Ezequiel 43
Kannada Bible (GL_KANNADA) vs ARIB
ARIB Almeida Revisada Imprensa Bíblica
1 ಆ ಮೇಲೆ ಅವನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾದ ಬಾಗಲಿಗೆ ಕರೆದು ಕೊಂಡು ಹೋದನು;
1 Então me levou à porta, à porta que dá para o oriente.
2 ಇಗೋ, ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವ ಮಾರ್ಗವಾಗಿ ಬಂದಿತು, ಆತನ ಧ್ವನಿಯು ಬಹು ನೀರುಗಳ ಶಬ್ಧದಂತೆ ಇತ್ತು; ಭೂಮಿಯು ಆತನ ಮಹಿಮೆಯಿಂದ ಪ್ರಕಾ ಶಿಸುತ್ತಿತ್ತು.
2 E eis que a glória do Deus de Israel vinha do caminho do oriente; e a sua voz era como a voz de muitas águas, e a terra resplandecia com a glória dele.
3 ಇದು, ನಾನು ನೋಡಿದ ದರ್ಶನದ ತೋರ್ವಿಕೆಯ ಪ್ರಕಾರ ಇತ್ತು ನಾನು ಪಟ್ಟಣವನ್ನು ನಾಶಮಾಡುವದಕ್ಕೆ ಬಂದಾಗ ನೋಡಿದ ಆ ದರ್ಶನದ ಹಾಗೆಯೇ ಇತ್ತು; ನಾನು ಕೇಬಾರ್ ನದಿಯ ದಡದ ಮೇಲೆ ನೋಡಿದ ದರ್ಶನಗಳ ಹಾಗೆ ಇತ್ತು; ಆಗ ನಾನು ಬೋರಲು ಬಿದ್ದೆನು.
3 E a aparência da visão que tive era como a da visão que eu tivera quando ele veio destruir a cidade; eram as visões como a que tive junto ao rio Quebar; e caí com o rosto em terra.
4 ಆಗ ಕರ್ತನ ಮಹಿಮೆಯು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಲಿನ ಮಾರ್ಗವಾಗಿ ಆಲಯದೊಳಗೆ ಪ್ರವೇಶಿ ಸಿತು.
4 E a glória do Senhor entrou no templo pelo caminho da porta oriental.
5 ಆಗ ಆತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆ ತಂದಿತು; ಇಗೋ, ಕರ್ತನ ಮಹಿಮೆ ಯಿಂದ ಆಲಯವು ತುಂಬಿಕೊಂಡಿತ್ತು.
5 E levantou-me o Espírito, e me levou ao átrio interior; e eis que a glória do Senhor encheu o templo.
6 ನಾನು ಆಲಯದೊಳಗಿಂದ ನನ್ನ ಸಂಗಡ ಮಾತನಾಡುವದನ್ನು ಕೇಳಿದೆನು; ಆ ಪುರುಷನು ನನ್ನ ಬಳಿಯಲ್ಲಿಯೇ ನಿಂತಿ ದ್ದನು.
6 Então ouvi uma voz que me foi direita de dentro do templo; e um homem se achava de pé junto de mim.
7 ಆತನು ನನಗೆ--ಮನುಷ್ಯಪುತ್ರನೇ, ನನ್ನ ಸಿಂಹಾಸನದ ಸ್ಥಳವನ್ನೂ ಅಂಗಾಲುಗಳ ಸ್ಥಳವನ್ನೂ ಮತ್ತು ನಾನು ಇಸ್ರಾಯೇಲಿನ ಮಕ್ಕಳ ಮಧ್ಯದಲ್ಲಿ ನಿತ್ಯವಾಗಿ ವಾಸವಾಗಿರುವ ಸ್ಥಳವನ್ನೂ ನನ್ನ ಪರಿಶುದ್ಧ ಹೆಸರನ್ನೂ ಇಸ್ರಾಯೇಲಿನ ಮನೆತನದವರೂ ಅಂದರೆ ಅವರಾದರೂ ಅವರ ಅರಸರಾದರೂ ತಮ್ಮ ವ್ಯಭಿಚಾರ ದಿಂದಲೂ ಎತ್ತರ ಸ್ಥಳಗಳಲ್ಲಿರುವ ಅವರ ಅರಸರ ಹೆಣಗಳಿಂದಲೂ ಇನ್ನು ಮೇಲೆ ಅಪವಿತ್ರಮಾಡುವ ದಿಲ್ಲ.
