Ezequiel 32
Kannada Bible (GL_KANNADA) vs NVT
NVT Nova Versão Transformadora
1 ಹನ್ನೆರಡನೇ ವರುಷದ, ಹನ್ನೆರಡನೇ ತಿಂಗಳಿನ, ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
1 Em 3 de março, no décimo segundo ano do exílio do rei Joaquim, recebi esta mensagem do S enhor :
2 ಮನುಷ್ಯ ಪುತ್ರನೇ, ಐಗುಪ್ತ ಅರಸನಾದ ಫರೋಹನ ವಿಷಯ ವಾಗಿ ಗೋಳಾಟವನ್ನೆತ್ತಿ ಅವನಿಗೆ ನೀನು ಹೇಳಬೇಕಾ ದದ್ದೇನಂದರೆ--ನೀನು ಜನಾಂಗಗಳಲ್ಲಿ ಪ್ರಾಯದ ಸಿಂಹಕ್ಕೆ ಸಮನಾಗಿರುವೆ; ಸಮುದ್ರಗಳಲ್ಲಿರುವ ತಿಮಿಂಗಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇಧಿಸಿಕೊಂಡು ಬಂದ ನೀರನ್ನು ನಿನ್ನ ಕಾಲುಗಳಿಂದ ಕಲಕಿ ಹೊಳೆಗಳನ್ನು ತುಳಿದು ಬದಿಗೆ ಮಾಡಿದೆ.
2 “Filho do homem, lamente pelo faraó, rei do Egito, e transmita-lhe esta mensagem: “Você se considera um leão forte entre as nações, mas na verdade é um monstro marinho que se contorce em seus rios e revolve a lama com os pés.
3 ದೇವರಾದ ಕರ್ತನು ಹೀಗೆ ಹೇಳುತ್ತಾನೆ, ಆದುದ ರಿಂದ ನಾನು ಗುಂಪಾಗಿ ಕೂಡಿದ ಬಹಳ ಜನಾಂಗಗಳ ಮೇಲೆ ಬಲೆಯನ್ನು ಬೀಸುವೆನು; ಅವರು ನಿನ್ನನ್ನು ನನ್ನ ಬಲೆಯಲ್ಲಿ ಮೇಲಕ್ಕೆಳೆಯುವರು.
3 Portanto, assim diz o S enhor Soberano: Enviarei muitos povos para apanhá-lo em minha rede e arrastá-lo para fora da água.
4 ಆಗ ನಾನು ನಿನ್ನನ್ನು ನೆಲದ ಮೇಲೆ ಹಾಕಿಬಿಡುವೆನು, ಬಯಲಿನ ಮೇಲೆ ಬಿಸಾಡುವೆನು; ಆಕಾಶದ ಪಕ್ಷಿಗಳನ್ನೆಲ್ಲಾ ನಿನ್ನ ಮೇಲೆ ಕೂರಿಸಿ, ಸಮಸ್ತ ಭೂಮಿಯ ಮೇಲಿನ ಮೃಗಗಳನ್ನು ನಿನ್ನಿಂದ ತೃಪ್ತಿಪಡಿಸುವೆನು.
4 Eu o deixarei jogado no chão; todas as aves do céu pousarão sobre você, e os animais selvagens de toda a terra o devorarão até se fartar.
5 ನಿನ್ನ ಮಾಂಸವನ್ನು ಬೆಟ್ಟಗಳ ಮೇಲೆ ಹಾಕಿ, ನಿನ್ನ ರಾಶಿ ಯಿಂದ ಕಣಿವೆಗಳನ್ನು ತುಂಬಿಸುವೆನು.
5 Espalharei sua carne pelos montes e encherei os vales com seus ossos.
6 ನಿನ್ನ ರಕ್ತ ಪ್ರವಾಹದಿಂದ ದೇಶವನ್ನು ಬೆಟ್ಟಗಳ ತನಕ ತೋಯಿಸು ವೆನು; ನದಿಗಳು ನಿನ್ನಿಂದ ತುಂಬುವವು.
