Gênesis 50
Kannada Bible (GL_KANNADA) vs ARC
ARC Almeida Revista e Corrigida 2009
1 ಆಗ ಯೋಸೇಫನು ತನ್ನ ತಂದೆಯ ಮುಖದ ಮೇಲೆ ಬಿದ್ದು ಅತ್ತು ಅವನಿಗೆ ಮುದ್ದಿಟ್ಟನು.
1 Então, José se lançou sobre o rosto de seu pai, e chorou sobre ele, e o beijou.
2 ಯೋಸೇಫನು ತನ್ನ ತಂದೆಗೆ ಸುಗಂಧ ದ್ರವ್ಯವನ್ನು ಹಾಕಬೇಕೆಂದು ತನ್ನ ದಾಸರಾದ ವೈದ್ಯರಿಗೆ ಅಪ್ಪಣೆಕೊಡಲು ಅವರು ಇಸ್ರಾಯೇಲನಿಗೆ ಸುಗಂಧ ದ್ರವ್ಯವನ್ನು ಹಾಕಿದರು.
2 E José ordenou aos seus servos, os médicos, que embalsamassem o seu pai; e os médicos embalsamaram Israel.
3 ನಾಲ್ವತ್ತು ದಿವಸಗಳು ಅವನಿಗೆ ಸಂಪೂರ್ಣವಾದವು. ಯಾಕಂದರೆ ಸುಗಂಧ ದ್ರವ್ಯವನ್ನು ತುಂಬಿಸಿದವರಿಗೆ ದಿನಗಳು ಹೀಗೆ ಸಂಪೂರ್ಣವಾಗಬೇಕು. ಇದಲ್ಲದೆ ಐಗುಪ್ತ್ಯರು ಅವನಿಗಾಗಿ ಎಪ್ಪತ್ತು ದಿವಸ ದುಃಖಪಟ್ಟರು.
3 E cumpriram-se-lhe quarenta dias, porque assim se cumprem os dias daqueles que se embalsamam; e os egípcios o choraram setenta dias.
4 ಅವ ನಿಗಾಗಿ ದುಃಖಿಸುವ ದಿನಗಳು ಮುಗಿದ ಮೇಲೆ ಯೋಸೇಫನು ಫರೋಹನ ಮನೆಯವರಿಗೆ--ನಾನು ನಿಮ್ಮ ಕಣ್ಣುಗಳ ಮುಂದೆ ಕೃಪೆ ಹೊಂದಿದ್ದರೆ ಫರೋಹನ ಕಿವಿಗಳಲ್ಲಿ ಈ ಮಾತು ಹೇಳಬೇಕು.
4 Passados os dias de seu choro, falou José à casa de Faraó, dizendo: Se agora tenho achado graça aos vossos olhos, rogo-vos que faleis aos ouvidos de Faraó, dizendo:
5 ನನ್ನ ತಂದೆ ನನಗೆ ಇಗೋ, ನಾನು ಸಾಯುತ್ತೇನೆ. ನಾನು ಕಾನಾನ್‌ದೇಶದಲ್ಲಿ ನನಗೋಸ್ಕರ ಅಗೆದ ನನ್ನ ಸಮಾಧಿಯಲ್ಲಿಯೇ ನನ್ನನ್ನು ಹೂಣಿಡಬೇಕು ಎಂದು ನನ್ನಿಂದ ಪ್ರಮಾಣಮಾಡಿಸಿದ್ದಾನೆ. ಹೀಗಿ ರುವದರಿಂದ ನಾನು ಹೋಗಿ ನನ್ನ ತಂದೆಯನ್ನು ಹೂಣಿಟ್ಟು ತಿರಿಗಿ ಬರುವ ಹಾಗೆ ಅಪ್ಪಣೆಯಾಗಬೇಕು ಅಂದನು.
5 Meu pai me fez jurar, dizendo: Eis que eu morro; em meu sepulcro, que cavei para mim na terra de Canaã, ali me sepultarás. Agora, pois, te peço, que eu suba, para que sepulte o meu pai; então, voltarei.
6 ಆಗ ಫರೋಹನು--ನಿನ್ನ ತಂದೆಯು ನಿನ್ನಿಂದ ಪ್ರಮಾಣಮಾಡಿಸಿದಂತೆ ನೀನು ಹೊರಟು ಹೋಗಿ ನಿನ್ನ ತಂದೆಯನ್ನು ಹೂಣಿಡು ಅಂದನು.
