Êxodo 5

Kannada Bible (GL_KANNADA) vs VC

Sair da comparação
VC Versão Católica
1 ತರುವಾಯ ಮೋಶೆಯೂ ಆರೋನನೂ ಹೋಗಿ ಫರೋಹನಿಗೆ--ಇಸ್ರಾಯೇಲಿನ ದೇವರಾದ ಕರ್ತನು--ಅರಣ್ಯದಲ್ಲಿ ನನ್ನ ಜನರು ನನಗೆ ಹಬ್ಬವನ್ನಾಚರಿಸುವದಕ್ಕೆ ಅವರನ್ನು ಹೋಗಗೊಡಿಸು ಎಂದು ಹೇಳುತ್ತಾನೆ ಅಂದರು.
1 Depois disso, Moisés e Aarão dirigiram-se ao faraó e disseram-lhe: "Assim fala o Senhor, o Deus de Israel: deixa ir o meu povo, para que me faça uma festa no deserto".
2 ಫರೋಹನು--ನಾನು ಆತನ ಸ್ವರಕ್ಕೆ ವಿಧೇಯನಾಗಿ ಇಸ್ರಾಯೇಲ್ಯರನ್ನು ಕಳುಹಿಸಿ ಬಿಡುವಂತೆ ಆ ಕರ್ತನು ಯಾರು? ಆ ಕರ್ತನನ್ನು ನಾನರಿಯೆನು ಮತ್ತು ಇಸ್ರಾಯೇಲ್ಯರನ್ನು ಕಳುಹಿಸುವದಿಲ್ಲ ಅಂದನು.
2 O faraó respondeu: "Quem é esse Senhor, para que eu lhe deva obedecer, deixando partir Israel? Não conheço o Senhor, e não deixarei partir Israel".
3 ಆಗ ಅವರು ಫರೋಹ ನಿಗೆ--ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡಿ ದ್ದಾನೆ; ಆದದರಿಂದ ನಾವು ಅರಣ್ಯದಲ್ಲಿ ಮೂರು ದಿನ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿ ಅರ್ಪಿಸುವದಕ್ಕಾಗಿ ನಾವು ಹೋಗಬೇಕು; ಇಲ್ಲ ವಾದರೆ ಆತನು ವ್ಯಾಧಿಯಿಂದಲಾದರೂ ಕತ್ತಿಯಿಂದ ಲಾದರೂ ನಮ್ಮನ್ನು ಸಂಹಾರ ಮಾಡಾನು ಎಂದು ಅಂದರು.
3 Eles prosseguiram: "O Deus dos hebreus nos apareceu. Deixa-nos ir ao deserto, a três dias de caminho, para oferecer sacrifícios ao Senhor, para que não nos fira ele pela peste ou pela espada".
4 ಐಗುಪ್ತದ ಅರಸನು ಅವರಿಗೆ--ಮೋಶೆಯೇ, ಆರೋನನೇ, ಜನರು ತಮ್ಮ ಕೆಲಸ ಗಳನ್ನು ಮಾಡದಂತೆ ಯಾಕೆ ಮಾಡುತ್ತೀರಿ? ನಿಮ್ಮ ಬಿಟ್ಟೀಕೆಲಸಗಳಿಗೆ ಹೋಗಿರಿ ಅಂದನು.
4 O rei do Egito disse-lhes: "Moisés e Aarão, por que quereis desviar o povo do seu trabalho? Ide às vossas ocupações".
5 ಫರೋ ಹನು--ಇಗೋ, ಈಗ ದೇಶದ ಜನರು ಹೆಚ್ಚಿದ್ದಾರೆ; ನೀವು ಅವರನ್ನು ಅವರ ಬಿಟ್ಟೀಕೆಲಸಗಳಿಂದ ನಿಲ್ಲಿಸಿ ಬಿಡುತ್ತೀರಿ ಅಂದನು.
