João 13
Kannada Bible (GL_KANNADA) vs BKJ
BKJ BKJ
1 1 ಆಗ ಪಸ್ಕ ಹಬ್ಬದ ಮುಂಚೆ ಯೇಸು ತಾನು ಈ ಲೋಕದೊಳಗಿಂದ ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆಯು ಬಂತೆಂದು ತಿಳಿದು ಈ ಲೋಕದಲ್ಲಿದ್ದ ತನ್ನ ಸ್ವಂತದವರನ್ನು ಪ್ರೀತಿಸಿ ಅವರನ್ನು ಅಂತ್ಯದವರೆಗೆ ಪ್ರೀತಿಸಿದನು.
1 Ora, antes da festa da páscoa, sabendo Jesus que era chegada a sua hora de partir deste mundo para o Pai, e havendo amado os seus próprios que estavam no mundo, ele amou-os até o fim.
2 ಊಟವಾದ ಮೇಲೆ ಆತನನ್ನು ಹಿಡುಕೊಡಬೇಕೆಂಬದನ್ನು ಸೀಮೋ ನನ ಮಗನಾದ ಯೂದ ಇಸ್ಕರಿಯೋತನ ಹೃದಯದಲ್ಲಿ ಸೈತಾನನು ಆಲೋಚನೆ ಹುಟ್ಟಿಸಿದನು.
2 E, terminada a ceia, tendo já o diabo posto no coração de Judas Iscariotes, filho de Simão, que o traísse,
3 ತಂದೆಯು ತನ್ನ ಕೈಯಲ್ಲಿ ಎಲ್ಲವನ್ನೂ ಕೊಟ್ಟಿದ್ದಾನೆಂತಲೂ ತಾನು ದೇವರ ಬಳಿಯಿಂದ ಹೊರಟು ಬಂದಿದ್ದು ತಿರಿಗಿ ದೇವರ ಬಳಿಗೆ ಹೋಗುತ್ತೇನೆಂತಲೂ ಯೇಸು ತಿಳಿದು ಕೊಂಡು
3 Jesus, sabendo que o Pai lhe entregara todas as coisas em suas mãos, e que havia saído de Deus, e que ia para Deus,
4 ಊಟದಿಂದೆದ್ದು ತನ್ನ ಉಡುಪುಗಳನ್ನು ತೆಗೆದಿಟ್ಟು ಕೈ ಪಾವಡವನ್ನು ತಕ್ಕೊಂಡು ನಡುವನ್ನು ಕಟ್ಟಿಕೊಂಡನು.
4 levantou-se da ceia, colocou de lado as suas vestes e, tomando uma toalha, cingiu-se.
5 ತರುವಾಯ ಆತನು ಬೋಗುಣಿ ಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಕಾಲುಗಳನ್ನು ತೊಳೆಯುವದಕ್ಕೂ ತಾನು ನಡುವಿಗೆ ಕಟ್ಟಿಕೊಂಡ ಕೈ ಪಾವಡದಿಂದ ಅವುಗಳನ್ನು ಒರಸುವದಕ್ಕೂ ಪ್ರಾರಂಭಿಸಿದನು.
5 Depois, ele pôs água em uma bacia, e começou a lavar os pés dos discípulos, e a limpá-los com a toalha com a qual se cingia.
6 ಆತನು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಆತನಿಗೆ--ಕರ್ತನೇ, ನೀನು ನನ್ನ ಕಾಲುಗಳನ್ನು ತೊಳೆಯುತ್ತೀಯೋ ಎಂದು ಕೇಳಿ ದನು.
6 Aproximou-se, então, de Simão Pedro; e Pedro lhe disse: Senhor, tu lavarás os meus pés?
7 ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಮಾಡುವದು ಏನೆಂದು ಈಗ ನಿನಗೆ ತಿಳಿಯುವದಿಲ್ಲ; ಆದರೆ ಇನ್ನು ಮೇಲೆ ನಿನಗೆ ತಿಳಿಯುವದು ಅಂದನು.
