Gênesis 46
Kannada Bible (GL_KANNADA) vs ARIB
ARIB Almeida Revisada Imprensa Bíblica
1 ಇಸ್ರಾಯೇಲನು ತನಗಿದ್ದದ್ದನ್ನೆಲ್ಲಾ ತಕ್ಕೊಂಡು ಬೇರ್ಷೆಬಕ್ಕೆ ಬಂದು ತನ್ನ ತಂದೆಯಾದ ಇಸಾಕನ ದೇವರಿಗೆ ಬಲಿಗಳನ್ನು ಅರ್ಪಿಸಿ ದನು.
1 Partiu, pois, Israel com tudo quanto tinha e veio a Beer-Seba, onde ofereceu sacrifícios ao Deus de seu pai Isaque.
2 ದೇವರು ಇಸ್ರಾಯೇಲನಿಗೆ ರಾತ್ರಿ ದರ್ಶನ ದಲ್ಲಿ ಮಾತನಾಡಿ--ಯಾಕೋಬನೇ, ಯಾಕೋಬನೇ ಅಂದನು. ಅದಕ್ಕವನು--ಇಗೋ, ಇದ್ದೇನೆ ಅಂದನು.
2 Falou Deus a Israel em visões de noite, e disse: Jacó, Jacó! Respondeu Jacó: Eis-me aqui.
3 ಆತನು ಅವನಿಗೆ--ನಿನ್ನ ತಂದೆಯ ದೇವರಾಗಿರುವ ದೇವರು ನಾನೇ. ನೀನು ಐಗುಪ್ತಕ್ಕೆ ಇಳಿದು ಹೋಗು ವದಕ್ಕೆ ಭಯಪಡಬೇಡ; ಯಾಕಂದರೆ ಅಲ್ಲಿ ನಾನು ನಿನ್ನನ್ನು ದೊಡ್ಡಜನಾಂಗವಾಗ ಮಾಡುವೆನು.
3 E Deus disse: Eu sou Deus, o Deus de teu pai; não temas descer para o Egito; porque eu te farei ali uma grande nação.
4 ನಾನು ನಿನ್ನ ಸಂಗಡ ಐಗುಪ್ತಕ್ಕೆ ಹೋಗುವೆನು. ನಾನೇ ನಿಶ್ಚಯವಾಗಿ ನಿನ್ನನ್ನು ಮೇಲಕ್ಕೆ (ಕಾನಾನಿಗೆ) ತಿರಿಗಿ ಬರಮಾಡುವೆನು. ಯೋಸೇಫನು ನಿನ್ನ ಕಣ್ಣುಗಳ ಮೇಲೆ ತನ್ನ ಕೈ ಇಡುವನು ಅಂದನು.
4 Eu descerei contigo para o Egito, e certamente te farei tornar a subir; e José porá a sua mão sobre os teus olhos.
5 ಆಗ ಯಾಕೋಬನು ಎದ್ದು ಬೇರ್ಷೆಬದಿಂದ ಹೊರಟನು. ಇಸ್ರಾಯೇಲನ ಮಕ್ಕಳು ತಮ್ಮ ತಂದೆಯಾದ ಯಾಕೋಬನನ್ನೂ ತಮ್ಮ ಚಿಕ್ಕವರನ್ನೂ ತಮ್ಮ ಹೆಂಡತಿಯರನ್ನೂ ಫರೋಹನು ಕಳುಹಿಸಿದ ಬಂಡಿಗಳ ಮೇಲೆ ಏರಿಸಿಕೊಂಡು ಹೋದರು.
5 Então Jacó se levantou de Beer-Seba; e os filhos de Israel levaram seu pai Jacó, e seus meninos, e as suas mulheres, nos carros que Faraó enviara para o levar.
