Jeremias 25
Kannada Bible (GL_KANNADA) vs NAA
NAA Nova Almeida Atualizada 2017
1 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮೊದಲನೇ ವರುಷವಾಗಿದ್ದ ಯೆಹೂ ದದ ಅರಸನಾದ ಯೋಷೀಯನ ಮಗನಾದ ಯೆಹೋ ಯಾಕೀಮನ ನಾಲ್ಕನೇ ವರುಷದಲ್ಲಿ ಯೆಹೂದದ ಸಮಸ್ತ ಜನರ ವಿಷಯ ಯೆರೆವಿಾಯನಿಗೆ ಉಂಟಾದ ವಾಕ್ಯವು.
1 Palavra que veio a Jeremias a respeito de todo o povo de Judá, no quarto ano do reinado de Jeoaquim, filho de Josias, rei de Judá, que era o primeiro ano do reinado de Nabucodonosor, rei da Babilônia.
2 ಪ್ರವಾದಿಯಾದ ಯೆರೆವಿಾಯನು ಯೆಹೂ ದದ ಸಮಸ್ತ ಜನರಿಗೂ ಯೆರೂಸಲೇಮಿನ ಎಲ್ಲಾ ನಿವಾಸಿಗಳಿಗೂ ತಿಳಿಸಿದ್ದು ಏನಂದರೆ--
2 O profeta Jeremias anunciou a todo o povo de Judá e a todos os moradores de Jerusalém, dizendo:
3 ಯೆಹೂದದ ಅರಸನಾದ ಅಮ್ಮೋನನ ಮಗನಾದ ಯೋಷೀಯನ ಹದಿಮೂರನೇ ವರುಷ ಮೊದಲ್ಗೊಂಡು ಇಂದಿನ ವರೆಗೂ ಈ ಇಪ್ಪತ್ತು ಮೂರು ವರುಷ ಕರ್ತನ ವಾಕ್ಯವು ನನಗೆ ಉಂಟಾಗಿ ನಾನು ಅದನ್ನು ನಿಮಗೆ ಹೇಳಿದ್ದೇನೆ, ಬೆಳಿಗ್ಗೆ ಎದ್ದು ಹೇಳಿದ್ದೇನೆ; ಆದರೆ ನೀವು ಕೇಳಲಿಲ್ಲ.
3 — Durante vinte e três anos, desde o décimo terceiro ano do reinado de Josias, filho de Amom, rei de Judá, até hoje, a palavra do Senhor tem vindo a mim, e sempre de novo eu a tenho anunciado a vocês, mas vocês não escutaram.
4 ಇದಲ್ಲದೆ ಕರ್ತನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಕಳುಹಿಸಿದ್ದಾನೆ, ಬೆಳಿಗ್ಗೆ ಎದ್ದು ಕಳುಹಿಸಿದ್ದಾನೆ; ಆದರೆ ನೀವು ಕೇಳಲಿಲ್ಲ, ಕೇಳು ವದಕ್ಕೆ ನಿಮ್ಮ ಕಿವಿಗೊಡಲಿಲ್ಲ.
4 Também sempre de novo o Senhor enviou os seus servos, os profetas, mas vocês não escutaram nem inclinaram os ouvidos para ouvir,
5 ಅವರು ಹೇಳಿದ್ದೇ ನಂದರೆ--ನಿಮ್ಮ ನಿಮ್ಮ ಕೆಟ್ಟ ಮಾರ್ಗವನ್ನು ನಿಮ್ಮ ಕೆಟ್ಟ ದೃಶ್ಯಗಳ ಕೆಟ್ಟತನವನ್ನೂ ಬಿಟ್ಟು ಮತ್ತೆ ತಿರುಗಿಕೊಳ್ಳಿರಿ. ಆಗ ಕರ್ತನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಿರಿ.
5 quando eles diziam: “Convertam-se agora, cada um de vocês, do seu mau caminho e da maldade das suas ações, e vocês habitarão na terra que o Senhor deu a vocês e aos seus pais, desde os tempos antigos e para sempre.
