Gênesis 48
Kannada Bible (GL_KANNADA) vs ARIB
ARIB Almeida Revisada Imprensa Bíblica
1 ಇವುಗಳಾದ ಮೇಲೆ ಒಬ್ಬನು ಯೋಸೇಫನಿಗೆ--ಇಗೋ, ನಿನ್ನ ತಂದೆಯು ಅಸ್ವಸ್ಥ ನಾಗಿದ್ದಾನೆ ಎಂದು ಹೇಳಿದನು. ಆಗ ಅವನು ತನ್ನ ಇಬ್ಬರು ಕುಮಾರರಾದ ಮನಸ್ಸೆಯನ್ನೂ ಎಫ್ರಾಯಾಮ ನನ್ನೂ ಕರಕೊಂಡು ಬಂದನು.
1 Depois destas coisas disseram a José: Eis que teu pai está enfermo. Então José tomou consigo os seus dois filhos, Manassés e Efraim.
2 ಆಗ ಒಬ್ಬನು ಯಾಕೋಬನಿಗೆ--ಇಗೋ, ನಿನ್ನ ಮಗನಾದ ಯೋಸೇ ಫನು ನಿನ್ನ ಬಳಿಗೆ ಬರುತ್ತಾನೆ ಎಂದು ತಿಳಿಸಿದಾಗ ಇಸ್ರಾಯೇಲನು ಚೇತರಿಸಿಕೊಂಡು ಹಾಸಿಗೆಯ ಮೇಲೆ ಕೂತುಕೊಂಡನು.
2 Disse alguém a Jacó: Eis que José, teu olho, vem ter contigo. E esforçando-se Israel, sentou-se sobre a cama.
3 ಆಗ ಯಾಕೋಬನು ಯೋಸೇಫ ನಿಗೆ ಸರ್ವಶಕ್ತನಾದ ದೇವರು ಕಾನಾನ್‌ದೇಶದ ಲೂಜ್ ಎಂಬಲ್ಲಿ ನನಗೆ ಕಾಣಿಸಿಕೊಂಡು ನನ್ನನ್ನು ಆಶೀರ್ವದಿಸಿದನು.
3 E disse Jacó a José: O Deus Todo-Poderoso me apareceu em Luz, na terra de Canaã, e me abençoou,
4 ಆತನು ನನಗೆ--ಇಗೋ, ನಿನ್ನನ್ನು ಅಭಿವೃದ್ಧಿಪಡಿಸಿ ಹೆಚ್ಚಿಸಿ ಜನ ಸಮೂಹವನ್ನಾಗಿ ಮಾಡಿ ನಿನ್ನ ತರುವಾಯ ಹುಟ್ಟುವ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸ್ವಾಸ್ಥ್ಯವಾಗಿ ಕೊಡುತ್ತೇನೆ ಎಂದು ಹೇಳಿದನು.
4 e me disse: Eis que te farei frutificar e te multiplicarei; tornar-te-ei uma multidão de povos e darei esta terra à tua descendência depois de ti, em possessão perpétua.
5 ಈಗ ನಾನು ನಿನ್ನ ಬಳಿಗೆ ಐಗುಪ್ತಕ್ಕೆ ಬರುವ ಮೊದಲು ಐಗುಪ್ತದಲ್ಲಿ ನಿನಗೆ ಹುಟ್ಟಿದ ಇಬ್ಬರು ಕುಮಾರರಾದ ಎಫ್ರಾಯಾಮ್ ಮನಸ್ಸೆಯರು ನನ್ನ ವರು ಮತ್ತು ಅವರು ರೂಬೇನ್ ಸಿಮೆಯೋನ್ ಇವ ರಂತೆ ನನ್ನವರಾಗಿರಬೇಕು.
