Êxodo 40

Kannada Bible (GL_KANNADA) vs NAA

Sair da comparação
NAA Nova Almeida Atualizada 2017
1 ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ--
1 Depois o Senhor disse a Moisés:
2 ಮೊದಲನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸಭೆಯ ಡೇರೆಯನ್ನು ಮತ್ತು ಗುಡಾರವನ್ನು ಎತ್ತಿ ನಿಲ್ಲಿಸು.
2 — No primeiro dia do primeiro mês, arme o tabernáculo da tenda do encontro.
3 ಮಂಜೂಷದ ಸಾಕ್ಷಿಯ ಪೆಟ್ಟಿಗೆಯನ್ನು ಒಳಗಿಟ್ಟು ಅದನ್ನು ನೀನು ತೆರೆಯಿಂದ ಮುಚ್ಚಬೇಕು.
3 Ponha nele a arca do testemunho e cubra-a com o véu.
4 ಮೇಜನ್ನು ಒಳಗೆ ತಂದು ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು. ದೀಪ ಸ್ತಂಭವನ್ನು ಒಳಗೆ ತಂದು ನೀನು ಅದರ ದೀಪಗಳನ್ನು ಅಂಟಿಸಬೇಕು.
4 Ponha nele a mesa e coloque em ordem as coisas que estão sobre ela; ponha nele também o candelabro e monte as suas lâmpadas.
5 ನೀನು ಧೂಪಕ್ಕೋಸ್ಕರ ಮಾಡಿದ ಚಿನ್ನದ ಬಲಿಪೀಠವನ್ನು ಮಂಜೂಷದ ಸಾಕ್ಷಿಯ ಪೆಟ್ಟಿಗೆಗೆ ಎದುರಾಗಿ ಇಟ್ಟು, ಗುಡಾರದ ಬಾಗಿಲಿಗೆ ತೆರೆಯನ್ನು ಹಾಕಬೇಕು.
5 Coloque o altar de ouro para o incenso diante da arca do testemunho e pendure o cortinado da porta do tabernáculo.
6 ನೀನು ದಹನಬಲಿಪೀಠವನ್ನು ಸಭೆಯ ಡೇರೆಯಾದ ಗುಡಾರದ ಬಾಗಿಲಿಗೆ ಎದುರಾಗಿ ಇಡ ಬೇಕು.
6 Coloque o altar do holocausto diante da porta do tabernáculo da tenda do encontro.
7 ನೀನು ಸಭೆಯ ಡೇರೆಗೂ ಯಜ್ಞವೇದಿಗೂ ಮಧ್ಯದಲ್ಲಿ ಗಂಗಾಳವನ್ನಿಟ್ಟು ಅದರಲ್ಲಿ ನೀರನ್ನು ಹೊಯ್ಯ ಬೇಕು.
7 Ponha a bacia entre a tenda do encontro e o altar e encha-a com água.
8 ಅದರ ಸುತ್ತಲೂ ಆವರಣವನ್ನು ನಿಲ್ಲಿಸಿ, ಆ ಆವರಣದ ಬಾಗಿಲಿನ ಬಳಿಯಲ್ಲಿ ನೀನು ತೆರೆಯನ್ನು ತೂಗುಹಾಕಬೇಕು.
8 Depois, arme o átrio ao redor e pendure o cortinado à porta do átrio.
9 ನೀನು ಅಭಿಷೇಕ ತೈಲವನ್ನು ತಕ್ಕೊಂಡು ಗುಡಾರ ವನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಅಭಿಷೇಕಿಸಿ ಅದನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಪರಿಶುದ್ಧ ಮಾಡು; ಆಗ ಅದು ಪರಿಶುದ್ಧವಾಗುವದು.
9 — Pegue o óleo da unção, e unja o tabernáculo e tudo o que nele está, e consagre-o com todos os seus pertences; e será santo.
10 ದಹನಬಲಿಪೀಠವನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ನೀನು ಅಭಿಷೇಕಿಸಿ ಬಲಿಪೀಠವನ್ನು ಪವಿತ್ರ ಮಾಡು; ಆಗ ಅದು ಅತೀ ಪರಿಶುದ್ಧವಾದ ಬಲಿಪೀಠ ವಾಗುವದು.
