Jó 9
Kannada Bible (GL_KANNADA) vs ACF
ACF Almeida Corrigida Fiel
1 ಅದಕ್ಕೆ ಯೋಬನು ಉತ್ತರಿಸಿ ಇಂತೆಂದನು
1 Então Jó respondeu, dizendo:
2 ಸತ್ಯವು ಹೀಗೆ ಇರುವದೆಂದು ಬಲ್ಲೆನು. ಆದರೆ ಮನುಷ್ಯನು ದೇವರ ಮುಂದೆ ನೀತಿವಂತ ನಾಗುವದು ಹೇಗೆ?
2 Na verdade sei que assim é; porque, como se justificaria o homem para com Deus?
3 ಆತನ ಸಂಗಡ ವ್ಯಾಜ್ಯವಾಡಲು ಅವನು ಇಚ್ಛಿಸುವದಾದರೆ, ಆತನಿಗೆ ಸಾವಿರದಲ್ಲಿ ಒಂದಕ್ಕೂ ಅವನು ಉತ್ತರಕೊಡಲಾರನು.
3 Se quiser contender com ele, nem a uma de mil coisas lhe poderá responder.
4 ಆತನು ಹೃದಯದಲ್ಲಿ ಜ್ಞಾನಿಯೂ ಬಲದಲ್ಲಿ ಶಕ್ತನೂ ಆಗಿದ್ದಾನೆ; ಆತನಿಗೆ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?
4 Ele é sábio de coração, e forte em poder; quem se endureceu contra ele, e teve paz?
5 ಪರ್ವತಗಳನ್ನು ಅವು ಗಳಿಗೆ ತಿಳಿಯದ ಹಾಗೆ ನೂಕುತ್ತಾನೆ; ತನ್ನ ಸಿಟ್ಟಿನಲ್ಲಿ ಅವುಗಳನ್ನು ತಿರುಗಿಸುತ್ತಾನೆ.
5 Ele é o que remove os montes, sem que o saibam, e o que os transtorna no seu furor.
6 ಭೂಮಿಯನ್ನು ಅದರ ಸ್ಥಳದೊಳಗಿಂದ ಕದಲಿಸುತ್ತಾನೆ; ಅದರ ಸ್ತಂಭಗಳು ನಡುಗುತ್ತವೆ.
6 O que sacode a terra do seu lugar, e as suas colunas estremecem.
7 ಉದಯಿಸದ ಹಾಗೆ ಸೂರ್ಯನಿಗೆ ಅಪ್ಪಣೆಕೊಡುತ್ತಾನೆ; ನಕ್ಷತ್ರಗಳಿಗೆ ಮುದ್ರೆಹಾಕುತ್ತಾನೆ;
7 O que fala ao sol, e ele não nasce, e sela as estrelas.
8 ಆತನೊಬ್ಬನೇ ಆಕಾಶಗಳನ್ನು ಹರಡಿಸುತ್ತಾನೆ; ಸಮುದ್ರದ ತೆರೆಗಳ ಮೇಲೆ ನಡೆಯುತ್ತಾನೆ.
8 O que sozinho estende os céus, e anda sobre os altos do mar.
9 ಸಪ್ತ ತಾರೆಗಳನ್ನೂ ಮೃಗಶಿರವನ್ನೂ ವೃಷಭ ರಾಶಿಯನ್ನೂ ದಕ್ಷಿಣದ ಕೋಣೆಗಳನ್ನೂ ಮಾಡಿದಾತನು ಆತನೇ.
9 O que fez a Ursa, o Órion, e o Sete-estrelo, e as recâmaras do sul.
10 ಆತನು ಕಂಡುಹಿಡಿಯಲಾರದಂಥ ಮಹತ್ಕಾರ್ಯ ಗಳನ್ನೂ ಲೆಕ್ಕವಿಲ್ಲದಷ್ಟು ಅದ್ಭುತಗಳನ್ನೂ ಮಾಡುತ್ತಾನೆ.