6 ಅವರು ತಮ್ಮ ದನಗಳನ್ನೂ ಕಾನಾನ್ ದೇಶದಲ್ಲಿ ತಾವು ಸಂಪಾದಿಸಿದ ತಮ್ಮ ಸಂಪತ್ತನ್ನೂ ತಕ್ಕೊಂಡು ಐಗುಪ್ತಕ್ಕೆ ಬಂದರು. ಯಾಕೋಬನು ತನ್ನ ಎಲ್ಲಾ ಸಂತತಿಯೊಂದಿಗೆ ಬಂದನು.
6 Também tomaram o seu gado e os seus bens que tinham adquirido na terra de Canaã, e vieram para o Egito, Jacó e toda a sua descendência com ele.
7 ತನ್ನ ಕುಮಾರ ರನ್ನೂ ಕುಮಾರರ ಕುಮಾರರನ್ನೂ ಕುಮಾರ್ತೆಯರನ್ನೂ ಕುಮಾರರ ಕುಮಾರ್ತೆಯರನ್ನೂ ಅಂತೂ ತನ್ನ ಸಂತತಿ ಯನ್ನೆಲ್ಲಾ ತನ್ನೊಂದಿಗೆ ಐಗುಪ್ತಕ್ಕೆ ಕರಕೊಂಡು ಬಂದನು.
7 Os seus filhos e os filhos de seus filhos com ele, as suas filhas e as filhas de seus filhos, e toda a sua descendência, levou-os consigo para o Egito.
8 ಐಗುಪ್ತಕ್ಕೆ ಬಂದ ಇಸ್ರಾಯೇಲನ ಮಕ್ಕಳ ಹೆಸರು ಗಳು ಯಾವವಂದರೆ, ಯಾಕೋಬನು ಮತ್ತು ಅವನ ಮಕ್ಕಳು: ಯಾಕೋಬನ ಚೊಚ್ಚಲ ಮಗನಾದ ರೂಬೇ ನನು.
8 São estes os nomes dos filhos de Israel, que vieram para o Egito, Jacó e seus filhos: Rúben, o primogênito de Jacó.
9 ರೂಬೇನನ ಕುಮಾರರು: ಹನೋಕ್ ಫಲ್ಲೂ ಹೆಚ್ರೋನ್ ಕರ್ಮಿ ಎಂಬವರು.
9 E os filhos de Rúben: Hanoque, Palu, Hezrom e Carmi.
10 ಸಿಮೆಯೋನನ ಮಕ್ಕಳು: ಯೆಮೂವೇಲ್ ಯಾವಿಾನ್ ಓಹದ್ ಯಾಕೀನ್ ಚೋಹರ್ ಕಾನಾನ್ಯಳ ಮಗನಾದ ಸೌಲ ಎಂಬವರು.
10 E os filhos de Simeão: Jemuel, Jamim, Oade, Jaquim, Zoar, e Saul, filho de uma mulher cananéia.
11 ಲೇವಿಯ ಮಕ್ಕಳು: ಗೆರ್ಷೋನ್ ಕೆಹಾತ್ ಮೆರಾರೀ ಎಂಬವರು.
11 E os filhos de Levi: Gérsom, Coate e Merári.
12 ಯೆಹೂದನ ಮಕ್ಕಳು: ಏರ್ ಓನಾನ್ ಶೇಲಾಹ ಪೆರೆಚ್ ಜೆರಹ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಹಾಮೂಲ್ ಎಂಬವರು.
12 E os filhos de Judá: Er, Onã, Selá, Pérez e Zerá. Er e Onã, porém, morreram na terra de Canaã. E os filhos de Pérez foram Hezrom e Hamul,
13 ಇಸ್ಸಾಕಾರನ ಮಕ್ಕಳು: ತೋಲಾ ಪುವ್ವಾ ಯೋಬ್ ಶಿಮ್ರೋನ್ ಎಂಬವರು.
13 E os filhos de Issacar: Tola, Puva, Iobe e Sinrom.
14 ಜೆಬು ಲೂನನ ಮಕ್ಕಳು: ಸೆರೆದ್ ಏಲೋನ್ ಯಹ್ಲೇಲ್ ಎಂಬವರು.
