Ezequiel 16

Kannada Bible (GL_KANNADA) vs NVT

Sair da comparação
NVT Nova Versão Transformadora
1 1 ಕರ್ತನ ವಾಕ್ಯವು ನನ್ನ ಕಡೆಗೆ ಬಂದು ಹೇಳಿದ್ದೇನಂದರೆ--
1 Então recebi outra mensagem do S enhor :
2 ಮನುಷ್ಯಪುತ್ರನೇ, ಯೆರೂಸಲೇಮಿಗೆ ಅದರ ಅಸಹ್ಯವಾದವುಗಳನ್ನು ತಿಳಿದುಕೊಳ್ಳುವ ಹಾಗೆ ಮಾಡು.
2 “Filho do homem, faça Jerusalém ver como são detestáveis seus pecados.
3 ದೇವರಾದ ಕರ್ತನು ಯೆರೂಸಲೇಮಿನವರಿಗೆ ಹೀಗೆ ಹೇಳುತ್ತಾನೆ--ನಿನ್ನ ಹುಟ್ಟುವಿಕೆಯೂ ನಿನ್ನ ಹುಟ್ಟಿದ ಸ್ಥಳವೂ ಕಾನಾನ್‌ ದೇಶದಿಂದಾದದ್ದೇ; ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು
3 Transmita-lhe esta mensagem do S enhor Soberano: Você não passa de uma cananeia! Seu pai era amorreu, e sua mãe era hitita.
4 ನಿನ್ನ ಜನನವನ್ನು ಕುರಿತು ನೀನು ಹುಟ್ಟಿದ ದಿನದಲ್ಲಿ ನಿನ್ನ ಹೊಕ್ಕಳು ಕತ್ತರಿಸ ಲ್ಪಡಲಿಲ್ಲ; ಶುದ್ಧವಾಗುವ ಹಾಗೆ ನೀರಿನಿಂದ ತೊಳೆ ಯಲ್ಪಡಲಿಲ್ಲ, ನಿನಗೆ ಉಪ್ಪು ಹಾಕಲಿಲ್ಲ, ನಿನ್ನನ್ನು ಬಟ್ಟೆಯಿಂದ ಸುತ್ತಲಿಲ್ಲ.
4 No dia em que você nasceu, ninguém cortou seu cordão umbilical, nem a lavou, nem a esfregou com sal, nem a enrolou em panos.
5 ನಿನ್ನನ್ನು ಕರುಣಿಸಿ ಕಟಾಕ್ಷಿಸಿ ಯಾರೂ ನಿನಗೆ ಇಂಥ ಒಂದು ಸಹಾಯವನ್ನು ಮಾಡ ಲಿಲ್ಲ, ಆದರೆ ನೀನು ಹುಟ್ಟಿದ ದಿನದಲ್ಲಿ ಅಸಹ್ಯಪಟ್ಟು ನಿನ್ನನ್ನು ಹೊಲದಲ್ಲಿ ಬಿಸಾಡಿದರು.
5 Ninguém teve compaixão nem cuidou de você. No dia em que nasceu, você foi rejeitada e abandonada num campo.
6 ನಾನು ನಿನ್ನ ಬಳಿಯಲ್ಲಿ ಹಾದು ಹೋಗುವಾಗ ನೀನು ನಿನ್ನ ಸ್ವಂತ ರಕ್ತದಲ್ಲಿ ಬಿದ್ದು ಹೊರಳಾಡುತ್ತಿದ್ದ ನಿನ್ನನ್ನು ನಾನು ನಿನ್ನ ರಕ್ತದಲ್ಲಿ ನೋಡಿದಾಗ ಬದುಕು ಎಂದೆನು; ಹೌದು, ನೀನು ನಿನ್ನ ರಕ್ತದಲ್ಲಿ ಬಿದ್ದಿರುವಾಗ ನಾನು ಬದುಕು ಅಂದೆನು.
6 “Mas eu passei por lá e a vi, indefesa, esperneando em seu sangue, e lhe disse: ‘Viva!’.
7 ಭೂಮಿಯಲ್ಲಿಯ ಮೊಳಿಕೆಯೋ ಎಂಬಂತೆ ನಾನು ನಿನ್ನನ್ನು ಬೆಳೆಸಲು (ಹೆಚ್ಚಿಸಲು) ನೀನು ಬಲಿತು ಪ್ರಾಯವು ತುಂಬಿ ಅತಿ ಸೌಂದರ್ಯವಂತೆಯಾದೆ; ನಿನ್ನ ಸ್ತನಗಳು ರೂಪಗೊಂಡವು; ನಿನ್ನ ಕೂದಲು ಬೆಳೆಯಿತು; ಆದರೆ ಮೊದಲು ನೀನು ಬರೀ ಬೆತ್ತಲೆ ಯಾಗಿದ್ದೆ.
7 Eu a fiz desenvolver-se, como uma planta no campo. Você cresceu e se tornou uma linda joia. Seus seios se formaram e seu cabelo cresceu, mas você continuava nua.