6 Encharcarei a terra com seu sangue; ele correrá até os montes e encherá os desfiladeiros até a borda.
7 ಇದಲ್ಲದೆ, ನಾನು ನಿನ್ನನ್ನು ನಂದಿಸುವಾಗ ಆಕಾಶಕ್ಕೆ ಮುಸುಕುಹಾಕಿ ಅಲ್ಲಿನ ನಕ್ಷತ್ರಗಳನ್ನು ಕತ್ತಲಾಗ ಮಾಡಿ, ಸೂರ್ಯನನ್ನು ಮೋಡದಿಂದ ಮುಚ್ಚಿಬಿಡುವೆನು; ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು.
7 Quando eu exterminá-lo, cobrirei os céus e escurecerei as estrelas. Taparei o sol com uma nuvem, e a lua não dará sua luz.
8 ಆಕಾಶದಲ್ಲಿ ಪ್ರಕಾಶಿ ಸುವ ಬೆಳಕುಗಳನ್ನು ನಿನ್ನ ನಿಮಿತ್ತವಾಗಿ ನಾನು ಕತ್ತಲು ಮಾಡುವೆನು; ಆ ಕತ್ತಲೆಯನ್ನು ನಿನ್ನ ದೇಶದ ಮೇಲೆ ಇಡುತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ.
8 Escurecerei as estrelas brilhantes lá no alto e cobrirei sua terra com trevas. Eu, o S
9 ಇದಲ್ಲದೆ ಜನಾಂಗಗಳೊಳಗೆ ನೀನು ಅರಿಯದ ದೇಶಗಳಲ್ಲಿ, ನಿನ್ನ ನಾಶನವನ್ನು ಪ್ರಸಿದ್ಧಿಪಡಿಸಿ, ಅನೇಕ ಜನಗಳ ಹೃದಯದಲ್ಲಿ ಗಲಿಬಿಲಿ ಎಬ್ಬಿಸುವೆನು.
9 “Perturbarei o coração de muitos quando levar a notícia de sua destruição a nações distantes, que você não conheceu.
10 ಹೌದು, ನಾನು ಅನೇಕ ಜನರನ್ನು ನಿನ್ನ ವಿಷಯದಲ್ಲಿ ವಿಸ್ಮಯಗೊಳಿಸುವೆನು, ನಾನು ಅವರ ಮುಂದೆ ನನ್ನ ಕತ್ತಿಯನ್ನು ಬೀಸುವಾಗ ಅವರ ಅರಸರು ನಿನ್ನ ವಿಷಯದಲ್ಲಿ ಭಯಭ್ರಾಂತಿಗೊಳ್ಳುವರು. ನೀನು ಬೀಳುವ ಆ ದಿನದಲ್ಲಿ ಅವರು ಕ್ಷಣಕ್ಷಣಕ್ಕೆ ತಮ್ಮ ತಮ್ಮ ಪ್ರಾಣದ ಬಗ್ಗೆ ನಡುಗುವರು.
10 Sim, causarei espanto em muitas terras, e os reis ficarão aterrorizados ao saber de seu destino. Tremerão de medo quando eu agitar minha espada diante deles no dia de sua queda.
11 ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನ ಅರಸನ ಕತ್ತಿಯು ನಿನ್ನ ಮೇಲೆ ಬರುವದು;
11 Pois assim diz o S enhor Soberano: “A espada do rei da Babilônia virá contra você.
12 ಪರಾಕ್ರಮ ಶಾಲಿಗಳ ಕತ್ತಿಗಳಿಂದ ಜನಾಂಗಗಳಲ್ಲಿ ಭಯಂಕರ ರಾಗಿರುವ ನಿನ್ನ ಸಮೂಹವನ್ನು ನಾನು ಬೀಳುವಂತೆ ಮಾಡುವೆನು; ಅವರು ಐಗುಪ್ತದ ಮಹತ್ತನ್ನು ಕೆಡಿಸು ವರು; ಅದರ ಜನಸಮೂಹವೆಲ್ಲಾ ಹಾಳಾಗುವದು.
