Ezequiel 20
Kannada Bible (GL_KANNADA) vs NVT
NVT Nova Versão Transformadora
1 ಏಳನೆಯ ವರುಷದ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಆದದ್ದೇನಂದರೆ-- ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಕರ್ತನ ಬಳಿಗೆ ವಿಚಾರಣೆಗಾಗಿ ಬಂದು ನನ್ನ ಮುಂದೆ ಕುಳಿತು ಕೊಂಡರು.
1 Em 14 de agosto, durante o sétimo ano do exílio do rei Joaquim, alguns dos líderes de Israel vieram consultar o S enhor e, enquanto estavam sentados comigo,
2 ಆಮೇಲೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ,
2 recebi esta mensagem do S enhor :
3 ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ ಅವ ರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಬಳಿಗೆ ವಿಚಾರಣೆಗಾಗಿ ಬಂದಿರೋ? ನನ್ನ ಜೀವದಾಣೆ, ನಾನು ನಿಮ್ಮಿಂದ ವಿಚಾರಿಸಲ್ಪಡುವದಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ.
3 “Filho do homem, diga aos líderes de Israel: ‘Assim diz o S enhor Soberano: Como ousam vir me consultar? Tão certo como eu vivo, diz o S enhor Soberano, não lhes direi coisa alguma!’.
4 ಅವರಿಗೆ ನ್ಯಾಯತೀರಿಸುವಿಯೋ? ಮನುಷ್ಯಪುತ್ರನೇ, ನೀನು ಅವರಿಗೆ ನ್ಯಾಯತೀರಿಸು ವಿಯೋ? ಅವರ ತಂದೆಗಳ ಅಸಹ್ಯವಾದವುಗಳನ್ನು ಅವರಿಗೆ ತಿಳಿಸು.
4 “Filho do homem, apresente acusações contra eles e condene-os. Faça-os ver como eram detestáveis os pecados de seus antepassados.
5 ಅವರಿಗೆ ಹೇಳಬೇಕಾದದ್ದೇನಂದರೆ --ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಇಸ್ರಾಯೇಲನ್ನು ಆದುಕೊಂಡು ಯಾಕೋಬನ ಮನೆಯ ವಂಶದವರಿಗೆ ನನ್ನ ಕೈಯೆತ್ತಿ ಮತ್ತು ಐಗುಪ್ತ ದೇಶದಲ್ಲಿ ಅವರಿಗೆ ನನ್ನನ್ನು ತಿಳಿಯಪಡಿಸಿದ ದಿನದಲ್ಲಿ ನಾನು ಅವರಿಗೆ ನನ್ನ ಕೈಯೆತ್ತಿ ನಿಮ್ಮ ದೇವರಾದ ಕರ್ತನು ನಾನೇ ಎಂದು ಅವರಿಗೆ ಹೇಳಿದಾಗ,
5 Transmita-lhes esta mensagem do S enhor Soberano: Quando escolhi Israel, quando me revelei aos descendentes de Jacó, no Egito, jurei solenemente que eu, o S enhor , seria o seu Deus.
6 ನಾನು ಅವರಿಗೆ ನನ್ನ ಕೈಯೆತ್ತಿ--ಐಗುಪ್ತ ದೇಶದಿಂದ ಹೊರಗೆ ತಂದು ಅವರಿಗೋಸ್ಕರ ನಾನೇ ನೋಡಿಕೊಂಡಂಥ ಹಾಲೂ ಜೇನೂ ಹರಿಯುವ ಕೀರ್ತಿಯುಳ್ಳ ಎಲ್ಲಾ ದೇಶಗಳಿಗೂ ಅವರನ್ನು ಆ ದಿವಸದಲ್ಲಿ ಕರೆತಂದೆನು.
6 Naquele dia, jurei que os tiraria do Egito e os levaria para uma terra que havia encontrado para eles, uma terra boa, que produz leite e mel com fartura, a mais linda de todas as terras.
7 ಆಮೇಲೆ ನಾನು ಅವರಿಗೆ ನಿಮ್ಮಲ್ಲಿ ಒಬ್ಬೊಬ್ಬನು ತಮ್ಮ ತಮ್ಮ ಕಣ್ಣುಗಳಿಗೆ ಅಸಹ್ಯವಾದವುಗಳನ್ನು ಬಿಸಾಡಿ. ಐಗುಪ್ತದ ವಿಗ್ರಹಗಳಿಂದ ನಿಮ್ಮನ್ನು ಅಶುದ್ಧಪಡಿಸಿ ಕೊಳ್ಳಬೇಡಿರಿ. ನಿಮ್ಮ ದೇವರಾದ ಕರ್ತನು ನಾನಾಗಿರು ವೆನು ಅಂದೆನು.