7 Respondeu Jesus e disse-lhe: O que eu faço, tu não o sabes agora, mas depois tu saberás.
8 ಪೇತ್ರನು ಆತನಿಗೆ--ನೀನು ನನ್ನ ಕಾಲುಗಳನ್ನು ಎಂದಿಗೂ ತೊಳೆಯಬಾರದು ಅಂದನು; ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನ್ನನ್ನು ತೊಳೆಯ ದಿದ್ದರೆ ನನ್ನೊಂದಿಗೆ ನಿನಗೆ ಪಾಲಿಲ್ಲ ಎಂದು ಹೇಳಿದನು.
8 Disse-lhe Pedro: Tu nunca lavarás os meus pés. Respondeu-lhe Jesus: Se eu não lavá-los, tu não tens parte comigo.
9 ಅದಕ್ಕೆ ಸೀಮೋನ ಪೇತ್ರನು ಆತ ನಿಗೆ--ಕರ್ತನೇ, ನನ್ನ ಪಾದಗಳನ್ನು ಮಾತ್ರವಲ್ಲದೆ ನನ್ನ ಕೈಗಳನ್ನು ಮತ್ತು ತಲೆಯನ್ನು ಸಹ ತೊಳೆ ಅಂದನು.
9 Disse-lhe Simão Pedro: Senhor, não só os meus pés, mas também minhas mãos e a minha cabeça.
10 ಯೇಸು ಅವನಿಗೆ--ಸ್ನಾನಮಾಡಿಕೊಂಡವನು ತನ ಪಾದಗಳನ್ನು ಹೊರತು ಮತ್ತೇನೂ ತೊಳೆಯುವದು ಅವಶ್ಯವಿಲ್ಲ; ಯಾಕಂದರೆ ಅವನು ಸಂಪೂರ್ಣವಾಗಿ ಶುದ್ಧನಾಗಿದ್ದಾನೆ. ನೀವು ಶುದ್ಧರಾಗಿದ್ದೀರಿ, ಆದರೆ ಎಲ್ಲರೂ ಅಲ್ಲ ಅಂದನು.
10 Disse-lhe Jesus: Aquele que se lavou não necessita de lavar senão seus pés, porque no mais está todo limpo; e vós estais limpos, mas não todos.
11 ತನ್ನನ್ನು ಹಿಡಿದುಕೊಡುವ ವನು ಯಾರೆಂದು ಆತನು ತಿಳಿದಿದ್ದರಿಂದ--ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ ಎಂದು ಹೇಳಿದನು.
11 Porque ele sabia quem o havia de trair; por isso, disse: Nem todos estais limpos.
12 ಆತನು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಉಡುಪುಗಳನ್ನು ಹಾಕಿಕೊಂಡು ತಿರಿಗಿ ಕೂತು ಕೊಂಡ ಮೇಲೆ ಅವರಿಗೆ--ನಾನು ನಿಮಗೆ ಮಾಡಿದ್ದು ಏನೆಂದು ತಿಳಿಯಿತೋ?
12 Assim, após ter lavado os seus pés, tomou as suas vestes, e se assentando outra vez, ele disse-lhes: Entendeis o que eu vos tenho feito?
13 ನೀವು ನನ್ನನ್ನು ಬೋಧ ಕನು ಮತ್ತು ಕರ್ತನು ಎಂದು ಕರೆಯುತ್ತೀರಿ; ನೀವು ಹೇಳುವದು ಸರಿ; ಯಾಕಂದರೆ ನಾನು ಅಂಥವನೇ ಹೌದು.
13 Vós me chamais Mestre e Senhor; e dizeis bem, porque eu o sou.
14 ಹಾಗಾದರೆ ನಿಮ್ಮ ಕರ್ತನೂ ಬೋಧಕನೂ ಆಗಿರುವ ನಾನು ನಿಮ್ಮ ಕಾಲುಗಳನ್ನು ತೊಳೆದರೆ ನೀವು ಸಹ ಒಬ್ಬರ ಕಾಲುಗಳನ್ನೊಬ್ಬರು ತೊಳೆಯತಕ್ಕದ್ದು.
