Jeremias 23

Kannada Bible (GL_KANNADA) vs NVI

Sair da comparação
NVI Nova Versão Internacional
1 ನನ್ನ ಹುಲ್ಲುಗಾವಲಿನ ಕುರಿಗಳನ್ನು ಹಾಳು ಮಾಡಿ ಚದರಿಸುವ ಕುರುಬರಿಗೆ ಅಯ್ಯೋ, ಎಂದು ಕರ್ತನು ಅನ್ನುತ್ತಾನೆ.
1 "Ai dos pastores que destróem e dispersam as ovelhas do meu pasto! ", diz o Senhor.
2 ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ನನ್ನ ಜನರನ್ನು ಮೇಯಿಸುವ ಕುರುಬರಿಗೆ ವಿರೋಧ ವಾಗಿ ಹೀಗೆ ಹೇಳುತ್ತಾನೆ--ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟು ವಿಚಾರಿಸದೆ ಇದ್ದೀರಿ; ಇಗೋ, ನಾನು ನಿಮ್ಮ ಕ್ರಿಯೆಗಳ ಕೆಟ್ಟತನವನ್ನು ನಿಮ್ಮಲ್ಲಿ ವಿಚಾರಿಸುತ್ತೇನೆಂದು ಕರ್ತನು ಅನ್ನುತ್ತಾನೆ.
2 Portanto, assim diz o Senhor, Deus de Israel, aos pastores que tomam conta do meu povo: "Foram vocês que dispersaram e expulsaram o meu rebanho, e não cuidaram dele. Mas eu cuidarei de vocês pelos seus maus procedimentos", declara o Senhor.
3 ನಾನು ನನ್ನ ಮಂದೆಯ ಶೇಷವನ್ನು, ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು; ಅವರು ಫಲಕಾರಿಯಾಗಿ ಹೆಚ್ಚುವರು.
3 "Eu mesmo reunirei os remanescentes do meu rebanho de todas as terras para onde os expulsei e os trarei de volta à sua pastagem, a fim de que cresçam e se multipliquem.
4 ಅವರನ್ನು ಮೇಯಿಸತಕ್ಕ ಕುರುಬರನ್ನು ಅವರ ಮೇಲೆ ಇಡುತ್ತೇನೆ; ಅವರು ಇನ್ನು ಮೇಲೆ ಭಯಪಡುವದೇ ಇಲ್ಲ, ಅಂಜುವದಿಲ್ಲ, ಕೊರತೆಪಡುವದಿಲ್ಲ ಎಂದು ಕರ್ತನು ಅನ್ನುತ್ತಾನೆ.
4 Estabelecerei sobre eles pastores que cuidarão deles. E eles não mais terão medo ou pavor, e nenhum deles faltará", declara o Senhor.
5 ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು.
5 "Dias virão", declara o Senhor, "em que levantarei para Davi um Renovo justo, um rei que reinará com sabedoria e fará o que é justo e certo na terra.
6 ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
6 Em seus dias Judá será salva, Israel viverá em segurança, e este é o nome pelo qual será chamado: O Senhor é a Nossa Justiça.
7 ಆದದರಿಂದ ಇಗೋ, ದಿನಗಳು ಬರುತ್ತವೆಂದು ಕರ್ತನು ಅನ್ನುತ್ತಾನೆ; ಆಗ ಇಸ್ರಾಯೇಲಿನ ಮಕ್ಕಳನ್ನು ಐಗುಪ್ತದೇಶದೊಳಗಿಂದ ಬರಮಾಡಿದ ಕರ್ತನ ಜೀವದಾಣೆ ಎಂದು ಹೇಳುವದೇ ಇಲ್ಲ.
7 "Portanto, vêm dias", diz o Senhor, "em que não mais se dirá: ‘Juro pelo nome do Senhor, que trouxe os israelitas do Egito’,
8 ಆದರೆ ಕರ್ತನ ಜೀವದಾಣೆ, ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ತಾನು ಅವರನ್ನು ಹೊರಡಿಸಿ ಬಿಟ್ಟಿದ್ದ ಎಲ್ಲಾ ದೇಶ ಗಳಿಂದಲೂ ಬರಮಾಡಿದನು ಎಂದು ಹೇಳುವರು; ಅವರು ತಮ್ಮ ದೇಶದಲ್ಲಿ ವಾಸಮಾಡುವರು.