7 Então lhes disse: ‘Cada um de vocês livre-se de suas imagens repugnantes pelas quais está obcecado. Não se contamine com os ídolos do Egito, pois eu sou o S enhor , seu Deus’.
8 ಆದರೆ ಅವರು ನನಗೆ ವಿರುದ್ಧವಾಗಿ ತಿರುಗಿಬಿದ್ದರು; ನನಗೆ ಕಿವಿಗೊಡಲಿಲ್ಲ. ಅವರು ತಮ್ಮ ತಮ್ಮ ಕಣ್ಣುಗಳಿಗೆ ಅಸಹ್ಯವಾದವುಗಳನ್ನು ಬಿಸಾಡಲಿಲ್ಲ; ಅವರು ಐಗುಪ್ತದ ವಿಗ್ರಹಗಳನ್ನು ಬಿಡಲಿಲ್ಲ; ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿಸಿ, ಐಗುಪ್ತದೇಶದಲ್ಲಿ ಅವರ ಮೇಲೆ ನನ್ನ ಕೋಪವನ್ನು ತೀರಿಸುವೆನೆಂದು ಹೇಳಿದೆನು.
8 “Eles, porém, se rebelaram contra mim e não quiseram ouvir. Não se livraram das imagens repugnantes pelas quais estavam obcecados, nem abandonaram os ídolos do Egito. Então ameacei derramar minha fúria sobre eles para satisfazer minha ira enquanto ainda estavam no Egito.
9 ಆದರೆ ಅವರು ಯಾರ ಮಧ್ಯದಲ್ಲಿದ್ದರೋ ನಾನು ಯಾರ ಮುಂದೆ ಅವರನ್ನು ಐಗುಪ್ತದೇಶದಿಂದ ಹೊರಗೆ ತಂದು ನನ್ನನ್ನು ತಿಳಿಯ ಪಡಿಸಿದೆನೋ? ಆ ಅನ್ಯ ಜನಾಂಗಗಳ ಕಣ್ಣುಗಳ ಮುಂದೆ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಈ ಕೆಲಸ ಮಾಡಿದೆನು;
9 Mas, por causa do meu nome, não o fiz. Não permiti que meu nome fosse desonrado entre as nações vizinhas diante das quais me revelei quando tirei os israelitas do Egito.
10 ಆದದರಿಂದ ನಾನು ಅವರನ್ನು ಐಗುಪ್ತ ದೇಶದಿಂದ ಹೊರಗೆ ಕರತಂದು ಅರಣ್ಯದೊಳಗೆ ಅವರನ್ನು ಬರಮಾಡಿದೆನು.
10 Portanto, eu os tirei do Egito e os levei para o deserto.
11 ಯಾವ ಸಂಗತಿಗಳನ್ನು ಮಾಡಿದರೆ ಮನುಷ್ಯನು ಬದುಕುವನೋ? ಆ ನನ್ನ ನಿಯಮಗಳನ್ನು ಅವರಿಗೆ ಕೊಟ್ಟು ನನ್ನ ನ್ಯಾಯಗಳನ್ನು ಅವರಿಗೆ ತಿಳಿಸಿದೆನು.
11 Ali lhes dei meus decretos e estatutos, para que encontrassem vida ao praticá-los.
12 ಇದಲ್ಲದೆ ಅವರನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ಅವರು ತಿಳಿಯುವ ಹಾಗೆ ನನಗೂ ಅವರಿಗೂ ಗುರುತಾಗಿರುವದಕ್ಕೆ ನನ್ನ ಸಬ್ಬತ್ ದಿನಗಳನ್ನು ನಾನು ಅವರಿಗೆ ಕೊಟ್ಟೆನು.
12 Também lhes dei os sábados como sinal entre mim e eles, para lembrá-los de que eu sou o S enhor , que os separou para serem santos.
