Ezequiel 27

Kannada Bible (GL_KANNADA) vs ARA

Sair da comparação
ARA Almeida Revista e Atualizada 1993
1 ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
1 Veio a mim a palavra do Senhor , dizendo:
2 ಮನುಷ್ಯಪುತ್ರನೇ, ಈಗ ತೂರಿನ ಬಗ್ಗೆ ನೀನು ಗೋಳಾಟವನ್ನೆತ್ತು;
2 Tu, pois, ó filho do homem, levanta lamentação sobre Tiro;
3 ತೂರಿಗೆ ಹೇಳು--ಸಮುದ್ರದ ಪ್ರವೇಶದಲ್ಲಿ ವಾಸಿಸುವವಳೇ, ಬಹು ದ್ವೀಪಗಳಿಗೆ ಜನರ ವ್ಯಾಪಾರವನ್ನು ನಡಿಸುವ ವಳೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಓ ತೂರೇ, ನಾನು ಪೂರ್ಣ ಸೌಂದರ್ಯವಂತಳೆಂದು ನೀನು ಹೇಳಿದ್ದೀ.
3 dize a Tiro, que habita nas entradas do mar e negocia com os povos em muitas terras do mar: Assim diz o Senhor Deus: Ó Tiro, tu dizes: Eu sou perfeita em formosura.
4 ನಿನ್ನ ಮೇರೆಗಳು ಸಮುದ್ರದ ಮಧ್ಯದಲ್ಲಿವೆ, ನಿನ್ನನ್ನು ಕಟ್ಟಿದವರು ನಿನ್ನ ಸೌಂದರ್ಯ ವನ್ನು ಸಂಪೂರ್ಣಪಡಿಸಿದ್ದಾರೆ.
4 No coração dos mares, estão os teus limites; os que te edificaram aperfeiçoaram a tua formosura.
5 ಸೆನೀರಿನ ತುರಾಯಿ ಮರಗಳಿಂದ ನಿನ್ನ ಹಡಗಿನ ಹಲಗೆಗಳನ್ನೆಲ್ಲಾ ಕಟ್ಟಿ ದ್ದಾರೆ, ನಿನಗೆ ಪಠಸ್ತಂಭಗಳನ್ನು ಮಾಡುವದಕ್ಕೆ ಲೆಬ ನೋನಿನಿಂದ ದೇವದಾರುಗಳನ್ನು ತಂದಿದ್ದಾರೆ.
5 Fabricaram todos os teus conveses de ciprestes de Senir; trouxeram cedros do Líbano, para te fazerem mastros.
6 ನಿನ್ನ ಹುಟ್ಟು ಗೋಲನ್ನು ಬಾಷಾನಿನ ಓಕ್‌ ವೃಕ್ಷದಿಂದ ಮಾಡಿದ್ದಾರೆ, ಕಿತ್ತೀಯರ ದ್ವೀಪಗಳಿಂದ ತಂದ ದಂತದ ಹಲಗೆಗಳಿಂದ ಅಶ್ಶೂರ್ಯರ ಗುಂಪಿನವರು ಕೆತ್ತಿದ್ದಾರೆ.
6 Fizeram os teus remos de carvalhos de Basã; os teus bancos, fizeram-nos de marfim engastado em pinho das ilhas dos quiteus.
7 ನಿನ್ನ ಹಾಯಿಯು ನಿನಗೆ ಧ್ವಜವು ಆಗಲೆಂದು ಅದನ್ನು ಐಗುಪ್ತದ ಕಸೂತಿಯ ನಾರುಬಟ್ಟೆಯಿಂದ ಮಾಡಿ ದ್ದಾರೆ. ಎಲೀಷದ ದ್ವೀಪಗಳಿಂದ ತಂದ ನೀಲಿಯೂ ನೇರಳೆ ಬಣ್ಣವೂ ನಿನಗೆ ಮುಚ್ಚಳವಾಯಿತು.
7 De linho fino bordado do Egito era a tua vela, para servir de estandarte; azul e púrpura das ilhas de Elisá eram o teu toldo.
