Êxodo 4

Kannada Bible (GL_KANNADA) vs ARIB

Sair da comparação
ARIB Almeida Revisada Imprensa Bíblica
1 ಮೋಶೆಯು ಪ್ರತ್ಯುತ್ತರವಾಗಿ--ಆದರೆ ಇಗೋ, ಅವರು ನನ್ನನ್ನು ನಂಬುವದಿಲ್ಲ, ನನ್ನ ಮಾತನ್ನು ಕೇಳುವದೂ ಇಲ್ಲ. ಅವರು--ಕರ್ತನು ನಿನಗೆ ಕಾಣಿಸಿಕೊಳ್ಳಲಿಲ್ಲ ಎಂದು ಹೇಳುವರು ಅಂದನು.
1 Então respondeu Moisés: Mas eis que não me crerão, nem ouvirão a minha voz, pois dirão: O Senhor não te apareceu.
2 ಕರ್ತನು ಅವನಿಗೆ--ನಿನ್ನ ಕೈಯಲ್ಲಿರುವದೇನು ಅಂದದ್ದಕ್ಕೆ ಅವನು--ಕೋಲು ಅಂದನು.
2 Ao que lhe perguntou o Senhor: Que é isso na tua mão. Disse Moisés: uma vara.
3 ಕರ್ತನು ಅವನಿಗೆ--ಅದನ್ನು ನೆಲದ ಮೇಲೆ ಬಿಸಾಡು ಅಂದಾಗ ಅವನು ಅದನ್ನು ಬಿಸಾಡಿದನು; ಆಗ ಅದು ಸರ್ಪ ವಾಯಿತು. ಮೋಶೆಯು ಅಲ್ಲಿಂದ ಓಡಿಹೋದನು.
3 Ordenou-lhe o Senhor: Lança-a no chão. Ele a lançou no chão, e ela se tornou em cobra; e Moisés fugiu dela.
4 ಕರ್ತನು ಮೋಶೆಗೆ--ನಿನ್ನ ಕೈಚಾಚಿ ಅದರ ಬಾಲ ವನ್ನು ಹಿಡಿ ಅಂದಾಗ ಅವನು ಕೈಚಾಚಿ ಅದನ್ನು ಹಿಡಿದ ಕೂಡಲೆ ಅದು ಅವನ ಕೈಯಲ್ಲಿ ಕೋಲಾಯಿತು.
4 Então disse o Senhor a Moisés: Estende a mão e pega-lhe pela cauda {estendeu ele a mão e lhe pegou, e ela se tornou em vara na sua mão};
5 ಇದರಿಂದ ಅವರು ತಮ್ಮ ಪಿತೃಗಳಾದ ಅಬ್ರಹಾಮ್‌ ಇಸಾಕ್‌ ಯಾಕೋಬ್‌ ಇವರ ಕರ್ತನಾದ ದೇವರು ನಿನಗೆ ಕಾಣಿಸಿದ್ದನ್ನು ಅವರು ನಂಬುವರು ಅಂದನು.
5 para que eles creiam que te apareceu o Senhor, o Deus de seus pais, o Deus de Abraão, o Deus de Isaque e o Deus de Jacó.
6 ಇದಲ್ಲದೆ ಕರ್ತನು ಅವನ ಸಂಗಡ ಇನ್ನೂ ಮಾತನಾಡಿ--ನಿನ್ನ ಕೈಯನ್ನು ಉಡಿಯಲ್ಲಿ ಹಾಕು ಅಂದಾಗ ಅವನು ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಹೊರಗೆ ತೆಗೆಯಲು ಇಗೋ, ಅವನ ಕೈ ಕುಷ್ಠದಿಂದ ಹಿಮದಂತೆ ಆಗಿತ್ತು.
6 Disse-lhe mais o Senhor: Mete agora a mão no seio. E meteu a mão no seio. E quando a tirou, eis que a mão estava leprosa, branca como a neve.