8 ಈಗ ನಾನು ನಿನ್ನ ಬಳಿ ಹಾದು ಹೋಗು ವಾಗ ನಿನ್ನನ್ನು ನೋಡಲು ಇಗೋ, ನಿನ್ನ ಕಾಲವು ಪ್ರೇಮಿಸುವ ಕಾಲವಾಗಿತ್ತು; ಆಗ ನಾನು ನನ್ನ ಸೆರಗನ್ನು ನಿನ್ನ ಮೇಲೆ ಹೊದಿಸಿ, ನಿನ್ನ ಬೆತ್ತಲೆಯನ್ನು ಮುಚ್ಚಿದೆನು. ಹೌದು, ನಾನು ನಿನಗೆ ಆಣೆಯಿಟ್ಟು ಒಡಂಬಡಿಕೆ ಮಾಡಿಕೊಂಡದ್ದರಿಂದ ನೀನು ನನ್ನವಳಾದೆ ಎಂದು ದೇವರಾದ ಕರ್ತನು ಹೇಳುತ್ತಾನೆ.
8 Quando passei por você outra vez, vi que já tinha idade suficiente para amar. Eu a envolvi com meu manto para cobrir sua nudez e pronunciei meus votos de casamento. Fiz uma aliança com você, diz o S enhor Soberano, e você se tornou minha.
9 ಆಮೇಲೆ ನಿನ್ನನ್ನು ನೀರಿನಿಂದ ತೊಳೆದೆನು; ಹೌದು, ನಿನ್ನ ರಕ್ತವನ್ನು ಶುದ್ಧವಾಗಿ ನಿನ್ನಿಂದ ತೊಳೆದೆನು; ನಿನಗೆ ಎಣ್ಣೆಯಿಂದ ಅಭಿಷೇಕ ಮಾಡಿದೆನು.
9 “Então lavei você, limpei o sangue e passei óleo perfumado em sua pele.
10 ಇದಲ್ಲದೆ ನಾನು ಕಸೂ ತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲ ಪ್ರಾಣಿಯ ಜೋಡುಗಳನ್ನು ಕೊಟ್ಟೆನು, ನಯವಾದ ನಾರುಮಡಿ ಯನ್ನು ನಿನಗೆ ಉಡಿಸಿದೆನು, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು.
10 Eu lhe dei roupas caras de linho fino e de seda com lindos bordados e sandálias feitas do mais excelente couro de cabra.
11 ನಾನು ಆಭರಣಗಳಿಂದಲೂ ನಿನ್ನನ್ನು ಅಲಂಕರಿಸಿದೆನು; ನಾನು ನಿನ್ನ ಕೈಗಳಿಗೆ ಕಡಗ ಗಳನ್ನು, ನಿನ್ನ ಕೊರಳಿಗೆ ಸರವನ್ನು ಹಾಕಿದೆನು.
11 Também lhe dei belas joias, pulseiras e lindos colares,
12 ನಿನ್ನ ಹಣೆಯ ಮೇಲೆ ರತ್ನಾಭರಣವನ್ನೂ ನಿನ್ನ ಕಿವಿಗಳಲ್ಲಿ ವಾಲೆಗಳನ್ನೂ ನಿನ್ನ ತಲೆಯ ಮೇಲೆ ಶೃಂಗಾರ ಕಿರೀಟವನ್ನೂ ಇಟ್ಟೆನು.
12 uma argola para o nariz, brincos para as orelhas e uma bela coroa para a cabeça.
13 ನಿನ್ನ ಒಡವೆಗಳು ಬೆಳ್ಳಿ ಬಂಗಾರಗಳು, ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಯವಾದ ಹಿಟ್ಟನ್ನೂ ಜೇನನ್ನೂ ಎಣ್ಣೆಯನ್ನೂ ತಿನ್ನುತ್ತಿದ್ದೆ, ನಿನ್ನ ಲಾವಣ್ಯವು ಅತಿ ಮನೋಹರವಾಗಿ ವೃದ್ಧಿಗೊಂಡು ನೀನು ರಾಣಿಯಾದೆ.
13 Assim, você foi enfeitada com ouro e prata. Suas roupas eram feitas de linho fino e seda e tinham lindos bordados. Você comia os alimentos mais seletos — farinha da melhor qualidade, mel e azeite — e se tornou mais linda que nunca. Parecia uma rainha, e de fato era!
14 ಇದಲ್ಲದೆ, ನಿನ್ನ ಸೌಂದ ರ್ಯದಿಂದ ನಿನ್ನ ಕೀರ್ತಿಯು ಅನ್ಯಜನಾಂಗಗಳಲ್ಲಿ ಹಬ್ಬಿತು; ಯಾಕಂದರೆ ನಾನು ನಿನ್ನ ಮೇಲೆ ಇಟ್ಟ ಸಂಪೂರ್ಣ ವೈಭವದಿಂದಲೇ ಎಂದು ದೇವರಾದ ಕರ್ತನು ಹೇಳುತ್ತಾನೆ.
14 Sua fama logo se espalhou por todo o mundo, por causa de sua beleza. Eu a vesti com meu esplendor e aperfeiçoei sua beleza, diz o S enhor Soberano.
15 ಆದರೆ ನೀನು ನಿನ್ನ ಸೌಂದರ್ಯದಲ್ಲಿ ಭರವಸ ವಿಟ್ಟು ನಿನ್ನ ಕೀರ್ತಿಯ ನಿಮಿತ್ತವಾಗಿ ಸೂಳೆತನ ಮಾಡಿದೆ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿವಿಾರಿ ಹಾದರತನ ಮಾಡಿದೆ; ಒಬ್ಬೊಬ್ಬನಿಗೂ ಒಳಗಾದೆ.
15 “No entanto, você pensou que era dona de sua fama e de sua beleza. Então, entregou-se como prostituta a todo homem que passava. Sua beleza estava à disposição de quem a pedisse.
