João 6
Kannada Bible (GL_KANNADA) vs NTLH
NTLH Nova Tradução na Linguagem de Hoje 2000
1 ಇವುಗಳಾದ ಮೇಲೆ ಯೇಸು ತಿಬೇರಿ ಯವೆಂಬ ಗಲಿಲಾಯ ಸಮುದ್ರದ ಆಚೆಗೆ ಹೋದನು.
1 Depois disso, Jesus atravessou o lago da Galileia, que também é chamado de Tiberíades.
2 ಆಗ ಆತನು ರೋಗಿಗಳಲ್ಲಿ ನಡಿಸಿದ ಆತನ ಅದ್ಭುತ ಕಾರ್ಯಗಳನ್ನು ನೋಡಿದ ಜನರ ದೊಡ್ಡ ಸಮೂಹವು ಆತನನ್ನು ಹಿಂಬಾಲಿಸುತ್ತಿತ್ತು.
2 Uma grande multidão o seguia porque eles tinham visto os milagres que Jesus tinha feito, curando os doentes.
3 ಯೇಸು ಬೆಟ್ಟವನ್ನೇರಿ ಅಲ್ಲಿ ತನ್ನ ಶಿಷ್ಯರೊಂದಿಗೆ ಕೂತು ಕೊಂಡನು.
3 Ele subiu um monte e sentou-se ali com os seus discípulos.
4 ಆಗ ಯೆಹೂದ್ಯರ ಪಸ್ಕ ಹಬ್ಬವು ಸವಿಾಪವಾಗಿತ್ತು.
4 A Páscoa , a festa principal dos judeus, estava perto.
5 ಜನರ ದೊಡ್ಡ ಗುಂಪು ತನ್ನ ಕಡೆಗೆ ಬರುವದನ್ನು ಯೇಸು ಕಣ್ಣೆತ್ತಿ ನೋಡಿ ಫಿಲಿಪ್ಪ ನಿಗೆ--ಇವರು ಊಟ ಮಾಡುವಂತೆ ನಾವು ರೊಟ್ಟಿ ಯನ್ನು ಎಲ್ಲಿಂದ ಕೊಂಡು ತರೋಣ ಅಂದನು.
5 Jesus olhou em volta de si e viu que uma grande multidão estava chegando perto dele. Então disse a Filipe:
6 ಅವ ನನ್ನು ಪರೀಕ್ಷಿಸುವದಕ್ಕಾಗಿ ಆತನು ಇದನ್ನು ಹೇಳಿದನು; ಯಾಕಂದರೆ ತಾನು ಮಾಡಬೇಕೆಂದಿದ್ದದ್ದು ಆತನು ತಾನೇ ತಿಳಿದವನಾಗಿದ್ದನು.
6 Ele sabia muito bem o que ia fazer, mas disse isso para ver qual seria a resposta de Filipe.
7 ಫಿಲಿಪ್ಪನು ಪ್ರತ್ಯುತ್ತರ ವಾಗಿ ಆತನಿಗೆ--ಇವರಲ್ಲಿ ಪ್ರತಿಯೊಬ್ಬನು ಸ್ವಲ್ಪ ಸ್ವಲ್ಪ ತಿಂದರೂ ಇನ್ನೂರು ಹಣಗಳಷ್ಟು ರೊಟ್ಟಿಗಳು ಅವ ರಿಗೆ ಸಾಲುವದಿಲ್ಲ ಅಂದನು.
7 Filipe respondeu assim: — Para cada pessoa poder receber um pouco de pão, nós precisaríamos gastar mais de duzentas moedas de prata .
8 ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಆತನಿಗೆ--
8 Então um dos discípulos, André, irmão de Simão Pedro, disse:
9 ಇಲ್ಲಿ ಒಬ್ಬ ಹುಡುಗನಿ ದ್ದಾನೆ; ಅವನಲ್ಲಿ ಐದು ಜವೆಗೋದಿಯ ರೊಟ್ಟಿಗಳೂ ಎರಡು ಸಣ್ಣ ವಿಾನುಗಳೂ ಅವೆ; ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು ಅಂದನು.