10 Unja também o altar do holocausto e todos os seus utensílios e consagre o altar; e o altar se tornará santíssimo.
11 ಗಂಗಾಳವನ್ನೂ ಅದರ ಕಾಲುಗಳನ್ನೂ ನೀನು ಅಭಿಷೇಕಿಸಿ ಅದನ್ನು ಪರಿಶುದ್ಧ ಮಾಡಬೇಕು.
11 Depois, unja a bacia e o seu suporte e consagre-a.
12 ಆರೋನನನ್ನೂ ಅವನ ಮಕ್ಕಳನ್ನೂ ಸಭೆಯ ಗುಡಾರದ ಬಾಗಿಲಿನ ಬಳಿಗೆ ಬರಮಾಡಿ ಅವರನ್ನು ನೀರಿನಿಂದ ತೊಳೆಯಬೇಕು.
12 — Faça com que Arão e seus filhos se aproximem da porta da tenda do encontro e mande que se lavem com água.
13 ಆರೋನನು ನನಗೆ ಯಾಜಕ ಸೇವೆಮಾಡುವ ಹಾಗೆ ಅವನಿಗೆ ಪರಿಶುದ್ಧ ವಸ್ತ್ರಗಳನ್ನು ತೊಡಿಸಿ, ಅವನನ್ನು ಅಭಿಷೇಕಿಸಿ ಶುದ್ಧ ಮಾಡಬೇಕು.
13 Vista Arão com as vestes sagradas, unja e consagre-o para que me sirva como sacerdote.
14 ಅವನ ಕುಮಾರರನ್ನು ನೀನು ಬರ ಮಾಡಿಕೊಂಡು ಅವರಿಗೆ ಅಂಗಿಗಳನ್ನು ತೊಡಿಸಿ
14 Faça com que também os filhos de Arão se aproximem, vista-os com as túnicas,
15 ಅವರ ತಂದೆಯನ್ನು ಅಭಿಷೇಕಿಸಿದ ಪ್ರಕಾರ ಅವರು ನನಗೆ ಯಾಜಕ ಸೇವೆಯನ್ನು ಮಾಡುವ ಹಾಗೆ ಅವ ರನ್ನೂ ನೀನು ಅಭಿಷೇಕಿಸು. ಅವರ ಅಭಿಷೇಕವು ನಿಶ್ಚಯವಾಗಿದ್ದು ಅವರ ಸಂತತಿಗಳಲ್ಲಿ ನಿತ್ಯವಾದ ಯಾಜಕತ್ವವಾಗಿರುವದು ಎಂದು ಹೇಳಿದನು.
15 e unja-os assim como você ungiu o pai deles, para que me oficiem como sacerdotes; sua unção lhes será por sacerdócio perpétuo de geração em geração.
16 ಮೋಶೆಯು ಹಾಗೆಯೇ ಮಾಡಿದನು. ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರವೇ ಅವನು ಎಲ್ಲವನ್ನು ಮಾಡಿದನು.
16 E Moisés fez tudo segundo o Senhor lhe havia ordenado.
17 ಎರಡನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಗುಡಾರವು ನಿಲ್ಲಿಸಲ್ಪಟ್ಟಿತು.
17 No primeiro mês do segundo ano, no primeiro dia do mês, o tabernáculo foi armado.
18 ಆಗ ಮೋಶೆಯು ಗುಡಾರವನ್ನು ನಿಲ್ಲಿಸಿ ಅದರ ಕಾಲುಗಳನ್ನು ಬಿಗಿದು ಅದರ ಹಲಗೆಗಳನ್ನು ಇರಿಸಿ ಅಗುಳಿಗಳನ್ನು ಹಾಕಿ ಅದರ ಸ್ತಂಭಗಳನ್ನು ನಿಲ್ಲಿಸಿದನು.
18 Moisés ergueu o tabernáculo, pôs as suas bases, armou as suas tábuas, colocou nele as suas vigas superiores e levantou as suas colunas;
19 ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಗುಡಾರದ ಮೇಲೆ ಡೇರೆಯನ್ನು ಹರಡಿಸಿ ಡೇರೆಯ ಹೊದಿಕೆಯನ್ನು ಅದರ ಮೇಲೆ ಹಾಕಿದನು.
19 estendeu a tenda sobre o tabernáculo e pôs a cobertura da tenda por cima, segundo o Senhor havia ordenado a Moisés.