6 ಬೇರೆ ದೇವರುಗಳನ್ನು ಸೇವಿಸುವದಕ್ಕೂ ಆರಾಧಿಸುವದಕ್ಕೂ ಹಿಂಬಾಲಿಸಬೇಡಿರಿ; ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸಬೇಡಿರಿ; ಆಗ ನಿಮಗೆ ಯಾವ ಕೇಡೂ ಮಾಡೆನು.
6 Não sigam outros deuses para os servir e adorar, nem me provoquem à ira com as obras de suas mãos. E então não lhes farei mal algum.
7 ಆದಾಗ್ಯೂ ನೀವು ನನಗೆ ಕಿವಿಗೊಡದೆ ನಿಮಗೆ ಕೇಡು ಬರುವ ಹಾಗೆ ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನೆಬ್ಬಿಸಿದ್ದೀರಿ ಎಂದು ಕರ್ತನು ಅನ್ನುತ್ತಾನೆ.
7 Mas vocês não me deram ouvidos, diz o Senhor . Pelo contrário, me provocaram à ira com as obras de suas mãos, para o próprio mal de vocês.”
8 ಆದದರಿಂದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--
8 — Portanto, assim diz o Senhor dos Exércitos: Visto que vocês não escutaram as minhas palavras,
9 ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.
9 eis que mandarei buscar todas as tribos do Norte, diz o Senhor , e também Nabucodonosor, rei da Babilônia, meu servo, e os trarei contra esta terra, contra os seus moradores e contra todas estas nações ao redor, e os destruirei totalmente. Farei deles um objeto de horror e de vaias, ruínas perpétuas.
10 ಇದಲ್ಲದೆ ಉಲ್ಲಾಸದ ಶಬ್ದವನ್ನೂ ಸಂತೋಷದ ಸ್ವರವನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಬೀಸುವ ಕಲ್ಲಿನ ಶಬ್ದವನ್ನೂ ದೀಪದ ಬೆಳಕನ್ನೂ ಅವರೊಳಗಿಂದ ತೆಗೆದುಹಾಕುತ್ತೇನೆ.
10 Farei cessar entre eles o som das festas e da alegria, a voz do noivo e a voz da noiva, o ruído das pedras do moinho e a luz das lamparinas.
11 ಈ ದೇಶವೆಲ್ಲಾ ಹಾಳಾಗಿ ವಿಸ್ಮಯಕ್ಕೆ ಗುರಿಯಾಗುವದು; ಈ ಜನಾಂಗಗಳು ಬಾಬೆಲಿನ ಅರಸನನ್ನು ಎಪ್ಪತ್ತು ವರುಷ ಸೇವಿಸುವರು.
11 Toda esta terra virá a ser uma ruína, objeto de horror, e estas nações servirão o rei da Babilônia durante setenta anos.
12 ಎಪ್ಪತ್ತು ವರುಷ ತುಂಬಿದ ಮೇಲೆ ನಾನು ಬಾಬೆಲಿನ ಅರಸನನ್ನೂ ಆ ಜನಾಂಗವನ್ನೂ ಕಸ್ದೀಯರ ದೇಶವನ್ನೂ ಅವರ ಅಕ್ರಮಕ್ಕಾಗಿ ವಿಚಾರಿಸಿ ದಂಡಿಸುವೆನು. ಅದನ್ನು ನಿತ್ಯವಾಗಿ ಹಾಳುಮಾಡುವೆನು.
12 Acontecerá, porém, que, quando se cumprirem os setenta anos, castigarei o rei da Babilônia e aquela nação, a terra dos caldeus, por causa de sua iniquidade, diz o Senhor ; farei deles ruínas perpétuas.