5 Agora, pois, os teus dois filhos, que nasceram na terra do Egito antes que eu viesse a ti no Egito, são meus: Efraim e Manassés serão meus, como Rúben e Simeão;
6 ಆದರೆ ಅವರ ತರುವಾಯ ನಿನ್ನಿಂದ ಹುಟ್ಟುವ ಸಂತಾನವು ನಿನ್ನದಾಗಿರಲಿ. ಅವರು ತಮ್ಮ ತಮ್ಮ ಬಾಧ್ಯತೆಯಲ್ಲಿ ತಮ್ಮ ಸಹೋದರರ ಹೆಸರುಗಳ ಪ್ರಕಾರ ಕರೆಯಲ್ಪಡಲಿ.
6 mas a prole que tiveres depois deles será tua; segundo o nome de seus irmãos serão eles chamados na sua herança.
7 ನಾನು ಪದ್ದನ್ ಅರಾಮಿನಿಂದ ಬಂದಾಗ ಕಾನಾನ್‌ದೇಶದಲ್ಲಿ ಎಫ್ರಾ ತಿಗೆ ಸ್ವಲ್ಪ ದೂರದಲ್ಲಿರುವಾಗ ರಾಹೇಲಳು ನನ್ನ ಬಳಿಯಲ್ಲಿ ಸತ್ತಳು. ಅಲ್ಲಿ ಅಂದರೆ ಬೇತ್ಲೆಹೇಮೆಂಬ ಎಫ್ರಾತಿನ ಮಾರ್ಗದಲ್ಲಿ ಆಕೆಯನ್ನು ಹೂಣಿಟ್ಟೆನು ಅಂದನು.
7 Quando eu vinha de Padã, morreu-me Raquel no caminho, na terra de Canaã, quando ainda faltava alguma distância para chegar a Efrata; sepultei-a ali no caminho que vai dar a Efrata, isto é, Belém.
8 ಆಗ ಇಸ್ರಾಯೇಲನು ಯೋಸೇಫನ ಮಕ್ಕಳನ್ನು ನೋಡಿ--ಇವರು ಯಾರು ಅಂದನು.
8 Quando Israel viu os filhos de José, perguntou: Quem são estes?
9 ಅದಕ್ಕೆ ಯೋಸೇಫನು ತನ್ನ ತಂದೆಗೆ--ದೇವರು ಈ ಸ್ಥಳದಲ್ಲಿ ನನಗೆ ಕೊಟ್ಟ ನನ್ನ ಕುಮಾರರು ಅಂದನು. ಆಗ ಅವನು ಅವರನ್ನು ನನ್ನ ಬಳಿಗೆ ಕರಕೊಂಡು ಬಾ. ನಾನು ಅವರನ್ನು ಆಶೀರ್ವದಿಸುತ್ತೇನೆ ಅಂದನು.
9 Respondeu José a seu pai: Eles são meus filhos, que Deus me tem dado aqui. Continuou Israel: Traze-mos aqui, e eu os abençoarei.
10 ಆದರೆ ಇಸ್ರಾಯೇಲನು ಮುದುಕನಾಗಿದ್ದದರಿಂದ ಅವನ ಕಣ್ಣುಗಳು ಕಾಣದಷ್ಟು ಮೊಬ್ಬಾಗಿದ್ದವು. ಆಗ ಅವನು ಅವರನ್ನು ಯಾಕೋಬನ ಸವಿಾಪಕ್ಕೆ ತಂದಾಗ ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು.
10 Os olhos de Israel, porém, se tinham escurecido por causa da velhice, de modo que não podia ver. José, pois, fê-los chegar a ele; e ele os beijou e os abraçou.
11 ಇಸ್ರಾಯೇಲನು ಯೋಸೇಫನಿಗೆ--ನಿನ್ನ ಮುಖ ವನ್ನು ನೋಡುವೆನೆಂದು ನಾನು ನೆನಸಲಿಲ್ಲ. ಆದರೆ ಇಗೋ, ನಿನ್ನ ಸಂತಾನವನ್ನು ಸಹ ದೇವರು ನನಗೆ ನೋಡಮಾಡಿದ್ದಾನೆ ಅಂದನು.
