Êxodo 28
Kannada Bible (GL_KANNADA) vs VC
VC Versão Católica
1 ಇದಲ್ಲದೆ ನನಗೆ ಯಾಜಕನ ಸೇವೆಮಾಡುವದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ ಅವನ ಮಕ್ಕಳಾದ ನಾದಾಬ್ ಅಬೀಹೂ ಎಲಿಯೇಜರ್ ಈತಾಮಾರ್ ಎಂಬವರನ್ನೂ ಇಸ್ರಾಯೇಲ್ ಮಕ್ಕಳಿಂದ ನಿನ್ನ ಹತ್ತಿರ ಬರಮಾಡ ಬೇಕು.
1 "Faze vir junto de ti, do meio dos israelitas, teu irmão Aarão com seus filhos para me servirem no ofício sacerdotal: Aarão, Nadab, Abiú, Eleazar e Itamar, filhos de Aarão.
2 ನಿನ್ನ ಸಹೋದರನಾದ ಆರೋನನ ಗೌರವ ಕ್ಕೋಸ್ಕರವೂ ಅಲಂಕಾರಕ್ಕೋಸ್ಕರವೂ ಪರಿಶುದ್ಧ ವಸ್ತ್ರಗಳನ್ನು ನೀನು ಮಾಡಿಸಬೇಕು.
2 Farás para teu irmão Aarão vestes sagradas em sinal de dignidade e de ornato.
3 ಇದಲ್ಲದೆ ನಾನು ಜ್ಞಾನದ ಆತ್ಮವನ್ನು ತುಂಬಿಸಿದ ವಿವೇಕ ಹೃದಯ ವಿರುವವರ ಸಂಗಡ ನೀನು ಮಾತನಾಡು, ಅವರು ಆರೋನನ ವಸ್ತ್ರಗಳನ್ನು ಮಾಡಲಿ. ಅವನು ನನಗೆ ಯಾಜಕ ಸೇವೆಮಾಡುವಂತೆ ನೀನು ಅವನನ್ನು ಪ್ರತಿಷ್ಠಿಸ ಬೇಕು.
3 Fala aos homens inteligentes a quem enchi do espírito de sabedoria, para que confeccionem as vestes de Aarão, de sorte que ele seja consagrado ao meu sacerdórcio.
4 ಅವರು ಮಾಡಬೇಕಾದ ವಸ್ತ್ರಗಳು ಇವೇ: ಎದೆಪದಕವು ಎಫೋದ ನಿಲುವಂಗಿ ಕಸೂತಿಯ ಕೆಲಸದ ಮೇಲಂಗಿ ಮುಂಡಾಸ ನಡುಕಟ್ಟು; ನಿನ್ನ ಸಹೋದರ ನಾದ ಆರೋನನೂ ಅವನ ಕುಮಾರರೂ ನನಗೆ ಯಾಜಕ ಸೇವೆಮಾಡುವದಕ್ಕೆ ಅವರಿಗಾಗಿ ಪರಿಶುದ್ಧ ವಸ್ತ್ರಗಳನ್ನು ಮಾಡಬೇಕು.
4 Eis as vestes que deverão fazer: um peitoral, um efod, um manto, uma túnica bordada, um turbante e uma cintura. Tais são as vestes que farão para teu irmão Aarão e para os seus filhos, a fim de que sejam sacerdotes a meu serviço;
5 ಅವರು ಬಂಗಾರವನ್ನೂ ನೀಲಿ ಧೂಮ್ರ ರಕ್ತವರ್ಣದ ನೂಲನ್ನೂ ನಯವಾದ ನಾರು ಮಡಿಯನ್ನೂ ತಕ್ಕೊಳ್ಳಬೇಕು.
5 empregarão ouro, púrpura violeta e escarlate, carmesim e linho fino.