13 ನಿಶ್ಚಯವಾಗಿ ಆ ದೇಶದ ಮೇಲೆ ನಾನು ಅದಕ್ಕೆ ವಿರೋಧವಾಗಿ ಹೇಳಿದ ನನ್ನ ಎಲ್ಲಾ ವಾಕ್ಯಗಳನ್ನೂ ಯೆರವಿಾಯನು ಜನಾಂಗ ಗಳಿಗೆ ವಿರೋಧವಾಗಿ ಪ್ರವಾದಿಸಿ ಈ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನೂ ಅವರ ಮೇಲೆ ಬರಮಾಡು ವೆನು.
13 Farei com que se cumpram sobre aquela terra todas as minhas ameaças que proferi contra ela, tudo o que está escrito neste livro e que Jeremias profetizou contra todas as nações.
14 ಅನೇಕ ಜನಾಂಗಗಳೂ ದೊಡ್ಡ ಅರಸರೂ ಅವರಿಂದ ಸೇವೆ ಮಾಡಿಸಿಕೊಳ್ಳುವರು. ಅವರ ಕ್ರಿಯೆ ಗಳ ಪ್ರಕಾರವೂ ಅವರ ಕೈ ಕೆಲಸದ ಪ್ರಕಾರವೂ ನಾನು ಅವರಿಗೆ ಪ್ರತಿಫಲ ಕೊಡುವೆನು ಎಂದು ಕರ್ತನು ಅನ್ನುತ್ತಾನೆ.
14 Porque também eles serão escravos de muitas nações e de grandes reis, e assim lhes retribuirei segundo os seus feitos e segundo as obras das suas mãos.
15 ಇಸ್ರಾಯೇಲಿನ ದೇವರಾದ ಕರ್ತನು ನನಗೆ ಹೀಗೆ ಹೇಳುತ್ತಾನೆ--ಈ ರೌದ್ರದ ದ್ರಾಕ್ಷಾರಸ ಪಾತ್ರೆ ಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತಕ್ಕೋ.
15 Porque assim me disse o Senhor , o Deus de Israel: — Pegue o cálice do vinho do meu furor que está em minha mão e faça com que bebam dele todas as nações às quais eu o enviar.
16 ಆಗ ಅವರು ಕುಡಿದು ನಾನು ಅವರ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತ ಕದಲಿ ಹುಚ್ಚರಾಗುವರು ಅಂದನು.
16 Elas beberão, ficarão tremendo e enlouquecerão, por causa da espada que eu enviarei para o meio delas.
17 ಆಗ ನಾನು ಪಾತ್ರೆಯನ್ನು ಕರ್ತನ ಕೈಯಿಂದ ತಕ್ಕೊಂಡು ಕರ್ತನು ನನ್ನನ್ನು ಕಳುಹಿಸಿದ ಎಲ್ಲಾ ಜನಾಂಗಗಳಿಗೆ ಕುಡಿಸಿದೆನು.
17 Peguei o cálice da mão do Senhor e dei de beber a todas as nações às quais o Senhor tinha me enviado:
18 ಯೆರೂಸ ಲೇಮಿಗೂ ಯೆಹೂದದ ಪಟ್ಟಣಗಳಿಗೂ ಅದರ ಅರಸುಗಳಿಗೂ ಪ್ರಭುಗಳಿಗೂ ಅವರನ್ನು ಇಂದಿನ ಪ್ರಕಾರ ಹಾಳುಮಾಡಿ ವಿಸ್ಮಯಕ್ಕೂ ಸಿಳ್ಳಿಡುವಿಕೆಗೂ ಶಾಪಕ್ಕೂ ಗುರಿಮಾಡುವ ಹಾಗೆ ಕುಡಿಸಿದೆನು.
