João 9

Kannada Bible (GL_KANNADA) vs ARA

Sair da comparação
ARA Almeida Revista e Atualizada 1993
1 ಯೇಸು ಹಾದುಹೋಗುತ್ತಿರುವಾಗ ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು.
1 Caminhando Jesus, viu um homem cego de nascença.
2 ಆತನ ಶಿಷ್ಯರು--ಬೋಧಕನೇ, ಇವನು ಕುರುಡನಾಗಿ ಹುಟ್ಟಿರುವದಕ್ಕೆ ಪಾಪಮಾಡಿದವರು ಯಾರು? ಈ ಮನುಷ್ಯನೋ ಅಥವಾ ಇವನ ತಂದೆ ತಾಯಿಗಳೋ ಎಂದು ಆತನನ್ನು ಕೇಳಿದರು;
2 E os seus discípulos perguntaram: Mestre, quem pecou, este ou seus pais, para que nascesse cego?
3 ಯೇಸು ಪ್ರತ್ಯುತ್ತರವಾಗಿ--ಈ ಮನುಷ್ಯನಾಗಲಿ ಇಲ್ಲವೆ ಇವನ ತಂದೆತಾಯಿಗಳಾಗಲಿ ಪಾಪಮಾಡಲಿಲ್ಲ; ಆದರೆ ದೇವರ ಕ್ರಿಯೆಗಳು ಇವನಲ್ಲಿ ಪ್ರಕಟವಾಗುವದಕ್ಕಾ ಗಿಯೇ ಇದಾಯಿತು.
3 Respondeu Jesus: Nem ele pecou, nem seus pais; mas foi para que se manifestem nele as obras de Deus.
4 ನನ್ನನ್ನು ಕಳುಹಿಸಿದಾತನ ಕೆಲಸ ಗಳನ್ನು ಹಗಲಿರುವಾಗ ನಾನು ಮಾಡತಕ್ಕದ್ದು; ರಾತ್ರಿ ಬರುತ್ತದೆ, ಆಗ ಯಾವ ಮನುಷ್ಯನೂ ಕೆಲಸಮಾಡ ಲಾರನು.
4 É necessário que façamos as obras daquele que me enviou, enquanto é dia; a noite vem, quando ninguém pode trabalhar.
5 ನಾನು ಈ ಲೋಕದಲ್ಲಿರುವವರೆಗೆ ಲೋಕದ ಬೆಳಕಾಗಿದ್ದೇನೆ ಅಂದನು.
5 Enquanto estou no mundo, sou a luz do mundo.
6 ಆತನು ಹೀಗೆ ಮಾತನಾಡಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು;
6 Dito isso, cuspiu na terra e, tendo feito lodo com a saliva, aplicou-o aos olhos do cego,
7 ಅವನಿಗೆ--ಹೋಗು, ಸಿಲೋವ ಕೊಳ ದಲ್ಲಿ ತೊಳೆದುಕೋ(ಸಿಲೋವ ಅಂದರೆ ಕಳುಹಿಸಲ್ಪಟ್ಟ ವನು ಎಂದರ್ಥ) ಅಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.
7 dizendo-lhe: Vai, lava-te no tanque de Siloé (que quer dizer Enviado). Ele foi, lavou-se e voltou vendo.
8 ಹೀಗಿರುವದರಿಂದ ನೆರೆಯವರೂ ಅವನು ಮೊದಲು ಕುರುಡನಾಗಿದ್ದಾಗ ಅವನನ್ನು ನೋಡಿದವರೂ-- ಕೂತುಕೊಂಡು ಭಿಕ್ಷೆ ಬೇಡುತ್ತಿದ್ದವನು ಇವನೇ ಅಲ್ಲವೋ ಅಂದರು.
8 Então, os vizinhos e os que dantes o conheciam de vista, como mendigo, perguntavam: Não é este o que estava assentado pedindo esmolas?
9 ಕೆಲವರು--ಅವನು ಇವನೇ ಅಂದರು. ಬೇರೆಯವರು--ಇವನು ಅವನ ಹಾಗೆ ಇದ್ದಾನೆ ಅಂದರು. ಆದರೆ ಅವನು--ನಾನೇ ಅವನು ಎಂದು ಹೇಳಿದನು.
