Êxodo 29
Kannada Bible (GL_KANNADA) vs VC
VC Versão Católica
1 ಅವರು ನನಗೆ ಯಾಜಕ ಸೇವೆಮಾಡು ವಂತೆ ಅವರನ್ನು ಶುದ್ಧಮಾಡುವ ಹಾಗೆ ನೀನು ಅವರಿಗೆ ಮಾಡಬೇಕಾದದ್ದೇನಂದರೆ--ಒಂದು ಹೋರಿಯನ್ನೂ ದೋಷವಿಲ್ಲದ ಎರಡು ಟಗರುಗಳನೂ
1 "Eis como procederás para consagrá-los como sacerdotes a meu serviço.
2 ವಂತೆ ಅವರನ್ನು ಶುದ್ಧಮಾಡುವ ಹಾಗೆ ನೀನು ಅವರಿಗೆ ಮಾಡಬೇಕಾದದ್ದೇನಂದರೆ--ಒಂದು ಹೋರಿಯನ್ನೂ ದೋಷವಿಲ್ಲದ ಎರಡು ಟಗರುಗಳನೂ
2 Tomarás um novilho e dois carneiros sem defeito; pães sem fermento, bolos sem fermento amassados com azeite, bolachas sem fermento untada com azeite, tudo feito de flor de farinha de trigo.
3 ಇವುಗಳನ್ನು ಒಂದೇ ಪುಟ್ಟಿಯಲ್ಲಿ ಇಟ್ಟು ಕೊಂಡು ಹೋರಿ ಮತ್ತು ಎರಡು ಟಗರುಗಳ ಸಂಗಡ ತಕ್ಕೊಂಡು ಬರಬೇಕು.
3 Pô-los-ás em uma cesta e os oferecerás ao mesmo tempo que o novilho e os dois carneiros.
4 ಆರೋನನನ್ನೂ ಅವನ ಕುಮಾರರನ್ನೂ ಸಭೆಯ ಗುಡಾರದ ಬಾಗಲಿನ ಬಳಿಗೆ ತಂದು ನೀರಿನಲ್ಲಿ ಅವರನ್ನು ತೊಳೆಯಬೇಕು.
4 Farás aproximarem-se Aarão e seus filhos da entrada da tenda de reunião, e os submeterás a uma ablução.
5 ತರು ವಾಯ ಆ ವಸ್ತ್ರಗಳನ್ನು ತಕ್ಕೊಂಡು ಆರೋನನಿಗೆ ಅಂಗಿಯನ್ನೂ ಎಫೋದಿನ ನಿಲುವಂಗಿಯನ್ನೂ ಎಫೋ ದನ್ನೂ ಎದೆಪದಕವನ್ನೂ ತೊಡಿಸಿ ಎಫೋದಿನ ವಿಚಿತ್ರ ವಾದ ನಡುಕಟ್ಟನ್ನು ಅವನಿಗೆ ಕಟ್ಟಿ
5 Tomarás, em seguida, os ornamentos e revestirás Aarão com a túnica, o manto do efod, o efod e o peitoral, e lhe porás o cinto do efod.
6 ಅವನ ತಲೆಗೆ ಮುಂಡಾಸವನ್ನು ಇಟ್ಟು ಮುಂಡಾಸದ ಮೇಲೆ ಪರಿಶುದ್ಧ ಕಿರೀಟವನ್ನು ಇಟ್ಟು
6 Pôr-lhe-ás o turbante na cabeça, e sobre o turbante porás o diadema da santidade.
7 ಅಭಿಷೇಕಿಸುವ ಎಣ್ಣೆಯನ್ನು ತೆಗೆದು ಕೊಂಡು ಅವನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಬೇಕು.
