João 11

Kannada Bible (GL_KANNADA) vs NVI

Sair da comparação
NVI Nova Versão Internacional
1 ಮರಿಯಳ ಮತ್ತು ಆಕೆಯ ಸಹೋದರಿ ಯಾದ ಮಾರ್ಥಳ ಊರಾದ ಬೇಥಾನ್ಯ ದಲ್ಲಿ ಲಾಜರನೆಂಬವನೊಬ್ಬನು ಅಸ್ವಸ್ಥನಾಗಿದ್ದನು.
1 Havia um homem chamado Lázaro. Ele era de Betânia, do povoado de Maria e de sua irmã Marta. E aconteceu que Lázaro ficou doente.
2 (ಕರ್ತನಿಗೆ ತೈಲವನ್ನು ಹಚ್ಚಿ ತನ್ನ ತಲೇಕೂದಲಿನಿಂದ ಆತನ ಪಾದಗಳನ್ನು ಒರಸಿದ ಈ ಮರಿಯಳ ಸಹೋ ದರನಾದ ಲಾಜರನು ಅಸ್ವಸ್ಥನಾಗಿದ್ದನು).
2 Maria, sua irmã, era a mesma que derramara perfume sobre o Senhor e lhe enxugara os pés com os cabelos.
3 ಆದದ ರಿಂದ ಅವನ ಸಹೋದರಿಯರು--ಕರ್ತನೇ, ಇಗೋ, ನೀನು ಪ್ರೀತಿಮಾಡುತ್ತಿರುವವನು ಅಸ್ವಸ್ಥನಾಗಿದ್ದಾನೆ ಎಂದು ಆತನಿಗೆ ಹೇಳಿಕಳುಹಿಸಿದರು.
3 Então as irmãs de Lázaro mandaram dizer a Jesus: "Senhor, aquele a quem amas está doente".
4 ಯೇಸು ಅದನ್ನು ಕೇಳಿ--ಈ ರೋಗವು ಮರಣಕ್ಕಾಗಿಯಲ್ಲ, ಆದರೆ ದೇವಕುಮಾರನು ಅದರಿಂದ ಮಹಿಮೆ ಹೊಂದುವಂತೆ ದೇವರ ಮಹಿಮೆಗೋಸ್ಕರವೇ ಬಂದದ್ದು ಎಂದು ಹೇಳಿದನು.
4 Ao ouvir isso, Jesus disse: "Essa doença não acabará em morte; é para a glória de Deus, para que o Filho de Deus seja glorificado por meio dela".
5 ಮಾರ್ಥಳನ್ನೂ ಅವಳ ಸಹೋದರಿಯನ್ನೂ ಲಾಜರನನ್ನೂ ಯೇಸು ಪ್ರೀತಿಸು ತ್ತಿದ್ದನು.
5 Jesus amava Marta, a irmã dela e Lázaro.
6 ಅವನು ಅಸ್ವಸ್ಥನಾಗಿದ್ದಾನೆಂದು ಆತನು ಕೇಳಿ ದರೂ ಎರಡು ದಿವಸ ತಾನಿದ್ದ ಸ್ಥಳದಲ್ಲೇ ಉಳಿದನು.
6 No entanto, quando ouviu falar que Lázaro estava doente, ficou mais dois dias onde estava.
7 ತರುವಾಯ ಆತನು ತನ್ನ ಶಿಷ್ಯರಿಗೆ--ನಾವು ತಿರಿಗಿ ಯೂದಾಯಕ್ಕೆ ಹೋಗೋಣ ಅಂದನು.
7 Depois disse aos seus discípulos: "Vamos voltar para a Judéia".
8 ಆತನ ಶಿಷ್ಯರು ಆತನಿಗೆ--ಬೋಧಕನೇ, ಆಗಲೇ ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿ ದ್ದರಲ್ಲಾ; ತಿರಿಗಿ ನೀನು ಅಲ್ಲಿಗೆ ಹೋಗುತ್ತೀಯೋ? ಅಂದರು.
