Ezequiel 31
Kannada Bible (GL_KANNADA) vs NAA
NAA Nova Almeida Atualizada 2017
1 1 ಹನ್ನೊಂದನೇ ವರುಷದಲ್ಲಿ ಮೂರನೇ ತಿಂಗಳಿನ, ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
1 No décimo primeiro ano, no terceiro mês, no primeiro dia do mês, a palavra do Senhor veio a mim, dizendo:
2 ಮನುಷ್ಯಪುತ್ರನೇ, ಐಗುಪ್ತದ ಅರಸನಾದ ಫರೋಹನೊಂದಿಗೆ ಮತ್ತು ಅವನ ಸಮೂಹದೊಂದಿಗೆ ಮಾತ ನಾಡಿ--ನೀನು ನಿನ್ನ ದೊಡ್ಡಸ್ತಿಕೆಯಲ್ಲಿ ಯಾರಿಗೆ ಸಮಾನನಾಗಿರುವೆ?
2 — Filho do homem, diga a Faraó, rei do Egito, e à multidão do seu povo: “A quem você é semelhante em sua grandeza?
3 ಇಗೋ, ಅಶ್ಶೂರ್ಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವ ದಾರು ಆಗಿದೆ. ಅದರ ನೆರಳು ದಟ್ಟವಾಗಿದೆ, ಎತ್ತರವು ನೀಳವಾಗಿದೆ; ಅದರ ತುದಿಯು ದಟ್ಟವಾದ ಕೊಂಬೆಗಳ ಮಧ್ಯದಲ್ಲಿತ್ತು.
3 Eis que a Assíria era um cedro no Líbano, de lindos ramos, de sombrosa folhagem e de grande estatura, cujo topo chegava até as nuvens.
4 ನೀರು ಅದನ್ನು ಬೆಳೆಸಿತು, ಅಗಾಧವು ತನ್ನ ನದಿಗಳನ್ನು ಅದರ ಸುತ್ತಲೂ ಹರಿಸಿ ತನ್ನ ಕಾಲುವೆಗಳನ್ನು ಬಯಲಿನ ಮರಗಳಿಗೆಲ್ಲಾ ಕಳುಹಿಸಿ, ಅದನ್ನು ಎತ್ತರವಾಗಿ ಬೆಳೆಯುವಂತೆ ಮಾಡಿತು.
4 As águas o fizeram crescer; as fontes do abismo o fortaleceram, fazendo correr as suas torrentes no lugar em que ele estava plantado e enviando os seus ribeiros para todas as árvores do campo.
5 ಆದ ದರಿಂದ ಅದರ ಎತ್ತರವು ಬಯಲಿನ ಎಲ್ಲಾ ಮರ ಗಳಿಗಿಂತ ಎತ್ತರವಾಗಿತ್ತು; ಅದು ಹಬ್ಬಿದ್ದದರಿಂದ ಮತ್ತು ಹೆಚ್ಚು ನೀರಿನ ದೆಸೆಯಿಂದ ಅದರ ಕೊಂಬೆಗಳು ಅಧಿಕವಾದವು; ಅದರ ರೆಂಬೆಗಳು ಉದ್ದವಾದವು.
5 Cresceu mais do que todas as árvores do campo; os seus galhos se multiplicaram e os seus ramos se alongaram, por causa das muitas águas durante o seu crescimento.
6 ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು; ಅದರ ರೆಂಬೆ ಗಳ ಕೆಳಗೆ ಬಯಲಿನ ಎಲ್ಲಾ ಮೃಗಗಳು ಮರಿಗಳಿಗೆ ಜನ್ಮಕೊಟ್ಟವು; ಅದರ ಕೆಳಗೆ ನೆರಳಿನಲ್ಲಿ ಎಲ್ಲಾ ಮಹಾಜನಾಂಗಗಳು ವಾಸಮಾಡಿದವು.
6 Todas as aves do céu se aninhavam nos seus galhos, todos os animais do campo davam cria debaixo dos seus ramos, e todos os grandes povos se assentavam à sua sombra.
7 ಹೀಗೆ ಅವನು ತನ್ನ ದೊಡ್ಡಸ್ತಿಕೆಯಲ್ಲಿ ತನ್ನ ಕೊಂಬೆಗಳ ಉದ್ದದಲ್ಲಿ ಸುಂದರವಾಗಿದ್ದನು; ಯಾಕಂದರೆ ಅವನ ಬೇರು ಮಹಾ ನೀರಿನಿಂದಾಗಿತ್ತು.
7 Ele era formoso na sua grandeza e na extensão dos seus ramos, porque as suas raízes estavam junto às muitas águas.
8 ದೇವರ ತೋಟದ ದೇವದಾರುಗಳು ಅವನನ್ನು ಮರೆಮಾಡಲಿಲ್ಲ; ತುರಾಯಿ ಮರಗಳು ಅವನ ಕೊಂಬೆಗಳಿಗೆ ಸಮ ವಾಗಲಿಲ್ಲ; ಆಲದ ಮರಗಳು ಅವನ ರೆಂಬೆಗಳಷ್ಟೂ ಇಲ್ಲ; ಆ ದೇವರ ತೋಟದ ಯಾವುದೇ ಮರವು ಇವನ ಸೌಂದರ್ಯಕ್ಕೆ ಸಮವಾಗಲಿಲ್ಲ.
