Jó 12

Kannada Bible (GL_KANNADA) vs BKJ

Sair da comparação
1 ಅದಕ್ಕೆ ಯೋಬನು ಹೀಗೆ ಉತ್ತರಕೊಟ್ಟನು--
1 Então Jó respondeu, dizendo:
2 ನಿಸ್ಸಂದೇಹವಾಗಿ ನೀವೇ ಆ ಜನರು; ನಿಮ್ಮ ಸಂಗಡಲೇ ಜ್ಞಾನವು ಸಾಯುವದು.
2 Não há dúvida que vós sois o povo, e a sabedoria morrerá convosco.
3 ನಿಮ್ಮ ಹಾಗೆಯೇ ನನಗೂ ಸಹ ತಿಳುವಳಿಕೆ ಉಂಟು; ನಾನು ನಿಮಗಿಂತ ಕಡಿಮೆ ಇಲ್ಲ. ಹೌದು, ಇಂಥಾ ಮಾತುಗಳನ್ನು ತಿಳಿಯದಿರುವವನು ಯಾರು?
3 Mas eu tenho entendimento tanto quanto vós; não sou inferior a vós; sim, e quem não sabe tais coisas como estas?
4 ನಾನು ನೆರೆಯವನಿಗೆ ನಗೆಯಾದವನು; ದೇವರಿಗೆ ಕೂಗು ತ್ತೇನೆ. ಆತನು ಉತ್ತರ ಕೊಡುತ್ತಾನೆ; ನೀತಿವಂತ ಮನು ಷ್ಯನನ್ನು ಗೇಲಿಮಾಡಿ ನಗುವರು.
4 Eu sou como aquele que é zombado por seu vizinho, que invoca a Deus, e ele lhe responde; o homem justo e reto é motivo de riso e escárnio.
5 ತನ್ನ ಕಾಲುಗ ಳಿಂದ ಜಾರುವದಕ್ಕೆ ಸಿದ್ಧನಾಗಿರುವವನು, ನೆಮ್ಮದಿಯಾ ಗಿರುವವನ ಯೋಚನೆಯಲ್ಲಿ ತಿರಸ್ಕಾರದ ದೀವಟಿ ಗೆಯಾಗಿದ್ದಾನೆ.
5 Aquele que está pronto a escorregar com os seus pés é como uma lâmpada desprezada no pensamento daquele que está seguro.
6 ಕಳ್ಳರ ಗುಡಾರಗಳು ವೃದ್ಧಿಯಾ ಗುತ್ತವೆ; ದೇವರಿಗೆ ಕೋಪ ಎಬ್ಬಿಸುವವರಿಗೆ ಅಭಯ ಉಂಟು. ದೇವರು ಅವರ ಕೈಯಲ್ಲಿ ಸಮೃದ್ಧಿಯನ್ನು ಬರ ಮಾಡುತ್ತಾನೆ.
6 Os tabernáculos dos ladrões prosperam, e aqueles que provocam a Deus estão seguros; em cujas mãos Deus dá abundantemente.
7 ಆದರೂ ಪಶುಗಳನ್ನು ಕೇಳು. ಅವು ನಿನಗೆ ಬೋಧಿ ಸುವವು; ಆಕಾಶದ ಪಕ್ಷಿಗಳನ್ನು ಕೇಳು, ಅವು ನಿನಗೆ ತಿಳಿಸುವವು.
7 Mas pergunta agora aos animais, e eles te ensinarão; e as aves do céu te dirão;
8 ಅಥವಾ ಭೂಮಿಯ ಸಂಗಡ ಮಾತ ನಾಡು; ಅದು ನಿನಗೆ ಬೋಧಿಸುವದು; ಸಮುದ್ರದ ವಿಾನುಗಳು ನಿನಗೆ ವಿವರಿಸುವವು.
8 ou fala à terra, e ela te ensinará; e os peixes do mar te declararão.
9 ಕರ್ತನ ಕೈ ಇದನ್ನು ಮಾಡಿತೆಂದು ಇವೆಲ್ಲವುಗಳಲ್ಲಿ ತಿಳಿಯದಿರು ವದು ಯಾವದು?
9 Quem não sabe de todas estas coisas, que a mão do SENHOR forjou isto?
10 ಆತನ ಕೈಯಲ್ಲಿ ಎಲ್ಲಾ ಜೀವಿ ಗಳ ಪ್ರಾಣವು ಎಲ್ಲಾ ಮನುಷ್ಯರ ಶ್ವಾಸವೂ ಇವೆ.
10 Em cuja mão está a alma de toda coisa vivente, e o fôlego de toda a humanidade.
11 ಕಿವಿಯು ನುಡಿಗಳನ್ನು ಶೋಧಿಸುವದಿಲ್ಲವೇ? ಬಾಯಿಯು ಆಹಾರವನ್ನು ರುಚಿನೋಡುವದಿಲ್ಲವೇ?
11 Acaso o ouvido não testa as palavras? E a boca não prova o seu alimento?
12 ಮುದುಕರಲ್ಲಿ ಜ್ಞಾನವೂ ದಿನಗಳುದ್ದಕ್ಕೂ ಗ್ರಹಿ ಕೆಯೂ ಇವೆ.
12 Com o ancião está a sabedoria, e no comprimento dos dias está o entendimento.
13 ಜ್ಞಾನವೂ ಪರಾಕ್ರಮವೂ ಆತನಲ್ಲಿವೆ; ಆಲೋ ಚನೆಯೂ ಗ್ರಹಿಕೆಯೂ ಆತನವೇ.
