João 8
Kannada Bible (GL_KANNADA) vs VC
VC Versão Católica
1 ಯೇಸು ಎಣ್ಣೇಮರಗಳ ಗುಡ್ಡಕ್ಕೆ ಹೋದನು.
1 Dirigiu-se Jesus para o monte das Oliveiras.
2 ಬೆಳಿಗ್ಗೆ ಆತನು ತಿರಿಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಆತನ ಬಳಿಗೆ ಬಂದರು; ಆತನು ಕೂತುಕೊಂಡು ಅವರಿಗೆ ಬೋಧಿಸಿ ದನು.
2 Ao romper da manhã, voltou ao templo e todo o povo veio a ele. Assentou-se e começou a ensinar.
3 ಆಗ ವ್ಯಭಿಚಾರದಲ್ಲಿ ಸಿಕ್ಕಿದ ಒಬ್ಬ ಹೆಂಗಸನ್ನು ಶಾಸ್ತ್ರಿಗಳು ಮತ್ತು ಫರಿಸಾಯರು ಆತನ ಬಳಿಗೆ ತಂದು ಆಕೆಯನ್ನು ನಡುವೆ ನಿಲ್ಲಿಸಿ
3 Os escribas e os fariseus trouxeram-lhe uma mulher que fora apanhada em adultério.
4 ಆತನಿಗೆ -- ಬೋಧಕನೇ, ಈ ಹೆಂಗಸು ವ್ಯಭಿಚಾರ ಮಾಡುವಾಗಲೇ ಹಿಡಿಯ ಲ್ಪಟ್ಟಳು.
4 Puseram-na no meio da multidão e disseram a Jesus: Mestre, agora mesmo esta mulher foi apanhada em adultério.
5 ಇಂಥವರು ಕಲ್ಲೆಸೆಯಲ್ಪಡಬೇಕೆಂದು ಮೋಶೆಯು ನ್ಯಾಯಪ್ರಮಾಣದಲ್ಲಿ ನಮಗೆ ಅಪ್ಪಣೆ ಕೊಟ್ಟಿದ್ದಾನೆ; ಆದರೆ ನೀನು ಏನು ಹೇಳುತ್ತೀ ಎಂದು ಕೇಳಿದರು.
5 Moisés mandou-nos na lei que apedrejássemos tais mulheres. Que dizes tu a isso?
6 ಅವರು ಆತನನ್ನು ಶೋಧಿಸುವವರಾಗಿ ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೀಗೆ ಹೇಳಿ ದರು. ಆದರೆ ಯೇಸು ಅವರ ಮಾತುಗಳನ್ನು ಕೇಳದವ ನಂತೆ ಬೊಗ್ಗಿಕೊಂಡು ತನ್ನ ಬೆರಳಿನಿಂದ ನೆಲದ ಮೇಲೆ ಬರೆದನು.
6 Perguntavam-lhe isso, a fim de pô-lo à prova e poderem acusá-lo. Jesus, porém, se inclinou para a frente e escrevia com o dedo na terra.
7 ಆದರೆ ಅವರು ಬಿಡದೆ ಆತನನ್ನು ಕೇಳುತ್ತಿರಲು ಆತನು ಮೇಲಕ್ಕೆ ನೋಡಿ--ನಿಮ್ಮೊಳಗೆ ಯಾವನು ಪಾಪವಿಲ್ಲದವನಾಗಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲನ್ನು ಹಾಕಲಿ ಎಂದು ಅವರಿಗೆ ಹೇಳಿದನು.
7 Como eles insistissem, ergueu-se e disse-lhes: Quem de vós estiver sem pecado, seja o primeiro a lhe atirar uma pedra.
8 ತಿರಿಗಿ ಆತನು ಬೊಗ್ಗಿಕೊಂಡು ನೆಲದ ಮೇಲೆ ಬರೆದನು.
