João 5

Kannada Bible (GL_KANNADA) vs ARA

Sair da comparação
ARA Almeida Revista e Atualizada 1993
1 ಇದಾದ ಮೇಲೆ ಯೆಹೂದ್ಯರದೊಂದು ಹಬ್ಬ ಇದ್ದದರಿಂದ ಯೇಸು ಯೆರೂ ಸಲೇಮಿಗೆ ಹೋದನು.
1 Passadas estas coisas, havia uma festa dos judeus, e Jesus subiu para Jerusalém.
2 ಯೆರೂಸಲೇಮಿನಲ್ಲಿ ಕುರಿ ಮಾರುವ ಸ್ಥಳದ ಹತ್ತಿರದಲ್ಲಿ ಒಂದು ಕೊಳವಿದೆ; ಇದು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯ ಲ್ಪಡುತ್ತದೆ. ಅದಕ್ಕೆ ಐದು ದ್ವಾರಾಂಗಳಗಳಿವೆ.
2 Ora, existe ali, junto à Porta das Ovelhas, um tanque, chamado em hebraico Betesda, o qual tem cinco pavilhões.
3 ಇವು ಗಳಲ್ಲಿ ಬಲಹೀನರೂ ಕುರುಡರೂ ಕುಂಟರೂ ಮೈ ಒಣಗಿದವರೂ ಆಗಿದ್ದ ದೊಡ್ಡ ಸಮೂಹವು ಬಿದ್ದು ಕೊಂಡಿದ್ದು ನೀರಿನ ಕದಲಿಸುವಿಕೆಗಾಗಿ ಕಾದುಕೊಂಡಿ ದ್ದರು.
3 Nestes, jazia uma multidão de enfermos, cegos, coxos, paralíticos
4 ಆಯಾ ಕಾಲದಲ್ಲಿ ಒಬ್ಬ ದೂತನು ಕೊಳ ದೊಳಗೆ ಇಳಿದುಹೋಗಿ ನೀರನ್ನು ಕದಲಿಸುತ್ತಿದ್ದನು; ನೀರು ಕದಲಿಸಲ್ಪಟ್ಟ ಮೇಲೆ ಮೊದಲು ಯಾರು ನೀರಿನೊಳಗೆ ಹೆಜ್ಜೆಯಿಡುತ್ತಿದ್ದರೋ ಅವರಿಗೆ ಯಾವ ರೋಗವಿದ್ದರೂ ಸ್ವಸ್ಥವಾಗುತ್ತಿತ್ತು.
4 [esperando que se movesse a água. Porquanto um anjo descia em certo tempo, agitando-a; e o primeiro que entrava no tanque, uma vez agitada a água, sarava de qualquer doença que tivesse].
5 ಆಗ ಮೂವತ್ತೆಂಟು ವರುಷದಿಂದ ರೋಗಿಯಾಗಿದ್ದ ಒಬ್ಬಾನೊಬ್ಬ ಮನು ಷ್ಯನು ಅಲ್ಲಿ ಇದ್ದನು.
5 Estava ali um homem enfermo havia trinta e oito anos.
6 ಅವನು ಬಿದ್ದುಕೊಂಡಿರುವದನ್ನು ಯೇಸು ನೋಡಿ ಅವನು ಬಹುಕಾಲದಿಂದ ಆ ಸ್ಥಿತಿ ಯಲ್ಲಿ ಇದ್ದಾನೆಂದು ತಿಳಿದು ಅವನಿಗೆ--ನಿನಗೆ ಸ್ವಸ್ಥವಾ ಗುವದಕ್ಕೆ ಮನಸ್ಸುಂಟೋ ಎಂದು ಕೇಳಿದನು.
6 Jesus, vendo-o deitado e sabendo que estava assim há muito tempo, perguntou-lhe: Queres ser curado?
7 ಅದಕ್ಕೆ ಆ ರೋಗಿಯು ಪ್ರತ್ಯುತ್ತರವಾಗಿ ಆತನಿಗೆ--ಅಯ್ಯಾ, ನೀರು ಕದಲಿಸಲ್ಪಡುವಾಗ ನನ್ನನ್ನು ಕೊಳದೊಳಗೆ ಇಳಿಸುವದಕ್ಕೆ ನನಗೆ ಯಾರು ಇಲ್ಲ; ಆದರೆ ನಾನು ಬರುತ್ತಿರುವಾಗಲೇ ನನಗಿಂತ ಮುಂದಾಗಿ ಮತ್ತೊಬ್ಬನು ಇಳಿಯುತ್ತಾನೆ ಅಂದನು.