8 ಚೀದೋ ನಿನ ಅರ್ವಾದಿನ ನಿವಾಸಿಗಳು ನಿನಗೆ ಹುಟ್ಟು ಹಾಕುವ ವರಾಗಿದ್ದಾರೆ; ತೂರೇ, ನಿನ್ನಲ್ಲಿನ ವಿವೇಕಿಗಳೇ ನಿನ್ನ ನಾವಿಕರು.
8 Os moradores de Sidom e de Arvade foram os teus remeiros; os teus sábios, ó Tiro, que se achavam em ti, esses foram os teus pilotos.
9 ಗೆಬಲಿನ ಹಿರಿಯರೂ ಅದರ ಜ್ಞಾನಿಗಳೂ ನಿನ್ನ ಬಿರುಕುಗಳನ್ನು ಮುಚ್ಚುವವರಾಗಿ ನಿನ್ನಲ್ಲಿದ್ದಾರೆ. ಸಮುದ್ರದ ಸಕಲ ನಾವೆಗಳೂ ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು ನಿನಗೆ ಸರಕುಗಳನ್ನು ತಂದೊಪ್ಪಿಸು ತ್ತಿದ್ದವು.
9 Os anciãos de Gebal e os seus sábios foram em ti os teus calafates; todos os navios do mar e os marinheiros se acharam em ti, para trocar as tuas mercadorias.
10 ಪಾರಸೀಯರೂ ಲೂದ್ಯರೂ ಪೂಟ್ಯರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು; ಗುರಾಣಿ ಯನ್ನೂ ಶಿರಸ್ತ್ರಾಣವನ್ನೂ ನಿನ್ನಲ್ಲಿ ತೂಗಿಸಿದರು. ಇವರು ನಿನಗೆ ಮಹತ್ತನ್ನು ಕೊಟ್ಟರು.
10 Os persas, os lídios e os de Pute se acharam em teu exército e eram teus homens de guerra; escudos e capacetes penduraram em ti; manifestaram a tua glória.
11 ಅರ್ವಾದಿನವರು ನಿನ್ನ ದಂಡಿನ ಸಂಗಡ ನಿನ್ನ ಗೋಡೆಗಳ ಸುತ್ತಲೂ ಮೇಲೆ ಇದ್ದರು; ಗಮ್ಮಾದ್ಯರು ನಿನ್ನ ಕೊತ್ತಲುಗಳಲ್ಲಿ ಕಾವಲಾಗಿದ್ದರು. ತಮ್ಮ ಖೇಡ್ಯಗಳನ್ನು ಸುತ್ತ ಮುತ್ತಲೂ ನಿನ್ನ ಗೋಡೆಗಳ ಮೇಲೆ ನೇತುಹಾಕಿ ಇವರು ನಿನ್ನ ಸೌಂದರ್ಯವನ್ನು ಪೂರ್ತಿಗೊಳಿಸಿದರು.
11 Os filhos de Arvade e o teu exército estavam sobre os teus muros em redor, e os gamaditas, nas torres; penduravam os seus escudos nos teus muros em redor; aperfeiçoavam a tua formosura.
12 ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ, ಸೀಸಗಳಿಂದ ನಿನ್ನ ಸಂತೆಗಳಲ್ಲಿ ವ್ಯಾಪಾರ ಮಾಡಿದರು; ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು.
12 Társis negociava contigo, por causa da abundância de toda sorte de riquezas; trocavam por tuas mercadorias prata, ferro, estanho e chumbo.
13 ಯಾವಾನ್‌, ತೂಬಲ್‌, ಮೇಷೆಕ್‌ ಇವರು ನಿನ್ನ ವರ್ತಕರಾಗಿದ್ದರು; ಮನುಷ್ಯರ ಪ್ರಾಣಗಳಿಂದಲೂ (ವ್ಯಕ್ತಿ) ಹಿತ್ತಾಳೆಯ ಪಾತ್ರೆ ಗಳಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡಿಸಿದರು.
13 Javã, Tubal e Meseque eram os teus mercadores; em troca das tuas mercadorias, davam escravos e objetos de bronze.
14 ತೋಗರ್ಮದ ಮನೆತನದವರು ಕುದುರೆಗಳಿಂ ದಲೂ ಕುದುರೆ ಸವಾರಿಗಳಿಂದಲೂ ಹೇಸರ ಕತ್ತೆ ಗಳಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡಿಸಿದರು.