14 E os filhos de Zebulom: Serede, Elom e Jaleel.
15 ಇವರು ಲೇಯಳ ಮಕ್ಕಳು. ಆಕೆಯು ಇವರನ್ನೂ ತನ್ನ ಮಗಳಾದ ದೀನಳನ್ನೂ ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹೆತ್ತಳು. ಅವನ ಕುಮಾರರೂ ಕುಮಾರ್ತೆಯರೂ ಎಲ್ಲಾ ಮೂವತ್ತು ಮೂರು ಮಂದಿ.
15 Estes são os filhos de Léia, que ela deu a Jacó em Padã-Arã, além de Diná, sua filha; todas as almas de seus filhos e de suas filhas eram trinta e três.
16 ಗಾದನ ಮಕ್ಕಳು: ಚಿಪ್ಯೋನ್ ಹಗ್ಗೀ ಶೂನೀ ಎಚ್ಬೋನ್ ಏರೀ ಅರೋದೀ ಅರೇಲೀ ಎಂಬವರು.
16 E os filhos de Gade: Zifiom, Hagui, Suni, Ezbom, Eri, Arodi e Areli.
17 ಆಶೇರನ ಮಕ್ಕಳು: ಇಮ್ನಾ ಇಷ್ವಾ ಇಷ್ವೀ ಬೆರೀಗಾ ಅವರ ಸಹೋದರಿಯಾದ ಸೆರಹ; ಬೆರೀಗಾ ಕುಮಾರರು: ಹೆಬೆರ್ ಮಲ್ಕಿಯೇಲ್ ಎಂಬ ವರು.
17 E os filhos de Aser: Imná, Isvá, Isvi e Beria, e Sera, a irmã deles; e os filhos de Beria: Heber e Malquiel.
18 ಲಾಬಾನನು ತನ್ನ ಮಗಳಾದ ಲೇಯಳಿಗೆ ಕೊಟ್ಟ ಜಿಲ್ಪಳ ಮಕ್ಕಳು ಇವರೇ. ಹದಿನಾರು ಮಂದಿಯಾಗಿದ್ದ ಇವರನ್ನು ಆಕೆಯು ಯಾಕೋಬನಿಗೆ ಹೆತ್ತಳು.
18 Estes são os filhos de Zilpa, a qual Labão deu à sua filha Léia; e estes ela deu a Jacó, ao todo dezesseis almas.
19 ಯಾಕೋಬನ ಹೆಂಡತಿಯಾದ ರಾಹೇಲಳ ಕುಮಾರರು: ಯೋಸೇಫ್ ಬೆನ್ಯಾವಿಾನ್ ಎಂಬವರು.
19 Os filhos de Raquel, mulher de Jacó: José e Benjamim.
20 ಯೋಸೇಫನಿಗೆ ಐಗುಪ್ತ ದೇಶದಲ್ಲಿ ಮಕ್ಕಳು ಹುಟ್ಟಿದರು: ಓನಿನ ಯಾಜಕನಾಗಿರುವ ಪೋಟೀಫೆರನ ಮಗಳಾದ ಆಸನತಳು ಮನಸ್ಸೆಯನ್ನೂ ಎಫ್ರಾಯಾಮ ನನ್ನೂ ಅವನಿಗೆ ಹೆತ್ತಳು.
20 E nasceram a José na terra do Egito Manassés e Efraim, que lhe deu Asenate, filha de Potífera, sacerdote de Om.
21 ಬೆನ್ಯಾವಿಾನನ ಕುಮಾ ರರು: ಬಿಳಾ ಬೆಕೆರ್ ಅಶ್ಬೇಲ್ ಗೇರಾ ನಾಮಾನ್ ಏಹೀರೋಷ್ ಮುಪ್ಪೀಮ್ ಹುಪ್ಪೀಮ್ ಆರ್ದ ಎಂಬವರು.
