Ezequiel 34
Kannada Bible (GL_KANNADA) vs ARA
ARA Almeida Revista e Atualizada 1993
1 ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
1 Veio a mim a palavra do Senhor , dizendo:
2 ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸು, ಪ್ರವಾದಿಸಿ ಅವರಿಗೆ ಹೀಗೆ ಹೇಳು--ದೇವರಾದ ಕರ್ತನು ಕುರುಬರಿಗೆ ಹೀಗೆ ಹೇಳುತ್ತಾನೆ--ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬ ರಿಗೆ ಅಯ್ಯೋ, ಕುರುಬರು ಮಂದೆಗಳನ್ನು ಮೇಯಿಸ ಬಾರದೋ?
2 Filho do homem, profetiza contra os pastores de Israel; profetiza e dize-lhes: Assim diz o Senhor Deus: Ai dos pastores de Israel que se apascentam a si mesmos! Não apascentarão os pastores as ovelhas?
3 ನೀವು ಕೊಬ್ಬನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ಅವುಗಳಲ್ಲಿ ಕೊಬ್ಬಿದ್ದನ್ನು ಕೊಲ್ಲುತ್ತೀರಿ, ಆದರೆ ಮಂದೆಯನ್ನು ನೀವು ಮೇಯಿ ಸುವದಿಲ್ಲ,
3 Comeis a gordura, vestis-vos da lã e degolais o cevado; mas não apascentais as ovelhas.
4 ಕ್ಷೀಣವಾದದ್ದನ್ನು ನೀವು ಬಲಪಡಿಸುವ ದಿಲ್ಲ, ಖಾಯಿಲೆಯಾದದ್ದನ್ನು ವಾಸಿ ಮಾಡಿಸುವದಿಲ್ಲ, ಮುರಿದದ್ದನ್ನು ಕಟ್ಟುವದಿಲ್ಲ; ಕಳೆದು ಹೋದದ್ದನ್ನು ಹುಡುಕುವದಿಲ್ಲ, ಓಡಿಸಿದ್ದನ್ನು ನೀವು ಹಿಂದಕ್ಕೆ ತರು ವದಿಲ್ಲ. ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನ ದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ.
4 A fraca não fortalecestes, a doente não curastes, a quebrada não ligastes, a desgarrada não tornastes a trazer e a perdida não buscastes; mas dominais sobre elas com rigor e dureza.
5 ಅವು ಚದರಿಹೋದವು; ಯಾಕಂದರೆ ಅಲ್ಲಿ ಕುರುಬ ರಿಲ್ಲ; ಅವರು ಚದರಿಹೋದಾಗ ಬಯಲಿನಲ್ಲಿರುವ ಎಲ್ಲಾ ಮೃಗಗಳಿಗೆ ಆಹಾರವಾದವು.
5 Assim, se espalharam, por não haver pastor, e se tornaram pasto para todas as feras do campo.
6 ನನ್ನ ಕುರಿಗಳು ಎಲ್ಲಾ ಪರ್ವತಗಳ ಮೇಲೆಯೂ ಪ್ರತಿಯೊಂದು ಎತ್ತರವಾದ ಬೆಟ್ಟಗಳ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದರಿ ಹೋಗಿದೆ; ಯಾವನೂ ಅವುಗಳಿಗಾಗಿ ವಿಚಾರಿಸಲಿಲ್ಲ ಅಥವಾ ಹುಡುಕಲಿಲ್ಲ.
6 As minhas ovelhas andam desgarradas por todos os montes e por todo elevado outeiro; as minhas ovelhas andam espalhadas por toda a terra, sem haver quem as procure ou quem as busque.
7 ಆದದರಿಂದ ಕುರುಬರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ.
7 Portanto, ó pastores, ouvi a palavra do Senhor :
8 ದೇವ ರಾದ ಕರ್ತನು ಹೀಗೆ ಹೇಳುತ್ತಾನೆ; ನನ್ನ ಜೀವದಾಣೆ, ನಿಶ್ಚಯವಾಗಿ ನನ್ನ ಮಂದೆಯು ಕೊಳ್ಳೆಯಾದದ ರಿಂದಲೂ ನನ್ನ ಮಂದೆಯು ಕುರುಬ ನಿಲ್ಲದೆ ಬಯಲಿನ ಮೃಗಗಳಿಗೆಲ್ಲಾ ಆಹಾರವಾದದ್ದರಿಂದಲೂ ನನ್ನ ಕುರು ಬರು ನನ್ನ ಮಂದೆಯನ್ನು ಹುಡುಕದೆ ಇದ್ದದರಿಂದಲೂ ಕುರುಬರು ತಮ್ಮನ್ನು ಮೇಯಿಸಿಕೊಂಡರೇ ಹೊರತು ತಮ್ಮ ಕುರಿಗಳನ್ನು ಮೇಯಿಸದಿದ್ದದರಿಂದಲೂ
8 Tão certo como eu vivo, diz o Senhor Deus, visto que as minhas ovelhas foram entregues à rapina e se tornaram pasto para todas as feras do campo, por não haver pastor, e que os meus pastores não procuram as minhas ovelhas, pois se apascentam a si mesmos e não apascentam as minhas ovelhas, —
9 ಓ ಕುರುಬರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ.