9 Uns diziam: É ele. Outros: Não, mas se parece com ele. Ele mesmo, porém, dizia: Sou eu.
10 ಆದದರಿಂದ ಅವರು ಅವ ನಿಗೆ--ನಿನ್ನ ಕಣ್ಣುಗಳು ಹೇಗೆ ತೆರೆಯಲ್ಪಟ್ಟವು ಎಂದು ಕೇಳಲು
10 Perguntaram-lhe, pois: Como te foram abertos os olhos?
11 ಅವನು ಪ್ರತ್ಯುತ್ತರವಾಗಿ--ಯೇಸು ಎಂದು ಕರೆಯಲ್ಪಟ್ಟ ಮನುಷ್ಯನು ಕೆಸರುಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ--ಸಿಲೋವಕೊಳಕ್ಕೆ ಹೋಗಿ ತೊಳೆ ದುಕೋ ಎಂದು ಹೇಳಲು ನಾನು ಹೋಗಿ ತೊಳೆದು ಕೊಂಡು ದೃಷ್ಟಿಯನ್ನು ಹೊಂದಿದೆನು ಅಂದನು.
11 Respondeu ele: O homem chamado Jesus fez lodo, untou-me os olhos e disse-me: Vai ao tanque de Siloé e lava-te. Então, fui, lavei-me e estou vendo.
12 ಆಗ ಅವರು ಅವನಿಗೆ--ಅವನು ಎಲ್ಲಿದ್ದಾನೆ? ಅಂದಾಗ ಅವನು--ನನಗೆ ಗೊತ್ತಿಲ್ಲ ಅಂದನು;
12 Disseram-lhe, pois: Onde está ele? Respondeu: Não sei.
13 ಮೊದಲು ಕುರುಡನಾಗಿದ್ದವನನ್ನು ಅವರು ಫರಿಸಾ ಯರ ಬಳಿಗೆ ಕರೆದುಕೊಂಡು ಬಂದರು.
13 Levaram, pois, aos fariseus o que dantes fora cego.
14 ಯೇಸು ಕೆಸರುಮಾಡಿ ಅವನ ಕಣ್ಣುಗಳನ್ನು ತೆರೆದಾಗ ಅದು ಸಬ್ಬತ್‌ದಿನವಾಗಿತ್ತು.
14 E era sábado o dia em que Jesus fez o lodo e lhe abriu os olhos.
15 ಆಗ ಫರಿಸಾಯರು ಸಹ ತಿರಿಗಿ ಅವನು ಹೇಗೆ ದೃಷ್ಟಿಹೊಂದಿದ್ದಾನೆಂದು ಅವ ನನ್ನು ಕೇಳಲು ಅವನು ಅವರಿಗೆ--ಆತನು ಕೆಸರನ್ನು ನನ್ನ ಕಣ್ಣುಗಳ ಮೇಲೆ ಇಡಲು ನಾನು ತೊಳೆದುಕೊಂಡ ವನಾಗಿ ನೋಡುತ್ತೇನೆ ಅಂದನು.
15 Então, os fariseus, por sua vez, lhe perguntaram como chegara a ver; ao que lhes respondeu: Aplicou lodo aos meus olhos, lavei-me e estou vendo.
16 ತರುವಾಯ ಫರಿಸಾಯರಲ್ಲಿ ಕೆಲವರು--ಈ ಮನುಷ್ಯನು ದೇವರಿಗೆ ಸಂಬಂಧಪಟ್ಟವನಲ್ಲ; ಯಾಕಂದರೆ ಈತನು ಸಬ್ಬತ್‌ ದಿನವನ್ನು ಕೈಕೊಳ್ಳುವವನಲ್ಲ ಅಂದರು. ಬೇರೆಯ ವರು--ಪಾಪಿಯಾದ ಒಬ್ಬ ಮನುಷ್ಯನು ಇಂಥ ಅದ್ಭುತ ಕಾರ್ಯಗಳನ್ನು ಹೇಗೆ ಮಾಡುತ್ತಾನೆ ಅಂದರು. ಹೀಗೆ ಅವರಲ್ಲಿ ಭೇದವುಂಟಾ
16 Por isso, alguns dos fariseus diziam: Esse homem não é de Deus, porque não guarda o sábado. Diziam outros: Como pode um homem pecador fazer tamanhos sinais? E houve dissensão entre eles.