14 Se, então, seu Senhor e Mestre vos lavou os pés, vós deveis também lavar os pés uns dos outros.
15 ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ತೋರಿಸಿದ್ದೇನೆ.
15 Porque eu vos dei um exemplo, para que, como eu vos fiz, façais vós também.
16 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ತನ್ನ ಒಡೆಯನಿಗಿಂತ ಸೇವಕನು ದೊಡ್ಡವನಲ್ಲ; ಇಲ್ಲವೆ ಕಳುಹಿಸಲ್ಪಟ್ಟವನು ಅವನನ್ನು ಕಳುಹಿಸಿದವನಿಗಿಂತ ದೊಡ್ಡವನಲ್ಲ.
16 Na verdade, na verdade eu vos digo: O servo não é maior do que o seu senhor, nem o enviado maior do que aquele que o enviou.
17 ನೀವು ಇವು ಗಳನ್ನು ತಿಳುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.
17 Se sabeis essas coisas, felizes são os que as praticam.
18 ನಾನು ನಿಮ್ಮೆಲ್ಲರ ವಿಷಯದಲ್ಲಿ ಮಾತ ನಾಡುವದಿಲ್ಲ; ನಾನು ಆರಿಸಿಕೊಂಡವರನ್ನು ಬಲ್ಲೆನು; ಆದರೆ--ನನ್ನೊಂದಿಗೆ ರೊಟ್ಟಿಯನ್ನು ತಿನ್ನುವವನು ನನಗೆ ವಿರೋಧವಾಗಿ ತನ್ನ ಹಿಮ್ಮಡಿಯನ್ನು ಎತ್ತಿದ್ದಾನೆ ಎಂಬ ಬರಹವು ನೆರವೇರಬೇಕಾಗಿದೆ.
18 Eu não falo de todos vós, eu conheço aqueles que escolhi; mas para que possa se cumprir a escritura: O que come o pão comigo levantou contra mim o seu calcanhar.
19 ಅದು ಆಗುವಾಗ ನಾನೇ ಆತನೆಂದು ನೀವು ನಂಬುವಂತೆ ಅದು ಸಂಭವಿಸುವದಕ್ಕಿಂತ ಮುಂಚೆ ಈಗಲೇ ನಿಮಗೆ ಹೇಳುತ್ತೇನೆ.
19 Agora eu vos digo antes que aconteça, para que, quando acontecer, creiais que Eu Sou Ele.
20 ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ--ನಾನು ಕಳುಹಿಸಿದವನನ್ನು ಅಂಗೀಕರಿಸು ವವನು ನನ್ನನ್ನು ಅಂಗೀಕರಿಸುತ್ತಾನೆ; ನನ್ನನ್ನು ಅಂಗೀಕರಿ ಸುವವನು ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿ ಸುತ್ತಾನೆ.
20 Na verdade, na verdade eu vos digo: Quem receber aquele que eu enviar, a mim recebe; e quem me recebe, recebe aquele que me enviou.
21 ಯೇಸು ಹೀಗೆ ಹೇಳಿದ ಮೇಲೆ ಆತ್ಮದಲ್ಲಿ ಕಳವಳ ಗೊಂಡು ಸಾಕ್ಷೀಕರಿಸಿ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದು ಕೊಡುವನು ಎಂದು ಹೇಳಿದನು.
21 Tendo Jesus dito isso, turbou-se em espírito, e testificou, dizendo: Na verdade, na verdade eu vos digo que um de vós há de me trair.
22 ಆಗ ಶಿಷ್ಯರು ಅನುಮಾನದಿಂದ ಈತನು ಯಾರನ್ನು ಕುರಿತು ಹೇಳಿದನೆಂದು ಒಬ್ಬರನೊಬ್ಬರು ನೋಡಿದರು.
22 Então, os discípulos olhavam uns para os outros, duvidosos sobre de quem ele falava.
23 ಶಿಷ್ಯ ರಲ್ಲಿ ಯೇಸು ಪ್ರೀತಿಸಿದ ಒಬ್ಬನು ಆತನ ಎದೆಯ ಮೇಲೆ ಒರಗಿಕೊಂಡಿದ್ದನು.