16 ನಿನ್ನ ವಸ್ತ್ರಗಳನ್ನು ತೆಗೆದುಕೊಂಡು ಚಿತ್ರ ವಿಚಿತ್ರ ಮಾಡಿ ಅಲಂಕರಿಸಿಕೊಂಡು ಪೂಜಾಸ್ಥಳದಲ್ಲಿ ವ್ಯಭಿಚಾರ ಮಾಡಿದೆ, ಇದು ನಡೆಯತಕ್ಕದ್ದಲ್ಲ ಮತ್ತು ನಡೆಯಬಾರದಂಥ ಕೆಲಸವಾಗಿದೆ.
16 Usou os presentes lindos que lhe dei para fazer altares para seus ídolos e ali se prostituiu. Nunca se viu uma coisa dessas!
17 ಇದಲ್ಲದೆ ನಾನು ನಿನಗೆ ಬೆಳ್ಳಿ ಬಂಗಾರದಿಂದ ಮಾಡಿಸಿಕೊಟ್ಟಿದ್ದ ನಿನ್ನ ಅಂದವಾದ ಆಭರಣಗಳನ್ನು ತೆಗೆದು ಅವುಗಳಿಂದ ಪುರುಷ ರೂಪಗಳನ್ನು ಮಾಡಿಕೊಂಡು ಅದರ ಸಂಗಡ ವ್ಯಭಿಚಾರ ಮಾಡಿದಿ.
17 Pegou as joias e os enfeites de ouro e prata que lhe dei, fez estátuas de homens e as adorou. Desse modo, cometeu adultério contra mim.
18 ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು ಅವರಿಗೆ ಹೊದಿಸಿ ನನ್ನ ಎಣ್ಣೆಯನ್ನೂ ಧೂಪ ವನ್ನೂ ಅವರ ಮುಂದೆ ಇಟ್ಟೆ.
18 Com as lindas roupas bordadas que lhe dei, vestiu seus ídolos e usou meu óleo perfumado e meu incenso para adorá-los.
19 ನಾನು ನಿನಗೆ ನನ್ನ ಆಹಾರವನ್ನೂ ನಿನಗೆ ನಯವಾದ ಹಿಟ್ಟನ್ನೂ ಎಣ್ಣೆ ಮತ್ತು ಜೇನುಗಳನ್ನೂ ಸುವಾಸನೆಗಾಗಿ ಕೊಟ್ಟೆ. ಆದರೆ ನೀನು ಅವುಗಳನ್ನು ಅವರ ಮುಂದೆ ಇಟ್ಟೆ ಎಂದು ದೇವರಾದ ಕರ್ತನು ಹೇಳುತ್ತಾನೆ.
19 Colocou diante deles como sacrifício a farinha da melhor qualidade, o azeite e o mel com que cuidei de você, diz o S enhor Soberano.
20 ಇದಾದ ಮೇಲೆ ನನಗೆ ಹುಟ್ಟಿದ್ದ ನನ್ನ ಕುಮಾರರನ್ನೂ ಕುಮಾರ್ತೆ ಯರನ್ನೂ ಅವರ ಆಹಾರಕ್ಕಾಗಿ ಅರ್ಪಿಸಿದಿ. ಈ ನಿನ್ನ ವ್ಯಭಿಚಾರ ಸಾಮಾನ್ಯವಾದದ್ದಲ್ಲ,
20 “Depois, pegou seus filhos e suas filhas, que havia gerado para mim, e os sacrificou a seus deuses. Acaso não bastou você se prostituir?
21 ನೀನು ನನ್ನ ಮಕ್ಕಳನ್ನು ಕೊಂದು ಅವರಿಗೆ ಬೆಂಕಿಯನ್ನು ದಾಟುವ ಹಾಗೆ ಒಪ್ಪಿಸಿದಿಯಲ್ಲಾ;
21 Também teve de matar meus filhos como sacrifício a ídolos?
22 ನಿನ್ನ ಎಲ್ಲಾ ಅಸಹ್ಯಗಳ ಲ್ಲಿಯೂ ನಿನ್ನ ವ್ಯಭಿಚಾರಗಳಲ್ಲಿಯೂ ನಿನ್ನ ಎಳೆಯ ಪ್ರಾಯದ ದಿವಸಗಳನ್ನು ನೀನು ಬರೀ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದದ್ದನ್ನು ನೀನು ಜ್ಞಾಪಕ ಮಾಡಲಿಲ್ಲ.
22 Em todo o seu pecado detestável e em seu adultério, você não se lembrou daqueles dias, muito tempo atrás, em que estava nua e abandonada, esperneando em seu sangue.
23 ಇದಲ್ಲದೆ ಈ ನಿನ್ನ ಎಲ್ಲಾ ಕೆಟ್ಟತನಗಳ ತರುವಾಯ ಆಗಿದ್ದೇನಂದರೆ (ಅಯ್ಯೋ! ಅಯ್ಯೋ ಎಂದು ನಿನಗೆ ದೇವರಾದ ಕರ್ತನು ಹೇಳುತ್ತಾನೆ;)
23 “Que aflição a espera!, diz o S enhor Soberano. Além de todas as suas maldades,
24 ನೀನು ಪ್ರತಿಯೊಂದು ಬೀದಿಯಲ್ಲಿಯೂ ಉನ್ನತ ಸ್ಥಳಗಳನ್ನು ಕಟ್ಟಿ ನಿನಗೆ ಉತ್ತಮವಾದ ಸ್ಥಳಗ ಳನ್ನು ಮಾಡಿಕೊಂಡಿರುವಿ.