7 Tomarás o óleo de unção e o ungirás, derramando-o sobre a cabeça.
8 ನೀನು ಅವನ ಕುಮಾರರನ್ನು ಕರಕೊಂಡು ಬಂದು ಅವರಿಗೆ ಮೇಲಂಗಿಗಳನ್ನು ತೊಡಿಸಿ
8 Mandarás aproximarem-se seus filhos e os revestirás de túnicas.
9 ಆರೋನನಿಗೂ ಅವನ ಕುಮಾರರಿಗೂ ನಡುಕಟ್ಟುಗಳನ್ನು ಕಟ್ಟಿ ಅವರಿಗೆ ಕುಲಾಯಿಗಳನ್ನು ಇಡಬೇಕು. ಹೀಗೆ ಅವರಿಗೆ ಯಾಜಕ ಸೇವೆಯು ಶಾಶ್ವತ ಕಟ್ಟಳೆಯಾಗಿರುವದು. ಆರೋನ ನನ್ನೂ ಅವನ ಕುಮಾರರನ್ನೂ ನೀನು ಪ್ರತಿಷ್ಠೆ ಮಾಡಬೇಕು.
9 Cingi-los-ás com uma cintura, a Aarão e seus filhos, aos quais imporás tiaras. O sacerdócio lhes pertencerá em virtude de uma lei perpétua. Empossarás Aarão e seus filhos.
10 ಇದಲ್ಲದೆ ಆ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು. ಆರೋನನೂ ಅವನ ಕುಮಾರರೂ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
10 Levarás o novilho diante da tenda de reunião: Aarão e seus filhos imporão suas mãos sobre a sua cabeça.
11 ತರುವಾಯ ನೀನು ಆ ಹೋರಿಯನ್ನು ಕರ್ತನ ಮುಂದೆ ಸಭೆಯ ಗುಡಾರದ ಬಾಗಲಲ್ಲಿ ವಧಿಸಬೇಕು.
11 E imolarás em presença do Senhor o novilho, na entrada da tenda de reunião.
12 ನೀನು ಹೋರಿಯ ರಕ್ತವನ್ನು ತೆಗೆದುಕೊಂಡು ನಿನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ರಕ್ತವನ್ನೆಲ್ಲಾ ಯಜ್ಞವೇದಿಯ ಅಡಿಯಲ್ಲಿ ಸುರಿಯಬೇಕು.
12 Depois tomarás do sangue do novilho, e com o dedo o porás sobre os chifres do altar e derramarás o resto ao pé do altar.
13 ನೀನು ಕರುಳುಗಳನ್ನೂ ಅವುಗಳ ಮೇಲೆ ಇರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲೆ ಬರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಮೇಲೆ ಇರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಡಬೇಕು.
13 Tomarás toda a gordura que cobre as entranhas, a membrana do fígado, os dois rins e a gordura que os envolve, e queimarás tudo sobre o altar.
14 ಇದಲ್ಲದೆ ಹೋರಿಯ ಮಾಂಸ ವನ್ನೂ ಅದರ ಚರ್ಮವನ್ನೂ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಬೇಕು. ಅದು ಪಾಪದ ಬಲಿಯಾಗಿದೆ.
14 Mas a carne de touro, seu pêlo e seus excrementos, tu os queimarás fora do acampamento: é um sacrifício pelo pecado.
15 ನೀನು ಒಂದು ಟಗರನ್ನು ಸಹ ತೆಗೆದುಕೊಳ್ಳ ಬೇಕು. ಆರೋನನೂ ಅವನ ಕುಮಾರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
15 Tomarás um dos carneiros, e Aarão e seus filhos imporão suas mãos sobre sua cabeça.
16 ತರು ವಾಯ ಆ ಟಗರನ್ನು ನೀನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಬೇಕು.
16 Degolá-lo-ás e tomarás do seu sangue para derramá-lo em volta do altar.
17 ಇದಲ್ಲದೆ ಆ ಟಗರನ್ನು ತುಂಡು ತುಂಡಾಗಿ ಕಡಿದು ಅದರ ಕರುಳುಗಳನ್ನೂ ಕಾಲುಗಳನ್ನೂ ತೊಳೆದು ಅದರ ತುಂಡುಗಳನ್ನು ತಲೆಯ ಸಂಗಡ ಇಡಬೇಕು.