6 ಎಫೋದನ್ನು ಬಂಗಾರದಿಂದಲೂ ನೀಲಿ ಧೂಮ್ರ ರಕ್ತವರ್ಣದ ನೂಲಿನಿಂದಲೂ ನಯವಾದ ಹೊಸೆದ ನಾರಿನಿಂದಲೂ ಕುಶಲ ಕಲೆಯಿಂದಲೂ ಮಾಡಬೇಕು.
6 O efod será feito de ouro, de púrpura violeta e escarlate, de carmesim e de linho fino retorcido, artisticamente tecidos.
7 ಅದರ ಎರಡೂ ಅಂಚುಗಳಲ್ಲಿ ಜೋಡಿಸುವದಕ್ಕೆ ಅದಕ್ಕೆ ಎರಡು ಹೆಗಲು ಭಾಗಗಳಿರಬೇಕು, ಅವು ಜೋಡಿಸಲ್ಪಡಬೇಕು.
7 Nas duas extremidades, haverá duas alças, que o sustentarão.
8 ಅದರ ಮೇಲಿರುವ ವಿಚಿತ್ರ ವಾದ ಎಫೋದಿನ ನಡುಕಟ್ಟು ಅದೇ ಕೆಲಸದ್ದಾಗಿ ಅಂದರೆ ಬಂಗಾರದಿಂದಲೂ ನೀಲಿ ಧೂಮ್ರ ರಕ್ತ ವರ್ಣದ ನೂಲಿನಿಂದಲೂ ನಯವಾದ ಹೊಸೆದ ನಾರಿನಿಂದಲೂ ಮಾಡಿದ್ದಾಗಿರಬೇಕು.
8 O cinto que se passará sobre o efod para fixá-lo será feito do mesmo trabalho e fará com ele uma só peça: ouro, púrpura violeta e escarlate, carmesim e linho fino retorcido.
9 ನೀನು ಎರಡು ಗೋಮೇಧಿಕ ಕಲ್ಲುಗಳನ್ನು ತೆಗೆದುಕೊಂಡು ಇಸ್ರಾ ಯೇಲ್ ಮಕ್ಕಳ ಹೆಸರುಗಳನ್ನು ಅವುಗಳ ಮೇಲೆ ಕೆತ್ತಬೇಕು.
9 Tomarás duas pedras de ônix e gravarás nelas o nome dos filhos de Israel:
10 ಒಂದು ಕಲ್ಲಿನ ಮೇಲೆ ಆರು ಹೆಸರು ಗಳನ್ನೂ ಇನ್ನೊಂದು ಕಲ್ಲಿನ ಮೇಲೆ ಉಳಿದ ಆರು ಹೆಸರುಗಳನ್ನೂ ಅವರವರ ಜನನದ ಪ್ರಕಾರ ಕೆತ್ತಬೇಕು.
10 seis nomes numa pedra, seis noutra, por ordem de idade.
11 ಕಲ್ಲು ಕೆತ್ತುವವರ ಕೆಲಸದಿಂದ ಮುದ್ರೆ ಕೆತ್ತುವ ಪ್ರಕಾರ ಆ ಎರಡು ಕಲ್ಲುಗಳನ್ನು ಇಸ್ರಾಯೇಲ್ ಮಕ್ಕಳ ಹೆಸರುಗಳಿಗನುಸಾರವಾಗಿ ಕೆತ್ತಿಸಿ ಅವುಗಳನ್ನು ಬಂಗಾ ರದ ಜವೆಗಳಲ್ಲಿ ಹೊದಿಸಿದ್ದಾಗಿ ಮಾಡಬೇಕು.
11 Os nomes dos filhos de Israel, que gravarás nas duas pedras, serão à maneira de selos gravados por lapidadores; e as duas pedras serão encaixadas em filigranas de ouro.
12 ಆ ಎರಡು ಕಲ್ಲುಗಳನ್ನು ಎಫೋದಿನ ಹೆಗಲು ಭಾಗದ ಮೇಲೆ ಇಸ್ರಾಯೇಲ್ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಾಗಿ ಇಡಬೇಕು. ಆರೋನನು ತನ್ನ ಎರಡು ಹೆಗಲುಗಳ ಮೇಲೆ ಅವರ ಹೆಸರುಗಳನ್ನು ಕರ್ತನ ಸನ್ನಿಧಿಯಲ್ಲಿ ಜ್ಞಾಪಕಾರ್ಥವಾಗಿ ಹೊರಬೇಕು.
