Ezequiel 22
Kannada Bible (GL_KANNADA) vs VC
VC Versão Católica
1 ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
1 A palavra do Senhor foi-me dirigida nestes termos:
2 ಈಗ ಮನುಷ್ಯ ಪುತ್ರನೇ, ನೀನು ನ್ಯಾಯತೀರಿಸುವೆಯಾ? ರಕ್ತಾಪರಾಧ ವುಳ್ಳ ಪಟ್ಟಣಕ್ಕೆ ನ್ಯಾಯತೀರಿಸುವೆಯಾ ಹೌದು ಅದರ ಅಸಹ್ಯವಾದವುಗಳನ್ನೆಲ್ಲಾ ಅದಕ್ಕೆ ತಿಳಿಸುವಿ.
2 E tu, filho do homem, não julgarás, não julgarás esta cidade sanguinária? Faze-lhe conhecer todas as suas abominações.
3 ನೀನು ಹೇಳಬೇಕಾದದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪಟ್ಟಣವು ಅದರ ಮಧ್ಯದಲ್ಲಿ ಅದರ ಕಾಲ ಬರುವ ಹಾಗೆ ರಕ್ತವನ್ನು ಚೆಲ್ಲುತ್ತದೆ. ತನ್ನನ್ನು ಅಶುದ್ಧ ಮಾಡುವ ಹಾಗೆ ತನ್ನಲ್ಲಿ ವಿಗ್ರಹಗಳನ್ನು ಮಾಡಿಕೊಂಡಿದೆ.
3 Dize-lhe: eis o que diz o Senhor Javé: ah! cidade que espalhas o sangue em tuas ruas para que chegue a tua hora, que eriges ídolos para te sujares,
4 ನೀನು ಚೆಲ್ಲಿದ ನಿನ್ನ ರಕ್ತದಿಂದ ನಿನಗೆ ಅಪರಾಧ ಬಂದಿತು; ನೀನು ಮಾಡಿದ ನಿನ್ನ ವಿಗ್ರಹಗಳಿಂದ ನೀನು ಅಶುದ್ಧವಾದೆ; ನಿನ್ನ ದಿನಗಳನ್ನು ಸವಿಾಪಿಸಿರುವೆ; ನಿನ್ನ ವರುಷಗಳನ್ನು ಮುಟ್ಟಿರುವೆ. ಆದದರಿಂದ ನಿನ್ನನ್ನು ಅನ್ಯಜನಾಂಗಗಳಿಗೆ ನಾಚಿಕೆ ಯಾಗಿಯೂ ಎಲ್ಲಾ ದೇಶಗಳಿಗೆ ನಿಂದೆಯಾಗಿಯೂ ಮಾಡಿದ್ದೇನೆ.
4 pelo sangue que tens derramado tu te tornaste culpada e te poluíste pelos teus ídolos que talhaste; precipitaste a tua hora, adiantaste o termo de teus anos. Por isso vou abandonar-te aos ultrajes das nações, e ao escárnio de todos os países.
5 ಅಶುದ್ಧ ಹೆಸರುಳ್ಳವಳೇ, ಬಹಳ ತೊಂದರೆಗೊಳಗಾದವಳೇ, ನಿನಗೆ ಹತ್ತಿರದವರೂ ದೂರದವರೂ ನಿಂದಿಸುವರು.
5 Próximos ou distantes, eles zombarão de ti, cidade cujo nome é odioso, cidade cheia de desordens.
6 ಇಗೋ ಇಸ್ರಾ ಯೇಲಿನ ಪ್ರಭುಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ಶಕ್ತ್ಯಾನುಸಾರವಾಗಿ ರಕ್ತವನ್ನು ನಿನ್ನ ಮೇಲೆ ಚೆಲ್ಲುತ್ತಲೇ ಇದ್ದಾನೆ.
6 Vê: os príncipes de Israel estão em ti ocupados, cada um por si, a derramar sangue.
7 ನಿನ್ನಲ್ಲಿ ತಂದೆಯನ್ನೂ ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ; ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ; ನಿನ್ನಲ್ಲಿ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಪೀಡಿಸಿದ್ದಾರೆ.
7 Em ti, desprezam-se pai e mãe, violenta-se o hóspede estrangeiro, maltratam-se o órfão e a viúva.
8 ನೀನು ನನ್ನ ಪರಿಶುದ್ಧ ಸಂಗತಿಗಳನು ತಿರಸ್ಕರಿಸಿ ನನ್ನ ಸಬ್ಬತ್ತುಗಳನ್ನು ಅಪವಿತ್ರಪಡಿಸಿದ್ದೀ.