7 Respondeu-lhe o enfermo: Senhor, não tenho ninguém que me ponha no tanque, quando a água é agitada; pois, enquanto eu vou, desce outro antes de mim.
8 ಯೇಸು ಅವನಿಗೆ-- ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅಂದನು.
8 Então, lhe disse Jesus: Levanta-te, toma o teu leito e anda.
9 ಕೂಡಲೆ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು; ಆ ದಿನವು ಸಬ್ಬತ್ತಾಗಿತ್ತು.
9 Imediatamente, o homem se viu curado e, tomando o leito, pôs-se a andar. E aquele dia era sábado.
10 ಆದದರಿಂದ ಯೆಹೂದ್ಯರು ಸ್ವಸ್ಥನಾದವನಿಗೆ--ಇದು ಸಬ್ಬತ್‌ ದಿನವಾಗಿದೆ; ನೀನು ಹಾಸಿಗೆಯನ್ನು ಹೊತ್ತುಕೊಳ್ಳುವದು ನ್ಯಾಯವಲ್ಲ ಅಂದರು.
10 Por isso, disseram os judeus ao que fora curado: Hoje é sábado, e não te é lícito carregar o leito.
11 ಅವನು ಪ್ರತ್ಯುತ್ತರವಾಗಿ ಅವರಿಗೆ--ನನ್ನನ್ನು ಸ್ವಸ್ಥ ಮಾಡಿದಾತನೇ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನನಗೆ ಹೇಳಿದ್ದಾನೆ ಅಂದನು.
11 Ao que ele lhes respondeu: O mesmo que me curou me disse: Toma o teu leito e anda.
12 ಅದಕ್ಕೆ ಅವರು ಅವನಿಗೆ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನಿನಗೆ ಹೇಳಿದ ಮನುಷ್ಯನು ಯಾರು ಎಂದು ಕೇಳಿದರು.
12 Perguntaram-lhe eles: Quem é o homem que te disse: Toma o teu leito e anda?
13 ಆದರೆ ಆತನು ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ; ಯಾಕಂದರೆ ಆ ಸ್ಥಳ ದಲ್ಲಿ ಜನಸಮೂಹವು ಇದ್ದದರಿಂದ ಯೇಸು ಅಲ್ಲಿಂದ ಸರಕೊಂಡು ಹೋಗಿದ್ದನು.
13 Mas o que fora curado não sabia quem era; porque Jesus se havia retirado, por haver muita gente naquele lugar.
14 ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು ಅವ ನಿಗೆ--ಇಗೋ, ನಿನಗೆ ಸ್ವಸ್ಥವಾಯಿತಲ್ಲಾ; ನಿನ್ನ ಮೇಲೆ ಹೆಚ್ಚಿನ ಕೇಡು ಬಾರದಂತೆ ಇನ್ನು ಪಾಪಮಾಡಬೇಡ ಅಂದನು.
14 Mais tarde, Jesus o encontrou no templo e lhe disse: Olha que já estás curado; não peques mais, para que não te suceda coisa pior.
15 ಆಗ ಅವನು ಹೊರಟು ಹೋಗಿ ತನ್ನನ್ನು ಸ್ವಸ್ಥಪಡಿಸಿದಾತನು ಯೇಸುವೇ ಎಂದು ಯೆಹೂದ್ಯ ರಿಗೆ ತಿಳಿಸಿದನು.
15 O homem retirou-se e disse aos judeus que fora Jesus quem o havia curado.
16 ಆತನು ಇವುಗಳನ್ನು ಸಬ್ಬತ್‌ ದಿನದಲ್ಲಿ ಮಾಡಿದ ಕಾರಣ ಯೆಹೂದ್ಯರು ಯೇಸು ವನ್ನು ಹಿಂಸಿಸಿ ಆತನನ್ನು ಕೊಲ್ಲುವದಕ್ಕೆ ನೋಡಿದರು.