8 Inclinando-se novamente, escrevia na terra.
9 ಅದನ್ನು ಕೇಳಿದವರು ತಮ್ಮ ಸ್ವಂತ ಮನಸ್ಸಾಕ್ಷಿಯಿಂದ ಮನವರಿಕೆಯಾಗಿ ಹಿರಿಯವನು ಮೊದಲುಗೊಂಡು ಕಡೆಯವನವರೆಗೂ ಒಬ್ಬೊಬ್ಬರಾಗಿ ಹೊರಗೆಹೋದರು; ಆಗ ಯೇಸು ಒಬ್ಬನೇ ಉಳಿದನು; ಆ ಹೆಂಗಸು ನಡುವೆ ನಿಂತು ಕೊಂಡಿದ್ದಳು.
9 A essas palavras, sentindo-se acusados pela sua própria consciência, eles se foram retirando um por um, até o último, a começar pelos mais idosos, de sorte que Jesus ficou sozinho, com a mulher diante dele.
10 ಯೇಸು ಮೇಲಕ್ಕೆ ನೋಡಿ ಆ ಹೆಂಗಸಿನ ಹೊರತು ಯಾರನ್ನೂ ಕಾಣದೆ ಆಕೆಗೆ--ಸ್ತ್ರೀಯೇ, ನಿನ್ನ ಮೇಲೆ ದೂರು ಹೊರಿಸಿದವರು ಎಲ್ಲಿ ದ್ದಾರೆ? ನಿನಗೆ ಯಾರೂ ಶಿಕ್ಷೆ ವಿಧಿಸಲಿಲ್ಲವೋ? ಅಂದನು.
10 Então ele se ergueu e vendo ali apenas a mulher, perguntou-lhe: Mulher, onde estão os que te acusavam? Ninguém te condenou?
11 ಅದಕ್ಕೆ ಆಕೆಯು-- ಕರ್ತನೇ, ಯಾರೂ ವಿಧಿಸಲಿಲ್ಲ ಅಂದಳು. ಯೇಸು ಆಕೆಗೆ--ನಾನೂ ನಿನಗೆ ಶಿಕ್ಷೆ ವಿಧಿಸುವದಿಲ್ಲ; ಹೋಗು, ಇನ್ನು ಮೇಲೆ ಪಾಪಮಾಡಬೇಡ ಅಂದನು.
11 Respondeu ela: Ninguém, Senhor. Disse-lhe então Jesus: Nem eu te condeno. Vai e não tornes a pecar.
12 ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.
12 Falou-lhes outra vez Jesus: Eu sou a luz do mundo; aquele que me segue não andará em trevas, mas terá a luz da vida.
13 ಆದಕಾರಣ ಫರಿಸಾಯರು ಆತ ನಿಗೆ--ನಿನ್ನ ವಿಷಯವಾಗಿ ನೀನೇ ಸಾಕ್ಷಿಕೊಡುತ್ತೀ; ನಿನ್ನ ಸಾಕ್ಷಿಯು ನಿಜವಲ್ಲ ಎಂದು ಹೇಳಿದರು.
13 A isso, os fariseus lhe disseram: Tu dás testemunho de ti mesmo; teu testemunho não é digno de fé.
14 ಯೇಸು ಪ್ರತ್ಯುತ್ತರವಾಗಿ ಅವರಿಗೆ--ನನ್ನ ವಿಷಯ ವಾಗಿ ನಾನು ಸಾಕ್ಷಿಕೊಟ್ಟಾಗ್ಯೂ ನನ್ನ ಸಾಕ್ಷಿ ನಿಜವೇ; ಯಾಕಂದರೆ ನಾನು ಎಲ್ಲಿಂದ ಬಂದೆನೋ ಮತ್ತು ಎಲ್ಲಿಗೆ ಹೋಗುತ್ತೇನೋ ನಾನು ಬಲ್ಲೆನು; ಆದರೆ ನಾನು ಎಲ್ಲಿಂದ ಬಂದೆನೋ ಇಲ್ಲವೆ ಎಲ್ಲಿಗೆ ಹೋಗುತ್ತೇನೋ ನೀವು ಹೇಳಲಾರಿರಿ.