21 E os filhos de Benjamim: Belá, Bequer, Asbel, Gêra, Naamã, Eí, Ros, Mupim, Hupim e Arde.
22 ಇವರು ಯಾಕೋಬನಿಗೆ ಹುಟ್ಟಿದ ರಾಹೇಲಳ ಕುಮಾರರು. ಎಲ್ಲಾ ಕೂಡಿ ಹದಿನಾಲ್ಕು ಮಂದಿ.
22 Estes são os filhos de Raquel, que nasceram a Jacó, ao todo catorze almas.
23 ದಾನನ ಮಗನು ಹುಶೀಮನು.
23 E os filhos de Dã: Husim.
24 ನಫ್ತಾ ಲಿಯ ಕುಮಾರರು: ಯಹೇಲ್ ಗೂನೀ ಯೇಚೆರ್ ಶಿಲ್ಲೇಮ್ ಎಂಬವರು.
24 E os filhos de Naftali: Jazeel, Guni, Jezer e Silém.
25 ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಕೊಟ್ಟಿದ್ದ ಬಿಲ್ಹಳ ಕುಮಾರರು ಇವರಾ ಗಿದ್ದರು. ಇವರನ್ನು ಆಕೆಯು ಯಾಕೋಬನಿಗೆ ಹೆತ್ತಳು. ಇವರು ಎಲ್ಲಾ ಕೂಡಿ ಏಳು ಮಂದಿ.
25 Estes são os filhos de Bila, a qual Labão deu à sua filha Raquel; e estes deu ela a Jacó, ao todo sete almas.
26 ಯಾಕೋಬನ ಕುಮಾರರ ಹೆಂಡತಿಯರ ಹೊರ ತಾಗಿ ಯಾಕೋಬನ ಸಂಗಡ ಐಗುಪ್ತಕ್ಕೆ ಬಂದವರೆಲ್ಲಾ ಅವನಿಂದ ಹುಟ್ಟಿದವರು. ಎಲ್ಲಾ ಕೂಡಿ ಅರವತ್ತಾರು ಜನರು.
26 Todas as almas que vieram com Jacó para o Egito e que saíram da sua coxa, fora as mulheres dos filhos de Jacó, eram todas sessenta e seis almas;
27 ಇದಲ್ಲದೆ ಐಗುಪ್ತದಲ್ಲಿ ಯೋಸೇಫನಿಗೆ ಇಬ್ಬರು ಕುಮಾರರು ಹುಟ್ಟಿದರು. ಯಾಕೋಬನ ಮನೆಯವರಾಗಿ ಐಗುಪ್ತಕ್ಕೆ ಬಂದ ಜನರೆಲ್ಲಾ ಸೇರಿ ಒಟ್ಟು ಎಪ್ಪತ್ತು ಮಂದಿ.
27 e os filhos de José, que lhe nasceram no Egito, eram duas almas. Todas as almas da casa de Jacó, que vieram para o Egito eram setenta.
28 ಇದಲ್ಲದೆ ಗೋಷೆನಿಗೆ ಮಾರ್ಗವನ್ನು ತೋರಿ ಸುವ ಹಾಗೆ ಅವನು ಯೆಹೂದನನ್ನು ತನ್ನ ಮುಂದಾಗಿ ಯೋಸೇಫನ ಬಳಿಗೆ ಕಳುಹಿಸಿದನು. ಅವರು ಗೋಷೆನ್ ದೇಶಕ್ಕೆ ಬಂದರು.
28 Ora, Jacó enviou Judá adiante de si a José, para o encaminhar a Gósen; e chegaram à terra de Gósen.
29 ಆಗ ಯೋಸೇಫನು ತನ್ನ ರಥವನ್ನು ಸಿದ್ಧಮಾಡಿಕೊಂಡು ತನ್ನ ತಂದೆಯಾದ ಇಸ್ರಾಯೇಲನಿಗೆ ಎದುರಾಗಿ ಗೋಷೆನಿಗೆ ಹೋಗಿ ಅವನನ್ನು ಸಂಧಿಸಿ ಅವನ ಕೊರಳನ್ನು ಅಪ್ಪಿಕೊಂಡು ಬಹಳ ಹೊತ್ತಿನ ವರೆಗೆ ಅತ್ತನು.