17 Cortarás o carneiro em pedaços, e depois de ter lavado os intestinos e as pernas, pô-los-ás sobre os pedaços e sobre a cabeça;
18 ಆ ಟಗರನ್ನು ಯಜ್ಞವೇದಿಯ ಮೇಲೆ ಸುಡಬೇಕು, ಅದು ಕರ್ತನಿಗೆ ದಹನಬಲಿಯಾಗಿದೆ. ಅದು ಕರ್ತನಿಗೆ ಸುವಾಸನೆಯ ದಹನಬಲಿಯಾಗಿದೆ.
18 e queimarás o carneiro todo sobre o altar. É um holocausto ao Senhor, um sacrifício de agradável odor consumido em honra do Senhor.
19 ಇನ್ನೊಂದು ಟಗರನ್ನು ನೀನು ತಂದಾಗ ಆರೋ ನನೂ ಅವನ ಕುಮಾರರೂ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
19 Tomarás, em seguida, o segundo carneiro, e Aarão e seus filhos imporão suas mãos sobre sua cabeça.
20 ತರುವಾಯ ನೀನು ಅದನ್ನು ವಧಿಸಿ ಅದರ ರಕ್ತವನ್ನು ಆರೋನನ ಮತ್ತು ಅವನ ಕುಮಾರರ ಬಲ ಕಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಿ ಮಿಕ್ಕ ರಕ್ತವನ್ನು ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
20 Degolá-lo-ás e tomarás do seu sangue para metê-lo na extremidade da orelha direita de Aarão e na extremidade da orelha direita de seus filhos, sobre os dedos polegares de suas mãos direitas e sobre os hálux de seus pés direitos. Depois derramarás o resto do sangue em volta do altar.
21 ಆರೋನನೂ ಅವನ ವಸ್ತ್ರಗಳೂ ಅವನೊಂದಿಗೆ ಅವನ ಕುಮಾರರೂ ಅವರ ವಸ್ತ್ರಗಳೂ ಪರಿಶುದ್ಧ ವಾಗುವ ಹಾಗೆ ಯಜ್ಞವೇದಿಯ ಮೇಲಿರುವ ರಕ್ತವನ್ನೂ ಅಭಿಷೇಕ ತೈಲವನ್ನೂ ತೆಗೆದುಕೊಂಡು ಆರೋನನ ಮೇಲೆಯೂ ಅವನ ವಸ್ತ್ರಗಳ ಮೇಲೆಯೂ ಅವನ ಕುಮಾರರ ಮೇಲೆಯೂ ಅವರ ವಸ್ತ್ರಗಳ ಮೇಲೆಯೂ ನೀನು ಚಿಮುಕಿಸಬೇಕು.
21 Aspergirás Aarão e suas vestes, e igualmente seus filhos e suas vestes, com o sangue tomado do altar e com o óleo de unção. Eles serão assim consagrados, ele e suas vestes, bem como seus filhos e suas vestes.
22 ಇದಲ್ಲದೆ ಆ ಟಗರಿನ ಕೊಬ್ಬನ್ನೂ ಬಾಲವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ ಕಲಿಜದ ಮೇಲಿ ರುವ ಪರೆಯನ್ನೂ ಮೂತ್ರಜನಕಾಂಗಗಳನ್ನೂ ಅವು ಗಳ ಮೇಲಿರುವ ಕೊಬ್ಬನ್ನೂ ಬಲ ತೊಡೆಯನ್ನೂ ತೆಗೆದುಕೊಳ್ಳಬೇಕು. ಯಾಕಂದರೆ ಅದು ಪ್ರತಿಷ್ಠೆಯ ಟಗರು.
22 Tomarás tudo o que é gordura no carneiro, a cauda, a gordura que envolve as entranhas, a membrana do fígado, os dois rins e a gordura que os envolve, e a coxa direita, porque é um carneiro de inauguração.