16 E os judeus perseguiam Jesus, porque fazia estas coisas no sábado.
17 ಆದರೆ ಯೇಸು ಅವರಿಗೆ--ನನ್ನ ತಂದೆಯು ಈ ವರೆಗೂ ಕೆಲಸ ಮಾಡುತ್ತಾನೆ ಮತ್ತು ನಾನೂ ಕೆಲಸ ಮಾಡುತ್ತೇನೆ ಅಂದನು.
17 Mas ele lhes disse: Meu Pai trabalha até agora, e eu trabalho também.
18 ಆದದರಿಂದ ಆತನು ಸಬ್ಬತ್ತನ್ನು ವಿಾರಿದ್ದು ಮಾತ್ರವಲ್ಲದೆ ದೇವರನ್ನು ತನ್ನ ಸ್ವಂತ ತಂದೆ ಎಂದು ಕರೆದು ತನ್ನನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಇನ್ನಷ್ಟು ಪ್ರಯತ್ನ ಮಾಡಿದರು.
18 Por isso, pois, os judeus ainda mais procuravam matá-lo, porque não somente violava o sábado, mas também dizia que Deus era seu próprio Pai, fazendo-se igual a Deus.
19 ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ-- ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವದನ್ನು ಕಂಡದ್ದನ್ನಲ್ಲದೆ ಮಗನು ತನ್ನಷ್ಟಕ್ಕೆ ತಾನೇ ಯಾವದನ್ನೂ ಮಾಡಲಾರನು; ಆತನು ಮಾಡುವದನ್ನೆಲ್ಲಾ ಹಾಗೆಯೇ ಮಗನೂ ಮಾಡುವನು.
19 Então, lhes falou Jesus: Em verdade, em verdade vos digo que o Filho nada pode fazer de si mesmo, senão somente aquilo que vir fazer o Pai; porque tudo o que este fizer, o Filho também semelhantemente o faz.
20 ಯಾಕಂದರೆ ತಂದೆಯು ಮಗನನ್ನು ಪ್ರೀತಿಸಿ ತಾನು ಸ್ವತಃ ಮಾಡುವವುಗಳನ್ನೆಲ್ಲಾ ಮಗನಿಗೆ ತೋರಿಸುತ್ತಾನೆ; ನೀವು ಆಶ್ಚರ್ಯಪಡುವ ಹಾಗೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು.
20 Porque o Pai ama ao Filho, e lhe mostra tudo o que faz, e maiores obras do que estas lhe mostrará, para que vos maravilheis.
21 ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನೂ ತನಗೆ ಇಷ್ಟವಿರು ವವರನ್ನು ಬದುಕಿಸುತ್ತಾನೆ.
21 Pois assim como o Pai ressuscita e vivifica os mortos, assim também o Filho vivifica aqueles a quem quer.
22 ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವದಿಲ್ಲ;
22 E o Pai a ninguém julga, mas ao Filho confiou todo julgamento,
23 ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ.
23 a fim de que todos honrem o Filho do modo por que honram o Pai. Quem não honra o Filho não honra o Pai que o enviou.
24 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ.
24 Em verdade, em verdade vos digo: quem ouve a minha palavra e crê naquele que me enviou tem a vida eterna, não entra em juízo, mas passou da morte para a vida.
25 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು.
25 Em verdade, em verdade vos digo que vem a hora e já chegou, em que os mortos ouvirão a voz do Filho de Deus; e os que a ouvirem viverão.
26 ತಂದೆಯು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಆತನು ಅನುಗ್ರಹಿಸಿದ್ದಾನೆ.
26 Porque assim como o Pai tem vida em si mesmo, também concedeu ao Filho ter vida em si mesmo.
27 ಆತನು ಮನುಷ್ಯಕುಮಾರ ನಾಗಿರುವದರಿಂದ ನ್ಯಾಯತೀರಿಸುವ ಅಧಿಕಾರವನ್ನು ಸಹ ಆತನಿಗೆ ಕೊಟ್ಟಿದ್ದಾನೆ.
27 E lhe deu autoridade para julgar, porque é o Filho do Homem.
28 ಇದಕ್ಕೆ ಆಶ್ಚರ್ಯಪಡ ಬೇಡಿರಿ; ಒಂದು ಕಾಲ ಬರುತ್ತದೆ; ಆಗ ಸಮಾಧಿಗಳಲ್ಲಿ ರುವವರೆಲ್ಲರೂ ಆತನ ಧ್ವನಿಯನ್ನು ಕೇಳಿ ಹೊರಗೆ ಬರುವರು,
28 Não vos maravilheis disto, porque vem a hora em que todos os que se acham nos túmulos ouvirão a sua voz e sairão:
29 ಒಳ್ಳೇದನ್ನು ಮಾಡಿದವರು ಜೀವದ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ತೀರ್ಪಿನ ಪುನರುತ್ಥಾನವನ್ನೂ ಹೊಂದುವರು.
