João 7

Kannada Bible (GL_KANNADA) vs BKJ

Sair da comparação
1 ಇವುಗಳಾದ ಮೇಲೆ ಯೇಸು ಗಲಿಲಾ ಯದಲ್ಲಿ ಸಂಚಾರ ಮಾಡಿದನು; ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಹುಡುಕುತ್ತಿ ದ್ದದರಿಂದ ಯೂದಾಯದಲ್ಲಿ ಸಂಚರಿಸಲು ಆತನಿಗೆ ಮನಸ್ಸಿರಲಿಲ್ಲ.
1 Depois dessas coisas, Jesus andava pela Galileia; porque ele não queria andar pela Judeia, pois os judeus procuravam matá-lo.
2 ಆಗ ಯೆಹೂದ್ಯರ ಗುಡಾರಗಳ ಹಬ್ಬವು ಹತ್ತಿರವಾಗಿತ್ತು.
2 Ora, estava próxima a festa dos tabernáculos dos judeus.
3 ಆದದರಿಂದ ಆತನ ಸಹೋದರರು ಆತನಿಗೆ--ನೀನು ಮಾಡುವ ಕ್ರಿಯೆಗಳನ್ನು ನಿನ್ನ ಶಿಷ್ಯರು ಸಹ ನೋಡುವಂತೆ ಇಲ್ಲಿಂದ ಹೊರಟು ಯೂದಾಯಕ್ಕೆ ಹೋಗು;
3 Portanto, os seus irmãos disseram-lhe: Parte daqui e vai para a Judeia, para que também os teus discípulos vejam as obras que tu fazes.
4 ಯಾಕಂದರೆ ತಾನು ಪ್ರಸಿದ್ಧಿಗೆ ಬರಬೇಕೆಂದಿರುವ ಯಾವನಾದರೂ ರಹಸ್ಯವಾಗಿ ಯಾವದನ್ನೂ ಮಾಡುವದಿಲ್ಲ; ನೀನು ಇವುಗಳನ್ನು ಮಾಡುವದಾದರೆ ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ ಅಂದರು.
4 Porque não há homem que faça coisa alguma em secreto, e que procure ser conhecido publicamente. Se tu fazes essas coisas, mostra-te ao mundo.
5 ಯಾಕಂದರೆ ಆತನ ಸಹೋದರರು ಸಹ ಆತನ ಮೇಲೆ ನಂಬಿಕೆ ಇಟ್ಟಿರಲಿಲ್ಲ.
5 Porque nem seus irmãos acreditavam nele.
6 ತರುವಾಯ ಯೇಸು ಅವರಿಗೆ-- ನನ್ನ ಸಮಯವು ಇನ್ನೂ ಬಂದಿಲ್ಲ; ಆದರೆ ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.
6 Então, disse-lhes Jesus: Ainda não é chegado o meu tempo; mas o vosso tempo sempre está pronto.
7 ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ಅದರ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯ ದಲ್ಲಿ ನಾನು ಸಾಕ್ಷಿ ಹೇಳುವದರಿಂದ ಅದು ನನ್ನನ್ನು ಹಗೆಮಾಡುತ್ತದೆ.
7 O mundo não vos pode odiar, mas a mim odeia, porquanto dele dou testemunho, que são más as suas obras.
8 ನೀವು ಈ ಹಬ್ಬಕ್ಕೆ ಹೋಗಿರಿ; ನಾನು ಈ ಹಬ್ಬಕ್ಕೆ ಈಗಲೇ ಹೋಗುವದಿಲ್ಲ, ಯಾಕಂದರೆ ನನ್ನ ಸಮಯವು ಇನ್ನೂ ಪೂರ್ಣವಾಗಿ ಬರಲಿಲ್ಲ ಅಂದನು.
8 Subi vós à festa; eu ainda não subirei à esta festa, porque o meu tempo ainda não está cumprido.
9 ಆತನು ಈ ಮಾತುಗಳನ್ನು ಅವರಿಗೆ ಹೇಳಿದ್ದಾದ ಮೇಲೆ ಇನ್ನೂ ಗಲಿಲಾಯ ದಲ್ಲಿಯೇ ಉಳಿದನು.