18 Jerusalém, as cidades de Judá, os seus reis e as suas autoridades, para fazer deles uma ruína, objeto de horror, de vaias e de maldição, como hoje se vê;
19 ಐಗುಪ್ತದ ಅರಸನಾದ ಫರೋಹನಿಗೂ ಅವನ ಸೇವಕರಿಗೂ ಅವನ ಪ್ರಭುಗಳಿಗೂ
19 Faraó, rei do Egito, os seus servos, as suas autoridades e todo o seu povo;
20 ಅವನ ಎಲ್ಲಾ ಜನರಿಗೂ ಮಿಶ್ರವಾದ ಜನರೆಲ್ಲರಿಗೂ ಊಚ್ ದೇಶದ ಅರಸರೆಲ್ಲರಿಗೂ ಫಿಲಿಷ್ಟಿಯ ದೇಶದ ಅರಸರೆಲ್ಲರಿಗೂ ಅಷ್ಕೆಲೋನಿಗೂ ಗಾಜಾಕ್ಕೂ ಎಕ್ರೋನಿಗೂ ಅಷ್ಡೋ ದಿನ ಉಳಿದವರಿಗೂ
20 todo misto de gente, todos os reis da terra de Uz, todos os reis da terra dos filisteus: Asquelom, Gaza, Ecrom e o que resta de Asdode;
21 ಎದೋಮಿಗೂ ಮೋವಾ ಬಿಗೂ ಅಮ್ಮೋನನ ಮಕ್ಕಳಿಗೂ
21 Edom, Moabe e os filhos de Amom;
22 ತೂರಿನ ಅರಸರೆ ಲ್ಲರಿಗೂ ಚೀದೋನಿನ ಅರಸರೆಲ್ಲರಿಗೂ ಸಮುದ್ರದ ಆಚೆಯಲ್ಲಿರುವ ದ್ವೀಪದ ಅರಸರಿಗೂ
22 todos os reis de Tiro, todos os reis de Sidom e os reis das terras dalém do mar;
23 ದೆದಾನಿಗೂ ತೇಮಾಗೂ ಬೂಜಿಗೂ ಕಟ್ಟಕಡೆಯ ಮೂಲೆಯ ವರೆಗೂ
23 Dedã, Tema, Buz e todos os que cortam os cabelos nas têmporas;
24 ಅರಬಿಯದ ಅರಸರೆಲ್ಲರಿಗೂ ಅರಣ್ಯದಲ್ಲಿ ವಾಸಿಸುವ ಮಿಶ್ರವಾದ ಜನರ ಅರಸರೆಲ್ಲರಿಗೂ
24 todos os reis da Arábia e todos os reis do misto de gente que habita no deserto;
25 ಜಿಮ್ರಿಯ ಅರಸರೆಲ್ಲರಿಗೂ ಏಲಾಮಿನ ಅರಸರೆ ಲ್ಲರಿಗೂ ಮೇದ್ಯದ ಅರಸರೆಲ್ಲರಿಗೂ
25 todos os reis de Zinri, todos os reis de Elão e todos os reis da Média;
26 ಹತ್ತಿರದ ಲ್ಲಿಯೂ ದೂರದಲ್ಲಿಯೂ ಒಬ್ಬರ ಬಳಿಯಲ್ಲಿ ಒಬ್ಬರಿ ರುವ ಉತ್ತರದಿಕ್ಕಿನ ಅರಸರೆಲ್ಲರಿಗೂ ಭೂಮಿಯ ಮೇಲ್ಭಾಗದಲ್ಲಿರುವಂಥ ಲೋಕದ ಎಲ್ಲಾ ರಾಜ್ಯ ಗಳಿಗೂ ಕುಡಿಸಿದೆನು; ಶೇಷಕಿನ ಅರಸನು ಅವರ ತರುವಾಯ ಕುಡಿಯುವನು.
26 todos os reis do Norte, os de perto e os de longe, um após outro, e todos os reinos do mundo sobre a face da terra; e, depois de todos eles, o rei da Babilônia.
27 ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರ್ರಿ.
27 — Então você lhes dirá: Assim diz o Senhor dos Exércitos, o Deus de Israel: “Bebam, fiquem bêbados e vomitem; caiam e não mais se levantem, por causa da espada que estou enviando para o meio de vocês.”