12 Exterminarei suas multidões com espadas de poderosos guerreiros, o terror das nações. Eles destruirão o orgulho do Egito, e todas as suas multidões serão vencidas.
13 ನಾನು ಆ ಬಹುಪ್ರವಾಹಗಳ ಬಳಿಯಲ್ಲಿರುವ ಅದರ ಮೃಗಗಳನ್ನೆಲ್ಲಾ ನಾಶಮಾಡುವೆನು; ಆ ನೀರಿನಲ್ಲಿ ಇನ್ನು ಮೇಲೆ ಮನುಷ್ಯನ ಕಾಲಾಗಲಿ, ಪ್ರಾಣಿಗಳ ಗೊರಸಾಗಲಿ ಕಲಕಿಸುವದಿಲ್ಲ.
13 Acabarei com todos os seus rebanhos que pastam junto aos riachos. Nunca mais nem pessoas nem animais levantarão lama naquelas águas com seus pés.
14 ಆಮೇಲೆ ನಾನು ಆ ನೀರುಗಳನ್ನು ಆಳವಾಗಿ ಮಾಡುವೆನು; ಅದರ ನದಿಗಳನ್ನು ಎಣ್ಣೆಯ ಹಾಗೆ ಹರಿಯುವಂತೆ ಮಾಡು ವೆನು ಎಂದು ದೇವರಾದ ಕರ್ತನು ಹೇಳುತ್ತಾನೆ.
14 Então farei que as águas do Egito se acalmem, e elas fluirão suavemente, como azeite, diz o S
15 ನಾನು ಐಗುಪ್ತದೇಶವನ್ನು ಹಾಳು ಮಾಡುವಾಗ, ಆ ದೇಶವು ಪರಿಪೂರ್ಣವಾಗಿ ಹಾಳಾಗುವಾಗ ಮತ್ತು ನಾನು ಅವರ ನಿವಾಸಿಗಳನ್ನೆಲ್ಲಾ ಹೊಡೆಯುವಾಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
15 Quando eu destruir o Egito, despojá-lo de todos os seus bens e abater todo o seu povo, vocês saberão que eu sou o S
16 ಇದು ಅವರು ಗೋಳಾಡುವಂತಹ ಗೋಳಾಟವಾಗಿದೆ; ಐಗುಪ್ತದ ವಿಷಯವಾಗಿಯೂ ಅದರ ಎಲ್ಲಾ ಜನ ಸಮೂಹದ ವಿಷಯವಾಗಿಯೂ ಜನಾಂಗಗಳ ಕುಮಾರ್ತೆಯರು ಇದನ್ನು ಕುರಿತು ಗೋಳಾಡುವರು; ಎಂದು ದೇವರಾದ ಕರ್ತನು ಹೇಳುತ್ತಾನೆ.
16 Sim, este é o cântico fúnebre que entoarão para o Egito. Que as nações lamentem pelo Egito e por suas multidões. Eu, o S
17 ಇದಲ್ಲದೆ ಹನ್ನೆರಡನೇ ವರ್ಷದ, ತಿಂಗಳಿನ ಹದಿನೈದನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
17 Em 17 de março, no décimo segundo ano, recebi outra mensagem do S enhor :
18 ಮನುಷ್ಯಪುತ್ರನೇ, ಐಗುಪ್ತದ ಜನಸಮೂಹದ ವಿಷಯವಾಗಿ ಗೋಳಾಡು. ಅದನ್ನು, ಅದರ ಸಂಗಡ ಘನವುಳ್ಳ ಜನಾಂಗಗಳ ಕುಮಾರ್ತೆ ಯರನ್ನು ಭೂಮಿಯ ಕೆಳಗಿನ ಭಾಗಗಳಿಗೆ ಕುಣಿಯೊ ಳಗೆ ಇಳಿಯುವವರ ಜೊತೆ ತಳ್ಳಿಬಿಡು.