7 E disse-me: Filho do homem, este é o lugar do meu trono, e o lugar das plantas dos meus pés, onde habitarei no meio dos filhos de Israel para sempre; e os da casa de Israel não contaminarão mais o meu nome santo, nem eles nem os seus reis, com as suas prostituições e com os cadáveres dos seus reis, nos seus altos,
8 ಅವರು ತಮ್ಮ ಹೊಸ್ತಿಲನ್ನು ನನ್ನ ಹೊಸ್ತಿಲುಗಳ ಬಳಿಯಲ್ಲಿಯೂ ತಮ್ಮ ಕಂಬಗಳನ್ನು ನನ್ನ ಕಂಬಗಳ ಬಳಿಯಲ್ಲಿಯೂ ಇಟ್ಟು ನನಗೂ ಅವರಿಗೂ ಮಧ್ಯೆ ಗೋಡೆಯನ್ನು ಹಾಕಿದ್ದರಿಂದಲೂ ಅವರು ತಾವು ಮಾಡಿರುವ ಅಸಹ್ಯಗಳಿಂದ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡಿದ್ದಾರೆ; ಆದಕಾರಣ ನಾನು ನನ್ನ ಕೋಪದಲ್ಲಿ ಅವರನ್ನು ಮುಗಿಸಿ ಬಿಟ್ಟಿದ್ದೇನೆ.
8 pondo o seu limiar ao pé do meu limiar, e os seus umbrais junto aos meus umbrais, e havendo apenas um muro entre mim e eles. Contaminaram o meu santo nome com as abominações que têm cometido; por isso eu os consumi na minha ira.
9 ಈಗ ಅವರು ಅವರ ವ್ಯಭಿಚಾರವನ್ನು ಮತ್ತು ಅವರ ಅರಸರ ಹೆಣಗಳನ್ನು ನನ್ನಿಂದ ದೂರವಾಗಿಡಲಿ, ನಾನು ಅವರ ಮಧ್ಯದಲ್ಲಿ ಎಂದೆಂದಿಗೂ ವಾಸಿಸುತ್ತೇನೆ ಅಂದನು.
9 Agora lancem eles para longe de mim a sua prostituição e os cadáveres dos seus reis; e habitarei no meio deles para sempre.
10 ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರಿಗೆ ಈ ಮನೆಯನ್ನು ತೋರಿಸು ಅವರು ತಮ್ಮ ಅಕ್ರಮಗಳ ನಿಮಿತ್ತವಾಗಿ ನಾಚಿಕೆಪಡುವರು ಮತ್ತು ಅವರು ಮಾದರಿಯನ್ನು ಅಳೆಯಲಿ.
10 Tu pois, ó filho do homem, mostra aos da casa de Israel o templo, para que se envergonhem das suas iniqüidades; e meçam o modelo.
11 ಅವರು ಮಾಡಿದ್ದಕ್ಕಾಗಿ ನಾಚಿಕೆಪಟ್ಟರೆ ಮನೆಯ ರೂಪವನ್ನೂ ಆಕಾರವನ್ನೂ ಹೊರಡೋಣ ಬರೋಣಗಳನ್ನು ಅದರ ಎಲ್ಲಾ ನಿಯಮಗಳನ್ನೂ ಅದರ ಎಲ್ಲಾ ನ್ಯಾಯಪ್ರಮಾಣ ಗಳನ್ನ್ನೂ ಅವರಿಗೆ ತೋರಿಸು; ಅದರ ಎಲ್ಲಾ ನಿಯಮ ಗಳನ್ನೂ ಕೈಗೊಂಡು ಅವರು ಅವುಗಳನ್ನು ಮಾಡುವ ಹಾಗೆ ಅವರ ದೃಷ್ಟಿಯಲ್ಲಿಯೇ ಅವುಗಳನ್ನು ಬರೆ,
11 E se eles se envergonharem de tudo quanto têm feito, faze-lhes saber a forma desta casa, a sua figura, as suas saídas e as suas entradas, e todas as suas formas; todas as suas ordenanças e todas as suas leis; escreve isto à vista deles, para que guardem toda a sua forma, e todas as suas ordenanças e as cumpram.