7 ಆತನು ಅವನಿಗೆ--ನಿನ್ನ ಕೈಯನ್ನು ಉಡಿಯಲ್ಲಿ ಹಾಕು ಅಂದಾಗ ಅವನು ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಉಡಿಯಿಂದ ಹೊರಗೆ ತೆಗೆಯಲು ಇಗೋ, ಅದು ಅವನ ಬೇರೆ ದೇಹದಂತಾಗಿತ್ತು.
7 Disse-lhe ainda: Torna a meter a mão no seio. {E tornou a meter a mão no seio; depois tirou-a do seio, e eis que se tornara como o restante da sua carne.}
8 ಅವರು ನಿನ್ನನ್ನು ನಂಬದೆ ಮೊದಲನೆಯ ಮಹ ತ್ಕಾರ್ಯವನ್ನು ತಿರಸ್ಕರಿಸಿದರೂ ಎರಡನೆಯದನ್ನು ಲಕ್ಷ್ಯವಿಟ್ಟು ನಂಬುವರು.
8 E sucederá que, se eles não te crerem, nem atentarem para o primeiro sinal, crerão ao segundo sinal.
9 ಆ ಎರಡೂ ಮಹತ್ಕಾರ್ಯ ಗಳನ್ನು ಅವರು ನಂಬದೆಯೂ ನಿನ್ನ ಮಾತನ್ನು ಕೇಳ ದೆಯೂ ಹೋದರೆ ನದಿಯ ನೀರನ್ನು ತೆಗೆದು ಒಣಗಿದ ನೆಲದಮೇಲೆ ಸುರಿಯಬೇಕು. ಆಗ ನೀನು ನದಿಯಿಂದ ತೆಗೆದ ನೀರು ಒಣಗಿದ ನೆಲದ ಮೇಲೆ ರಕ್ತವಾಗುವದು ಅಂದನು.
9 E se ainda não crerem a estes dois sinais, nem ouvirem a tua voz, então tomarás da água do rio, e a derramarás sobre a terra seca; e a água que tomares do rio tornar-se-á em sangue sobre a terra seca.
10 ಮೋಶೆಯು ಕರ್ತನಿಗೆ--ಓ ನನ್ನ ಕರ್ತನೇ, ನಾನು ಮೊದಲಿನಿಂದಲೂ ನೀನು ನಿನ್ನ ದಾಸನ ಸಂಗಡ ಮಾತನಾಡಿದಂದಿನಿಂದಲೂ ವಾಕ್ಚಾತುರ್ಯವಿ ಲ್ಲದವನು. ನನ್ನ ಮಾತೂ ನಾಲಿಗೆಯೂ ಮಂದವಾಗಿವೆ ಅಂದನು.
10 Então disse Moisés ao Senhor: Ah, Senhor! eu não sou eloqüente, nem o fui dantes, nem ainda depois que falaste ao teu servo; porque sou pesado de boca e pesado de língua.
11 ಅದಕ್ಕೆ ಕರ್ತನು ಅವನಿಗೆ--ಮನುಷ್ಯನಿಗೆ ಬಾಯಿ ಕೊಟ್ಟಾತನೂ ಮೂಕರನ್ನೂ ಕಿವುಡರನ್ನೂ ದೃಷ್ಟಿಯುಳ್ಳವರನ್ನೂ ಕುರುಡರನ್ನೂ ಉಂಟುಮಾಡಿ ದಾತನೂ ಯಾರು? ಕರ್ತನಾದ ನಾನೇ ಅಲ್ಲವೋ?
11 Ao que lhe replicou o Senhor: Quem faz a boca do homem? ou quem faz o mudo, ou o surdo, ou o que vê, ou o cego?. Não sou eu, o Senhor?
12 ಹಾಗಾದರೆ ಈಗ ಹೋಗು, ನಾನೇ ನಿನ್ನ ಬಾಯಿ ಯಾಗಿದ್ದು ನೀನು ಮಾತನಾಡತಕ್ಕದ್ದನ್ನು ನಿನಗೆ ಬೋಧಿಸುವೆನು ಅಂದನು.