28 ಅವರು ಪಾತ್ರೆಯನ್ನು ನಿನ್ನ ಕೈಯಿಂದ ತಕ್ಕೊಂಡು ಕುಡಿಯಲು ತಿರಸ್ಕರಿಸಿದರೆ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವು ನಿಶ್ಚಯವಾಗಿ ಕುಡಿಯಬೇಕು.
28 Se recusarem pegar o cálice que está em sua mão, Jeremias, e não quiserem beber, então diga-lhes: Assim diz o Senhor dos Exércitos: “Vocês terão de bebê-lo!
29 ಇಗೋ, ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವದಕ್ಕೆ ಆರಂಭಮಾಡುತ್ತೇನೆ; ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿ ಕೊಳ್ಳುವದಿಲ್ಲ: ನಾನು ಭೂನಿವಾಸಿಗಳೆಲ್ಲರ ಮೇಲೆ ಕತ್ತಿಯನ್ನು ಕರೆಯುತ್ತೇನೆಂದು ಸೈನ್ಯಗಳ ಕರ್ತನು ಅನ್ನು ತ್ತಾನೆ.
29 Pois eis que eu começo a castigar na cidade que se chama pelo meu nome; portanto, como vocês podem pensar que ficarão impunes? Não, não ficarão impunes, porque eu chamo a espada sobre todos os moradores da terra”, diz o Senhor dos Exércitos.
30 ಆದದರಿಂದ ನೀನು ಅವರಿಗೆ ವಿರೋಧವಾಗಿ ಈ ವಾಕ್ಯಗಳನ್ನೆಲ್ಲಾ ಪ್ರವಾದಿಸಿ ಅವರಿಗೆ ಹೇಳತಕ್ಕದ್ದೇ ನಂದರೆ--ಕರ್ತನು ಉನ್ನತದಿಂದ ಘರ್ಜಿಸಿ ತನ್ನ ಪರಿಶುದ್ಧ ನಿವಾಸದೊಳಗಿಂದ ತನ್ನ ಶಬ್ದವನ್ನು ಕೊಡು ವನು ತನ್ನ ನಿವಾಸದ ಮೇಲೆ ಗಟ್ಟಿಯಾಗಿ ಘರ್ಜಿಸಿ ದ್ರಾಕ್ಷೇ ತುಳಿಯುವವರ ಹಾಗೆ ಆರ್ಭಟವನ್ನು ಭೂನಿವಾಸಿಗಳೆಲ್ಲರಿಗೆ ವಿರೋಧವಾಗಿ ಎತ್ತುವನು.
30 — Você, Jeremias, profetize contra eles todas estas palavras e diga-lhes: “O e da sua santa morada fará ouvir a sua voz. Rugirá fortemente contra o seu povo, com brados contra todos os moradores da terra, como o ‘eia!’ dos que pisam as uvas.
31 ಭೂಮಿಯ ಅಂತ್ಯಗಳ ವರೆಗೆ ಘೋಷವು ಬರು ವದು; ಕರ್ತನಿಗೆ ಜನಾಂಗಗಳ ಸಂಗಡ ವ್ಯಾಜ್ಯವದೆ; ಆತನು ಎಲ್ಲಾ ಮನುಷ್ಯರ ಸಂಗಡ ವಾದಿಸುವನು; ದುಷ್ಟರನ್ನು ಕತ್ತಿಗೆ ಒಪ್ಪಿಸುವೆನೆಂದು ಕರ್ತನು ಅನ್ನುತ್ತಾನೆ.
31 O estrondo chegará até os confins da terra, porque o uma controvérsia com as nações; entrará em juízo contra toda a humanidade, e entregará os ímpios à espada”, diz o
32 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಜನಾಂಗದಿಂದ ಜನಾಂಗಕ್ಕೆ ಕೇಡು ಹೊರಡುವದು; ಭೂಮಿಯ ಮೇರೆಗಳಿಂದ ಮಹಾಬಿರುಗಾಳಿ ಎಬ್ಬಿಸ ಲ್ಪಡುವದು.