17 ಅವರು ತಿರಿಗಿ ಕುರುಡನಿಗೆ--ನಿನ್ನ ಕಣ್ಣುಗಳನ್ನು ತೆರೆದಾತನ ವಿಷಯವಾಗಿ ನೀನು ಏನು ಹೇಳುತ್ತೀ ಅಂದಾಗ ಅವನು--ಆತನು ಒಬ್ಬ ಪ್ರವಾದಿ ಅಂದನು.
17 De novo, perguntaram ao cego: Que dizes tu a respeito dele, visto que te abriu os olhos? Que é profeta, respondeu ele.
18 ಆದರೆ ದೃಷ್ಟಿ ಹೊಂದಿದವನ ತಂದೆತಾಯಿ ಗಳನ್ನು ಕರೆಯುವವರೆಗೆ ಯೆಹೂದ್ಯರು ಅವನ ವಿಷಯವಾಗಿ ಅವನು ಕುರುಡನಾಗಿದ್ದು ದೃಷ್ಟಿ ಹೊಂದಿ ದನೆಂದು ನಂಬಲಿಲ್ಲ.
18 Não acreditaram os judeus que ele fora cego e que agora via, enquanto não lhe chamaram os pais
19 ಅವರು--ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವ ನಿಮ್ಮ ಮಗನು ಇವನೋ? ಹಾಗಾದರೆ ಈಗ ಅವನು ಹೇಗೆ ನೋಡುತ್ತಾನೆ ಎಂದು ಅವರನ್ನು ಕೇಳಿದರು.
19 e os interrogaram: É este o vosso filho, de quem dizeis que nasceu cego? Como, pois, vê agora?
20 ಅವನ ತಂದೆತಾಯಿಗಳು ಪ್ರತ್ಯುತ್ತರವಾಗಿ ಅವರಿಗೆ--ಅವನು ನಮ್ಮ ಮಗನೆಂದೂ ಅವನು ಕುರುಡನಾಗಿ ಹುಟ್ಟಿದ ನೆಂದೂ ನಾವು ಬಲ್ಲೆವು.
20 Então, os pais responderam: Sabemos que este é nosso filho e que nasceu cego;
21 ಆದರೆ ಅವನು ಈಗ ಯಾವದರ ಮೂಲಕ ನೋಡುತ್ತಾನೋ ನಮಗೆ ಗೊತ್ತಿಲ್ಲ; ಇಲ್ಲವೆ ಯಾರು ಅವನ ಕಣ್ಣುಗಳನ್ನು ತೆರೆದರೋ ಅದೂ ನಮಗೆ ಗೊತ್ತಿಲ್ಲ; ಅವನು ಪ್ರಾಯದವನಾಗಿದ್ದಾನೆ. ಅವನನ್ನೇ ಕೇಳಿರಿ; ಅವನೇ ತನ್ನ ವಿಷಯ ಮಾತನಾಡುವನು ಎಂದು ಹೇಳಿದರು.
21 mas não sabemos como vê agora; ou quem lhe abriu os olhos também não sabemos. Perguntai a ele, idade tem; falará de si mesmo.
22 ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಈ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು.
22 Isto disseram seus pais porque estavam com medo dos judeus; pois estes já haviam assentado que, se alguém confessasse ser Jesus o Cristo, fosse expulso da sinagoga.
23 ಆದದ ರಿಂದ ಅವನ ತಂದೆ ತಾಯಿಗಳು--ಅವನು ಪ್ರಾಯದ ವನಾಗಿದ್ದಾನಲ್ಲಾ; ಅವನನ್ನೇ ಕೇಳಿರಿ ಎಂದು ಹೇಳಿದರು.
23 Por isso, é que disseram os pais: Ele idade tem, interrogai-o.
24 ತರುವಾಯ ಅವರು ಆ ಕುರುಡನಾಗಿದ್ದ ಮನುಷ್ಯನನ್ನು ಕರೆದು ಅವನಿಗೆ--ದೇವರಿಗೆ ಸ್ತೋತ್ರ ಸಲ್ಲಿಸು; ಈ ಮನುಷ್ಯನು ಪಾಪಿಯೆಂದು ನಾವು ಬಲ್ಲೆವು ಅಂದರು.