9 — Está aqui um menino que tem cinco pães de cevada e dois peixinhos. Mas o que é isso para tanta gente?
10 ಆಗ ಯೇಸು--ಜನರನ್ನು ಕೂಡ್ರಿಸಿರಿ ಅಂದನು. ಆ ಸ್ಥಳ ದಲ್ಲಿ ಬಹಳ ಹುಲ್ಲು ಇರಲಾಗಿ ಜನರೆಲ್ಲರು ಕುಳಿತು ಕೊಂಡರು ಅವರಲ್ಲಿ ಸುಮಾರು ಐದು ಸಾವಿರ ಪುರುಷರೇ ಇದ್ದರು.
10 Jesus disse: Então todos se sentaram. (Havia muita grama naquele lugar.) Estavam ali quase cinco mil homens.
11 ತರುವಾಯ ಯೇಸು ರೊಟ್ಟಿ ಗಳನ್ನು ತೆಗೆದುಕೊಂಡು ಸ್ತೋತ್ರಮಾಡಿ ಶಿಷ್ಯರಿಗೆ ಹಂಚಿದನು; ಅವರು ಕುಳಿತುಕೊಂಡವರಿಗೆ ಹಂಚಿ ದರು; ಅದೇ ರೀತಿಯಲ್ಲಿ ವಿಾನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದರು.
11 Em seguida Jesus pegou os pães, deu graças a Deus e os repartiu com todos; e fez o mesmo com os peixes. E todos comeram à vontade.
12 ಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ--ಏನೂ ನಷ್ಟವಾಗ ದಂತೆ ಮಿಕ್ಕಿದ ತುಂಡುಗಳನ್ನು ಕೂಡಿಸಿರಿ ಅಂದನು.
12 Quando já estavam satisfeitos, ele disse aos discípulos:
13 ಆದದರಿಂದ ಅವರು ಐದು ಜವೆಗೋದಿಯ ರೊಟ್ಟಿಗಳಲ್ಲಿ ತಿಂದವರಿಂದ ಮಿಕ್ಕಿದ ತುಂಡುಗಳನ್ನು ಕೂಡಿಸಿ ಹನ್ನೆರಡು ಪುಟ್ಟಿಗಳಲ್ಲಿ ತುಂಬಿದರು.
13 Eles ajuntaram os pedaços e encheram doze cestos com o que sobrou dos cinco pães.
14 ಬಳಿಕ ಆ ಜನರು ಯೇಸು ಮಾಡಿದ ಅದ್ಭುತ ಕಾರ್ಯವನ್ನು ನೋಡಿ--ನಿಜವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಆ ಪ್ರವಾದಿಯು ಈತನೇ ಅಂದರು.
14 Os que viram esse milagre de Jesus disseram: — De fato, este é o
15 ಆದದರಿಂದ ಅವರು ಬಂದು ತನ್ನನ್ನು ಒತ್ತಾಯ ದಿಂದ ತೆಗೆದುಕೊಂಡು ಹೋಗಿ ಅರಸನನ್ನಾಗಿ ಮಾಡ ಬೇಕೆಂದಿದ್ದಾರೆಂದು ಯೇಸು ತಿಳಿದು ಅಲ್ಲಿಂದ ತಿರಿಗಿ ತಾನೊಬ್ಬನೇ ಒಂಟಿಗನಾಗಿ ಒಂದು ಬೆಟ್ಟಕ್ಕೆ ಹೊರಟು ಹೋದನು.
15 Jesus ficou sabendo que queriam levá-lo à força para o fazerem rei; então voltou sozinho para o monte.
16 ಸಾಯಂಕಾಲವಾದಾಗ ಆತನ ಶಿಷ್ಯರು ಸಮುದ್ರಕ್ಕೆ ಹೊರಟುಹೋಗಿ
16 De tardinha, os discípulos de Jesus desceram até o lago.
17 ದೋಣಿಯನ್ನು ಹತ್ತಿ ಸಮುದ್ರಮಾರ್ಗವಾಗಿ ಕಪೆರ್ನೌಮಿಗೆ ಹೋಗುತ್ತಿ ದ್ದರು. ಆಗಲೇ ಕತ್ತಲಾಗಿತ್ತು , ಯೇಸು ಅವರ ಬಳಿಗೆ ಬಂದಿರಲಿಲ್ಲ.