23 ಕರ್ತನ ಮುಂದಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಒಂದು ರೊಟ್ಟಿಯನ್ನೂ ಎಣ್ಣೆಯ ಒಂದು ಹೋಳಿಗೆಯನ್ನೂ ಒಂದು ಪೂರಿ ಯನ್ನೂ
23 Tomarás ainda, na cesta de pães sem fermento colocada diante do Senhor, um pão, um bolo e uma bolacha.
24 ನೀನು ತೆಗೆದುಕೊಂಡು ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಕುಮಾರರ ಕೈಗಳಿಗೆ ಕೊಟ್ಟು ಅವರು ಕರ್ತನ ಮುಂದೆ ಅದನ್ನು ತೂಗು ಅರ್ಪಣೆಗಾಗಿ ತೂಗಬೇಕು.
24 Meterás tudo isso nas palmas das mãos de Aarão e de seus filhos, e os oferecerás, agitando-os, como oblação diante do Senhor.
25 ನೀನು ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ದಹನಬಲಿ ಯಾಗಿ ಕರ್ತನ ಮುಂದೆ ಸುವಾಸನೆಗೋಸ್ಕರ ದಹಿಸ ಬೇಕು. ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಅರ್ಪಣೆ.
25 Tu os retomarás, em seguida, de suas mãos e os queimarás no altar sobre o holocausto. Este é um sacrifício de agradável odor apresentado ao Senhor, um sacrifício pelo fogo ao Senhor.
26 ಇದಲ್ಲದೆ ಆರೋನನು ಪ್ರತಿಷ್ಠೆಯ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ಕರ್ತನ ಮುಂದೆ ತೂಗು ಅರ್ಪಣೆಗಾಗಿ ತೂಗಬೇಕು. ಅದು ನಿನ್ನ ಪಾಲಾಗಿರುವದು.
26 Tomarás o peito do carneiro de inauguração de Aarão e o oferecerás, agitando-o, como oblação diante do Senhor. Esta será a tua porção.
27 ನೀನು ಟಗರಿನ ಎದೆಯ ಭಾಗದ ಆಡಿಸುವ ಅರ್ಪಣೆಯನ್ನು ಎತ್ತಿದ ಬಲದ ಮುಂದೊ ಡೆಯನ್ನು ಆರೋನನ ಮತ್ತು ಅವನ ಕುಮಾರರ ಪ್ರತಿಷ್ಠೆಗಾಗಿ ಎತ್ತಿದ್ದನ್ನೂ ಪರಿಶುದ್ಧ ಮಾಡು.
27 Consagrarás então o peito da oferta agitada e a perna da oferta reservada, todas as partes agitadas e reservadas do carneiro de inauguração que são destinadas a Aarão e seus filhos.
28 ಅದು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲ್ ಮಕ್ಕಳಿಗೆ ನಿತ್ಯ ಕಟ್ಟಳೆಯಾಗಿರತಕ್ಕದ್ದು. ಯಾಕಂದರೆ ಅದು ಎತ್ತುವ ಅರ್ಪಣೆಯಾಗಿದೆ. ಇಸ್ರಾಯೇಲ್ ಮಕ್ಕಳಿಂದ ಎತ್ತುವ ಅರ್ಪಣೆಯೂ ಅವರ ಸಮಾ ಧಾನದ ಬಲಿಗಳ ಅರ್ಪಣೆಗಳಿಂದ ಅವರು ಕರ್ತನಿಗೆ ಎತ್ತುವ ಅರ್ಪಣೆಯೂ ಆಗಿರಬೇಕು.
28 Este será um direito perpétuo devido a Aarão e seus filhos pelos israelitas; esta é uma oferta reservada - aquela que os israelitas terão de tomar de seus sacrifícios pacíficos -, uma reserva que devem ao Senhor.