24 você construiu um lugar de adoração e ergueu altares a ídolos em todas as praças da cidade.
25 ಪ್ರತಿಯೊಂದು ಕಡೆ ಮೂಲೆ ಮೂಲೆಗೂ ಉನ್ನತ ಸ್ಥಳವನ್ನು ಕಟ್ಟಿ ನಿನ್ನ ಸೌಂದರ್ಯವನ್ನು ದುರುಪಯೋಗಪಡಿಸಿಕೊಂಡು ಹಾದು ಹೋಗುವ ಪ್ರತಿಯೊಬ್ಬರಿಗೂ ನಿನ್ನ ಕಾಲು ಗಳನ್ನು ಅಗಲಿಸಿದಿ; ನಿನ್ನ ವ್ಯಭಿಚಾರವನ್ನು ವೃದ್ಧಿಸಿದಿ.
25 Em cada esquina, contaminou sua beleza e ofereceu seu corpo a todos que passavam, aumentando sua prostituição.
26 ಇದಲ್ಲದೆ ಮಾಂಸದಲ್ಲಿ (ಶರೀರಭಾವದಲ್ಲಿ) ಮದಿ ಸಿದ ನಿನ್ನ ನೆರೆಯವರಾದ ಐಗುಪ್ತ್ಯರ ಸಂಗಡ ವ್ಯಭಿ ಚಾರ ಮಾಡಿದಿ; ಮತ್ತು ನನ್ನನ್ನು ರೇಗಿಸುವ ಹಾಗೆ ವ್ಯಭಿಚಾರವನ್ನು ಹೆಚ್ಚಿಸಿದಿ.
26 Então acrescentou a seus amantes o lascivo Egito e provocou minha ira com promiscuidade cada vez maior.
27 ಆದದರಿಂದ ಇಗೋ, ನಾನು ನನ್ನ ಕೈಯನ್ನು ನಿನ್ನ ಮೇಲೆ ಚಾಚಿ ನಿನ್ನ ಸಾಮಾನ್ಯವಾದ ಆಹಾರವನ್ನು ಕಡಿಮೆಮಾಡಿದೆ; ನಿನ್ನ ದುರ್ಮಾರ್ಗಕ್ಕೆ ನಾಚಿಕೆಪಟ್ಟು ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯರ ಕುಮಾರ್ತೆಯರ ಚಿತ್ತಕ್ಕೆ ನಿನ್ನನ್ನು ಒಪ್ಪಿಸಿಬಿಟ್ಟೆ.
27 Por isso eu a feri com minha mão e reduzi seu território. Entreguei-a a seus inimigos, os filisteus, e até eles ficaram espantados com sua conduta depravada.
28 ಇದಲ್ಲದೆ ಅಶ್ಶೂರ್ಯ ರೊಂದಿಗೂ ತೃಪ್ತಿಯಾಗಲಾರದಷ್ಟು ವ್ಯಭಿಚಾರಮಾಡಿ ದರೂ ನಿನಗೆ ತೃಪ್ತಿಯಾಗಲಿಲ್ಲ; ಹೌದು, ಅವರ ಸಂಗಡ ವ್ಯಭಿಚಾರ ಮಾಡಿದ್ದೀ; ಆದರೂ ತೃಪ್ತಿಯಾಗ ಲಿಲ್ಲ.
28 Você também se prostituiu com os assírios. Parece que nunca se cansa de procurar amantes! E, mesmo depois de se prostituir com eles, não ficou satisfeita.
29 ಇದಲ್ಲದೆ ಈ ನಿನ್ನ ವ್ಯಭಿಚಾರವನ್ನು ಕಾನಾನ್‌ ದೇಶದಿಂದ ಕಸ್ದೀಯ ದೇಶದವರೆಗೂ ಹೆಚ್ಚು ಮಾಡಿದಿ. ಆದರೂ ನೀನು ಇದರಲ್ಲಿ ತೃಪ್ತಿ ಹೊಂದಲಿಲ್ಲ.
29 Acrescentou a seus amantes a Babilônia, terra de comerciantes, mas ainda assim não se contentou.
30 ನೀನು ಈ ಸಂಗತಿ ಗಳನ್ನೆಲ್ಲಾ ಸ್ವಯಿಚ್ಛೆಯಾಗಿ ನಡೆಸುವ ಜಾರಸ್ತ್ರೀಯ ಕೆಲಸವನ್ನೇ ಮಾಡಿದಿಯಲ್ಲಾ! ನಿನ್ನ ಹೃದಯವು ಎಷ್ಟೊಂದು ಬಲಹೀನವಾಗಿದೆ ಎಂದು ದೇವರಾದ ಕರ್ತನು ಹೇಳುತ್ತಾನೆ.
30 “Como seu coração é fraco, diz o S enhor Soberano, para fazer essas coisas e se comportar como uma prostituta desavergonhada!
31 ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ ಗದ್ದುಗೆಯನ್ನು ಕಟ್ಟಿ ಪ್ರತಿಯೊಂದು ಹಾದಿಯಲ್ಲಿಯೂ ಉನ್ನತಸ್ಥಾನವನ್ನು ಮಾಡಿಕೊಂಡು ಕೂಲಿಯನ್ನು ಉದಾಸೀನ ಮಾಡುವ ವ್ಯಭಿಚಾರಿಣಿಯು ನೀನಲ್ಲ;
31 Constrói lugares de adoração em todas as esquinas e altares a seus ídolos em todas as praças. Na verdade, você foi pior que uma prostituta, pois nem exigiu pagamento.