10 O que faz coisas grandes e inescrutáveis; e maravilhas sem número.
11 ಇಗೋ, ಆತನು ನನ್ನ ಮುಂದೆ ಹಾದುಹೋಗು ತ್ತಾನೆ. ನನಗೆ ಆತನು ಕಾಣುವದಿಲ್ಲ. ಆತನು ದಾಟಿ ಹೋಗುತ್ತಾನೆ, ಆದರೆ ನಾನು ಆತನನ್ನು ಗ್ರಹಿಸಿ ಕೊಳ್ಳುವದಿಲ್ಲ.
11 Eis que ele passa por diante de mim, e não o vejo; e torna a passar perante mim, e não o sinto.
12 ಇಗೋ, ಆತನು ತೆಗೆದುಕೊಂಡು ಹೋಗುತ್ತಾನೆ. ಆತನಿಗೆ ಅಡ್ಡಿಮಾಡುವವರು ಯಾರು? ಆತನನ್ನು--ನೀನು ಏನು ಮಾಡುತ್ತೀ ಎಂದು ಕೇಳುವ ವರಾರು?
12 Eis que arrebata a presa; quem lha fará restituir? Quem lhe dirá: Que é o que fazes?
13 ದೇವರು ತನ್ನ ಕೋಪವನ್ನು ಹಿಂತೆಗೆಯ ದಿದ್ದರೆ ಸೊಕ್ಕಿನ ಸಹಾಯಕರು ಆತನ ಕೆಳಗೆ ಬೊಗ್ಗಿ ಕೊಳ್ಳುತ್ತಾರೆ.
13 Deus não revogará a sua ira; debaixo dele se encurvam os auxiliadores soberbos.
14 ಆತನಿಗೆ ಉತ್ತರ ಕೊಡುವದಕ್ಕೂ ಆತನೊಂದಿಗೆ ತರ್ಕಿಸುವದಕ್ಕೆ ನನ್ನ ಮಾತುಗಳನ್ನು ಆದುಕೊಳ್ಳು ವದಕ್ಕೂ ನಾನು ಎಷ್ಟು ಮಾತ್ರದವನು;
14 Quanto menos lhe responderia eu, ou escolheria diante dele as minhas palavras!
15 ನಾನು ನೀತಿವಂತನಾಗಿದ್ದರೂ ಉತ್ತರಕೊಡೆನು; ಆದರೆ ನನ್ನ ನ್ಯಾಯಾಧಿಪತಿಗೆ ಮೊರೆಯಿಡುವೆನು.
15 Porque, ainda que eu fosse justo, não lhe responderia; antes ao meu Juiz pediria misericórdia.
16 ನಾನು ಕರೆ ಯಲು ಆತನು ನನಗೆ ಉತ್ತರಕೊಟ್ಟರೂ ಆತನು ನನ್ನ ಶಬ್ಧಕ್ಕೆ ಕಿವಿಗೊಡುತ್ತಾನೆಂದು ನಂಬಲಾರೆನು.
16 Ainda que chamasse, e ele me respondesse, nem por isso creria que desse ouvidos à minha voz.
17 ಆತನು ಬಿರುಗಾಳಿಯಿಂದ ನನ್ನನ್ನು ಚೂರು ಮಾಡು ತ್ತಾನೆ. ನನ್ನ ಗಾಯಗಳನ್ನು ಕಾರಣವಿಲ್ಲದೆ ಹೆಚ್ಚಿಸು ತ್ತಾನೆ.
17 Porque me quebranta com uma tempestade, e multiplica as minhas chagas sem causa.
18 ನನ್ನ ಉಸಿರು ತಕ್ಕೊಳ್ಳದಂತೆ ಮಾಡಿ ಕಹಿ ಯಾದವುಗಳಿಂದ ನನ್ನನ್ನು ತುಂಬಿಸುತ್ತಾನೆ.
