João 10
Kannada Bible (GL_KANNADA) vs NVI
NVI Nova Versão Internacional
1 ನಾನು ನಿಮಗೆ ನಿಜನಿಜವಾಗಿ ಹೇಳು ತ್ತೇನೆ--ಬಾಗಲಿನಿಂದ ಕುರೀಹಟ್ಟಿಯೊಳಗೆ ಬಾರದೆ ಮತ್ತೆಲ್ಲಿಂದಾದರೂ ಹತ್ತಿಬರುವವನೇ ಕಳ್ಳನೂ ಸುಲುಕೊಳ್ಳುವವನೂ ಆಗಿದ್ದಾನೆ.
1 "Eu lhes asseguro que aquele que não entra no aprisco das ovelhas pela porta, mas sobe por outro lugar, é ladrão e assaltante.
2 ಆದರೆ ಬಾಗಲಿ ನಿಂದ ಒಳಗೆ ಬರುವವನು ಆ ಕುರಿಗಳ ಕುರುಬನಾಗಿ ದ್ದಾನೆ.
2 Aquele que entra pela porta é o pastor das ovelhas.
3 ಬಾಗಲು ಕಾಯುವವನು ಅವನಿಗೆ ತೆರೆಯು ತ್ತಾನೆ; ಕುರಿಗಳು ಅವನ ಸ್ವರವನ್ನು ಕೇಳುತ್ತವೆ, ಅವನು ತನ್ನ ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಅವು ಗಳನ್ನು ಹೊರಗೆ ನಡಿಸುತ್ತಾನೆ.
3 O porteiro abre-lhe a porta, e as ovelhas ouvem a sua voz. Ele chama as suas ovelhas pelo nome e as leva para fora.
4 ಅವನು ತನ್ನ ಕುರಿ ಗಳನ್ನು ಹೊರಗೆ ಬಿಟ್ಟ ಮೇಲೆ ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳು ಕೊಳ್ಳುವದರಿಂದ ಅವನನ್ನು ಹಿಂಬಾಲಿಸುತ್ತವೆ;
4 Depois de conduzir para fora todas as suas ovelhas, vai adiante delas, e estas o seguem, porque conhecem a sua voz.
5 ಅವು ಅನ್ಯನನ್ನು ಹಿಂಬಾಲಿಸದೆ ಅವನ ಬಳಿಯಿಂದ ಓಡಿ ಹೋಗುವವು; ಅವು ಅನ್ಯರ ಸ್ವರವನ್ನು ತಿಳಿಯುವದಿಲ್ಲ.
5 Mas nunca seguirão um estranho; na verdade, fugirão dele, porque não reconhecem a voz de estranhos".
6 ಯೇಸು ಈ ಸಾಮ್ಯವನ್ನು ಅವರಿಗೆ ಹೇಳಿದನು; ಆದರೆ ಆತನು ಅವರ ಸಂಗಡ ಮಾತನಾಡಿದ ವಿಷಯಗಳು ಏನಾಗಿದ್ದವು ಎಂದು ಅವರು ಗ್ರಹಿಸಲಿಲ್ಲ.
6 Jesus usou essa comparação, mas eles não compreenderam o que lhes estava falando.
7 ಯೇಸು ತಿರಿಗಿ ಅವರಿಗೆ--ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗ ಲಾಗಿದ್ದೇನೆ.
7 Então Jesus afirmou de novo: "Digo-lhes a verdade: Eu sou a porta das ovelhas.
8 ನನಗಿಂತ ಮುಂಚೆ ಬಂದವರೆಲ್ಲರು ಕಳ್ಳರೂ ಸುಲುಕೊಳ್ಳುವವರೂ ಆಗಿದ್ದಾರೆ. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ.