12 Colocarás essas duas pedras nas alças do efod, em memória dos filhos de Israel, cujos nomes serão levados por Aarão nos seus dois ombros, à guisa de memória diante do Senhor.
13 ನೀನು ಬಂಗಾರದ ಜವೆಗಳನ್ನು ಮಾಡಬೇಕು.
13 Farás engastes de ouro
14 ಶುದ್ಧ ಬಂಗಾರದ ಎರಡು ಸರಪಣಿಗಳನ್ನು ಹೆಣಿಗೇ ಕೆಲಸದಿಂದ ಮಾಡಿ ಆ ಹೆಣೆದ ಸರಪಣಿಗಳ ಕೊನೆ ಗಳನ್ನು ಜವೆಗಳಿಗೆ ಸೇರಿಸಬೇಕು.
14 e duas correntinhas de ouro puro entrelaçadas em forma de cordões, que fixarás nos engastes.
15 ನ್ಯಾಯದ ಎದೆ ಪದಕವನ್ನು ಕುಶಲ ಕಲೆಯ ಕೆಲಸದಿಂದ ಅಂದರೆ ಎಫೋದಿನ ಕೆಲಸದ ಹಾಗೆಯೇ ಚಿನ್ನದಿಂದಲೂ ನೀಲಿ ಧೂಮ್ರ ರಕ್ತವರ್ಣದ ನೂಲಿ ನಿಂದಲೂ ನಯವಾದ ಹೊಸೆದ ನಾರಿನಿಂದಲೂ ನೀನು ಮಾಡಿಸಬೇಕು.
15 Farás um peitoral de julgamento artisticamente trabalhado, do mesmo tecido que o efod: ouro, púrpura violeta e escarlate, carmesim e linho fino retorcido.
16 ಅದು ಚಚ್ಚೌಕವಾಗಿಯೂ ಇಮ್ಮಡಿ ಸಿದ್ದಾಗಿಯೂ ಇದ್ದು ಗೇಣುದ್ದವಾಗಿಯೂ ಗೇಣಗಲ ವಾಗಿಯೂ ಇರಬೇಕು.
16 Será quadrado, dobrado em dois, do comprimento de um palmo e de largura de um palmo.
17 ನೀನು ಅದರಲ್ಲಿ ನಾಲ್ಕು ಕಲ್ಲುಗಳ ನಾಲ್ಕು ಸಾಲುಗಳಾಗಿ ಕಲ್ಲು ಜವೆಗಳನ್ನು ಮಾಡಬೇಕು; ಮೊದಲನೆಯ ಸಾಲಿನಲ್ಲಿ ಪದ್ಮರಾಗ ಗೋಮೇಧಕ ಮಾಣಿಕ್ಯಗಳಿರಬೇಕು. ಇದೇ ಮೊದಲ ನೆಯ ಸಾಲು.
17 Guarnecê-lo-ás com quatro fileiras de pedrarias. Primeira fileira: um sárdio, um topázio e uma esmeralda;
18 ಎರಡನೆಯ ಸಾಲಿನಲ್ಲಿ ಪಚ್ಚೆ ನೀಲ ವಜ್ರ ಇರಬೇಕು.
18 Segunda fileira: um rubi, uma safira, um diamante;
19 ಮೂರನೆಯ ಸಾಲಿನಲ್ಲಿ ಸುವರ್ಣ ವೈದೂರ್ಯ ಸುಗಂಧಿಗಳಿರಬೇಕು.