11 E Israel disse a José: Eu não cuidara ver o teu rosto; e eis que Deus me fez ver também a tua descendência.
12 ಆಗ ಯೋಸೇಫನು ಅವರನ್ನು ತನ್ನ ಮೊಣಕಾಲುಗಳ ಬಳಿಯಿಂದ ದೂರ ಮಾಡಿ ಅಡ್ಡಬಿದ್ದನು.
12 Então José os tirou dos joelhos de seu pai; e inclinou-se à terra diante da sua face.
13 ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯಾಮನನ್ನೂ ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ ಅವರಿಬ್ಬರನ್ನು ತನ್ನ ತಂದೆಯ ಬಳಿಗೆ ತಂದನು.
13 E José tomou os dois, a Efraim com a sua mão direita, à esquerda de Israel, e a Manassés com a sua mão esquerda, à direita de Israel, e assim os fez chegar a ele.
14 ಆಗ ಇಸ್ರಾಯೇಲನು ತನ್ನ ಬಲಗೈಯನ್ನು ಚಾಚಿ ಚಿಕ್ಕವನಾದ ಎಫ್ರಾಯಾಮನ ತಲೆಯ ಮೇಲೆಯೂ ತನ್ನ ಎಡಗೈಯನ್ನು ಮನಸ್ಸೆಯ ತಲೆಯ ಮೇಲೆಯೂ ಇಟ್ಟನು. ಮನಸ್ಸೆಯು ಹಿರಿಯವನಾಗಿದ್ದರೂ ಬೇಕೆಂದೇ ಅವನು ತನ್ನ ಕೈಗಳನ್ನು ಹಾಗೆ ಇಟ್ಟನು.
14 Mas Israel, estendendo a mão direita, colocou-a sobre a cabeça de Efraim, que era o menor, e a esquerda sobre a cabeça de Manassés, dirigindo as mãos assim propositadamente, sendo embora este o primogênito.
15 ಆಗ ಅವನು ಯೋಸೇಫನನ್ನು ಆಶೀರ್ವದಿಸಿ--ನನ್ನ ತಂದೆಗಳಾದ ಅಬ್ರಹಾಮನೂ ಇಸಾಕನೂ ಯಾವಾತನ ಮುಂದೆ ನಡಕೊಂಡರೋ ಆ ದೇವರೇ, ನಾನು ಹುಟ್ಟಿದಂದಿನಿಂದ ಇಂದಿನ ವರೆಗೆ ನನ್ನನ್ನು ಪೋಷಣೆ ಮಾಡಿದ ದೇವರು,
15 E abençoou a José, dizendo: O Deus em cuja presença andaram os meus pais Abraão e Isaque, o Deus que tem sido o meu pastor durante toda a minha vida até este dia,
16 ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್ ಇಸಾಕ್ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು.
16 o anjo que me tem livrado de todo o mal, abençoe estes mancebos, e seja chamado neles o meu nome, e o nome de meus pois Abraão e Isaque; e multipliquem-se abundantemente no meio da terra.
17 ತನ್ನ ತಂದೆಯು ಎಫ್ರಾಯಾಮನ ತಲೆಯ ಮೇಲೆ ಬಲಗೈ ಇಟ್ಟದ್ದನ್ನು ಯೋಸೇಫನು ನೋಡಿದಾಗ ಅದು ಅವನ ದೃಷ್ಟಿಗೆ ಅಯುಕ್ತವಾಗಿತ್ತು. ಆದದರಿಂದ ಅವನು ತನ್ನ ತಂದೆಯ ಕೈಯನ್ನು ಹಿಡಿದು ಎಫ್ರಾಯಾಮನ ತಲೆಯ ಮೇಲಿಂದ ತೆಗೆದು ಮನಸ್ಸೆಯ ತಲೆಯ ಮೇಲೆ ಇಡುವದಕ್ಕಿದ್ದನು.
