João 3

Kannada Bible (GL_KANNADA) vs NAA

Sair da comparação
NAA Nova Almeida Atualizada 2017
1 ಫರಿಸಾಯರಲ್ಲಿ ಯೆಹೂದ್ಯರ ಅಧಿಕಾರಿ ಯಾದ ನಿಕೊದೇಮನೆಂಬ ಒಬ್ಬ ಮನುಷ್ಯ ನಿದ್ದನು.
1 Havia entre os fariseus um homem chamado Nicodemos, um dos principais dos judeus.
2 ಇವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ--ರಬ್ಬಿಯೇ (ಗುರುವು), ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು, ಯಾಕಂದರೆ ದೇವರು ಒಬ್ಬನ ಕೂಡ ಇಲ್ಲದ ಹೊರತು ನೀನು ಮಾಡುವ ಅದ್ಭುತಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು ಅಂದನು.
2 Este, de noite, foi até Jesus e lhe disse: — Rabi, sabemos que o senhor é Mestre vindo da parte de Deus, porque ninguém pode fazer estes sinais que o senhor faz, se Deus não estiver com ele.
3 ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು.
3 Jesus respondeu:
4 ನಿಕೊದೇಮನು ಆತನಿಗೆ--ಒಬ್ಬನು ಮುದುಕನಾದ ಮೇಲೆ ಹುಟ್ಟುವದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವದಾದೀತೇ ಎಂದು ಕೇಳಿದನು.
4 Nicodemos perguntou: — Como pode um homem nascer, sendo velho? Será que pode voltar ao ventre materno e nascer uma segunda vez?
5 ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.
5 Jesus respondeu:
6 ಶರೀರದಿಂದ ಹುಟ್ಟಿದ್ದು ಶರೀ ರವೇ; ಆತ್ಮನಿಂದ ಹುಟ್ಟಿದ್ದು ಆತ್ಮವೇ.
6 O que é nascido da carne é carne, e o que é nascido do Espírito é espírito.
7 ನೀವು ತಿರಿಗಿ ಹುಟ್ಟತಕ್ಕದ್ದು ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ.
7 Não fique admirado por eu dizer: “Vocês precisam nascer de novo.”
8 ಗಾಳಿಯು ತನ್ನ ಮನಸ್ಸು ಬಂದ ಕಡೆಗೆ ಬೀಸುತ್ತದೆ; ನೀನು ಅದರ ಶಬ್ದವನ್ನು ಕೇಳುತ್ತೀ; ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗು ತ್ತದೋ ಹೇಳಲಾರಿ; ಅದರಂತೆಯೇ ಆತ್ಮನಿಂದ ಹುಟ್ಟಿದ ಪ್ರತಿಯೊಬ್ಬನು ಇದ್ದಾನೆ ಅಂದನು.
8 O vento sopra onde quer, você ouve o barulho que ele faz, mas não sabe de onde ele vem, nem para onde vai; assim é todo o que é nascido do Espírito.
9 ಅದಕ್ಕೆ ನಿಕೊ ದೇಮನು ಪ್ರತ್ಯುತ್ತರವಾಗಿ ಆತನಿಗೆ--ಇವುಗಳು ಹೇಗಾದಾವು ಎಂದು ಕೇಳಿದ್ದಕ್ಕೆ
9 Então Nicodemos perguntou: — Como pode ser isso? Jesus respondeu:
10 ಯೇಸು ಪ್ರತ್ಯುತ್ತರ ವಾಗಿ ಅವನಿಗೆ--ಇಸ್ರಾಯೇಲ್ಯರಿಗೆ ಬೋಧಕನಾಗಿ ರುವ ನಿನಗೆ ಈ ವಿಷಯಗಳು ತಿಳಿಯುವದಿಲ್ಲವೋ?
10 — Você é mestre em Israel e não compreende estas coisas?
11 ನಾನು ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ನಾವು ಅರಿತಿರುವದನ್ನು ಮಾತನಾಡುತ್ತೇವೆ ಮತ್ತು ನೋಡಿ ದ್ದಕ್ಕೆ ಸಾಕ್ಷೀಕರಿಸುತ್ತೇವೆ; ಆದರೆ ನೀವು ನಮ್ಮ ಸಾಕ್ಷಿ ಯನ್ನು ಅಂಗೀಕರಿಸುವದಿಲ್ಲ.
11 Em verdade, em verdade lhe digo que nós falamos do que sabemos e damos testemunho do que vimos, mas vocês não aceitam o nosso testemunho.
12 ನಾನು ಭೂಲೋಕ ದವುಗಳನ್ನು ನಿಮಗೆ ಹೇಳಿದರೆ ನೀವು ನಂಬುವದಿಲ್ಲ; ಆದರೆ ಪರಲೋಕದವುಗಳನ್ನು ನಿಮಗೆ ಹೇಳಿದರೆ ಹೇಗೆ ನಂಬೀರಿ?