13 ಆದರೆ ಇಸ್ರಾಯೇಲಿನ ಮನೆತನದವರು ಅರಣ್ಯದಲ್ಲಿಯೂ ನನಗೆ ವಿರುದ್ಧ ವಾಗಿ ತಿರುಗಿಬಿದ್ದರು; ಆಜ್ಞಾವಿಧಿಗಳನ್ನು ಅನುಸರಿಸುವ ಮನುಷ್ಯನು ಬದುಕುವನು. ಅವುಗಳಲ್ಲಿ ನಡೆಯದೆ ನನ್ನ ನ್ಯಾಯಗಳನ್ನು ಅಸಡ್ಡೆ ಮಾಡಿ ನನ್ನ ಸಬ್ಬತ್ ದಿನಗಳನ್ನು ಸಹ ಬಹಳವಾಗಿ ಅಪವಿತ್ರಪಡಿಸಿದರು; ಆಗ ನಾನು ಅವರ ಮೇಲೆ ನನ್ನ ರೋಷದಿಂದ ದಹಿಸಿಬಿಡುವೆನೆಂದು ಹೇಳಿದೆನು.
13 “O povo de Israel, no entanto, se rebelou contra mim e não quis obedecer a meus decretos no deserto. A obediência lhes teria dado vida, mas não seguiram meus estatutos. Além disso, profanaram meus sábados. Portanto, ameacei derramar minha fúria sobre eles e consumi-los inteiramente no deserto.
14 ಆದರೆ ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಬರಮಾಡಿದೆನೋ ಆ ಅನ್ಯಜನಾಂಗಗಳ ದೃಷ್ಟಿಯಲ್ಲಿ ಅಪವಿತ್ರವಾಗದ ಹಾಗೆ ನನ್ನ ಹೆಸರಿಗಾಗಿಯೇ ಕೆಲಸ ಮಾಡಿದೆನು.
14 Mais uma vez, porém, me contive por causa do meu nome, para que não fosse desonrado diante das nações que tinham visto meu poder quando tirei Israel do Egito.
15 ಆದಾಗ್ಯೂ ಹಾಲೂ ಜೇನೂ ಹರಿಯುವಂಥ ದೇಶ ಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವದಿಲ್ಲವೆಂದು ಅರಣ್ಯದಲ್ಲಿ ಅವರಿಗೆ ನನ್ನ ಕೈ ಎತ್ತಿದೆನು.
15 Contudo, fiz um juramento solene contra eles no deserto. Jurei que não os faria entrar na terra que lhes tinha dado, uma terra que produz leite e mel com fartura, a mais linda de todas as terras.
16 ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತವಾಗಿ ನನ್ನ ನಿಯಮಗಳನ್ನು ಅನುಸರಿಸದೆ ನಿರಾಕರಿಸಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರ ಮಾಡಿದರು.
16 Pois rejeitaram meus estatutos, recusaram-se a seguir meus decretos e profanaram meus sábados, porque entregaram o coração a seus ídolos.
17 ಆದರೂ ಅವರನ್ನು ನಾನು ನಾಶಮಾಡದ ಹಾಗೆ ನನ್ನ ಕಣ್ಣು ಕನಿಕರಿಸಿತು; ನಾನು ಅವರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ಮುಗಿಸಿಬಿಡ ಲಿಲ್ಲ.
17 Apesar disso, tive compaixão deles e não os destruí no deserto.
18 ಆದರೆ ನಾನು ಅರಣ್ಯದಲ್ಲಿ ಅವರ ಮಕ್ಕಳಿಗೆ ಹೇಳಿದ್ದೇನಂದರೆ--ನಿಮ್ಮ ತಂದೆಗಳ ನಿಯಮಗಳಲ್ಲಿ ನಡೆಯಬೇಡಿರಿ, ಅವರ ನ್ಯಾಯಗಳನ್ನು ಅನುಸರಿಸ ಬೇಡಿರಿ, ಅವರ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರ ಮಾಡಿಕೊಳ್ಳಬೇಡಿರಿ;
18 “Então adverti seus filhos no deserto a não seguirem os passos e o estilo de vida de seus pais, que se contaminaram com seus ídolos.
19 ನಾನೇ ಕರ್ತನೂ ನಿಮ್ಮ ದೇವರೂ ಆಗಿದ್ದೇನೆ ನನ್ನ ನಿಯಮಗಳಲ್ಲಿಯೇ ನಡೆ ಯಿರಿ ನ್ಯಾಯಗಳನ್ನು ಕೈಕೊಂಡು ಅವುಗಳನ್ನೇ ಮಾಡಿರಿ;
19 Disse-lhes: ‘Eu sou o S enhor , seu Deus. Sigam meus decretos, obedeçam a meus estatutos
20 ನನ್ನ ಸಬ್ಬತ್ತುಗಳನ್ನು ಪರಿಶುದ್ಧಮಾಡಿರಿ ನಾನೇ ನಿಮ್ಮ ದೇವರಾದ ಕರ್ತನು ಎಂದು ಅವು ನಿಮಗೂ ನನಗೂ ನೀವು ತಿಳಿಯುವ ಹಾಗೆ ಗುರುತುಗಳಾಗಿರುವವು.