9 E, tendo dito estas palavras, ele permaneceu na Galileia.
10 ಆದರೆ ಆತನ ಸಹೋದರರು ಹೋದಮೇಲೆ ಆತನು ಸಹ ಹಬ್ಬಕ್ಕೆ ಬಹಿರಂಗವಾಗಿ ಹೋಗದೆ ಗುಪ್ತವಾಗಿ ಹೋದನು.
10 Mas, quando seus irmãos já tinham subido, ele também subiu para a festa, não em público, mas como que secretamente.
11 ಆಗ ಯೆಹೂದ್ಯರು ಆ ಹಬ್ಬದಲ್ಲಿ ಆತನನ್ನು ಹುಡುಕಿ--ಆತನು ಎಲ್ಲಿದ್ದಾನೆ ಅಂದರು.
11 Então os Judeus o buscavam na festa e diziam: Onde está ele?
12 ಆ ಜನಗಳಲ್ಲಿ ಆತನ ವಿಷಯವಾಗಿ ಬಹಳ ಗುಣುಗುಟ್ಟುವಿಕೆ ಇತ್ತು; ಯಾಕಂದರೆ ಕೆಲವರು--ಆತನು ಒಬ್ಬ ಒಳ್ಳೇ ಮನುಷ್ಯನಾಗಿದ್ದಾನೆ ಅಂದರು; ಬೇರೆ ಕೆಲವರು--ಅಲ್ಲ; ಆತನು ಜನರನ್ನು ಮೋಸ ಗೊಳಿಸುತ್ತಾನೆ ಎಂದು ಅನ್ನುತ್ತಿದ್ದರು.
12 E havia muita murmuração entre a multidão a respeito dele; porque alguns diziam: Ele é um bom homem; e outros diziam: Não, pois ele engana o povo.
13 ಆದಾಗ್ಯೂ ಯೆಹೂದ್ಯರ ಭಯದ ನಿಮಿತ್ತ ಆತನ ವಿಷಯದಲ್ಲಿ ಯಾರೂ ಬಹಿರಂಗವಾಗಿ ಮಾತನಾಡಲಿಲ್ಲ.
13 Todavia, nenhum homem falava dele publicamente, por medo dos judeus.
14 ಆಗ ಯೇಸು ಆ ಹಬ್ಬದ ಮಧ್ಯದಲ್ಲಿ ದೇವಾ ಲಯದೊಳಗೆ ಹೋಗಿ ಬೋಧಿಸಿದನು.
14 Ora, na metade da festa, Jesus subiu ao templo, e ensinava.
15 ಯೆಹೂ ದ್ಯರು ಆಶ್ಚರ್ಯಪಟ್ಟು--ಏನನ್ನೂ ಕಲಿಯದಿರುವ ಈ ಮನುಷ್ಯನಿಗೆ ಇಂಥ ಜ್ಞಾನವು ಬಂದಿರುವದು ಹೇಗೆ ಅಂದರು.
15 E os judeus se maravilhavam, dizendo: Como conhece este homem letras, não as tendo aprendido?
16 ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ನನ್ನ ಬೋಧನೆಯು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದಾತನದೇ.
16 Jesus respondeu e disse-lhes: A minha doutrina não é minha, mas daquele que me enviou.
17 ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.
17 Se algum homem quiser fazer a vontade dele, há de saber da doutrina, se ela é de Deus, ou se falo de mim mesmo.
18 ತನ್ನ ವಿಷಯವಾಗಿ ತಾನೇ ಮಾತನಾಡುವವನು ತನ್ನ ಸ್ವಂತ ಮಹಿಮೆಯನ್ನು ಹುಡುಕುತ್ತಾನೆ; ಆದರೆ ತನ್ನನ್ನು ಕಳುಹಿಸಿದಾತನ ಮಹಿಮೆಯನ್ನು ಹುಡುಕುವಾತನೇ ಸತ್ಯವಂತನು; ಆತ ನಲ್ಲಿ ಅನೀತಿಯಿಲ್ಲ.
18 Quem fala de si mesmo busca a sua própria glória; mas o que busca a glória daquele que o enviou, esse é verdadeiro, e não há nele injustiça.
19 ಮೋಶೆಯು ನಿಮಗೆ ನ್ಯಾಯ ಪ್ರಮಾಣವನ್ನು ಕೊಟ್ಟಾಗ್ಯೂ ನಿಮ್ಮಲ್ಲಿ ಒಬ್ಬನೂ ಆ ನ್ಯಾಯಪ್ರಮಾಣವನ್ನು ಕೈಕೊಳ್ಳಲಿಲ್ಲವಲ್ಲಾ; ನೀವು ಯಾಕೆ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ ಎಂದು ಹೇಳಿದನು.