8 Os cedros no jardim de Deus não lhe eram rivais; os ciprestes não igualavam os seus ramos, e os plátanos não tinham renovos como os seus; nenhuma árvore no jardim de Deus se assemelhava a esse cedro na sua formosura.
9 ನಾನು ಅವನನ್ನು ಅವನ ಕೊಂಬೆಗಳ ಸಮೂಹದಿಂದ ಸೌಂದರ್ಯಪಡಿಸಿದೆನು; ಅದರಿಂದ ದೇವರ ತೋಟ ದಲ್ಲಿನ ಏದೆನಿನ ಮರಗಳೆಲ್ಲಾ ಅವನ ಮೇಲೆ ಹೊಟ್ಟೇ ಕಿಚ್ಚುಪಟ್ಟವು.
9 Eu o fiz formoso, com a multidão dos seus ramos. Todas as árvores do Éden, que estavam no jardim de Deus, tinham inveja dele.”
10 ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಯಾಕಂದರೆ ನೀನು ನೀಳದಲ್ಲಿ ಎತ್ತರವಾಗಿ ಅವನು ತನ್ನ ತಲೆಯನ್ನು ಒತ್ತಿಕೊಂಡಿರುವ ಕೊಂಬೆಗಳ ಕಡೆಗೆ ಚಾಚಿದ ಕಾರಣದಿಂದ ಅವನ ಹೃದಯವು ತನ್ನ ಎತ್ತರದಲ್ಲಿ ಹೆಚ್ಚಿಸಲ್ಪಟ್ಟಿದೆ.
10 — Portanto, assim diz o Senhor Deus: Visto que ela elevou a sua estatura, o seu topo chegou até as nuvens e o seu coração ficou orgulhoso da sua altura,
11 ಆದದರಿಂದ ನಾನು ಅವನನ್ನು ಅನ್ಯಜನಾಂಗಗಳಲ್ಲಿ ಶೂರನಾದ ಒಬ್ಬನ ಕೈಗೆ ಒಪ್ಪಿಸಿದ್ದೇನೆ; ಇವನು ನಿಶ್ಚಯವಾಗಿ ಅವನನ್ನು ದಂಡಿಸುತ್ತಾನೆ. ಅವನ ದುಷ್ಟತ್ವದ ನಿಮಿತ್ತ ನಾನು ಅವನನ್ನು ತಳ್ಳಿಹಾಕಿದ್ದೇನೆ.
11 eu entregarei essa árvore nas mãos da mais poderosa das nações, que certamente lhe dará o tratamento que a sua impiedade merece. Eu a rejeitei.
12 ಜನಾಂಗಗಳಲ್ಲಿ ಭಯಂಕರವಾದ ಅಪರಿಚಿತರು ಅವನನ್ನು ಕಡಿದುಹಾಕು ವರು. ಎಲ್ಲಾ ಬೆಟ್ಟಗಳ ಮೇಲೆಯೂ ತಗ್ಗುಗಳಲ್ಲಿಯೂ ಅವನ ಕೊಂಬೆಗಳು ಬೀಳುವವು, ದೇಶದ ಹಳ್ಳಗಳ ಲ್ಲೆಲ್ಲಾ ಅವನ ರೆಂಬೆಗಳು ಮುರಿದುಹೋಗುವವು; ಭೂಮಿಯ ಜನಗಳೆಲ್ಲಾ ಅವನ ನೆರಳಿನಿಂದ ದೂರ ಸರಿದು ಅವನನ್ನು ಬಿಟ್ಟುಬಿಡುವರು.
12 Os mais terríveis estrangeiros dentre as nações a cortaram e a abandonaram. Os seus galhos caíram sobre os montes e por todos os vales; os seus ramos jazem quebrados em todos os ribeiros da terra; todos os povos da terra se retiraram da sua sombra e a deixaram.
13 ಅವನ ಬುಡದ ಮೇಲೆ ಆಕಾಶದ ಪಕ್ಷಿಗಳೆಲ್ಲಾ ಕೂತುಕೊಳ್ಳುವವು; ಬಯಲಿನ ಎಲ್ಲಾ ಪ್ರಾಣಿಗಳು ಅವನ ರೆಂಬೆಗಳ ಬಳಿಯಲ್ಲಿರುವವು;
13 Todas as aves do céu habitarão nas suas ruínas, e todos os animais selvagens se acolherão sob os seus ramos.
14 ನೀರಾವರಿಯ ಯಾವ ಮರಗಳು ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು ತಮ್ಮ ತುದಿಯನ್ನು ಮೋಡಗಳಿಗೆ ತಗಲಿಸದೆ ಇರುವದರಿಂದ ನೀರನ್ನು ಹೀರುತ್ತಲಿರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು, ಅವೆಲ್ಲಾ ಮರಣದ ಪಾಲಾಗುವವು; ಅವುಗಳಿಗೆ ಅಧೋ ಲೋಕವೇ ಗತಿಯಾಗುವದು, ಪಾತಾಳಕ್ಕೆ ಇಳಿದು ಹೋದ ಮನುಷ್ಯ ಜನ್ಮದವರ ಬಳಿಗೆ ಒಂದೇ ಗುಂಪಾಗಿ ಸೇರುವವು.