14 Respondeu-lhes Jesus: Embora eu dê testemunho de mim mesmo, o meu testemunho é digno de fé, porque sei de onde vim e para onde vou; mas vós não sabeis de onde venho nem para onde vou.
15 ನೀವು ಶಾರೀರಿಕ ರೀತಿಯಲ್ಲಿ ತೀರ್ಪು ಮಾಡುತ್ತೀರಿ; ಆದರೆ ಯಾವ ಮನುಷ್ಯನಿಗೂ ನಾನು ತೀರ್ಪುಮಾಡುವದಿಲ್ಲ.
15 Vós julgais segundo a aparência; eu não julgo ninguém.
16 ನಾನು ತೀರ್ಪು ಮಾಡಿದರೂ ನನ್ನ ತೀರ್ಪು ನಿಜ ವಾದದ್ದೇ; ಯಾಕಂದರೆ ನಾನು ಒಂಟಿಗನಲ್ಲ, ಆದರೆ ನಾನೂ ನನ್ನನ್ನು ಕಳುಹಿಸಿದ ತಂದೆಯೂ ಇದ್ದೇವೆ.
16 E, se julgo, o meu julgamento é conforme a verdade, porque não estou sozinho, mas comigo está o Pai que me enviou.
17 ಇಬ್ಬರ ಸಾಕ್ಷಿಯು ನಿಜವೆಂದು ನಿಮ್ಮ ನ್ಯಾಯ ಪ್ರಮಾಣದಲ್ಲಿಯೂ ಬರೆದದೆ.
17 Ora, na vossa lei está escrito: O testemunho de duas pessoas é digno de fé {Dt 19,15}.
18 ನನ್ನ ವಿಷಯವಾಗಿ ನಾನೇ ಸಾಕ್ಷಿ ಕೊಡುತ್ತೇನೆ ಮತ್ತು ನನ್ನನ್ನು ಕಳುಹಿಸಿದ ತಂದೆಯೂ ನನ್ನ ವಿಷಯವಾಗಿ ಸಾಕ್ಷಿಕೊಡುತ್ತಾನೆ ಅಂದನು.
18 Eu dou testemunho de mim mesmo; e meu Pai, que me enviou, o dá também.
19 ತರುವಾಯ ಅವರು ಆತನಿಗೆ--ನಿನ್ನ ತಂದೆ ಎಲ್ಲಿ ಅಂದರು. ಅದಕ್ಕೆ ಯೇಸು ಪ್ರತ್ಯುತ್ತರ ವಾಗಿ--ನನ್ನನ್ನಾಗಲಿ ನನ್ನ ತಂದೆಯನ್ನಾಗಲಿ ನೀವು ಅರಿತಿಲ್ಲ; ನೀವು ನನ್ನನ್ನು ಅರಿತುಕೊಂಡಿದ್ದರೆ ನನ್ನ ತಂದೆಯನ್ನು ಸಹ ಅರಿತುಕೊಳ್ಳುತ್ತಿದ್ದಿರಿ ಅಂದನು.
19 Perguntaram-lhe: Onde está teu Pai? Respondeu Jesus: Não conheceis nem a mim nem a meu Pai; se me conhecêsseis, certamente conheceríeis também a meu Pai.
20 ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ಬೊಕ್ಕಸದ ಬಳಿಯಲ್ಲಿ ಈ ಮಾತುಗಳನ್ನು ಆಡಿದನು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಯಾರೂ ಆತನ ಮೇಲೆ ಕೈಹಾಕಲಿಲ್ಲ.
20 Estas palavras proferiu Jesus ensinando no templo, junto aos cofres de esmola. Mas ninguém o prendeu, porque ainda não era chegada a sua hora.