19 terceira fileira: uma opala, uma ágata e uma ametista;
20 ನಾಲ್ಕನೆಯ ಸಾಲಿನಲ್ಲಿ ಬೆರುಲ್ಲ ಗೋಮೇಧಕ ವಜ್ರಗಳಿರಬೇಕು. ಇವು ಚಿನ್ನದ ಜವೆಗಳಲ್ಲಿ ಸೇರಿಸಿದವುಗಳಾಗಿರಬೇಕು.
20 quarta fileira: um crisólito, um ônix e um jaspe. Serão engastadas em uma filigrana de ouro.
21 ಈ ಕಲ್ಲುಗಳು ಇಸ್ರಾಯೇಲ್ ಮಕ್ಕಳ ಹೆಸರುಗಳು ಳ್ಳವುಗಳಾಗಿ ಅವರ ಹೆಸರುಗಳ ಪ್ರಕಾರ ಅವು ಹನ್ನೆರಡಾ ಗಿರಬೇಕು. ಅವು ಒಂದೊಂದರ ಮೇಲೆ ಒಂದೊಂದು ಹೆಸರಿದ್ದು ಹನ್ನೆರಡು ಕುಲಗಳ ಪ್ರಕಾರ ಮುದ್ರೆಗಳ ಹಾಗೆ ಕೆತ್ತಿರಬೇಕು.
21 E, correspondendo aos nomes dos filhos de Israel, serão em número de doze, e em cada uma será gravado o nome de uma das doze tribos, à maneira de um sinete.
22 ಎದೆಪದಕದ ಮೇಲಿನ ಕೊನೆಯಲ್ಲಿ ಶುದ್ಧ ಬಂಗಾರದಿಂದ ಹೆಣೆದ ಸರಪಣಿಗಳನ್ನು ಮಾಡಬೇಕು.
22 Farás também para o peitoral correntinhas de ouro puro, entrelaçadas em forma de cordões.
23 ಆ ಎದೆಪದಕದ ಮೇಲೆ ಬಂಗಾರದ ಎರಡು ಬಳೆ ಗಳನ್ನು ಮಾಡಿ ಆ ಎರಡು ಬಳೆಗಳನ್ನು ಎದೆಪದಕದ ಎರಡು ಕೊನೆಗಳಲ್ಲಿ ಹಾಕಬೇಕು.
23 Farás ainda para o peitoral dois anéis de ouro, que fixarás em suas extremidades.
24 ಚಿನ್ನದಿಂದ ಹೆಣೆದ ಆ ಎರಡು ಸರಪಣಿಗಳನ್ನು ಎದೆಪದಕದ ಕೊನೆಗಳ ಲ್ಲಿರುವ ಎರಡು ಬಳೆಗಳಲ್ಲಿ ಸೇರಿಸಬೇಕು.
24 Passarás os dois cordões de ouro nos dois anéis,
25 ಹೆಣೆದ ಆ ಎರಡು ಸರಪಣಿಗಳ ಕೊನೆಗಳನ್ನು ಎರಡು ಜವೆಗಳಲ್ಲಿ ಸೇರಿಸಿ ಎಫೋದಿನ ಹೆಗಲು ಭಾಗಗಳ ಮುಂದುಗಡೆ ಯಲ್ಲಿ ಇರಿಸಬೇಕು.
25 e prenderás as suas duas pontas nos dois colchetes, metendo-os nas duas alças do efod para o lado da frente.
26 ಬಂಗಾರದಿಂದ ಎರಡು ಬಳೆ ಗಳನ್ನು ಮಾಡಿ ಎದೆಪದಕದ ಎರಡು ಅಂಚುಗಳಲ್ಲಿ ಸೇರಿಸಿ ಎಫೋದಿನ ಬದಿಗೆ ಒಳಗಡೆಯಲ್ಲಿ ಹಾಕಬೇಕು.
26 Farás ainda dois anéis de ouro que fixarás nas duas extremidades do peitoral, na sua orla interior aplicada contra o efod.