18 “Filho do homem, lamente pelas multidões do Egito e pelas outras nações poderosas, pois eu as enviarei às profundezas da terra, junto com aqueles que descem à cova.
19 ನೀನು ಸೌಂದರ್ಯದಲ್ಲಿ ಯಾರಿಗೆ ಹೋಲುವಿ? ಕೆಳಗೆ ಹೋಗು ಮತ್ತು ಸುನ್ನತಿಯಿಲ್ಲದವರ ಸಂಗಡ ಮಲಗು.
19 Diga-lhes: ‘Ó Egito, acaso você é mais belo que as outras nações? Desça à cova e fique ali, entre os rejeitados!’.
20 ಅವರು ಕತ್ತಿಯಿಂದ ಹತರಾದವರ ಮಧ್ಯದಲ್ಲಿ ಬೀಳುವರು. ಅವಳು ಕತ್ತಿಗೆ ಒಪ್ಪಿಸಲ್ಪಟ್ಟಿದ್ದಾಳೆ; ಅವಳನ್ನೂ ಅವಳ ಎಲ್ಲಾ ಸಮೂಹವನ್ನೂ ಎಳೆಯಿರಿ.
20 Os egípcios cairão, junto com os muitos que morreram à espada, pois a espada está empunhada contra eles. O Egito e suas multidões serão arrastados para seu julgamento.
21 ಶೂರರಲ್ಲಿ ಬಲಿಷ್ಠರೂ ಅವನಿಗೆ ಸಹಾಯ ಮಾಡಿದವರ ಸಂಗಡ ಪಾತಾಳದೊಳಗಿಂದ ಅವನ ಸಂಗಡ ಮಾತನಾಡುವರು; ಅವರು ಇಳಿದುಹೋಗಿ ಸುನ್ನತಿ ಯಿಲ್ಲದವರಾಗಿಯೂ ಕತ್ತಿಯಿಂದ ಹತರಾದವರಾ ಗಿಯೂ ಮಲಗಿದ್ದಾರೆ.
21 Lá embaixo, no lugar dos mortos, líderes poderosos receberão o Egito e seus aliados com zombaria, dizendo: ‘Eles desceram; estão entre os rejeitados, entre as multidões mortas à espada’.
22 ಅಲ್ಲಿ ಅಶ್ಶೂರ್ಯ ಮತ್ತು ಅದರ ಎಲ್ಲಾ ಗುಂಪು ಇರುವದು; ಸುತ್ತಲೂ ಅದರ ಸಮಾಧಿಗಳಿರುವವು; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ.
22 “A Assíria está ali, cercada pelas sepulturas de seu exército, aqueles que foram mortos à espada.
23 ಅವರ ಸಮಾಧಿಗಳು ಕುಣಿಯ ಕಡೆಗಳಲ್ಲಿ ಇಡಲ್ಪಟ್ಟಿವೆ, ಅದರ ಸಮಾಧಿಯ ಸುತ್ತಲೂ ಅವರ ಗುಂಪುಗಳಿವೆ. ಜೀವಿತರ ದೇಶದಲ್ಲಿ ಭಯಂಕ ರರಾಗಿದ್ದ ಇವರೆಲ್ಲರೂ ಕತ್ತಿಯಿಂದ ಬಿದ್ದು ಹತರಾ ದರು.
23 Suas sepulturas ficam no fundo da cova e estão cercadas por seus aliados. Causavam terror em toda parte, mas agora foram mortos à espada.
24 ಅಲ್ಲಿ ಏಲಾಮು ಮತ್ತು ಅದರ ಎಲ್ಲಾ ಸಮೂಹವು ಆಕೆಯ ಸಮಾಧಿಯ ಸುತ್ತಲೂ ಇದೆ; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ; ಸುನ್ನತಿಯಿಲ್ಲದವರಾಗಿ ಭೂಮಿಯ ಕೆಳಗಿನ ಭಾಗಗಳಿಗೆ ಇಳಿದುಹೋದವರೇ, ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡಿದ್ದಾರೆ.