8 Tens aviltado meus santuários e profanado os meus sábados.
9 ನಿನ್ನಲ್ಲಿ ರಕ್ತಚೆಲ್ಲುವ ಹಾಗೆ ಚಾಡಿ ಹೇಳುವ ಜನ ಇದ್ದಾರೆ; ಬೆಟ್ಟಗಳ ಮೇಲೆ ತಿನ್ನುವವರಿದ್ದಾರೆ; ದುರಾ ಚಾರಿಗಳು ನಿನ್ನ ಮಧ್ಯದಲ್ಲಿದ್ದಾರೆ.
9 Há em ti delatores que fazem derramar sangue; gente de tua casa que vai comer na montanha. Cometem-se infâmias no meio de ti:
10 ನಿನ್ನಲ್ಲಿ ತಂದೆಯ ಬೆತ್ತಲೆತನವನ್ನು ಹೊರಗೆಡವಿದ್ದಾರೆ; ನಿನ್ನಲ್ಲಿ ಮುಟ್ಟಾಗಿ ಪ್ರತ್ಯೇಕವಾಗಿರುವವರನ್ನು ಕೂಡಿದ್ದಾರೆ;
10 descobre-se a nudez de seu pai, faz-se violência à mulher durante o período da menstruação;
11 ಒಬ್ಬನು ತನ್ನ ನೆರೆಯವನ ಹೆಂಡತಿಯ ಸಂಗಡ ದುರಾಚಾರವನ್ನು ಮಾಡಿದ್ದಾನೆ; ಮತ್ತೊಬ್ಬನು ಅಕೃತ್ಯದಿಂದ ಸೊಸೆಯನ್ನು ಕೆಡಿಸಿದ್ದಾನೆ; ಇನ್ನೊಬ್ಬನು ತನ್ನ ತಂದೆಯ ಮಗಳಾದ ತನ್ನ ಸಹೋದರಿಯನ್ನೇ ಭಂಗಪಡಿಸಿದ್ದಾನೆ.
11 um comete horrores com a mulher do próximo, outro desonra incestuosamente sua nora, outro viola sua irmã, filha de seu pai.
12 ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚತಿಂದಿದ್ದಾರೆ; ಬಡ್ಡಿಯನ್ನೂ ಲಾಭವನ್ನೂ ತೆಗೆದುಕೊಂಡಿದ್ದಾರೆ; ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭಮಾಡಿಕೊಂಡಿದ್ದಾರೆ; ನನ್ನನ್ನು ಮರೆತುಬಿಟ್ಟಿ ದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.
12 Em ti aceitam-se presentes para derramar sangue, tu recebes a usura e os juros, fazes violência ao próximo para despojá-lo; e a mim tu me esqueces - oráculo do Senhor Javé.
13 ಆದದರಿಂದ ಇಗೋ, ನೀನು ಮಾಡಿದ ಈ ದುರ್ಲಾಭದಿಂದಲೂ ನಿನ್ನಲ್ಲಿರುವ ನಿನ್ನ ರಕ್ತಾಪ ರಾಧದಿಂದಲೂ ನಾನು ನನ್ನ ಕೈ ಬಡಿದುಕೊಂಡಿದ್ದೇನೆ.
13 Muito em breve, porém, vou bater palmas devido às pilhagens que tens feito e ao sangue em ti derramado.
14 ನಾನು ನಿನ್ನೊಳಗೆ ಕೆಲಸ ನಡೆಸುವ ದಿವಸಗಳಲ್ಲಿ ನಿನ್ನ ಹೃದಯವು ನಿಲ್ಲುವದೋ? ನಿನ್ನ ಕೈಗಳು ಬಲವಾಗಿರುವವೋ? ಕರ್ತನಾದ ನಾನೇ ಹೇಳಿದ್ದೇನೆ, ನಾನೇ ಅದನ್ನು ಮಾಡುತ್ತೇನೆ.
14 Poderá resistir teu coração, tuas mãos poderão agüentar, ao chegarem os dias em que eu me levantar contra ti? Sou eu, o Senhor, que o digo, e que o executarei.
15 ನಿನ್ನನ್ನು ಅನ್ಯ ಜನಾಂಗಗಳಲ್ಲಿ ಚದರಿಸಿ, ದೇಶಗಳಲ್ಲಿ ಹರಡಿಸುವೆನು; ನಿನ್ನ ಅಶುದ್ಧತ್ವವನ್ನು ನಿನ್ನಿಂದ ತೆಗೆದು ನಾಶಮಾಡುವೆನು.