18 Não me permite respirar, antes me farta de amarguras.
19 ಶಕ್ತಿಯ ವಿಷಯದಲ್ಲಿ ಮಾತನಾಡಲೋ? ಇಗೋ, ಆತನು ಬಲವುಳ್ಳವನಾಗಿದ್ದಾನೆ. ನ್ಯಾಯದ ವಿಷಯವೋ ವಾದಿ ಸುವದಕ್ಕೆ ನನಗೆ ಕಾಲವನ್ನು ನಿಯಮಿಸುವವನು ಯಾರು?
19 Quanto às forças, eis que ele é o forte; e, quanto ao juízo, quem me citará com ele?
20 ನನ್ನನ್ನು ನಾನು ನೀತಿವಂತನನ್ನಾಗಿ ಮಾಡಿ ಕೊಂಡರೆ ನನ್ನ ಸ್ವಂತ ಬಾಯಿ ನನ್ನನ್ನು ಖಂಡಿಸುತ್ತದೆ. ನಾನು ಸಂಪೂರ್ಣನಾಗಿದ್ದೇನೆಂದು ಹೇಳಿದರೆ ನಾನು ವಕ್ರನಾಗಿದ್ದೇನೆಂದು ಅದು ಸಿದ್ಧಾಂತಮಾಡುವದು.
20 Se eu me justificar, a minha boca me condenará; se for perfeito, então ela me declarará perverso.
21 ನಾನು ಸಂಪೂರ್ಣವಾಗಿದ್ದರೂ ನನ್ನ ಪ್ರಾಣವನ್ನು ನಾನೇ ಅರಿಯದಿರುವೆನು; ನನ್ನ ಜೀವವನ್ನು ತಿರಸ್ಕಾರ ಮಾಡುವೆನು.
21 Se for perfeito, não estimo a minha alma; desprezo a minha vida.
22 ಇದೊಂದು ವಿಷಯ ಆದದರಿಂದ ನಾನು ಅದನ್ನು ಹೇಳಿದ್ದೇನೆ. ಪರಿಪೂರ್ಣರನ್ನೂ ಕೆಟ್ಟ ವರನ್ನೂ ಆತನು ನಾಶಮಾಡುತ್ತಾನೆ.
22 A coisa é esta; por isso eu digo que ele consome ao perfeito e ao ímpio.
23 ಕೊರಡೆಯು ಫಕ್ಕನೆ ಕೊಂದರೆ, ನಿರಪರಾಧಿಗಳ ಪರೀಕ್ಷೆಗೆ ಅವನು ಗೇಲಿ ಮಾಡುತ್ತಾನೆ.
23 Quando o açoite mata de repente, então ele zomba da prova dos inocentes.
24 ಲೋಕವು ಕೆಟ್ಟವನ ಕೈಯಲ್ಲಿ ಕೊಡಲ್ಪಟ್ಟಿದೆ. ಅದರ ನ್ಯಾಯಾಧಿಪತಿಗಳ ಮುಖಗ ಳನ್ನು ಆತನು ಮುಚ್ಚುತ್ತಾನೆ. ಇಲ್ಲವಾದರೆ ಆತನು ಎಲ್ಲಿರುತ್ತಿದ್ದನೋ? ಯಾರಾಗಿರುತ್ತಿದ್ದನೋ?
24 A terra é entregue nas mãos do ímpio; ele cobre o rosto dos juízes; se não é ele, quem é, logo?
25 ಆದರೆ ನನ್ನ ದಿವಸಗಳು ಅಂಚೆಯವನಿಗಿಂತಲೂ ತ್ವರೆಯಾಗಿ. ಮೇಲನ್ನು ನೋಡದೆ ಅವು ಓಡಿಹೋಗು ತ್ತವೆ.
25 E os meus dias são mais velozes do que um correio; fugiram, e não viram o bem.
26 ಹದ್ದು ಆಹಾರದ ಮೇಲೆ ಎರಗುವ ಪ್ರಕಾರವೂ ತೀವ್ರವಾದ ಹಡಗುಗಳ ಹಾಗೆಯೇ ಅವು ದಾಟಿ ಹೋಗುತ್ತವೆ.