21 ಯೇಸು ತಿರಿಗಿ ಅವರಿಗೆ--ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪ ಗಳಲ್ಲಿ ಸಾಯುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು.
21 Jesus disse-lhes: Eu me vou, e procurar-me-eis e morrereis no vosso pecado. Para onde eu vou, vós não podeis ir.
22 ಅದಕ್ಕೆ ಯೆಹೂದ್ಯರು--ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿ ದ್ದಾನೋ? ಯಾಕಂದರೆ--ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಎಂದು ಹೇಳುತ್ತಾನಲ್ಲಾ ಅಂದರು.
22 Perguntavam os judeus: Será que ele se vai matar, pois diz: Para onde eu vou, vós não podeis ir?
23 ಆತನು ಅವರಿಗೆ--ನೀವು ಕೆಳಗಿನವರು, ನಾನು ಮೇಲಿನವನು; ನೀವು ಈ ಲೋಕದವರು, ನಾನು ಈ ಲೋಕದವನಲ್ಲ.
23 Ele lhes disse: Vós sois cá de baixo, eu sou lá de cima. Vós sois deste mundo, eu não sou deste mundo.
24 ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆನು. ಯಾಕಂದರೆ ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ಹೇಳಿದನು.
24 Por isso vos disse: morrereis no vosso pecado; porque, se não crerdes o que eu sou, morrereis no vosso pecado.
25 ತರುವಾಯ ಅವರು ಆತನಿಗೆ--ನೀನು ಯಾರಾಗಿದ್ದೀ ಅಂದರು. ಅದಕ್ಕೆ ಯೇಸು ಅವರಿಗೆ--ಮೊದಲಿನಿಂದಲೂ ನಾನು ನಿಮಗೆ ಹೇಳಿದಂತವನೇ.
25 Quem és tu?, perguntaram-lhe eles então. Jesus respondeu: Exatamente o que eu vos declaro.
26 ನಿಮ್ಮ ವಿಷಯವಾಗಿ ಹೇಳುವದಕ್ಕೂ ತೀರ್ಪುಮಾಡುವದಕ್ಕೂ ನನಗೆ ಅನೇಕ ವಿಷಯಗಳಿವೆ. ಆದರೆ ನನ್ನನ್ನು ಕಳುಹಿಸಿದಾತನು ಸತ್ಯವಂತನು. ನಾನು ಆತನಿಂದ ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ ಅಂದನು.
26 Tenho muitas coisas a dizer e a julgar a vosso respeito, mas o que me enviou é verdadeiro e o que dele ouvi eu o digo ao mundo.
27 ಆತನು ತಂದೆಯ ವಿಷಯವಾಗಿ ತಮ್ಮ ಸಂಗಡ ಮಾತನಾಡಿದನೆಂದು ಅವರು ಗ್ರಹಿಸಲಿಲ್ಲ.
27 Eles, porém, não compreenderam que ele lhes falava do Pai.
28 ಆಮೇಲೆ ಯೇಸು ಅವ ರಿಗೆ--ಮನುಷ್ಯಕುಮಾರನನ್ನು ನೀವು ಮೇಲಕ್ಕೆತ್ತಿದಾಗ ನಾನೇ ಆತನೆಂದೂ ನನ್ನಷ್ಟಕ್ಕೆ ನಾನೇ ಏನೂ ಮಾಡದೆ ನನ್ನ ತಂದೆಯು ನನಗೆ ತಿಳಿಸಿದ ಹಾಗೆ ಈ ಸಂಗತಿ ಗಳನ್ನು ಹೇಳುತ್ತೇನೆಂದೂ ನೀವು ತಿಳಿದುಕೊಳ್ಳುವಿರಿ.
28 Jesus então lhes disse: Quando tiverdes levantado o Filho do Homem, então conhecereis quem sou e que nada faço de mim mesmo, mas falo do modo como o Pai me ensinou.