12 ಇದು ಆ ಆಲಯದ ನ್ಯಾಯಪ್ರಮಾಣವಾಗಿದೆ --ಆ ಪರ್ವತದ ಮೇಲೆಯೂ ಅದರ ಸುತ್ತಲೂ ನಿಗದಿಪಡಿಸಿದವರೆಗೂ ಎಲ್ಲವೂ ಅತ್ಯಂತ ಪರಿಶುದ್ಧ ವಾಗಿದೆ. ಇಗೋ, ಇದೇ ಆ ಆಲಯದ ನ್ಯಾಯ ಪ್ರಮಾಣವಾಗಿದೆ.
12 Esta é a lei do templo: Sobre o cume do monte todo o seu contorno em redor será santíssimo. Eis que essa é a lei do templo.
13 ಈ ಯಜ್ಞವೇದಿಯ ಅಳತೆಗಳು ಮೊಳದ ಪ್ರಕಾರವೇ ಇವೆ; ಮೊಳ ಅಂದರೆ ಮೊಳದ ಮೇಲೆ ಒಂದು ಹಿಡಿ ಉದ್ದ; ಕೆಳಭಾಗದ ಎತ್ತರವು ಒಂದು ಮೊಳ, ಮೇಲಿನ ಕೈ ಅಗಲದಷ್ಟು ಅಂಚಿನ ಉದ್ದವು ಸುತ್ತಲೂ ಒಂದು ಮೊಳ, ಅಂಚಿನ ತುದಿಯಲ್ಲಿ; ಸುತ್ತಲೂ ದಿಂಡಿನ ಅಗಲವು ಒಂದು ಮೊಳ; ಇದೇ ಯಜ್ಞವೇದಿಯ ಉನ್ನತ ಸ್ಥಳ.
13 São estas as medidas do altar em côvados {o côvado é um côvado e um palmo}: a parte inferior será de um côvado de altura e um côvado de largura, e a sua borda, junto a sua extremidade ao redor, de um palmo; e esta será a base do altar.
14 ನೆಲದ ತಳದಿಂದ ಕೆಳಗಿನ ಅಡಿಯ ವರೆಗೂ ಎರಡು ಮೊಳವಿತ್ತು, ಅಗಲ ಒಂದು ಮೊಳ; ಸಣ್ಣಅಂಚು ಮೊದಲುಗೊಂಡು ದೊಡ್ಡ ಅಂಚಿನವರೆಗೂ ನಾಲ್ಕು ಮೊಳ ಮತ್ತು ಅಗಲವು ಒಂದು ಮೊಳ.
14 E do fundo, desde o chão até a saliência de baixo, será de dois côvados, e de largura um côvado; e desde a pequena saliência até a saliência grande será de quatro côvados, e a largura de um côvado.
15 ಈ ಪ್ರಕಾರ ಯಜ್ಞವೇದಿಯು ನಾಲ್ಕು ಮೊಳವಾಗಿಯೂ; ಯಜ್ಞವೇದಿಯಿಂದ ಮೇಲಕ್ಕೆ ನಾಲ್ಕು ಕೊಂಬುಗಳುಳ್ಳದ್ದಾಗಿಯೂ ಇರ ಬೇಕು.
15 E o altar superior será de quatro côvados; e da lareira do altar para cima se levantarão quatro pontas.
16 ಯಜ್ಞವೇದಿಯ ಉದ್ದವು ಹನ್ನೆರಡು ಮೊಳ, ಅಗಲ ಹನ್ನೆರಡು ಮೊಳ ನಾಲ್ಕು ಕಡೆಯ ಚೌಕಗಳು ಚಚ್ಚೌಕವಾಗಿರಬೇಕು.