5 E ajuntou: "O povo é, atualmente, numeroso, e vós o faríeis interromper seus trabalhos!"
6 ಅದೇ ದಿನದಲ್ಲಿ ಫರೋಹನು ಬಿಟ್ಟೀಕೆಲಸ ಮಾಡಿಸುವವರಿಗೂ ಅವರ ಅಧಿಕಾರಿ ಗಳಿಗೂ--
6 Naquele mesmo dia, deu o faraó ao inspetor do povo e aos vigias esta ordem:
7 ನೀವು ಇನ್ನು ಇಟ್ಟಿಗೆಗಳನ್ನು ಮಾಡುವದಕ್ಕೆ ಮೊದಲಿನ ಹಾಗೆ ಜನರಿಗೆ ಹುಲ್ಲನ್ನು ಕೊಡಬೇಡಿರಿ. ಅವರೇ ಹೋಗಿ ಹುಲ್ಲನ್ನು ಕೂಡಿಸಿಕೊಳ್ಳಲಿ.
7 "Não fornecereis mais, como dantes, a palha ao povo para fazer os tijolos: irão eles mesmos procurá-la.
8 ಅವರು ಈ ವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆ ಮಾಡಬಾರದೆಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ; ಆದದರಿಂದ ಅವರು--ನಾವು ಹೋಗಿ ನಮ್ಮ ದೇವರಿಗೆ ಬಲಿ ಅರ್ಪಿಸೋಣ ಎಂದು ಕೂಗುತ್ತಾರೆ.
8 Entretanto, exigi deles a mesma quantidade de tijolos que antes, sem nada diminuir. São uns preguiçosos. É por isso que clamam: queremos ir oferecer sacrifícios ao nosso Deus.
9 ಈ ಜನರು ವ್ಯರ್ಥವಾದ ಮಾತುಗಳಿಗೆ ಲಕ್ಷ್ಯಕೊಡದಂತೆ ಅವರ ಮೇಲೆ ಹೆಚ್ಚು ಕೆಲಸಗಳನ್ನು ಹೊರಿಸಿರಿ, ಅವರು ದುಡಿಯಲಿ ಎಂದು ಆಜ್ಞಾಪಿಸಿದನು.
9 Que sejam sobrecarregados de trabalhos ocupem-se eles de suas tarefas e não dêem ouvidos às mentiras que se lhes contam!"
10 ಆಗ ಬಿಟ್ಟೀಕೆಲಸವನ್ನು ಮಾಡಿಸುವವರೂ ಅಧಿ ಕಾರಿಗಳೂ ಹೊರಗೆಹೋಗಿ ಜನರಿಗೆ--ಫರೋಹನು ಹೀಗೆ ಹೇಳುತ್ತಾನೆ--ನಾನು ನಿಮಗೆ ಹುಲ್ಲು ಕೊಡು ವದಿಲ್ಲ.
10 Os inspetores e os vigias do povo foram dizer-lhes:
11 ನಿಮಗೆ ಹುಲ್ಲು ಎಲ್ಲಿ ದೊರಕುವದೋ ಅಲ್ಲಿಗೆ ನೀವೇ ಹೋಗಿ ತಕ್ಕೊಳ್ಳಿರಿ; ಆದಾಗ್ಯೂ ನಿಮ್ಮ ಕೆಲಸವು ಏನೂ ಕಡಿಮೆಯಾಗಬಾರದು ಎಂದು ಹೇಳಿ ದ್ದಾನೆ ಅಂದನು.
11 "o faraó manda-vos dizer que já não vos fornecerá palha; e que vós mesmos devereis procurá-la onde houver, mas nada se diminuirá de vosso trabalho".
12 ಆಗ ಜನರು ಹುಲ್ಲಿಗೆ ಬದಲಾಗಿ ಕೂಳೆ ಕೂಡಿಸಿಕೊಳ್ಳುವದಕ್ಕೆ ಐಗುಪ್ತದೇಶದಲ್ಲೆಲ್ಲಾ ಚದರಿಹೋದರು.