9 portanto, ó pastores, ouvi a palavra do Senhor :
10 ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ; ನನ್ನ ಮಂದೆ ಯನ್ನು ಅವರ ಕೈಯಿಂದ ವಿಚಾರಿಸುವೆನು; ಅವರು ಮಂದೆ ಮೇಯಿಸುವದನ್ನು ನಿಲ್ಲಿಸಿಬಿಡುತ್ತೇನೆ. ಇನ್ನು ಮೇಲೆ ಕುರುಬರು ತಮ್ಮ ಹೊಟ್ಟೆಯನ್ನು ತುಂಬಿಸಿ ಕೊಳ್ಳರು. ನಾನು ನನ್ನ ಮಂದೆಯನ್ನು ಅವರಿಗೆ ಆಹಾರ ವಾಗದ ಹಾಗೆ ಅವರ ಬಾಯಿಂದ ತಪ್ಪಿಸುತ್ತೇನೆ.
10 Assim diz o Senhor Deus: Eis que eu estou contra os pastores e deles demandarei as minhas ovelhas; porei termo no seu pastoreio, e não se apascentarão mais a si mesmos; livrarei as minhas ovelhas da sua boca, para que já não lhes sirvam de pasto.
11 ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ಹೌದು, ನಾನೇ ನನ್ನ ಕುರಿಗಳನ್ನು ವಿಚಾರಿಸಿ ಅವುಗಳನ್ನು ಹುಡುಕುತ್ತೇನೆ.
11 Porque assim diz o Senhor Deus: Eis que eu mesmo procurarei as minhas ovelhas e as buscarei.
12 ಕುರುಬನು ಚದರಿದ್ದ ತನ್ನ ಕುರಿಗಳ ಮಧ್ಯದಲ್ಲಿ ಇರುವ ದಿನದಲ್ಲಿ ತನ್ನ ಮಂದೆಯನ್ನು ಹುಡುಕುವ ಪ್ರಕಾರ ನಾನು ನನ್ನ ಕುರಿಗಳನ್ನು ಹುಡುಕಿ ಕಾರ್ಮುಗಿಲಿನ ದಿನದಲ್ಲಿ ಚದರಿ ಹೋದ ಅವುಗಳನ್ನು ಎಲ್ಲಾ ಸ್ಥಳಗಳಿಂದ ಬಿಡಿಸುವೆನು.
12 Como o pastor busca o seu rebanho, no dia em que encontra ovelhas dispersas, assim buscarei as minhas ovelhas; livrá-las-ei de todos os lugares para onde foram espalhadas no dia de nuvens e de escuridão.
13 ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳ ಸ್ವಂತ ದೇಶಕ್ಕೆ ತರುವೆನು. ಇಸ್ರಾಯೇಲಿನ ಪರ್ವತಗಳ ಮೇಲೆ ನದಿಗಳಲ್ಲಿ ನಿವಾಸಿಸುವ ಎಲ್ಲಾ ದೇಶಗಳಲ್ಲಿ ಮೇಯಿಸುವೆನು.
13 Tirá-las-ei dos povos, e as congregarei dos diversos países, e as introduzirei na sua terra; apascentá-las-ei nos montes de Israel, junto às correntes e em todos os lugares habitados da terra.
14 ನಾನು ಒಳ್ಳೇ ಮೇವಿನಲ್ಲಿ ಅವು ಗಳನ್ನು ಮೇಯಿಸುವೆನು; ಇಸ್ರಾಯೇಲಿನ ಎತ್ತರವಾದ ಪರ್ವತಗಳಲ್ಲಿ ಅವುಗಳ ಮಂದೆಯು ಇರುವದು. ಅವುಗಳು ಆ ಒಳ್ಳೆಯ ಮಂದೆಯಲ್ಲಿ ಮಲಗಿ ಇಸ್ರಾ ಯೇಲಿನ ಪರ್ವತಗಳ ಮೇಲೆ ಪುಷ್ಟಿಯುಳ್ಳ ಮೇವನ್ನು ಮೇಯುವವು.
14 Apascentá-las-ei de bons pastos, e nos altos montes de Israel será a sua pastagem; deitar-se-ão ali em boa pastagem e terão pastos bons nos montes de Israel.