19 Não vos deu Moisés a lei? E, ainda assim, nenhum de vós cumpre a lei. Por que procurais matar-me?
20 ಅದಕ್ಕೆ ಜನರು ಪ್ರತ್ಯುತ್ತರವಾಗಿ--ನಿನಗೆ ದೆವ್ವ ಹಿಡಿದಿದೆ; ನಿನ್ನನ್ನು ಕೊಲ್ಲುವದಕ್ಕೆ ನೋಡು ವವರು ಯಾರು ಅಂದರು.
20 A multidão respondeu e disse: Tu tens um demônio, quem procura matar-te?
21 ಯೇಸು ಪ್ರತ್ಯುತ್ತರ ವಾಗಿ ಅವರಿಗೆ--ನಾನು ಒಂದು ಕ್ರಿಯೆಯನ್ನು ಮಾಡಿ ದೆನು; ಅದಕ್ಕೆ ನೀವೆಲ್ಲರು ಆಶ್ಚರ್ಯಪಡುತ್ತೀ
21 Jesus respondeu e disse-lhes: Eu fiz uma obra, e todos vos maravilhais.
22 ಹಾಗಿದ್ದರೆ ಮೋಶೆಯು ನಿಮಗೆ ಸುನ್ನತಿಯನ್ನು ಕೊಟ್ಟನು; (ಅದು ಮೋಶೆಯದಲ್ಲ, ಆದರೆ ಅದು ಪಿತೃಗಳದೇ). ನೀವು ಸಬ್ಬತ್‌ ದಿನದಲ್ಲಿ ಮನುಷ್ಯನಿಗೆ ಸುನ್ನತಿ ಮಾಡುತ್ತೀರಿ.
22 Portanto, Moisés vos deu a circuncisão (não porque é de Moisés, mas dos pais); e no dia do shabat circuncidais um homem.
23 ಒಬ್ಬ ಮನುಷ್ಯನು ಮೋಶೆಯ ನ್ಯಾಯಪ್ರಮಾಣವನ್ನು ವಿಾರದ ಹಾಗೆ ಸಬ್ಬತ್‌ ದಿನ ದಲ್ಲಿ ಸುನ್ನತಿಯನ್ನು ಮಾಡಿಸಿಕೊಂಡರೆ ನಾನು ಒಬ್ಬ ಮನುಷ್ಯನನ್ನು ಸಬ್ಬತ್‌ದಿನದಲ್ಲಿ ಸಂಪೂರ್ಣವಾಗಿ ಸ್ವಸ್ಥ ಮಾಡಿದ್ದಕ್ಕೆ ನನ್ನ ಮೇಲೆ ನೀವು ಕೋಪಗೊಳ್ಳು ತ್ತೀರೋ?
23 Se o homem recebe a circuncisão no dia do shabat, para que a lei de Moisés não seja violada, como vos irritais comigo, porque no dia do shabat eu fiz um homem inteiramente são?
24 ತೋರಿಕೆಗೆ ಅನುಸಾರವಾಗಿ ನ್ಯಾಯತೀರಿ ಸಬೇಡಿರಿ. ಆದರೆ ನೀತಿಯ ನ್ಯಾಯತೀರ್ಪನ್ನು ಮಾಡಿರಿ ಅಂದನು.
24 Não julgueis segundo a aparência, mas julgai segundo o reto juízo.
25 ಆಮೇಲೆ ಯೆರೂಸಲೇಮಿನವರಲ್ಲಿ ಕೆಲವರು-- ಅವರು ಕೊಲ್ಲಬೇಕೆಂದು ಹುಡುಕುತ್ತಿರುವದು ಈತನನ್ನೇ ಅಲ್ಲವೇ?
25 Então, alguns dos de Jerusalém diziam: Não é este que eles procuram matar?
26 ಆದಾಗ್ಯೂ ಇಗೋ, ಈತನು ಧೈರ್ಯ ವಾಗಿ ಮಾತನಾಡುತ್ತಾನೆ; ಆದರೆ ಅವರು ಈತನಿಗೆ ಏನೂ ಹೇಳುವದಿಲ್ಲ. ಈತನೇ ನಿಜವಾದ ಆ ಕ್ರಿಸ್ತನೆಂದು ಅಧಿಕಾರಿಗಳು ತಿಳುಕೊಂಡಿದ್ದಾರೋ?