8 Estes disseram: "Mestre, há pouco os judeus tentaram apedrejar-te e assim mesmo vais voltar para lá? "
9 ಯೇಸು--ಹಗಲಿಗೆ ಹನ್ನೆರಡು ತಾಸುಗಳು ಇವೆಯಲ್ಲವೇ? ಯಾವ ಮನುಷ್ಯನಾದರೂ ಹಗಲಿ ನಲ್ಲಿ ತಿರುಗಾಡಿದರೆ ಈ ಲೋಕದ ಬೆಳಕನ್ನು ನೋಡು ವದರಿಂದ ಅವನು ಎಡವುವದಿಲ್ಲ.
9 Jesus respondeu: "O dia não tem doze horas? Quem anda de dia não tropeça, pois vê a luz deste mundo.
10 ಆದರೆ ಒಬ್ಬ ಮನುಷ್ಯನು ರಾತ್ರಿಯಲ್ಲಿ ತಿರುಗಾಡಿದರೆ ತನ್ನಲ್ಲಿ ಬೆಳಕು ಇಲ್ಲವಾದದರಿಂದ ಅವನು ಎಡವುತ್ತಾನೆ ಎಂದು ಉತ್ತರಕೊಟ್ಟನು.
10 Quando anda de noite, tropeça, pois nele não há luz".
11 ಈ ಮಾತುಗಳನ್ನು ಹೇಳಿದ ತರುವಾಯ ಆತನು ಅವರಿಗೆ--ನಮ್ಮ ಸ್ನೇಹಿತನಾದ ಲಾಜರನು ನಿದ್ರಿಸುತ್ತಿದ್ದಾನೆ; ಆದರೆ ನಾನು ಅವನನ್ನು ನಿದ್ರೆಯಿಂದ ಎಬ್ಬಿಸುವದಾಕ್ಕಾಗಿ ಹೋಗುತ್ತೇನೆ ಎಂದು ಹೇಳಿದನು.
11 Depois de dizer isso, prosseguiu dizendo-lhes: "Nosso amigo Lázaro adormeceu, mas vou até lá para acordá-lo".
12 ಆಗ ಆತನ ಶಿಷ್ಯರು--ಕರ್ತನೇ, ಅವನು ನಿದ್ರೆಮಾಡುತ್ತಿದ್ದರೆ ಸ್ವಸ್ಥನಾಗುವನು ಅಂದರು.
12 Seus discípulos responderam: "Senhor, se ele dorme, vai melhorar".
13 ಆದರೆ ಯೇಸು ಅವನ ಮರಣದ ವಿಷಯವಾಗಿ ಹೇಳಿದ್ದನು; ಆದರೆ ಅವರು ನಿದ್ರೆಯಲ್ಲಿಯ ವಿಶ್ರಾಂತಿ ಕುರಿತು ಆತನು ಹೇಳಿದ ನೆಂದು ಯೋಚಿಸಿದರು.
13 Jesus tinha falado de sua morte, mas os seus discípulos pensaram que ele estava falando simplesmente do sono.
14 ಆಗ ಯೇಸು ಸ್ಪಷ್ಟವಾಗಿ ಅವರಿಗೆ--ಲಾಜರನು ಸತ್ತಿದ್ದಾನೆ.
14 Então lhes disse claramente: "Lázaro morreu,
15 ನೀವು ನಂಬು ವಂತೆ ನಿಮಗೋಸ್ಕರ ನಾನು ಅಲ್ಲಿ ಇಲ್ಲದಿರುವದಕ್ಕೆ ಸಂತೋಷಪಡುತ್ತೇನೆ; ಹೇಗೂ ನಾವು ಅವನ ಬಳಿಗೆ ಹೋಗೋಣ ಎಂದು ಅವರಿಗೆ ಹೇಳಿದನು.
15 e para o bem de vocês estou contente por não ter estado lá, para que vocês creiam. Mas, vamos até ele".
16 ತರು ವಾಯ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ--ನಾವು ಸಹ ಆತನೊಂದಿಗೆ ಸಾಯುವಂತೆ ಹೋಗೋಣ ಅಂದನು.