8 mas se dirá: ‘Juro pelo nome do Senhor, que trouxe os descendentes de Israel da terra do norte e de todas as nações para onde os expulsou’. E eles viverão na sua própria terra. "
9 ಪ್ರವಾದಿಗಳ ನಿಮಿತ್ತ ನನ್ನ ಹೃದಯವು ನನ್ನಲ್ಲಿ ಮುರಿದಿದೆ; ನನ್ನ ಎಲುಬುಗಳೆಲ್ಲಾ ಕದಲುತ್ತವೆ; ಕರ್ತನ ನಿಮಿತ್ತವೂ ಆತನ ಪರಿಶುದ್ಧ ವಾಕ್ಯಗಳ ನಿಮಿತ್ತವೂ ಮತ್ತನಾದ ಮನುಷ್ಯನ ಹಾಗೆಯೂ ದ್ರಾಕ್ಷಾರಸಕ್ಕೆ ಒಳಗಾದ ಪುರುಷನ ಹಾಗೆಯೂ ಇದ್ದೇನೆ.
9 Acerca dos profetas: Meu coração está partido dentro de mim; todos os meus ossos tremem. Sou como um bêbado, como um homem dominado pelo vinho, por causa do Senhor e de suas santas palavras.
10 ದೇಶವು ವ್ಯಭಿಚಾರಗಳಿಂದ ತುಂಬಿದೆ; ಶಾಪದಿಂದ ದುಃಖಿಸು ತ್ತದೆ; ಅರಣ್ಯದ ಮನೋಹರವಾದ ಸ್ಥಳಗಳು ಒಣಗಿ ಹೋಗಿವೆ; ಅವರ ಓಟವು ಕೆಟ್ಟದ್ದಾಗಿದೆ; ಅವರ ಶಕ್ತಿಯು ಸರಿ ಇಲ್ಲ.
10 A terra está cheia de adúlteros, e por causa disso a terra chora e as pastagens do deserto estão secas. Seu modo de vida é perveso e o seu poder é ilegítimo.
11 ಪ್ರವಾದಿಯೂ ಯಾಜಕನೂ ಕೂಡ ಭ್ರಷ್ಟರೇ; ಹೌದು, ನನ್ನ ಆಲಯದಲ್ಲಿ ಅವರ ಕೆಟ್ಟತನವನ್ನು ಕಂಡಿದ್ದೇನೆಂದು ಕರ್ತನು ಅನ್ನುತ್ತಾನೆ.
11 "Tanto o profeta como o sacerdote são profanos; até no meu templo encontro as iniqüidades deles", declara o Senhor.
12 ಆದದರಿಂದ ಅವರ ಮಾರ್ಗವು ಕತ್ತಲೆಯಲ್ಲಿರುವ ಜಾರುವ ಸ್ಥಳಗಳ ಹಾಗೆ ಅವರಿಗಿರುವದು; ಅವರು ತಳ್ಳಲ್ಪಟ್ಟು ಬೀಳುವರು; ಕೇಡನ್ನು, ಅವರ ವಿಚಾರಣೆಯ ವರುಷವನ್ನು ಅವರ ಮೇಲೆ ಬರಮಾಡುವೆನೆಂದು ಕರ್ತನು ಅನ್ನುತ್ತಾನೆ.
12 "Por isso, o caminho deles será como lugares escorregadios nas trevas, para as quais serão banidos, e nelas cairão. Trarei a desgraça sobre eles, no ano do seu castigo", declara o Senhor.
13 ಸಮಾರ್ಯದ ಪ್ರವಾದಿಗಳಲ್ಲಿ ಬುದ್ಧಿಹೀನತೆಯನ್ನು ನೋಡಿದ್ದೇನೆ; ಅವರು ಬಾಳನಿಂದ ಪ್ರವಾದನೆಯನ್ನು ಕೇಳಿ ನನ್ನ ಜನರಾದ ಇಸ್ರಾಯೇ ಲನ್ನು ತಪ್ಪುವಂತೆ ಮಾಡಿದ್ದಾರೆ.
13 "Entre os profetas de Samaria vi algo repugnante: Eles profetizaram por Baal e desviaram Israel, o meu povo.
14 ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಸುಳ್ಳಿನಲ್ಲಿ ನಡಕೊಂಡದ್ದ ಲ್ಲದೆ ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ; ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.