26 Mas eis que ele fala publicamente, e nada lhe dizem. Porventura, sabem os governantes que este é verdadeiramente o Cristo?
27 ಹೇಗೂ ಈ ಮನುಷ್ಯನು ಎಲ್ಲಿಯವನೆಂದು ನಾವು ಬಲ್ಲೆವು; ಆದರೆ ಕ್ರಿಸ್ತನು ಬರುವಾಗ ಆತನು ಎಲ್ಲಿಯವ ನೆಂದು ಯಾರಿಗೂ ತಿಳಿಯದು ಅಂದರು.
27 Entretanto, nós sabemos de onde este homem é; mas quando vier o Cristo, nenhum homem saberá de onde ele é.
28 ತರು ವಾಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿ ದ್ದಾಗ--ನೀವು ನನ್ನನ್ನು ಬಲ್ಲಿರಿ ಮತ್ತು ನಾನು ಎಲ್ಲಿಯವನೆಂದೂ ನೀವು ಬಲ್ಲಿರಿ; ಆದರೆ ನನ್ನಷ್ಟಕ್ಕೆ ನಾನೇ ಬರಲಿಲ್ಲ; ನನ್ನನ್ನು ಕಳುಹಿಸಿದಾತನು ಸತ್ಯ ವಂತನೇ; ಆತನನ್ನು ನೀವು ಅರಿತವರಲ್ಲ.
28 Então, clamava Jesus no templo enquanto ensinava, dizendo: Vós me conheceis e sabeis de onde sou; e eu não vim de mim mesmo, mas aquele que me enviou é verdadeiro, o qual vós não conheceis.
29 ಆದರೆ ನಾನು ಆತನನ್ನು ಬಲ್ಲೆನು; ಯಾಕಂದರೆ ನಾನು ಆತನ ಕಡೆಯಿಂದ ಬಂದವನು; ಆತನು ನನ್ನನ್ನು ಕಳುಹಿಸಿಕೊಟ್ಟಿದ್ದಾನೆ ಎಂದು ಕೂಗಿ ಹೇಳಿದನು.
29 Mas eu conheço-o; porque dele eu sou, e ele me enviou.
30 ಆಗ ಅವರು ಆತನನ್ನು ಹಿಡಿಯಲು ಹವಣಿಸಿದರು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಆತನ ಮೇಲೆ ಯಾರೂ ಕೈ ಹಾಕಲಿಲ್ಲ.
30 Então, eles buscavam prendê-lo; mas nenhum homem lançou mão dele, porque ainda não era chegada a sua hora.
31 ಜನರಲ್ಲಿ ಅನೇಕರು ಆತನನ್ನು ನಂಬಿ--ಕ್ರಿಸ್ತನು ಬಂದಾಗ ಈ ಮನುಷ್ಯನು ಮಾಡಿದ್ದಕ್ಕಿಂತ ಹೆಚ್ಚು ಅದ್ಭುತಕಾರ್ಯಗಳನ್ನು ಮಾಡು ವನೋ ಅಂದರು.
31 E muitos da multidão creram nele e diziam: Quando o Cristo vier, ele fará ainda mais milagres do que os que este homem tem feito?
32 ಆತನ ವಿಷಯವಾಗಿ ಜನರು ಗುಣುಗುಟ್ಟಿದ ರೆಂದು ಫರಿಸಾಯರು ಕೇಳಿದರು; ಫರಿಸಾಯರೂ ಪ್ರಧಾನಯಾಜಕರೂ ಆತನನ್ನು ಹಿಡಿಯುವದಕ್ಕೆ ಅಧಿ ಕಾರಿಗಳನ್ನು ಕಳುಹಿಸಿದರು.
32 Os fariseus ouviram a multidão murmurar essas coisas a respeito dele; e os fariseus e os principais sacerdotes enviaram oficiais para o prenderem.
33 ತರುವಾಯ ಯೇಸು ಅವರಿಗೆ--ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೋಗು ತ್ತೇನೆ.