15 ನಾನೇ ನನ್ನ ಮಂದೆಯನ್ನು ಮೇಯಿಸಿ, ನಾನೇ ಅವುಗಳನ್ನು ಮಲಗಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
15 Eu mesmo apascentarei as minhas ovelhas e as farei repousar, diz o Senhor Deus.
16 ಕಳೆದು ಹೋದದ್ದನ್ನು ನಾನೇ ಹುಡುಕುವೆನು; ಓಡಿಸಲ್ಪಟ್ಟಿದ್ದನ್ನು ನಾನೇ ಮತ್ತೆ ತರುವೆನು, ಮುರಿದದ್ದನ್ನು ನಾನೇ ಕಟ್ಟುವೆನು, ಬಲಹೀನವಾದದ್ದನ್ನು ನಾನೇ ಬಲಪಡಿಸುವೆನು. ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸು ವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ಮೇಯಿಸುವೆನು.
16 A perdida buscarei, a desgarrada tornarei a trazer, a quebrada ligarei e a enferma fortalecerei; mas a gorda e a forte destruirei; apascentá-las-ei com justiça.
17 ನಿಮಗೆ ಓ ನನ್ನ ಮಂದೆಯೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ದನಗಳ ಪಶುಗಳ ನಡುವೆ ಮತ್ತು ಟಗರುಗಳ ಹೋತಗಳ ನಡುವೆ ನಾನು ನ್ಯಾಯತೀರಿಸುವೆನು.
17 Quanto a vós outras, ó ovelhas minhas, assim diz o Senhor Deus: Eis que julgarei entre ovelhas e ovelhas, entre carneiros e bodes.
18 ಒಳ್ಳೇಯ ಮೇವನ್ನು ಚೆನ್ನಾಗಿ ಮೇದು ಮಿಕ್ಕ ಮೇವನ್ನು ತುಳಿದು ಕಸಮಾಡಿದ್ದು ಅಲ್ಪಕಾರ್ಯವೋ? ಮತ್ತು ತಿಳಿ ನೀರನ್ನು ಕುಡಿದು ಮಿಕ್ಕಿದ್ದನ್ನು ಕಾಲಿನಿಂದ ಕಲಕಿ ಬದಿ ಮಾಡಿದ್ದು ಸಣ್ಣ ಕೆಲಸವೋ?
18 Acaso, não vos basta a boa pastagem? Haveis de pisar aos pés o resto do vosso pasto? E não vos basta o terdes bebido as águas claras? Haveis de turvar o resto com os pés?
19 ನನ್ನ ಮಂದೆಗಳಾದರೋ ನಿಮ್ಮ ಕಾಲಲ್ಲಿ ಕಸಮಾಡಿದ್ದನ್ನು ತಿನ್ನುವವು; ನಿನ್ನ ಕಾಲಿನಿಂದ ಕಲಕಿ ಬದಿಯಾದದ್ದನ್ನೇ ಕುಡಿಯುವವು.
19 Quanto às minhas ovelhas, elas pastam o que haveis pisado com os pés e bebem o que haveis turvado com os pés.
20 ಆದದರಿಂದ ದೇವರಾದ ಕರ್ತನು ನಿಮಗೆ ಹೀಗೆ ಹೇಳುತ್ತಾನೆ-- ಇಗೋ, ನಾನು, ನಾನೇ ಕೊಬ್ಬಿದ ದನಕ್ಕೂ ಮತ್ತು ಬಡಕಲಾದ ದನಕ್ಕೂ ನಡುವೆ ನ್ಯಾಯತೀರಿಸುತ್ತೇನೆ.
20 Por isso, assim lhes diz o Senhor Deus: Eis que eu mesmo julgarei entre ovelhas gordas e ovelhas magras.
21 ನೀವು ಅವುಗಳನ್ನು ಪಕ್ಕೆ ಮತ್ತು ಹೆಗಲುಗಳಿಂದ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಮಂದೆಯನ್ನು ದೂರ ಚದುರಿಸಿ ಬಿಟ್ಟಿರಿ.
21 Visto que, com o lado e com o ombro, dais empurrões e, com os chifres, impelis as fracas até as espalhardes fora,
22 ಆದದರಿಂದ ನಾನು ನನ್ನ ಮಂದೆಯನ್ನು ಕಾಪಾಡುತ್ತೇನೆ; ಅವು ಎಂದೆಂದೂ ಕೊಳ್ಳೆಯಾಗು ವದಿಲ್ಲ; ನಾನು ದನಗಳ ಮತ್ತು ಪಶುಗಳ ಮಧ್ಯೆ ನ್ಯಾಯತೀರಿಸುವೆನು.
22 eu livrarei as minhas ovelhas, para que já não sirvam de rapina, e julgarei entre ovelhas e ovelhas.
23 ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.
23 Suscitarei para elas um só pastor, e ele as apascentará; o meu servo Davi é que as apascentará; ele lhes servirá de pastor.