14 Isso aconteceu para que todas as árvores junto às águas não elevem a sua estatura nem levantem o seu topo até as nuvens, e para que as bem-regadas não venham a confiar em si, por causa da sua altura. Porque todas foram entregues à morte, às profundezas da terra, no meio dos filhos dos homens, com os que descem à cova.
15 ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅವನು ಸಮಾಧಿಗೆ ಇಳಿದ ದಿನದಲ್ಲಿ ಗೋಳಾಟ ಹುಟ್ಟಿಸುವೆನು, ಅವನಿಗಾಗಿ ನಾನು ಅಗಾಧವನ್ನು ಮುಚ್ಚುವೆನು; ನಾನು ಅದರ ಪ್ರವಾಹವನ್ನು ತಡೆಹಿಡಿಯುವೆನು; ಮಹಾ ಜಲವು ನಿಲ್ಲಿಸಲ್ಪಡುವವು. ನಾನು ಲೆಬನೋನನ್ನು ಸಹ ಅವನಿಗೋಸ್ಕರ ಗೋಳಾಡಿಸುವೆನು. ಬಯಲಿನ ಮರಗಳೆಲ್ಲಾ ಅವನಿಗೋಸ್ಕರ ಕುಗ್ಗಿಹೋಗುವವು.
15 — Assim diz o Senhor Deus: No dia em que a árvore desceu ao mundo dos mortos, fiz com que houvesse luto. Por causa dela, cobri o abismo, retive as suas cadeias, e as suas muitas águas se detiveram; cobri o Líbano de preto, por causa dela, e todas as árvores do campo ficaram murchas por causa dela.
16 ನಾನು ಅದನ್ನು ಕುಣಿಗೆ ಇಳಿಯುವವರ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು; ಅಧೋ ಲೋಕಕ್ಕೆ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ನೀರು ಕುಡಿಯುವವುಗಳೆಲ್ಲಾ ಕೆಳಗಿನ ಸೀಮೆಯಲ್ಲಿ ಸಂತೈಸಿ ಕೊಂಡವು.
16 Fiz tremer as nações ao som da sua queda, quando a fiz descer ao mundo dos mortos com os que descem ao abismo. Todas as árvores do Éden, as mais bonitas e as melhores do Líbano, todas as que foram regadas pelas águas se consolavam nas profundezas da terra.
17 ಅವರು ಕೂಡ ಅನ್ಯಜನಾಂಗಗಳೊಳಗೆ ಅವನ ನೆರಳಿನಲ್ಲಿ ಕುಳಿತುಕೊಳ್ಳುವರು; ಅವನ ಕೈಗಳು ಸಹ ಅವನ ಸಂಗಡವೇ ಪಾತಾಳಕ್ಕೆ ಕತ್ತಿಯಿಂದ ಹತವಾದವರ ಬಳಿಗೆ ಇಳಿದುಹೋಗುವವು;
17 Também estas, com ela, descerão ao mundo dos mortos, para juntar-se com os que foram mortos à espada; sim, os que foram o braço dela e que estavam assentados à sua sombra entre as nações.
18 ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆ ಯಿಂದಲೂ ಏದೆನಿನ ಯಾವ ಮರಗಳಿಗೆ ಸಮ ನಾಗಿರುವೆ? ಆದರೂ ಏದೆನಿನ ಮರಗಳ ಸಂಗಡ ಕೆಳಗಿನ ಸೀಮೆಗಳಿಗೆ ಇಳಿಸಲ್ಪಡುವಿ; ಸುನ್ನತಿಯಿಲ್ಲದವರ ಮಧ್ಯದಲ್ಲಿ ಕತ್ತಿಯಿಂದ ಹತವಾದವರ ಸಂಗಡ ಮಲ ಗುವಿ. ಇದೇ ಫರೋಹನನೂ ಅವನ ಎಲ್ಲಾ ಜನ ಸಮೂಹವೂ ಆಗಿವೆ ಎಂದು ದೇವರಾದ ಕರ್ತನು ಹೇಳುತ್ತಾನೆ.
18 — A quem, pois, você é semelhante em glória e em grandeza entre as árvores do Éden? No entanto, você descerá às profundezas da terra com as árvores do Éden. No meio dos incircuncisos, você jazerá com os que foram mortos à espada. Este é Faraó e toda a sua pompa, diz o Senhor Deus.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Ezequiel 31, comparar traduções ou montar um estudo — tudo direto pelo WhatsApp.