27 ಚಿನ್ನದ ಬೇರೆ ಎರಡು ಬಳೆಗಳನ್ನು ಮಾಡಿ ಎಫೋದಿನ ಎರಡು ಹೆಗಲ ಭಾಗಗಳಲ್ಲಿ ಕೆಳಗೆ ಮುಂದುಗಡೆಯಲ್ಲಿ ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಅದನ್ನು ಜೋಡಣೆಯ ಎದುರಾಗಿ ಇರಿಸಬೇಕು.
27 E enfim dois outros anéis de ouro que fixarás na parte dianteira, por baixo das duas alças do efod, à altura da junção, na cintura do efod.
28 ಆ ಎದೆ ಪದಕವನ್ನು ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಇರುವಂತೆಯೂ ಎದೆಪದಕವು ಎಫೋದನ್ನು ಬಿಟ್ಟು ಅಲ್ಲಾಡದಂತೆಯೂ ಅದರ ಬಳೆಗಳನ್ನು ಎಫೋ ದಿನ ಉಂಗುರಗಳಿಗೆ ನೀಲಿ ನೂಲಿನ ದಾರದಿಂದ ಕಟ್ಟಬೇಕು.
28 Prender-se-ão os anéis do peitoral aos do efod por meio de uma fita de púrpura violeta, a fim de que o peitoral se fixe sobre a cintura do efod, e assim não se separe dele.
29 ಹೀಗೆ ಆರೋನನು ಪರಿಶುದ್ಧ ಸ್ಥಳಕ್ಕೆ ಬರುವಾಗ ಇಸ್ರಾಯೇಲ್ ಮಕ್ಕಳ ಹೆಸರುಗಳನ್ನು ಯಾವಾಗಲೂ ಕರ್ತನ ಮುಂದೆ ಜ್ಞಾಪಕಮಾಡುವದಕ್ಕಾಗಿ ನ್ಯಾಯದ ಎದೆ ಪದಕವನ್ನು ತನ್ನ ಹೃದಯದ ಮೇಲೆ ಹೊರಬೇಕು.
29 Desse modo, entrando no santuário, Aarão levará sobre o seu coração os nomes dos filhos de Israel gravados sobre o peitoral de julgamento, como memorial perpétuo diante do Senhor.
30 ನ್ಯಾಯದ ಎದೆಪದಕದಲ್ಲಿ ಊರೀಮ್ ತುವ್ಮೆಾಮ್ ಗಳನ್ನು ಇಡಬೇಕು. ಆರೋನನು ಕರ್ತನ ಸನ್ನಿಧಿಗೆ ಬರುವ ಸಮಯದಲ್ಲಿ ಅವು ಅವನ ಹೃದಯದ ಮೇಲೆ ಇರಬೇಕು. ಹೀಗೆ ಆರೋನನು ಕರ್ತನ ಮುಂದೆ ಯಾವಾಗಲೂ ಇಸ್ರಾಯೇಲ್ ಮಕ್ಕಳ ನ್ಯಾಯವನ್ನು ತನ್ನ ಹೃದಯದ ಮೇಲೆ ಹೊರಬೇಕು.
30 No peitoral de julgamento porás o urim e o turim, para que estejam sobre o peito de Aarão quando ele se apresentar diante do Senhor. Assim Aarão levará constantemente sobre o seu coração, diante do Senhor, o julgamento dos israelitas.
31 ಇದಲ್ಲದೆ ಎಫೋದಿನ ನಿಲುವಂಗಿಯನ್ನೆಲ್ಲಾ ನೀಲಿ ಬಣ್ಣದ ನೂಲಿನಲ್ಲಿ ಮಾಡಬೇಕು.
31 Farás o manto do efod inteiramente de púrpura violeta.
32 ಅದರ ಮಧ್ಯದಲ್ಲಿ ಮೇಲ್ಗಡೆ (ತಲೆದೂರಿಸುವದಕ್ಕೆ) ರಂಧ್ರವಿರಬೇಕು. ಆ ರಂಧ್ರದ ಸುತ್ತಲೂ ಹೆಣಿಗೆಯ ಕೆಲಸದ ಗೋಟಿರ ಬೇಕು. ಅದು ಹರಿಯದ ಹಾಗೆ ಅದಕ್ಕೆ ರಂಧ್ರದ ಕವಚವಿರಬೇಕು.