17 Subiram num barco e começaram a atravessar o lago na direção da cidade de Cafarnaum. Quando já estava escuro, Jesus ainda não tinha vindo se encontrar com eles.
18 ಆಗ ಬಲವಾದ ಗಾಳಿಯು ಬೀಸಿದ್ದ ರಿಂದ ಸಮುದ್ರವು ಅಲ್ಲಕಲ್ಲೋಲವಾಯಿತು.
18 De repente, um vento forte começou a soprar e a levantar as ondas.
19 ಹೀಗೆ ಅವರು ಹುಟ್ಟು ಹಾಕುತ್ತಾ ಒಂದು ಹರದಾರಿಯಷ್ಟು ದೂರ ಹೋದ ಮೇಲೆ ಯೇಸು ಸಮುದ್ರದ ಮೇಲೆ ನಡೆದು ತಮ್ಮ ದೋಣಿಯ ಕಡೆಗೆ ಸವಿಾಪಿಸುತ್ತಿರು ವದನ್ನು ಅವರು ಕಂಡು ಭಯಪಟ್ಟರು.
19 Os discípulos já tinham remado uns cinco ou seis quilômetros, quando viram Jesus andando em cima da água e chegando perto do barco. E ficaram com muito medo.
20 ಆದರೆ ಆತನು ಅವರಿಗೆ--ನಾನೇ, ಭಯಪಡಬೇಡಿರಿ ಅಂದನು.
20 Mas Jesus disse:
21 ಆಗ ಅವರು ಮನಃಪೂರ್ವಕವಾಗಿ ಆತನನ್ನು ದೋಣಿಯಲ್ಲಿ ಸೇರಿಸಿಕೊಂಡರು; ಕೂಡಲೆ ದೋಣಿಯು ಅವರು ಹೋಗುವದಕ್ಕಿದ್ದ ದಡಕ್ಕೆ ಸೇರಿತು.
21 Então eles o receberam com prazer no barco e logo chegaram ao lugar para onde estavam indo.
22 ಆತನ ಶಿಷ್ಯರು ಹತ್ತಿದ ಒಂದೇ ದೋಣಿಯ ಹೊರತು ಮತ್ತೊಂದು ಅಲ್ಲಿ ಇರಲಿಲ್ಲವೆಂದೂ ಆತನ ಶಿಷ್ಯರು ಮಾತ್ರ ಹೋದರೆಂದೂ ಯೇಸು ತನ್ನ ಶಿಷ್ಯರ ಸಂಗಡ ದೋಣಿಯಲ್ಲಿ ಹೋಗಲಿಲ್ಲವೆಂದೂ ಮರು ದಿನ ಸಮುದ್ರದ ಆಚೆಯಲ್ಲಿ ನಿಂತಿದ್ದ ಜನರು ನೋಡಿ ದ್ದರು.
22 No dia seguinte a multidão que estava no lado leste do lago viu que ali só havia um barco pequeno. Sabiam que Jesus não tinha embarcado com os discípulos, pois estes haviam saído sozinhos.
23 (ಆದಾಗ್ಯೂ ಕರ್ತನು ಸ್ತೋತ್ರ ಮಾಡಿದ ನಂತರ ಅವರು ರೊಟ್ಟಿಯನ್ನು ತಿಂದ ಸ್ಥಳದ ಸವಿಾಪಕ್ಕೆ ತಿಬೇರಿಯದಿಂದ ಬೇರೆ ದೋಣಿಗಳು ಬಂದವು).
23 Enquanto isso, outros barcos chegaram da cidade de Tiberíades e encostaram perto do lugar onde a multidão tinha comido pão depois de o Senhor Jesus ter dado graças.