24 “Elão está ali, cercado pelas sepulturas de todas as suas multidões, aqueles que foram mortos à espada. Causavam terror em toda parte, mas agora estão nas profundezas da terra, como rejeitados. Sim, estão na cova, envergonhados, junto com aqueles que foram antes deles.
25 ಅವರು ಅದರ ಎಲ್ಲಾ ಸಮೂಹಕ್ಕೂ ಹತವಾದವರ ಮಧ್ಯದಲ್ಲಿ ಹಾಸಿಗೆ ಹಾಕಿದ್ದಾರೆ; ಅದರ ಸುತ್ತಲೂ ಅವರ ಸಮಾಧಿಗಳಿವೆ; ಅವರೆಲ್ಲರೂ ಕತ್ತಿಯಿಂದ ಹತರಾಗಿ ಸುನ್ನತಿಯಿಲ್ಲದವರಾಗಿದ್ದಾರೆ; ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತು ಕೊಂಡು ಹತರಾದವರ ಮಧ್ಯದಲ್ಲಿ ಇಡಲ್ಪಟ್ಟಿದ್ದಾರೆ.
25 Têm um lugar para deitar entre os mortos, cercados pelas sepulturas de todas as suas multidões. Em vida eles aterrorizavam nações, mas agora estão envergonhados, junto com outros na cova, todos eles rejeitados, mortos à espada.
26 ಅಲ್ಲಿ ಮೇಷೆಕೂ ತೂಬಲೂ ಮತ್ತು ಅದರ ಎಲ್ಲಾ ಸಮೂಹವೂ ಅದರ ಸಮಾಧಿಗಳೂ ಅದರ ಸುತ್ತಲಾಗಿ ಇವೆ ಇವರೆಲ್ಲರೂ ಜೀವಿತರ ದೇಶದಲ್ಲಿ ಭಯಂಕರರಾಗಿ ದ್ದಾಗ್ಯೂ ಸುನ್ನತಿಯಿಲ್ಲದೆ ಕತ್ತಿಯಿಂದ ಹತರಾದವರು.
26 “Meseque e Tubal estão ali, cercados pelas sepulturas de todas as suas multidões. Causavam terror em toda parte, mas agora são rejeitados, todos mortos à espada.
27 ಸುನ್ನತಿಯಿಲ್ಲದವರಲ್ಲಿ ಬಿದ್ದಂತ ತಮ್ಮ ಯುದ್ಧದ ಆಯುಧಗಳ ಸಂಗಡ ಪಾತಾಳಕ್ಕೆ ಇಳಿದಂತ ಶೂರರ ಸಂಗಡ ಇವರು ಮಲಗಬೇಡವೇ? ಅವರು ತಮ್ಮ ಕತ್ತಿಗಳನ್ನು ತಮ್ಮ ತಲೆಗಳ ಕೆಳಗೆ ಇಟ್ಟುಕೊಂಡಿದ್ದಾರೆ; ಅವರು ಜೀವಿತರ ದೇಶದಲ್ಲಿ ಶೂರರಿಗೆ ಭಯಂಕರ ರಾಗಿದ್ದಾಗ್ಯೂ ಅವರ ಅಕ್ರಮಗಳು ಅವರ ಎಲುಬು ಗಳ ಮೇಲೆ ಇರುವವು.
27 Não foram sepultados com honras, como seus heróis caídos, que desceram ao lugar dos mortos com suas armas, com seus escudos cobrindo o corpo e suas espadas debaixo da cabeça. Sua culpa está sobre eles, pois, em vida, aterrorizaram a todos.
28 ಹೌದು, ನೀನು ಸುನ್ನತಿಯಿಲ್ಲದವರ ಮಧ್ಯದಲ್ಲಿ ಮುರಿಯಲ್ಪಡುವಿ; ಕತ್ತಿಯಿಂದ ಹತರಾದವರ ಸಂಗಡ ಮಲಗುವಿ.