12 Espalhou-se, pois, o povo por todo o Egito para ajuntar restolhos em lugar de palha.
13 ಇದಲ್ಲದೆ ಬಿಟ್ಟೀಕೆಲಸ ಮಾಡಿಸು ವವರು--ಹುಲ್ಲು ಇದ್ದಾಗ ನಿಮ್ಮ ಕೆಲಸಗಳನ್ನು ಮಾಡಿ ದಂತೆಯೇ ಪ್ರತಿಯೊಂದು ದಿನದಲ್ಲಿ ಆ ದಿನದ ಕೆಲಸ ವನ್ನು ತೀರಿಸಿಬಿಡಬೇಕು ಎಂದು ಹೇಳಿ ಅವರನ್ನು ತ್ವರೆಪಡಿಸಿದರು.
13 Os inspetores instavam com eles, dizendo: "Aprontai vossa tarefa diária, como quando se vos fornecia palha."
14 ಇಸ್ರಾಯೇಲ್ಯರು ಬಿಟ್ಟೀಕೆಲಸ ಮಾಡಿಸುವಂತೆ ಫರೋಹನ ಅಧಿಕಾರಿಗಳು ನೇಮಿಸಿ ದವರಿಗೆ--ನೀವು ಮೊದಲು ಇಟ್ಟಿಗೆಗಳ ಲೆಕ್ಕವನ್ನು ಒಪ್ಪಿಸಿದಂತೆ ನಿನ್ನೆ ಈ ಹೊತ್ತು ಯಾಕೆ ಒಪ್ಪಿಸಲಿಲ್ಲ ಎಂದು ಹೇಳಿ ಅವರನ್ನು ಹೊಡಿಸಿದರು.
14 Açoitavam até os vigias israelitas que os inspetores do faraó tinham estabelecido sobre eles. Diziam-lhes: "Por que não terminastes, ontem e hoje, como antes, o que se vos havia fixado de tijolos a fazer?"
15 ಇಸ್ರಾಯೇಲ್‌ ಮಕ್ಕಳ ಅಧಿಕಾರಿಗಳು ಫರೋ ಹನ ಬಳಿಗೆ ಹೋಗಿ--ಯಾಕೆ ನಿನ್ನ ದಾಸರಿಗೆ ಹೀಗೆ ಮಾಡುತ್ತೀ?
15 Os vigias israelitas foram queixar-se ao faraó: "Por que, perguntaram eles, procedes desse modo com os teus servos?
16 ನಿನ್ನ ದಾಸರಿಗೆ ಅವರು ಹುಲ್ಲು ಕೊಡದೆ--ಇಟ್ಟಿಗೆಗಳನ್ನು ಮಾಡಿರಿ ಎಂದು ನಮಗೆ ಹೇಳುತ್ತಾರೆ. ಇಗೋ, ನಿನ್ನ ದಾಸರನ್ನು ಹೊಡೆಯುತ್ತಾರೆ. ಆದರೆ ನಿನ್ನ ಸ್ವಂತ ಜನರಲ್ಲಿಯೇ ತಪ್ಪು ಇದೆ ಅಂದರು.
16 Não se nos fornece mais a palha e se nos diz: fazei tijolos. E chegam até a nos açoitar {como se} teu povo estivesse em falta".
17 ಅದಕ್ಕೆ ಅವನು--ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ--ನಾವು ಹೋಗಿ ಕರ್ತನಿಗೆ ಬಲಿಯರ್ಪಿಸುತ್ತೇವೆ ಎಂದು ಅನ್ನುತ್ತೀರಿ.
17 O faraó respondeu: "Vós sois uns preguiçosos, sim, uns preguiçosos! É por isso que dizeis: queremos ir oferecer sacrifícios ao Senhor.