14 E entre os profetas de Jerusalém vi algo horrível: Eles cometem adultério e vivem uma mentira. Encorajam os que praticam o mal, para que nenhum deles se converta de sua impiedade. Para mim são todos como Sodoma; o povo de Jerusalém é como Gomorra. "
15 ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.
15 Por isso assim diz o Senhor dos Exércitos acerca dos profetas: "Eu os farei comer comida amarga e beber água envenenada, porque dos profetas de Jerusalém a impiedade se espalhou por toda esta terra".
16 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿ ಗೊಡಬೇಡಿರಿ; ಅವರು ನಿಮ್ಮನ್ನು ನಿಷ್ಫಲಮಾಡುತ್ತಾರೆ; ಕರ್ತನ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನ ವನ್ನು ಹೇಳುತ್ತಾರೆ.
16 Assim diz o Senhor dos Exércitos: "Não ouçam o que os profetas estão profetizando para vocês; eles os enchem de falsas esperanças. Falam de visões inventadas por eles mesmos, e que não vêm da boca do Senhor.
17 ಆದರೂ ನನ್ನನ್ನು ಅಸಹ್ಯಿಸುವವ ರಿಗೆ ಅವರು--ನಿಮಗೆ ಸಮಾಧಾನವಾಗುವದೆಂದು ಕರ್ತನು ಹೇಳುತ್ತಾನೆ ಎಂದು ಹೇಳುತ್ತಲೇ ಇದ್ದಾರೆ; ತಮ್ಮ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳುವವ ರೆಲ್ಲರಿಗೆ--ನಿಮ್ಮ ಮೇಲೆ ಕೇಡು ಬರುವದಿಲ್ಲ ಅನ್ನುತ್ತಾರೆ.
17 Vivem dizendo àqueles que desprezam a palavra do Senhor: ‘Vocês terão paz’. E a todos os que seguem a obstinação dos seus corações dizem: ‘Vocês não sofrerão desgraça alguma’.
18 ಆದರೆ ಯಾರು ಕರ್ತನ ಆಲೋಚನೆಯಲ್ಲಿ ನಿಂತು ಆತನ ವಾಕ್ಯವನ್ನು ತಿಳುಕೊಂಡು ಕೇಳಿದ್ದಾರೆ? ಯಾರು ಆತನ ವಾಕ್ಯದಲ್ಲಿ ಲಕ್ಷ್ಯವಿಟ್ಟು ಕೇಳಿದ್ದಾರೆ?
18 Mas qual deles esteve no conselho do Senhor para ver ou ouvir a sua palavra? Quem deu atenção e obedeceu à minha palavra?
19 ಇಗೋ, ಕರ್ತನ ಬಿರುಗಾಳಿ ಉಗ್ರವಾಗಿ ಹೊರಟಿದೆ; ಅಘೋರ ವಾದ ಬಿರುಗಾಳಿಯು ದುಷ್ಟರ ತಲೆಯ ಮೇಲೆ ಕಠಿಣ ವಾಗಿ ಬೀಳುವದು.
19 Vejam, a tempestade do Senhor! A sua fúria está à solta! Um vendaval vem sobre a cabeça dos ímpios.
20 ಆತನು ತನ್ನ ಹೃದಯದ ಅಲೋ ಚನೆಗಳನ್ನು ನಡೆಸಿ ತೀರಿಸುವ ವರೆಗೂ ಕರ್ತನ ಕೋಪವು ತಿರುಗುವದಿಲ್ಲ; ಅಂತ್ಯದಿನಗಳಲ್ಲಿ ಅದನ್ನು ಸಂಪೂರ್ಣವಾಗಿ ಯೋಚನೆ ಮಾಡುವಿರಿ.
20 A ira do Senhor não se afastará até que ele tenha completado os seus propósitos. Em dias vindouros vocês o compreenderão claramente.
21 ನಾನು ಪ್ರವಾದಿಗಳನ್ನು ಕಳುಹಿಸಲಿಲ್ಲ, ಆದಾಗ್ಯೂ ಅವರು ಓಡಿದರು; ನಾನು ಅವರ ಸಂಗಡ ಮಾತನಾಡಲಿಲ್ಲ ಆದಾಗ್ಯೂ ಪ್ರವಾದಿಸಿದರು.