20 e guardem meus sábados como dias santos, pois são um sinal entre mim e vocês para lembrá-los de que eu sou o S enhor , seu Deus’.
21 ಆದಾಗ್ಯೂ ಮಕ್ಕಳು ನನಗೆ ವಿರೋಧವಾಗಿ ತಿರುಗಿ ಬಿದ್ದರು; ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ ಆ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ನನ್ನ ನ್ಯಾಯಗಳನ್ನು ಕೈಕೊಂಡುಮಾಡಲಿಲ್ಲ; ನನ್ನ ಸಬ್ಬತ್ತುಗಳನ್ನು ಅಪವಿತ್ರ ಪಡಿಸಿದಾಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ ನನ್ನ ಕೋಪ ವನ್ನು ಅರಣ್ಯದಲ್ಲಿ ಅವರ ಮೇಲೆ ತೀರಿಸಿಬಿಡುವೆ ನೆಂದೂ ಹೇಳಿದೆನು.
21 “Seus filhos, porém, também se rebelaram contra mim. A obediência lhes teria dado vida, mas não guardaram meus decretos nem seguiram meus estatutos. Além disso, profanaram meus sábados. Portanto, mais uma vez, ameacei derramar minha fúria sobre eles no deserto para satisfazer minha ira.
22 ಆದಾಗ್ಯೂ ನಾನು ನನ್ನ ಕೈಯನ್ನು ಹಿಂತೆಗೆದು ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಹೊರಗೆ ಬರಮಾಡಿದೆನೋ ಆ ಅನ್ಯಜನಾಂಗ ಗಳ ದೃಷ್ಟಿಯಲ್ಲಿ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಕೆಲಸ ಮಾಡಿದೆನು.
22 No entanto, contive meu julgamento por causa do meu nome, para que não fosse desonrado diante das nações que tinham visto meu poder quando tirei Israel do Egito.
23 ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸುತ್ತೇನೆಂದೂ ದೇಶಗಳಲ್ಲಿ ಹರಡಿಸುತ್ತೇನೆಂದೂ ಅರಣ್ಯದಲ್ಲಿ ಅವರ ಮೇಲೆ ಕೈ ಎತ್ತಿದೆನು;
23 Contudo, fiz um juramento solene contra eles no deserto. Jurei que os espalharia entre todas as nações,
24 ಅವರು ನನ್ನ ನ್ಯಾಯಗಳಲ್ಲಿ ನಡೆಯದೆ, ನನ್ನ ನಿಯಮಗಳನ್ನು ಅಲಕ್ಷಿಸಿ ನನ್ನ ಸಬ್ಬತ್ತುಗಳನ್ನು ಅಪವಿತ್ರಪಡಿಸಿದರು; ತಮ್ಮ ಪಿತೃಗಳ ವಿಗ್ರಹಗಳ ಕಡೆಗೆ ಕಣ್ಣಿಟ್ಟಿದ್ದರು.
24 pois não obedeceram a meus estatutos. Desprezaram meus decretos, profanaram meus sábados e cobiçaram os ídolos de seus antepassados.
25 ಆದಕಾರಣ ನಾನು ಅವರಿಗೆ ಅಹಿತವಾದ ನಿಯಮಗಳನ್ನೂ ಅವರು ಬದುಕಬಾರದ ನ್ಯಾಯಗಳನ್ನೂ ಕೊಟ್ಟೆನು.
25 Eu os entreguei a decretos e estatutos inúteis, que não conduziriam à vida.
26 ನಾನೇ ಕರ್ತನೆಂದು ಅವರು ತಿಳಿಯುವ ಹಾಗೆ ಅವರು ತಮ್ಮ ಚೊಚ್ಚಲು ಮಕ್ಕಳನ್ನು ಬೆಂಕಿಗೆ ಆಹುತಿಮಾಡಿದ್ದರಿಂದ ಅವರು ಹಾಳಾಗಿ ಬಿದ್ದಿರುವಂತೆ ನಾನು ಅವರ ಅರ್ಪಣೆಗಳನ್ನು ಅಪವಿತ್ರಪಡಿಸಿದೆನು.