29 ಇದಲ್ಲದೆ ಆರೋನನಿಗೆ ಇದ್ದ ಪರಿಶುದ್ಧ ವಸ್ತ್ರಗಳು ಅವನ ತರುವಾಯ ಅವನ ಕುಮಾರರಿಗೆ ಆಗಬೇಕು. ಅವರು ಅವುಗಳನ್ನು ತೊಟ್ಟುಕೊಂಡು ಅಭಿಷೇಕಿಸಲ್ಪಟ್ಟು ಪ್ರತಿಷ್ಠಿಸಲ್ಪಡಬೇಕು.
29 Os ornamentos sagrados de Aarão servirão para seus filhos depois dele, que os vestirão quando se lhes der a unção e forem empossados.
30 ಅವನ ಬದಲಾಗಿ ಅವನ ಮಗನು ಯಾಜಕತ್ವವನ್ನು ನಡಿಸಿ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವಂತೆ ಬರುವದಕ್ಕಿರುವವನು ಅವುಗಳನ್ನು ಏಳು ದಿನಗಳ ವರೆಗೆ ತೊಟ್ಟುಕೊಳ್ಳಬೇಕು.
30 Aquele dentre os seus filhos que for sumo sacerdote em seu lugar, e que penetrar na tenda de reunião para o serviço do santuário, os levará durante sete dias.
31 ಪ್ರತಿಷ್ಠೆಯ ಟಗರನ್ನು ತೆಗೆದುಕೊಂಡು ನೀನು ಅದರ ಮಾಂಸವನ್ನು ಪರಿಶುದ್ಧ ಸ್ಥಳದಲ್ಲಿ ಬೇಯಿಸು.
31 Tomarás o carneiro de inauguração e farás cozer a sua carne em um lugar santo.
32 ಆರೋನನೂ ಅವನ ಕುಮಾರರೂ ಟಗರಿನ ಮಾಂಸ ವನ್ನೂ ಪುಟ್ಟಿಯಲ್ಲಿರುವ ರೊಟ್ಟಿಯನ್ನೂ ಸಭೆಯ ಗುಡಾ ರದ ಬಾಗಲಿನ ಬಳಿಯಲ್ಲಿ ಊಟಮಾಡಬೇಕು.
32 Aarão e seus filhos comerão a sua carne e o pão que está na cesta à entrada da tenda de reunião.
33 ಅವ ರನ್ನು ಪ್ರತಿಷ್ಠೆಮಾಡುವದಕ್ಕೋಸ್ಕರ ಮತ್ತು ಪರಿಶುದ್ಧ ಮಾಡುವದಕ್ಕೋಸ್ಕರ ಅವರಿಗಾಗಿ ಪ್ರಾಯಶ್ಚಿತ್ತ ಮಾಡಿ ದವುಗಳನ್ನು ಅವರೇ ಊಟಮಾಡಬೇಕು. ಅನ್ಯರು ಅವುಗಳನ್ನು ಉಣ್ಣಬಾರದು, ಯಾಕಂದರೆ ಅವುಗಳು ಪರಿಶುದ್ಧವಾದವುಗಳು.
33 Comerão o que tiver sido utilizado para a expiação quando de sua tomada de posse e sua consagração. Estrangeiro algum comerá deles, porque são coisas santas.
34 ಪ್ರತಿಷ್ಠೆಯ ಮಾಂಸದ ಲ್ಲಿಯೂ ರೊಟ್ಟಿಯಲ್ಲಿಯೂ ಮರುದಿನದ ವರೆಗೆ ಏನಾದರೂ ಮಿಕ್ಕಿದ್ದರೆ ಅದನ್ನು ಬೆಂಕಿಯಿಂದ ಸುಡ ಬೇಕು. ಅದು ಪರಿಶುದ್ಧವಾಗಿರುವದರಿಂದ ಅದನ್ನು ಊಟ ಮಾಡಬಾರದು.