8 Todos os que vieram antes de mim eram ladrões e assaltantes, mas as ovelhas não os ouviram.
9 ನಾನೇ ಆಬಾಗಲು; ನನ್ನ ಮೂಲಕವಾಗಿ ಯಾವನಾದರೂ ಪ್ರವೇಶಿಸಿದರೆ ಅವನು ರಕ್ಷಣೆ ಹೊಂದುವನು; ಇದ ಲ್ಲದೆ ಅವನು ಒಳಗೆ ಹೋಗುತ್ತಾನೆ, ಹೊರಗೆ ಬರು ತ್ತಾನೆ ಮತ್ತು ಮೇವನ್ನು ಕಂಡುಕೊಳ್ಳುತ್ತಾನೆ.
9 Eu sou a porta; quem entra por mim será salvo. Entrará e sairá, e encontrará pastagem.
10 ಕಳ್ಳನು ಕದ್ದುಕೊಳ್ಳುವದಕ್ಕೂ ಕೊಲ್ಲುವದಕ್ಕೂ ಹಾಳುಮಾಡು ವದಕ್ಕೂ ಮಾತ್ರ ಬರುತ್ತಾನೇ ಹೊರತು ಮತ್ತಾವದಕ್ಕೂ ಬರುವದಿಲ್ಲ; ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಸಮೃದ್ಧಿಯು ಇರಬೇಕೆಂತಲೂ ಬಂದೆನು.
10 O ladrão vem apenas para furtar, matar e destruir; eu vim para que tenham vida, e a tenham plenamente.
11 ನಾನೇ ಒಳ್ಳೇ ಕುರುಬನು; ಒಳ್ಳೇ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.
11 "Eu sou o bom pastor. O bom pastor dá a sua vida pelas ovelhas.
12 ಆದರೆ ಕೂಲಿಯವನು ಕುರುಬನಲ್ಲವಾದದ ರಿಂದಲೂ ಕುರಿಗಳು ತನ್ನವುಗಳಲ್ಲವಾದದರಿಂದಲೂ ತೋಳ ಬರುವದನ್ನು ಕಂಡು ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ; ಆಗ ತೋಳವು ಕುರಿಗಳನ್ನು ಹಿಡಿದು ಕೊಂಡು ಅವುಗಳನ್ನು ಚದರಿಸುತ್ತದೆ.
12 O assalariado não é o pastor a quem as ovelhas pertencem. Assim, quando vê que o lobo vem, abandona as ovelhas e foge. Então o lobo ataca o rebanho e o dispersa.
13 ಕೂಲಿಯವನು ಕೂಲಿಯವನೇ ಆಗಿರುವದರಿಂದ ಕುರಿಗಳಿಗೋಸ್ಕರ ಚಿಂತಿಸದೆ ಓಡಿ ಹೋಗುತ್ತಾನೆ.
13 Ele foge porque é assalariado e não se importa com as ovelhas.
14 ನಾನೇ ಒಳ್ಳೇ ಕುರುಬನು; ನನ್ನ ಕುರಿಗಳನ್ನು ನಾನು ಬಲ್ಲೆನು. ನನ್ನ ಕುರಿಗಳು ನನ್ನನ್ನು ತಿಳಿದವೆ.
14 "Eu sou o bom pastor; conheço as minhas ovelhas; e elas me conhecem;
15 ತಂದೆಯು ನನ್ನನ್ನು ತಿಳಿದಿರುವಂತೆ ನಾನು ತಂದೆಯನ್ನು ತಿಳಿದಿರುತ್ತೇನೆ; ಕುರಿಗಳಿಗೋಸ್ಕರ ನನ್ನ ಪ್ರಾಣವನ್ನು ಕೊಡುತ್ತೇನೆ.
15 assim como o Pai me conhece e eu conheço o Pai; e dou a minha vida pelas ovelhas.
16 ಇದಲ್ಲದೆ ಈ ಹಟ್ಟಿಗೆ ಸೇರದ ಬೇರೆ ಕುರಿಗಳು ನನಗುಂಟು; ಅವುಗಳನ್ನು ಸಹ ನಾನು ತರಬೇಕು ಮತ್ತು ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು ಮತ್ತು ಒಬ್ಬನೇ ಕುರುಬನು ಇರುವನು.