6 E Faraó disse: Sobe e sepulta o teu pai, como ele te fez jurar.
7 ಹೀಗೆ ಯೋಸೇಫನು ತನ್ನ ತಂದೆಯನ್ನು ಹೂಣಿಡುವದಕ್ಕೆ ಹೊರಟುಹೋದನು. ಅವನ ಸಂಗಡ ಫರೋಹನ ದಾಸರೆಲ್ಲರೂ ಅವನ ಮನೆಯ ಹಿರಿಯರೂ ಐಗುಪ್ತದೇಶದ ಹಿರಿಯರೆಲ್ಲರೂ
7 E José subiu para sepultar o seu pai; e subiram com ele todos os servos de Faraó, os anciãos da sua casa e todos os anciãos da terra do Egito,
8 ಯೋಸೇಫನ ಮನೆಯವರೆಲ್ಲರೂ ಅವನ ಸಹೋದ ರರೂ ಅವನ ತಂದೆಯ ಮನೆಯವರೂ ಹೋದರು. ಅವರ ಮಕ್ಕಳನ್ನೂ ಕುರಿದನಗಳನ್ನೂ ಮಾತ್ರ ಗೋಷೆನ್ ಸೀಮೆಯಲ್ಲಿ ಬಿಟ್ಟರು.
8 como também toda a casa de José, e seus irmãos, e a casa de seu pai; somente deixaram na terra de Gósen os seus meninos, e as suas ovelhas, e as suas vacas.
9 ರಥಗಳೂ ರಾಹುತರೂ ಅವನ ಸಂಗಡ ಹೊರಟುಹೋದರು.ಆ ಸಮೂಹವು ಬಹಳ ದೊಡ್ಡದಾಗಿತ್ತು.
9 E subiram também com ele tanto carros como gente a cavalo; e o concurso foi grandíssimo.
10 ಅವರು ಯೊರ್ದನಿನ ಆಚೆ ಇರುವ ಆಟಾದ್ ಕಣಕ್ಕೆ ಬಂದು ಅಲ್ಲಿ ಅಧಿಕವಾದ ಮಹಾಗೋಳಾಟದಿಂದ ದುಃಖ ಪಟ್ಟರು. ಅವನು ತನ್ನ ತಂದೆಗಾಗಿ ಏಳು ದಿವಸಗಳ ವರೆಗೆ ದುಃಖಪಟ್ಟನು.
10 Chegando eles, pois, à eira do espinhal, que está além do Jordão, fizeram um grande e gravíssimo pranto; e fez a seu pai um grande pranto por sete dias.
11 ದೇಶದ ನಿವಾಸಿಗಳಾದ ಕಾನಾನ್ಯರು ಆಟಾದ್ ಕಣದಲ್ಲಿ ಆಗುತ್ತಿದ್ದ ದುಃಖವನ್ನು ನೋಡಿ--ಇದು ಐಗುಪ್ತ್ಯರಿಗೆ ಘೋರವಾದ ದುಃಖ ಎಂದು ಹೇಳಿದರು. ಆದದರಿಂದ ಅದಕ್ಕೆ ಆಬೇಲ್ ಮಿಚ್ರಯಾಮ್ ಎಂದು ಹೆಸರಾಯಿತು. ಅದು ಯೊರ್ದನಿನ ಆಚೆಯಲ್ಲಿದೆ.
11 E, vendo os moradores da terra, os cananeus, o luto na eira do espinhal, disseram: É este o pranto grande dos egípcios. Por isso, chamou-se o seu nome Abel-Mizraim, que está além do Jordão.
12 ಆಗ ಯಾಕೋಬನು ತನ್ನ ಕುಮಾರರಿಗೆ ಆಜ್ಞಾಪಿಸಿದ ಪ್ರಕಾರ ಅವನಿಗೆ ಮಾಡಿದರು.
12 E fizeram-lhe os seus filhos assim como ele lhes ordenara,
13 ಅವನ ಕುಮಾರರು ಅವನನ್ನು ಕಾನಾನ್ ದೇಶಕ್ಕೆ ತಕ್ಕೊಂಡು ಹೋಗಿ ಅಬ್ರಹಾಮನು ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನಿ ನಿಂದ ಕೊಂಡುಕೊಂಡಿದ್ದ ಮಮ್ರೆಗೆ ಎದುರಾಗಿರುವ ಮಕ್ಪೇಲ ಹೊಲದ ಗವಿಯಲ್ಲಿ ಹೂಣಿಟ್ಟರು.