21 Não enviei esses profetas, mas eles foram correndo levar sua mensagem; não falei com eles, mas eles profetizaram.
22 ಆದರೆ ಅವರು ನನ್ನ ಆಲೋಚನೆಯಲ್ಲಿ ನಿಂತಿದ್ದರೆ, ಅವರು ಜನರಿಗೆ ನನ್ನ ವಾಕ್ಯಗಳನ್ನು ಕೇಳಕೊಟ್ಟು ಅವರನ್ನು ತಮ್ಮ ಕೆಟ್ಟ ಮಾರ್ಗದಿಂದಲೂ ತಮ್ಮ ಕ್ರಿಯೆಗಳ ಕೆಟ್ಟತನದಿಂದಲೂ ತಿರುಗಿಸುತ್ತಿದ್ದರು.
22 Mas se eles tivessem comparecido ao meu conselho, anunciariam as minhas palavras ao meu povo e teriam feito com que se convertessem do seu mau procedimento e das suas obras más.
23 ಕರ್ತನು ಅನ್ನುತ್ತಾನೆ--ನಾನು ಸವಿಾಪದಲ್ಲಿ ದೇವರಾಗಿದ್ದು ದೂರದಲ್ಲಿ ದೇವರ ಲ್ಲವೋ?
23 "Sou eu apenas um Deus de perto", pergunta o Senhor, "e não também um Deus de longe?
24 ನಾನು ಅವನನ್ನು ನೋಡದ ಹಾಗೆ ಒಬ್ಬನು ಮರೆಯಾದ ಸ್ಥಳಗಳಲ್ಲಿ ತನ್ನನ್ನು ಅಡಗಿಸಿಕೊ ಳ್ಳಬಹುದೋ ಎಂದು ಕರ್ತನು ಅನ್ನುತ್ತಾನೆ; ನಾನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ವ್ಯಾಪಿಸಿರುವವ ನಲ್ಲವೋ? ಎಂದು ಕರ್ತನು ಅನ್ನುತ್ತಾನೆ.
24 Poderá alguém esconder-se sem que eu o veja? ", pergunta o Senhor. "Não sou eu aquele que enche os céus e a terra? ", pergunta o Senhor.
25 ನನ್ನ ಹೆಸರಿನಲ್ಲಿ ಸುಳ್ಳನ್ನು ಪ್ರವಾದಿಸುವ ಪ್ರವಾದಿಗಳು ಹೇಳುವದನ್ನು ಕೇಳಿದ್ದೇನೆ. ಅವರು--ನಾನು ಕನಸು ಕಂಡಿದ್ದೇನೆ, ಕನಸು ಕಂಡಿದ್ದೇನೆ ಅನ್ನುತ್ತಾರೆ.
25 "Ouvi o que dizem os profetas, que profetizam mentiras em meu nome, dizendo: ‘Tive um sonho! Tive um sonho! ’
26 ಸುಳ್ಳು ಪ್ರವಾದಿಸುವ ಪ್ರವಾದಿಗಳ ಹೃದಯದಲ್ಲಿ ಇದು ಎಷ್ಟರ ವರೆಗೆ ಇರುವದು? ಹೌದು, ಅವರು ತಮ್ಮ ಹೃದಯದ ಮೋಸವನ್ನು ಪ್ರವಾದಿಸುವವರೇ;
26 Até quando os profetas continuarão a profetizar mentiras e as ilusões de suas próprias mentes?
27 ಅವರ ತಂದೆ ಗಳು ಬಾಳನಿಂದ ನನ್ನ ಹೆಸರನ್ನು ಹೇಗೆ ಮರೆತರೋ ಹಾಗೆಯೇ ಇವರು ತಮ್ಮ ತಮ್ಮ ನೆರೆಯವರಿಗೆ ತಿಳಿಸುವ ಕನಸುಗಳಿಂದ ನನ್ನ ಜನರು ನನ್ನ ಹೆಸರನ್ನು ಮರೆತು ಬಿಡುವಂತೆ ಮಾಡುವದಕ್ಕೆ ಯೋಚಿಸುತ್ತಾರೆ.
27 Eles imaginam que os sonhos que contam uns aos outros farão o povo esquecer o meu nome, assim como os seus antepassados esqueceram o meu nome por causa de Baal.
