Jó 29
Kannada Bible (GL_KANNADA) vs ARA
ARA Almeida Revista e Atualizada 1993
1 ಯೋಬನು ಮತ್ತೆ ತನ್ನ ಪ್ರಸ್ತಾಪವನ್ನೆತ್ತಿ ಹೇಳಿದ್ದೇನಂದರೆ--
1 Prosseguiu Jó no seu discurso e disse:
2 ಓ, ಮುಂಚಿನ ತಿಂಗ ಳುಗಳ ಹಾಗೆಯೂ ದೇವರು ನನ್ನನ್ನು ಕಾಪಾಡಿದ ದಿವಸಗಳ ಹಾಗೆಯೂ ನನಗೆ ಆದರೆ ಒಳ್ಳೇದು.
2 Ah! Quem me dera ser como fui nos meses passados, como nos dias em que Deus me guardava!
3 ಆಗ ಆತನ ದೀಪವು ನನ್ನ ತಲೆಯ ಮೇಲೆ ಹೊಳೆ ಯಿತು; ಆತನ ಬೆಳಕಿನಿಂದ ಕತ್ತಲಲ್ಲಿ ನಡೆದೆನು.
3 Quando fazia resplandecer a sua lâmpada sobre a minha cabeça, quando eu, guiado por sua luz, caminhava pelas trevas;
4 ನಾನು ನನ್ನ ಯೌವನದ ದಿವಸಗಳಲ್ಲಿದ್ದಾಗ ದೇವರ ಮರ್ಮವು ನನ್ನ ಗುಡಾರದ ಮೇಲೆ ಇತ್ತು.
4 como fui nos dias do meu vigor, quando a amizade de Deus estava sobre a minha tenda;
5 ಸರ್ವ ಶಕ್ತನು ಇನ್ನೂ ನನ್ನ ಸಂಗಡ ಇದ್ದನು; ನನ್ನ ಸುತ್ತಲೂ ನನ್ನ ಮಕ್ಕಳು ಇದ್ದರು.
5 quando o Todo-Poderoso ainda estava comigo, e os meus filhos, em redor de mim;
6 ನನ್ನ ಹೆಜ್ಜೆಗಳನ್ನು ಬೆಣ್ಣೆ ಯಿಂದ ತೊಳೆಯುತ್ತಾ ಇದ್ದೆನು; ಬಂಡೆಯು ನನ್ನ ಬಳಿಯಲ್ಲಿ ಎಣ್ಣೆಯ ಪ್ರವಾಹಗಳನ್ನು ಹೊಯ್ಯುತ್ತಿತ್ತು.
6 quando eu lavava os pés em leite, e da rocha me corriam ribeiros de azeite.
7 ಪಟ್ಟಣವನ್ನು ಹಾದು ಬಾಗಲಿಗೆ ಹೊರಟುಹೋಗಿ ನನ್ನ ಪೀಠವನ್ನು ಬೀದಿಯಲ್ಲಿ ಸಿದ್ಧಪಡಿಸುತ್ತಾ ಇದ್ದೆನು.
7 Quando eu saía para a porta da cidade, e na praça me era dado sentar-me,
8 ಯುವಕರು ನನ್ನನ್ನು ನೋಡಿ ಅಡಗಿಕೊಳ್ಳುತ್ತಿದ್ದರು; ವೃದ್ಧರು ಎದ್ದು ನಿಲ್ಲುತ್ತಿದ್ದರು.
8 os moços me viam e se retiravam; os idosos se levantavam e se punham em pé;
9 ಪ್ರಧಾನರು ನುಡಿಗಳನ್ನು ಬಿಗಿಹಿಡಿದು ತಮ್ಮ ಬಾಯಿಯ ಮೇಲೆ ಕೈ ಇಟ್ಟು ಕೊಂಡರು.
9 os príncipes reprimiam as suas palavras e punham a mão sobre a boca;
10 ಘನವುಳ್ಳವರು ಮೌನವಾದರು; ಅವರ ನಾಲಿಗೆ ಅವರ ಅಂಗಳಕ್ಕೆ ಅಂಟಿತು.
10 a voz dos nobres emudecia, e a sua língua se apegava ao paladar.
11 ಕೇಳುವ ಕಿವಿ ನನ್ನನ್ನು ಧನ್ಯನೆಂದು ಹರಸಿತು; ನೋಡುವ ಕಣ್ಣು ನನಗೆ ಸಾಕ್ಷಿ ಕೊಡುತ್ತಿತ್ತು.
11 Ouvindo-me algum ouvido, esse me chamava feliz; vendo-me algum olho, dava testemunho de mim;
12 ಮೊರೆ ಯಿಡುವ ದೀನನನ್ನೂ ಸಹಾಯವಿಲ್ಲದ ದಿಕ್ಕಿಲ್ಲದ ವರನ್ನೂ ನಾನು ತಪ್ಪಿಸಿದೆನು.
12 porque eu livrava os pobres que clamavam e também o órfão que não tinha quem o socorresse.
13 ನಾಶವಾಗುವದಕ್ಕೆ ಸಿದ್ಧವಾದವನ ಆಶೀರ್ವಾದವು ನನ್ನ ಮೇಲೆ ಬರು ತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ನಾನು ಮಾಡಿದೆನು.