13 pois os seus filhos o levaram à terra de Canaã e o sepultaram na cova do campo de Macpela, que Abraão tinha comprado com o campo, por herança de sepultura, a Efrom, o heteu, em frente de Manre.
14 ಯೋಸೇಫನು ತನ್ನ ತಂದೆಯನ್ನು ಹೂಣಿಟ್ಟ ಮೇಲೆ ತನ್ನ ಸಹೋದರರ ಸಂಗಡಲೂ ತನ್ನ ತಂದೆಯನ್ನು ಹೂಣಿಡುವದಕ್ಕಾಗಿ ಅವನ ಸಂಗಡ ಹೋದವರೆಲ್ಲರ ಸಂಗಡಲೂ ಐಗುಪ್ತಕ್ಕೆ ತಿರಿಗಿ ಬಂದನು.
14 Depois, tornou José para o Egito, ele, e seus irmãos, e todos os que com ele subiram a sepultar o seu pai, depois de haver sepultado o seu pai.
15 ತಮ್ಮ ತಂದೆ ಸತ್ತುಹೋದದ್ದನ್ನು ಯೋಸೇಫನ ಸಹೋದರರು ನೋಡಿ--ಒಂದು ವೇಳೆ ಯೋಸೇಫನು ನಮ್ಮನ್ನು ಹಗೆಮಾಡಿ ನಾವು ಅವನಿಗೆ ಮಾಡಿದ್ದ ಎಲ್ಲಾ ಕೇಡಿಗೆ ನಿಶ್ಚಯವಾಗಿ ಪ್ರತೀಕಾರ ಮಾಡಾನು ಎಂದು ಅಂದುಕೊಂಡು
15 Vendo, então, os irmãos de José que o seu pai já estava morto, disseram: Porventura, nos aborrecerá José e nos pagará certamente todo o mal que lhe fizemos.
16 ಅವರು ಒಬ್ಬ ಸೇವಕನನ್ನು ಕಳುಹಿಸಿ ಯೋಸೇಫನಿಗೆ ಹೇಳಿದ್ದೇನಂದರೆ--ನಿನ್ನ ತಂದೆಯು ಸಾಯುವದಕ್ಕಿಂತ ಮುಂಚೆ
16 Portanto, enviaram a José, dizendo: Teu pai mandou, antes da sua morte, dizendo:
17 ನಿನ್ನ ಸಹೋದರರ ಅಪರಾಧವನ್ನೂ ಅವರ ಪಾಪವನ್ನೂ ಮನ್ನಿಸು ಎಂಬದಾಗಿ ಯೋಸೇಫನಿಗೆ ಹೇಳಿರಿ ಎಂದು ಆಜ್ಞಾಪಿಸಿದ್ದಾನೆ. ಹೀಗಿರುವದರಿಂದ ನಿನ್ನ ತಂದೆಯ ದೇವರ ದಾಸರಾದ ನಾವು ಮಾಡಿದ ಅಪರಾಧವನ್ನು ಕ್ಷಮಿಸು ಅಂದರು. ಹೀಗೆ ಅವರು ಯೋಸೇಫನ ಸಂಗಡ ಮಾತನಾಡುತ್ತಿರುವಾಗ ಅವನು ಅತ್ತನು.
17 Assim direis a José: Perdoa, rogo-te, a transgressão de teus irmãos e o seu pecado, porque te fizeram mal; agora, pois, rogamos-te que perdoes a transgressão dos servos do Deus de teu pai. E José chorou quando eles lhe falavam.
18 ಅವನ ಸಹೋದರರು ಸಹ ಬಂದು ಅವನ ಮುಂದೆ ಅಡ್ಡಬಿದ್ದು ಇಗೋ, ನಿನ್ನ ದಾಸರಾಗಿ ದ್ದೇವೆ ಅಂದರು.
18 Depois, vieram também seus irmãos, e prostraram-se diante dele, e disseram: Eis-nos aqui por teus servos.
19 ಯೋಸೇಫನು ಅವರಿಗೆ ಭಯ ಪಡಬೇಡಿರಿ, ನಾನು ದೇವರ ಸ್ಥಾನದಲ್ಲಿ ಇದ್ದೇನೋ?