24 ಆಗ ಯೇಸು ಮತ್ತು ಆತನ ಶಿಷ್ಯರು ಅಲ್ಲಿ ಇಲ್ಲದಿರುವದನ್ನು ಜನರು ನೋಡಿ ಅವರು ಸಹ ದೋಣಿಗಳಲ್ಲಿ ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಬಂದರು.
24 Quando viram que Jesus e os seus discípulos não estavam ali, subiram nos barcos e saíram para Cafarnaum a fim de procurá-lo.
25 ಅವರು ಆತನನ್ನು ಸಮು ದ್ರದ ಆಚೇಕಡೆಯಲ್ಲಿ ಕಂಡು ಆತನಿಗೆ--ರಬ್ಬಿಯೇ, ನೀನು ಇಲ್ಲಿಗೆ ಯಾವಾಗ ಬಂದಿ ಅಂದರು.
25 A multidão encontrou Jesus no lado oeste do lago, e perguntaram a ele: — Mestre, quando foi que o senhor chegou aqui?
26 ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವದು ಅದ್ಭುತಕಾರ್ಯಗಳನ್ನು ನೋಡಿದ್ದರಿಂದಲ್ಲ, ಆದರೆ ರೊಟ್ಟಿಗಳನ್ನು ತಿಂದು ತೃಪ್ತಿ ಹೊಂದಿದ್ದರಿಂದಲೇ.
26 Jesus respondeu:
27 ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
27 Não trabalhem a fim de conseguir a comida que se estraga, mas a fim de conseguir a comida que dura para a vida eterna. O
28 ಆಗ ಅವರು ಆತನಿಗೆ--ನಾವು ದೇವರ ಕ್ರಿಯೆ ಗಳನ್ನು ಮಾಡುವಂತೆ ಏನು ಮಾಡಬೇಕು ಎಂದು ಕೇಳಿದ್ದಕ್ಕೆ
28 — O que é que Deus quer que a gente faça? — perguntaram eles.
29 ಯೇಸು ಪ್ರತ್ಯುತ್ತರವಾಗಿ ಅವರಿಗೆ--ದೇವರಕ್ರಿಯೆ ಯಾವದಂದರೆ, ಆತನು ಕಳುಹಿಸಿ ಕೊಟ್ಟಾತನನ್ನು ನೀವು ನಂಬುವದೇ ಅಂದನು.
29 — Ele quer que vocês creiam naquele que ele enviou! — respondeu Jesus.
30 ಅದಕ್ಕೆ ಅವರು ಆತನಿಗೆ--ಹಾಗಾದರೆ ನಾವು ನೋಡಿ ನಿನ್ನನ್ನು ನಂಬುವಂತೆ ಯಾವ ಸೂಚಕ ಕಾರ್ಯವನ್ನು ನಮಗೆ ತೋರಿಸುತ್ತೀ? ನೀನು ಯಾವ ಕ್ರಿಯೆಯನ್ನು ಮಾಡುತ್ತೀ?
30 Eles disseram: — Que milagre o senhor vai fazer para a gente ver e crer no senhor? O que é que o senhor pode fazer?
31 ತಿನ್ನುವದಕ್ಕಾಗಿ ಆತನು ಅವರಿಗೆ ಪರಲೋಕದಿಂದ ರೊಟ್ಟಿಯನ್ನು ಕೊಟ್ಟನು ಎಂದು ಬರೆದಿರುವ ಪ್ರಕಾರ ನಮ್ಮ ಪಿತೃಗಳು ಅಡವಿ ಯಲ್ಲಿ ಮನ್ನಾ ತಿಂದರು ಎಂದು ಹೇಳಿದರು.
31 Os nossos antepassados comeram o maná no deserto, como dizem as Escrituras Sagradas : “Do céu ele deu pão para eles comerem.”
32 ಆಗ ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಡಲಿಲ್ಲ; ಆದರೆ ನನ್ನ ತಂದೆಯು ನಿಮಗೆ ನಿಜವಾದ ರೊಟ್ಟಿಯನ್ನು ಪರಲೋಕದಿಂದ ಕೊಡು ತ್ತಾನೆ.