28 ಕನಸು ಉಂಟಾದ ಪ್ರವಾದಿಯು ಕನಸನ್ನು ತಿಳಿಸಲಿ, ನನ್ನ ವಾಕ್ಯ ಉಂಟಾದವನು ನನ್ನ ವಾಕ್ಯವನ್ನು ನಂಬಿಗಸ್ತನಾಗಿ ಹೇಳಲಿ; ಗೋಧಿಗೂ ಹೊಟ್ಟಿಗೂ ಸಂಬಂಧವೇನೆಂದು ಕರ್ತನು ಅನ್ನುತ್ತಾನೆ.
28 O profeta que tem um sonho, conte o sonho, e o que tem a minha palavra, fale a minha palavra com fidelidade. Pois o que tem a palha com o trigo? ", pergunta o Senhor.
29 ನನ್ನ ವಾಕ್ಯವು ಬೆಂಕಿಯ ಹಾಗಲ್ಲವೋ ಎಂದು ಕರ್ತನು ಅನ್ನುತ್ತಾನೆ. ಅದು ಬಂಡೆಯನ್ನು ತುಂಡು ಮಾಡುವ ಸುತ್ತಿಗೆಯ ಹಾಗಲ್ಲವೋ?
29 "Não é a minha palavra como o fogo", pergunta o Senhor, "e como um martelo que despedaça a rocha?
30 ಆದದರಿಂದ ಇಗೋ, ಪ್ರತಿಯೊಬ್ಬನೂ ತನ್ನ ನೆರೆಯವನಿಂದ ನನ್ನ ವಾಕ್ಯಗಳನ್ನು ಕದ್ದುಕೊಳ್ಳುವ ಪ್ರವಾದಿಗಳಿಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.
30 "Portanto", declara o Senhor, "estou contra os profetas que roubam uns dos outros as minhas palavras.
31 ಇಗೋ, ತಮ್ಮ ನಾಲಿಗೆಗಳನ್ನು ಆಡಿ ಸುತ್ತಾ--ಆತನು ನುಡಿಯುತ್ತಾನೆ ಎಂದು ಅನ್ನುವ ಪ್ರವಾದಿಗಳಿಗೆ ನಾನು ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.
31 Sim", declara o Senhor, "estou contra os profetas que com as suas próprias línguas declaram oráculos.
32 ಇಗೋ, ಸುಳ್ಳಿನ ಕನಸುಗಳನ್ನು ಪ್ರವಾದಿಸಿ; ತಮ್ಮ ಸುಳ್ಳುಗಳಿಂದಲೂ ನಿರರ್ಥಕವಾದ ವುಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆಕೊಡಲಿಲ್ಲ; ಆದದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವದೇ ಇಲ್ಲವೆಂದು ಕರ್ತನು ಅನ್ನುತ್ತಾನೆ.
32 Sim, estou contra os que profetizam sonhos falsos", declara o Senhor. "Eles os relatam e com as suas mentiras irresponsáveis desviam o meu povo. Eu não os enviei nem lhes autorizei; e eles não trazem benefício algum a este povo", declara o Senhor.
33 ಇದಲ್ಲದೆ ಈ ಜನರಾಗಲಿ ಪ್ರವಾದಿಯಾಗಲಿ ಯಾಜಕನಾಗಲಿ ಕರ್ತನ ಭಾರವೇನೆಂದು ನಿನ್ನನ್ನು ಕೇಳುವಾಗ ನೀನು ಅವರಿಗೆ--ಏನು ಭಾರ? ನಾನು ನಿಮ್ಮನ್ನು ತಳ್ಳಿಬಿಡುವೆನೆಂದು ಕರ್ತನು ಅನ್ನುತ್ತಾನೆಂದು ಹೇಳಬೇಕು.
33 "Quando este povo ou um profeta ou um sacerdote lhe perguntar: ‘Qual é a mensagem pesada da qual o Senhor lhe encarregou? ’, diga-lhes: ‘Vocês são o peso! E eu os abandonarei’, declara o Senhor.
34 ಕರ್ತನ ಭಾರವೆಂದೆನ್ನುವ ಪ್ರವಾದಿ ಯಾಗಲಿ ಯಾಜಕನಾಗಲಿ ಜನರಾಗಲಿ ಅವರ ವಿಷಯ ವೇನಂದರೆ--ನಾನು ಅಂಥಾ ಮನುಷ್ಯನನ್ನೂ ಅವನ ಮನೆಯನ್ನೂ ಶಿಕ್ಷಿಸುವೆನು.
34 Se um profeta ou um sacerdote ou alguém do povo afirmar ‘Esta é a mensagem da qual o Senhor me encarregou’, eu castigarei esse homem e a sua família.