16 Então Tomé, chamado Dídimo, disse aos outros discípulos: "Vamos também para morrermos com ele".
17 ತರುವಾಯ ಯೇಸು ಬಂದಾಗ ಲಾಜರನನ್ನು ಸಮಾಧಿಯಲ್ಲಿಟ್ಟು ಆಗಲೇ ನಾಲ್ಕು ದಿವಸಗಳಾಗಿದ್ದ ವೆಂದು ಆತನು ತಿಳಿದುಕೊಂಡನು;
17 Ao chegar, Jesus verificou que Lázaro já estava no sepulcro havia quatro dias.
18 ಬೇಥಾನ್ಯವು ಯೆರೂಸಲೇಮಿಗೆ ಹೆಚ್ಚುಕಡಿಮೆ ಒಂದು ಹರದಾರಿ ಯಷ್ಟು ಸವಿಾಪದಲ್ಲಿತ್ತು.
18 Betânia distava cerca de três quilômetros de Jerusalém,
19 ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋ ದರನ ವಿಷಯವಾಗಿ ಆದರಿಸುವದಕ್ಕೆ ಬಂದಿದ್ದರು.
19 e muitos judeus tinham ido visitar Marta e Maria para confortá-las pela perda do irmão.
20 ಆಗ ಯೇಸು ಬರುತ್ತಿದ್ದಾನೆಂದು ಮಾರ್ಥಳು ಕೇಳು ತ್ತಲೇ ಹೋಗಿ ಆತನನ್ನು ಎದುರುಗೊಂಡಳು. ಮರಿಯಳಾದರೋ ಮನೆಯಲ್ಲಿಯೇ ಕೂತುಕೊಂಡಿ ದ್ದಳು.
20 Quando Marta ouviu que Jesus estava chegando, foi encontrá-lo, mas Maria ficou em casa.
21 ಆಗ ಮಾರ್ಥಳು ಯೇಸುವಿಗೆ-- ಕರ್ತನೇ, ನೀನು ಇಲ್ಲಿ ಇರುತ್ತಿದ್ದರೆ ನನ್ನ ಸಹೋದರನು ಸಾಯು ತ್ತಿರಲಿಲ್ಲ.
21 Disse Marta a Jesus: "Senhor, se estivesses aqui meu irmão não teria morrido.
22 ಆದರೆ ಈಗಲೂ ಸಹ ನೀನು ದೇವರಿಂದ ಏನು ಕೇಳಿಕೊಳ್ಳುತ್ತೀಯೋ ದೇವರು ಅದನ್ನು ನಿನಗೆ ಕೊಡುವನೆಂದು ನಾನು ಬಲ್ಲೆನು ಅಂದಳು.
22 Mas sei que, mesmo agora, Deus te dará tudo o que pedires".
23 ಯೇಸು ಆಕೆಗೆ--ನಿನ್ನ ಸಹೋದರನು ತಿರಿಗಿ ಎದ್ದೇಳುವನು ಎಂದು ಹೇಳಿದನು.
23 Disse-lhe Jesus: "O seu irmão vai ressuscitar".
24 ಮಾರ್ಥಳು ಆತನಿಗೆ--ಕಡೇ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ತಿರಿಗಿ ಎದ್ದೇಳುವನೆಂದು ನಾನು ಬಲ್ಲೆನು ಎಂದು ಹೇಳಿದಳು.
24 Marta respondeu: "Eu sei que ele vai ressuscitar na ressurreição, no último dia".
25 ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು;
25 Disse-lhe Jesus: "Eu sou a ressurreição e a vida. Aquele que crê em mim, ainda que morra, viverá;
26 ಯಾವನಾದರೂ ಬದುಕುತ್ತಾ ನನ್ನಲ್ಲಿ ನಂಬಿಕೆಯಿಡುವದಾದರೆ ಅವನು ಎಂದಿಗೂ ಸಾಯುವ ದಿಲ್ಲ. ಇದನ್ನು ನೀನು ನಂಬುತ್ತೀಯೋ ಎಂದು ಕೇಳಿದ್ದಕ್ಕೆ
26 e quem vive e crê em mim, não morrerá eternamente. Você crê nisso? "
27 ಆಕೆಯು ಆತನಿಗೆ--ಹೌದು, ಕರ್ತನೇ, ಲೋಕಕ್ಕೆ ಬರಬೇಕಾಗಿದ್ದ ದೇವರಮಗನಾದ ಕ್ರಿಸ್ತನು ನೀನೇ ಎಂದು ನಾನು ನಂಬುತ್ತೇನೆ ಅಂದಳು.