32 Jesus disse:
33 ಪರಲೋಕದಿಂದ ಕೆಳಗೆ ಬಂದು ಲೋಕಕ್ಕೆ ಜೀವವನ್ನು ಕೊಡುವಾತನೇ ದೇವರ ರೊಟ್ಟಿಯಾಗಿದ್ದಾನೆ ಅಂದನು.
33 Porque o pão que Deus dá é aquele que desce do céu e dá vida ao mundo.
34 ಅದಕ್ಕವರು ಆತನಿಗೆ--ಕರ್ತನೇ, ಈ ರೊಟ್ಟಿಯನ್ನು ನಮಗೆ ಯಾವಾಗಲೂ ಕೊಡು ಅಂದರು.
34 — Queremos que o senhor nos dê sempre desse pão! — pediram eles.
35 ಅದಕ್ಕೆ ಯೇಸು ಅವರಿಗೆ--ನಾನೇ ಆ ಜೀವದ ರೊಟ್ಟಿ; ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವದಿಲ್ಲ ಮತ್ತು ನನ್ನ ಮೇಲೆ ನಂಬಿಕೆ ಇಡುವವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ.
35 Jesus respondeu:
36 ಆದರೆ--ನೀವು ನನ್ನನ್ನು ನೋಡಿಯೂ ನಂಬಲಿಲ್ಲ ಎಂದು ನಾನು ನಿಮಗೆ ಹೇಳಿದೆನು.
36 Mas eu já disse que vocês não creem em mim, embora estejam me vendo.
37 ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರು ವರು; ನನ್ನ ಬಳಿಗೆ ಬರುವವನನ್ನು ನಾನು ಹೊರಗೆ ತಳ್ಳಿಬಿಡುವದೇ ಇಲ್ಲ.
37 Todos aqueles que o Pai me dá virão a mim; e de modo nenhum jogarei fora aqueles que vierem a mim.
38 ನಾನು ನನ್ನ ಸ್ವಂತ ಚಿತ್ತವನ್ನಲ್ಲ; ಆದರೆ ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ಮಾಡುವದಕ್ಕೆ ಪರಲೋಕದಿಂದ ಬಂದೆನು.
38 Pois eu desci do céu para fazer a vontade daquele que me enviou e não para fazer a minha própria vontade.
39 ನನ್ನನ್ನು ಕಳುಹಿಸಿದ ತಂದೆಯ ಚಿತ್ತವೇನಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಒಬ್ಬನನ್ನೂ ಕಳಕೊಳ್ಳದೆ ಕಡೇ ದಿನದಲ್ಲಿ ಅವನನ್ನು ತಿರಿಗಿ ಎಬ್ಬಿಸುವದೇ.
39 E a vontade de quem me enviou é esta: que nenhum daqueles que o Pai me deu se perca, mas que eu ressuscite todos no último dia.
40 ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು.
40 Pois a vontade do meu Pai é que todos os que veem o Filho e creem nele tenham a vida eterna; e no último dia eu os ressuscitarei.
41 ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ ಎಂದು ಆತನು ಹೇಳಿದ್ದಕ್ಕೆ ಯೆಹೂದ್ಯರು ಆತನ ವಿಷಯವಾಗಿ ಗುಣುಗುಟ್ಟಿ--
41 Eles começaram a criticar Jesus porque ele tinha dito: “Eu sou o pão que desceu do céu.”
42 ಇವನು ಯೋಸೇಫನ ಮಗನಾದ ಯೇಸು ಅಲ್ಲವೇ? ಇವನ ತಂದೆ ತಾಯಿ ಗಳನ್ನು ನಾವು ಬಲ್ಲೆವಲ್ಲವೇ? ಹಾಗಾದರೆ--ನಾನು ಪರಲೋಕದಿಂದ ಇಳಿದು ಬಂದೆನು ಎಂದು ಇವನು ಹೇಳುವದು ಹೇಗೆ ಅಂದರು.