28 “Também você, Egito, ficará ali, esmagado entre os rejeitados, todos mortos à espada.
29 ಅಲ್ಲಿ ಎದೋಮೂ ಅದರ ಅರಸರೂ ಮತ್ತು ಎಲ್ಲಾ ಪ್ರಧಾನರೂ ಶೂರರಾಗಿದ್ದಾಗ್ಯೂ ಕತ್ತಿಯಿಂದ ಹತವಾ ದವರ ಸಂಗಡ ಹೂಣಲ್ಪಟ್ಟಿದ್ದಾರೆ; ಅವರು ಸುನ್ನತಿಯಿಲ್ಲದವರ ಸಂಗಡವೂ ಕುಣಿಗೆ ಇಳಿಯುವವರ ಸಂಗಡವೂ ಹತರಾದವರು.
29 “Edom está ali com seus reis e príncipes. Embora fossem poderosos, também estão entre os que foram mortos à espada, entre os rejeitados que desceram à cova.
30 ಅಲ್ಲಿ ಉತ್ತರದ ಪ್ರಧಾ ನರೂ ಚೀದೋನಿನವರೆಲ್ಲರೂ ಹತರಾದವರ ಸಂಗಡ ಇಳಿದಿದ್ದಾರೆ; ಅವರು ಭಯಂಕರತ್ವದಿಂದ ತಮ್ಮ ಪರಾ ಕ್ರಮಕ್ಕೆ ನಾಚಿಕೆಪಟ್ಟಿದ್ದಾರೆ; ಹತರಾದವರ ಸಂಗಡ ಇಳಿದಿದ್ದಾರೆ; ಸುನ್ನತಿಯಿಲ್ಲದವರಾಗಿದ್ದು ಕತ್ತಿಯಿಂದ ಹತರಾಗಿ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತವರಾಗಿದ್ದಾರೆ.
30 “Todos os príncipes do norte e os sidônios estão ali, com os outros que morreram. Causavam terror com sua força, mas foram envergonhados. Estão ali como rejeitados, com outros que foram mortos à espada. Estão envergonhados, junto com aqueles que desceram à cova.
31 ಫರೋಹನು ತನ್ನ ಯಾವ ಸಮೂಹವನ್ನು ನೋಡಿ ಆದರಣೆ ಹೊಂದುವನೋ ಹೌದು, ಅವನೂ ಅವನ ಎಲ್ಲಾ ಸೈನ್ಯವು ಹತರಾದವರು ಎಂದು ದೇವರಾದ ಕರ್ತನು ಹೇಳುತ್ತಾನೆ.
31 “Quando o faraó e todo o seu exército chegarem, ficarão consolados porque não foram os únicos que perderam suas multidões na batalha, diz o S enhor Soberano.
32 ನಾನು ನನ್ನ ಭಯವನ್ನು ಜೀವಿತರ ದೇಶದಲ್ಲಿ ಉಂಟು ಮಾಡಿದ್ದೇನೆ. ಆ ಫರೋಹನೂ ಅವನ ಎಲ್ಲಾ ಸಮೂಹದ ಸಹಿತವಾಗಿ ಕತ್ತಿಯಿಂದ ಹತರಾದವರ ಸಂಗಡ, ಸುನ್ನತಿಯಿಲ್ಲದವರ ಮಧ್ಯದಲ್ಲಿ ಮಲಗಿಸಲ್ಪಡುವನೆಂದು ದೇವರಾದ ಕರ್ತನು ಹೇಳುತ್ತಾನೆ.
32 Embora eu tenha feito esse terror vir sobre todos os vivos, o faraó e suas multidões ficarão ali entre os rejeitados que foram mortos à espada. Eu, o S enhor Soberano, falei!”.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Ezequiel 32, comparar traduções ou montar um estudo — tudo direto pelo WhatsApp.