16 E a lareira do altar terá doze côvados de comprimento, e doze de largura, quadrado nos quatro lados.
17 ಅದರ ಅಂಚು ನಾಲ್ಕೂ ಕಡೆಗೆ ಹದಿನಾಲ್ಕು ಮೊಳ ಉದ್ದವಾಗಿಯೂ; ಹದಿ ನಾಲ್ಕು ಮೊಳ ಅಗಲವಾಗಿಯೂ ಅದರ ಸುತ್ತಲಿರುವ ಮೇರೆಯು ಅರ್ಧ ಮೊಳವಾಗಿಯೂ ತಳವು ಒಂದು ಮೊಳವಾಗಿಯೂ ಇರಬೇಕು; ಮೆಟ್ಟಲುಗಳು ಪೂರ್ವ ದಿಕ್ಕಿಗೆ ಎದುರಾಗಿರಬೇಕು.
17 E a saliência terá catorze côvados de comprimento e catorze de largura, nos seus quatro lados; e a borda, ao redor dela, será de meio côvado; e o fundo dela será de um côvado, ao redor; e os seus degraus darão para o oriente.
18 ಅವನು ನನಗೆ ಹೇಳಿದ್ದೇನಂದರೆ--ಮನುಷ್ಯ ಪುತ್ರನೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಯಜ್ಞವೇದಿಯನ್ನು ಮಾಡುವ ದಿನದಲ್ಲಿ ಅದರ ಮೇಲೆ ದಹನಬಲಿಗಳನ್ನು ಅರ್ಪಿಸಿ ರಕ್ತವನ್ನು ಚಿಮುಕಿಸಬೇಕು; ಇವು ಅಲ್ಲಿನ ನಿಯಮಗಳಾಗಿವೆ.
18 E disse-me: Filho do homem, assim diz o Senhor Deus: São estas as ordenanças para o altar, no dia em que o fizerem, para oferecerem sobre ele holocausto e para espargirem sobre ele sangue.
19 ದೇವರಾದ ಕರ್ತನು ಹೇಳುವದೇನಂದರೆ--ನನಗೆ ಸೇವೆಮಾಡುವದಕ್ಕಾಗಿ ನನ್ನ ಬಳಿಗೆ ಸವಿಾಪಿಸುವ ಚಾದೋಕನ ವಂಶದವರಾದ ಯಾಜಕರಿಗೂ ಲೇವಿಯವರಿಗೂ ಪಾಪದ ಬಲಿಗಾಗಿ ಎಳೇ ಹೊರಿಯನ್ನು ಕೊಡಬೇಕು.
19 Aos sacerdotes levitas que são da linhagem de Zadoque, os quais se chegam a mim para me servirem, diz o Senhor Deus, darás um bezerro para oferta pelo pecado.
20 ಅದರ ರಕ್ತವನ್ನು ತೆಗೆದುಕೊಂಡು ಅದರ ನಾಲ್ಕು ಕೊಂಬುಗಳ ಅಂಚಿನ ನಾಲ್ಕು ಮೂಲೆಗಳಿಗೂ ಸುತ್ತಲೂ ಹಚ್ಚಿ ಶುದ್ಧಪಡಿಸಿ ದೋಷ ಪರಿಹರಿಸಬೇಕು.
20 E tomarás do seu sangue, e o porás sobre as quatro pontas do altar, sobre os quatro cantos da saliência e sobre a borda ao redor; assim o purificarás e os expiarás.
21 ಇದಲ್ಲದೆ ನೀನು ಹೋರಿ ಯನ್ನು ಸಹ ಪಾಪದ ಅರ್ಪಣೆಗೆ ತೆಗೆದುಕೊಂಡು ಆಲಯದ ನೇಮಕವಾದ ಪರಿಶುದ್ಧ ಸ್ಥಳದಲ್ಲಿ ಹೊರಗೆ ಸುಡಬೇಕು.