15 Eu te disseminarei entre as nações, te dispersarei através dos povos. Limparei totalmente a tua mancha,
16 ಆಗ ನೀನು ಅನ್ಯಜನಾಂಗಗಳ ಮುಂದೆ ನೀನು ನಿನ್ನ ಬಾಧ್ಯತೆಯನ್ನು ತಕ್ಕೊಳ್ಳುವಿ; ನಾನೇ ಕರ್ತನೆಂದು ನೀನು ತಿಳಿದುಕೊಳ್ಳುವಿ.
16 serás aviltada, por tua culpa, aos olhos das nações, e reconhecerás assim que sou eu o Senhor.
17 ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇ ನಂದರೆ --
17 A palavra do Senhor foi-me dirigida nestes termos:
18 ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರು ನನಗೆ (ಮಂಡೂರ) ಕಿಟ್ಟದ ಹಾಗಾದರು ಅವರೆಲ್ಲರೂ ಬಲೆಯ ಮಧ್ಯದಲ್ಲಿರುವ ಹಿತ್ತಾಳೆ, ತವರ, ಕಬ್ಬಿಣದ, ಹಾಗೆ ಇದ್ದಾರೆ. ಸೀಸದ ಮತ್ತು ಬೆಳ್ಳಿಯ ಕಿಟ್ಟಗಳ ಹಾಗೆಯೂ ಇದ್ದಾರೆ.
18 Filho do homem, a casa de Israel tornou-se para mim escória. São todos {como} cobre, estanho e ferro e chumbo no cadinho: são escória da prata.
19 ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವೆಲ್ಲರೂ ಕಿಟ್ಟವಾಗಿರುವದರಿಂದ ಇಗೋ, ನಾನು ನಿಮ್ಮನ್ನು ಯೆರೂಸಲೇಮಿನ ಮಧ್ಯಕ್ಕೆ ಕೂಡಿಸುತ್ತೇನೆ.
19 Por isso, eis o que diz o senhor Javé: já que todos vós sois escórias, vou reunir-vos em Jerusalém.
20 ಅವರು ಬೆಳ್ಳಿ, ಹಿತ್ತಾಳೆ, ಕಬ್ಬಿಣ, ಸೀಸ ಮತ್ತು ತಗಡುಗಳನ್ನು ಹೇಗೆ ಒಲೆಯೊಳಗೆ ಕೂಡಿಸಿ ಅದಕ್ಕೆ ಬೆಂಕಿಯನ್ನೂದಿ ಕರಗಿಸುವರೋ ಹಾಗೆಯೇ ನಾನು ನಿಮ್ಮನ್ನು ನನ್ನ ಕೋಪದಲ್ಲಿಯೂ ನನ್ನ ರೋಷದಲ್ಲಿಯೂ ಕರಗಿಸಿಬಿಡುವೆನು.
20 Do mesmo modo como se ajunta no meio do forno a prata, o cobre, o ferro, o chumbo e o estanho, e como se atiça o fogo sobre eles para fundi-los, do mesmo modo, no furor da minha cólera, eu vos amontoarei todos juntos lá para vos fazer fundir.
21 ಹೌದು, ನನ್ನ ರೋಷದ ಬೆಂಕಿಯಿಂದ ನಾನು ನಿಮ್ಮ ಮೇಲೆ ಊದುವೆನು. ನೀವು ಅದರೊಳಗೆ ಕರಗಿ ಹೋಗುವಿರಿ.
21 Eu vos reunirei e atiçarei sobre vós o fogo do meu furor, para vos fazer fundir em Jerusalém.
22 ಬೆಳ್ಳಿಯು ಕುಲುಮೆಯಲ್ಲಿ ಕರಗುವ ಹಾಗೆ ನೀವು ನನ್ನ ರೋಷಾಗ್ನಿಯಲ್ಲಿ ಕರಗು ವಿರಿ; ನಿನ್ನ ಮೇಲೆ ರೋಷಾಗ್ನಿಯನ್ನು ಸುರಿಸಿದಾತನು ಕರ್ತನಾದ ನಾನೇ ಎಂದು ನಿಮಗೆ ತಿಳಿಯುತ್ತದೆ.
22 Semelhantes à prata, que se funde no cadinho, sereis fundidos no meio da cidade e assim reconhecereis que sou eu, o Senhor, que desencadeei sobre vós o meu furor.
23 ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ --
23 A palavra do Senhor foi-me dirigida nestes termos:
24 ಮನುಷ್ಯಪುತ್ರನೇ, ಅದಕ್ಕೆ ಹೀಗೆ ಹೇಳು ಅಶುದ್ಧರಾಗದಂಥ ರೌದ್ರದ ದಿವಸ ಗಳಲ್ಲಿ ಮಳೆ ಸುರಿಯುವಂತಹ ದೇಶವು ನೀನೇ,
24 filho do homem, dize a Jerusalém: és uma terra que não recebeu nem chuva nem aguaceiro, na estação da cólera.