27 Ela lhe respondeu: "Sim, Senhor, eu tenho crido que tu és o Cristo, o Filho de Deus que devia vir ao mundo".
28 ಆಕೆಯು ಹೀಗೆ ಹೇಳಿದ ಮೇಲೆ ಹೊರಟು ಹೋಗಿ ತನ್ನ ಸಹೋದರಿಯಾದ ಮರಿಯಳನ್ನು ಗುಪ್ತ ವಾಗಿ ಕರೆದು--ಬೋಧಕನು ಬಂದಿದ್ದಾನೆ, ನಿನ್ನನ್ನು ಕರೆಯುತ್ತಾನೆ ಅಂದಳು.
28 E depois de dizer isso, foi para casa e, chamando à parte Maria, disse-lhe: "O Mestre está aqui e está chamando você".
29 ಆಕೆಯು ಇದನ್ನು ಕೇಳಿದ ಕೂಡಲೆ ತಟ್ಟನೆ ಎದ್ದು ಆತನ ಬಳಿಗೆ ಬಂದಳು.
29 Ao ouvir isso, Maria levantou-se depressa e foi ao encontro dele.
30 ಯೇಸು ಇನ್ನೂ ಊರೊಳಕ್ಕೆ ಬಾರದೆ ಮಾರ್ಥಳು ಆತನನ್ನು ಸಂಧಿಸಿದ ಸ್ಥಳದಲ್ಲಿಯೇ ಇದ್ದನು.
30 Jesus ainda não tinha entrado no povoado, mas estava no lugar onde Marta o encontrara.
31 ಮನೆ ಯಲ್ಲಿ ಆಕೆಯ ಕೂಡ ಇದ್ದು ಆಕೆಯನ್ನು ಆದರಿಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುವದನ್ನು ನೋಡಿ--ಆಕೆಯು ಅಳುವದಕ್ಕಾಗಿ ಸಮಾಧಿಯ ಬಳಿಗೆ ಹೋಗುತ್ತಾಳೆಂದು ತಿಳಿದು ಆಕೆ ಯನ್ನು ಹಿಂಬಾಲಿಸಿದರು.
31 Quando notaram que ela se levantou depressa e saiu, os judeus, que a estavam confortando em casa, seguiram-na, supondo que ela ia ao sepulcro, para ali chorar.
32 ತರುವಾಯ ಯೇಸು ಇದ್ದ ಸ್ಥಳಕ್ಕೆ ಮರಿಯಳು ಬಂದು ಆತನನ್ನು ಕಂಡು ಆತನ ಪಾದಗಳಿಗೆ ಬಿದ್ದು ಆತನಿಗೆ--ಕರ್ತನೇ, ನೀನು ಇಲ್ಲಿ ಇರುತ್ತಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ ಎಂದು ಹೇಳಿದಳು.
32 Chegando ao lugar onde Jesus estava e vendo-o, Maria prostrou-se aos seus pés e disse: "Senhor, se estivesses aqui meu irmão não teria morrido".
33 ಆಕೆಯು ಅಳುವದನ್ನು ಮತ್ತು ಆಕೆಯೊಂದಿಗೆ ಬಂದ ಯೆಹೂದ್ಯರು ಸಹ ಅಳುವದನ್ನು ಯೇಸು ನೋಡಿದಾಗ ಆತ್ಮದಲ್ಲಿ ಕಳವಳಪಟ್ಟು ಮೂಲ್ಗುತ್ತಾ--
33 Ao ver chorando Maria e os judeus que a acompanhavam, Jesus agitou-se no espírito e perturbou-se.
34 ಅವನನ್ನು ಎಲ್ಲಿ ಇಟ್ಟಿದ್ದೀರಿ ಅಂದನು. ಅವರು ಆತನಿಗೆ--ಕರ್ತನೇ, ಬಂದು ನೋಡು ಅಂದರು.