19 E José lhes disse: Não temais; porque, porventura, estou eu em lugar de Deus?
20 ನೀವು ನನಗೆ ವಿರೋಧವಾಗಿ ಕೇಡನ್ನು ಆಲೋಚಿ ಸಿದಿರಿ; ಆದರೆ ದೇವರು ಈಗ ಮಾಡಿದ ಹಾಗೆ ಬಹುಜನರನ್ನು ಬದುಕಿಸುವದಕ್ಕೋಸ್ಕರ ಮೇಲಿಗಾಗಿ ಆಲೋಚನೆ ಮಾಡಿದನು.
20 Vós bem intentastes mal contra mim, porém Deus o tornou em bem, para fazer como se vê neste dia, para conservar em vida a um povo grande.
21 ಹೀಗಿರುವದರಿಂದ ನೀವು ಭಯಪಡಬೇಡಿರಿ. ನಾನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಸಂರಕ್ಷಿಸುತ್ತೇನೆ ಎಂದು ಹೇಳಿ ಅವರನ್ನು ಸಂತೈಸಿ ದಯೆಯಿಂದ ಮಾತನಾಡಿದನು.
21 Agora, pois, não temais; eu vos sustentarei a vós e a vossos meninos. Assim, os consolou e falou segundo o coração deles.
22 ಹೀಗೆ ಯೋಸೇಫನೂ ತನ್ನ ತಂದೆಯ ಮನೆ ಯವರೂ ಸಹಿತವಾಗಿ ಐಗುಪ್ತದಲ್ಲಿ ವಾಸಮಾಡಿದರು. ಯೋಸೇಫನು ನೂರ ಹತ್ತು ವರುಷ ಬದುಕಿದನು.
22 José, pois, habitou no Egito, ele e a casa de seu pai; e viveu José cento e dez anos.
23 ಯೋಸೇಫನು ಎಫ್ರಾಯಾಮಿನ ಮರಿ ಮೊಮ್ಮಕ್ಕ ಳನ್ನೂ ನೋಡಿದನು. ಮನಸ್ಸೆಯ ಮಗನಾದ ಮಾಕೀ ರನ ಮಕ್ಕಳು ಸಹ ಯೋಸೇಫನ ತೊಡೆಯ ಮೇಲೆಯೇ ಬೆಳೆದರು.
23 E viu José os filhos de Efraim, da terceira geração; também os filhos de Maquir, filho de Manassés, nasceram sobre os joelhos de José.
24 ಇದಲ್ಲದೆ ಯೋಸೇಫನು ತನ್ನ ಸಹೋದ ರರಿಗೆ--ನಾನು ಸತ್ತ ಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದೊಳಗಿಂದ ತಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಮಾಡುವನು ಅಂದನು.
24 E disse José a seus irmãos: Eu morro, mas Deus certamente vos visitará e vos fará subir desta terra para a terra que jurou a Abraão, a Isaque e a Jacó.
25 ಯೋಸೇಫನು ಇಸ್ರಾಯೇಲನ ಮಕ್ಕಳಿಗೆ--ದೇವರು ನಿಮ್ಮನ್ನು ನಿಶ್ಚಯವಾಗಿ ದರ್ಶಿಸುವನು. ಆಗ ನನ್ನ ಎಲುಬುಗಳನ್ನು ಇಲ್ಲಿಂದ ತಕ್ಕೊಂಡು ಹೋಗಬೇಕೆಂದು ಪ್ರಮಾಣ ಮಾಡಿಸಿದನು.
25 E José fez jurar os filhos de Israel, dizendo: Certamente, vos visitará Deus, e fareis transportar os meus ossos daqui.
26 ಯೋಸೇಫನು ನೂರ ಹತ್ತು ವರುಷದವನಾಗಿ ಸತ್ತನು. ಅವರು ಅವನಿಗೆ ಸುಗಂಧದ್ರವ್ಯವನ್ನು ಹಾಕಿ ಐಗುಪ್ತದಲ್ಲಿ ಪೆಟ್ಟಿಗೆ ಯೊಳೆಗೆ ಇಟ್ಟರು.
26 E morreu José da idade de cento e dez anos; e o embalsamaram e o puseram num caixão no Egito.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Gênesis 50, comparar traduções ou montar um estudo — tudo direto pelo WhatsApp.