24 Então, chamaram, pela segunda vez, o homem que fora cego e lhe disseram: Dá glória a Deus; nós sabemos que esse homem é pecador.
25 ಅವನು ಪ್ರತ್ಯುತ್ತರವಾಗಿ--ಆತನು ಪಾಪಿಯೋ ಅಲ್ಲವೋ ನನಗೆ ಗೊತ್ತಿಲ್ಲ; ಒಂದು ಮಾತ್ರ ಬಲ್ಲೆನು; ಅದೇನಂದರೆ ನಾನು ಕುರುಡನಾಗಿದ್ದೆನು; ಈಗ ನಾನು ನೋಡುತ್ತೇನೆ ಅಂದನು.
25 Ele retrucou: Se é pecador, não sei; uma coisa sei: eu era cego e agora vejo.
26 ಅವರು ತಿರಿಗಿ ಅವನಿಗೆ--ಆತನು ನಿನಗೆ ಏನು ಮಾಡಿದನು? ಆತನು ನಿನ್ನ ಕಣ್ಣುಗಳನ್ನು ಹೇಗೆ ತೆರೆದನು ಎಂದು ಹೇಳಿದ್ದಕ್ಕೆ
26 Perguntaram-lhe, pois: Que te fez ele? como te abriu os olhos?
27 ಅವನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ಆಗಲೇ ಹೇಳಿದ್ದೇನಲ್ಲಾ; ಆದರೆ ನೀವು ಕೇಳಲಿಲ್ಲ; ನೀವು ಅದನ್ನು ತಿರಿಗಿ ಯಾಕೆ ಕೇಳಬೇಕೆಂದಿದ್ದೀರಿ? ಆತನ ಶಿಷ್ಯರಾಗುವದಕ್ಕೆ ನಿಮಗೂ ಮನಸ್ಸಿದೆಯೋ ಅಂದನು.
27 Ele lhes respondeu: Já vo-lo disse, e não atendestes; por que quereis ouvir outra vez? Porventura, quereis vós também tornar-vos seus discípulos?
28 ಆಗ ಅವರು ಅವನನ್ನು ದೂಷಿಸಿ--ನೀನು ಅವನ ಶಿಷ್ಯನು; ಆದರೆ ನಾವು ಮೋಶೆಯ ಶಿಷ್ಯರು.
28 Então, o injuriaram e lhe disseram: Discípulo dele és tu; mas nós somos discípulos de Moisés.
29 ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು; ಆದರೆ ಇವನು ಎಲ್ಲಿಯವನೋ ನಮಗೆ ಗೊತ್ತಿಲ್ಲ ಅಂದರು.
29 Sabemos que Deus falou a Moisés; mas este nem sabemos donde é.
30 ಆಗ ಆ ಮನುಷ್ಯನು ಪ್ರತ್ಯುತ್ತರವಾಗಿ ಅವರಿಗೆ--ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯ ವನೆಂದು ನಿಮಗೆ ತಿಳಿಯದೆ ಇರುವದು ಆಶ್ಚರ್ಯವಾದ ವಿಷಯವಲ್ಲವೇ?
30 Respondeu-lhes o homem: Nisto é de estranhar que vós não saibais donde ele é, e, contudo, me abriu os olhos.
31 ದೇವರು ಪಾಪಿಗಳ ಪ್ರಾರ್ಥನೆ ಯನ್ನು ಕೇಳುವದಿಲ್ಲ; ಆದರೆ ಯಾವನಾದರೂ ದೇವ ರನ್ನು ಆರಾಧಿಸುವವನಾಗಿದ್ದು ಆತನ ಚಿತ್ತದಂತೆ ನಡೆದರೆ ಅವನ ಪ್ರಾರ್ಥನೆಯನ್ನು ಆತನು ಕೇಳು ತ್ತಾನೆಂದು ನಾವು ಬಲ್ಲೆವು.
31 Sabemos que Deus não atende a pecadores; mas, pelo contrário, se alguém teme a Deus e pratica a sua vontade, a este atende.
