Ezequiel 24

Kannada Bible (GL_KANNADA) vs NAA

Sair da comparação
NAA Nova Almeida Atualizada 2017
1 ಒಂಭತ್ತನೇ ವರುಷದ ಹತ್ತನೇ ತಿಂಗಳಿನ ಹತ್ತನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ
1 A palavra do Senhor veio a mim, no nono ano, no décimo mês, aos dez dias do mês, dizendo:
2 ಮನುಷ್ಯಪುತ್ರನೇ, ಈ ದಿನದ, ಇದೇ ದಿನದ ಹೆಸರನ್ನು ಬರೆದುಕೋ; ಅದೇ ದಿನದಲ್ಲಿ ಬಾಬೆಲಿನ ಅರಸನು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಾನೆ.
2 — Filho do homem, anote o dia de hoje, sim, o dia de hoje, porque o rei da Babilônia começa o cerco de Jerusalém neste dia.
3 ತಿರುಗಿ ಬೀಳುವ ಮನೆತನ ದವರಿಗೆ ಸಾಮ್ಯವನ್ನು ತಿಳಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಹಂಡೆಯನ್ನು ಒಲೆಯ ಮೇಲಿಡು, ಅದರಲ್ಲಿ ನೀರನ್ನು ಸುರಿ.
3 Conte uma parábola à casa rebelde e diga: Assim diz o Senhor Deus: “Ponha a panela no fogo, encha-a com água,
4 ತೊಡೆಯನ್ನೂ ಹೆಗಲನ್ನೂ ಎಲ್ಲಾ ಒಳ್ಳೇ ತುಂಡುಗಳನ್ನೂ ಒಟ್ಟಿಗೆ ಸೇರಿಸಿ ಒಳ್ಳೆ ಎಲುಬುಗಳ ಜೊತೆ ಅದನ್ನು ತುಂಬಿಸಿ;
4 acrescente pedaços de carne, todos os bons pedaços — tanto da parte traseira como da parte dianteira; coloque também os melhores ossos.
5 ಹಿಂಡಿನಲ್ಲಿ ಶ್ರೇಷ್ಠವಾದ ದ್ದನ್ನು ತೆಗೆದುಕೊಂಡು ಎಲುಬಿನ ರಾಶಿಯನ್ನೂ ಅದರ ಕೆಳಗೆ ಇಟ್ಟು ಅದನ್ನು ಚೆನ್ನಾಗಿ ಕುದಿಸು; ಆ ಎಲುಬುಗಳೂ ಅದರಲ್ಲಿ ಚೆನ್ನಾಗಿ ಬೇಯಲಿ.
5 Pegue isso dos melhores animais do rebanho. Empilhe lenha debaixo da panela, deixe ferver bem e cozinhe os ossos dentro dela.”
6 ಆದಕಾರಣ ದೇವರಾದ ಕರ್ತನು ಹೀಗೆ ಹೇಳು ತ್ತಾನೆ; ರಕ್ತಮಯವಾದ ಆ ಪಟ್ಟಣಕ್ಕೆ ಅಯ್ಯೋ! ಯಾವದರ ಕಲ್ಮಶವು ಹೊರಗೆ ಬಾರದೆ ಅದರಲ್ಲಿ ಉಳಿದಿರುವದೋ ಆ ಹಂಡೆಗೆ ಅಯ್ಯೋ, ಅದರಿಂದ ತುಂಡು ತುಂಡಾಗಿ ಹೊರಗೆ ತೆಗೆ; ಆಯ್ಕೆಯ ಚೀಟಿಯು ಅದರ ಮೇಲೆ ಬೀಳದಿರಲಿ.
6 — Portanto, assim diz o Senhor Deus: Ai da cidade sanguinária, da panela cheia de ferrugem, ferrugem que não foi tirada dela! Tire de dentro a carne, pedaço por pedaço, sem escolha.
7 ಅದರ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದೆ; ದೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ;
7 Porque a culpa de sangue está no meio dela. O sangue foi derramado sobre a rocha escalvada e não sobre a terra, para o cobrir com o pó.