12 Vai, pois, agora, e eu serei com a tua boca e te ensinarei o que hás de falar.
13 ಅದಕ್ಕೆ ಮೋಶೆಯು--ಓ ನನ್ನ ಕರ್ತನೇ, ನೀನು ಕಳುಹಿಸಬೇಕೆಂದಿರುವವನನ್ನು ಕಳುಹಿಸು ಎಂದು ಬೇಡುತ್ತೇನೆ ಅಂದನು.
13 Ele, porém, respondeu: Ah, Senhor! envia, peço-te, por mão daquele a quem tu hás de enviar.
14 ಕರ್ತನು ಮೋಶೆಯ ಮೇಲೆ ಕೋಪಗೊಂಡು--ಲೇವಿಯನಾದ ಆರೋನನು ನಿನ್ನ ಸಹೋದರನಲ್ಲವೇ? ಅವನು ಚೆನ್ನಾಗಿ ಮಾತನಾಡ ಬಲ್ಲನೆಂದು ನಾನು ಬಲ್ಲೆನು. ಇಗೋ, ಅವನು ನಿನ್ನನ್ನು ಎದುರು ಗೊಳ್ಳುವದಕ್ಕೆ ಬರುತ್ತಾನೆ. ಅವನು ನಿನ್ನನ್ನು ನೋಡಿ ತನ್ನ ಹೃದಯದಲ್ಲಿ ಆನಂದಿಸುವನು.
14 Então se acendeu contra Moisés a ira do Senhor, e disse ele: Não é Arão, o levita, teu irmão? eu sei que ele pode falar bem. Eis que ele também te sai ao encontro, e vendo-te, se alegrará em seu coração.
15 ಅವನ ಸಂಗಡ ನೀನು ಮಾತನಾಡಿ ಹೇಳಬೇಕಾದ ಮಾತು ಗಳನ್ನು ಅವನಿಗೆ ತಿಳಿಸಬೇಕು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀನು ಮಾಡತಕ್ಕದ್ದನ್ನು ಕಲಿಸುವೆನು.
15 Tu, pois, lhe falarás, e porás as palavras na sua boca; e eu serei com a tua boca e com a dele, e vos ensinarei o que haveis de fazer.
16 ಅವನು ನಿನಗಾಗಿ ಜನರ ಸಂಗಡ ಮಾತನಾಡುವನು. ಅವನು ನಿನಗೆ ಬಾಯಿಯಾಗಿ ರುವನು; ನೀನು ಅವನಿಗೆ ದೇವರಂತಿರುವಿ.
16 E ele falará por ti ao povo; assim ele te será por boca, e tu lhe serás por Deus.
17 ಈ ಕೋಲನ್ನು ನಿನ್ನ ಕೈಯಲ್ಲಿ ತಕ್ಕೊಳ್ಳಬೇಕು. ನೀನು ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವಿ ಅಂದನು.
17 Tomarás, pois, na tua mão esta vara, com que hás de fazer os sinais.
18 ಆಗ ಮೋಶೆಯು ಹೋಗಿ ತನ್ನ ಮಾವನಾದ ಇತ್ರೋನನ ಬಳಿಗೆ ಬಂದು ಅವನಿಗೆ--ಐಗುಪ್ತ ದಲ್ಲಿರುವ ನನ್ನ ಸಹೋದರರ ಬಳಿಗೆ ಹಿಂತಿರುಗಿ ಹೋಗಿ ಅವರು ಇನ್ನೂ ಜೀವದಿಂದಿರುವರೋ ಎಂದು ನೋಡುವೆನು ಅಂದನು. ಇತ್ರೋನನು ಮೋಶೆಗೆ--ಸಮಾಧಾನದಿಂದ ಹೋಗು ಅಂದನು.
18 Então partiu Moisés, e voltando para Jetro, seu sogro, disse-lhe: Deixa-me, peço-te, voltar a meus irmãos, que estão no Egito, para ver se ainda vivem. Disse, pois, Jetro a Moisés: Vai-te em paz.