14 Os da casa de Togarma, em troca das tuas mercadorias, davam cavalos, ginetes e mulos.
15 ದೇದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತದಕೊಂಬುಗಳನ್ನೂ ಕರೀ ಮರಗಳನ್ನೂ ನಿನಗೆ ಕಾಣಿಕೆಯಾಗಿ ತರುತ್ತಿದ್ದರು.
15 Os filhos de Dedã eram os teus mercadores; muitas terras do mar eram o mercado das tuas manufaturas; em troca, traziam dentes de marfim e madeira de ébano.
16 ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದದರಿಂದ ಅರಾಮಿನವರು ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಳು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.
16 A Síria negociava contigo por causa da multidão das tuas manufaturas; por tuas mercadorias, eles davam esmeralda, púrpura, obras bordadas, linho fino, coral e pedras preciosas.
17 ಯೆಹೂದವೂ ಇಸ್ರಾಯೇಲ್‌ ದೇಶವೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋಧಿಯಿಂದಲೂ ಕಂಡಸಕ್ಕರೆ, ಜೇನು, ಎಣ್ಣೆ ಮತ್ತು ಸುಗಂಧ ತೈಲ ದಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡೆಸಿದರು.
17 Judá e a terra de Israel eram os teus mercadores; pelas tuas mercadorias, trocavam o trigo de Minite, confeitos, mel, azeite e bálsamo.
18 ನಿನ್ನ ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿ ದ್ದದರಿಂದಲೂ ಅಪರಿಮಿತವಾದ ಬಗೆ ಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದರಿಂದಲೂ
18 Damasco negociava contigo, por causa da multidão das tuas manufaturas, por causa da abundância de toda sorte de riquezas, dando em troca vinho de Helbom e lã de Saar.
19 ದಾನ್‌ ಮತ್ತು ಯಾವಾನ್‌ ಸಹ ಹೋಗುವಾಗ ಬರುವಾಗ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. ಮೆರಗುವ ಕಬ್ಬಿಣ ದಾಲ್ಚಿನ್ನಿ, ಬಜೆ ಇವುಗಳು ನಿನ್ನ ಸಂತೆಯಲ್ಲಿ ಇದ್ದವು.
19 Também Dã e Javã, de Uzal, pelas tuas mercadorias, davam em troca ferro trabalhado, cássia e cálamo, que assim entravam no teu comércio.
20 ದೇದಾನು ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿತ್ತು.
20 Dedã negociava contigo com baixeiros para cavalgaduras.
21 ಅರಬಿಯ ಮತ್ತು ಕೇದಾರಿನ ಎಲ್ಲಾ ಪ್ರಧಾನಿಗಳು ನಿನ್ನ ಕೈಕೆಲಸದ ವ್ಯಾಪಾರಿಗಳಾಗಿದ್ದರು; ಕುರಿಮರಿಗಳಿಂದಲೂ ಟಗರುಗಳಿಂದಲೂ ಹೋತಗ ಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದರು.
21 A Arábia e todos os príncipes de Quedar eram mercadores ao teu serviço; negociavam contigo com cordeiros, carneiros e bodes; nisto, negociavam contigo.
22 ಶೆಬ ದವರು, ರಗ್ಮದವರು ನಿನ್ನ ಕಡೆಯ ವರ್ತಕರಾಗಿ ಶ್ರೇಷ್ಟವಾದ ಎಲ್ಲಾ ಸುಗಂಧ ದ್ರವ್ಯದಿಂದಲೂ ಬೆಲೆ ಯುಳ್ಳ ಎಲ್ಲಾ ರತ್ನಗಳಿಂದಲೂ ಚಿನ್ನದಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು.
22 Os mercadores de Sabá e Raamá eram os teus mercadores; pelas tuas mercadorias, davam em troca os mais finos aromas, pedras preciosas e ouro.
23 ಹಾರಾನ್‌, ಕನ್ನೆ, ಏದೆನ್‌, ಶೆಬ, ಅಶ್ಶೂರ್‌ ಮತ್ತು ಕಿಲ್ಮದ್‌ವರು ನಿನ್ನ ವ್ಯಾಪಾರಿಗಳಾಗಿದ್ದರು.