23 Ora, achava-se reclinado sobre o peito de Jesus um de seus discípulos, aquele a quem Jesus amava.
24 ಆದದರಿಂದ ಸೀಮೋನ ಪೇತ್ರನು ಅವನಿಗೆ ಸನ್ನೆ ಮಾಡಿ ಆತನು ಯಾರ ವಿಷಯವಾಗಿ ಮಾತನಾಡಿದನೆಂದು ಕೇಳಿದನು.
24 Simão Pedro, portanto, acenou para ele, para perguntar quem era aquele de quem ele falava.
25 ತರುವಾಯ ಅವನು ಯೇಸುವಿನ ಎದೆಯಮೇಲೆ ಒರಗಿಕೊಂಡು--ಕರ್ತನೇ, ಅವನು ಯಾರು ಎಂದು ಆತನನ್ನು ಕೇಳಿದನು.
25 E, inclinando-se ele sobre o peito de Jesus, disse-lhe: Senhor, quem é este?
26 ಅದಕ್ಕೆ ಯೇಸು--ನಾನು ರೊಟ್ಟಿಯ ತುಂಡನ್ನು ಅದ್ದಿ ಯಾವನಿಗೆ ಕೊಡುತ್ತೇನೋ ಅವನೇ ಎಂದು ಉತ್ತರ ಕೊಟ್ಟನು. ಆ ರೊಟ್ಟಿಯ ತುಂಡನ್ನು ಅದ್ದಿ ಆತನು ಸೀಮೋನನ ಮಗನಾದ ಯೂದ ಇಸ್ಕರಿಯೋತನಿಗೆ ಕೊಟ್ಟನು.
26 Jesus respondeu: Ele é, aquele a quem eu der o bocado que eu mergulhei. E quando ele mergulhou o bocado, deu-o a Judas Iscariotes, filho de Simão.
27 ರೊಟ್ಟಿಯ ತುಂಡನ್ನು ತಕ್ಕೊಂಡ ಮೇಲೆ ಸೈತಾನನು ಅವನೊಳಗೆ ಹೊಕ್ಕನು. ಆಗ ಯೇಸು ಅವನಿಗೆ--ನೀನು ಮಾಡುವ ದನ್ನು ಬೇಗನೆ ಮಾಡು ಎಂದು ಹೇಳಿದನು.
27 E, após o bocado, entrou nele Satanás. Então, disse Jesus: O que tu fazes, faze-o depressa.
28 ಆತನು ಯೂದನಿಗೆ ಇದನ್ನು ಹೇಳಿದ ಉದ್ದೇಶವೇನೆಂದು ಊಟಕ್ಕೆ ಕೂತವರಲ್ಲಿ ಯಾರಿಗೂ ಗೊತ್ತಾಗಲಿಲ್ಲ.
28 Ora, nenhum homem na mesa sabia para que intenção lhe falara isso.
29 ಯೂದನು ಹಣದ ಚೀಲವನ್ನು ಇಟ್ಟುಕೊಂಡ ದ್ದರಿಂದ ಯೇಸು ಅವನಿಗೆ--ಹಬ್ಬಕ್ಕೆ ನಮಗೆ ಬೇಕಾದವು ಗಳನ್ನು ಕೊಂಡುಕೋ ಎಂತಲೋ ಇಲ್ಲವೆ ಬಡವರಿಗೆ ಏನಾದರೂ ಕೊಡು ಎಂತಲೋ ಅವನಿಗೆ ಆತನು ಹೇಳಿದನೆಂದು ಅವರಲ್ಲಿ ಕೆಲವರು ನೆನಸಿದರು.
29 Porque alguns deles pensavam que, como Judas tinha a bolsa, Jesus lhe tinha dito: Compra as coisas que nos são necessárias para a festa, ou que desse algo aos pobres.
30 ಯೂದನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ ಹೊರಗೆ ಹೋದನು; ಆಗ ರಾತ್ರಿಯಾಗಿತ್ತು.