26 Passam como navios veleiros; como águia que se lança à comida.
27 ನನ್ನ ದೂರುಗಳನ್ನು ಮರೆತು, ನನ್ನ ಭಾರವನ್ನು ಬಿಟ್ಟು, ಆದರಣೆಹೊಂದುವೆನು ಎಂದು ಹೇಳಿಕೊಂಡರೆ
27 Se eu disser: Eu me esquecerei da minha queixa, e mudarei o meu aspecto e tomarei alento,
28 ನನ್ನ ವ್ಯಥೆಗಳಿಗೆಲ್ಲಾ ದಿಗಿಲು ಪಡು ತ್ತೇನೆ; ನೀನು ನನ್ನನ್ನು ನಿರಪರಾಧಿ ಎಂದು ಎಣಿಸು ವದಿಲ್ಲವೆಂದು ತಿಳಿದಿದ್ದೇನೆ.
28 Receio todas as minhas dores, porque bem sei que não me terás por inocente.
29 ನಾನು ಕೆಟ್ಟವನಾಗಿದ್ದರೆ ಯಾಕೆ ಈ ವ್ಯರ್ಥವಾದ ಪ್ರಯಾಸ?
29 E, sendo eu ímpio, por que trabalharei em vão?
30 ನಾನು ಹಿಮದ ನೀರಿನಲ್ಲಿ ತೊಳಕೊಂಡು ನನ್ನ ಕೈಗಳನ್ನು ಶುಚಿ ಮಾಡೇ ಮಾಡಿದಾಗ್ಯೂ
30 Ainda que me lave com água de neve, e purifique as minhas mãos com sabão,
31 ನನ್ನನ್ನು ಕುಣಿಯಲ್ಲಿ ಮುಣುಗಿಸಿ ಬಿಡುವಿ; ನನ್ನ ಸ್ವಂತ ವಸ್ತ್ರಗಳು ನನ್ನನ್ನು ಹೇಸಿಕೊಳ್ಳು ವವು.
31 Ainda me submergirás no fosso, e as minhas próprias vestes me abominarão.
32 ನಾನು ಆತನಿಗೆ ಉತ್ತರ ಕೊಡುವ ಹಾಗೆಯೂ ನಾವು ಕೂಡ ನ್ಯಾಯದಲ್ಲಿ ಸೇರುವ ಹಾಗೆಯೂ ಆತನು ನನ್ನಂಥ ಮನುಷ್ಯನಲ್ಲ.
32 Porque ele não é homem, como eu, a quem eu responda, vindo juntamente a juízo.
33 ನಮ್ಮಿಬ್ಬರ ಮೇಲೆ ಕೈ ಇಡತಕ್ಕ ಮಧ್ಯಸ್ಥಗಾರನು ನಮ್ಮ ಮಧ್ಯದಲ್ಲಿಲ್ಲ.
33 Não há entre nós árbitro que ponha a mão sobre nós ambos.
34 ಆತನು ತನ್ನ ಕೋಲನ್ನು ನನ್ನ ಮೇಲಿನಿಂದ ತೊಲ ಗಿಸಲಿ, ಆತನ ಭೀತಿ ನನ್ನನ್ನು ಹೆದರಿಸದಿರಲಿ.
34 Tire ele a sua vara de cima de mim, e não me amedronte o seu terror.
35 ಆಗ ಆತನಿಗೆ ಭಯಪಡದೆ ಮಾತನಾಡುವೆನು; ಆದರೆ ಭಯಕ್ಕೆ ನನ್ನಲ್ಲೇನೂ ಆಸ್ಪದವಿಲ್ಲ.
35 Então falarei, e não o temerei; porque não sou assim em mim mesmo.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Jó 9, comparar traduções ou montar um estudo — tudo direto pelo WhatsApp.