26 Deixei que se contaminassem com suas ofertas idólatras e permiti que oferecessem seus primeiros filhos como sacrifícios a seus deuses, para que eu os devastasse e lhes mostrasse que somente eu sou o S enhor .”
27 ಆದದರಿಂದ ಮನುಷ್ಯಪುತ್ರನೇ, ನೀನು ಇಸ್ರಾ ಯೇಲಿನ ಮನೆತನದವರ ಸಂಗಡ ಮಾತಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅದೇನಂದರೆ, ನನಗೆ ವಿರುದ್ಧವಾಗಿ ಬಹಳ ಅಪರಾಧ ಮಾಡಿದ್ದರಲ್ಲಿ ನಿಮ್ಮ ಪಿತೃಗಳು ನನ್ನನ್ನು ದೂಷಿಸಿದರು.
27 “Portanto, filho do homem, transmita ao povo de Israel esta mensagem do S enhor Soberano: Seus antepassados continuaram a blasfemar contra mim e a me trair,
28 ನಾನು ಕೈ ಎತ್ತಿ ಅವರಿಗೆ ಕೊಟ್ಟ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ ಗಾತ್ರವಾದ ಮರಗಳನ್ನೂ ನೋಡಿ ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಅಲ್ಲಿ ರೇಗಿಸುವ ತಮ್ಮ ಕಾಣಿಕೆಗಳನ್ನರ್ಪಿಸಿ ಸುವಾಸನೆ ಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು.
28 pois, quando os trouxe à terra que lhes havia prometido, eles ofereceram sacrifícios onde quer que vissem montes altos e árvores verdejantes. Provocaram minha fúria ao oferecer sacrifícios a seus deuses. Levaram perfumes e incenso e apresentaram ofertas derramadas.
29 ಆಗ ನಾನು ಅವರಿಗೆ ಹೇಳಿದ್ದೇನಂದರೆ--ನೀವು ಹೋಗುವ ಈ ಎತ್ತರವಾದ ಸ್ಥಳವು ಏನು? ಅದಕ್ಕೆ ಈ ದಿನದ ವರೆಗೂ ಬಾ--ಮಾ ಎಂದು ಕರೆಯುವರು.
29 Disse-lhes: ‘Que lugar alto é este para onde vão?’. (Desde então, esse tipo de lugar é chamado de Bamá, ‘lugar alto’.)
30 ಆದದರಿಂದ ನೀನು ಇಸ್ರಾಯೇಲಿನ ಮನೆತನದವರಿಗೆ ಹೇಳಬೇಕಾ ದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ; ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಅಪವಿತ್ರ ಪಡಿಸಿಕೊಳ್ಳುತ್ತೀರೋ? ಅವರ ಅಸಹ್ಯವಾದವುಗಳ ಪ್ರಕಾರ ವ್ಯಭಿಚಾರಮಾಡುತ್ತೀರೋ?
30 “Portanto, transmita ao povo de Israel esta mensagem do S enhor Soberano: Vocês continuarão a se contaminar, como fizeram seus antepassados? Vão se prostituir adorando imagens repugnantes?
31 ನಿಮ್ಮ ದಾನ ಗಳನ್ನು ತರುವಾಗಲೂ ನಿಮ್ಮ ಕುಮಾರರನ್ನು ಬೆಂಕಿ ಯಿಂದ ದಾಟಿಸುವಾಗಲೂ ನೀವು ಇಂದಿನ ವರೆಗೂ ನಿಮ್ಮ ಎಲ್ಲಾ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಪಡಿಸಿ ಕೊಳ್ಳುತ್ತೀರಿ; ಹೀಗಾದರೆ ನಾನು ನಿಮ್ಮಿಂದ ವಿಚಾರಿಸ ಲ್ಪಟ್ಟೆನೊ? ನನ್ನ ಜೀವದಾಣೆ ನಾನು ನಿಮ್ಮಿಂದ ವಿಚಾರಿಸ ಲ್ಪಡುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ;
31 Pois, quando apresentam ofertas para elas e sacrificam seus filhos no fogo, continuam a se contaminar com ídolos até hoje. Acaso devo permitir que me consultem, ó povo de Israel? Tão certo como eu vivo, diz o S enhor Soberano, não lhes direi coisa alguma.