8 ಮುಯ್ಯಿಗೆಮುಯ್ಯಿ ತೀರಿಸುವದಕ್ಕೆ ರೋಷ ವನ್ನೆಬ್ಬಿಸುವ ಹಾಗೆ ನಾನು ಅದರ ರಕ್ತಾಪರಾಧವನ್ನು ಮುಚ್ಚಿಬಿಡದಂತೆ ಬಂಡೆಯ ತುದಿಯ ಮೇಲೆ ಇಟ್ಟಿ ದ್ದೇನೆ;
8 Para fazer subir a indignação, para tomar vingança, eu pus o seu sangue numa rocha escalvada, para que não fosse coberto.
9 ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಆ ರಕ್ತಾಪರಾಧವುಳ್ಳ ಪಟ್ಟಣವು ಹಾಳಾ ಗಲಿ, ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.
9 — Portanto, assim diz o Senhor Deus: Ai da cidade sanguinária! Eu mesmo aumentarei a pilha de lenha.
10 ಬಹಳ ಸೌದೆ ಹಾಕಿ, ಬೆಂಕಿಯನ್ನು ಹೆಚ್ಚಿಸಿ, ಮಾಂಸ ವನ್ನು ಬೇಯಿಸು; ಮಸಾಲೆ ಚೆನ್ನಾಗಿ ಇರಲಿ, ಮತ್ತು ಎಲುಬುಗಳು ಸುಡಲಿ.
10 Amontoe muita lenha, acenda o fogo, cozinhe a carne, engrosse o caldo, deixe que os ossos fiquem torrados.
11 ಆಮೇಲೆ ಅದರ ಹಿತ್ತಾಳೆ ಬಿಸಿಯಾಗಿ ಮೈಲಿಗೆ ಕರಗಿ ಕಲ್ಮಶವು ಹೋಗುವ ಹಾಗೆ ಅದನ್ನು ಬರಿದು ಮಾಡಿ ಕೆಂಡಗಳ ಮೇಲೆ ಇಡು.
11 Ponha a panela vazia sobre as brasas, para que ela aqueça, o seu cobre se torne candente, a impureza que está dentro dela se derreta e a sua ferrugem se consuma.
12 ಅದರ ಕಲ್ಮಶವು ಆಯಾಸವನ್ನುಂಟು ಮಾಡಿತೇ ಹೊರತು ಅದಕ್ಕೆ ಹತ್ತಿದ್ದ ಆ ಬಹಳವಾದ ಕಿಲುಬು ಹೋಗಲಿಲ್ಲ, ಅದು ಬೆಂಕಿಯಲ್ಲಿರಲಿ;
12 Trabalho inútil! A sua muita ferrugem não sai, nem pelo fogo.
13 ನಿನ್ನ ಅಶುದ್ಧ ತ್ವವು ದುಷ್ಕರ್ಮವುಳ್ಳದ್ದು; ನಾನು ನಿನ್ನನ್ನು ಪರಿಶುದ್ಧ ಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದ ವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರತ್ವದಿಂದ ಇನ್ನು ಶುದ್ಧವಾಗುವದಿಲ್ಲ.
13 Jerusalém, por causa de sua imunda perversidade, e porque eu quis purificá-la, mas você não ficou limpa, você não ficará pura de novo até que eu tenha satisfeito o meu furor contra você.
14 ಕರ್ತನಾದ ನಾನೇ ಅದನ್ನು ಹೇಳಿದ್ದೇನೆ, ಅದು ನಡೆಯುವದು; ನಾನು ಅದನ್ನು ಮಾಡದೆ ಬಿಡುವದಿಲ್ಲ; ಕಟಾಕ್ಷ ತೋರಿಸು ವದಿಲ್ಲ; ಪಶ್ಚಾತ್ತಾಪಪಡುವದಿಲ್ಲ. ನಿನ್ನ ಮಾರ್ಗಗಳ ಪ್ರಕಾರವೂ ನಿನ್ನ ಕ್ರಿಯೆಗಳ ಪ್ರಕಾರವೂ ನಿನಗೆ ನ್ಯಾಯ ತೀರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
14 Eu, o Senhor , falei; será assim; eu o farei. Não voltarei atrás e não pouparei, nem mudarei de ideia. Você será julgada segundo os seus caminhos e segundo os seus atos, diz o Senhor Deus.