32 ಆದರೆ ಗಂಡನಿಗೆ ಬದ ಲಾಗಿ ಅನ್ಯರನ್ನು ಅಂಗೀಕರಿಸುವ ವ್ಯಭಿಚಾರಿ ಹೆಂಡತಿ ಯಾಗಿರುವಿ!
32 Sim, você é uma esposa adúltera que acolhe estranhos em vez do marido.
33 ಅವರು ವ್ಯಭಿಚಾರಿಗಳಿಗೆಲ್ಲ ಬಹು ಮಾನ ಕೊಡುತ್ತಾರೆ; ಆದರೆ ನೀನು ನಿನ್ನ ಪ್ರಿಯರಿಗೆಲ್ಲ ನಿನ್ನ ಬಹುಮಾನಗಳನ್ನು ಕೊಟ್ಟು ಅವರನ್ನು ಬಾಡಿಗೆಗೆ ಪಡೆದು ನಿನ್ನ ವ್ಯಭಿಚಾರಕ್ಕಾಗಿ ನಿನ್ನ ಬಳಿಗೆ ಬರುವ ಹಾಗೆ ಅವರಿಗೆ ಬಹುಮಾನ ಕೊಡುತ್ತೀ.
33 As prostitutas cobram por seus serviços, mas você não! Oferece presentes a seus amantes e os suborna para adulterarem com você.
34 ಹೀಗಿರುವ ದರಿಂದ ಹೆಂಗಸರಿಗೆ ವಿರೋಧವಾದದ್ದು ನಿನ್ನ ವ್ಯಭಿ ಚಾರದಲ್ಲಿ ನಿನಗಾಯಿತು; ವ್ಯಭಿಚಾರಮಾಡುವ ಹಾಗೆ ನಿನ್ನನ್ನು ಯಾರೂ ಹಿಂಬಾಲಿಸುವದಿಲ್ಲ; ನೀನು ಬಹು ಮಾನ ಕೊಡುತ್ತೀಯೇ ಹೊರತು ನಿನಗೆ ಯಾರೂ ಬಹುಮಾನ ಕೊಡುವದಿಲ್ಲ. ಆದದರಿಂದ ಇದು ವಿರೋಧವಾದದ್ದಾಗಿದೆ.
34 Faz, portanto, o contrário de outras prostitutas. Paga seus amantes em vez de eles pagarem você!”
35 ಆದಕಾರಣ ಓ ವ್ಯಭಿಚಾರಿಣಿಯೇ, ನೀನು ಕರ್ತನ ವಾಕ್ಯವನ್ನು ಕೇಳು.
35 “Portanto, prostituta, ouça esta mensagem do S enhor .
36 ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಅಸಹ್ಯವು ಸುರಿಯಲ್ಪಟ್ಟ ಕಾರಣ ದಿಂದಲೂ ನಿನ್ನ ಬೆತ್ತಲೆತನವು ಪ್ರಕಟವಾಗುವಂತೆ ನಿನ್ನ ಪ್ರಿಯರ ಸಂಗಡ ಮಾಡಿದ ವ್ಯಭಿಚಾರದಿಂದಲೂ ನಿನ್ನ ಎಲ್ಲಾ ಅಸಹ್ಯವಾದ ವಿಗ್ರಹಗಳಿಂದಲೂ ನೀನು ಅವರಿಗೆ ಕೊಟ್ಟ ನಿನ್ನ ಮಕ್ಕಳ ರಕ್ತದಿಂದಲೂ
36 Assim diz o S enhor Soberano: Visto que você derramou sua lascívia e se expôs em prostituição a todos os seus amantes, adorou ídolos detestáveis e matou seus filhos como sacrifícios a seus deuses,
37 ಇಗೋ, ನೀನು ಆನಂದ ಪಟ್ಟವರೊಂದಿಗೆ ಪ್ರೀತಿ ಮಾಡಿದವರೆ ಲ್ಲರನ್ನೂ ಹಗೆಮಾಡಿದವರೆಲ್ಲರನ್ನೂ ಸಹ ಕೂಡಿಸು ವೆನು; ನಾನು ಅವರನ್ನು ನಿನಗೆ ವಿರುದ್ಧವಾಗಿ ಸುತ್ತಲೂ ಕೂಡಿಸಿ ಅವರಿಗೆ ನಿನ್ನ ಬೆತ್ತಲೆಯನ್ನು ಪ್ರಕಟಪಡಿಸು ವೆನು. ಆಗ ಅವರು ನಿನ್ನ ಬೆತ್ತಲೆಯನ್ನು ನೋಡುವರು.
37 ouça o que farei. Reunirei todos os seus aliados — seus amantes com os quais você teve prazer, os que você amou e também os que odiou — e a deixarei nua diante deles, para que todos a vejam.
38 ದಾಂಪತ್ಯವನ್ನು ಮುರಿದು ರಕ್ತ ಸುರಿಸುವಂಥ ಹೆಂಗಸರಿಗೆ ವಿಧಿಸುವಂಥ ತಕ್ಕ ದಂಡನೆಗಳನ್ನು ನಿನಗೂ ವಿಧಿಸಿ, ಕೋಪೋದ್ರೇಕದಿಂದಲೂ ರೋಷಾವೇಶ ದಿಂದಲೂ ನಿನಗೆ ರಕ್ತವನ್ನು ಸುರಿಸುವೆನು.