17 Vendo José que seu pai colocava a mão direita sobre a cabeça de Efraim, foi-lhe isso desagradável; levantou, pois, a mão de seu pai, para a transpor da cabeça de Efraim para a cabeça de Manassés.
18 ಯೋಸೇಫನು ತನ್ನ ತಂದೆಗೆ--ನನ್ನ ಅಪ್ಪಾ, ಹಾಗಲ್ಲ, ಇವನೇ ಚೊಚ್ಚಲ ಮಗನು. ಇವನ ತಲೆಯ ಮೇಲೆ ಬಲಗೈ ಇಡು ಅಂದನು.
18 E José disse a seu pai: Nãa assim, meu pai, porque este é o primogênito; põe a mão direita sobre a sua cabeça.
19 ಅದಕ್ಕೆ ಅವನ ತಂದೆಯು ಒಪ್ಪದೆ--ನನಗೆ ತಿಳಿಯಿತು, ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವದಲ್ಲದೆ ಅವನು ದೊಡ್ಡವನಾ ಗುವನು. ಆದಾಗ್ಯೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತ ತಿಯು ಜನಾಂಗಗಳ ಸಮೂಹವಾಗುವದು ಅಂದನು.
19 Mas seu pai, recusando, disse: Eu o sei, meu filho, eu o sei; ele também se tornará um povo, ele também será grande; contudo o seu irmão menor será maior do que ele, e a sua descendência se tornará uma multidão de nações.
20 ಹೀಗೆ ಅವನು ಅವರನ್ನು ಆ ದಿನದಲ್ಲಿ ಆಶೀರ್ವ ದಿಸಿ--ನಿನ್ನಲ್ಲಿ ಇಸ್ರಾಯೇಲ್ ಆಶೀರ್ವದಿಸಲ್ಪಡು ವದು. ಎಫ್ರಾಯಾಮ್ ಮನಸ್ಸೆಯರ ಹಾಗೆ ದೇವರು ನಿನ್ನನ್ನು ಮಾಡಲೆಂದು ಹೇಳುವ ಹೇಳಿಕೆಯಾಗುವದು ಎಂದು ಹೇಳಿ ಎಫ್ರಾಯಾಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು.
20 Assim os abençoou naquele dia, dizendo: Por ti Israel abençoará e dirá: Deus te faça como Efraim e como Manassés. E pôs a Efraim diante de Manassés.
21 ಆಗ ಇಸ್ರಾಯೇಲನು ಯೋಸೇಫನಿಗೆ--ಇಗೋ, ನಾನು ಸಾಯುತ್ತೇನೆ; ಆದರೆ ದೇವರು ನಿಮ್ಮ ಸಂಗಡವಿದ್ದು ನಿಮ್ಮನ್ನು ನಿಮ್ಮ ತಂದೆಗಳ ದೇಶಕ್ಕೆ ಮತ್ತೆ ಸೇರಿಸುವನು.
21 Depois disse Israel a José: Eis que eu morro; mas Deus será convosco, e vos fará tornar para a terra de vossos pais.
22 ಇದಲ್ಲದೆ ನಾನು ನನ್ನ ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಕ್ಕೊಂಡ ಒಂದು ಪಾಲನ್ನು ನಿನ್ನ ಸಹೋದರರಿಗಿಂತ ಹೆಚ್ಚಾಗಿ ನಿನಗೆ ಕೊಟ್ಟಿದ್ದೇನೆ ಅಂದನು.
22 E eu te dou um pedaço de terra a mais do que a teus irmãos, o qual tomei com a minha espada e com o meu arco da mão dos amorreus.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Gênesis 48, comparar traduções ou montar um estudo — tudo direto pelo WhatsApp.