34 "Onde o colocaram? ", perguntou ele. "Vem e vê, Senhor", responderam eles.
35 ಯೇಸು ಅತ್ತನು.
35 Jesus chorou.
36 ಆಗ ಯೆಹೂದ್ಯ ರು--ಇಗೋ, ಆತನು ಅವನನ್ನು ಎಷ್ಟು ಪ್ರೀತಿ ಮಾಡಿದನಲ್ಲಾ ಅಂದರು.
36 Então os judeus disseram: "Vejam como ele o amava! "
37 ಅವರಲ್ಲಿ ಕೆಲ ವರು--ಆ ಕುರುಡನ ಕಣ್ಣುಗಳನ್ನು ತೆರೆದ ಈ ಮನುಷ್ಯನು ಇವನನ್ನೂ ಸಾಯದಹಾಗೆ ಮಾಡಲಾರದೆ ಇದ್ದನೇ ಅಂದರು.
37 Mas alguns deles disseram: "Ele, que abriu os olhos do cego, não poderia ter impedido que este homem morresse? "
38 ಆದದರಿಂದ ಯೇಸು ತಿರಿಗಿ ತನ್ನಲ್ಲಿ ಮೂಲ್ಗುತ್ತಾ ಸಮಾಧಿಗೆ ಬಂದನು. ಅದು ಗವಿಯಾಗಿತ್ತು; ಒಂದು ಕಲ್ಲು ಅದರ ಮೇಲೆ ಇಟ್ಟಿತ್ತು.
38 Jesus, outra vez profundamente comovido, foi até o sepulcro. Era uma gruta com uma pedra colocada à entrada.
39 ಯೇಸು--ಆ ಕಲ್ಲನ್ನು ತೆಗೆದುಹಾಕಿರಿ ಅಂದನು. ಅದಕ್ಕೆ ಸತ್ತುಹೋದವನ ಸಹೋದರಿಯಾದ ಮಾರ್ಥಳು ಆತನಿಗೆ--ಕರ್ತನೇ, ಇಷ್ಟರೊಳಗೆ ಅವನು ನಾರುತ್ತಾನೆ; ಯಾಕಂದರೆ ಅವನು ಸತ್ತು ನಾಲ್ಕು ದಿನಗಳಾದವು ಅಂದಳು.
39 "Tirem a pedra", disse ele. Disse Marta, irmã do morto: "Senhor, ele já cheira mal, pois já faz quatro dias".
40 ಯೇಸು ಆಕೆಗೆ--ನೀನು ನಂಬುವದಾದರೆ ದೇವರ ಮಹಿಮೆಯನ್ನು ನೋಡುವಿ ಎಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
40 Disse-lhe Jesus: "Não lhe falei que, se você cresse, veria a glória de Deus? "
41 ಆಗ ಅವರು ಸತ್ತವನನ್ನು ಇಟ್ಟಿದ್ದ ಸ್ಥಳದಿಂದ ಕಲ್ಲನ್ನು ತೆಗೆದುಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ--ತಂದೆಯೇ, ನೀನು ನನ್ನ ಪ್ರಾರ್ಥನೆಯನ್ನು ಕೇಳಿದ್ದಕ್ಕೆ ನಾನು ನಿನ್ನನ್ನು ಕೊಂಡಾಡುತ್ತೇನೆ.
41 Então tiraram a pedra. Jesus olhou para cima e disse: "Pai, eu te agradeço porque me ouviste.
42 ನೀನು ನನ್ನ ಪ್ರಾರ್ಥನೆಯನ್ನು ಯಾವಾಗಲೂ ಕೇಳುತ್ತೀ ಎಂದು ನಾನು ಬಲ್ಲೆನು. ಆದರೆ ನನ್ನ ಹತ್ತಿರದಲ್ಲಿ ನಿಂತಿರುವ ಜನರ ನಿಮಿತ್ತವಾಗಿ ನೀನು ನನ್ನನ್ನು ಕಳುಹಿಸಿದ್ದೀ ಎಂದು ಅವರು ನಂಬುವಂತೆ ನಾನು ಅದನ್ನು ಹೇಳಿದೆನು ಅಂದನು.