38 Eu a castigarei por homicídio e adultério e, na fúria de meu ciúme, a cobrirei de sangue.
39 ಇದಲ್ಲದೆ ನಿನ್ನನ್ನು ಅವರ ಕೈಗಳಲ್ಲಿ ಒಪ್ಪಿಸುವೆನು. ಅವರು ನಿನ್ನ ಎತ್ತರ ಸ್ಥಳಗಳನ್ನೆಲ್ಲಾ ಕೆಡವಿಹಾಕಿ ನಿನ್ನ ಉನ್ನತ ಸ್ಥಾನ ಗಳನ್ನು ಒಡೆದು ಬಿಡುವರು; ಅವರು ನಿನ್ನ ವಸ್ತ್ರಗಳನ್ನು ತೆಗೆದುಹಾಕಿ ನಿನ್ನ ಸೌಂದರ್ಯವುಳ್ಳ ಆಭರಣಗಳನ್ನು ಕಸಿದುಕೊಂಡು ನಿನ್ನನ್ನು ಬರೀ ಬೆತ್ತಲೆಯನ್ನಾಗಿ ಮಾಡಿ ಬಿಟ್ಟು ಹೋಗುವರು.
39 Então a entregarei a esses muitos povos que são seus amantes, e eles a destruirão. Derrubarão seus lugares de adoração e os altares de seus ídolos. Arrancarão suas roupas, levarão suas lindas joias e a deixarão completamente nua.
40 ಅವರು ನಿನಗೆ ವಿರುದ್ಧವಾಗಿ ಒಂದು ಕೂಟವನ್ನು ಕರಕೊಂಡು ಬಂದು ಕಲ್ಲುಗಳನ್ನು ನಿನ್ನ ಮೇಲೆ ಎಸೆದು, ತಮ್ಮ ಕತ್ತಿಗಳಿಂದ ನಿನ್ನನ್ನು ತಿವಿಯುವರು.
40 Eles se juntarão e formarão uma multidão violenta que a apedrejará e a cortará com espadas.
41 ಅವರು ನಿನ್ನ ಮನೆಗಳನ್ನು ಸುಟ್ಟು ಬಹಳ ಸ್ತ್ರೀಯರ ಕಣ್ಣುಗಳ ಮುಂದೆ ನಿನಗೆ ನ್ಯಾಯ ತೀರಿಸುವರು; ನೀನು ವ್ಯಭಿಚಾರ ಮಾಡುವದನ್ನು ನಾನು ನಿಲ್ಲಿಸುವೆನು; ಆಗ ನೀನು ಕೂಲಿ ಸಹ ಕೊಡುವದನ್ನು ನಿಲ್ಲಿಸುವೆನು;
41 Queimarão suas casas e a castigarão diante de muitas mulheres. Eu porei fim à sua prostituição, e você não pagará mais seus muitos amantes.
42 ಈ ರೀತಿ ನನ್ನ ಸಿಟ್ಟನ್ನು ನಿನ್ನಲ್ಲಿ ವಿಶ್ರಾಂತಿ ಪಡಿಸುತ್ತೇನೆ, ನನ್ನ ರೋಷವನ್ನು ನಿನ್ನ ಕಡೆಯಿಂದ ತೊಲಗಿಸುತ್ತೇನೆ; ಶಾಂತನಾಗಿ ನಿನ್ನ ಮೇಲೆ ಕೋಪ ಗೊಳ್ಳುವದಿಲ್ಲ.
42 “Por fim, satisfarei minha fúria contra você, e meu ciúme se acalmará. Ficarei tranquilo e já não ficarei irado com você.
43 ನೀನು ನಿನ್ನ ಯೌವನ ದಿವಸಗಳನ್ನು ಜ್ಞಾಪಕಮಾಡಿಕೊಳ್ಳದೆ ಈ ಸಂಗತಿಗಳಿಂದ ನೀನು ನನಗೆ ಬೇಸರಪಡಿಸಿದ್ದರಿಂದ ಇಗೋ, ನಾನು ಸಹ ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ. ನಿನ್ನ ಎಲ್ಲಾ ಅಸಹ್ಯವಾದವುಗಳ ಮೇಲೆ ಈ ಅಪವಿತ್ರತೆಯನ್ನು ನೀನು ಮಾಡಬಾರದು.
43 Primeiro, porém, uma vez que você não se lembrou de sua juventude, mas provocou minha ira com todas as suas maldades, eu lhe darei o castigo merecido por sua conduta, diz o S enhor Soberano. Pois a todos os seus pecados detestáveis você acrescentou a depravação.
44 ಇಗೋ, ಗಾದೆ ಹೇಳುವವರೆಲ್ಲರೂ--ತಾಯಿಯಂತೆ ಮಗಳು ಎಂಬ ಗಾದೆಯನ್ನು ನಿನಗೆ ವಿರುದ್ಧವಾಗಿ ಹೇಳುವರು.
44 Todos que inventam provérbios dirão a seu respeito: ‘Tal mãe, tal filha’.
45 ಗಂಡನಿಗೂ ಮಕ್ಕಳಿಗೂ ಬೇಸರ ಪಡುವವಳಾದ ನಿನ್ನ ತಾಯಿಗೆ ನೀನು ತಕ್ಕ ಮಗಳು; ಗಂಡನಿಗೂ ಮಕ್ಕಳಿಗೂ ಬೇಸರ ಪಡುವವರಾದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ; ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋರಿಯನು.