20 ಅವನು ಪ್ರಮಾಣವನ್ನು ತೆಗೆದುಕೊಂಡು ಮಂಜೂಷದ ಪೆಟ್ಟಿಗೆಯಲ್ಲಿ ಇಟ್ಟು ಮಂಜೂಷಕ್ಕೆ ಕೋಲುಗಳನ್ನು ಸೇರಿಸಿ ಮಂಜೂಷದ ಮೇಲೆ ಕರುಣಾ ಸನವನ್ನು ಇಟ್ಟನು.
20 Pegou o testemunho e o pôs na arca, passou os cabos na arca e pôs o propiciatório em cima da arca.
21 ಅವನು ಮಂಜೂಷವನ್ನು ಗುಡಾರಕ್ಕೆ ತಂದು ಮರೆಮಾಡುವ ತೆರೆಯನ್ನಿರಿಸಿದನು. ಕರ್ತನು ಹೇಳಿದ ಹಾಗೆಯೇ ಮೋಶೆಯು ಮಾಡಿದನು.
21 Introduziu a arca no tabernáculo, pendurou o véu do cortinado e com ele cobriu a arca do testemunho, segundo o Senhor havia ordenado a Moisés.
22 ಸಭೆ ಡೇರೆಯ ಗುಡಾರದ ಉತ್ತರ ಭಾಗದಲ್ಲಿ ತೆರೆಯ ಹೊರಗೆ ಮೇಜನ್ನು ಇಟ್ಟನು.
22 Pôs também a mesa na tenda do encontro, ao lado do tabernáculo, para o norte, fora do véu,
23 ರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ರೊಟ್ಟಿ ಯನ್ನು ಕರ್ತನ ಸನ್ನಿಧಿಯಲ್ಲಿ ಕ್ರಮವಾಗಿ ಇಟ್ಟನು.
23 e sobre ela pôs em ordem os pães da proposição diante do Senhor , segundo o Senhor havia ordenado a Moisés.
24 ಸಭೆಯ ಡೇರೆಯಲ್ಲಿ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಟ್ಟನು.
24 Pôs também, na tenda do encontro, o candelabro diante da mesa, ao lado do tabernáculo, para o sul,
25 ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಕರ್ತನ ಸನ್ನಿಧಿಯಲ್ಲಿ ದೀಪಗಳನ್ನು ಹತ್ತಿಸಿದನು.
25 e preparou as lâmpadas diante do Senhor , segundo o Senhor havia ordenado a Moisés.
26 ಚಿನ್ನದ ವೇದಿಯನ್ನು ಸಭೆಯ ಡೇರೆಯಲ್ಲಿ ತೆರೆಯ ಮುಂದೆ ಇಟ್ಟನು.
26 Pôs o altar de ouro na tenda do encontro, diante do véu,
27 ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ಪರಿಮಳ ಧೂಪವನ್ನು ಸುಟ್ಟನು.
27 e acendeu sobre ele o incenso aromático, segundo o Senhor havia ordenado a Moisés.
28 ಗುಡಾರದ ಬಾಗಿಲಿನ ತೆರೆಯನ್ನು ತೂಗುಹಾಕಿ ದನು. ಸಭೆ ಡೇರೆಯ ಗುಡಾರದ ಬಳಿಯಲ್ಲಿ ದಹನ ಬಲಿಪೀಠವನ್ನು ಇಟ್ಟನು.
28 Pendurou também o cortinado da porta do tabernáculo,
29 ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ದಹನಬಲಿಯನ್ನೂ ಆಹಾರಸಮರ್ಪಣೆಯನ್ನೂ ಅರ್ಪಿಸಿದನು.
29 pôs o altar do holocausto à porta do tabernáculo da tenda do encontro e ofereceu sobre ele holocausto e oferta de cereais, segundo o Senhor havia ordenado a Moisés.
30 ಸಭೆ ಡೇರೆಗೂ ಯಜ್ಞವೇದಿಗೂ ಮಧ್ಯ ಗಂಗಾಳ ವನ್ನು ಇಟ್ಟು ಅದರಲ್ಲಿ ತೊಳೆಯುವದಕ್ಕೆ ನೀರನ್ನು ಹೊಯ್ದನು.