42 Eu sabia que sempre me ouves, mas disse isso por causa do povo que está aqui, para que creia que tu me enviaste".
43 ಆತನು ಹೀಗೆ ಮಾತನಾಡಿದ ಮೇಲೆ--ಲಾಜರನೇ, ಹೊರಗೆ ಬಾ ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು.
43 Depois de dizer isso, Jesus bradou em alta voz: "Lázaro, venha para fora! "
44 ಆಗ ಪ್ರೇತ ವಸ್ತ್ರಗಳಿಂದ ಕೈಕಾಲುಗಳನ್ನು ಕಟ್ಟಿದ್ದ ಆ ಸತ್ತವನು ಹೊರಗೆ ಬಂದನು. ಅವನ ಮುಖವು ವಸ್ತ್ರ ದಿಂದ ಸುತ್ತಲ್ಪಟ್ಟಿತ್ತು; ಯೇಸು ಅವರಿಗೆ--ಅವನನ್ನು ಬಿಚ್ಚಿರಿ, ಅವನು ಹೋಗಲಿ ಎಂದು ಹೇಳಿದನು.
44 O morto saiu, com as mãos e os pés envolvidos em faixas de linho, e o rosto envolto num pano. Disse-lhes Jesus: "Tirem as faixas dele e deixem-no ir".
45 ಆಗ ಮರಿಯಳ ಬಳಿಗೆ ಬಂದಿದ್ದ ಯೆಹೂದ್ಯ ರಲ್ಲಿ ಅನೇಕರು ಯೇಸು ಮಾಡಿದವುಗಳನ್ನು ನೋಡಿ ಆತನಲ್ಲಿ ನಂಬಿಕೆಯಿಟ್ಟರು.
45 Muitos dos judeus que tinham vindo visitar Maria, vendo o que Jesus fizera, creram nele.
46 ಆದರೆ ಅವರಲ್ಲಿ ಕೆಲವರು ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದವುಗಳನ್ನು ಅವರಿಗೆ ಹೇಳಿದರು.
46 Mas alguns deles foram contar aos fariseus o que Jesus tinha feito.
47 ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ?
47 Então os chefes dos sacerdotes e os fariseus convocaram uma reunião do Sinédrio. "O que estamos fazendo? ", perguntaram eles. "Aí está esse homem realizando muitos sinais miraculosos.
48 ನಾವು ಅವನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಅವನ ಮೇಲೆ ನಂಬಿಕೆಯಿಡುವರು ಮತ್ತು ರೋಮಾಯರು ಬಂದು ನಮ್ಮ ಸ್ಥಳವನ್ನೂ ಜನಾಂಗವನ್ನೂ ತೆಗೆದುಕೊಂಡು ಬಿಟ್ಟಾರು ಅಂದರು.
48 Se o deixarmos, todos crerão nele, e então os romanos virão e tirarão tanto o nosso lugar como a nossa nação".
49 ಆದರೆ ಅವರಲ್ಲಿ ಆ ವರುಷದ ಮಹಾಯಾಜಕ ನಾದ ಕಾಯಫನೆಂಬವನು ಅವರಿಗೆ--
49 Então um deles, chamado Caifás, que naquele ano era o sumo sacerdote, tomou a palavra e disse: "Nada sabeis!
50 ನಿಮಗೆ ಏನೂ ತಿಳಿಯದು; ಜನಾಂಗವೆಲ್ಲಾ ನಾಶವಾಗದ ಹಾಗೆ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವದು ನಮಗೆ ವಿಹಿತವಾಗಿದೆ ಎಂದು ನೀವು ಯೋಚಿಸುವದೂ ಇಲ್ಲ ಅಂದನು.