32 Assim diz o Senhor dos Exércitos: “Eis que a calamidade passa de nação para nação, e grande tempestade se levanta dos confins da terra.”
33 ಆ ದಿವಸದಲ್ಲಿ ಭೂಮಿಯ ಈ ಮೇರೆಯಿಂದ ಭೂಮಿಯ ಆ ಮೇರೆಯ ವರೆಗೆ ಕರ್ತ ನಿಂದ ಕೊಂದುಹಾಕಲ್ಪಟ್ಟವರು ಇರುವರು; ಅವರಿ ಗೋಸ್ಕರ ಗೋಳಾಡುವದಿಲ್ಲ; ಅವರನ್ನು ಕೂಡಿಸುವ ದಿಲ್ಲ; ಅವರನ್ನು ಹೂಣಿಡುವದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು.
33 — Os que o Senhor entregar à morte naquele dia se estenderão de uma a outra extremidade da terra. Não serão pranteados, nem recolhidos, nem sepultados; serão como esterco sobre a face da terra.
34 ಓ ಕುರುಬರೇ, ಗೋಳಿಟ್ಟುಕೂಗಿರಿ; ಮಂದೆಯಲ್ಲಿ ಪ್ರಮುಖರೇ, ಧೂಳಿನಲ್ಲಿ ಹೊರಳಾಡಿರಿ; ನಿಮ್ಮನ್ನು ಕೊಲ್ಲುವದಕ್ಕೂ ಚದರಿಸುವದಕ್ಕೂ ದಿನಗಳು ತುಂಬಿ ಅವೆ; ಆಗ ನೀವು ರಮ್ಯವಾದ ಪಾತ್ರೆಯ ಹಾಗೆ ಬೀಳುವಿರಿ.
34 “Lamentem, pastores, e gritem! Rolem no pó, vocês, donos do rebanho! Porque chegou o tempo de serem mortos e dispersos; vocês cairão como jarros preciosos.
35 ಆಗ ಕುರುಬರಿಗೆ ಓಡಿಹೋಗುವದಕ್ಕೂ ಮಂದೆಯ ಪ್ರಮುಖರಿಗೆ ತಪ್ಪಿಸಿಕೊಳ್ಳುವದಕ್ಕೂ ಮಾರ್ಗವಿಲ್ಲದೆ ಹೋಗುವದು.
35 Não haverá refúgio para os pastores, nem salvamento para os donos do rebanho.
36 ಕುರುಬರ ಕೂಗಿನ ಶಬ್ದವೂ ಮಂದೆಯ ಗೋಳಾಡುವಿಕೆಯೂ ಪ್ರಮುಖರಿಗೆ ಕೇಳ ಲ್ಪಡುವದು.
36 Vozes! É o grito dos pastores e o uivo dos donos do rebanho! Porque o o pasto deles.
37 ಕರ್ತನು ಅವರ ಮೇವಿನ ಸ್ಥಳವನ್ನು ಹಾಳುಮಾಡಿದ್ದಾನೆ. ಸಮಾಧಾನವುಳ್ಳ ನಿವಾಸಗಳು ಕರ್ತನ ಕೋಪದ ಉರಿಯಿಂದ ಕೆಡವಲ್ಪಟ್ಟವು.
37 Porque as pastagens tranquilas serão devastadas, por causa do furor da ira do
38 ಆತನು ಸಿಂಹದಂತೆ ತನ್ನ ಮರೆಯನ್ನು ತೊರೆದು ಬಿಟ್ಟಿದ್ದಾನೆ; ಉಪದ್ರಪಡಿಸುವವನ ಉರಿಯ ನಿಮಿ ತ್ತವೂ ಆತನ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು.
38 Saiu da sua morada como um leão; porque a terra deles foi posta em ruínas, por causa da espada do opressor e por causa do furor da sua ira.”
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Jeremias 25, comparar traduções ou montar um estudo — tudo direto pelo WhatsApp.