30 Ele então tendo recebido o bocado, saiu imediatamente; e era noite.
31 ಅವನು ಹೊರಗೆ ಹೋದಮೇಲೆ ಯೇಸು-- ಈಗ ಮನುಷ್ಯಕುಮಾರನು ಮಹಿಮೆಪಟ್ಟಿದ್ದಾನೆ. ದೇವರು ಆತನಲ್ಲಿ ಮಹಿಮೆಪಟ್ಟಿದ್ದಾನೆ.
31 Portanto, tendo ele saído, disse Jesus: Agora é glorificado o Filho do homem, e Deus é glorificado nele.
32 ದೇವರು ಆತನಲ್ಲಿ ಮಹಿಮೆಪಟ್ಟಿರಲಾಗಿ ದೇವರು ಸಹ ಆತನನ್ನು ತನ್ನಲ್ಲಿಯೇ ಮಹಿಮೆಪಡಿಸುವನು; ಕೂಡಲೆ ಆತನನ್ನು ಮಹಿಮೆಪಡಿಸುವನು.
32 Se Deus é glorificado nele, também Deus o glorificará em si mesmo, e imediatamente o glorificará nele.
33 ಚಿಕ್ಕಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮ ಸಂಗಡ ಇರುತ್ತೇನೆ, ನೀವು ನನ್ನನ್ನು ಹುಡುಕುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರೆಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.
33 Filhinhos, ainda por um pouco eu estou convosco. Vós me buscareis; e como eu disse aos judeus: Para onde eu vou não podeis vós ir; eu também agora vos digo.
34 ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಒಂದು ಹೊಸ ಆಜ್ಞೆಯನ್ನು ನಾನು ನಿಮಗೆ ಕೊಡುತ್ತೇನೆ--ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು.
34 Um novo mandamento eu vos dou: Que vos ameis uns aos outros; assim como eu vos amei, que vós também vos ameis uns aos outros.
35 ಒಬ್ಬರ ಮೇಲೊಬ್ಬರಿಗೆ ಪ್ರೀತಿಯಿದ್ದರೆ ಇದರಿಂದ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳು ವರು ಎಂದು ಹೇಳಿದನು.
35 Nisto todos os homens conhecerão que sois meus discípulos, se tiverdes amor uns aos outros.
36 ಸೀಮೋನ ಪೇತ್ರನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ? ಅನ್ನಲು ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಹೋಗುವಲ್ಲಿಗೆ ನೀನು ಈಗ ಬರಲಾರಿ; ತರುವಾಯ ನೀನು ನನ್ನನ್ನು ಹಿಂಬಾಲಿಸುವಿ ಅಂದನು.
36 Disse-lhe Simão Pedro: Senhor, para onde tu vais? Jesus lhe respondeu: Para onde eu vou, tu agora não podes me seguir, mas depois me seguirás.
37 ಪೇತ್ರನು ಆತನಿಗೆ-- ಕರ್ತನೇ, ನಾನು ಯಾಕೆ ಈಗ ನಿನ್ನ ಹಿಂದೆ ಬರ ಲಾರೆನು? ನಿನಗೋಸ್ಕರ ನನ್ನ ಪ್ರಾಣವನ್ನು ಕೊಡು ವೆನು ಅಂದನು.
37 Disse-lhe Pedro: Senhor, por que eu não posso seguir-te agora? Por ti darei a minha vida.
38 ಯೇಸು ಪ್ರತ್ಯುತ್ತರವಾಗಿ ಅವ ನಿಗೆ--ನೀನು ನನಗೋಸ್ಕರ ನಿನ್ನ ಪ್ರಾಣವನ್ನು ಕೊಡು ತ್ತೀಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವ ತನಕ ಹುಂಜವು ಕೂಗುವದಿಲ್ಲ ಅಂದನು.
38 Respondeu-lhe Jesus: Tu darás a tua vida por minha causa? Na verdade, na verdade eu te digo: Não cantará o galo até que me tenhas negado por três vezes.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar João 13, comparar traduções ou montar um estudo — tudo direto pelo WhatsApp.