15 ಇದಲ್ಲದೆ, ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
15 A palavra do Senhor veio a mim, dizendo:
16 ಮನುಷ್ಯಪುತ್ರನೇ, ಇಗೋ, ಒಂದೇ ಏಟಿನಿಂದ ನೇತ್ರಾನಂದವಾಗಿರುವದನ್ನು ನಿನ್ನಿಂದ ತೆಗೆಯುತ್ತೇನೆ; ಆದರೆ ನೀನು ದುಃಖಪಡಬೇಡ, ಅಳಬೇಡ, ನಿನ್ನ ಕಣ್ಣೀರು ಹರಿದು ಹೋಗದಿರಲಿ.
16 — Filho do homem, eis que, com um só golpe, tirarei aquela que é a delícia dos seus olhos. Você não deve lamentar, nem chorar, nem derramar lágrimas.
17 ವ್ಯಸನದಿಂದ ಸತ್ತವರಿಗಾಗಿ ಅರಚಬೇಡ, ಗೋಳಾಡ ಬೇಡ ನೀನು ರುಮಾಲನ್ನು ಕಟ್ಟಿಕೊಂಡು ಕಾಲುಗಳಿಗೆ ಜೋಡುಗಳನ್ನು ಮೆಟ್ಟಿಕೋ; ತುಟಿಗಳನ್ನು ಮುಚ್ಚಿಕೊಳ್ಳ ಬೇಡ; ಮನುಷ್ಯರ ರೊಟ್ಟಿಯನ್ನು ತಿನ್ನಬೇಡ.
17 Sofra em silêncio; não faça lamentação pelos mortos. Prenda o seu turbante; ponha as sandálias nos pés; não cubra o bigode, e não coma o pão que lhe mandarem.
18 ಹಾಗೆಯೇ ನಾನು ಬೆಳಗಿನ ಜಾವದಲ್ಲಿ ಜನ ರೊಂದಿಗೆ ಮಾತನಾಡಿದೆನು; ಸಂಜೆ ನನ್ನ ಹೆಂಡತಿ ಸತ್ತಳು; ಆಗ ಮುಂಜಾನೆ ಅಪ್ಪಣೆಯಾದ ಪ್ರಕಾರವೇ ನಾನು ಮಾಡಿದೆನು.
18 Falei ao povo pela manhã, e à tarde a minha mulher morreu. Na manhã seguinte, fiz como me havia sido ordenado.
19 ಆಗ ಜನರು--ನೀನು ಮಾಡುವ ಆ ಸಂಗತಿಗಳಿಂದ ನಮಗೆ ಪ್ರಯೋಜನವೇ ನೆಂದು ತಿಳಿಸುವದಿಲ್ಲವೇ ಎಂದರು.
19 Então o povo me perguntou: — Você não vai nos explicar o que significa para nós isso que você está fazendo?
20 ಆಮೇಲೆ ನಾನು ಅವರಿಗೆ ಉತ್ತರಿಸಿದೆನು; ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
20 Eu respondi: — A palavra do
21 ಇಸ್ರಾಯೇಲ್ಯರ ಮನೆ ತನದವರೊಂದಿಗೆ ಮಾತನಾಡಿ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು--ಇಗೋ, ನಾನು ನನ್ನ ಪರಿಶುದ್ಧ ಸ್ಥಳವನ್ನೂ ನಿಮ್ಮ ಬಲದ ಶ್ರೇಷ್ಠತ್ವವನ್ನೂ ನಿಮ್ಮ ನೇತ್ರಾನಂದಕರವಾದದ್ದನ್ನೂ ನಿಮ್ಮ ಮನಸ್ಸು ಅಭಿಲಾಷಿಸುವದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಕುಮಾರರೂ ಕುಮಾರ್ತೆಯರೂ ಕತ್ತಿಯಿಂದ ಬೀಳುವರು.