35 ನೀವು ನಿಮ್ಮ ನಿಮ್ಮ ನೆರೆಯವರಿಗೂ ನಿಮ್ಮ ನಿಮ್ಮ ಸಹೋದರರಿಗೂ--ಕರ್ತನು ಏನು ಉತ್ತರ ಕೊಟ್ಟಿದ್ದಾನೆ? ಕರ್ತನು ಏನು ಹೇಳಿದ್ದಾನೆ ಎಂದು ಹೇಳಬೇಕು.
35 Assim dirá cada um de vocês ao seu amigo ou parente: ‘O que o Senhor respondeu? O que o Senhor falou? ’
36 ಆದರೆ ಕರ್ತನ ಭಾರವನ್ನು ಇನ್ನು ಎಂದಿಗೂ ನುಡಿಯುವದಿಲ್ಲ; ಒಬ್ಬೊ ಬ್ಬನಿಗೆ ತನ್ನ ನುಡಿಯೇ ಭಾರವಾಗುವದು; ನೀವು ಜೀವವುಳ್ಳ ದೇವರ ವಾಕ್ಯಗಳನ್ನು ಅಂದರೆ ನಮ್ಮ ದೇವರಾದ ಸೈನ್ಯಗಳ ಕರ್ತನ ವಾಕ್ಯಗಳನ್ನೇ ಮಾರ್ಪಡಿ ಸಿದ್ದೀರಿ.
36 Nunca mais mencionem a expressão ‘Esta é a mensagem da qual o Senhor me encarregou’, senão essa palavra se tornará uma ‘carga’ para aquele que a proferir; porque vocês distorcem as palavras do Deus vivo, do Senhor dos Exércitos, do nosso Deus.
37 ನೀನು ಪ್ರವಾದಿಗೆ--ಕರ್ತನು ನಿನಗೆ ಏನು ಉತ್ತರ ಕೊಟ್ಟಿದ್ದಾನೆ? ಕರ್ತನು ಏನು ಹೇಳಿದ್ದಾನೆ ಎಂದು ಹೇಳಬೇಕು.
37 É assim que vocês dirão ao profeta: ‘Qual é a resposta do Senhor para você? ’ ou ‘O que o Senhor falou? ’
38 ಆದರೆ ನೀವು--ಕರ್ತನ ಭಾರವೆಂದು ಹೇಳುತ್ತಿದ್ದೀರಿ. ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಕರ್ತನ ಭಾರವೆಂದು ನೀವು ಹೇಳಬಾರದೆಂಬದಾಗಿ ನಾನು ನಿಮಗೆ ಹೇಳಿ ಕಳುಹಿ ಸಿದ ಮೇಲೆ ಕರ್ತನ ಭಾರವೆಂಬ ಈ ಮಾತನ್ನು ನೀವು ಹೇಳುವದರಿಂದ
38 Mas se vocês disserem ‘Esta é a mensagem da qual o Senhor me encarregou’, assim diz o Senhor: Vocês dizem: ‘Esta é a mensagem da qual o Senhor me encarregou’, quando eu lhes adverti que não dissessem isso.
39 ಕರ್ತನು ಹೀಗೆ ಹೇಳು ತ್ತಾನೆ--ನಾನು ಇಗೋ, ನಾನೇ ನಿಮ್ಮನ್ನು ಪೂರ್ಣವಾಗಿ ಮರೆತುಬಿಡುವೆನು; ನಿಮ್ಮನ್ನು ನಿಮಗೂ ನಿಮ್ಮ ತಂದೆ ಗಳಿಗೂ ಕೊಟ್ಟ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತಳ್ಳಿಬಿಡುವೆನು.
39 Por isso me esquecerei de vocês e os lançarei fora da minha presença, juntamente com a cidade que dei a vocês e aos seus antepassados.
40 ಮರೆತು ಹೋಗಲಾರದ ನಿತ್ಯವಾದ ನಿಂದೆಯನ್ನೂ ನಿತ್ಯವಾದ ಅವಮಾನವನ್ನೂ ನಿನ್ನ ಮೇಲೆ ಬರಮಾಡುತ್ತೇನೆ.
40 Trarei sobre vocês humilhação perpétua, vergonha permanente, que jamais será esquecida. "

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Jeremias 23, comparar traduções ou montar um estudo — tudo direto pelo WhatsApp.