32 Haverá no meio uma abertura para a cabeça, e em volta uma orla tecida, que será como a abertura de um corselete, para que não se rompa.
33 ನಿಲುವಂಗಿಯ ಅಂಚಿನ ಮೇಲೆ ನೀಲ ಧೂಮ್ರ ರಕ್ತವರ್ಣಗಳ ದಾಳಿಂಬರಗಳನ್ನು ಅದರ ಅಂಚಿನ ಸುತ್ತಲೂ ಮಾಡಿ ಅವುಗಳ ಮಧ್ಯದಲ್ಲಿ ಬಂಗಾರದ ಗಂಟೆಗಳನ್ನು ಸುತ್ತಲೂ ಇರಿಸ ಬೇಕು.
33 Em volta de toda a orla inferior, porás romãs de púrpura violeta e escarlate, assim como carmesim, entremeadas de campainhas de ouro:
34 ಬಂಗಾರದ ಗಂಟೆಯೂ ದಾಳಿಂಬರವೂ ಮೇಲಂಗಿಯ ಅಂಚಿನ ಸುತ್ತಲೂ ಇರಬೇಕು.
34 uma campainha de ouro, uma romã, outra campainha de ouro, outra romã em todo o contorno da orla inferior do manto.
35 ಇದು ಸೇವೆಗಾಗಿ ಆರೋನನ ಮೇಲೆ ಇರಬೇಕು. ಕರ್ತನ ಸಮ್ಮುಖದಲ್ಲಿ ಪರಿಶುದ್ಧ ಸ್ಥಳಕ್ಕೆ ಬರುತ್ತಾ ಹೋಗುತ್ತಾ ಇರುವ ಸಮಯದಲ್ಲಿ ಅವನು ಸಾಯದಂತೆ ಅವುಗಳ ಶಬ್ದವು ಕೇಳಿಸಬೇಕು.
35 Aarão será revestido desse manto quando exercer suas funções, a fim de se ouvir o som das campainhas quando entrar no santuário, diante do Senhor, e quando sair, e para que não morra.
36 ಶುದ್ಧ ಬಂಗಾರದ ತಗಡು ಗಳನ್ನು ಮಾಡಿ ಮುದ್ರೆ ಕೆತ್ತುವ ಪ್ರಕಾರ ಕರ್ತನಿಗೆ ಪರಿಶುದ್ಧ ಎಂದು ಅದರ ಮೇಲೆ ಕೆತ್ತಬೇಕು.
36 Farás uma lâmina de ouro puro na qual gravarás, como num sinete, Santidade a Javé
37 ಅದು ಮುಂಡಾಸದ ಮುಂಭಾಗದಲ್ಲಿರುವಂತೆ ನೀನು ಅದನ್ನು ನೀಲಿ ನೂಲಿನಿಂದ ಕಟ್ಟಬೇಕು.
37 Prendê-la-ás com uma fita de púrpura violeta na frente do turbante.
38 ಇಸ್ರಾಯೇಲ್ ಮಕ್ಕಳು ತಮ್ಮ ಪರಿಶುದ್ಧ ದಾನಗಳನ್ನೆಲ್ಲಾ ಪರಿಶುದ್ಧ ಮಾಡುವ ಪರಿಶುದ್ಧ ಕಾರ್ಯಗಳ ಅಕ್ರಮವನ್ನು ಆರೋನನು ಹೊರುವ ಹಾಗೆ ಅದು ಆರೋನನ ಹಣೆಯ ಮೇಲಿರಬೇಕು. ಕರ್ತನ ಮುಂದೆ ಅವುಗಳೆಲ್ಲಾ ಅಂಗೀಕಾರವಾಗುವ ಹಾಗೆ ಅದು ಯಾವಾಗಲೂ ಅವನ ಹಣೆಯ ಮೇಲೆ ಇರಬೇಕು.