50 Não percebeis que vos é melhor que morra um homem pelo povo, e que não pereça toda a nação".
51 ಈ ಮಾತನ್ನು ತನ್ನಷ್ಟಕ್ಕೆ ತಾನೇ ಮಾತನಾಡಲಿಲ್ಲ; ಆದರೆ ಅವನು ಆ ವರುಷದಲ್ಲಿ ಮಹಾಯಾಜಕನಾಗಿದ್ದು ಯೇಸು ಆ ಜನಾಂಗಕ್ಕೋಸ್ಕರ ಮಾತ್ರವಲ್ಲದೆ
51 Ele não disse isso de si mesmo, mas, sendo o sumo sacerdote naquele ano, profetizou que Jesus morreria pela nação judaica,
52 ಚದರಿರುವ ದೇವರ ಮಕ್ಕಳನ್ನು ಒಟ್ಟುಗೂಡಿಸುವದಕ್ಕೂ ಆತನು ಸಾಯಬೇಕಾಗಿದೆ ಎಂದು ಅವನು ಪ್ರವಾದಿಸಿದನು.
52 e não somente por aquela nação, mas também pelos filhos de Deus que estão espalhados, para reuni-los num povo.
53 ಅವರು ಕೂಡಿ ಕೊಂಡು ಆ ದಿನದಿಂದ ಆತನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
53 E daquele dia em diante, resolveram tirar-lhe a vida.
54 ಹೀಗಿರುವದರಿಂದ ಯೇಸು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ತಿರುಗಾಡಲಿಲ್ಲ. ಆದರೆ ಅಲ್ಲಿಂದ ಅಡವಿಗೆ ಸವಿಾಪ ದಲ್ಲಿದ್ದ ಪ್ರದೇಶದ ಎಫ್ರಾಯಿಮ್‌ ಎಂಬ ಪಟ್ಟಣಕ್ಕೆ ಹೋಗಿ ಅಲ್ಲಿ ತನ್ನ ಶಿಷ್ಯರ ಸಂಗಡ ಇದ್ದನು.
54 Por essa razão, Jesus não andava mais publicamente entre os judeus. Ao invés disso, retirou-se para uma região próxima do deserto, para um povoado chamado Efraim, onde ficou com os seus discípulos.
55 ಆಗ ಯೆಹೂದ್ಯರ ಪಸ್ಕವು ಹತ್ತಿರವಾಗಿತ್ತು; ಅನೇಕರು ತಮ್ಮನ್ನು ಶುದ್ಧಿ ಮಾಡಿಕೊಳ್ಳುವದಕ್ಕೋಸ್ಕರ ಪಸ್ಕಕ್ಕೆ ಮುಂಚೆ ಹಳ್ಳಿಗಳಿಂದ ಯೆರೂಸಲೇಮಿಗೆ ಹೋದರು.
55 Ao se aproximar a Páscoa judaica, muitos foram daquela região para Jerusalém a fim de participarem das purificações cerimoniais antes da Páscoa.
56 ಆಗ ಅವರು ಯೇಸುವನ್ನು ಹುಡುಕು ವವರಾಗಿ ದೇವಾಲಯದಲ್ಲಿ ನಿಂತುಕೊಂಡಿದ್ದಾಗ--ಆತನು ಹಬ್ಬಕ್ಕೆ ಬರುವದಿಲ್ಲವೋ? ನಿಮಗೆ ಹೇಗೆ ಕಾಣುತ್ತದೆ ಎಂದು ತಮ್ಮತಮ್ಮೊಳಗೆ ಮಾತನಾಡಿ ಕೊಂಡರು.
56 Continuavam procurando Jesus e, no templo, perguntavam uns aos outros: "O que vocês acham? Será que ele virá à festa? "
57 ಆಗ ಪ್ರಧಾನಯಾಜಕರೂ ಫರಿಸಾಯ ರೂ ಆತನನ್ನು ಹಿಡಿಯುವಂತೆ ಆತನಿರುವ ಸ್ಥಳವು ಯಾರಿಗಾದರೂ ತಿಳಿದರೆ ಅವರು ತಮಗೆ ತೋರಿಸ ಬೇಕೆಂದು ಅಪ್ಪಣೆ ಕೊಟ್ಟಿದ್ದರು.
57 Mas os chefes dos sacerdotes e os fariseus tinham ordenado que, se alguém soubesse onde Jesus estava, o denunciasse, para que o pudessem prender.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar João 11, comparar traduções ou montar um estudo — tudo direto pelo WhatsApp.