30 Pôs a bacia entre a tenda do encontro e o altar e a encheu de água, para se lavar.
31 ಮೋಶೆಯೂ ಆರೋನನೂ ಅವನ ಕುಮಾರರೂ ಅದರಲ್ಲಿ ಕೈಕಾಲುಗಳನ್ನು ತೊಳೆದು ಕೊಂಡರು.
31 Nela, Moisés, Arão e seus filhos lavavam as mãos e os pés,
32 ಅವರು ಸಭೆಯ ಡೇರೆಯೊಳಗೆ ಸೇರುವ ಸಮಯದಲ್ಲಿಯೂ ಯಜ್ಞವೇದಿಯ ಸವಿಾಪಕ್ಕೆ ಬರುವ ಸಮಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವರು ತೊಳೆದುಕೊಂಡರು.
32 quando entravam na tenda do encontro e quando se aproximavam do altar, segundo o Senhor havia ordenado a Moisés.
33 ಗುಡಾರಕ್ಕೂ ಯಜ್ಞವೇದಿಗೂ ಸುತ್ತಲೂ ಅಂಗಳ ವನ್ನು ನಿಲ್ಲಿಸಿ ಅಂಗಳದ ಬಾಗಿಲಿನ ತೆರೆಯನ್ನು ತೂಗು ಹಾಕಿದನು. ಈ ಪ್ರಕಾರ ಮೋಶೆಯು ಆ ಕೆಲಸವನ್ನು ತೀರಿಸಿದನು.
33 Levantou também o átrio ao redor do tabernáculo e do altar e pendurou o cortinado da porta do átrio. Assim Moisés acabou a obra.
34 ಆಗ ಮೇಘವು ಸಭೆಯ ಡೇರೆಯನ್ನು ಮುಚ್ಚಿಕೊಂಡು ಕರ್ತನ ಮಹಿಮೆಯು ಗುಡಾರವನ್ನು ತುಂಬಿಕೊಂಡಿತು.
34 Então a nuvem cobriu a tenda do encontro, e a glória do Senhor encheu o tabernáculo.
35 ಸಭೆ ಡೇರೆಯ ಮೇಲೆ ಮೇಘವು ನೆಲೆಯಾಗಿದದ್ದರಿಂದಲೂ ಕರ್ತನ ಮಹಿಮೆಯು ಗುಡಾರವನ್ನು ತುಂಬಿದ್ದರಿಂದಲೂ ಮೋಶೆಯು ಒಳಗೆ ಪ್ರವೇಶಿಸಲಾರದೆ ಇದ್ದನು.
35 Moisés não podia entrar na tenda do encontro, porque a nuvem permanecia sobre ela, e a glória do Senhor enchia o tabernáculo.
36 ಮೇಘವು ಗುಡಾರದ ಮೇಲಕ್ಕೆ ಎತ್ತಲ್ಪಟ್ಟಾಗ ಇಸ್ರಾಯೇಲ್‌ ಮಕ್ಕಳು ತಮ್ಮ ಎಲ್ಲಾ ಪ್ರಯಾಣಗಳನ್ನು ಮುಂದುವರಿಸುತ್ತಿದ್ದರು.
36 Quando a nuvem se levantava de sobre o tabernáculo, os filhos de Israel seguiam adiante, em todas as suas jornadas;
37 ಆದರೆ ಮೇಘವು ಎತ್ತಲ್ಪ ಡದೆ ಇರುವಾಗ ಅದು ಎತ್ತಲ್ಪಡುವ ದಿವಸದ ವರೆಗೆ ಅವರು ಪ್ರಯಾಣ ಮಾಡಲಿಲ್ಲ,
37 se a nuvem, porém, não se levantava, não seguiam adiante, até o dia em que ela se levantava.
38 ಇಸ್ರಾಯೇಲ್ಯರ ಮನೆಯವರೆಲ್ಲರ ಕಣ್ಣುಗಳ ಮುಂದೆ ಅವರ ಎಲ್ಲಾ ಪ್ರಯಾಣಗಳಲ್ಲಿ ಹಗಲಿನಲ್ಲಿ ಕರ್ತನ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಅಗ್ನಿಯು ಅದರ ಮೇಲೆ ಇತ್ತು.
38 De dia, a nuvem do Senhor repousava sobre o tabernáculo, e, de noite, havia fogo nela, à vista de toda a casa de Israel, em todas as suas jornadas.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Êxodo 40, comparar traduções ou montar um estudo — tudo direto pelo WhatsApp.