12 Se vocês não creem quando falo sobre coisas terrenas, como crerão se eu lhes falar sobre as celestiais?
13 ಪರಲೋಕದಿಂದ ಇಳಿದು ಬಂದಾತನೇ ಅಂದರೆ ಪರಲೋಕದಲ್ಲಿರುವ ಮನುಷ್ಯ ಕುಮಾರನೇ ಹೊರತು ಯಾವನೂ ಪರಲೋಕಕ್ಕೆ ಏರಿಹೋದವನಲ್ಲ.
13 Ora, ninguém subiu ao céu, a não ser aquele que de lá desceu, o Filho do Homem.
14 ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಎತ್ತಿದ ಹಾಗೆಯೇ ಮನುಷ್ಯ ಕುಮಾರನು ಸಹ ಎತ್ತಲ್ಪಡತಕ್ಕದ್ದು.
14 — E assim como Moisés levantou a serpente no deserto, assim também é necessário que o Filho do Homem seja levantado,
15 ಹೀಗೆ ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದಿರುವನು.
15 para que todo o que nele crê tenha a vida eterna.
16 ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.
16 Porque Deus amou o mundo de tal maneira que deu o seu Filho unigênito, para que todo o que nele crê não pereça, mas tenha a vida eterna.
17 ದೇವರು ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ; ಆದರೆ ತನ್ನ ಮಗನ ಮುಖಾಂತರ ಲೋಕವನ್ನು ರಕ್ಷಿಸುವದಕ್ಕಾಗಿ ಆತನನ್ನು ಕಳುಹಿಸಿದನು.
17 Porque Deus enviou o seu Filho ao mundo, não para que condenasse o mundo, mas para que o mundo fosse salvo por ele.
18 ಆತನ ಮೇಲೆ ನಂಬಿಕೆ ಇಡುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬಿಕೆಯಿಡದವನಿಗೆ ಆಗಲೇ ತೀರ್ಪಾಯಿತು; ಯಾಕಂದರೆ ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.
18 Quem nele crê não é condenado; mas o que não crê já está condenado, porque não crê no nome do unigênito Filho de Deus.
19 ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.
19 A condenação é esta: a luz veio ao mundo, mas os homens amaram mais as trevas do que a luz, porque as suas obras eram más.
20 ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ.
20 Pois todo aquele que pratica o mal detesta a luz e não se aproxima da luz, para que as suas obras não sejam reprovadas.
21 ಆದರೆ ಸತ್ಯವನ್ನು ಅನುಸರಿಸುವವನು ತನ್ನ ಕೃತ್ಯಗಳು ದೇವರಿಂದ ಮಾಡಲ್ಪಟ್ಟವುಗಳೆಂದು ಪ್ರಕಟವಾಗು ವಂತೆ ಬೆಳಕಿಗೆ ಬರುತ್ತಾನೆ ಎಂದು ಹೇಳಿದನು.
21 Quem pratica a verdade se aproxima da luz, para que as suas obras sejam manifestas, porque são feitas em Deus.
22 ಇವುಗಳಾದ ಮೇಲೆ ಯೇಸುವೂ ಆತನ ಶಿಷ್ಯರೂ ಯೂದಾಯ ದೇಶಕ್ಕೆ ಬಂದರು; ಅಲ್ಲಿ ಆತನು ಅವರೊಂದಿಗೆ ಇದ್ದು ಬಾಪ್ತಿಸ್ಮ ಮಾಡಿಸುತ್ತಿದ್ದನು.
22 Depois disso, Jesus foi com os seus discípulos para a terra da Judeia; ali permaneceu com eles e batizava.
23 ಇದಲ್ಲದೆ ಯೋಹಾನನು ಸಹ ಸಲೀಮಿನ ಸವಿಾಪ ದಲ್ಲಿದ್ದ ಐನೋನಿನಲ್ಲಿ ಬಾಪ್ತಿಸ್ಮ ಮಾಡಿಸುತ್ತಿದ್ದನು; ಯಾಕಂದರೆ ಅಲ್ಲಿ ಬಹಳ ನೀರು ಇತ್ತು; ಅವರು (ಜನರು) ಬಂದು ಬಾಪ್ತಿಸ್ಮ ಮಾಡಿಸಿಕೊಳ್ಳುತ್ತಿದ್ದರು.
23 Ora, João também estava batizando em Enom, perto de Salim, porque ali havia muitas águas, e o povo se dirigia para lá e era batizado.
24 ಯಾಕಂದರೆ ಯೋಹಾನನು ಅದುವರೆಗೆ ಸೆರೆಯಲ್ಲಿ ಹಾಕಲ್ಪಟ್ಟಿರಲಿಲ್ಲ.
24 Pois João ainda não havia sido preso.
25 ತರುವಾಯ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಯೆಹೂದ್ಯರಿಗೂ ಮಧ್ಯದಲ್ಲಿ ಶುದ್ಧೀಕರಣದ ವಿಷಯವಾಗಿ ವಿವಾದ ಉಂಟಾಯಿತು.