18 ಆದದ ರಿಂದ ಈಗ ಹೋಗಿ ಕೆಲಸಮಾಡಿರಿ, ಹುಲ್ಲನ್ನು ನಿಮಗೆ ಕೊಡುವದಕ್ಕಾಗುವದಿಲ್ಲ. ಆದಾಗ್ಯೂ ನೇಮಿಸಿದ್ದ ಇಟ್ಟಿಗೆಗಳನ್ನು ನೀವು ಕೊಡಬೇಕು ಅಂದನು.
18 E agora, ao trabalho! Não se vos fornecerá a palha, mas deveis entregar a mesma quantidade de tijolos."
19 ದಿನದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂದು ಅಪ್ಪಣೆಯಾದದ್ದರಿಂದ ಇಸ್ರಾಯೇಲ್‌ ಅಧಿಕಾರಿಗಳು ತಾವು ದುರವಸ್ಥೆಯಲ್ಲಿ ದ್ದೇವೆಂದು ತಿಳುಕೊಂಡರು.
19 Os vigias israelitas aos quais diziam: "Nada diminuireis da entrega diária de tijolos", viram-se em um cruel embaraço.
20 ಅವರು ಫರೋಹ ನಿಂದ ಹೊರಗೆ ಬಂದಾಗ ದಾರಿಯಲ್ಲಿ ನಿಂತಿದ್ದ ಮೋಶೆಯನ್ನೂ ಆರೋನನನ್ನೂ ಸಂಧಿಸಿ
20 Saindo da casa do faraó, encontraram Moisés e Aarão que os esperavam.
21 ಅವ ರಿಗೆ--ಕರ್ತನು ನಿಮ್ಮನ್ನು ನೋಡಿ ನ್ಯಾಯತೀರಿಸಲಿ; ನೀವೇ ಫರೋಹನ ಮುಂದೆಯೂ ಅವನ ದಾಸರ ಮುಂದೆಯೂ ನಮ್ಮನ್ನು ಅವರು ಹೇಸಿಕೊಳ್ಳುವಂತೆ ಮಾಡಿದಿರಿ, ನಮ್ಮನ್ನು ಸಂಹರಿಸುವದಕ್ಕೆ ನೀವು ಅವರ ಕೈಗೆ ಕತ್ತಿಯನ್ನು ಕೊಟ್ಟಿರಿ ಅಂದರು.
21 Disseram-lhes: "Que o Senhor vos veja e vos julgue, vós, que atraístes sobre nós a aversão do faraó e de sua gente, e pusestes em suas mãos a espada para nos matar".
22 ಆಗ ಮೋಶೆಯು ಕರ್ತನ ಬಳಿಗೆ ಬಂದು--ಕರ್ತನೇ, ಈ ಜನರಿಗೆ ಯಾಕೆ ಕೇಡನ್ನು ಮಾಡಿದಿ? ಯಾಕೆ ನನ್ನನ್ನು ಕಳುಹಿಸಿದಿ?
22 Moisés voltou-se de novo para o Senhor: "Ó Senhor, disse-lhe ele, por que fizestes mal a este povo? Por que me enviastes?
23 ನಾನು ಫರೋಹನ ಬಳಿಗೆ ಬಂದು ನಿನ್ನ ಹೆಸರಿನಲ್ಲಿ ಮಾತನಾಡಿದಂದಿನಿಂದ ಈ ಜನರಿಗೆ ಅವನು ಕೇಡನ್ನೇ ಮಾಡುತ್ತಾನೆ. ನೀನು ನಿನ್ನ ಜನರನ್ನು ತಪ್ಪಿಸಲಿಲ್ಲವಲ್ಲಾ ಅಂದನು.
23 Desde que fui falar ao faraó em vosso nome, ele maltrata o povo, e vós não o livrastes de maneira alguma."

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Êxodo 5, comparar traduções ou montar um estudo — tudo direto pelo WhatsApp.