23 Harã, Cane e Éden, mercadores de Sabá, Assíria e Quilmade negociavam contigo.
24 ಇವರು ಎಲ್ಲಾ ತರಹದ ಸಾಮಾನುಗಳಲ್ಲೂ ನಿನ್ನ ವ್ಯಾಪಾರಿಗಳಾಗಿದ್ದರು. ಅಂದರೆ ನೀಲಿಬಟ್ಟೆಗಳು, ಕಸೂತಿಯ ಕೆಲಸ ದೇವ ದಾರುವಿನಿಂದ ಮಾಡಿ ಹಗ್ಗಗಳಿಂದ ಕಟ್ಟಿದಂತ, ರೇಷ್ಮೆ ತುಂಬಿಸಿದ ಪೆಟ್ಟಿಗೆಗಳನ್ನು ತಂದು ನಿನ್ನ ಪಟ್ಟಣಗಳಲ್ಲಿ ವರ್ತಕರಾಗಿದ್ದರು.
24 Estes eram teus mercadores em toda sorte de mercadorias, em pano de púrpura e bordados, tapetes de várias cores e cordas trançadas e fortes.
25 ತಾರ್ಷೀಷಿನ ಹಡಗುಗಳು ನಿನ್ನ ಮಾರುಕಟ್ಟೆಯಲ್ಲಿ ಸರಕುಗಳನ್ನು ತರುತ್ತಿದ್ದವು; ಹೀಗೆ ನೀನು ತುಂಬಿದ್ದೀ ಮತ್ತು ಸಮುದ್ರಗಳ ಮಧ್ಯದಲ್ಲಿ ಬಹಳ ಘನವುಳ್ಳವಳಾದಿ.
25 Os navios de Társis eram as tuas caravanas para as tuas mercadorias; e te enriqueceste e ficaste mui famosa no coração dos mares.
26 ಹುಟ್ಟುಹಾಕುವವರು ನಿನ್ನನ್ನು (ಮಹಾತರಂಗ ಗಳಿಗೆ) ಸಿಕ್ಕಿಸಿದ್ದಾರೆ. ಮೂಡಣ ಗಾಳಿಯು ಸಮುದ್ರದ ಮಧ್ಯದಲ್ಲಿ ನಿನ್ನನ್ನು ಮುರಿದಿದೆ.
26 Os teus remeiros te conduziram sobre grandes águas; o vento oriental te quebrou no coração dos mares.
27 ನಿನ್ನ ಆಸ್ತಿಪಾಸ್ತಿಗಳೂ ಸರಕುಗಳೂ ನಾವಿಕರೂ ಅಂಬಿಗರೂ ಒಡಕುಗಳನ್ನು ಮುಚ್ಚುವವರೂ ವ್ಯಾಪಾರಿ ಗಳೂ ನಿನ್ನಲ್ಲಿನ ಸಮಸ್ತ ಸೈನಿಕರೂ ಅಂತೂ ನಿನ್ನೊಳಗೆ ಸೇರಿಕೊಂಡಿರುವ ಸಿಬ್ಬಂದಿಯೆಲ್ಲವೂ ನಿನ್ನ ನಾಶನದ ದಿನದಲ್ಲಿ ಸಮುದ್ರದೊಳಗೆ ನಿನ್ನೊಂದಿಗೆ ಮುಳುಗಿ ಹೋಗುವರು.
27 As tuas riquezas, as tuas mercadorias, os teus bens, os teus marinheiros, os teus pilotos, os calafates, os que faziam os teus negócios e todos os teus soldados que estão em ti, juntamente com toda a multidão do povo que está no meio de ti, se afundarão no coração dos mares no dia da tua ruína.
28 ನಿನ್ನ ನಾವಿಕರ ಕಿರಿಚಾಟಕ್ಕೆ ಉಪ ನಗರಗಳು, ಪ್ರದೇಶಗಳು, ನಡುಗುವವು.