16 Tenho outras ovelhas que não são deste aprisco. É necessário que eu as conduza também. Elas ouvirão a minha voz, e haverá um só rebanho e um só pastor.
17 ಯಾಕಂದರೆ ನಾನು ನನ್ನ ಪ್ರಾಣವನ್ನು ತಿರಿಗಿಪಡಕೊಳ್ಳುವಂತೆ ಅದನ್ನು ಕೊಡುತ್ತೇನೆ; ಆದದ ರಿಂದ ನನ್ನ ತಂದೆಯು ನನ್ನನ್ನು ಪ್ರೀತಿಸುತ್ತಾನೆ.
17 Por isso é que meu Pai me ama, porque eu dou a minha vida para retomá-la.
18 ಯಾವ ಮನುಷ್ಯನಾದರೂ ಅದನ್ನು ನನ್ನಿಂದ ತೆಗೆಯುವದಿಲ್ಲ; ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ನಾನು ಅದನ್ನು ಕೊಡುವದಕ್ಕೆ ನನಗೆ ಅಧಿಕಾರವಿದೆ; ಅದನ್ನು ತಿರಿಗಿ ಪಡಕೊಳ್ಳುವದಕ್ಕೆ ನನಗೆ ಅಧಿಕಾರವಿದೆ. ಈ ಅಪ್ಪಣೆಯನ್ನು ನಾನು ನನ್ನ ತಂದೆ ಯಿಂದ ಹೊಂದಿದ್ದೇನೆ ಅಂದನು.
18 Ninguém a tira de mim, mas eu a dou por minha espontânea vontade. Tenho autoridade para dá-la e para retomá-la. Esta ordem recebi de meu Pai".
19 ಈ ಮಾತುಗಳ ದೆಸೆಯಿಂದ ಯೆಹೂದ್ಯರ ಮಧ್ಯದಲ್ಲಿ ತಿರಿಗಿ ಭೇದಉಂಟಾಯಿತು.
19 Diante dessas palavras, os judeus ficaram outra vez divididos.
20 ಅವರಲ್ಲಿ ಅನೇಕರು--ಅವನಿಗೆ ದೆವ್ವ ಹಿಡಿದದೆ ಮತ್ತು ಹುಚ್ಚನಾಗಿ ದ್ದಾನೆ; ನೀವು ಯಾಕೆ ಅವನ ಮಾತನ್ನು ಕೇಳುತ್ತೀರಿ ಅಂದರು.
20 Muitos deles diziam: "Ele está endemoninhado e enlouqueceu. Por que ouvi-lo? "
21 ಬೇರೆಯವರು--ಇವು ದೆವ್ವ ಹಿಡಿದವನ ಮಾತುಗಳಲ್ಲ, ದೆವ್ವವು ಕುರುಡನ ಕಣ್ಣುಗಳನ್ನು ತೆರೆ ಯುವದಕ್ಕಾದೀತೇ ಅಂದರು.
21 Mas outros diziam: "Essas palavras não são de um endemoninhado. Pode um demônio abrir os olhos dos cegos? "
22 ಯೆರೂಸಲೇಮಿನಲ್ಲಿ (ದೇವಾಲಯದ) ಪ್ರತಿ ಷ್ಠೆಯ ಹಬ್ಬವಿತ್ತು; ಆಗ ಚಳಿಗಾಲವಾಗಿತ್ತು.
22 Celebrava-se a festa da Dedicação, em Jerusalém. Era inverno,
23 ಯೇಸು ದೇವಾಲಯದಲ್ಲಿ ಸೊಲೊಮೋನನ ದ್ವಾರಾಂಗಳ ದೊಳಗೆ ತಿರುಗಾಡುತ್ತಿದ್ದನು;
23 e Jesus estava no templo, caminhando pelo Pórtico de Salomão.
