣೆ ಕೊಟ್ಟನು.
22 Faraó ordenou a todo o seu povo, dizendo: Todo filho que é nascido deveis lançar ao rio, e toda filha preservareis com vida.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Êxodo 1, comparar traduções ou montar um estudo — tudo direto pelo WhatsApp.