25 ಕೊಳ್ಳೆಯನ್ನು ಸುಲಿದುಕೊಳ್ಳುವ ಘರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ. ಸಂಪತ್ತನ್ನೂ ಅಮೂಲ್ಯವಾದ ವಸ್ತುವನ್ನೂ ದೋಚಿ ಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ.
25 Há em teu seio uma conspiração de príncipes. Como o leão que ruge, que arrebata a presa, eles devoram as pessoas, tomam-lhes os bens e as riquezas, e multiplicam as viúvas.
26 ಅದರ ಯಾಜಕರು ನನ್ನ ವಿಧಿಗಳನ್ನು ಭಂಗಪಡಿಸಿದ್ದಾರೆ; ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಪಡಿಸಿದ್ದಾರೆ; ಪರಿಶುದ್ಧ ವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಭೇದವೆಣಿಸಲಿಲ್ಲ; ಶುದ್ಧಾಶುದ್ಧ ವಿವೇಚನೆಯನ್ನು ಬೋಧಿಸಲಿಲ್ಲ, ನನ್ನ ಸಬ್ಬತ್ತುಗಳಿಗೆ ತಮ್ಮ ಕಣ್ಣುಗಳನ್ನು ಮರೆಮಾಡಿದ್ದಾರೆ. ಆದದರಿಂದ ನಾನು ಅವರಲ್ಲಿ ಅಪವಿತ್ರನಾದೆನು.
26 Seus sacerdotes violam a minha lei, profanam o meu santuário, tratam indiferentemente o sagrado e o profano e não ensinam a distinguir o que é puro do que é impuro; fecham os olhos para não ver os meus sábados; no meio deles a minha santidade é profanada.
27 ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ ಪ್ರಾಣ ಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿ ದ್ದಾರೆ.
27 Seus chefes lá estão como lobos que despedaçam a presa, derramando sangue, perdendo vidas para tirar proveitos.
28 ಅವರ ಪ್ರವಾದಿಗಳು ಅವರಿಗೆ ಸುಣ್ಣ ಹಚ್ಚುತ್ತಾರೆ, ಮೋಸವನ್ನು ದರ್ಶಿಸಿ ಸುಳ್ಳು ಶಕುನ ಹೇಳುತ್ತಾರೆ; ಕರ್ತನು ಮಾತನಾಡದಿರುವದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು ತ್ತಾರೆ.
28 Seus profetas cobrem tudo com uma argamassa: têm visões de mentira e oráculos enganadores. Dizem: eis o que diz o Senhor, quando o Senhor nada disse.
29 ದೇಶದ ಜನರು ಬಲಾತ್ಕಾರ ಮಾಡಿದ್ದಾರೆ, ಕೊಳ್ಳೆಯನ್ನು ಹೊಡೆದಿದ್ದಾರೆ. ಬಡವನನ್ನೂ ದರಿದ್ರ ರನ್ನೂ ಪೀಡಿಸಿದ್ದಾರೆ; ಹೌದು, ಅವರು ನ್ಯಾಯವಿಲ್ಲದೆ ಒಬ್ಬ ಅಪರಿಚಿತನನ್ನು ಬಲಾತ್ಕಾರಪಡಿಸಿದ್ದಾರೆ.
29 A população da terra se entrega à violência e à rapina, à opressão do pobre e do indigente, e às vexações injustificáveis contra o estrangeiro.
30 ಬೇಲಿ ಕಟ್ಟುವ ಮನುಷ್ಯನನ್ನು ದೇಶಕ್ಕೋಸ್ಕರ ನಾನು ಅದನು ನಾಶಮಾಡದ ಹಾಗೆ ಪೌಳಿಯ ಒಡಕಿನಲ್ಲಿ ನಿಲ್ಲತಕ್ಕ ವನನ್ನು ಹುಡುಕಿದೆನು, ಆದರೆ ಸಿಕ್ಕಲಿಲ್ಲ.
30 Tenho procurado entre eles alguém que construísse o muro e se detivesse sobre a brecha diante de mim, em favor da terra, a fim de prevenir a sua destruição, mas não encontrei ninguém.
31 ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
31 Por isso vou desencadear sobre eles o meu furor e exterminá-los no fogo da minha exasperação; farei cair sobre eles o peso de sua conduta - oráculo do Senhor Javé.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Ezequiel 22, comparar traduções ou montar um estudo — tudo direto pelo WhatsApp.