32 ನಾವು ಅನ್ಯಜನಾಂಗಗಳ ಹಾಗೆಯೂ ದೇಶದಲ್ಲಿ ರುವ ಕುಟುಂಬಗಳ ಹಾಗೆಯೂ ಇದ್ದು ಮರಕ್ಕೂ ಕಲ್ಲಿಗೂ ಸೇವೆ ಮಾಡುತ್ತೇವೆಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಎಷ್ಟು ಮಾತ್ರಕ್ಕೂ ಆಗದು.
32 “Vocês dizem: ‘Queremos ser como as nações ao redor, que servem a ídolos de madeira e de pedra’. Mas o que vocês planejam nunca acontecerá.
33 ದೇವರಾದ ಕರ್ತನು ಹೇಳುವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಸುರಿಸಿದ ರೋಷ ದಿಂದಲೂ ನಾನು ನಿಮ್ಮ ಮೇಲೆ ಅಧಿಕಾರ ನಡಿಸು ತ್ತೇನೆ.
33 Tão certo como eu vivo, diz o S enhor Soberano, eu os governarei com mão de ferro, com grande ira e poder tremendo.
34 ಬಲವಾದ ಕೈಯಿಂದಲೂ ಚಾಚಿದ ತೋಳಿ ನಿಂದಲೂ ಸುರಿಸಿದ ರೋಷದಿಂದಲೂ ನಿಮ್ಮನ್ನು ಜನ ಗಳೊಳಗಿಂದ ಹೊರತಂದು ನೀವು ಚದರಿಹೋಗಿ ರುವ ದೇಶಗಳೊಳಗಿಂದ ನಿಮ್ಮನ್ನು ಒಂದಾಗಿ ಕೂಡಿಸಿ,
34 E com grande ira estenderei minha mão forte e meu braço poderoso e os trarei de volta das terras onde foram espalhados.
35 ನಿಮ್ಮನ್ನು ಜನಗಳಿರುವ ಅರಣ್ಯದೊಳಗೆ ತಂದು ನಾನು ನಿಮ್ಮೊಂದಿಗೆ ಅಲ್ಲಿ ಮುಖಾಮುಖಿಯಾಗಿ ವಾದಿಸುವೆನು.
35 Eu os levarei ao deserto das nações e ali os julgarei face a face.
36 ಇದೇ ರೀತಿ ನಾನು ನಿಮ್ಮ ಪಿತೃಗಳ ಸಂಗಡ ಐಗುಪ್ತ ದೇಶದ ಅರಣ್ಯದಲ್ಲಿ ವಾದಿಸಿದೆನು; ಈಗಲೂ ನಿಮ್ಮ ಸಂಗಡ ವಾದಿಸಿದೆನು ಎಂದು ದೇವ ರಾದ ಕರ್ತನು ಹೇಳುತ್ತಾನೆ.
36 Ali os julgarei como julguei seus antepassados no deserto depois de tirá-los do Egito, diz o S enhor Soberano.
37 ನಾನು ನಿಮ್ಮನ್ನು ಕೋಲಿನ ಕೆಳಗೆ ಹಾದುಹೋಗುವಂತೆ ಮಾಡಿ ಒಡಂಬ ಡಿಕೆಯ ಬಂಧನದಲ್ಲಿ ನಿಮ್ಮನ್ನು ಸೇರಿಸುತ್ತೇನೆ.
37 Eu os examinarei cuidadosamente e os farei obedecer aos termos de minha aliança.
38 ಇದ ಲ್ಲದೆ ತಿರುಗಿಬಿದ್ದವರನ್ನೂ ನನಗೆ ವಿರೋಧವಾಗಿ ಅಪರಾಧಮಾಡಿದವರನ್ನೂ ನಿಮ್ಮೊಳಗಿಂದ ಶುದ್ಧಿ ಮಾಡುತ್ತೇನೆ. ಅವರು ತಂಗುವ ದೇಶದೊಳಗಿಂದ ಅವರನ್ನು ಹೊರಗೆ ತರುತ್ತೇನೆ. ಅವರು ಇಸ್ರಾಯೇಲ್ ದೇಶದೊಳಗೆ ಹೋಗದ ಹಾಗೆ ಮಾಡಿ ನಾನೇ ಕರ್ತ ನೆಂಬದನ್ನು ಅವರಿಗೆ ತಿಳಿಸುತ್ತೇನೆ.
38 Tirarei de seu meio todos que se rebelam e se revoltam contra mim. Eu os farei sair das terras em que estão exilados, mas eles nunca entrarão na terra de Israel. Então vocês saberão que eu sou o S enhor .