34 Se sobrar ainda da carne da vítima de inauguração ou do pão até o dia seguinte, queimarás o resto: não será comido, porque é uma coisa santa.
35 ಹೀಗೆ ಆರೋನನಿಗೂ ಅವನ ಕುಮಾರರಿಗೂ ನಾನು ನಿನಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರ ನಡಿಸಿ ಏಳು ದಿವಸ ಅವರನ್ನು ಪ್ರತಿಷ್ಠೆಮಾಡಬೇಕು.
35 Quanto a Aarão e seus filhos, farás como te ordenei: empregarás sete dias em sua tomada de posse.
36 ಪಾಪದ ಯಜ್ಞವಾದ ಹೋರಿಯನ್ನು ಪ್ರತಿದಿನ ಪ್ರಾಯಶ್ಚಿತ್ತಕ್ಕಾಗಿ ತಂದು ಯಜ್ಞವೇದಿಗಾಗಿ ಪ್ರಾಯ ಶ್ಚಿತ್ತ ಮಾಡಿದ ಮೇಲೆ ಅದರ ದೋಷವನ್ನು ಪರಿ ಹರಿಸಿ ಅದನ್ನು ಪವಿತ್ರಮಾಡುವದಕ್ಕೆ ಅದನ್ನು ಅಭಿಷೇಕಿಸಬೇಕು.
36 Cada dia imolarás um novilho em sacrifício expiatório pelo pecado; por esse sacrifício expiatório tirarás o pecado do altar, e far-lhe-ás uma unção para consagrá-lo.
37 ಏಳು ದಿವಸ ಯಜ್ಞವೇದಿಗೋಸ್ಕರ ಪ್ರಾಯಶ್ಚಿತ್ತ ಮಾಡಿ ಅದನ್ನು ಪವಿತ್ರಮಾಡಬೇಕು. ಆಗ ಯಜ್ಞ ವೇದಿಯು ಅತಿಪರಿಶುದ್ಧವಾಗಿರುವದು. ಯಜ್ಞವೇದಿ ಯನ್ನು ಮುಟ್ಟುವದೆಲ್ಲಾ ಪವಿತ್ರವಾಗಿರಬೇಕು.
37 A expiação do altar se fará durante sete dias; e consagrarás esse altar, que se tornará coisa santíssima, e tudo o que o tocar será consagrado."
38 ಇದಲ್ಲದೆ ಯಜ್ಞವೇದಿಯ ಮೇಲೆ ನೀನು ಅರ್ಪಿಸ ಬೇಕಾದದ್ದು ಇದೇ; ಒಂದು ವರುಷದ ಎರಡು ಕುರಿಮರಿಗಳನ್ನು ಪ್ರತಿದಿನ ಬಿಡದೆ ಅರ್ಪಿಸಬೇಕು.
38 "Eis o que sacrificarás sobre o altar: dois cordeiros de um ano em cada dia, perpetuamente.
39 ಒಂದು ಕುರಿಮರಿಯನ್ನು ಬೆಳಿಗ್ಗೆ ಅರ್ಪಿಸಬೇಕು, ಮತ್ತೊಂದನ್ನು ಸಾಯಂಕಾಲ ಅರ್ಪಿಸಬೇಕು.
39 Oferecerás um desses cordeiros pela manhã e o outro entre as duas tardes.
40 ಹಿನ್ನಿನ ನಾಲ್ಕನೆಯ ಒಂದು ಪಾಲಿನಷ್ಟು ಹಿಂಡಿದ ಎಣ್ಣೆ ಹೊಯಿದ ನಯವಾದ ಹಿಟ್ಟಿನ ಹತ್ತನೆಯ ಪಾಲೂ ಹಿನ್ನಿನ ನಾಲ್ಕನೆಯ ಪಾಲಿನಷ್ಟು ದ್ರಾಕ್ಷಾರಸದ ಪಾನ ದರ್ಪಣೆಯೂ ಒಂದು ಕುರಿಮರಿಯೊಂದಿಗೆ ಅರ್ಪಿಸ ಬೇಕು.