33 Então, disse-lhes Jesus: Ainda por um pouco de tempo eu estou convosco, e então eu vou para aquele que me enviou.
34 ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣುವದಿಲ್ಲ; ನಾನಿರುವಲ್ಲಿಗೆ ನೀವು ಬರಲಾರಿರಿ ಅಂದನು.
34 Vós me buscareis, e não me achareis; e onde eu estou, vós não podeis vir.
35 ಆಗ ಯೆಹೂದ್ಯರು--ನಾವು ಅವನನ್ನು ಕಾಣದ ಹಾಗೆ ಅವನು ಎಲ್ಲಿಗೆ ಹೋಗುವನು? ಅನ್ಯಜನರ ಮಧ್ಯದಲ್ಲಿ ಚದರಿಹೋದವರ ಬಳಿಗೆ ಹೋಗಿ ಅನ್ಯಜನರಿಗೆ ಬೋಧಿಸುವನೋ?
35 Disseram, pois, os judeus uns para os outros: Para onde ele irá que não o acharemos? Ele irá para os dispersos entre os gentios, e ensinará os gentios?
36 ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣಲಾರಿರಿ; ನಾನಿರುವಲ್ಲಿಗೆ ನೀವು ಬರಲಾರಿರಿ ಎಂದು ಇವನು ಹೇಳಿರುವದು ಎಂಥಾ ಮಾತಾಗಿರಬಹುದು ಎಂದು ತಮ್ಮಲ್ಲಿ ಅಂದುಕೊಂಡರು.
36 Que tipo de palavra é esta que ele disse: Vós me buscareis, e não me achareis; e onde eu estou, vós não podeis vir?
37 ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.
37 No último dia, o grande dia da festa, Jesus pôs-se em pé e clamou, dizendo: Se algum homem tem sede, deixai-o vir a mim, e beber.
38 ನನ್ನ ಮೇಲೆ ನಂಬಿಕೆ ಇಡುವವನಿಗೆ ಬರಹವು ಹೇಳಿದ ಪ್ರಕಾರ ಆತನ ಹೊಟ್ಟೆಯೊಳಗಿಂದ ಜೀವ ಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು.
38 Quem crê em mim, como diz a escritura, do seu ventre fluirão rios de água viva.
39 (ಆದರೆ ಆತನು ತನ್ನಲ್ಲಿ ವಿಶ್ವಾಸವಿಡುವವರು ಹೊಂದಲಿರುವ ಆತ್ಮನನ್ನು ಕುರಿತು ಇದನ್ನು ಹೇಳಿದನು; ಯಾಕಂದರೆ ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ್ದರಿಂದ ಪವಿತ್ರಾ ತ್ಮನು ಇನ್ನೂ ಕೊಡಲ್ಪಟ್ಟಿರಲಿಲ್ಲ.)
39 (Mas isso ele falou do Espírito, que haviam de receber os que nele cressem; porque o Espírito Santo ainda não fora dado, pois Jesus ainda não tinha sido glorificado).
40 ಆದದರಿಂದ ಜನರಲ್ಲಿ ಅನೇಕರು ಈ ಮಾತನ್ನು ಕೇಳಿದಾಗ--ಈತನು ನಿಜವಾಗಿಯೂ ಆ ಪ್ರವಾದಿ ಯಾಗಿದ್ದಾನೆ ಅಂದರು.
40 Então, muitos da multidão, ouvindo este dizer, diziam: Verdadeiramente, este é o Profeta.
41 ಬೇರೆಯವರು--ಈತನೇ ಆ ಕ್ರಿಸ್ತನು ಅಂದರು. ಆದರೆ ಕೆಲವರು--ಕ್ರಿಸ್ತನು ಗಲಿಲಾಯದಿಂದ ಬರುವನೋ?
41 Outros diziam: Este é o Cristo. Mas diziam outros: Virá o Cristo da Galileia?
42 ಆದರೆ ಕ್ರಿಸ್ತನು ದಾವೀದನ ಸಂತಾನದಿಂದಲೂ ದಾವೀದನಿದ್ದ ಬೇತೆಹೇಮೆಂಬ ಊರಿನಿಂದಲೂ ಬರುವನೆಂದು ಬರಹವು ಹೇಳುತ್ತದಲ್ಲವೇ? ಅಂದರು.