24 ಕರ್ತನಾದ ನಾನೇ ಅವುಗಳಿಗೆ ದೇವರಾಗಿರುವೆನು; ಮತ್ತು ನನ್ನ ಸೇವಕನಾದ ದಾವೀದನು ಅವುಗಳ ಮಧ್ಯೆ ಪ್ರಧಾನನಾಗಿರುವನೆಂದು ಕರ್ತನಾದ ನಾನೇ ಅದನ್ನು ಮಾತಾಡಿದ್ದೇನೆ;
24 Eu, o Senhor , lhes serei por Deus, e o meu servo Davi será príncipe no meio delas; eu, o Senhor , o disse.
25 ಅವರ ಸಂಗಡ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಕೆಟ್ಟ ಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು; ಅವರು ನಿರ್ಭಯವಾಗಿ ಅರಣ್ಯಗಳಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು.
25 Farei com elas aliança de paz e acabarei com as bestas-feras da terra; seguras habitarão no deserto e dormirão nos bosques.
26 ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿ ಸುವೆನು, ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯಾಗುವದು;
26 Delas e dos lugares ao redor do meu outeiro, eu farei bênção; farei descer a chuva a seu tempo, serão chuvas de bênçãos.
27 ಬಯಲಿನ ಮರವು ಅದರ ಫಲವನ್ನು ಕೊಡುವದು, ಭೂಮಿಯು ಅದರ ಆದಾಯವನ್ನು ಕೊಡುವದು, ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು; ನಾನೇ ಅದರ ನೊಗದ ಬಂಧನಗಳನ್ನು ಬಿಡಿಸಿ ಅವರಿಂದ ಸೇವೆ ಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು;
27 As árvores do campo darão o seu fruto, e a terra dará a sua novidade, e estarão seguras na sua terra; e saberão que eu sou o Senhor , quando eu quebrar as varas do seu jugo e as livrar das mãos dos que as escravizavam.
28 ಅವರು ಇನ್ನು ಮೇಲೆ ಅನ್ಯಜನಾಂಗಗಳಿಗೆ ಕೊಳ್ಳೆಯಾಗು ವದಿಲ್ಲ; ಭೂಮಿಯ ಮೃಗಗಳು ಅವರನ್ನು ತಿನ್ನುವದಿಲ್ಲ; ಯಾರೂ ಅವರನ್ನು ಹೆದರಿಸುವವರಿಲ್ಲದೆ ನಿರ್ಭಯ ವಾಗಿ ವಾಸಿಸುವರು.
28 Já não servirão de rapina aos gentios, e as feras da terra nunca mais as comerão; e habitarão seguramente, e ninguém haverá que as espante.
29 ನಾನು ಅವರಿಗಾಗಿ ಒಂದು ಪ್ರಸಿದ್ಧ ಫಲವೃಕ್ಷವನ್ನು ಬೆಳೆಯಿಸುವೆನು; ಇನ್ನು ಮೇಲೆ ಅವರು ದೇಶದಲ್ಲಿ ಹಸಿವೆಯಿಂದ ನಾಶವಾ ಗುವದಿಲ್ಲ; ಅವರು ಅನ್ಯಜನರ ತಿರಸ್ಕಾರಕ್ಕೆ ಇನ್ನು ಮೇಲೆ ಗುರಿಯಾಗುವದೇ ಇಲ್ಲ.
29 Levantar-lhes-ei plantação memorável, e nunca mais serão consumidas pela fome na terra, nem mais levarão sobre si o opróbrio dos gentios.
30 ಆಗ ಅವರು ತಮ್ಮ ಕರ್ತನಾದ ದೇವರೆಂಬ ನಾನೇ ಅವರ ಸಂಗಡ ಇರುವೆನೆಂದೂ ಇಸ್ರಾಯೇಲಿನ ಮನೆತನದವರಾದ ಅವರೇ ನನ್ನ ಜನರಾಗಿರುವರೆಂದೂ ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
30 Saberão, porém, que eu, o Senhor , seu Deus, estou com elas e que elas são o meu povo, a casa de Israel, diz o Senhor Deus.
31 ನನ್ನ ಕುರಿಗಳೂ ನನ್ನ ಮೇವಿನ ಮಂದೆಯೂ ಆಗಿರುವ ನೀವು ನರಪ್ರಾಣಿಗಳು. ನಾನು ನಿಮ್ಮ ದೇವರು ಎಂದು ದೇವರಾದ ಕರ್ತನು ಹೇಳುತ್ತಾನೆ.
31 Vós, pois, ó ovelhas minhas, ovelhas do meu pasto; homens sois, mas eu sou o vosso Deus, diz o Senhor Deus.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Ezequiel 34, comparar traduções ou montar um estudo — tudo direto pelo WhatsApp.