29 ಇದಲ್ಲದೆ ನನ್ನನ್ನು ಕಳುಹಿಸಿದಾತನು ನನ್ನ ಸಂಗಡ ಇದ್ದಾನೆ; ತಂದೆಯು ನನ್ನನ್ನು ಒಂಟಿಯಾಗಿ ಬಿಡಲಿಲ್ಲ;ಯಾಕಂದರೆ ಆತನು ಮೆಚ್ಚುವವುಗಳನ್ನೇ ನಾನು ಯಾವಾಗಲೂ ಮಾಡುತ್ತೇನೆ ಅಂದನು.
29 Aquele que me enviou está comigo; ele não me deixou sozinho, porque faço sempre o que é do seu agrado.
30 ಆತನು ಈ ಮಾತುಗಳನ್ನು ಹೇಳುತ್ತಿದ್ದಾಗಲೇ ಅನೇಕರು ಆತನಲ್ಲಿ ನಂಬಿಕೆಯಿಟ್ಟರು.
30 Tendo proferido essas palavras, muitos creram nele.
31 ಆತನ ಮೇಲೆ ನಂಬಿಕೆಯಿಟ್ಟ ಆ ಯೆಹೂದ್ಯರಿಗೆ ಯೇಸು ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾ ಗಿಯೂ ನೀವು ನನ್ನ ಶಿಷ್ಯರಾಗುವಿರಿ.
31 E Jesus dizia aos judeus que nele creram: Se permanecerdes na minha palavra, sereis meus verdadeiros discípulos;
32 ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಆ ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವದು ಎಂದು ಹೇಳಿದನು.
32 conhecereis a verdade e a verdade vos livrará.
33 ಅದಕ್ಕೆ ಅವರು ಪ್ರತ್ಯುತ್ತರವಾಗಿ ಆತನಿಗೆ--ನಾವು ಅಬ್ರಹಾಮನ ಸಂತತಿಯವರಾಗಿರಲಾಗಿ ಯಾವ ಮನುಷ್ಯನಿಗೂ ಎಂದಿಗೂ ಗುಲಾಮರಾಗಿರಲಿಲ್ಲ; ಹಾಗಾದರೆ--ನಿಮಗೆ ಬಿಡುಗಡೆಯಾಗುವದೆಂದು ನೀನು ಹೇಗೆ ಹೇಳುತ್ತೀ ಅಂದರು.
33 Replicaram-lhe: Somos descendentes de Abraão e jamais fomos escravos de alguém. Como dizes tu: Sereis livres?
34 ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ--ಪಾಪ ಮಾಡುವವನು ಪಾಪಕ್ಕೆ ಗುಲಾಮನಾಗಿದ್ದಾನೆ.
34 Respondeu Jesus: Em verdade, em verdade vos digo: todo homem que se entrega ao pecado é seu escravo.
35 ಗುಲಾಮನು ಮನೆಯಲ್ಲಿ ಯಾವಾಗಲೂ ಇರುವದಿಲ್ಲ; ಆದರೆ ಮಗನು ಯಾವಾಗಲೂ ಇರುತ್ತಾನೆ.
35 Ora, o escravo não fica na casa para sempre, mas o filho sim, fica para sempre.
36 ಆದದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ ನಿಜವಾಗಿಯೂ ನೀವು ಬಿಡುಗಡೆಯಾಗುವಿರಿ.
36 Se, portanto, o Filho vos libertar, sereis verdadeiramente livres.
37 ನೀವು ಅಬ್ರಹಾಮನ ಸಂತತಿಯವರೆಂದು ನಾನು ಬಲ್ಲೆನು; ಆದರೆ ನಿಮ್ಮಲ್ಲಿ ನನ್ನ ವಾಕ್ಯಕ್ಕೆ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ.