29 os que tiverem feito o bem, para a ressurreição da vida; e os que tiverem praticado o mal, para a ressurreição do juízo.
30 ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ನಾನು ಕೇಳುವಂತೆಯೇ ತೀರ್ಪು ಮಾಡುತ್ತೇನೆ ಮತ್ತು ನನ್ನ ತೀರ್ಪು ನ್ಯಾಯ ವಾದದ್ದು; ಯಾಕಂದರೆ ನಾನು ನನ್ನ ಸ್ವಂತಚಿತ್ತವನ್ನಲ್ಲ, ಆದರೆ ನನ್ನನ್ನು ಕಳುಹಿಸಿದ ತಂದೆಯ ಚಿತ್ತವು ನೆರವೇರ ಬೇಕೆಂದು ಅಪೆಕ್ಷಿಸುತ್ತೇನೆ.
30 Eu nada posso fazer de mim mesmo; na forma por que ouço, julgo. O meu juízo é justo, porque não procuro a minha própria vontade, e sim a daquele que me enviou.
31 ನನ್ನನ್ನು ಕುರಿತು ನಾನೇ ಸಾಕ್ಷಿ ಹೇಳುವದಾದರೆ ನನ್ನ ಸಾಕ್ಷಿಯು ನಿಜವಾದದ್ದಲ್ಲ.
31 Se eu testifico a respeito de mim mesmo, o meu testemunho não é verdadeiro.
32 ನನ್ನನ್ನು ಕುರಿತು ಸಾಕ್ಷಿಕೊಡುವಾತನು ಬೇರೊಬ್ಬನಿ ದ್ದಾನೆ; ಆತನು ನನ್ನ ವಿಷಯದಲ್ಲಿ ಕೊಡುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು.
32 Outro é o que testifica a meu respeito, e sei que é verdadeiro o testemunho que ele dá de mim.
33 ನೀವು ಯೋಹಾನನ ಬಳಿಗೆ ಕಳುಹಿಸಿದಿರಿ; ಅವನು ಸತ್ಯಕ್ಕೆ ಸಾಕ್ಷಿಕೊಟ್ಟನು.
33 Mandastes mensageiros a João, e ele deu testemunho da verdade.
34 ನಾನು ಮನುಷ್ಯನಿಂದ ಸಾಕ್ಷಿ ಅಂಗೀಕರಿಸುವದಿಲ್ಲ; ಆದರೆ ನೀವು ರಕ್ಷಣೆ ಹೊಂದುವಂತೆ ನಾನು ಇವು ಗಳನ್ನು ಹೇಳುತ್ತೇನೆ.
34 Eu, porém, não aceito humano testemunho; digo-vos, entretanto, estas coisas para que sejais salvos.
35 ಅವನು ಉರಿದು ಪ್ರಕಾಶಿಸುವ ದೀಪವಾಗಿದ್ದನು; ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಸಂತೋಷಿಸುವದಕ್ಕೆ ಮನಸ್ಸುಳ್ಳವರಾಗಿದ್ದೀರಿ;
35 Ele era a lâmpada que ardia e alumiava, e vós quisestes, por algum tempo, alegrar-vos com a sua luz.
36 ಆದರೆ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿ ನನಗುಂಟು; ಹೇಗೆಂದರೆ ಪೂರೈಸುವದಕ್ಕಾಗಿ ತಂದೆಯು ನನಗೆ ಕೊಟ್ಟ ಕೆಲಸಗಳು ಅಂದರೆ ನಾನು ಮಾಡುತ್ತಿರುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.
36 Mas eu tenho maior testemunho do que o de João; porque as obras que o Pai me confiou para que eu as realizasse, essas que eu faço testemunham a meu respeito de que o Pai me enviou.