25 Então surgiu uma discussão entre os discípulos de João e um judeu a respeito da purificação.
26 ಅವರು ಯೋಹಾನನ ಬಳಿಗೆ ಬಂದು ಅವ ನಿಗೆ--ಗುರುವೇ, ಇಗೋ, ಯೊರ್ದನಿನ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬಾತನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಆತನೂ ಬಾಪ್ತಿಸ್ಮ ಮಾಡಿಸುತ್ತಾನೆ, ಎಲ್ಲರೂ ಆತನ ಬಳಿಗೆ ಹೋಗುತ್ತಾರೆ ಅಂದರು.
26 E foram até João e lhe disseram: — Mestre, aquele que estava com o senhor no outro lado do Jordão, do qual o senhor deu testemunho, está batizando, e todos vão até ele.
27 ಯೋಹಾನನು ಪ್ರತ್ಯುತ್ತರವಾಗಿ--ಪರಲೋಕ ದಿಂದ ಒಬ್ಬ ಮನುಷ್ಯನಿಗೆ ಕೊಡಲ್ಪಡದ ಹೊರತು ಅವನು ಯಾವದನ್ನೂ ಹೊಂದಲಾರನು.
27 João respondeu: — Ninguém pode receber coisa alguma se não lhe for dada do céu.
28 ನಾನು ಕ್ರಿಸ್ತನಲ್ಲ, ಆದರೆ ಆತನ ಮುಂದಾಗಿ ಕಳುಹಿಸಲ್ಪಟ್ಟ ವನೆಂದು ನಾನು ಹೇಳಿದ್ದಕ್ಕೆ ನೀವೇ ನನಗೆ ಸಾಕ್ಷಿಗಳಾ ಗಿದ್ದೀರಿ.
28 Vocês mesmos são testemunhas de que eu disse: “Eu não sou o Cristo, mas fui enviado como o seu precursor.”
29 ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೆ ಮದಲಿಂಗನ ಸ್ನೇಹಿತನು ನಿಂತುಕೊಂಡು ಆತನ ಮಾತನ್ನು ಕೇಳಿ ಮದಲಿಂಗನ ಧ್ವನಿಗೆ ಬಹಳವಾಗಿ ಸಂತೋಷ ಪಡುತ್ತಾನೆ; ಆದಕಾರಣ ಈ ನನ್ನ ಸಂತೋಷವು ನೆರವೇರಿತು.
29 O que tem a noiva é o noivo; o amigo do noivo que está presente e o escuta se alegra muito por causa da voz do noivo. Pois essa alegria já se cumpriu em mim.
30 ಆತನು ಹೆಚ್ಚಿಸಲ್ಪ ಡತಕ್ಕದ್ದು; ನಾನು ತಗ್ಗಿಸಲ್ಪಡತಕ್ಕದ್ದು.
30 Convém que ele cresça e que eu diminua.
31 ಮೇಲಿನಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ; ಯಾವನು ಭೂಸಂಬಂಧವಾದವನಾಗಿದ್ದಾನೋ ಅವನು ಭೂ ಸಂಬಂಧದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ; ಪರಲೋಕದಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ.
31 Quem vem das alturas certamente está acima de todos; quem vem da terra é terreno e fala da terra. Quem veio do céu está acima de todos
32 ಆತನು ಯಾವದನ್ನು ಕಂಡು ಕೇಳಿದನೋ ಅದಕ್ಕೆ ಸಾಕ್ಷಿ ಕೊಡುತ್ತಾನೆ; ಆದರೆ ಆತನ ಸಾಕ್ಷಿಯನ್ನು ಯಾವನೂ ಅಂಗೀಕರಿಸುವದಿಲ್ಲ.
32 e dá testemunho daquilo que viu e ouviu, mas ninguém aceita o seu testemunho.
33 ಆತನ ಸಾಕ್ಷಿಯನ್ನು ಅಂಗೀಕರಿಸಿದವನು ದೇವರು ಸತ್ಯವಂತನೆಂಬದಕ್ಕೆ ತನ್ನ ಮುದ್ರೆಯನ್ನು ಹಾಕಿದ್ದಾನೆ.
33 Quem, porém, aceita o testemunho que ele dá certifica que Deus é verdadeiro.
34 ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ.
34 Pois aquele que Deus enviou fala as palavras de Deus, porque Deus não dá o Espírito por medida.
35 ತಂದೆಯು ಮಗನನ್ನು ಪ್ರೀತಿಸಿ ಎಲ್ಲವುಗಳನ್ನು ಆತನ ಕೈಯಲ್ಲಿ ಕೊಟ್ಟಿದ್ದಾನೆ.
35 O Pai ama o Filho e entregou todas as coisas nas mãos dele.
36 ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
36 Por isso, quem crê no Filho tem a vida eterna; quem se mantém rebelde contra o Filho não verá a vida, mas sobre ele permanece a ira de Deus.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar João 3, comparar traduções ou montar um estudo — tudo direto pelo WhatsApp.