37 Bem sei que sois a raça de Abraão; mas quereis matar-me, porque a minha palavra não penetra em vós.
38 ನನ್ನ ತಂದೆಯ ಬಳಿ ಯಲ್ಲಿ ನಾನು ನೋಡಿದ್ದನ್ನೇ ಮಾತನಾಡುತ್ತೇನೆ; ನೀವು ನಿಮ್ಮ ತಂದೆಯ ಬಳಿಯಲ್ಲಿ ನೋಡಿದ್ದನ್ನು ಮಾಡುತ್ತೀರಿ ಅಂದನು.
38 Eu falo o que vi junto de meu Pai; e vós fazeis o que aprendestes de vosso pai.
39 ಅವರು ಪ್ರತ್ಯುತ್ತರವಾಗಿ ಆತನಿಗೆ--ಅಬ್ರಹಾಮನು ನಮ್ಮ ತಂದೆ ಅಂದರು; ಅದಕ್ಕೆ ಯೇಸು ಅವರಿಗೆ--ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನ ಕ್ರಿಯೆಗಳನ್ನು ಮಾಡು ತ್ತಿದ್ದಿರಿ.
39 Nosso pai, replicaram eles, é Abraão. Disse-lhes Jesus: Se fôsseis filhos de Abraão, faríeis as obras de Abraão.
40 ಆದರೆ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದ ನನ್ನನ್ನು ಈಗ ಕೊಲ್ಲುವದಕ್ಕೆ ನೋಡುತ್ತೀರಿ; ಇದನ್ನು ಅಬ್ರಹಾಮನು ಮಾಡಲಿಲ್ಲ.
40 Mas, agora, procurais tirar-me a vida, a mim que vos falei a verdade que ouvi de Deus! Isso Abraão não o fez.
41 ನೀವು ನಿಮ್ಮ ತಂದೆಯ ಕ್ರಿಯೆಗಳನ್ನು ಮಾಡುತ್ತೀರಿ ಅಂದನು. ಅದಕ್ಕವರು ಆತನಿಗೆ--ನಾವು ವ್ಯಭಿಚಾರದಿಂದ ಹುಟ್ಟಿ ದವರಲ್ಲ; ನಮಗೆ ಒಬ್ಬನೇ ತಂದೆ, ಆತನು ದೇವರೇ ಅಂದರು.
41 Vós fazeis as obras de vosso pai. Retrucaram-lhe eles: Nós não somos filhos da fornicação; temos um só pai: Deus.
42 ಯೇಸು ಅವರಿಗೆ--ದೇವರು ನಿಮ್ಮ ತಂದೆಯಾಗಿದ್ದರೆ ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ; ಯಾಕಂದರೆ ನಾನು ದೇವರಿಂದ ಹೊರಟುಬಂದಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ; ಆದರೆ ಆತನೇ ನನ್ನನ್ನು ಕಳುಹಿಸಿದನು.
42 Jesus replicou: Se Deus fosse vosso pai, vós me amaríeis, porque eu saí de Deus. É dele que eu provenho, porque não vim de mim mesmo, mas foi ele quem me enviou.
43 ನೀವು ನನ್ನ ಮಾತನ್ನು ಯಾಕೆ ಗ್ರಹಿ ಸದೆ ಇದ್ದೀರಿ? ನೀವು ನನ್ನ ವಾಕ್ಯವನ್ನು ಕೇಳದೆ ಇರುವದರಿಂದಲೇ.
43 Por que não compreendeis a minha linguagem? É porque não podeis ouvir a minha palavra.
44 ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ
44 Vós tendes como pai o demônio e quereis fazer os desejos de vosso pai. Ele era homicida desde o princípio e não permaneceu na verdade, porque a verdade não está nele. Quando diz a mentira, fala do que lhe é próprio, porque é mentiroso e pai da mentira.
45 ನಾನು ನಿಮಗೆ ಸತ್ಯವನ್ನು ಹೇಳುವವನಾದದರಿಂದ ನೀವು ನನ್ನನ್ನು ನಂಬುವದಿಲ್ಲ.