37 ನನ್ನನ್ನು ಕಳುಹಿಸಿದ ತಂದೆಯು ತಾನೇ ನನ್ನ ವಿಷಯದಲ್ಲಿ ಸಾಕ್ಷಿ ಹೇಳಿದ್ದಾನೆ; ನೀವು ಎಂದಾದರೂ ಆತನ ಧ್ವನಿಯನ್ನು ಕೇಳಲಿಲ್ಲ ಇಲ್ಲವೆ ಆತನ ರೂಪವನ್ನು ನೋಡಲಿಲ್ಲ.
37 O Pai, que me enviou, esse mesmo é que tem dado testemunho de mim. Jamais tendes ouvido a sua voz, nem visto a sua forma.
38 ಆತನ ವಾಕ್ಯವು ನಿಮ್ಮಲ್ಲಿ ನೆಲೆಯಾಗಿರುವದಿಲ್ಲ; ಯಾಕಂದರೆ ಆತನು ಕಳುಹಿಸಿದಾತನನ್ನು ನೀವು ನಂಬು ವದಿಲ್ಲ.
38 Também não tendes a sua palavra permanente em vós, porque não credes naquele a quem ele enviou.
39 ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ.
39 Examinais as Escrituras, porque julgais ter nelas a vida eterna, e são elas mesmas que testificam de mim.
40 ಆದರೆ ನೀವು ಜೀವವನ್ನು ಹೊಂದುವಂತೆ ನನ್ನ ಬಳಿಗೆ ಬರುವದಿಲ್ಲ.
40 Contudo, não quereis vir a mim para terdes vida.
41 ನಾನು ಮನುಷ್ಯರಿಂದ ಮಾನವನ್ನು ಅಂಗೀಕರಿ ಸುವದಿಲ್ಲ.
41 Eu não aceito glória que vem dos homens;
42 ಆದರೆ ನಾನು ನಿಮ್ಮನ್ನು ಬಲ್ಲೆನು, ನಿಮ್ಮಲ್ಲಿ ದೇವರ ಪ್ರೀತಿ ಇಲ್ಲ.
42 sei, entretanto, que não tendes em vós o amor de Deus.
43 ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ, ನೀವು ನನ್ನನ್ನು ಅಂಗೀಕರಿ ಸುವದಿಲ್ಲ; ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ನೀವು ಅವನನ್ನು ಅಂಗೀಕರಿಸುವಿರಿ.
43 Eu vim em nome de meu Pai, e não me recebeis; se outro vier em seu próprio nome, certamente, o recebereis.
44 ದೇವರಿಂದ ಮಾತ್ರ ಬರುವ ಮಾನವನ್ನು ಹುಡುಕದೆ ಒಬ್ಬರಿಂದೊ ಬ್ಬರಿಗೆ ಬರುವ ಮಾನವನ್ನು ಹೊಂದುವ ನೀವು ಹೇಗೆ ನಂಬೀರಿ?
44 Como podeis crer, vós os que aceitais glória uns dos outros e, contudo, não procurais a glória que vem do Deus único?
45 ತಂದೆಯ ಮುಂದೆ ನಿಮ್ಮ ಮೇಲೆ ನಾನು ತಪ್ಪು ಹೊರಿಸುವೆನೆಂದು ನೀವು ನೆನಸಬೇಡಿರಿ; ಆದರೆ ನೀವು ನಂಬಿರುವ ಮೋಶೆಯೇ ನಿಮ್ಮ ಮೇಲೆ ತಪ್ಪು ಹೊರಿಸುತ್ತಾನೆ.
45 Não penseis que eu vos acusarei perante o Pai; quem vos acusa é Moisés, em quem tendes firmado a vossa confiança.
46 ನೀವು ಮೋಶೆಯನ್ನು ನಂಬಿದ್ದರೆ ನನ್ನನ್ನೂ ನಂಬುತ್ತಿದ್ದಿರಿ; ಯಾಕಂದರೆ ಅವನು ನನ್ನ ವಿಷಯವಾಗಿ ಬರೆದನು.
46 Porque, se, de fato, crêsseis em Moisés, também creríeis em mim; porquanto ele escreveu a meu respeito.
47 ಅವನು ಬರೆದದ್ದನ್ನು ನೀವು ನಂಬದಿದ್ದರೆ ನನ್ನ ಮಾತುಗಳನ್ನು ಹೇಗೆ ನಂಬಿರಿ ಅಂದನು.
47 Se, porém, não credes nos seus escritos, como crereis nas minhas palavras?

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar João 5, comparar traduções ou montar um estudo — tudo direto pelo WhatsApp.