39 ನಿಮ್ಮ ವಿಷಯ ವಾಗಿ ಓ ಇಸ್ರಾಯೇಲಿನ ಮನೆತನದವರೇ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ನನಗೆ ಕಿವಿಗೊಡದಿದ್ದರೆ ಹೋಗಿ ಇನ್ನು ಮೇಲೆಯೂ ನಿಮ್ಮ ನಿಮ್ಮ ವಿಗ್ರಹಗಳನ್ನು ಸೇವಿಸಿರಿ; ಆದರೆ ನಿಮ್ಮ ದಾನಗ ಳಿಂದಲೂ ವಿಗ್ರಹಗಳಿಂದಲೂ ಇನ್ನು ಮೇಲೆ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಪಡಿಸಬೇಡಿರಿ.
39 “Quanto a vocês, povo de Israel, assim diz o S enhor Soberano: Continuem a adorar seus ídolos. Mais cedo ou mais tarde, porém, vocês me obedecerão e deixarão de desonrar meu santo nome com sua idolatria.
40 ನನ್ನ ಪರಿಶುದ್ಧ ಪರ್ವತದಲ್ಲಿ ಅಂದರೆ ಇಸ್ರಾಯೇಲಿನ ಉನ್ನತ ಪರ್ವತದಲ್ಲಿಯೇ ಇಸ್ರಾಯೇಲಿನ ಮನೆತನ ದವರೆಲ್ಲರೂ ದೇಶದಲ್ಲಿರುವವರೆಲ್ಲರೂ ನನ್ನನ್ನು ಸೇವಿ ಸುವರು. ನಾನು ಅಲ್ಲಿ ಅವರಿಗೆ ಮೆಚ್ಚಿ ನಿಮ್ಮ ಎತ್ತುವ ಅರ್ಪಣೆಗಳನ್ನೂ ನಿಮ್ಮ ಕಾಣಿಕೆಗಳ ಪ್ರಥಮ ಫಲ ವನ್ನೂ ನಿಮ್ಮ ಎಲ್ಲಾ ಪರಿಶುದ್ಧ ಸಂಗತಿಗಳನ್ನೂ ಅಂಗೀಕರಿಸುವೆನು.
40 Pois em meu santo monte, o alto monte de Israel, diz o S enhor Soberano, todo o povo de Israel me adorará, e eu os aceitarei. Ali exigirei que tragam todas as suas ofertas, suas melhores dádivas e tudo que me consagrarem.
41 ನಾನು ನಿಮ್ಮನ್ನು ಜನರಿಂದ ಹೊರತಂದು ನೀವು ಚದರಿರುವ ದೇಶಗಳೊಳಗಿಂದ ನಿಮ್ಮನ್ನು ಕೂಡಿಸುವಾಗ ನಿಮ್ಮ ಸುವಾಸನೆಯ ಸಂಗಡ ನಾನು ನಿಮ್ಮನ್ನು ಅಂಗೀಕರಿಸುವೆನು, ನಾನು ಅನ್ಯ ಜನಾಂಗಗಳ ಮುಂದೆ ನಿಮ್ಮಲ್ಲಿ ಪರಿಶುದ್ಧವೆನಿಸಿಕೊಳ್ಳು ವೆನು.
41 Quando eu os trouxer de volta do exílio, vocês serão para mim como uma oferta agradável. E, por meio de vocês, demonstrarei minha santidade diante de todas as nações.
42 ಆಗ ನಾನು ನಿಮ್ಮ ಮೇಲೆ ಇಸ್ರಾಯೇಲ್ ದೇಶದಲ್ಲಿ ನನ್ನ ಕೈಯೆತ್ತಿ ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಿಂದ ನಿಮ್ಮನ್ನು ಕರೆದುಕೊಂಡು ಬರುವಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ.
42 Então, quando eu os tiver trazido de volta à terra que, com juramento solene, prometi a seus antepassados, saberão que eu sou o S enhor .