21 Diga à casa de Israel: Assim diz o Senhor Deus: “Eis que profanarei o meu santuário, do qual vocês tanto se orgulham, que é a delícia dos seus olhos e o desejo do seu coração. Os filhos e as filhas que vocês deixaram para trás cairão à espada.
22 ನಾನು ಮಾಡಿದ ಹಾಗೆ ನೀವು ಮಾಡುವಿರಿ; ನಿಮ್ಮ ತುಟಿಗಳನ್ನು ಮುಚ್ಚಿಕೊಳ್ಳ ಬಾರದು ಅವರ ರೊಟ್ಟಿಯನ್ನೂ ತಿನ್ನಬಾರದು.
22 Vocês farão o que eu fiz: não cobrirão o bigode, nem comerão o pão que lhes mandarem.
23 ನಿಮ್ಮ ರುಮಾಲುಗಳು ತಲೆಯ ಮೇಲೆಯೂ ನಿಮ್ಮ ಜೋಡು ಗಳು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವವು; ನೀವು ಗೋಳಾಡದೆ ಅಳದೆ ನಿಮ್ಮ ಅಕ್ರಮಗಳಿಂದ ಕುಂದಿಹೋಗಿ ಒಬ್ಬರ ಸಂಗಡಲೊಬ್ಬರು ನರುಳುವಿರಿ.
23 Manterão o turbante na cabeça e as sandálias nos pés. Não irão lamentar nem chorar, mas serão consumidos nas suas maldades e gemerão uns pelos outros.
24 ಹೀಗೆ ಯೆಹೆಜ್ಕೇಲನು ನಿಮಗೆ ಮುಂಗುರುತಾ ರುವನು; ಅವನು ಮಾಡಿದ ಎಲ್ಲವುಗಳ ಹಾಗೆ ನೀವೂ ಮಾಡುವಿರಿ; ಆ ರೀತಿ ಆದಾಗ ನಾನೇ ಕರ್ತನೆಂದು ತಿಳಿಯುವಿರಿ.
24 Assim, Ezequiel será um sinal para vocês: tudo o que ele fez vocês também farão. Quando isso acontecer, vocês saberão que eu sou o Senhor Deus.”
25 ಇದಲ್ಲದೆ ಮನುಷ್ಯಪುತ್ರನೇ, ಅವರ ಮಹತ್ತಾದ ಸಂತೋಷವನ್ನೂ ನೇತ್ರಾನಂದಕರವಾದದ್ದನ್ನೂ ಅವರು ಆಶಿಸುವದನ್ನೂ ಕುಮಾರ ಕುಮಾರ್ತೆಯರನ್ನೂ ಅವರ ಬಲದಿಂದ ನಾನು ತೆಗೆದುಹಾಕುವ
25 — Filho do homem, no dia em que eu lhes tirar o objeto do seu orgulho, a sua alegria e a sua glória, a delícia dos seus olhos e o desejo de seu coração — bem como os seus filhos e as suas filhas —,
26 ಆ ದಿನದಲ್ಲಿ ತಪ್ಪಿಸಿಕೊಂಡವನು ನಿನ್ನ ಕಿವಿಗಳಿಗೆ ಸುದ್ದಿಯನ್ನು ತರುವ ಹಾಗೆ ನಿನ್ನ ಬಳಿಗೆ ಬರುವನಲ್ಲವೆ?
26 nesse dia um sobrevivente virá falar com você, para lhe dar a notícia.
27 ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿತೆರೆದಿರುವದು ನೀನು ಇನ್ನು ಮೂಕನಾಗಿರದೆ ಮಾತನಾಡುವಿ ಮತ್ತು ಅವರಿಗೆ ಮುಂಗುರುತಾಗಿರುವಿ, ಆಗ ನಾನೇ ಕರ್ತನೆಂದು ತಿಳಿಯುವರು.
27 Nesse dia, você poderá abrir a sua boca para falar com aquele sobrevivente; você falará e não mais ficará mudo. Assim, você será um sinal para eles, e eles saberão que eu sou o Senhor .

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Ezequiel 24, comparar traduções ou montar um estudo — tudo direto pelo WhatsApp.