45 Pois sua mãe detestava o marido e os filhos, e você faz o mesmo. É exatamente como suas irmãs, que também desprezaram marido e filhos. De fato, sua mãe era hitita, e seu pai, amorreu.
46 ನಿನ್ನ ಎಡಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯವೇ ನಿನ್ನ ಅಕ್ಕ; ಬಲಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್‌ ನಿನ್ನ ತಂಗಿ.
46 “Sua irmã mais velha era Samaria, que vivia com as filhas ao norte. Sua irmã mais nova era Sodoma, que vivia com as filhas ao sul.
47 ಆದರೂ ನೀನು ಅವರ ಮಾರ್ಗಗಳಲ್ಲಿ ನಡೆಯಲಿಲ್ಲ, ಅವರ ಅಸಹ್ಯಗಳ ಹಾಗೆ ಮಾಡಲಿಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸದಾ ಅವರಿಗಿಂತ ಬಹಳ ಕೆಟ್ಟವಳಾಗಿ ನಡೆದುಕೊಂಡೆ.
47 Mas você não apenas imitou sua conduta e seus pecados detestáveis; em pouco tempo, você as superou em sua depravação.
48 ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಜೀವದಾಣೆ, ನಿನ್ನ ತಂಗಿಯಾದ ಸೊದೋಮು, ತಾನಾದರೂ ತನ್ನ ಕುಮಾರ್ತೆಯ ರಾದರೂ ನೀನು ನಿನ್ನ ಕುಮಾರ್ತೆಯರು ಮಾಡಿದ ಹಾಗೆ ಮಾಡಲಿಲ್ಲ.
48 Tão certo como eu vivo, diz o S enhor Soberano, Sodoma e suas filhas nunca foram tão perversas quanto você e suas filhas.
49 ಇಗೋ, ಸೊದೋಮ್‌ ಎಂಬ ನಿನ್ನ ತಂಗಿಯ ಅಕ್ರಮವನ್ನೂ ಗರ್ವವನ್ನೂ ನೋಡು; ರೊಟ್ಟಿಯ ತೃಪ್ತಿಯು ಅವಳಿಗೂ ಅವಳ ಕುಮಾರ್ತೆ ಯರಿಗೂ ನಿರ್ಭಯವಾದ ಸೌಖ್ಯವಾಗಿದೆ; ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ.
49 Sodoma cometia os pecados de orgulho, glutonaria e preguiça, enquanto os pobres e necessitados sofriam.
50 ಇದಲ್ಲದೆ ಅವರು ಅಹಂಕಾರಿಗಳಾಗಿದ್ದು ನನ್ನ ಮುಂದೆ ಅಸಹ್ಯ ವಾದವುಗಳನ್ನು ನಡಿಸಿದರು. ಆದದರಿಂದ ನಾನು ಅದನ್ನು ನೋಡಿ ಅವರನ್ನು ನಿರ್ಮೂಲ ಮಾಡಿದೆನು.
50 Era arrogante e cometia pecados detestáveis, por isso eu a exterminei, como você viu.
51 ಸಮಾರ್ಯವೆಂಬಾಕೆಯು ಸಹ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯವಾದ ಕಾರ್ಯಗಳನ್ನು ಮಾಡಿದಿ, ನೀನು ಮಾಡಿದ ಲೆಕ್ಕವಿಲ್ಲ ದಷ್ಟು ದುರಾಚಾರಗಳಿಂದ ಅವರನ್ನು ನೀತಿವಂತರೆಂದು ತೋರ್ಪಡಿಸಿದೆ.
51 “Nem mesmo Samaria cometeu metade dos pecados que você cometeu. Você fez coisas muito mais detestáveis que suas irmãs. Comparadas a você, elas parecem justas.
52 ನಿನ್ನ ದೋಷಗಳೇ ನಿನ್ನ ಅಕ್ಕ ತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆ ಪಡು; ನೀನು ಅವರಿಗಿಂತ ಅಸಹ್ಯವಾಗಿ ಮಾಡಿದ ನಿನ್ನ ಪಾಪಗಳಿಗೆ ತಕ್ಕ ನಿಂದೆಯನ್ನು ಹೊತ್ತುಕೋ; ಅವರು ನಿನಗಿಂತ ನೀತಿವಂತರು; ಹೌದು, ನೀನು ನಿನ್ನ ಸಹೋದರಿಗಳನ್ನು ನೀತಿವಂತರೆಂದು ತೋರ್ಪಡಿಸಿ ದ್ದರಿಂದ ನೀನೇ ನಾಚಿಕೆಪಟ್ಟು ನಿನ್ನ ನಿಂದೆಯನ್ನು ಹೊತ್ತುಕೋ.
52 Você deveria se envergonhar. Seus pecados são tão terríveis que fazem suas irmãs parecerem justas, e até mesmo puras. Que coisa vergonhosa!
53 ನಾನು ಅವರ ಸೆರೆಯನ್ನೂ ಕುಮಾರ್ತೆಯರ ಸಹಿತವಾದ ಸೊದೋಮಿನ ಸೆರೆಯನ್ನೂ ಕುಮಾರ್ತೆ ಯರ ಸಹಿತವಾದ ಸಮಾರ್ಯದ ಸೆರೆಯನ್ನೂ ತಪ್ಪಿಸುವಾಗ ಅವರೊಂದಿಗೆ ನಿನ್ನ ಸೆರೆಯವರ ಸೆರೆಯನ್ನು ತಪ್ಪಿಸುವೆನು.