19 ಇದಲ್ಲದೆ ಕರ್ತನು ಮಿದ್ಯಾನಿನಲ್ಲಿ ಮೋಶೆಗೆ--ಐಗುಪ್ತಕ್ಕೆ ಹಿಂತಿರುಗಿ ಹೋಗು; ನಿನ್ನ ಪ್ರಾಣವನ್ನು ಹುಡುಕಿದ ಜನರೆಲ್ಲಾ ಸತ್ತಿದ್ದಾರೆ ಅಂದನು.
19 Disse também o Senhor a Moisés em Midiã: Vai, volta para o Egito; porque morreram todos os que procuravam tirar-te a vida.
20 ಆಗ ಮೋಶೆಯು ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕರ ಕೊಂಡು ಕತ್ತೆಯಮೇಲೆ ಹತ್ತಿಸಿ ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದನು. ಇದಲ್ಲದೆ ಮೋಶೆಯು ದೇವರ ಕೋಲನ್ನು ಕೈಯಲ್ಲಿ ತಕ್ಕೊಂಡನು.
20 Tomou, pois, Moisés sua mulher e seus filhos, e os fez montar num jumento e tornou à terra do Egito; e Moisés levou a vara de Deus na sua mão.
21 ಆಗ ಕರ್ತನು ಮೋಶೆಗೆ--ನೀನು ಐಗುಪ್ತದೇಶಕ್ಕೆ ಹಿಂತಿರುಗಿ ಹೋಗು ವಾಗ ನಾನು ನಿನ್ನ ಕೈಯಿಂದ ಮಾಡಿಸಿದ ಎಲ್ಲಾ ಸೂಚಕ ಕಾರ್ಯಗಳನ್ನು ಫರೋಹನ ಮುಂದೆ ಮಾಡು. ಆದರೆ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಅವನು ಜನರನ್ನು ಹೋಗಗೊಡಿಸುವದಿಲ್ಲ.
21 Disse ainda o Senhor a Moisés: Quando voltares ao Egito, vê que faças diante de Faraó todas as maravilhas que tenho posto na tua mão; mas eu endurecerei o seu coração, e ele não deixará ir o povo.
22 ಆಗ ನೀನು ಫರೋಹನಿಗೆ--ಕರ್ತನು ಹೀಗೆ ಹೇಳುತ್ತಾನೆ; ಇಸ್ರಾಯೇಲು ನನ್ನ ಮಗನು. ಅವನು ನನ್ನ ಚೊಚ್ಚಲ ಮಗನೇ ಎಂದು ಹೇಳಬೇಕು.
22 Então dirás a Faraó: Assim diz o Senhor: Israel é meu filho, meu primogênito;
23 (ಫರೋಹನೇ) ನಾನು ನಿನಗೆ ಹೇಳುವದೇನಂದರೆ--ನನ್ನ ಸೇವೆಮಾಡು ವಂತೆ ನನ್ನ ಮಗನನ್ನು ಕಳುಹಿಸು. ನೀನು ಅವನನ್ನು ಕಳುಹಿಸುವದನ್ನು ನಿರಾಕರಿಸಿದರೆ ಇಗೋ, ನಾನು ನಿನ್ನ ಮಗನನ್ನು ಅಂದರೆ ನಿನ್ನ ಚೊಚ್ಚಲಮಗನನ್ನು ಕೊಲ್ಲುವೆನು ಅಂದನು.
23 e eu te tenho dito: Deixa ir: meu filho, para que me sirva. mas tu recusaste deixá-lo ir; eis que eu matarei o teu filho, o teu primogênito.
24 ಇದಲ್ಲದೆ ಅವನು ದಾರಿಯ ವಸತಿ ಗೃಹದಲ್ಲಿ ದ್ದಾಗ ಕರ್ತನು ಅವನೆದುರಿಗೆ ಬಂದು ಅವನ ಪ್ರಾಣ ತೆಗೆಯಬೇಕೆಂದಿದ್ದನು.