43 ಅಲ್ಲಿ ನೀವು ನಿಮ್ಮ ಮಾರ್ಗಗಳನ್ನು ಬಿಟ್ಟು ನೀವು ಯಾವ ಸಂಗತಿ ಗಳಿಂದ ಅಶುದ್ಧವಾಗಿದ್ದಿರೋ ಆ ನಿಮ್ಮ ಕ್ರಿಯೆಗಳನ್ನೆಲ್ಲಾ ಜ್ಞಾಪಕಮಾಡಿಕೊಳ್ಳುವಿರಿ; ನೀವು ಮಾಡಿದ ನಿಮ್ಮ ಎಲ್ಲಾ ಕೆಟ್ಟತನದ ನಿಮಿತ್ತವಾಗಿ ನಿಮ್ಮ ಸ್ವಂತ ದೃಷ್ಟಿ ಯಲ್ಲಿಯೇ ನೀವು ಅಸಹ್ಯರಾಗುವಿರಿ.
43 Vocês se lembrarão de todas as formas pelas quais se contaminaram e terão nojo de si mesmos por todo o mal que fizeram.
44 ಇದಲ್ಲದೆ ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾರ್ಗ ಗಳ ಪ್ರಕಾರವಲ್ಲ, ನಿಮ್ಮ ದುಷ್ಕ್ರಿಯೆಗಳ ಪ್ರಕಾರವಲ್ಲ, ನನ್ನ ಹೆಸರಿಗೋಸ್ಕರವೇ ನಿಮಗೆ ಮಾಡಿದಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
44 Saberão que eu sou o S enhor , ó povo de Israel, quando, por causa do meu nome, eu os tratar com compaixão, apesar de toda a sua perversidade. Eu, o S enhor Soberano, falei!”.
45 ಇದಲ್ಲದೆ ಕರ್ತನ ವಾಕ್ಯವು ಬಂದು ನನಗೆ ಹೇಳಿದ್ದೇನಂದರೆ--
45 Então recebi esta mensagem do S enhor :
46 ಮನುಷ್ಯಪುತ್ರನೇ, ದಕ್ಷಿಣದ ಕಡೆಗೆ ಮುಖಮಾಡಿ ತೆಂಕಣದ ಕಡೆಗೆ ಮಾತ ನಾಡು; ದಕ್ಷಿಣ ಬಯಲು ಅರಣ್ಯಕ್ಕೆ ವಿರೋಧವಾಗಿ ಪ್ರವಾದಿಸು.
46 “Filho do homem, volte o rosto para o sul e pronuncie-se contra ele; profetize contra os matagais do Neguebe.
47 ದಕ್ಷಿಣದ ಅರಣ್ಯಕ್ಕೆ ಹೇಳಬೇಕಾದ ದ್ದೇನಂದರೆ--ಕರ್ತನ ವಾಕ್ಯವನ್ನು ಕೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ; ಅದು ನಿನ್ನಲ್ಲಿರುವ ಎಲ್ಲಾ ಹಸೀ ಮರಗಳನ್ನು ಮತ್ತು ಎಲ್ಲಾ ಒಣಮರಗಳನ್ನು ತಿಂದುಬಿಡುವದು; ಉರಿಯುವ ಉರಿ ಆರಿಹೋಗು ವದಿಲ್ಲ; ದಕ್ಷಿಣ ಮೊದಲುಗೊಂಡು ಉತ್ತರದ ವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟು ಹೋಗುವವು.
47 Diga ao bosque do sul: ‘Assim diz o S enhor Soberano: Ouça a palavra do S enhor ! Eu o incendiarei, e todas as árvores, tanto as verdes como as secas, serão consumidas. As chamas ardentes não serão apagadas e queimarão tudo, desde o sul até o norte.
48 ಕರ್ತನಾದ ನಾನೇ ಅದನ್ನು ಹಚ್ಚಿದೆನೆಂದು ಶರೀರ ದಲ್ಲಿರುವವರೆಲ್ಲರೂ ತಿಳಿದುಕೊಳ್ಳುವರು! ಅದು ಆರಿ ಹೋಗುವ ದಿಲ್ಲ.
48 Todos verão que eu, o S enhor , acendi esse fogo, e ele não será apagado’”.
49 ಆಗ ನಾನು ಹೇಳಿದ್ದೇನಂದರೆ --ಹಾ, ದೇವರಾದ ಕರ್ತನೇ, ಅವನು ಸಾಮ್ಯಗಳನ್ನು ಹೇಳುವದಿಲ್ಲವೇ ಎಂದು ನನ್ನ ವಿಷಯವಾಗಿ ಹೇಳುತ್ತಾರೆ.
49 Então eu disse: “Ó S enhor Soberano, eles dizem a meu respeito: ‘Ele só fala por meio de parábolas!’”.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Ezequiel 20, comparar traduções ou montar um estudo — tudo direto pelo WhatsApp.