42 Não diz a escritura que o Cristo vem da semente de Davi, e da cidade de Belém, de onde era Davi?
43 ಹೀಗೆ ಆತನ ನಿಮಿತ್ತ ವಾಗಿ ಜನರಲ್ಲಿ ಭೇದ ಉಂಟಾಯಿತು;
43 Assim, houve uma divisão entre o povo por causa dele.
44 ಅವರಲ್ಲಿ ಕೆಲವರು ಆತನನ್ನು ಹಿಡಿಯಬೇಕೆಂದಿದ್ದರು; ಆದರೆ ಯಾರೂ ಆತನ ಮೇಲೆ ಕೈ ಹಾಕಲಿಲ್ಲ.
44 E alguns deles queriam prendê-lo, mas nenhum homem lhe pôs as mãos.
45 ಬಳಿಕ ಪ್ರಧಾನಯಾಜಕರ ಮತ್ತು ಫರಿಸಾಯರ ಬಳಿಗೆ ಅಧಿಕಾರಿಗಳು ಬಂದಾಗ ಅವರಿಗೆ--ನೀವು ಯಾಕೆ ಆತನನ್ನು ಕರತರಲಿಲ್ಲ ಎಂದು ಕೇಳಿದರು.
45 Então, os oficiais foram até os principais sacerdotes e fariseus, e eles lhes perguntaram: Por que não o trouxestes?
46 ಅದಕ್ಕೆ ಅಧಿಕಾರಿಗಳು ಪ್ರತ್ಯುತ್ತರವಾಗಿ--ಈ ಮನುಷ್ಯನಂತೆ ಯಾವನೂ ಎಂದೂ ಮಾತನಾಡಲಿಲ್ಲ ಅಂದರು.
46 Responderam os oficiais: Nunca homem algum falou assim como este homem.
47 ಆಗ ಫರಿಸಾಯರೂ ಅವರಿಗೆ--ನೀವು ಸಹ ಮೋಸ ಹೋದಿರೋ?
47 Então responderam-lhes os fariseus: Vós também fostes enganados?
48 ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಅವನ ಮೇಲೆ ವಿಶ್ವಾಸವಿಟ್ಟಿದ್ದಾರೋ?
48 Alguém dos governantes ou dos fariseus acreditou nele?
49 ಆದರೆ ನ್ಯಾಯಪ್ರಮಾಣ ವನ್ನರಿಯದ ಈ ಜನರು ಶಾಪಗ್ರಸ್ತರೇ ಎಂದು ಹೇಳಿದರು.
49 Mas esta multidão, que não sabe a lei, é maldita.
50 ನಿಕೊದೇಮನು ಅವರಿಗೆ--(ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ಇವನು ಅವರಲ್ಲಿ ಒಬ್ಬ ನಾಗಿದ್ದನು.)
50 Nicodemos (o que de noite fora até Jesus, sendo um deles) disse-lhes:
51 ಒಬ್ಬನನ್ನು ವಿಚಾರಿಸಿ ಅವನು ಮಾಡು ವದೇನೆಂದು ತಿಳಿದುಕೊಳ್ಳುವದಕ್ಕಿಂತ ಮುಂಚೆ ಅವ ನನ್ನು ನಮ್ಮ ನ್ಯಾಯಪ್ರಮಾಣವು ತೀರ್ಪು ಮಾಡುವ ದುಂಟೇ ಅಂದನು.
51 Porventura, julga a nossa lei algum homem sem primeiro ouvi-lo e ter conhecimento do que ele fez?
52 ಅವರು ಪ್ರತ್ಯುತ್ತರವಾಗಿ ಅವನಿಗೆ--ನೀನು ಸಹ ಗಲಿಲಾಯದವನೋ? ಗಲಿ ಲಾಯದಲ್ಲಿ ಪ್ರವಾದಿಯು ಏಳುವದೇ ಇಲ್ಲ, ಪರಿ ಶೋಧಿಸಿ ನೋಡು ಅಂದರು.
52 Eles responderam, e disseram-lhe: És tu também da Galileia? Examina e vê; porque da Galileia não se levanta profeta.
53 ಪ್ರತಿಯೊಬ್ಬನು ತನ್ನ ಸ್ವಂತ ಮನೆಗೆ ಹೋದನು.
53 E cada homem foi para sua própria casa.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar João 7, comparar traduções ou montar um estudo — tudo direto pelo WhatsApp.