24 Ora, sucedeu no caminho, numa estalagem, que o Senhor o encontrou, e quis matá-lo.
25 ಆಗ ಚಿಪ್ಪೋರಳು ಹದವಾದ ಕಲ್ಲನ್ನು ತೆಗೆದುಕೊಂಡು ತನ್ನ ಮಗನಿಗೆ ಸುನ್ನತಿ ಮಾಡಿ ಅದನ್ನು ಅವನ ಕಾಲುಗಳ ಮುಂದೆ ಹಾಕಿ ಮೋಶೆಗೆ--ನಿಜವಾಗಿ ನೀನು ನನಗೆ ರಕ್ತದ ಗಂಡನು ಅಂದಳು.
25 Então Zípora tomou uma faca de pedra, circuncidou o prepúcio de seu filho e, lançando-o aos pés de Moisés, disse: Com efeito, és para mim um esposo sanguinário.
26 ಆಗ ಆತನು ಅವನನ್ನು ಬಿಟ್ಟನು. ಅವಳು--ಸುನ್ನತಿಯ ನಿಮಿತ್ತ ನೀನು ರಕ್ತದ ಗಂಡ ನಾಗಿದ್ದೀ ಅಂದಳು.
26 O Senhor, pois, o deixou. Ela disse: Esposo sanguinário, por causa da circuncisão.
27 ಇದಲ್ಲದೆ ಕರ್ತನು ಆರೋನನಿಗೆ--ಮೋಶೆ ಯನ್ನು ಎದುರುಗೊಳ್ಳುವದಕ್ಕೆ ಅರಣ್ಯಕ್ಕೆ ಹೋಗು ಅಂದನು. ಅವನು ಹೋಗಿ ದೇವರ ಬೆಟ್ಟದಲ್ಲಿ ಅವನನ್ನು ಎದುರುಗೊಂಡು ಮುದ್ದಿಟ್ಟನು.
27 Disse o Senhor a Arão: Vai ao deserto, ao encontro de Moisés. E ele foi e, encontrando-o no monte de Deus, o beijou:
28 ಆಗ ಮೋಶೆಯು ಆರೋನನಿಗೆ ತನ್ನನ್ನು ಕಳುಹಿಸಿದ ಕರ್ತನ ಎಲ್ಲಾ ಮಾತುಗಳನ್ನೂ ತನಗೆ ಆಜ್ಞಾಪಿಸಿದ ಎಲ್ಲಾ ಸೂಚಕಕಾರ್ಯಗಳನ್ನೂ ತಿಳಿಸಿದನು.
28 E relatou Moisés a Arão todas as palavras com que o Senhor o enviara e todos os sinais que lhe mandara.
29 ತರುವಾಯ ಮೋಶೆಯೂ ಆರೋನನೂ ಹೋಗಿ ಇಸ್ರಾಯೇಲ್‌ ಮಕ್ಕಳ ಹಿರಿಯರನ್ನೆಲ್ಲಾ ಒಟ್ಟುಗೂಡಿಸಿದರು.
29 Então foram Moisés e Arão e ajuntaram todos os anciãos dos filhos de Israel;
30 ಕರ್ತನು ಮೋಶೆಗೆ ಹೇಳಿದ ಮಾತುಗಳನ್ನೆಲ್ಲಾ ಆರೋನನು ಹೇಳಿ ಜನರ ಕಣ್ಣುಗಳ ಮುಂದೆ ಸೂಚಕ ಕಾರ್ಯಗಳನ್ನು ಮಾಡಲು. ಜನರು ನಂಬಿದರು.
30 e Arão falou todas as palavras que o Senhor havia dito a Moisés e fez os sinais perante os olhos do povo.
31 ಕರ್ತನು ಇಸ್ರಾಯೇಲ್‌ ಮಕ್ಕಳನ್ನು ದರ್ಶಿಸಿ ಅವರ ಸಂಕಟವನ್ನು ನೋಡಿದ್ದಾನೆಂದು ಅವರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.
31 E o povo creu; e quando ouviram que o Senhor havia visitado os filhos de Israel e que tinha visto a sua aflição, inclinaram-se, e adoraram.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Êxodo 4, comparar traduções ou montar um estudo — tudo direto pelo WhatsApp.