24 ಆಗ ಯೆಹೂದ್ಯರು ಆತನ ಸುತ್ತಲು ಬಂದು ಆತನಿಗೆ--ಇನ್ನು ಎಷ್ಟರ ವರೆಗೆ ನಮ್ಮನ್ನು ಸಂದೇಹಪಡಿಸುತ್ತೀ? ನೀನು ಕ್ರಿಸ್ತ ನಾಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು ಅಂದರು.
24 Os judeus reuniram-se ao redor dele e perguntaram: "Até quando nos deixará em suspense? Se é você o Cristo, diga-nos abertamente".
25 ಯೇಸು ಅವರಿಗೆ--ನಾನು ನಿಮಗೆ ಹೇಳಿದೆನು, ಆದರೆ ನೀವು ನಂಬಲಿಲ್ಲ; ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತವೆ.
25 Jesus respondeu: "Eu já lhes disse, mas vocês não crêem. As obras que eu realizo em nome de meu Pai falam por mim,
26 ಆದರೆ ನಾನು ನಿಮಗೆ ಹೇಳಿದಂತೆ ನೀವು ನನ್ನ ಕುರಿಗಳಲ್ಲವಾದದರಿಂದ ನಂಬದೆ ಇದ್ದೀರಿ.
26 mas vocês não crêem, porque não são minhas ovelhas.
27 ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ.
27 As minhas ovelhas ouvem a minha voz; eu as conheço, e elas me seguem.
28 ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.
28 Eu lhes dou a vida eterna, e elas jamais perecerão; ninguém as poderá arrancar da minha mão.
29 ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತಲೂ ದೊಡ್ಡವನು; ನನ್ನ ತಂದೆಯ ಕೈಯೊಳ ಗಿಂದ ಅವುಗಳನ್ನು ಯಾವನೂ ಕಸಕೊಳ್ಳಲಾರನು.
29 Meu Pai, que as deu para mim, é maior do que todos; ninguém as pode arrancar da mão de meu Pai.
30 ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.
30 Eu e o Pai somos um".
31 ಆಗ ಯೆಹೂದ್ಯರು ತಿರಿಗಿ ಆತನನ್ನು ಕೊಲ್ಲುವ ದಕ್ಕಾಗಿ ಕಲ್ಲುಗಳನ್ನು ತಕ್ಕೊಂಡರು.
31 Novamente os judeus pegaram pedras para apedrejá-lo,
32 ಅದಕ್ಕೆ ಯೇಸು ಅವರಿಗೆ--ನನ್ನ ತಂದೆಯಿಂದ ಅನೇಕ ಒಳ್ಳೇ ಕಾರ್ಯ ಗಳನ್ನು ನಾನು ನಿಮಗೆ ತೋರಿಸಿದ್ದೇನೆ; ಅವುಗಳಲ್ಲಿ ಯಾವ ಕಾರ್ಯಗಳಿಗೋಸ್ಕರ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ ಎಂದು ಕೇಳಿದನು.
32 mas Jesus lhes disse: "Eu lhes mostrei muitas boas obras da parte do Pai. Por qual delas vocês querem me apedrejar? "
33 ಅದಕ್ಕೆ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ಒಳ್ಳೇ ಕಾರ್ಯಗಳಿಗೋಸ್ಕರವಲ್ಲ, ದೇವದೂಷಣೆಗೋಸ್ಕ ರವೂ ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರಾಗಿ ಮಾಡಿಕೊಳ್ಳುವದಕ್ಕೊಸ್ಕರವೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ ಅಂದರು.
33 Responderam os judeus: "Não vamos apedrejá-lo por nenhuma boa obra, mas pela blasfêmia, porque você é um simples homem e se apresenta como Deus".
34 ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ದೇವರುಗಳಾ ಗಿದ್ದೀರಿ ಎಂದು ನಾನು ಹೇಳಿದೆನು ಎಂಬದಾಗಿ ನಿಮ್ಮ ನ್ಯಾಯಪ್ರಮಾಣದಲ್ಲಿ ಬರೆದಿರುವದಿಲ್ಲವೋ?