53 “Um dia, porém, restaurarei Sodoma e Samaria, e você também.
54 ನೀನು ನಿನ್ನ ನಿಂದೆಯನ್ನು ಹೊತ್ತು ಕೊಂಡು ಅವರನ್ನು ಆದರಿಸುವಾಗ ನೀನು ಲಜ್ಜೆಪಡುವಿ, ನಾಚಿಕೆಗೊಳ್ಳುವಿ.
54 Então você ficará verdadeiramente envergonhada de tudo que fez, pois seus pecados fazem suas irmãs se sentirem bem em comparação com você.
55 ಆ ಸಮಾರ್ಯ, ಸೊದೋಮ್‌ ಎಂಬ ನಿನ್ನ ಅಕ್ಕತಂಗಿಯರೂ ಕುಮಾರ್ತೆಯರೂ ತಮ್ಮ ಪೂರ್ವಸ್ಥಿತಿಗೆ ತಿರುಗುವರು. ನೀನೂ ಕುಮಾರ್ತೆ ಯರೂ ಪೂರ್ವಸ್ಥಿತಿಗೆ ತಿರುಗಿಕೊಳ್ಳುವಿರಿ.
55 Quando suas irmãs, Sodoma e Samaria, e todos os seus habitantes forem restaurados, você também será restaurada.
56 ನಿನ್ನ ಸಹೋದರಿಯಾದ ಸೊದೋಮ್‌ ನಿನ್ನ ಗರ್ವದ ದಿವಸಗಳಲ್ಲಿ ನಿನ್ನ ಬಾಯಿಂದ ಉಚ್ಚರಿಸಲ್ಪಡಲಿ.
56 Você, em seus dias de arrogância, desprezava Sodoma.
57 ಅರಾಮಿನ ಕುಮಾರ್ತೆಯರಿಂದಲೂ ಮತ್ತು ಅದರ ಸುತ್ತಲಿರುವಂತೆ ಎಲ್ಲವುಗಳಿಂದಲೂ, ನಿನ್ನನ್ನು ಉದಾ ಸೀನ ಮಾಡಿದಂತ ಎಲ್ಲಾ ಫಿಲಿಷ್ಟಿಯರ ಕುಮಾರ್ತೆಯ ರಿಂದಲೂ ನಿನಗೆ ನಿಂದೆಯು ಬಂದ ಕಾಲದ ಹಾಗೆ ನಿನ್ನ ಕೆಟ್ಟತನವು ಪ್ರಕಟವಾಗುವದಕ್ಕೆ ಪೂರ್ವದಲ್ಲಿಯೇ
57 Agora, porém, sua perversidade se tornou evidente para todo o mundo, e você é desprezada por Edom, por todos os vizinhos dele e pela Filístia.
58 ನೀನು ನಿನ್ನ ದುಷ್ಕರ್ಮಗಳನ್ನೂ ಅಸಹ್ಯಗಳನ್ನೂ ಹೊತ್ತುಕೊಂಡಿರುವಿ ಎಂದು ಕರ್ತನು ಹೇಳುತ್ತಾನೆ.
58 Esse é o castigo por sua depravação e seus pecados detestáveis, diz o S enhor .
59 ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಮಾಡಿದ್ದಕ್ಕೆ ತಕ್ಕ ಹಾಗೆ ನಾನು ನಿನಗೆ ಮಾಡುತ್ತೇನೆ; ನೀನು ಒಡಂಬಡಿಕೆಯನ್ನು ವಿಾರಿ ನನ್ನ ಆಣೆಯನ್ನು ತಿರಸ್ಕರಿಸಿರುವಿ.
59 “Assim diz o S enhor Soberano: Eu lhe darei o que você merece, pois não levou a sério seus votos solenes e quebrou sua aliança.
60 ಆದಾಗ್ಯೂ ನಿನ್ನ ಯೌವನದ ದಿನಗಳಲ್ಲಿ ನಾನು ನಿನ್ನ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಂಡು ನಿನಗಾಗಿ ನಿತ್ಯವಾದ ಒಡಂಬಡಿಕೆ ಯೊಂದನ್ನು ಸ್ಥಾಪಿಸುವೆನು.
60 Contudo, me lembrarei da aliança que fiz com você em sua juventude e estabelecerei com você uma aliança permanente.
61 ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಸಹೋ ದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವಿ. ಅವರನ್ನು ನಿನ್ನ ಕುಮಾರ್ತೆಗಳಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆ ಯಿಂದಲ್ಲ.
61 Então você se lembrará com vergonha de tudo que fez. Farei que suas irmãs, Samaria e Sodoma, se tornem suas filhas, embora elas não façam parte de nossa aliança.
62 ನಾನು ಈ ಒಡಂಬಡಿಕೆಯನ್ನು ನಿಮ್ಮೊಂದಿಗೆ ಸ್ಥಾಪಿಸುವೆನು; ಆದದರಿಂದ ನಾನೇ ಕರ್ತ ನೆಂದು ನಿಮಗೆ ಗೊತ್ತಾಗುವದು.
62 Reafirmarei minha aliança com você, e você saberá que eu sou o S enhor .
63 ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
63 Você se lembrará de seus pecados e ficará calada de tanta vergonha quando eu perdoar tudo que fez. Eu, o S enhor Soberano, falei!”.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Ezequiel 16, comparar traduções ou montar um estudo — tudo direto pelo WhatsApp.