40 Com o primeiro cordeiro oferecerás a décima parte de um efá de flor de farinha amassada com um quarto de hin de óleo de olivas esmagadas, e como libação um quarto de hin de vinho.
41 ಇನ್ನೊಂದು ಕುರಿಮರಿಯನ್ನು ಸಾಯಂಕಾಲ ದಲ್ಲಿ ಅರ್ಪಿಸಬೇಕು. ಉದಯದ ಆಹಾರ ಕಾಣಿಕೆ ಯಂತೆಯೂ ಅದರ ಪಾನದರ್ಪಣೆಯಂತೆಯೂ ಇದಕ್ಕೂ ಮಾಡಿ ಕರ್ತನಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಅರ್ಪಿಸಬೇಕು.
41 Entre as duas tardes oferecerás o segundo cordeiro, acompanhado de uma oferta e de uma libação semelhantes às da manhã. Este é um sacrifício de agradável odor consumido pelo fogo em honra do Senhor.
42 ಇದು ತಲತಲಾಂತರಗಳಲ್ಲಿಯೂ ನಿತ್ಯಕ್ಕೂ ಸಭೆಯ ಗುಡಾರದ ಮುಂದೆ ಕರ್ತನ ಸನ್ನಿಧಿಯಲ್ಲಿ ನಾನು ನಿಮ್ಮ ಸಂಗಡ ಮಾತನಾಡುವದಕ್ಕೆ ಸಂಧಿಸುವಲ್ಲಿ ಇದೇ ನಿತ್ಯವಾದ ದಹನಬಲಿಯಾಗಿರುವದು.
42 Este holocausto será perpétuo e será oferecido, em todas as gerações futuras, à entrada da tenda de reunião, diante do Senhor, onde virei a vós, para falar contigo.
43 ಅಲ್ಲಿ ನಾನು ಇಸ್ರಾಯೇಲ್ ಮಕ್ಕಳನ್ನು ಸಂಧಿಸುವೆನು. ಗುಡಾರವು ನನ್ನ ಮಹಿಮೆಯಿಂದ ಪವಿತ್ರವಾಗುವದು.
43 É nesse lugar que darei entrevista aos filhos de Israel, e ele será consagrado pela minha glória.
44 ಸಭೆಯ ಗುಡಾರವನ್ನೂ ಯಜ್ಞವೇದಿಯನ್ನೂ ಪರಿಶುದ್ಧಮಾಡುವೆನು. ಆರೋನನನ್ನೂ ಅವನ ಕುಮಾರರನ್ನೂ ನನಗೆ ಯಾಜಕ ಸೇವೆಮಾಡುವಂತೆ ಪವಿತ್ರಮಾಡುವೆನು.
44 Consagrarei a tenda de reunião e o altar; consagrarei igualmente Aarão e seus filhos, para que sejam sacerdotes a meu serviço.
45 ಇಸ್ರಾಯೇಲ್ ಮಕ್ಕಳ ಮಧ್ಯ ದಲ್ಲಿ ನಾನು ವಾಸಮಾಡಿ ಅವರಿಗೆ ದೇವರಾಗಿರುವೆನು.
45 Habitarei no meio dos israelitas e serei o seu Deus.
46 ಅವರ ಮಧ್ಯದಲ್ಲಿ ನಾನು ವಾಸವಾಗಿರುವದಕ್ಕಾಗಿ ಅವರನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ ಅವರ ದೇವರಾದ ಕರ್ತನು ನಾನೇ ಎಂದು ಅವರಿಗೆ ತಿಳಿಯುವದು. ನಾನೇ ಅವರ ದೇವರಾದ ಕರ್ತನು.
46 Saberão então que eu, o Senhor, sou o seu Deus que os tirou do Egito para habitar entre eles, eu, o Senhor seu Deus."
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Êxodo 29, comparar traduções ou montar um estudo — tudo direto pelo WhatsApp.