45 Mas eu, porque vos digo a verdade, não me credes.
46 ನನ್ನಲ್ಲಿ ಪಾಪವಿದೆ ಎಂದು ನಿಮ್ಮಲ್ಲಿ ಯಾರು ಸ್ಥಾಪಿಸುವಿರಿ? ಮತ್ತು ನಾನು ಸತ್ಯವನ್ನು ಹೇಳಿದರೆ ನೀವು ನನ್ನನ್ನು ಯಾಕೆ ನಂಬುವದಿಲ್ಲ?
46 Quem de vós me acusará de pecado? Se vos falo a verdade, por que me não credes?
47 ದೇವರಿಗೆ ಸಂಬಂಧಪಟ್ಟವನು ದೇವರ ವಾಕ್ಯಗಳನ್ನು ಕೇಳುತ್ತಾನೆ. ಆದರೆ ನೀವು ದೇವರಿಗೆ ಸಂಬಂಧಪಟ್ಟವರಲ್ಲದ ಕಾರಣ ಅವುಗಳನ್ನು ಕೇಳುವದಿಲ್ಲ ಎಂದು ಹೇಳಿದನು.
47 Quem é de Deus ouve as palavras de Deus, e se vós não as ouvis é porque não sois de Deus.
48 ಆಗ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ನೀನು ಸಮಾರ್ಯನು ಮತ್ತು ನಿನಗೆ ದೆವ್ವ ಹಿಡಿದದೆ ಎಂದು ನಾವು ಹೇಳುವದು ಸರಿಯಲ್ಲವೋ ಎಂದು ಹೇಳಿದರು.
48 Responderam então os judeus: Não dizemos com razão que és samaritano, e que estás possesso de um demônio?
49 ಅದಕ್ಕೆ ಯೇಸು ಪ್ರತ್ಯುತ್ತರವಾಗಿ-- ನನಗೆ ದೆವ್ವ ಹಿಡಿದಿಲ್ಲ; ಆದರೆ ನನ್ನ ತಂದೆಯನ್ನು ಸನ್ಮಾನಿಸುತ್ತೇನೆ, ನೀವು ನನ್ನನ್ನು ಅವಮಾನ ಪಡಿಸುತ್ತೀರಿ.
49 Respondeu-lhes Jesus: Eu não estou possesso de demônio, mas honro a meu Pai. Vós, porém, me ultrajais!
50 ಇದಲ್ಲದೆ ನಾನು ನನ್ನ ಸ್ವಂತ ಮಹಿಮೆಯನ್ನು ಹುಡುಕುವದಿಲ್ಲ; ಆದರೆ ಹುಡುಕು ವವನೂ ನ್ಯಾಯತೀರಿಸುವವನೂ ಒಬ್ಬನಿದ್ದಾನೆ.
50 Não busco a minha glória. Há quem a busque e ele fará justiça.
51 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ಒಬ್ಬನು ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಕಾಣುವದಿಲ್ಲ ಅಂದನು.
51 Em verdade, em verdade vos digo: se alguém guardar a minha palavra, não verá jamais a morte.
52 ಆಗ ಯೆಹೂದ್ಯರು ಆತನಿಗೆ--ನಿನಗೆ ದೆವ್ವ ಹಿಡಿದದೆ ಎಂದು ನಮಗೆ ಈಗ ತಿಳಿಯಿತು; ಅಬ್ರಹಾಮನು ಮತ್ತು ಪ್ರವಾದಿಗಳು ಸತ್ತರು; ಆದರೆ--ಯಾವನಾದರೂ ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಅನುಭವಿಸುವದಿಲ್ಲವೆಂದು ನೀನು ಹೇಳುತ್ತೀಯಲ್ಲಾ;
52 Disseram-lhe os judeus: Agora vemos que és possuído de um demônio. Abraão morreu, e também os profetas. E tu dizes que, se alguém guardar a tua palavra, jamais provará a morte...