21 Então tomarás o novilho da oferta pelo pecado, o qual será queimado no lugar da casa para isso ordenado, fora do santuário.
22 ಎರಡನೇ ದಿನದಲ್ಲಿ ದೋಷವಿಲ್ಲದ ಮೇಕೆಯ ಮರಿಯನ್ನೂ ಪಾಪ ಬಲಿಯಾಗಿ ಅರ್ಪಿಸ ಬೇಕು; ಅವರು ಯಜ್ಞವೇದಿಯನ್ನು ಹೋರಿಯಿಂದ ಶುದ್ಧಮಾಡಿದ ಹಾಗೆ ಶುದ್ಧಮಾಡಬೇಕು.
22 E no segundo dia oferecerás um bode, sem mancha, para oferta pelo pecado; e purificarão o altar, como o purificaram com o novilho.
23 ಹೀಗೆ ಅವರು ಶುದ್ಧ ಮಾಡಿದಾಗ ಕೊನೆಯಲ್ಲಿ ದೋಷ ವಿಲ್ಲದ ಒಂದು ಪ್ರಾಯದ ಹೋರಿಯನ್ನೂ ಪೂರ್ಣಾಂಗವಾದ ಮಂದೆಯೊಳಗಿರುವ ಒಂದು ಟಗರನ್ನೂ ಅರ್ಪಿಸಬೇಕು.
23 Quando acabares de o purificar, oferecerás um bezerro, sem mancha, e um carneiro do rebanho, sem mancha.
24 ನೀನು ಅವುಗಳನ್ನು ಕರ್ತನ ಮುಂದೆ ಅರ್ಪಿಸಬೇಕು; ಯಾಜಕರು ಅವುಗಳ ಮೇಲೆ ಉಪ್ಪನ್ನು ಹಾಕಿ ಅವುಗಳನ್ನು ಕರ್ತನಿಗೆ ದಹನಬಲಿಯಾಗಿ ಅರ್ಪಿಸಬೇಕು.
24 Trá-los-ás, pois, perante o Senhor; e os sacerdotes deitarão sal sobre eles, e os oferecerão em holocausto ao Senhor.
25 ಏಳು ದಿನಗಳ ತನಕ ಪ್ರತಿ ದಿನವೂ ನೀನು ಪಾಪ ಬಲಿಗಾಗಿ ಮೇಕೆಯನ್ನು ಸಿದ್ಧಮಾಡಬೇಕು ಮತ್ತು ಪೂರ್ಣಾಂಗ ವಾದ ಪ್ರಾಯದ ಹೋರಿಯನ್ನೂ ಮಂದೆಯೊಳಗಿನ ಟಗರನ್ನೂ ಸಿದ್ದಮಾಡಬೇಕು.
25 Durante sete dias prepararás cada dia um bode como oferta pelo pecado; também prepararão eles um bezerro, e um carneiro do rebanho, sem mancha.
26 ಏಳು ದಿನಗಳ ತನಕ ಅವರು ಯಜ್ಞವೇದಿಯನ್ನು ಶುದ್ಧಮಾಡಿ ತಮ್ಮನ್ನು ತಾವೇ ಪ್ರತಿಷ್ಠಿಸಿಕೊಳ್ಳಬೇಕು.
26 Por sete dias expiarão o altar, e o purificarão; assim o consagrarão.
27 ಈ ದಿನಗಳು ತೀರಿದಾಗ ಎಂಟನೇ ದಿನದ ತರುವಾಯ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಸಮಾಧಾನದ ಬಲಿಗಳನ್ನೂ ಕೊಡುವರು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
27 E, cumprindo eles estes dias, será que, ao oitavo dia, e dali em diante, os sacerdotes oferecerão sobre o altar os vossos holocaustos e as vossas ofertas pacíficas; e vos aceitarei, diz o Senhor Deus.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Ezequiel 43, comparar traduções ou montar um estudo — tudo direto pelo WhatsApp.