13 Com ele está a sabedoria e a força; ele tem conselho e entendimento.
14 ಇಗೋ, ಆತನು ಕೆಡವುತ್ತಾನೆ; ಅದು ತಿರುಗಿ ಕಟ್ಟಲ್ಪಡುವದಿಲ್ಲ. ಆತನು ಮನುಷ್ಯನಿಂದ ಮುಚ್ಚಿಬಿಡುತ್ತಾನೆ; ಅದು ತೆರೆ ಯಲ್ಪಡುವದಿಲ್ಲ.
14 Eis que ele derruba, e não pode ser construído novamente; ele prende um homem e não há como soltá-lo.
15 ಇಗೋ, ಆತನು ಜಲಗಳನ್ನು ಬಿಗಿ ಹಿಡಿಯುತ್ತಾನೆ; ಅವು ಬತ್ತಿಹೋಗುತ್ತವೆ; ಆತನು ಅವುಗಳನ್ನು ಹೊರಗೆ ಕಳುಹಿಸಿದಾಗ ಅವು ಭೂಮಿ ಯನ್ನು ಬುಡಮೇಲು ಮಾಡುತ್ತವೆ.
15 Eis que ele retém as águas, e elas secam; ele também as solta, e elas transtornam a terra.
16 ಬಲವೂ ಸುಜ್ಞಾ ನವೂ ಆತನಲ್ಲಿವೆ; ಮೋಸಹೋಗುವವನೂ ಮೋಸ ಗೊಳಿಸುವವನೂ ಆತನವರೇ.
16 Com ele está a força e a sabedoria; o enganado e o enganador são dele.
17 ಆತನು ಸಲಹೆಗಾರ ರನ್ನು ಕೇಡಿಗೆ ನಡಿಸುತ್ತಾನೆ; ನ್ಯಾಯಾಧಿಪತಿಗಳನ್ನು ಮೂರ್ಖರನ್ನಾಗಿ ಮಾಡುತ್ತಾನೆ.
17 Ele leva os conselheiros ao despojo, e faz dos juízes tolos.
18 ಆತನು ಅರಸರ ಬಂಧನಗಳನ್ನು ಬಿಡಿಸಿ ಅವರ ನಡುಗಳಿಗೆ ನಡುಕಟ್ಟನ್ನು ಕಟ್ಟುತ್ತಾನೆ.
18 Ele solta o laço dos reis, e cinge seus lombos com um cinto.
19 ಆತನು ಪ್ರಧಾನರನ್ನು ಕೇಡಿಗೆ ನಡಿಸು ತ್ತಾನೆ; ಬಲಿಷ್ಠರನ್ನು ಕೆಡವಿಬಿಡುತ್ತಾನೆ.
19 Ele leva os príncipes ao despojo, e derruba o poderoso.
20 ನಂಬಿಕೆಯು ಳ್ಳವರ ಮಾತನ್ನು ತೆಗೆದುಹಾಕುತ್ತಾನೆ; ವೃದ್ಧರ ವಿವೇಕ ವನ್ನು ಇಲ್ಲದಾಗಿ ಮಾಡುತ್ತಾನೆ.
20 Ele remove o discurso do fiel, e leva embora o entendimento do idoso.
21 ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯ್ಯುತ್ತಾನೆ; ಬಲಿಷ್ಠರ ಬಲವನ್ನು ಕುಂದಿಸುತ್ತಾನೆ.
21 Ele derrama desprezo sobre os príncipes, e enfraquece a força do poderoso.
22 ಕತ್ತಲೆಯೊಳಗಿನಿಂದ ಅಗಾಧವಾದ ವಿಷಯಗಳನ್ನು ಪ್ರಕಟಪಡಿಸುತ್ತಾನೆ; ಮರಣದ ನೆರ ಳನ್ನು ಬೆಳಕಿಗೆ ತರುತ್ತಾನೆ.
22 Ele descobre coisas profundas das trevas, e traz à luz a sombra da morte.
23 ಆತನು ಜನಾಂಗಗಳನ್ನು ಹೆಚ್ಚಿಸಿ ಅವುಗಳನ್ನು ನಾಶಮಾಡುತ್ತಾನೆ. ಜನಾಂಗ ಗಳನ್ನು ವಿಸ್ತಾರಮಾಡಿ ತಿರುಗಿ ಅವುಗಳನ್ನು ಹತ್ತಿಕ್ಕುತ್ತಾನೆ.
23 Ele aumenta as nações e as destrói; ele amplia as nações e as endireita novamente.
24 ಆತನು ಭೂಮಿಯ ಮುಖ್ಯಸ್ಥರ ವಿವೇಕವನ್ನು ತೆಗೆದು ಬಿಡುತ್ತಾನೆ. ಮಾರ್ಗವಿಲ್ಲದ ಕಾಡಿನಲ್ಲಿ ಅವರನ್ನು ಅಲೆಯ ಮಾಡುತ್ತಾನೆ.
24 Ele toma o coração do chefe do povo da terra, e os faz vaguear em um deserto onde não há caminho.
25 ಅವರು ಬೆಳಕು ಇಲ್ಲದೆ ಕತ್ತಲೆಯಲ್ಲಿ ತಡವಾಡುತ್ತಾರೆ; ಆತನು ಅವರನ್ನು ಅಮಲೇರಿದವನ ಹಾಗೆ ಓಲಾಡುವಂತೆ ಮಾಡುತ್ತಾನೆ.
25 Eles tateiam no escuro sem luz, e ele os faz cambalear como um homem ébrio.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Jó 12, comparar traduções ou montar um estudo — tudo direto pelo WhatsApp.