32 ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನ ಕಣ್ಣುಗಳನ್ನು ಯಾವನಾದರೂ ತೆರೆದಿ ದ್ದದ್ದನ್ನು ಲೋಕಾದಿಯಿಂದ ಕೇಳಿರಲಿಲ್ಲ.
32 Desde que há mundo, jamais se ouviu que alguém tenha aberto os olhos a um cego de nascença.
33 ಈ ಮನುಷ್ಯನು ದೇವರ ಕಡೆಯಿಂದ ಬಂದವನಲ್ಲ ದಿದ್ದರೆ ಏನೂ ಮಾಡಲಾರದೆ ಇರುತ್ತಿದ್ದನು ಅಂದನು.
33 Se este homem não fosse de Deus, nada poderia ter feito.
34 ಅದಕ್ಕೆ ಅವರು ಅವನಿಗೆ--ನೀನು ಕೇವಲ ಪಾಪ ದಲ್ಲಿಯೇ ಹುಟ್ಟಿದವನು; ನೀನು ನಮಗೆ ಬೋಧಿಸು ತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
34 Mas eles retrucaram: Tu és nascido todo em pecado e nos ensinas a nós? E o expulsaram.
35 ಅವರು ಅವನನ್ನು ಹೊರಗೆ ಹಾಕಿದ್ದನ್ನು ಯೇಸು ಕೇಳಿ ಅವನನ್ನು ಕಂಡು ಅವನಿಗೆ--ನೀನು ದೇವರ ಮಗನನ್ನು ನಂಬುತ್ತೀಯೋ ಅಂದನು.
35 Ouvindo Jesus que o tinham expulsado, encontrando-o, lhe perguntou: Crês tu no Filho do Homem?
36 ಅದಕ್ಕೆ ಅವನು ಪ್ರತ್ಯುತ್ತರವಾಗಿ--ಕರ್ತನೇ, ನಾನು ಆತನನ್ನು ನಂಬುವಂತೆ ಆತನು ಯಾರು ಅಂದನು.
36 Ele respondeu e disse: Quem é, Senhor, para que eu nele creia?
37 ಯೇಸು ಅವನಿಗೆ--ನೀನು ಆತನನ್ನು ನೋಡಿದ್ದೀ; ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು ಎಂದು ಹೇಳಿದನು.
37 E Jesus lhe disse: Já o tens visto, e é o que fala contigo.
38 ಆಗ ಅವನು--ಕರ್ತನೇ, ನಾನು ನಂಬುತ್ತೇನೆ ಎಂದು ಹೇಳಿ ಆತನನ್ನು ಆರಾಧಿಸಿದನು.
38 Então, afirmou ele: Creio, Senhor; e o adorou.
39 ಯೇಸು--ನೋಡದವರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನ್ಯಾಯತೀರ್ಪಿಗೋಸ್ಕರ ನಾನು ಈ ಲೋಕಕ್ಕೆ ಬಂದಿದ್ದೇನೆ ಅಂದನು.
39 Prosseguiu Jesus: Eu vim a este mundo para juízo, a fim de que os que não veem vejam, e os que veem se tornem cegos.
40 ಆತ ನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಈ ಮಾತು ಗಳನ್ನು ಕೇಳಿ--ನಾವು ಸಹ ಕುರುಡರೋ ಎಂದು ಆತನನ್ನು ಕೇಳಿದರು.
40 Alguns dentre os fariseus que estavam perto dele perguntaram-lhe: Acaso, também nós somos cegos?
41 ಅದಕ್ಕೆ ಯೇಸು ಅವರಿಗೆ--ನೀವು ಕುರುಡರಾಗಿದ್ದರೆ ನಿಮ್ಮಲ್ಲಿ ಪಾಪವು ಇರುತ್ತಿರ ಲಿಲ್ಲ. ಆದರೆ--ನಾವು ನೋಡುತ್ತೇವೆಂದು ನೀವು ಹೇಳುವದರಿಂದ ನಿಮ್ಮ ಪಾಪವು ಉಳಿದದೆ ಅಂದನು
41 Respondeu-lhes Jesus: Se fôsseis cegos, não teríeis pecado algum; mas, porque agora dizeis: Nós vemos, subsiste o vosso pecado.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar João 9, comparar traduções ou montar um estudo — tudo direto pelo WhatsApp.