42 E diziam: — Este não é Jesus, filho de José? Por acaso nós não conhecemos o pai e a mãe dele? Como é que agora ele diz que desceu do céu?
43 ಯೇಸು ಪ್ರತ್ಯುತ್ತರ ವಾಗಿ ಅವರಿಗೆ--ನಿಮ್ಮ ನಿಮ್ಮೊಳಗೆ ಗುಣುಗುಟ್ಟ ಬೇಡಿರಿ.
43 Jesus respondeu:
44 ನನ್ನನ್ನು ಕಳುಹಿಸಿದ ತಂದೆಯು ಎಳೆಯದ ಹೊರತು ಯಾವನೂ ನನ್ನ ಬಳಿಗೆ ಬರಲಾರನು. ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು.
44 Só poderão vir a mim aqueles que forem trazidos pelo Pai, que me enviou, e eu os ressuscitarei no último dia.
45 ಅವರೆಲ್ಲರು ದೇವರಿಂದ ಬೋಧಿಸಲ್ಪಡುವರೆಂದು ಪ್ರವಾದನೆಗಳಲ್ಲಿ ಬರೆಯಲ್ಪಟ್ಟಿದೆ. ಆದಕಾರಣ ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬ ಮನುಷ್ಯನು ನನ್ನ ಬಳಿಗೆ ಬರುತ್ತಾನೆ.
45 Nos
46 ದೇವರಿಗೆ ಸಂಬಂಧಪಟ್ಟ ವನೇ ತಂದೆಯನ್ನು ನೋಡಿದ್ದಾನೆ ಹೊರತು ಬೇರೆ ಯಾವನೂ ತಂದೆಯನ್ನು ನೋಡಲಿಲ್ಲ.
46 Isso não quer dizer que alguém já tenha visto o Pai, a não ser aquele que vem de Deus; ele já viu o Pai.
47 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನ ಮೇಲೆ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ.
47 — Eu afirmo a vocês que isto é verdade: quem crê tem a vida eterna.
48 ನಾನೇ ಆ ಜೀವದ ರೊಟ್ಟಿಯಾಗಿದ್ದೇನೆ.
48 Eu sou o pão da vida.
49 ನಿಮ್ಮ ಪಿತೃಗಳು ಅಡವಿಯಲ್ಲಿ ಮನ್ನಾ ತಿಂದಾಗ್ಯೂ ಸತ್ತು ಹೋದರು.
49 Os antepassados de vocês comeram o maná no deserto, mas morreram.
50 ಮನುಷ್ಯನು ತಿಂದು ಸಾಯದೇ ಇರು ವಂತೆ ಪರಲೋಕದಿಂದ ಕೆಳಗೆ ಇಳಿದು ಬಂದ ರೊಟ್ಟಿ ಇದೇ.
50 Aqui está o pão que desce do céu; e quem comer desse pão nunca morrerá.
51 ಪರಲೋಕದಿಂದ ಇಳಿದುಬಂದ ಜೀವದ ರೊಟ್ಟಿಯು ನಾನೇ; ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಎಂದೆಂದಿಗೂ ಬದುಕುವನು; ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ; ಅದನ್ನು ನಾನು ಲೋಕದ ಜೀವಕ್ಕಾಗಿ ಕೊಡುವೆನು ಅಂದನು.
51 Eu sou o pão vivo que desceu do céu. Se alguém comer desse pão, viverá para sempre. E o pão que eu darei para que o mundo tenha vida é a minha carne.
52 ಇದರಿಂದ ಯೆಹೂದ್ಯರು ತಮ್ಮತಮ್ಮೊಳಗೆ ವಾಗ್ವಾದ ಮಾಡುತ್ತಾ--ಈ ಮನುಷ್ಯನು ತನ್ನ ಮಾಂಸ ವನ್ನು ತಿನ್ನುವದಕ್ಕೆ ನಮಗೆ ಹೇಗೆ ಕೊಡುತ್ತಾನೆ ಅಂದರು.