38 Estará na fronte de Aarão, que levará assim a carga das faltas cometidas pelos israelitas, na ocasião de algumas santas ofertas que possam apresentar: estará continuamente na sua fronte, para que os israelitas sejam aceitos pelo Senhor.
39 ನಯವಾದ ನಾರಿನಿಂದ ಕಸೂತಿ ಮಾಡಿದ ಮೇಲಂಗಿಯನ್ನೂ ನಯವಾದ ನಾರಿನ ಮುಂಡಾಸ ವನ್ನೂ ಹೆಣಿಗೆಯ ಕೆಲಸದ ನಡುಕಟ್ಟನ್ನೂ ಮಾಡಿಸ ಬೇಕು.
39 Farás uma túnica de linho, um turbante de linho e uma cintura de bordado.
40 ಆರೋನನ ಕುಮಾರರಿಗೆ ಅಂಗಿಗಳನ್ನು ನಡುಕ ಟ್ಟುಗಳನ್ನು ಮಾಡಿಸಿ ಅವರಿಗೆ ಗೌರವಾರ್ಥವಾಗಿಯೂ ಅಂದಕ್ಕಾಗಿಯೂ ಕುಲಾಯಿಗಳನ್ನೂ ಮಾಡಿಸಬೇಕು.
40 Farás túnicas para os filhos de Aarão, cinturas e tiaras, em sinal de dignidade e de ornato.
41 ಅವುಗಳನ್ನು ನಿನ್ನ ಸಹೋದರನಾದ ಆರೋನ ನಿಗೂ ಅವನ ಕುಮಾರರಿಗೂ ತೊಡಿಸಿ ಅವರನ್ನು ಅಭಿಷೇಕಿಸಿ ಪ್ರತಿಷ್ಠೆಮಾಡು. ಅವರು ನನಗೆ ಯಾಜಕ ಸೇವೆಮಾಡುವ ಹಾಗೆ ಅವರನ್ನು ಶುದ್ಧಮಾಡು.
41 Revestirás desses ornamentos teu irmão Aarão e seus filhos e os ungirás, os empossarás e os consagrarás, a fim de que sejam sacerdotes a meu serviço.
42 ಅವರ ಬೆತ್ತಲೆಯನ್ನು ಮುಚ್ಚುವ ಹಾಗೆ ನಾರಿನ ಇಜಾರುಗಳನ್ನು ಮಾಡಿಸು. ಅವು ಸೊಂಟದಿಂದ ತೊಡೆಯ ವರೆಗೆ ಇರಬೇಕು.
42 Far-lhes-ás também, para cobrir a sua nudez, calções de linho que irão dos rins até as coxas.
43 ಆರೋನನೂ ಅವನ ಕುಮಾರರೂ ಸಭೆಯ ಗುಡಾರಕ್ಕೆ ಹೋಗುವಾಗಲೂ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವದಕ್ಕೆ ಯಜ್ಞವೇದಿಯ ಸವಿಾಪಕ್ಕೆ ಬರುವಾಗಲೂ ತಮ್ಮ ಅಕ್ರಮವನ್ನು ಹೊತ್ತು ಸಾಯದ ಹಾಗೆ ಇವುಗಳನ್ನು ಹಾಕಿಕೊಂಡಿರಬೇಕು. ಇದೇ ಅವನಿಗೂ ಅವನ ತರುವಾಯ ಅವನ ಸಂತತಿಯ ವರಿಗೂ ಇರಬೇಕಾದ ನಿತ್ಯವಾದ ಕಟ್ಟಳೆ.
43 Aarão e seus filhos os levarão quando entrarem na tenda de reunião, ou quando se aproximarem do altar para fazer o serviço do santuário, sob pena de incorrerem numa falta mortal. Esta é uma lei perpétua para Aarão e sua posteridade."
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Êxodo 28, comparar traduções ou montar um estudo — tudo direto pelo WhatsApp.