53 ಸತ್ತುಹೋದ ನಮ್ಮ ತಂದೆ ಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡ ವನೋ? ಪ್ರವಾದಿಗಳೂ ಸತ್ತುಹೋದರು. ನಿನ್ನನ್ನು ಯಾರೆಂದು ನೀನು ಮಾಡಿಕೊಳ್ಳುತ್ತೀ ಎಂದು ಕೇಳಲು
53 És acaso maior do que nosso pai Abraão? E, entretanto, ele morreu... e os profetas também. Quem pretendes ser?
54 ಯೇಸು--ನನ್ನನ್ನು ನಾನೇ ಸನ್ಮಾನಿಸಿಕೊಂಡರೆ ನನ್ನ ಸನ್ಮಾನವು ಏನೂ ಅಲ್ಲ; ನೀವು ಯಾವಾತನನ್ನು ನಿಮ್ಮ ದೇವರೆಂದು ಹೇಳುತ್ತೀರೋ ಆ ನನ್ನ ತಂದೆಯೇ ನನ್ನನ್ನು ಸನ್ಮಾನಿಸುತ್ತಾನೆ.
54 Respondeu Jesus: Se me glorifico a mim mesmo, a minha glória não é nada; meu Pai é quem me glorifica, aquele que vós dizeis ser o vosso Deus
55 ಆದಾಗ್ಯೂ ನೀವು ಆತನನ್ನು ಅರಿತುಕೊಂಡಿಲ್ಲ; ಆದರೆ ನಾನು ಆತನನ್ನು ಅರಿತಿದ್ದೇನೆ. ನಾನು ಆತನನ್ನು ಅರಿಯಲಿಲ್ಲವೆಂದು ಹೇಳಿದರೆ ನಿಮ್ಮ ಹಾಗೆ ನಾನೂ ಸುಳ್ಳುಗಾರನಾಗಿ ರುವೆನು; ಆದರೆ ನಾನು ಆತನನ್ನು ಅರಿತಿದ್ದೇನೆ; ಆತನ ಮಾತನ್ನು ಕೈಕೊಂಡಿದ್ದೇನೆ.
55 e, contudo, não o conheceis. Eu, porém, o conheço e, se dissesse que não o conheço, seria mentiroso como vós. Mas conheço-o e guardo a sua palavra.
56 ನಿಮ್ಮ ತಂದೆಯಾದ ಅಬ್ರಹಾಮನು ನನ್ನ ದಿನವನ್ನು ನೋಡಲು ಸಂತೋಷಿ ಸಿದನು, ಅದನ್ನು ನೋಡಿ ಅವನು ಉಲ್ಲಾಸಗೊಂಡನು ಎಂದು ಹೇಳಿದನು.
56 Abraão, vosso pai, exultou com o pensamento de ver o meu dia. Viu-o e ficou cheio de alegria.
57 ಆಗ ಯೆಹೂದ್ಯರು ಆತ ನಿಗೆ--ನಿನಗೆ ಇನ್ನೂ ಐವತ್ತು ವರುಷವಾಗಿಲ್ಲ; ನೀನು ಅಬ್ರಹಾಮನನ್ನು ನೋಡಿದ್ದೀಯೋ ಅಂದರು.
57 Os judeus lhe disseram: Não tens ainda cinqüenta anos e viste Abraão!...
58 ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನಿಗಿಂತ ಮುಂಚೆಯೇ ನಾನು ಇದ್ದೇನೆ ಅಂದನು.
58 Respondeu-lhes Jesus: Em verdade, em verdade vos digo: antes que Abraão fosse, eu sou.
59 ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.
59 A essas palavras, pegaram então em pedras para lhas atirar. Jesus, porém, se ocultou e saiu do templo.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar João 8, comparar traduções ou montar um estudo — tudo direto pelo WhatsApp.