52 Aí eles começaram a discutir entre si. E perguntavam: — Como é que este homem pode dar a sua própria carne para a gente comer?
53 ಆಗ ಯೇಸು ಅವರಿಗೆ--ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಕುಮಾರನ ಮಾಂಸವನ್ನು ತಿಂದು ಆತನ ರಕ್ತವನ್ನು ಕುಡಿಯದ ಹೊರತು ನಿಮ್ಮೊಳಗೆ ಜೀವವಿಲ್ಲ.
53 Então Jesus disse:
54 ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನಿತ್ಯಜೀವವನ್ನು ಹೊಂದಿದ್ದಾನೆ; ನಾನು ಅವ ನನ್ನು ಕಡೇ ದಿನದಲ್ಲಿ ಎಬ್ಬಿಸುವೆನು.
54 Quem come a minha carne e bebe o meu sangue tem a vida eterna, e eu o ressuscitarei no último dia.
55 ಯಾಕಂದರೆ ನನ್ನ ಮಾಂಸವು ನಿಜವಾದ ಆಹಾರವೂ ನನ್ನ ರಕ್ತವು ನಿಜವಾದ ಪಾನವೂ ಆಗಿದೆ.
55 Pois a minha carne é a comida verdadeira, e o meu sangue é a bebida verdadeira.
56 ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನನ್ನಲ್ಲಿ ವಾಸಿಸುತ್ತಾನೆ; ನಾನು ಅವನಲ್ಲಿ ವಾಸಿ ಸುತ್ತೇನೆ.
56 Quem come a minha carne e bebe o meu sangue vive em mim, e eu vivo nele.
57 ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿ ರಲಾಗಿ ನಾನು ತಂದೆಯ ಮೂಲಕ ಜೀವಿಸುವಂತೆಯೇ ನನ್ನನ್ನು ತಿನ್ನುವವನು ನನ್ನ ಮೂಲಕವಾಗಿಯೇ ಜೀವಿ ಸುವನು.
57 O Pai, que tem a vida, foi quem me enviou, e por causa dele eu tenho a vida. Assim, também, quem se alimenta de mim terá vida por minha causa.
58 ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೆ; ನಿಮ್ಮ ಪಿತೃಗಳು ಮನ್ನಾ ತಿಂದಾಗ್ಯೂ ಸತ್ತುಹೋದಂತೆ ಅಲ್ಲ; ಆದರೆ ಈ ರೊಟ್ಟಿಯನ್ನು ತಿನ್ನುವವನು ಎಂದೆಂದಿಗೂ ಜೀವಿಸುವನು ಅಂದನು.
58 Este é o pão que desceu do céu. Não é como o pão que os antepassados de vocês comeram e mesmo assim morreram. Quem come deste pão viverá para sempre.
59 ಕಪೆರ್ನೌಮಿನಲ್ಲಿ ಬೋಧಿಸುತ್ತಿರುವಾಗ ಸಭಾ ಮಂದಿರದಲ್ಲಿ ಆತನು ಇವುಗಳನ್ನು ಹೇಳಿದನು.
59 Jesus disse isso quando estava ensinando na sinagoga de Cafarnaum.
60 ಆದದರಿಂದ ಆತನ ಶಿಷ್ಯರಲ್ಲಿ ಅನೇಕರು ಇದನ್ನು ಕೇಳಿ--ಇದು ಕಠಿಣವಾದ ಮಾತು; ಇದನ್ನು ಯಾರು ಕೇಳಾರು ಅಂದರು.
60 Muitos seguidores de Jesus ouviram isso e reclamaram: — O que ele ensina é muito difícil! Quem pode aceitar esses ensinamentos?
61 ತನ್ನ ಶಿಷ್ಯರೂ ಇದಕ್ಕೆ ಗುಣು ಗುಟ್ಟುತ್ತಾರೆಂದು ಯೇಸು ತನ್ನಲ್ಲಿ ತಿಳಿದುಕೊಂಡು ಅವರಿಗೆ--ಇದು ನಿಮಗೆ ಅಭ್ಯಂತರವಾಯಿತೋ?