13 A bênção do que estava a perecer vinha sobre mim, e eu fazia rejubilar-se o coração da viúva.
14 ನೀತಿಯನ್ನು ಧರಿಸಿಕೊಂಡೆನು; ಅದೇ ನನಗೆ ವಸ್ತ್ರದಹಾಗಿತ್ತು; ನಿಲು ವಂಗಿಯ ಹಾಗೆಯೂ ಕಿರೀಟದ ಹಾಗೆಯೂ ನನ್ನ ನ್ಯಾಯವು ನನಗೆ ಇತ್ತು.
14 Eu me cobria de justiça, e esta me servia de veste; como manto e turbante era a minha equidade.
15 ನಾನು ಕುರುಡನಿಗೆ ಕಣ್ಣೂ ಕುಂಟನಿಗೆ ಕಾಲೂ ಆಗಿದ್ದೆನು.
15 Eu me fazia de olhos para o cego e de pés para o coxo.
16 ದರಿದ್ರರಿಗೆ ನಾನು ತಂದೆಯಾಗಿದ್ದೆನು; ನಾನರಿಯದವನ ವ್ಯಾಜ್ಯವನ್ನು ಪರಿಶೋಧಿಸಿದೆನು.
16 Dos necessitados era pai e até as causas dos desconhecidos eu examinava.
17 ದುಷ್ಟರ ದವಡೆಗಳನ್ನು ಮುರಿ ದೆನು; ಅವನ ಹಲ್ಲುಗಳೊಳಗಿಂದ ಬೇಟೆಯನ್ನು ಕಿತ್ತು ತೆಗೆದೆನು.
17 Eu quebrava os queixos do iníquo e dos seus dentes lhe fazia eu cair a vítima.
18 ನನ್ನ ಗೂಡಿನಲ್ಲಿ ನಾನು ಸಾಯುವೆನು, ಮರಳಿ ನಂತೆ ನನ್ನ ದಿವಸಗಳನ್ನು ಹೆಚ್ಚಿಸುವೆನು ಅಂದೆನು.
18 Eu dizia: no meu ninho expirarei, multiplicarei os meus dias como a areia.
19 ನನ್ನ ಬೇರು ನೀರಿನ ಬಳಿಯಲ್ಲಿ ಹಬ್ಬಿತ್ತು--ನನ್ನ ಕೊಂಬೆಯ ಮೇಲೆ ಮಂಜು ಉಳುಕೊಳ್ಳುತ್ತಾ ಇತ್ತು.
19 A minha raiz se estenderá até às águas, e o orvalho ficará durante a noite sobre os meus ramos;
20 ನನ್ನ ಘನವು ನನ್ನಲ್ಲಿ ಹೊಸದಾಗಿತ್ತು; ನನ್ನ ಬಿಲ್ಲು ನನ್ನ ಕೈಯಲ್ಲಿ ಹೊಸದಾಗಿತ್ತು.
20 a minha honra se renovará em mim, e o meu arco se reforçará na minha mão.
21 ನನಗೆ ಕಿವಿಗೊಟ್ಟು ಎದುರುನೋಡಿ, ನನ್ನ ಆಲೋಚನೆಗೆ ಮೌನವಾಗಿ ದ್ದರು.
21 Os que me ouviam esperavam o meu conselho e guardavam silêncio para ouvi-lo.
22 ನನ್ನ ಮಾತಿನ ಮೇಲೆ ಅವರು ಬೇರೆ ಮಾತ ನಾಡಲಿಲ್ಲ; ನನ್ನ ನುಡಿ ಅವರ ಮೇಲೆ ಸುರಿಯಿತು.
22 Havendo eu falado, não replicavam; as minhas palavras caíam sobre eles como orvalho.
23 ಮಳೆಯಂತೆ ನನ್ನನ್ನು ಎದುರು ನೋಡುತ್ತಿದ್ದರು; ಹಿಂಗಾರು ಮಳೆಗೆ ಎಂಬಂತೆ ಬಾಯಿ ತೆಗೆದರು.
23 Esperavam-me como à chuva, abriam a boca como à chuva de primavera.
24 ನಂಬಿಕೆ ಇಲ್ಲದವರ ಕಡೆಗೆ ನಗೆ ತೋರಿಸಿದೆನು; ನನ್ನ ಮುಖದ ಕಳೆಯನ್ನು ಅವರು ಕುಂದಿಸಲಿಲ್ಲ.
24 Sorria-me para eles quando não tinham confiança; e a luz do meu rosto não desprezavam.
25 ಅವರ ಮಾರ್ಗವನ್ನು ಆದುಕೊಂಡು ಪ್ರಧಾನನಾಗಿ ಕೂತು ಗೋಳಾಡುವವರನ್ನು ಸಂತೈಸುವವನಾಗಿಯೇ ಅರಸನಂತೆ ಸೈನ್ಯದಲ್ಲಿ ಆಸೀನನಾಗಿದ್ದೆನು.
25 Eu lhes escolhia o caminho, assentava-me como chefe e habitava como rei entre as suas tropas, como quem consola os que pranteiam.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Jó 29, comparar traduções ou montar um estudo — tudo direto pelo WhatsApp.