28 Ao estrondo da gritaria dos teus pilotos, tremerão as praias.
29 ಹುಟ್ಟು ಹಾಕುವವರೆಲ್ಲರೂ ಅಂಬಿಗರೂ ಸಮುದ್ರದ ಸಕಲ ನಾವಿಕರೂ ತಮ್ಮ ತಮ್ಮ ಹಡಗುಗಳಿಂದಿಳಿದು ನೆಲದ ಮೇಲೆ ನಿಂತುಕೊಂಡು,
29 Todos os que pegam no remo, os marinheiros, e todos os pilotos do mar descerão de seus navios e pararão em terra;
30 ನಿನ್ನ ನಿಮಿತ್ತ ದುಃಖದಿಂದ ಅರಚಿ ತಲೆಗೆ ದೂಳೆರೆಚಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡಿ;
30 farão ouvir a sua voz sobre ti e gritarão amargamente; lançarão pó sobre a cabeça e na cinza se revolverão;
31 ನಿನಗಾಗಿ ತಲೆಬೋಳಿಸಿಕೊಂಡು ಗೋಣಿಚೀಲವನ್ನು ಸುತ್ತಿಕೊಂಡು ಮನೋವ್ಯಥೆ ಯಿಂದ ಗೋಳಾಡಿ ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು.
31 far-se-ão calvos por tua causa, cingir-se-ão de pano de saco e chorarão sobre ti, com amargura de alma, com amargura e lamentação.
32 ಅವರು ಗೋಳಾಡುತ್ತಾ ನಿನ್ನ ವಿಷಯವಾಗಿ ಶೋಕ ಗೀತವನ್ನೆತ್ತಿ ಹೀಗೆ ಪ್ರಲಾಪಿಸುವರು--ಸಮುದ್ರದ ನಡುವೆ ಹಾಳಾಗಿರುವ ತೂರಿನಂತ ಪಟ್ಟಣ ಯಾವದು?
32 Levantarão lamentações sobre ti no seu pranto, lamentarão sobre ti, dizendo: Quem foi como Tiro, como a que está reduzida ao silêncio no meio do mar?
33 ನಿನ್ನ ಸರಕು ಸಮುದ್ರದಿಂದ ಹೊರಟಾಗ ಅನೇಕ ಜನರಿಗೆ ತೃಪ್ತಿಪಡಿಸಿದೆ; ಅವುಗಳಿಂದ ಬಹು ಜನಾಂಗ ಗಳನ್ನು ತುಂಬಿಸಿದೆ; ನಿನ್ನ ಅಪಾರವಾದ ಐಶ್ವರ್ಯ ದಿಂದಲೂ ವ್ಯಾಪಾರದ ದಿನಸುಗಳಿಂದಲೂ ಭೂರಾಜ ರನ್ನು ಸಮೃದ್ಧಿಪಡಿಸಿದೆ.
33 Quando as tuas mercadorias eram exportadas pelos mares, fartaste a muitos povos; com a multidão da tua riqueza e do teu negócio, enriqueceste os reis da terra.
34 ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, ನಿನ್ನ ಸರಕುಗಳೂ ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಅಗಾಧ ಜಲದಲ್ಲಿ ಮುಳುಗಿ ಹೋದರು.
34 No tempo em que foste quebrada nos mares, nas profundezas das águas se afundaram os teus negócios e toda a tua multidão, no meio de ti.
35 ದ್ವೀಪದ ನಿವಾಸಿಗಳೆಲ್ಲಾ ನಿನ್ನ ಸ್ಥಿತಿಗೆ ಬೆಚ್ಚಿ ವಿಸ್ಮಯರಾಗಿದ್ದಾರೆ. ಅರಸರು ಬಹಳ ವಾಗಿ ಭಯಪಟ್ಟಿದ್ದಾರೆ. ರಾಜರುಗಳು ನಡುಗಿ ಭೀತಿ ಗೊಂಡರು.
35 Todos os moradores das terras dos mares se espantam por tua causa; os seus reis tremem sobremaneira e estão de rosto perturbado.
36 ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸಿಳ್ಳುಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸ ವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.
36 Os mercadores dentre os povos assobiam contra ti; vens a ser objeto de espanto e jamais subsistirás.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Ezequiel 27, comparar traduções ou montar um estudo — tudo direto pelo WhatsApp.