34 Jesus lhes respondeu: "Não está escrito na Lei de vocês: ‘Eu disse: Vocês são deuses’?
35 ಹಾಗಾದರೆ ದೇವರವಾಕ್ಯವನ್ನು ಹೊಂದಿದವರು ದೇವರುಗಳೆಂದು ಆತನು ಕರೆದಿರುವಲ್ಲಿ ಬರಹವು ವ್ಯರ್ಥವಾಗಲಾರದಷ್ಟೆ.
35 Se ele chamou ‘deuses’ àqueles a quem veio a palavra de Deus ( e a Escritura não pode ser anulada )
36 ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ--ನೀನು ದೇವ ದೂಷಣೆ ಮಾಡುತ್ತೀ ಎಂದು ನೀವು ಅನ್ನುತ್ತೀರೋ?
36 que dizer a respeito daquele a quem o Pai santificou e enviou ao mundo? Então, por que vocês me acusam de blasfêmia porque eu disse: ‘Sou Filho de Deus’?
37 ನನ್ನ ತಂದೆಯ ಕಾರ್ಯಗಳನ್ನು ನಾನು ಮಾಡದೆ ಹೋದರೆ ನನ್ನನ್ನು ನಂಬಬೇಡಿರಿ.
37 Se eu não realizo as obras do meu Pai, não creiam em mim.
38 ನಾನು ಮಾಡಿ ದರೂ ನೀವು ನನ್ನನ್ನು ನಂಬದಿದ್ದರೆ ತಂದೆಯು ನನ್ನ ಲ್ಲಿಯೂ ನಾನು ಆತನಲ್ಲಿಯೂ ಇರುವದನ್ನು ನೀವು ತಿಳಿದುಕೊಂಡು ನಂಬುವಂತೆ ಈ ಕಾರ್ಯಗಳನ್ನಾ ದರೂ ನಂಬಿರಿ ಅಂದನು.
38 Mas se as realizo, mesmo que não creiam em mim, creiam nas obras, para que possam saber e entender que o Pai está em mim, e eu no Pai".
39 ಆದದರಿಂದ ತಿರಿಗಿ ಅವರು ಆತನನ್ನು ಹಿಡಿಯುವದಕ್ಕೆ ಹುಡುಕಿದರು; ಆದರೆ ಆತನು ಅವರ ಕೈಯಿಂದ ತಪ್ಪಿಸಿಕೊಂಡು
39 Outra vez tentaram prendê-lo, mas ele se livrou das mãos deles.
40 ಯೋಹಾನನು ಮೊದಲು ಬಾಪ್ತಿಸ್ಮ ಮಾಡಿಸುತ್ತಿದ್ದ ಸ್ಥಳವಾದ ಯೊರ್ದನಿನ ಆಚೆಗೆ ತಿರಿಗಿಹೋಗಿ ಅಲ್ಲಿ ವಾಸಿಸಿದನು.
40 Então Jesus atravessou novamente o Jordão e foi para o lugar onde João batizava nos primeiros dias do seu ministério. Ali ficou,
41 ಆಗ ಅನೇಕರು ಆತನ ಬಳಿಗೆ ಬಂದು--ಯೋಹಾನನು ಅದ್ಭುತಕಾರ್ಯಗಳನ್ನು ಮಾಡಲಿಲ್ಲ; ಆದರೆ ಈ ಮನುಷ್ಯನ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲವೂ ನಿಜವಾಗಿದೆ ಅಂದರು.
41 e muita gente foi até onde ele estava, dizendo: "Embora João nunca tenha realizado um sinal miraculoso, tudo o que ele disse a respeito deste homem era verdade".
42 ಅಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು.
42 E ali muitos creram em Jesus.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar João 10, comparar traduções ou montar um estudo — tudo direto pelo WhatsApp.