61 Não disseram nada a Jesus, mas ele sabia que eles estavam resmungando contra ele. Por isso perguntou:
62 ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿಹೋಗುವದನ್ನು ನೀವು ನೋಡಿದರೆ ಏನನ್ನುವಿರಿ?
62 E o que aconteceria se vocês vissem o
63 ಬದುಕಿಸುವಂಥದ್ದು ಆತ್ಮವೇ; ಮಾಂಸವು ಯಾವದಕ್ಕೂ ಪ್ರಯೋಜನವಾಗುವದಿಲ್ಲ; ನಾನು ನಿಮಗೆ ಹೇಳುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಇವೆ.
63 O Espírito de Deus é quem dá a vida, mas o ser humano não pode fazer isso. As palavras que eu lhes disse são espírito e vida,
64 ಆದರೆ ನಂಬದವರು ಕೆಲವರು ನಿಮ್ಮಲ್ಲಿ ಇದ್ದಾರೆ ಅಂದನು. ಯಾಕಂದರೆ ನಂಬದವರು ಯಾರೆಂದೂ ತನ್ನನ್ನು ಹಿಡುಕೊಡು ವವನು ಯಾರೆಂದೂ ಮೊದಲಿನಿಂದಲೇ ಯೇಸು ತಿಳಿದಿದ್ದನು.
64 mas mesmo assim alguns de vocês não creem. Jesus disse isso porque já sabia desde o começo quem eram os que não iam crer nele e sabia também quem ia traí-lo.
65 ಆತನು--ನನ್ನ ತಂದೆಯಿಂದ ಒಬ್ಬನಿಗೆ ಕೊಡಲ್ಪಟ್ಟ ಹೊರತು ಯಾವನೂ ನನ್ನ ಬಳಿಗೆ ಬರ ಲಾರನು; ಇದಕ್ಕೋಸ್ಕರವೇ ನಾನು ನಿಮಗೆ ಹೇಳಿದೆನು ಅಂದನು.
65 Jesus continuou:
66 ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಹಿಂದಕ್ಕೆ ಹೊರಟುಹೋಗಿ ಮತ್ತೆ ಅವರು ಆತನ ಸಂಗಡ ಎಂದಿಗೂ ಸಂಚರಿಸಲೇ ಇಲ್ಲ.
66 Por causa disso muitos seguidores de Jesus o abandonaram e não o acompanhavam mais.
67 ಆಗ ಯೇಸು ಹನ್ನೆ ರಡು ಮಂದಿಗೆ--ನೀವು ಸಹ ಹೊರಟು ಹೋಗಬೇಕೆಂ ದಿದ್ದೀರೋ ಎಂದು ಕೇಳಲು
67 Então ele perguntou aos doze discípulos:
68 ಸೀಮೋನ್ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳು ಉಂಟಲ್ಲಾ.
68 Simão Pedro respondeu: — Quem é que nós vamos seguir? O senhor tem as palavras que dão vida eterna!
69 ನೀನು ಜೀವವುಳ್ಳ ದೇವರಮಗನಾದ ಆ ಕ್ರಿಸ್ತನೆಂದು ನಾವು ಖಂಡಿತವಾಗಿ ನಂಬಿದ್ದೇವೆ ಅಂದನು.
69 E nós cremos e sabemos que o senhor é o Santo que Deus enviou.
70 ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ಕೊಂಡೆನಲ್ಲವೇ? ಆದರೆ ನಿಮ್ಮಲ್ಲಿ ಒಬ್ಬನು ಸೈತಾನನಾ ಗಿದ್ದಾನೆ ಅಂದನು.
70 Jesus disse:
71 ಸೀಮೋನನ ಮಗನಾದ ಇಸ್ಕರಿಯೋತ್ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು.
71 Ele estava falando de Judas, filho de Simão Iscariotes. Pois Judas, embora fosse um dos doze discípulos, ia trair Jesus.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar João 6, comparar traduções ou montar um estudo — tudo direto pelo WhatsApp.