29 Então José aprontou o seu carro, e subiu ao encontro de Israel, seu pai, a Gósen; e tendo-se-lhe apresentado, lançou-se ao seu pescoço, e chorou sobre o seu pescoço longo tempo.
30 ಆಗ ಇಸ್ರಾಯೇ ಲನು ಯೋಸೇಫನಿಗೆ--ನಾನು ನಿನ್ನ ಮುಖವನ್ನು ಕಂಡು ನೀನು ಇನ್ನೂ ಜೀವದಿಂದಿರುವದನ್ನು ತಿಳು ಕೊಂಡದ್ದರಿಂದ ಸಂತೃಪ್ತನಾಗಿ ಸಾಯುವೆನು ಎಂದು ಹೇಳಿದನು.
30 E Israel disse a José: Morra eu agora, já que tenho visto o teu rosto, pois que ainda vives.
31 ಯೋಸೇಫನು ತನ್ನ ಸಹೋದರರಿಗೂ ತನ್ನ ತಂದೆಯ ಮನೆಯವರಿಗೂ--ನಾನು ಹೋಗಿ ಫರೋಹನಿಗೆ--ಕಾನಾನ್‌ದೇಶದಲ್ಲಿದ್ದ ನನ್ನ ಸಹೋ ದರರೂ ನನ್ನ ತಂದೆಯ ಮನೆಯವರೂ ನನ್ನ ಬಳಿಗೆ ಬಂದಿದ್ದಾರೆ.
31 Depois disse José a seus irmãos, e à casa de seu pai: Eu subirei e informarei a Faraó, e lhe direi: Meus irmãos e a casa de meu pai, que estavam na terra de Canaã, vieram para mim.
32 ಆದರೆ ಆ ಮನುಷ್ಯರು ಕುರಿಕಾಯುವವರು, ಅವರಿಗೆ ಮಂದೆಗಳು ಇವೆ; ತಮ್ಮ ಕುರಿ ದನಗಳನ್ನೂ ತಮಗಿದ್ದದ್ದೆಲ್ಲವನ್ನೂ ತಕ್ಕೊಂಡು ಬಂದಿದ್ದಾರೆ ಎಂದು ಹೇಳುವೆನು.
32 Os homens são pastores, que se ocupam em apascentar gado; e trouxeram os seus rebanhos, o seu gado e tudo o que têm.
33 ಫರೋ ಹನು ನಿಮ್ಮನ್ನು ಕರೆಯಿಸಿ--ನಿಮ್ಮ ಕೆಲಸವೇನು ಎಂದು ಕೇಳುವನು.
33 Quando, pois, Faraó vos chamar e vos perguntar: Que ocupação é a vossa?
34 ಗೋಷೆನ್ ದೇಶದಲ್ಲಿ ವಾಸವಾಗಿರು ವಂತೆ ನೀವು ಅವನಿಗೆ--ಚಿಕ್ಕಂದಿನಿಂದ ಇಂದಿನ ವರೆಗೂ ನಿನ್ನ ದಾಸರಾದ ನಾವೂ ನಮ್ಮ ತಂದೆಗಳೂ ಮಂದೆಯನ್ನು ಕಾಯುವವರಾಗಿದ್ದೇವೆ ಎಂದು ಹೇಳ ಬೇಕು. ಯಾಕಂದರೆ ಕುರಿಕಾಯುವವರೆಲ್ಲಾ ಐಗುಪ್ತ್ಯ ರಿಗೆ ಅಸಹ್ಯವಾಗಿದ್ದಾರೆ ಅಂದನು.
34 respondereis: Nós, teus servos, temos sido pastores de gado desde a nossa mocidade até agora, tanto nós como nossos pais. Isso direis para que habiteis na terra de Gósen; porque todo pastor de ovelhas é abominação para os egípcios.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Gênesis 46, comparar traduções ou montar um estudo — tudo direto pelo WhatsApp.